Tag: ಶಾಸಕ ಎಂಟಿಬಿ ನಾಗರಾಜ್

  • ಮುಂದೆ ಏನೆಲ್ಲಾ ಆಗುತ್ತೆ ಕಾದುನೋಡಿ- ಸಿದ್ದು ಭೇಟಿ ಬಳಿಕ ಶಾಸಕ ಎಂಟಿಬಿ ಗುಡುಗು

    ಮುಂದೆ ಏನೆಲ್ಲಾ ಆಗುತ್ತೆ ಕಾದುನೋಡಿ- ಸಿದ್ದು ಭೇಟಿ ಬಳಿಕ ಶಾಸಕ ಎಂಟಿಬಿ ಗುಡುಗು

    ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಮಾತನಾಡಿದ ಎಂಟಿಬಿ ನಾಗರಾಜ್, ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದ ಕೆಲಸಗಳು ನಡೆಯುತ್ತಿಲ್ಲ ಎಂಬ ಬೇಸರ ನಮ್ಮಲ್ಲಿ ಮೂಡಿದೆ. ಅಲ್ಲದೇ ಕ್ಷೇತ್ರದ ಅಭಿವೃದ್ಧಿಯ ಕುರಿತು ಅಸಮಾಧಾನ ಇರೋದು ನಿಜ. ಹೈಕಮಾಂಡ್ ಇದೆ ಮಾತಾಡೋಣ ಅಂದಿದ್ದಾರೆ. ನನಗೆ ಅಸಮಾಧಾನ ಇದೆ. ಆದರೆ ಮುಂದೆ ಏನೆಲ್ಲಾ ಆಗುತ್ತೆ ಕಾದುನೋಡಿ ಎಂದು ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಅಲ್ಲದೇ ಸಚಿವ ಸ್ಥಾನದ ಕುರಿತು ಚರ್ಚೆ ನಡೆಸಲಾಗಿದೆ. ಈ ಕುರಿತು ಹೈಕಮಾಂಡ್ ಅವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ. ಆದರೆ ಸಚಿವ ಸ್ಥಾನದ ಖಚಿತತೆ ಕುರಿತು ಯಾವುದೇ ಅಶ್ವಾಸನೆ ನೀಡಿಲ್ಲ. ಏನೆಲ್ಲಾ ಬೆಳವಣಿಗೆಗಳು ಆಗಲಿದೆ ಎಂದು ಕಾದು ನೋಡಬೇಕಿದೆ ಎಂದರು.

    ಎಂಟಿಬಿ ನಾಗರಾಜ್ ಕಾಂಗ್ರೆಸ್ ಪಕ್ಷ ಬಿಡುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲೇ ಉಳಿಯಲಿದ್ದೇನೆ. ಪಕ್ಷ ಬಿಡುವ ಯಾವುದೇ ಯೋಚನೆಗಳು ಇಲ್ಲ. ಹೈಕಮಾಂಡ್ ಇದುವರೆಗೂ ಯಾರಿಗೂ ಸಚಿವ ಸ್ಥಾನ ನೀಡುವ ಆಶ್ವಾಸನೆ ನೀಡುವುದಿಲ್ಲ. ಇದು ನಮ್ಮ ಪಕ್ಷದ ನಿಯಮ. ನಾನು ಚೆನ್ನೈಗೂ ಹೋಗುವುದಿಲ್ಲ, ಮುಂಬೈಗೂ ಹೋಗುವುದಿಲ್ಲ. ಬಿಜೆಪಿ ನಾಯಕರು ಯಾರು ನನ್ನನ್ನು ಸಂಪರ್ಕ ಮಾಡಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾನೊಬ್ಬ ಡಾಕ್ಟರ್, ಆಪರೇಷನ್‍ಗೆ ಒಳಗಾಗುವುದಿಲ್ಲ: ಶಾಸಕ ಸುಧಾಕರ್

    ನಾನೊಬ್ಬ ಡಾಕ್ಟರ್, ಆಪರೇಷನ್‍ಗೆ ಒಳಗಾಗುವುದಿಲ್ಲ: ಶಾಸಕ ಸುಧಾಕರ್

    ಬೆಂಗಳೂರು: ರಾಜ್ಯ ರಾಜಕಾರಣದ ಕ್ಷಿಪ್ರ ಬೆಳವಣಿಗೆಗೆ ಕಾರಣವಾಗಿ ಸುದ್ದಿಯಾಗಿದ್ದ ಕಾಂಗ್ರೆಸ್ ಪಕ್ಷದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ನಾನು ಎಂದಿಗೂ ಆಪರೇಷನ್ ರಾಜಕಾರಣಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಕಾಂಗ್ರೆಸ್ ಪಕ್ಷ ಕೆಲ ಶಾಸಕರು ಮುಂಬೈ ತೆರಳುತ್ತಿದ್ದಾರೆ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಶಾಸಕ ಸುಧಾಕರ್ ಅವರು ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸ್ನೇಹಿತರೊಂದಿಗೆ ದೇವಾಲಯಕ್ಕೆ ಭೇಟಿ ನೀಡುತ್ತಿರುವ ಸುದ್ದಿ ರಾಜಕೀಯ ಪಿತೂರಿಗೆ ಕಾರಣವಾಗಿರುವುದು ಶಾಕ್ ನೀಡಿದೆ. ನಾನು ಹಾಗೂ ಹೊಸಕೋಟೆ ಶಾಸಕರಾದ ಎಂಟಿಬಿ ನಾಗರಾಜ್ ಮತ್ತು ಕೆಲ ಸ್ನೇಹಿತರು ತಮಿಳುನಾಡಿನ ದೇವಾಲಯಕ್ಕೆ ಇಂದು ಭೇಟಿ ನೀಡಿದ್ದೆವು. ಆದರೆ ಮಾಧ್ಯಮಗಳು ಇವುಗಳನ್ನು ಆಪರೇಷನ್ ಕಮಲ ಎಂದು ಅರ್ಥೈಸಿದೆ ಎಂದು ತಿಳಿಸಿದ್ದಾರೆ.

    https://twitter.com/mla_sudhakar/status/1043516012136677378

    ಮತ್ತೊಂದು ಟ್ವೀಟ್‍ನಲ್ಲಿ ನಾನು ಡಾಕ್ಟರ್ ಆಗಿದ್ದು, ಆಪರೇಷನ್‍ಗೆ ಒಳಗಾಗುವುದಿಲ್ಲ. ನಾನು ಯಾವಾಗಲೂ ಪಕ್ಷದ ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ. ಅಲ್ಲದೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಾಯಕತ್ವ ಹಾಗೂ ಪಕ್ಷದ ಸಿದ್ಧಾಂತಗಳನ್ನು ನಂಬುತ್ತೇನೆ ಎಂದು ರಾಹುಲ್ ಗಾಂಧಿ ಜೊತೆ ಇರುವ ತನ್ನ ಫೋಟೋವನ್ನು ಹಾಕಿಕೊಂಡಿದ್ದಾರೆ.

    ಸಮ್ಮಿಶ್ರ ಸರ್ಕಾರದ ರಚನೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಸಚಿವ ಆಕಾಂಕ್ಷಿಯಾಗಿರುವ ಶಾಸಕ ಸುಧಾಕರ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದಾದ ಬಳಿಕ ಹಲವು ಬಾರಿ ಸಮ್ಮಿಶ್ರ ಸರ್ಕಾರ ಹಾಗೂ ಕೆಲ ಪಕ್ಷದ ವಿರುದ್ಧವೇ ಸುಧಾಕರ್ ಅಸಮಾಧಾನ ಹೊರಹಾಕಿದ್ದರು. ಈ ಮೂಲಕ ಪಕ್ಷದ ಅತೃಪ್ತರ ಪಟ್ಟಿಯಲ್ಲಿ ಮೊದಲಿಗರಾಗಿ ಕಾಣಿಸಿಕೊಂಡಿದ್ದರು.

    ಮಾಧ್ಯಮಗಳಲ್ಲಿ ಇಂತಹ ಸುದ್ದಿ ಪ್ರಸಾರವಾಗುತ್ತಿದಂತೆ ಸ್ವತಃ ಸಿಎಂ ಕುಮಾರಸ್ವಾಮಿ ಅವರು ಸುಧಾಕರ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದರು. ಈ ವೇಳೆ ಸಿಎಂ ಎಚ್‍ಡಿಕೆಗೆ ಸುಧಾಕರ್ ಅವರು ತಾವು ದೇವಾಲಯಕ್ಕೆ ಭೇಟಿ ನೀಡುತ್ತಿದ್ದು, ಸೋಮವಾರ ಭೇಟಿ ಮಾಡುವುದಾಗಿ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನನ್ನ ಮನಸ್ಸಲ್ಲಿ ಏನಿದೆ ಅಂತ ನಾಳೆ ಹೇಳ್ತೇನೆ: ಶಾಸಕ ಎಂಟಿಬಿ ನಾಗರಾಜ್

    ನನ್ನ ಮನಸ್ಸಲ್ಲಿ ಏನಿದೆ ಅಂತ ನಾಳೆ ಹೇಳ್ತೇನೆ: ಶಾಸಕ ಎಂಟಿಬಿ ನಾಗರಾಜ್

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ನನ್ನ ಮನಸ್ಸಿನಲ್ಲಿ ಏನಿದೆ ಎಂದು ನಾಳೆ ಹೇಳುತ್ತೇನೆ ಎಂದು ಹೇಳುವ ಮೂಲಕ ಟ್ವಿಸ್ಟ್ ಕೊಟ್ಟಿದ್ದಾರೆ

    ನಗರದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ಶಾಸಕ ಎಂಟಿಬಿ ನಾಗರಾಜ್, ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೆ. ಆದರೆ ಅದನ್ನು ನಾಳೆ ತಿಳಿಸುತ್ತೇನೆ. ಸರ್ಕಾರದಲ್ಲಿ ನಾನು ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ಕುರಿತು ಅಸಮಾಧಾನವಿದೆ. ನನ್ನ ಜೊತೆ ಮತ್ತಿಬ್ಬರು ಶಾಸಕರು ಕೂಡ ಆಗಮಿಸುವ ನಿರೀಕ್ಷೆ ಇದೆ ಎಂದರು.

    ಅಪರೇಷನ್ ಕಮಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಯಾವುದೇ ಬಿಜೆಪಿ ಶಾಸಕರು ಭೇಟಿ ಮಾಡಿ ಮಾತನಾಡಿಲ್ಲ. ಆದರೆ ಕೆಲ ಸ್ನೇಹಿತರು ಫೋನ್ ಮೂಲಕ ಸಂಪರ್ಕ ಮಾಡಿದ್ದಾರೆ. ಈ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಮೇಶ್ ಜಾರಕಿಹೊಳಿ ಅವರ ಬಳಿ ಅಪರೇಷನ್ ಕಮಲದ ಬಗ್ಗೆಯೂ ಚರ್ಚೆ ಮಾಡಿಲ್ಲ. ಈ ತಿಂಗಳ ಕೊನೆಯ ವೇಳೆಗೆ ನಿಗಮ ಮಂಡಳಿ ಹಾಗೂ ಮಂತ್ರಿ ಮಂಡಲ ರಚನೆ ಆಗಲಿದೆ ಎಂದು ರಮೇಶ್ ಜಾರಕಿಹೊಳಿ ಅವರು ತಿಳಿಸಿದರು. ಈ ಕುರಿತು ಕಾದು ನೋಡುವ ಎಂದು ಹೇಳಿದ್ದಾರೆ. ಅದ್ದರಿಂದ ನಾಳೆ ನಿಮ್ಮನ್ನು ಭೇಟಿ ಮಾಡಿ ಮಾಹಿತಿ ನೀಡುತ್ತೇನೆ ಎಂದರು. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರಕ್ಕೆ ಮಂಗಳವಾರ ಕೊನೆಯ ದಿನ?

    ಎಂಟಿಬಿ ಅಸಮಾಧಾನಕ್ಕೆ ಕಾರಣ ಏನು?
    ನಾವು ಹೇಳಿದ ಯಾವುದೇ ಕೆಲಸಗಳು ಈ ಸಮ್ಮಿಶ್ರ ಸರ್ಕಾರದಲ್ಲಿ ಆಗುತ್ತಿಲ್ಲ. ಸಿದ್ದರಾಮಯ್ಯನವರನ್ನು ಕುಮಾರಸ್ವಾಮಿ ಕಡೆಗಣಿಸುತ್ತಿದ್ದು ಹೀಗಾಗಿ ಅವರ ಬೆಂಬಲಿಗರಿಗೂ ಸರ್ಕಾರದಲ್ಲಿ ಪ್ರಾಶಸ್ತ್ಯ ಸಿಗುತ್ತಿಲ್ಲ. ಜೆಡಿಎಸ್ ಶಾಸಕರು ಸರ್ಕಾರದ ಎಲ್ಲಾ ಇಲಾಖೆಯಲ್ಲಿ ಕೈ ಆಡಿಸುತ್ತಿದ್ದಾರೆ ಎನ್ನುವುದು ಎಂಟಿಬಿ ನಾಗಾರಾಜ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಂಟಿಬಿ ನಾಗರಾಜ್ ಬಳಿ ಇದೆ ಬರೊಬ್ಬರಿ 1 ಸಾವಿರ 15 ಕೋಟಿ ರೂ. ಆಸ್ತಿ!

    ಎಂಟಿಬಿ ನಾಗರಾಜ್ ಬಳಿ ಇದೆ ಬರೊಬ್ಬರಿ 1 ಸಾವಿರ 15 ಕೋಟಿ ರೂ. ಆಸ್ತಿ!

    ಬೆಂಗಳೂರು: ವಿಧಾನ ಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದಂತೆ ರಾಜಕಾರಣಿಗಳ ಆಸ್ತಿಯ ಮೌಲ್ಯಗಳ ಕುರಿತು ಲೆಕ್ಕಾಚಾರಗಳು ಆರಂಭವಾಗಿದೆ. ಇದುವರೆಗೂ ಅಭ್ಯರ್ಥಿಗಳು ಘೋಷಣೆ ಮಾಡಿಕೊಂಡಿರುವ ಆಸ್ತಿಯ ವಿವರಗಳಲ್ಲಿ ಕೆಲವು ಅಚ್ಚರಿ ಅಂಶಗಳು ಬೆಳಕಿಗೆ ಬರುತ್ತಿವೆ.

    ರಾಜ್ಯದ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ಹೊಸಪೇಟೆ ಕ್ಷೇತ್ರದ ಶಾಸಕ ಎಂಟಿಬಿ ನಾಗರಾಜ್ ತಮ್ಮ ಆಸ್ತಿಯ ಒಟ್ಟು ಮೌಲ್ಯ 1 ಸಾವಿರದ 15 ಕೋಟಿ ರೂ. ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ಅವರು ಚುನಾವಣಾ ಆಯೋಗಕ್ಕೆ ನೀಡಿರುವ ಆಸ್ತಿಯ ವಿವರಗಳು ಇಂತಿದೆ.

    ಶಾಸಕರ ಹೆಸರಿನಲ್ಲಿ ಚರಾಸ್ತಿ 314 ಕೋಟಿ 75 ಲಕ್ಷದ 54 ಸಾವಿರದ 785 ರೂ., ಸ್ಥಿರಾಸ್ತಿ 394 ಕೋಟಿ 63 ಲಕ್ಷ 53 ಸಾವಿರದ 309 ರೂ., ವಾರ್ಷಿಕ ಆದಾಯ 102 ಕೋಟಿ ರೂ. ಹಾಗೂ 27 ಕೋಟಿ 70 ಲಕ್ಷದ 31 ಸಾವಿರದ 565 ರೂ. ಸಾಲ ಹೊಂದಿರುವುದಾಗಿ ಮಾಹಿತಿ ನೀಡಿದ್ದಾರೆ. ಇನ್ನು ಶಾಸಕರಾದ ಎಂಟಿಬಿ ನಾಗರಾಜ್ ಅವರು 8 ನೇ ತರಗತಿ ವರೆಗೆ ವಿದ್ಯಾಭ್ಯಾಸ ಪಡೆದಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಬಳಿಯಿದೆ 7.23 ಕೋಟಿ ರೂ. ಮೌಲ್ಯದ ಆಸ್ತಿ!

    ಶಾಸಕರ ಪತ್ನಿ ಶಾಂತಕುಮಾರಿ ಅವರು ಹೆಸರಿನಲ್ಲಿ 122 ಕೋಟಿ 40 ಲಕ್ಷದ 9 ಸಾವಿರದ 258 ರೂ. ಚರಾಸ್ತಿ, 184 ಕೋಟಿ 1 ಲಕ್ಷದ 12 ಸಾವಿರ ರೂ. ಸ್ಥಿರಾಸ್ತಿ ಹಾಗೂ ಅವರ ವಾರ್ಷಿಕ ಆದಾಯ 52 ಕೋಟಿ ರೂ. ಸೇರಿದಂತೆ 25 ಲಕ್ಷ ರೂ. ಸಾಲ ಹೊಂದಿರುವುದಾಗಿ ಮಾಹಿತಿ ನೀಡಿದ್ದರೆ. ಇದನ್ನೂ ಓದಿ: 2008ರಲ್ಲಿ 75 ಕೋಟಿ ಇದ್ದ ಡಿಕೆಶಿ ಆಸ್ತಿ ಈಗ 548 ಕೋಟಿ ರೂ.ಗೆ ಏರಿಕೆ!

    2013 ರ ಚುನಾವಣೆ ವೇಳೆ 470 ಕೋಟಿ 13 ಲಕ್ಷದ 52 ಸಾವಿರದ 248 ರೂ. ಆಸ್ತಿಯನ್ನು ಎಂಟಿಬಿ ನಾಗರಾಜ್ ಘೋಷಿಸಿಕೊಂಡಿದ್ದರು.   ಇದನ್ನೂ ಓದಿ: 3ನೇ ಕ್ಲಾಸ್ ಓದಿ ಟೀ ಮಾರಾಟ ಮಾಡುತ್ತಿದ್ದವನ ಆಸ್ತಿ 339 ಕೋಟಿ ರೂ- ಪಕ್ಷೇತರ ಅಭ್ಯರ್ಥಿಯಿಂದ ಆಸ್ತಿ ಘೋಷಣೆ