Tag: ಶಾಸಕರು

  • ಕರ್ನಾಟಕದ ಶಾಸಕರು ಅತ್ಯಂತ ಶ್ರೀಮಂತರು- ಎಂಟಿಬಿ ನಾಗರಾಜ್ ದೇಶದಲ್ಲೇ ಶ್ರೀಮಂತ ಶಾಸಕ! ಯಾರ ಆದಾಯ ಎಷ್ಟು?

    ಕರ್ನಾಟಕದ ಶಾಸಕರು ಅತ್ಯಂತ ಶ್ರೀಮಂತರು- ಎಂಟಿಬಿ ನಾಗರಾಜ್ ದೇಶದಲ್ಲೇ ಶ್ರೀಮಂತ ಶಾಸಕ! ಯಾರ ಆದಾಯ ಎಷ್ಟು?

    ನವದೆಹಲಿ: ದೇಶದಲ್ಲಿರುವ ಎಲ್ಲಾ ಶಾಸಕರ ಪೈಕಿ ಕರ್ನಾಟಕದ ಶಾಸಕರು ಅತಿ ಹೆಚ್ಚಿನ ಶ್ರೀಮಂತರಾಗಿದ್ದು, ಅದರಲ್ಲೂ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಕ್ಷೇತ್ರದ ಶಾಸಕ ಎನ್.ನಾಗರಾಜ್ ದೇಶದಲ್ಲಿಯೇ ಅತ್ಯಂತ ಶ್ರೀಮಂತ ಶಾಸಕ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾಮ್ರ್ಸ್ (ಎಡಿಆರ್) ಹೇಳಿದೆ.

    ಎಡಿಆರ್ ಸಂಸ್ಥೆಯು ಭಾರತದ ಎಲ್ಲಾ ಶಾಸಕರ ವಾರ್ಷಿಕ ಆದಾಯವನ್ನು ಲೆಕ್ಕ ಹಾಕಿ ವರದಿ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕದ ಒಟ್ಟು 203 ಶಾಸಕರ ಸರಾಸರಿ ವಾರ್ಷಿಕ ಆದಾಯ ಆದಾಯ 1.11 ಕೋಟಿ ರೂ. ಆಗಿದೆ ಎಂದು ತಿಳಿಸಿದೆ.

    ಕರ್ನಾಟಕಕ್ಕೆ ಹೋಲಿಸಿದರೆ ಛತ್ತೀಸ್‍ಗಢ ರಾಜ್ಯದ ವಾರ್ಷಿಕ ಆದಾಯ ಅತಿ ಕಡಿಮೆಯಾಗಿದ್ದು, ಸರಾಸರಿಯ ಪ್ರಕಾರ ಶಾಸಕರ ಆದಾಯ 5.8 ಲಕ್ಷ ರೂಪಾಯಿ ಇದೆ. ಎರಡನೇ ಸ್ಥಾನದಲ್ಲಿ ಮಹಾರಾಷ್ಟ್ರವಿದೆ. ದೇಶದಲ್ಲಿ ಒಟ್ಟಾರೆ 4,086 ಹಾಲಿ ಶಾಸಕರ ಪೈಕಿ 3,145 ಶಾಸಕರು ಸ್ವ-ಘೋಷಿತ ಆಸ್ತಿ ವಿವರವನ್ನು ನೀಡಿದ್ದು, ಇನ್ನುಳಿದ 941 ಶಾಸಕರು ಇದುವರೆಗೂ ತಮ್ಮ ಆಸ್ತಿಯನ್ನೇ ಘೋಷಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ.

    ಪಟ್ಟಿಯಲ್ಲಿರುವ ಕರ್ನಾಟಕದ ಶಾಸಕರು
    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜು ವಾರ್ಷಿಕ ವೈಯಕ್ತಿಕ ಆದಾಯ 157.04 ಕೋಟಿ ರೂಪಾಯಿಗಳಾಗಿದ್ದು, ಈ ಮೂಲಕ ಮೂಲಕ ದೇಶದಲ್ಲಿಯೇ ಅತ್ಯಂತ ಶ್ರೀಮಂತ ಶಾಸಕ ಎಂದು ಗುರುತಿಸಿಕೊಂಡು ಅಗ್ರಸ್ಥಾನದಲ್ಲಿದಾರೆ. ತನ್ನ ವೃತ್ತಿ ವಿವರದಲ್ಲಿ ಕೃಷಿ ಮತ್ತು ವ್ಯವಹಾರದಿಂದ ಆದಾಯ ಸಂಪಾದಿಸಿದ್ದೇನೆ ಎಂದು ಎಂಟಿಬಿ ಹೇಳಿದ್ದಾರೆ.

    27.77 ಕೋಟಿ ವಾರ್ಷಿಕ ಆದಾಯ ಘೋಷಿಸಿಕೊಳ್ಳುವ ಮೂಲಕ 3ನೇ ಸ್ಥಾನವನ್ನು ಕೆ.ಆರ್.ಪುರಂ ಕಾಂಗ್ರೆಸ್ ಶಾಸಕ ಭೈರತಿ ಬಸವರಾಜು ಪಡೆದುಕೊಂಡಿದ್ದಾರೆ. ಬಸವರಾಜು ವ್ಯವಸಾಯ ಹಾಗೂ ಉದ್ಯಮ ಎಂದು ತನ್ನ ವೃತ್ತಿ ವಿವರವನ್ನು ನೀಡಿದ್ದಾರೆ.

    11ನೇ ಸ್ಥಾನ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಸಿಕ್ಕಿದ್ದು, ಕೈಗಾರಿಕೆ ಮತ್ತು ಉದ್ಯಮಗಳ ಮೂಲಕ 7.95 ಕೋಟಿ ರೂಪಾಯಿ ಆದಾಯವನ್ನು ಘೋಷಿಸಿದ್ದಾರೆ. 13 ನೇ ಸ್ಥಾನದಲ್ಲಿ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಇದ್ದು, ನಲಪಾಡ್ ಗ್ರೂಪ್ ಆಫ್ ಕಂಪೆನಿಸ್ ಮೂಲಕ 7.04 ಕೋಟಿ ರೂಪಾಯಿ ಆದಾಯ ತೋರಿಸಿದ್ದಾರೆ.

    ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬ ರೆಡ್ಡಿ ದೇಶದ 15 ನೇ ಶ್ರೀಮಂತ ಶಾಸಕರಾಗಿದ್ದು, ಹೋಟೆಲ್ ಉದ್ಯಮದ ಮೂಲಕ ವಾರ್ಷಿಕ 6.70 ಕೋಟಿ ಆದಾಯ ಘೋಷಿಸಿಕೊಂಡಿದ್ದಾರೆ. 16 ನೇ ಸ್ಥಾನದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಜೆಡಿಎಸ್‍ನ ನಾರಾಯಣಗೌಡ ಉದ್ಯಮದ ಮೂಲಕ 5.89 ಕೋಟಿ ರೂಪಾಯಿ ಆದಾಯವನ್ನು ತೋರಿಸಿದ್ದಾರೆ.

    ಅತಿ ಕಡಿಮೆ ಆದಾಯ ಹೊಂದಿರುವ ಶಾಸಕರು
    1,301 ರೂಪಾಯಿಗಳನ್ನು ತೋರಿಸುವ ಮೂಲಕ ಆಂಧ್ರಪ್ರದೇಶ ಅನಂತಪುರ ಜಿಲ್ಲೆಯ ಸಿಂಗನಮಲ ವಿಧಾನಸಭಾ ಕ್ಷೇತ್ರದ ಬಿ.ಯಾಮಿನಿ ಬಾಲಾ ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ. 5ನೇ ಸ್ಥಾನ ಚಿಕ್ಕಮಗಳೂರು ಗ್ರಾಮಾಂತರ ಬಿಜೆಪಿ ಶಾಸಕ ಸಿ.ಟಿ.ರವಿ ಅವರಿಗೆ ಸಿಕ್ಕಿದ್ದು, ತನ್ನ ವಾರ್ಷಿಕ ವೈಯಕ್ತಿಕ ಆದಾಯ 16,920 ರೂ. ಎಂದು ಘೋಷಿಸಿಕೊಂಡಿದ್ದಾರೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ವಾರ್ಷಿಕ ವೈಯಕ್ತಿಕ ಆದಾಯ 48 ಸಾವಿರ ರೂಪಾಯಿ ಆದಾಯ ಹೊಂದುವ ಮೂಲಕ 13ನೇ ಸ್ಥಾನ ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಮ್ಮ ಶಾಸಕರಿಗೆ ಆಮಿಷ ಒಡ್ಡುವುದನ್ನು ನಿಲ್ಸಿ, ಇಲ್ದೆ ಇದ್ರೆ ನಿಮ್ಮ ವಿಕೆಟ್ ಪತನ- ಬಿಜೆಪಿಗೆ ಗುಂಡೂರಾವ್ ಎಚ್ಚರಿಕೆ

    ನಮ್ಮ ಶಾಸಕರಿಗೆ ಆಮಿಷ ಒಡ್ಡುವುದನ್ನು ನಿಲ್ಸಿ, ಇಲ್ದೆ ಇದ್ರೆ ನಿಮ್ಮ ವಿಕೆಟ್ ಪತನ- ಬಿಜೆಪಿಗೆ ಗುಂಡೂರಾವ್ ಎಚ್ಚರಿಕೆ

    ಬೆಂಗಳೂರು: ಆಪರೇಷನ್ ಕಮಲದ ಭೀತಿಗೆ ಬೆಚ್ಚಿಬಿದ್ದಿರುವ ಕೆಪಿಸಿಸಿ ಇಂದು ಬಳ್ಳಾರಿ ಭಾಗದ ಕಾಂಗ್ರೆಸ್ ಶಾಸಕರಿಗೆ ಕೆಪಿಸಿಸಿ ಕಚೇರಿಗೆ ಬರುವಂತೆ ಬುಲಾವ್ ನೀಡಿತ್ತು. ಅದರಂತೆ ಮಧ್ಯಾಹ್ನ ಹೊಸಪೇಟೆ ಶಾಸಕ ಆನಂದ್ ಸಿಂಗ್, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಬಂದಿದ್ದರು.

    ಬಳಿಕ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ನಮ್ಮ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ. ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಯ ನಮ್ಮ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿಯವರೇ ಅನೈತಿಕ ರಾಜಕಾರಣ ಶುರುಮಾಡಿದ್ದಾರೆ, ನಮ್ಮ ಅನೇಕ ಶಾಸಕರನ್ನು ಸಂಪರ್ಕ ಮಾಡಿದ್ದಾರೆ ಅಂತಾ ಆರೋಪಿಸಿದರು.

    ನಮ್ಮ ಪಕ್ಷದ ಶಾಸಕರಿಗೆ ಆಮಿಷ ಒಡ್ಡುವುದು ಹಾಗೂ ಮಾನಸಿಕ ಕಿರುಕುಳ ಕೊಡುವುದನ್ನು ನಿಲ್ಲಿಸಿ. ಇಲ್ಲದೇ ಹೋದರೆ ನಿಮ್ಮ ವಿಕೆಟ್‍ಗಳು ಪತನವಾಗತ್ತವೆ ಎಂದು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು. ಇದನ್ನು ಓದಿ: ಬಳ್ಳಾರಿಯ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಜಂಪ್ ಆಗ್ತಾರಾ..? 

    ನಮ್ಮ ಪಕ್ಷಕ್ಕೆ ಬಿಜೆಪಿ ಶಾಸಕರು ಬರಲು ಸಿದ್ಧರಾಗಿದ್ದಾರೆ. ಈಗಾಗಲೇ ಕಾಂಗ್ರೆಸ್ಸಿಗೆ ಇಬ್ಬರು ಹಾಗೂ ಜೆಡಿಎಸ್‍ಗೆ ಐವರು ಬಿಜೆಪಿ ಶಾಸಕರು ಬರಲು ತಯಾರಾಗಿದ್ದಾರೆ. ಬಿಜೆಪಿಯ ಆಂತರಿಕ ಕಚ್ಚಾಟದಿಂದ ಅವರ ಶಾಸಕರು ಬೇಸತ್ತಿದ್ದಾರೆ. ಬಿಜೆಪಿಯವರು ನಮ್ಮ ಶಾಸಕರನ್ನು ಸೆಳೆದರೆ ನಾವು ಸಹಾ ತಿರುಗೇಟು ಕೊಡಬೇಕಾಗುತ್ತದೆ ಅಂತ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.

    ಬಿಜೆಪಿಯವರು ಪದೇ ಪದೇ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದ್ದಾರೆ ಯಾಕೆ ಎನ್ನುವುದು ನನಗೆ ಗೊತ್ತಿಲ್ಲ. ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಸಮಸ್ಯೆಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದಾರೆ. ಸಚಿವರ ಜೊತೆ ನಾವೆಲ್ಲರೂ ಒಟ್ಟಾಗಿ ಇರುತ್ತೇವೆ. ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರು. ಅವರ ಜೊತೆಗೂ ನಾವೆಲ್ಲ ಆತ್ಮೀಯತೆ ಹೊಂದಿದ್ದೇವೆ. ಅವರು ನಮ್ಮ ಜಿಲ್ಲೆಗೆ ಆಗಮಿಸಿದಾಗ ಒಟ್ಟಾಗಿ ಸ್ವಾಗತಿಸಿದ್ದೇವೆ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಕಾಂಗ್ರೆಸ್ಸಿಗೆ ತಾಕತ್ತಿದ್ರೆ ಅವ್ರ ಶಾಸಕರು, ಸಚಿವರನ್ನ ಹಿಡಿದಿಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ

    ಕಾಂಗ್ರೆಸ್ಸಿಗೆ ತಾಕತ್ತಿದ್ರೆ ಅವ್ರ ಶಾಸಕರು, ಸಚಿವರನ್ನ ಹಿಡಿದಿಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ

    ಬೆಂಗಳೂರು: ಕಾಂಗ್ರೆಸ್ಸಿನವರಿಗೆ ಏನಾದರೂ ತಾಕತ್ತು ಇದ್ದರೆ ಅವರ ಶಾಸಕರು ಹಾಗೂ ಸಚಿವರನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಡಾಲರ್ಸ್ ಕಾಲೋನಿಯ ಬಿಎಎಸ್‍ವೈ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ಆಂತರಿಕ ಕಿತ್ತಾಟವನ್ನು ಬಿಜೆಪಿ ಮೇಲೆ ಹೇರುವ ಪ್ರಯತ್ನವನ್ನು ಕಾಂಗ್ರೆಸ್ಸಿನವರು ಮಾಡುತ್ತಿದ್ದಾರೆ. ಅವರಿಗೇನಾದರೂ ತಾಕತ್ತು ಇದ್ದರೆ ತಮ್ಮ ತಮ್ಮ ಶಾಸಕರು ಹಾಗೂ ಸಚಿವರನ್ನು ಹತೋಟಿಯಲ್ಲಿ ಹಿಡಿದಿಟ್ಟುಕೊಳ್ಳಬೇಕು. ಅದನ್ನು ಬಿಟ್ಟು ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಪರಸ್ಪರ ಕಿತ್ತಾಡಿಕೊಂಡು, ಬಿಜೆಪಿ ಮೇಲೆ ಹೇರುವ ತಮ್ಮ ಹತಾಶೆ ಭಾವನೆಯನ್ನು ಬಿಡಿ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ಈ ವೇಳೆ ಡಿಕೆ ಶಿವಕುಮಾರ್ ಹೇಳಿದ್ದ ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿಲ್ಲ ಅನ್ನುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಶಿವಕುಮಾರ್ ಹೇಗೆ ಕಿವಿ ಮೇಲೆ ಹೂ ಇಟ್ಕೊಂಡು ಬೆಂಗಳೂರಿಗೆ ಬಂದಿಲ್ವೋ, ಅದೇ ರೀತಿ ಯಾರೂ ಕೂಡ ಹೂ ಇಟ್ಕೊಂಡು ಬೆಂಗಳೂರಿಗೆ ಬಂದಿಲ್ಲ. ಯಡಿಯೂರಪ್ಪನವರು ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿದ್ದುಕೊಂಡೆ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ಆಂತರಿಕ ಕಿತ್ತಾಟವನ್ನು ತಪ್ಪಿಸಿಕೊಳ್ಳಲು ಹೀಗೆ ಬೇರೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಮಾಡಿಲ್ಲ, ಕಳ್ಳನಂತೆ ಓಡಿಹೋಗಲ್ಲ-ಸಚಿವ ಡಿಕೆಶಿ

    ಪ್ರಧಾನ ಮಂತ್ರಿ ಕಚೇರಿಯು ಆದಾಯ ತೆರಿಗೆ(ಐಟಿ) ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಪ್ರಧಾನಿಯೊಂದಿಗೆ ಚರ್ಚಿಸುತ್ತೇವೆ ಎನ್ನುವ ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರು ಬೇಕಾದರೂ ಹೋಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿ. ಐಟಿ ಹಾಗೂ ಇಡಿ ಇಲಾಖೆ ಕಾರ್ಯಗಳೊಂದಿಗೆ ಅವರು ಯಾವುದೇ ಸಂಬಂಧ ಹೊಂದಿಲ್ಲವೆಂದು ಉತ್ತರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡಿಕೆಶಿ ಹಸ್ತಕ್ಷೇಪ ಮುಂದುವರಿಸಿದ್ರೆ ಬಿಜೆಪಿ ಸೇರುತ್ತೇವೆ- 13 ಮಂದಿ ಕೈ ಶಾಸಕರಿಂದ ಬೆದರಿಕೆ

    ಡಿಕೆಶಿ ಹಸ್ತಕ್ಷೇಪ ಮುಂದುವರಿಸಿದ್ರೆ ಬಿಜೆಪಿ ಸೇರುತ್ತೇವೆ- 13 ಮಂದಿ ಕೈ ಶಾಸಕರಿಂದ ಬೆದರಿಕೆ

    ಬೆಂಗಳೂರು: ಕಾಂಗ್ರೆಸ್‍ನಲ್ಲಿ ಸ್ಫೋಟಕ ಬಂಡಾಯದ ಬೆಳವಣಿಗೆಗಳು ನಡೆಯುತ್ತಿದ್ದು, 13 ಮಂದಿ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯುವ ಬೆದರಿಕೆಯನ್ನು ಒಡ್ಡಿದ್ದಾರೆ.

    ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಸಂಘರ್ಷದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರ ಹಸ್ತಕ್ಷೇಪ ಹೀಗೆ ಮುಂದುವರಿದ್ರೆ ನಾವು ಬಿಜೆಪಿಗೆ ಹೋಗುತ್ತೇವೆ ಎಂದು 13 ಮಂದಿ ಕಾಂಗ್ರೆಸ್ ಶಾಸಕರು ಬೆದರಿಕೆ ಒಡ್ಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಕೈ ಹೈಕಮಾಂಡ್‍ಗೆ ತಲೆನೋವಾಯ್ತು ಬೆಳಗಾವಿ ಸಂಘರ್ಷ- ಸದ್ಯಕ್ಕೆ ಸುಮ್ಮನಿರಿ ಅಂದ್ರು ವೇಣುಗೋಪಾಲ್

    ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಭುಗಿಲೆದಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಾಯಕರಲ್ಲಿ ಭಿನ್ನಾಭಿಪ್ರಾಯ ಬಂದಿರುವ ಕುರಿತು ಶನಿವಾರ ಇಡೀ ದಿನ ವೇಣುಗೋಪಾಲ್ ಅವರು ಸಂಧಾನ ಮಾಡಿಸಲು ಚರ್ಚೆ ನಡೆಸಲಾಗಿತ್ತು. ಆದರೆ ಯಾವುದೇ ರೀತಿಯ ಪ್ರಯೋಜನವೂ ಆಗಿರಲಿಲ್ಲ.

    ಈ ನಡುವೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೆಬ್ಬಾಳ್ಕರ್ ಪರ ಡಿ.ಕೆ ಶಿವಕುಮಾರ್ ನಿಂತಿದ್ದು, ಶನಿವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ಸಭೆಯಲ್ಲೂ ಪ್ರತ್ಯಕ್ಷರಾಗಿದ್ದರು. ಇದರಿಂದ ಕೋಪಗೊಂಡ ಕಾಂಗ್ರೆಸ್ ಶಾಸಕರು ಇದೇ ರೀತಿ ಹಸ್ತಕ್ಷೇಪ ಮುಂದುವರಿಸಿದ್ರೆ, ಪಕ್ಷ ತೊರೆಯುತ್ತೇವೆ ಎಂದಿದ್ದಾರೆ ಅಂತ ತಿಳಿದು ಬಂದಿದೆ. ಸದ್ಯ ಈ ಭಿನ್ನಮತ ಶಮನ ಹೊಣೆಗಾರಿಕೆಯನ್ನು ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ವಹಿಸಿದೆ. ಆದ್ದರಿಂದ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ.

    ಜಿಲ್ಲೆ ರಾಜಕೀಯದಲ್ಲಿ ಹೆಬ್ಬಾಳ್ಕರ್ ಹಸ್ತಕ್ಷೇಪ ಜಾಸ್ತಿಯಾಗುತ್ತಿದೆ. ಅಷ್ಟೇ ಅಲ್ಲದೇ ಮುಂದೆ ತಮ್ಮನ್ನು ಹಿಂದಿಕ್ಕಬಹುದು ಎನ್ನುವ ಭೀತಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊರಳಿ ಅವರಿಗೆ ಎದುರಾಗಿದೆ. ಹೀಗಾಗಿ ಬದ್ಧ ವೈರಿಗಳಾಗಿದ್ದ ಜಾರಕಿಹೊಳಿ ಸಹೋದರರು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಲ್ಲಿ ದೂರು ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಾದಾಮಿಗೆ ಶಾಸಕರು ಸಿದ್ದರಾಮಯ್ಯನವರೋ, ಚಿಮ್ಮನಕಟ್ಟಿ ಸುಪುತ್ರನೋ-ಸಾರ್ವಜನಿಕರಲ್ಲಿ ಮೂಡಿದೆ ಗೊಂದಲ?

    ಬಾದಾಮಿಗೆ ಶಾಸಕರು ಸಿದ್ದರಾಮಯ್ಯನವರೋ, ಚಿಮ್ಮನಕಟ್ಟಿ ಸುಪುತ್ರನೋ-ಸಾರ್ವಜನಿಕರಲ್ಲಿ ಮೂಡಿದೆ ಗೊಂದಲ?

    ಬಾಗಲಕೋಟೆ: ಜಿಲ್ಲೆಯ ಬದಾಮಿ ವಿಧಾನಸಭೆ ಕ್ಷೇತ್ರಕ್ಕೆ ಶಾಸಕರು ಯಾರು ಎಂಬ ಗೊಂದಲ ಜನರಲ್ಲಿ ಉಂಟಾಗುತ್ತಿದೆ. ಏಕೆಂದರೆ ಬದಾಮಿ ಶಾಸಕ ಸಿದ್ದರಾಮಯ್ಯನವರು ತಿಂಗಳಿಗೆ ಒಮ್ಮೆ ಕ್ಷೇತ್ರಕ್ಕೆ ಬಂದು ಹೋಗುತ್ತಿದ್ದರು, ಬಾದಾಮಿ ವಿಧಾನಸಭೆ ಕ್ಷೇತ್ರದ ತುಂಬ ನಿತ್ಯ ಶಾಸಕರು ಎಂಬ ಸ್ಟೀಕರ್ ಅಂಟಿಸಿಕೊಂಡಿರುವ ಕಾರು ಮಾತ್ರ ಓಡಾಡುತ್ತಲೇ ಇರುತ್ತದೆ.

    ಜಿಲ್ಲೆಯ ಬಾದಾಮಿ ವಿಧಾನಸಭೆ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಬಿಬಿ ಚಿಮ್ಮನಕಟ್ಟಿ ಚುನಾವಣೆಯ ವೇಳೆ ಸಿದ್ದರಾಮಯ್ಯನವರಿಗೆ ಬಿಟ್ಟುಕೊಟ್ಟಿದ್ದರು. ಆದರೆ ಸದ್ಯ ಸಿದ್ದರಾಮಯ್ಯ ಬದಾಮಿ ಶಾಸಕರಾದರೆ ಬಿಬಿ ಚಿಮ್ಮನಕಟ್ಟಿ ಹಾಗೂ ಅವರ ಪುತ್ರ ಭೀಮಸೇನ್ ಚಿಮ್ಮನಕಟ್ಟಿ ತಾವು ಓಡಾಡುವ ಕಾರಿಗೆ ಶಾಸಕರು ಎಂಬ ಸ್ಟಿಕರ್ ಹಾಕಿಕೊಂಡಿದ್ದಾರೆ. ಜನರಿಂದ ಆಯ್ಕೆಗೊಂಡ ಜನಪ್ರತಿನಿಧಿ ಬಳಸಬೇಕಾದ ಸವಲತ್ತನ್ನ ಚಿಮ್ಮನಕಟ್ಟಿ ಅವರ ಮಗ ಬಳಸುತ್ತಿದ್ದಾರೆ.

    ಬಾದಾಮಿ ಕ್ಷೇತ್ರದ ತುಂಬಾ ಶಾಸಕರು ಎಂಬ ಸ್ಟಿಕರ್ ಇರುವ ಕಾರಿನಲ್ಲೇ ಸಂಚರಿಸುತ್ತಿದ್ದು, ಮಾಜಿ ಶಾಸಕ ಚಿಮ್ಮನಕಟ್ಟಿ ಇಲ್ಲವೇ ಅವರ ಪುತ್ರ ಕಾರಿನಲ್ಲಿ ಸಂಚರಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಎಸ್‍ಟಿ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ರಮೇಶ್ ಜಾರಕಿಹೊಳಿ ಲಾಬಿ

    ಎಸ್‍ಟಿ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ರಮೇಶ್ ಜಾರಕಿಹೊಳಿ ಲಾಬಿ

    ನವದೆಹಲಿ: ಪರಿಶಿಷ್ಟ ಪಂಗಡ (ಎಸ್‍ಟಿ) ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡುಬೇಕು ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೋಳಿ ಹಾಗೂ ಅವರ ತಂಡವು ಒತ್ತಾಯಿಸಿದ್ದಾರೆ.

    ಸೋಮವಾರ ಸಚಿವ ರಮೇಶ್ ಜಾರಕಿಹೋಳಿ, ಪ್ರತಾಪ್ ಗೌಡ ಪಾಟೀಲ್, ರಹೀಂಖಾನ್, ಮಹೇಶ ಕಮತಗಿ, ಬಿ.ನಾಗೇಂದ್ರ ಸೇರಿ ಒಟ್ಟು ಎಂಟು ಜನ ಶಾಸಕರು ದೆಹಲಿಗೆ ತೆರಳಿದ್ದು, ಅಲ್ಲಿಯೇ ಬೀಡು ಬಿಟ್ಟಿದ್ದಾರೆ. ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಹಿರಿಯ ನಾಯಕ ಅಹ್ಮದ್ ಪಟೇಲ್ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಲೋಕಸಭೆ ಚುನಾವಣೆ ದೃಷ್ಟಿಯಿಂದ ಎಸ್‍ಟಿ ಸಮುದಾಯಕ್ಕೆ ಎರಡು ಸಚಿವ ಸ್ಥಾನ ನೀಡಬೇಕು. ಅದರಲ್ಲೂ ಹೈದರಾಬಾದ್ ಕರ್ನಾಟಕ ವ್ಯಾಪ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದರು.

    ಆಷಾಢದ ಬಳಿಕ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿತ್ತು. ಹೀಗಾಗಿ ಅನೇಕ ಕೈ ನಾಯಕರು ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ.

  • ತಮ್ಮ ನಾಯಕರೇ ಹೆಚ್ಚೆಂದು ಬಾರಿನಲ್ಲಿ ಗಲಾಟೆ- ಯುವಕನೊಬ್ಬನ ಆತ್ಮಹತ್ಯೆಯಲ್ಲಿ ಅಂತ್ಯ!

    ತಮ್ಮ ನಾಯಕರೇ ಹೆಚ್ಚೆಂದು ಬಾರಿನಲ್ಲಿ ಗಲಾಟೆ- ಯುವಕನೊಬ್ಬನ ಆತ್ಮಹತ್ಯೆಯಲ್ಲಿ ಅಂತ್ಯ!

    ಮಂಡ್ಯ: ತಮ್ಮ ನಾಯಕರೇ ಗ್ರೇಟ್ ಎಂದು ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ನಡುವೆ ನಡೆದ ಗಲಾಟೆ ಯುವಕನೊಬ್ಬನ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ, ಗೊಬ್ಬರಗಾಲ ಗ್ರಾಮದಲ್ಲಿ ನಡೆದಿದೆ.

    ಶ್ರೀರಂಗಪಟ್ಟಣ ಕ್ಷೇತ್ರದ ಮಾಜಿ ಶಾಸಕ ರಮೇಶ್‍ಬಾಬು ಬಂಡಿಸಿದ್ದೇಗೌಡ ಬೆಂಬಲಿಗ 28 ವರ್ಷದ ನಾಗೇಂದ್ರ ಆತ್ಮಹತ್ಯೆಗೆ ಶರಣಾದ ಯುವಕ. ಭಾನುವಾರ ರಾತ್ರಿ ಅರಕೆರೆ ಗ್ರಾಮದ ಬಾರಿನಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು ಮಾಜಿ ಶಾಸಕ ರಮೇಶ್‍ಬಾಬು ಬಂಡಿಸಿದ್ದೇಗೌಡ ಬೆಂಬಲಿಗ ಯುವಕರ ಗುಂಪಿನ ನಡುವೆ ತಮ್ಮ ನಾಯಕರೇ ಗ್ರೇಟ್ ಎಂದು ಗಲಾಟೆಯಾಗಿದೆ. ಈ ವೇಳೆ ಶಾಸಕರ ಬೆಂಬಲಿಗರು ನಾಗೇಂದ್ರನ ಮೇಲೆ ಹಲ್ಲೆ ಮಾಡಿದ್ದಾರೆ.

    ಅಷ್ಟೇ ಅಲ್ಲದೇ ನಾಗೇಂದ್ರನ ಸ್ವಗ್ರಾಮ ಗೊಬ್ಬರಗಾಲ ಗ್ರಾಮಕ್ಕೆ ತೆರಳಿ ಮತ್ತೆ ಆತನ ಎದುರು ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದ ಮಾಜಿ ಶಾಸಕ ಬೆಂಬಲಿಗ ಗ್ರಾಮದ ಕೆರೆಯ ಬಳಿ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಈ ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಹೈಕಮಾಂಡ್ ಎಚ್ಚರಿಕೆ ಸಂದೇಶದೊಂದಿಗೆ ಫೀಲ್ಡಿಗಿಳಿದ ಬಿಎಸ್‍ವೈ

    ಹೈಕಮಾಂಡ್ ಎಚ್ಚರಿಕೆ ಸಂದೇಶದೊಂದಿಗೆ ಫೀಲ್ಡಿಗಿಳಿದ ಬಿಎಸ್‍ವೈ

    ಬೆಂಗಳೂರು: ರಾಜ್ಯದಲ್ಲಿ ಪ್ರತ್ಯೇಕ ರಾಜ್ಯದ ಬಗ್ಗೆ ಹೋರಾಟ ನಡೆಯುತ್ತಿದ್ದು, ಈಗ ಬಿಜೆಪಿ ಹೈಕಮಾಂಡ್ ಮಧ್ಯ ಪ್ರವೇಶಿಸಿ ಬಿಜೆಪಿಯವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದೆ.

    ಯಾವುದೇ ಕಾರಣಕ್ಕೂ ಬಿಜೆಪಿ ಪ್ರತ್ಯೇಕತೆ ಪರ ನಿಲ್ಲಬಾರದು. ಪ್ರತ್ಯೇಕತೆ ಪರ ಮಾತನಾಡುವವರು ಬಾಯಿ ಮುಚ್ಚಬೇಕು. ಉತ್ತರ ಕರ್ನಾಟಕ ಭಾಗದ ಶಾಸಕರು, ನಾಯಕರುಗಳು ಪ್ರತ್ಯೇಕ ಬಗ್ಗೆ ಮಾತನಾಡಬಾರದು. ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಕಾಂಗ್ರೆಸ್ ದುಸ್ಥಿತಿ ನೋಡಿದ್ದೀರಲ್ಲ. ಪ್ರತ್ಯೇಕತೆ ಪರ ಮಾತನಾಡುವ ಉತ್ತರ ಕನ್ನಡದ ನಾಯಕರು ಇನ್ಮುಂದೆ ಸೈಲೆಂಟ್ ಆಗಬೇಕು. ಹಾಗಾಗಿ ಯಾರು ಮಾತನಾಡದಂತೆ ತಾಕೀತು ಮಾಡಿ ಎಂದು ಬಿಎಸ್‍ವೈಗೆ ಹೈಕಮಾಂಡ್‍ನಿಂದ ಸಂದೇಶ ರವಾನೆಯಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

    ಅಷ್ಟೇ ಅಲ್ಲದೇ ಉತ್ತರ ಕರ್ನಾಟಕದ ಅಭಿವೃದ್ಧಿ ಪರ ಹೋರಾಟಗಳನ್ನ ನಡೆಸಲು ಪ್ಲಾನ್ ಮಾಡಿ. 13 ಜಿಲ್ಲೆಗಳಲ್ಲಿ ಅಧ್ಯಯನ ನಡೆಸಿ ಸಮಗ್ರ ವರದಿ ತಯಾರಿಸಿ. ಹಿಂದುಳಿರುವ ಭಾಗಗಳ ಅಭಿವೃದ್ಧಿಗೆ ಪ್ಲಾನ್ ತಯಾರಿಸಿ ಆ ಭಾಗದ ಜನರ ಮುಂದಿಡಿ. ಇದರಿಂದಾಗಿ ರಾಜಕೀಯವಾಗಿಯೂ ನಮ್ಮ ಶಕ್ತಿ ಹಿಗ್ಗುತ್ತದೆ. ಆ ಭಾಗದ ಜನರಲ್ಲೂ ವಿಶ್ವಾಸ ಮೂಡುತ್ತದೆ. ಅದನ್ನು ಬಿಟ್ಟು ಪ್ರತ್ಯೇಕತೆ ಬಗ್ಗೆ ಮಾತನಾಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸ ಮಾಡಿದರೆ ನಾವು ಸಹಿಸಲ್ಲ ಎಂದು ಬಿಜೆಪಿ ಹೈಕಮಾಂಡ್ ನಿಂದ ರಕ್ಷಣಾತ್ಮಕ ನಡೆಯ ಸಂದೇಶ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

    ಹೈಕಮಾಂಡ್ ಸಂದೇಶದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಫೀಲ್ಡಿಗಿಳಿದು, ಪ್ರತ್ಯೇಕ ಹೋರಟ ಕೈಬಿಡುವಂತೆ ಬಿಜೆಪಿ ಶಾಸಕರ ಜೊತೆ ಯಡಿಯೂರಪ್ಪ ಸಭೆ ಮಾಡಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲಿನಲ್ಲಿ ಉತ್ತರ ಕರ್ನಾಟಕ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಹೈಕಮಾಂಡ್ ರವಾನಿಸಿರುವ ಎಚ್ಚರಿಕೆ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದ್ದಾರೆ.

  • ಬಿಜೆಪಿ 20 ಶಾಸಕರು ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಈಶ್ವರ್ ಖಂಡ್ರೆ

    ಬಿಜೆಪಿ 20 ಶಾಸಕರು ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಈಶ್ವರ್ ಖಂಡ್ರೆ

    ಬೀದರ್: ಬಿಜೆಪಿಯ 20 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕೆಪಿಸಿಸಿ ಕಾರ್ಯಾದ್ಯಕ್ಷರಾದ ನಂತರ ಮೊದಲ ಬಾರಿಗೆ ಬೀದರ್ ಜಿಲ್ಲೆಗೆ ಆಗಮಿಸಿದ ವೇಳೆ ಈಶ್ವರ್ ಖಂಡ್ರೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕುರಿ ನೀಡಿ ಅದ್ಧೂರಿ ಸ್ವಾಗತ ನೀಡಲಾಯಿತು.

    ನಮ್ಮ ಯಾವ ಶಾಸಕರು ಕಾಂಗ್ರೆಸ್ ತೊರೆಯುದಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಭದ್ರವಾಗಿದ್ದು, ನಮ್ಮ ಶಾಸಕರು ಪಕ್ಷ ತೊರೆಯವ ಪ್ರಶ್ನೆಯೇ ಇಲ್ಲ. ಈಗಾಗಲೇ ಬಿಜೆಪಿ ಶಾಸಕರು ನಮ್ಮನ್ನು ಸಂಪರ್ಕಿಸುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

    ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಈಶ್ವರ್ ಖಂಡ್ರೆ ರಾಜ್ಯ ಪ್ರವಾಸದಲ್ಲಿದ್ದಾರೆ. ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ 2018ರ ಚುನಾವಣೆಯಲ್ಲಿ ಬಹುಮತ ಪಡೆಯುವಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಸರಿಯಾಗಿ ಮನೆ ಮನೆಗೆ ತಲುಪಿಸಲು ಆಗಲಿಲ್ಲ. ಹೀಗಾಗಿ ನಾವು ಸೋಲಬೇಕಾಯಿತು. ಪಕ್ಷವನ್ನು ಬೇರು ಮಟ್ಟದಿಂದ ಭದ್ರಗೊಳಿಸಲು ಪ್ರವಾಸ ಕೈಗೊಂಡಿದ್ದೇನೆ ಎಂದು ಈಶ್ವರ್ ಖಂಡ್ರೆ ಹೇಳಿದ್ದರು.

    ಈ ಮೊದಲು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಕೆಲ ಶಾಸಕರು ಮತ್ತು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಎಲ್ಲರೂ ಕಾಂಗ್ರೆಸ್ ಸೇರುವ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ಪಕ್ಷದ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದರು.

  • ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಬಾಗಿಲು ತಟ್ಟಿದ ‘ಕೈ’ ನಾಯಕರು!

    ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಬಾಗಿಲು ತಟ್ಟಿದ ‘ಕೈ’ ನಾಯಕರು!

    ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಮೂವರು ಕೈ ನಾಯಕರುಗಳು ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ.

    ನಗರದ ಶಾಸಕರುಗಳಾದ ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್ ಹಾಗೂ ಮುನಿರತ್ನರವರು ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಬಾಗಿಲು ತಟ್ಟಿದ್ದಾರೆ. ಶುಕ್ರವಾರ ಶಾಸಕರು ಏಕಾಏಕಿ ದೆಹಲಿ ಪ್ರವಾಸ ಕೈಗೊಂಡು, ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ನೇರವಾಗಿ ಭೇಟಿ ಮಾಡಿ ಮನವಿ ಸಲ್ಲಿಸುತ್ತಾರೆ ಎನ್ನಲಾಗಿದೆ. ಅಲ್ಲದೇ ರಾಹುಲ್ ಗಾಂಧಿ ಬಳಿ ತಮ್ಮ ಮನವಿವನ್ನು ಪರಿಗಣಿಸುವಂತೆ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗಿನಿಂದಲೂ ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಯಗಳ ನೇಮಕ ವಿಚಾರ ಕಾಂಗ್ರೆಸ್ ವಲಯದಲ್ಲಿ ಭಾರೀ ಪೈಪೋಟಿ ಏರ್ಪಟ್ಟಿದ್ದು, ನಾಯಕರುಗಳು ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳ ನಿಗಮಕ್ಕೆ ಖುದ್ದು ಹೈಕಮಾಂಡ್ ಬಾಗಿಲು ತಟ್ಟಿ, ಲಾಭಿ ನಡೆಸುತ್ತಿದ್ದಾರೆ ಎನ್ನಲಾಗಿದೆ.