Tag: ಶಾಸಕಿ ಅಂಜಲಿ ನಿಂಬಾಳ್ಕರ್

  • ಮನೆ ಬಿದ್ದು 9 ತಿಂಗಳಾದ್ರೂ ಪರಿಹಾರ ನೀಡಿಲ್ಲ – ಆತ್ಮಹತ್ಯೆ ಬೆದರಿಕೆ ಹಾಕಿದ ನೆರೆ ಸಂತ್ರಸ್ತ

    ಮನೆ ಬಿದ್ದು 9 ತಿಂಗಳಾದ್ರೂ ಪರಿಹಾರ ನೀಡಿಲ್ಲ – ಆತ್ಮಹತ್ಯೆ ಬೆದರಿಕೆ ಹಾಕಿದ ನೆರೆ ಸಂತ್ರಸ್ತ

    ಬೆಳಗಾವಿ: ಅತಿವೃಷ್ಟಿಯಿಂದ ಮನೆ (House) ಬಿದ್ದು 9 ತಿಂಗಳು ಕಳೆದರೂ ಪರಿಹಾರ ನೀಡದ ಆರೋಪ ಹಿನ್ನೆಲೆ ಮನೆ ನಿರ್ಮಿಸಿ ಕೊಡದಿದ್ದರೆ ಆತ್ಮಹತ್ಯೆ (Suicide) ಮಾಡಿಕೊಳ್ಳುವ ಸಂದರ್ಭ ಬರುತ್ತದೆ ಎಂದು ನೆರೆ ಸಂತ್ರಸ್ತ ವ್ಯಕ್ತಿಯೊಬ್ಬರು ವೀಡಿಯೋ (Video) ಮಾಡಿ ಅಳಲು ತೋಡಿಕೊಂಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಈರಪ್ಪ ನಾಡಗೌಡ್ರ ಎಂಬಾತ ಮೊಬೈಲ್ ಸೆಲ್ಫಿ ವೀಡಿಯೋ ಮಾಡಿ ಶಾಸಕಿ ಅಂಜಲಿ ನಿಂಬಾಳ್ಕರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಾಂಸದ ಉತ್ಪನ್ನಗಳ ಜಾಹೀರಾತುಗಳ ನಿಷೇಧ ಕೋರಿದ ಅರ್ಜಿದಾರರಿಗೆ ಬಾಂಬೆ ಹೈಕೋರ್ಟ್ ತರಾಟೆ

    ನಿರಂತರ ಮಳೆಗೆ ಕಳೆದ ನವೆಂಬರ್‍ನಲ್ಲಿ ಯಲ್ಲಪ್ಪ ನಾಡಗೌಡ್ರ ಅವರ ಮನೆ ನೆಲಸಮವಾಗಿತ್ತು. ಮನೆ ಬಿದ್ದರೂ ಪರಿಹಾರ ನೀಡಿಲ್ಲ. ಅಂಜಲಿ ನಿಂಬಾಳ್ಕರ್, ಖಾನಾಪುರ ತಹಶಿಲ್ದಾರ್, ಬೆಳಗಾವಿ ಡಿಸಿ, ಲೋಕಾಯುಕ್ತ, ಸಿಎಂಗೆ ಪತ್ರ ಬರೆದರೂ ಪ್ರಯೋಜನ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಸಿ ಹೋಗಿರುವ ನೆರೆ ಸಂತ್ರಸ್ತ ಯಲ್ಲಪ್ಪ ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಅಳಲನ್ನು ತೋಡಿಕೊಂಡಿದ್ದು, ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶಾಸಕರಿಗೆ ಕರೆ ಮಾಡಿದರೆ ಸರ್ಕಾರದಿಂದ ಪರಿಹಾರ ಬಂದಿಲ್ಲ ಅಂತಾ ಫೋನ್ ಕಟ್ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಟ್ರೈನ್‌ನಲ್ಲೂ ಸವಿಯಬಹುದು ಹಬ್ಬದೂಟ – ನವರಾತ್ರಿ ಹಿನ್ನೆಲೆ ರೈಲ್ವೆಯಿಂದ ಸ್ಪೆಷಲ್ ಮೆನು

    ಗ್ರಾಮಲೆಕ್ಕಾಧಿಕಾರಿ ಎರಡು ಸಾವಿರ ರೂಪಾಯಿ ಹಣ ಪಡೆದಿದರು. ಹೆಚ್ಚಿನ ಹಣ ಬೇಡಿಕೆ ಇಟ್ಟಾಗ ನೀಡದಿದ್ದಾಗ ನನ್ನ ಮನೆಯ ವರದಿ ಮಾಡಿಲ್ಲ. ಗ್ರಾಮಲೆಕ್ಕಾಧಿಕಾರಿ ಕರ್ತವ್ಯಲೋಪ ಎಸೆಗಿದ್ದಾರೆ. ಅವರನ್ನು ವರ್ಗಾವಣೆ ಮಾಡಿದ್ದಾರೆ ಎಂದು ತಹಶಿಲ್ದಾರ್ ಪತ್ರ ಬರೆದಿದ್ದಾರೆ. ಅವರನ್ನು ವರ್ಗಾವಣೆ ಮಾಡಿದ್ದರೆ ನಮಗೆ ಪರಿಹಾರ ಸಿಗುವುದಿಲ್ಲ. ಆದರೆ ನನಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಅಂಜಲಿ ನಿಂಬಾಳ್ಕರ್‌ಗೆ ಎಲ್ಲಾ ದಾಖಲೆ ವಾಟ್ಸಪ್ ಮಾಡಿದ್ದು ನೋಡಿದ್ದಾರೆ. ಆದರೆ ಪರಿಹಾರ ಕೊಡಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ತನಗೆ ಚಿಕ್ಕಚಿಕ್ಕ ಮಕ್ಕಳು ವೃದ್ಧ ತಂದೆ ಇದ್ದು ಬೀದಿಯಲ್ಲಿ ಕಳೆಯುವ ಪರಿಸ್ಥಿತಿ ಬಂದಿದೆ. ನನ್ನ ಮಕ್ಕಳ ಸ್ಥಿತಿ ಹೇಗಿದೆ ನೋಡಿ ಎಂದು ವೀಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಾಮಾನ್ಯ ಗೃಹಿಣಿಯಂತೆ ರಸ್ತೆ ಬದಿ ತರಕಾರಿ ಖರೀದಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್

    ಸಾಮಾನ್ಯ ಗೃಹಿಣಿಯಂತೆ ರಸ್ತೆ ಬದಿ ತರಕಾರಿ ಖರೀದಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್

    ಬೆಳಗಾವಿ: ದಿನೇ ದಿನೇ ಚುನಾವಣಾ ಪ್ರಚಾರ ಕಣ ರಂಗೇರುತ್ತಿದ್ದು, ಈ ಮಧ್ಯೆ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಸಾಮಾನ್ಯ ಗೃಹಿಣಿಯಂತೆ ರಸ್ತೆ ಬದಿ ತರಕಾರಿ ಖರೀದಿಸಿದ್ದಾರೆ.

    ಖಾನಾಪುರ ತಾಲೂಕಿನ ನಂದಗಡದ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಸಂದರ್ಭದ ನಡುವೆಯೂ ಶಾಸಕಿ ಸಂತೆಯಲ್ಲಿ ತರಕಾರಿ ಖರೀದಿಸಿದ್ದಾರೆ. ಡಿಸೆಂಬರ್ 10 ರಂದು ವಿಧಾನ ಪರಿಷತ್ ಚುನಾವಣೆ ನಡೆಯುವ ಹಿನ್ನೆಲೆ ನಾಗರಾಳಿಯಲ್ಲಿ ಕೈ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರ ಅವರು ಪ್ರಚಾರ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಡಲೆಕಾಯಿ ಪರಿಷೆಯಲ್ಲಿ ನಕ್ಕುನಲಿದ ವೈಷ್ಣವಿಗೌಡ

    ಪ್ರಚಾರ ಮುಗಿಸಿದ ಬಳಿಕ ಖಾನಾಪುರಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಗ್ರಾಮದ ವಾರದ ಸಂತೆಯ ಮಾರುಕಟ್ಟೆಗೆ ಭೇಟಿ ನೀಡಿ ಕ್ಯಾರೆಟ್, ಬೀಟ್‍ರೂಟ್, ಸೌತೆಕಾಯಿ, ಪಾಲಕ್, ಬೀನ್ಸ್ ಸೇರಿ ಇತರೆ ತರಕಾರಿಯನ್ನು ಖರೀದಿ ಮಾಡಿದ್ದಾರೆ. ಶಾಸಕಿಯಾಗಿದ್ದುಕೊಂಡು ಓರ್ವ ಸಾಮಾನ್ಯ ಗೃಹಿಣಿಯಂತೆ ತರಕಾರಿ ಖರೀದಿ ಮಾಡುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ

  • ಬೆಂಗ್ಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡ ಶಾಸಕಿ ಅಂಜಲಿ ನಿಂಬಾಳ್ಕರ್

    ಬೆಂಗ್ಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡ ಶಾಸಕಿ ಅಂಜಲಿ ನಿಂಬಾಳ್ಕರ್

    ಬೆಳಗಾವಿ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಬೆಂಗಳೂರಿನಿಂದ ತಿರುಪತಿವರೆಗೆ ಸದ್ಭಾವನಾ ಪಾದಯಾತ್ರೆಯನ್ನು ಶನಿವಾರ ಬೆಳಗ್ಗೆ ಆರಂಭಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಶಾಸಕಿ ನಿಂಬಾಳ್ಕರ್ ಅವರು, ಸಶಕ್ತ ವರ್ತಮಾನ, ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥನೆ ನಡಿಗೆ. ನಮ್ಮ ಖಾನಾಪುರಕ್ಕಾಗಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಕೆಲವು ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

    ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಪತಿ, ಪೋಲಿಸ್ ಅಧಿಕಾರಿ ಐಜಿಪಿ ಹೇಮಂತ್ ನಿಂಬಾಳ್ಕರ್ ಸೇರಿದಂತೆ ತಮ್ಮ ಸಹೋದರರಾದ ಮಿಲಿಂದ್ ಮತ್ತು ಸುರೇಶ್ ಅವರೊಂದಿಗೆ ಬೆಂಗಳೂರಿನಿಂದ ತಿರುಪತಿವರೆಗೆ ಪಾದಯಾತ್ರೆ ಪ್ರಾರಂಭಿಸಿದ್ದಾರೆ. ಶನಿವಾರ ಬೆಳಗ್ಗೆ ಈ ಸದ್ಭಾವನಾ ಪಾದಯಾತ್ರೆ ಪ್ರಾರಂಭಿಸಿದ ಶಾಸಕಿ ಅಂಜಲಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಜನತೆಯ ಸುಖ ಶಾಂತಿ, ನೆಮ್ಮದಿಯ ಬದುಕಿಗಾಗಿ ತಿಮ್ಮಪ್ಪನ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲ್ಲಿದ್ದಾರೆ.

  • ಖಾನಾಪುರ ‘ಕೈ’ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ಖಾನಾಪುರ ‘ಕೈ’ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ಬೆಳಗಾವಿ: ಜಿಲ್ಲೆಯ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತವಾಗಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಬಳಿ ನಡೆದಿದೆ.

    ಘಟನೆಯಲ್ಲಿ ಶಾಸಕಿ ಅಂಜಲಿ ಅವರ ತಲೆಗೆ ಬಲವಾದ ಪೆಟ್ಟಾಗಿದ್ದು, ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಶಾಸಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಪವಾಡ ರೀತಿಯಲ್ಲಿ ಅಪಘಾತದಿಂದ ಶಾಸಕಿ ಬಚಾವ್ ಆಗಿದ್ದಾರೆ ಎನ್ನಲಾಗಿದೆ.

    ಮಹಾರಾಷ್ಟ್ರದ ಸೊಲ್ಲಾಪುದ ಗೆಸ್ಟ್ ಹೌಸ್ ಬಳಿ ಘಟನೆ ನಡೆದಿದ್ದು, ಸೊಲ್ಲಾಪುರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಮತ್ತೊಬ್ಬರಿಗೂ ಗಂಭೀರ ಗಾಯಗಳಾಗಿದೆ. ಚಾಲಕ ಮಹಾದೇವ ಹಾಗೂ ಗುನಮಾನ್ ಸೈಯದ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಕಾರು ಪಲ್ಟಿ ಆಗಿದೆ ಎನ್ನಲಾಗಿದೆ. ಕಾರಿನ ವೇಗದ ಕಾರಣ ಅಪಘಾತದ ಸಂದರ್ಭದಲ್ಲಿ ಮೂರು ಬಾರಿ ಪಲ್ಟಿಯಾಗಿದ್ದು, ಸಕಾಲಕ್ಕೆ ಏರ್ ಬ್ಯಾಗ್ ತೆರೆದುಕೊಂಡ ಪರಿಣಾಮ ಶಾಸಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅಂಜಲಿ ನಿಂಬಾಳ್ಕರ್ ಅವರ ತಲೆಗೆ ಹಾಗು ಕೈಗೆ ಬಲವಾದ ಪೆಟ್ಟಗಿದೆ ಎಂಬ ಮಾಹಿತಿ ಲಭಿಸಿದೆ.