Tag: ಶಾಸಕ ಗೂಳಿಹಟ್ಟಿ ಶೇಖರ್

  • ಗೂಳಿಹಟ್ಟಿ ವಿರುದ್ಧವೇ ಗುಡುಗಿದ ಖನಿಜ ನಿಗಮ ಅಧ್ಯಕ್ಷ ಲಿಂಗಮೂರ್ತಿ

    ಗೂಳಿಹಟ್ಟಿ ವಿರುದ್ಧವೇ ಗುಡುಗಿದ ಖನಿಜ ನಿಗಮ ಅಧ್ಯಕ್ಷ ಲಿಂಗಮೂರ್ತಿ

    ಚಿತ್ರದುರ್ಗ: ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರಣ ಆದವರನ್ನು ಶಾಸಕರು ಕಡೆಗಣಿಸುತ್ತಿದ್ದಾರೆ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ಖನಿಜ ನಿಗಮ ಅಧ್ಯಕ್ಷ ಲಿಂಗಮೂರ್ತಿ ಗುಡುಗಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 2023ಕ್ಕೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಹಿಂದೆ 2008, 2013ರಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿದ್ದೇನೆ. 2018ರಲ್ಲಿ ಮತ್ತೆ ನನಗೆ ಬಿಜೆಪಿಯಿಂದ ಸ್ಪರ್ಧಿಸುವ ಅವಕಾಶವಿದ್ದರೂ, ಕ್ಷೇತ್ರದಲ್ಲಿ ಕಾಂಗ್ರೆಸ್‍ನ್ನು ಸೋಲಿಸಬೇಕು ಹಾಗೂ ಬಿಎಸ್‍ವೈ ಸಿಎಂ ಆಗಬೇಕೆಂಬ ದೃಷ್ಟಿಯಿಂದ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಬಿಜೆಪಿ ಟಿಕೆಟ್ ತ್ಯಾಗ ಮಾಡಿದ್ದೆನು ಎಂದರು.

    ಚುನಾವಣೆಯಲ್ಲಿ ಗೂಳಿಹಟ್ಟಿ ಶೇಖರ್ ಅವರು ಅಭ್ಯರ್ಥಿಯಾದರೂ, ನಾನೇ ಅಭ್ಯರ್ಥಿ ಎಂಬಂತೆ ನಾನು ಹಾಗೂ ನನ್ನ ಕಾರ್ಯಕರ್ತರು ಕೆಲಸ ಮಾಡಿ ಬಿಜೆಪಿ ಗೆಲ್ಲಿಸಿದ್ದೆವು. ಆದರೆ ನಮ್ಮ ಬೆಂಬಲದಿಂದ ಗೆದ್ದ ಬಳಿಕ ಶಾಸಕರು ನಮ್ಮನ್ನು ಕಡೆಗಣನೆ ಮಾಡುತ್ತಿದ್ದಾರೆಂದು ಆರೋಪಿಸಿದರು. ಇದನ್ನೂ ಓದಿ: ‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ

    ರಾಜ್ಯದ ಜನರು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ವೇಳೆ ಬಿಜೆಪಿ ನಾಯಕರಿಂದ ಚುನಾವಣೆ ಜಪ ನಡೆಯುತ್ತಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಟಿಕೆಟ್ ವಿಚಾರದಲ್ಲಿ ಹೊಸದುರ್ಗ ಬಿಜೆಪಿ ನಾಯಕರ ನಡುವೇ ಭಿನ್ನಮತ ಸ್ಫೋಟಗೊಂಡಿದೆ. ಹಾಗೆಯೇ ನಾನು 2023ಕ್ಕೆ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಆಗಿದ್ದೇನೆಂದು ತಿಳಿದ ಶಾಸಕ ಶೇಖರ್ ಹತಾಶರಾಗಿ ನನ್ನನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನೆಚ್ಚಿನ ಶಿಕ್ಷಕನ ವರ್ಗಾವಣೆ – ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು

  • ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಇಬ್ಬರ ದುರ್ಮರಣ

    ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಇಬ್ಬರ ದುರ್ಮರಣ

    ಚಿತ್ರದುರ್ಗ: ಕೊರೊನ ವೈರಸ್‍ನಿಂದ ರಾಜ್ಯದ ಎಲ್ಲೆಡೆ ಲಾಕ್‍ಡೌನ್ ಜಾರಿ ಇದ್ದು, ಈ ಲಾಕ್‍ಡೌನ್‍ನಿಂದ ಕಳೆದ ಒಂದು ತಿಂಗಳಿಂದ ಮನೆಯಲ್ಲೇ ಉಳಿದಿದ್ದ ಇಬ್ಬರು ರೈತರ ಜೀವವನ್ನು ವರುಣ ಬಲಿ ಪಡೆದಿದ್ದಾನೆ.

    ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿನಾದ್ಯಂತ ಇಂದು ಭಾರೀ ಗಾಳಿ ಸಹಿತ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ಅಬ್ಬರಿಸಿದ ವರುಣನ ಆರ್ಭಟಕ್ಕೆ ಶ್ರೀರಾಂಪುರ ಹೋಬಳಿಯ ಆಲ್ಗಟ್ಟ ಗ್ರಾಮದ ರೇಣುಖಾರಾಧ್ಯ (35) ಎಂಬ ರೈತನ ಮೇಲೆ ತೆಂಗಿನ ಮರವೊಂದು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಇತ್ತ ಹೊಸದುರ್ಗ ತಾಲೂಕಿನ ಕಸಬಾ ಹೋಬಳಿಯ ಮಧುರೆ ಗ್ರಾಮದ ರಿ. ಸರ್ವೆ ನಂಬರು 78 ರಲ್ಲಿ ಬರುವ ಜಮೀನಿನಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರ ನೆಲ್ಲಕ್ಕುರುಳಿದೆ. ಈ ವೇಳೆ ಮರದ ಕೆಳಗೆ ಕುಳಿತಿದ್ದ ಗ್ರಾಮದ ನಿವಾಸಿ ಗೀತಮ್ಮ(45) ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ತಹಶೀಲ್ದಾರ್ ತಿಪ್ಪೇಸ್ವಾಮಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

    ಉಳಿದಂತೆ ಮಾಡದಕೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಗಾಳಿ ಸಹಿತ ಮಳೆ ಸುರಿದ ಹಿನ್ನಲೆಯಲ್ಲಿ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ನೀರು ಕುಡಿಯಲು ಹೋದ ಎರಡು ಎಮ್ಮೆಗಳು ಸಾವನ್ನಪಿದ್ದಾವೆ.

  • ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ತಿರುಗೇಟು

    ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ತಿರುಗೇಟು

    -ಚಾಡಿ ಹೇಳಿ ಅನುಧಾನ ನಿಲ್ಲಿಸೋ ಥರ್ಡ್ ಕ್ಲಾಸ್ ನಾನಲ್ಲ ಎಂದ ಜಿಲ್ಲಾಧ್ಯಕ್ಷ

    ಚಿತ್ರದುರ್ಗ: ಒಗ್ಗಟ್ಟಿನ ಮಂತ್ರ ಜಪಿಸುತ್ತಾ ವಿಧಾನಸಭೆ ಚುನಾವಣೆಯಲ್ಲಿ ಗೂಳಿಹಟ್ಟಿ ಶೇಖರ್ ಪರ ಓಡಾಡಿದ್ದ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಶುರುವಾಗಿದೆ. ಈ ನಡುವೆ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಜಿಲ್ಲಾಧ್ಯಕ್ಷ ನವೀನ್ ತಿರುಗೇಟು ನೀಡಿದ್ದಾರೆ.

    ಹೊಸದುರ್ಗದ ಬನಶಂಕರಿ ಭವನದಲ್ಲಿ ಭಾನುವಾರ ಸ್ವಾಭಿಮಾನಿ ಗೂಳಿಹಟ್ಟಿ ಶೇಖರ್ ಬಳಗದಿಂದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಗೂಳಿಹಟ್ಟಿ ಶೇಖರ್ ಜಿಲ್ಲಾಧ್ಯಕ್ಷರ ವಿರುದ್ಧ ಆರೋಪ ಮಾಡಿದ್ದರು. ಈ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ, ಹೊಸದುರ್ಗ ಬಿಜೆಪಿ ಟಿಕೆಟ್ ಆಕಾಂಕ್ಷಿ ನವೀನ್, ತಮ್ಮ ವಿರುದ್ಧ ವರಿಷ್ಠರ ಬಳಿ ಇಲ್ಲಿನ ಬಿಜೆಪಿ ಮುಖಂಡರು ಚಾಳಿ ಹೇಳುತ್ತಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು. ಗೂಳಿಹಟ್ಟಿ ಶೇಖರ್ ಹೇಳುವಂತೆ ನಾವು, ಚಾಡಿ ಹೇಳಿ ಅನುದಾನ ನಿಲ್ಲಿಸುವಂತಹ ಥರ್ಡ್ ಕ್ಲಾಸ್ ಮೆಂಟಾಲಿಟಯವರಲ್ಲ. ನಾನು ಯಾರ ಬಗ್ಗೆಯೂ ಚಾಡಿ ಹೇಳುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದರು.

    ಇದೇ ವೇಳೆ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕರ ಕಡೆಗಣನೆ ವಿಚಾರವಾಗಿ ಪ್ರತಿಕ್ರಿಯಿಸಿದ ನವೀನ್, ಈ ವಿಷಯವನ್ನು ಕಾರ್ಯಕರ್ತರ ಸಭೆಯಲ್ಲಿ ಹೇಳುವಂತಹ ಅವಶ್ಯಕತೆ ಇರಲಿಲ್ಲ. ಜೊತೆಗೆ ನಾವು ಶಾಸಕರನ್ನು ಸೈಡ್ ಲೈನ್ ಮಾಡಿಲ್ಲ. ರಾಜ್ಯದ ಯಾವುದೇ ಶಾಸಕರು ಕೂಡ ಈ ರೀತಿ ಬೆಂಬಲಿಗರ ಸಭೆ ಕರೆಯುವುದಿಲ್ಲ. ಆದರೆ ಇವರು ಮಾತ್ರ ನಾನು ಬಿಜೆಪಿಗೆ ಬಂದು ತಪ್ಪು ಮಾಡಿದೆ ಎಂದು ಈ ಹಿಂದೆಯೂ ಹೇಳಿಕೆ ಕೊಟ್ಟಿದ್ದರು. ಈ ರೀತಿಯ ಹೇಳಿಕೆಯನ್ನು ನೀಡಬೇಡಿ ಎಂದು ಮನವಿ ಮಾಡಿದ್ದೇವೆ. ಅಲ್ಲದೇ ನಿಮ್ಮ ಅಭಿಮಾನಿಗಳು ಎಷ್ಟು ಪ್ರೀತಿಯಿಟ್ಟು ಮತ ಹಾಕಿದ್ದಾರೋ, ಅದರ ಎರಡರಷ್ಟು ಅಭಿಮಾನ ಇಟ್ಟು ಬಿಜೆಪಿ ಕಾರ್ಯಕರ್ತರು ನಿಮಗೆ ಮತ ಹಾಕಿದ್ದಾರೆ ಎಂದು ಟಾಂಗ್ ಕೊಟ್ಟರು. ಇದನ್ನು ಓದಿ: ಬಿಜೆಪಿ ವಿರುದ್ಧ ಮತ್ತೆ ಮುನಿದ ಗೂಳಿಹಟ್ಟಿ – ಮುಂದಿನ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧಿಸೋ ಇಂಗಿತ

    ಶೇಖರ್ ಅವರು ತಮ್ಮ ಎಲ್ಲಾ ಸಭೆಗಳಲ್ಲಿ ನನ್ನ ಅಭಿಮಾನಿಗಳು ಬಿಜೆಪಿಗೆ ಹೊಂದಿಕೊಳ್ಳುತ್ತಿಲ್ಲ ಎಂದು ಹೇಳುತ್ತಾರೆ. ಅವರಿಗೆ ಇಂತವರನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ಹೇಳುವ ನೈತಿಕತೆಯೇ ಇಲ್ಲ. ನಾನು ಬಿಜೆಪಿ, ನನ್ನ ಬೆಂಬಲಿಗರು ಬಿಜೆಪಿಯವರು ಎನ್ನುವ ಮನಸ್ಥಿತಿ ಅವರಲಿಲ್ಲ. ಇಂತಹ ಮನಸ್ಥಿತಿಯನ್ನು ಅವರು ಹೊಂದಿದ್ದಾರೆ ಎಂದು ಶಾಸಕರ ವಿರುದ್ಧ ನವೀನ್ ಗುಟುರು ಹಾಕಿದ್ದಾರೆ.

    ಕೆಲವರು ಶಾಸಕರಾಗಲು ತುದಿಗಾಲಲ್ಲಿ ನಿಂತಿದ್ದಾರೆ ಎಂಬ ಶಾಸಕ ಗೂಳಿಹಟ್ಟಿ ಶೇಖರ್ ಅವರ ಹೇಳಿಕೆ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, ಇಂತಹ ಮನೋಭವ ನನಗೆ ಇದ್ದಿದ್ದರೆ 2008 ರಲ್ಲೇ ಅವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದೆ. ಆದರೆ ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಅವರ ಪಕ್ಷ ವಿರೋಧಿ ಹೇಳಿಕೆಗಳಿಗೆ ಸಮಯದ ಬಂದಾಗ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷೇತರವಾಗಿ ನಿಲ್ಲಬೇಕೆಂದಿರೋ ಶಾಸಕರಿಗೆ ಚುನಾವಣೆ ಸಂದರ್ಭದಲ್ಲಿ ತಕ್ಕ ಉತ್ತರ ಕೊಡುತ್ತೇವೆ. ಆದರೆ ನಮ್ಮ ಪಕ್ಷ ಅವರೇ ಬೇಕು ಎಂದರೂ ಸಹ ಅವರ ಪರವಾಗಿ ಕೆಲಸ ಮಡುತ್ತೇವೆ ಎಂದು ಪಕ್ಷನಿಷ್ಠೆಯನ್ನು ವ್ಯಕ್ತಪಡಿಸಿದರು.