Tag: ಶಾಸಕ ಲಿಂಗೇಶ್

  • ಬಿಎಸ್‍ವೈ ಸಿಎಂ ಸ್ಥಾನದಿಂದ ಕೆಳಗಿಳಿದರೆ ದೇವೇಗೌಡರ ಜೊತೆ ಸೇರಿ ಪ್ರಾದೇಶಿಕ ಪಕ್ಷ ಕಟ್ಟಲಿ: ಜೆಡಿಎಸ್ ಶಾಸಕ

    ಬಿಎಸ್‍ವೈ ಸಿಎಂ ಸ್ಥಾನದಿಂದ ಕೆಳಗಿಳಿದರೆ ದೇವೇಗೌಡರ ಜೊತೆ ಸೇರಿ ಪ್ರಾದೇಶಿಕ ಪಕ್ಷ ಕಟ್ಟಲಿ: ಜೆಡಿಎಸ್ ಶಾಸಕ

    ಹಾಸನ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು ಎಂದು ಬೇಲೂರು ಕ್ಷೇತ್ರದ ಜೆಡಿಎಸ್ ಶಾಸಕ ಲಿಂಗೇಶ್ ಹೇಳಿದ್ದಾರೆ.

    ಬೇಲೂರಿನಲ್ಲಿ ಮಾತನಾಡಿದ ಅವರು, ಇತ್ತೀಚಿನ ರಾಜಕೀಯ ಬೆಳವಣಿಗೆ ಬೇಸರ ತರುವಂತಹದ್ದು. ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸುತ್ತಿವೆ. ಸಂಪೂರ್ಣ ಅಧಿಕಾರವಿದ್ದರೆ ಯಾರಾದರೂ ಸಾಧನೆ ಮಾಡಬಹುದು. ಕೇಂದ್ರ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಾಯಕತ್ವ ಬದಲಾವಣೆ ತಂದು ರಾಜಕೀಯ ದೊಂಬರಾಟ ಸೃಷ್ಟಿಸಿದ್ದಾರೆ. ಸೈದ್ಧಾಂತಿಕವಾಗಿ ನಾವು ಬಿಜೆಪಿಯನ್ನು ವಿರೋಧಿಸುತ್ತೇವೆ. ಆದರೆ ವೈಯುಕ್ತಿಕವಾಗಿ ಅಧಿಕಾರ ಮುಗಿಯುವವರೆಗೂ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು ಎಂದರು.

    ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ದೇವೇಗೌಡರು ಹಾಗೂ ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು. ಪಕ್ಷಗಳಿಂದ ಹೊರಬರುವ ಎಲ್ಲ ಶಾಸಕರನ್ನು ಪ್ರಾದೇಶಿಕ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಬಳಿಕ ಪಕ್ಷವನ್ನು ಅಧಿಕಾರಕ್ಕೆ ತಂದು ಉತ್ತಮ ಆಡಳಿತ ನೀಡಬೇಕು ಎಂದು ಶಾಸಕ ಲಿಂಗೇಶ್ ಹೇಳಿದ್ದಾರೆ.

  • ಬೇಲೂರು ಚೆನ್ನಕೇಶವ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಅವಕಾಶ

    ಬೇಲೂರು ಚೆನ್ನಕೇಶವ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಅವಕಾಶ

    ಹಾಸನ: ವಿಶ್ವ ವಿಖ್ಯಾತ ಹಾಗೂ ಶಿಲ್ಪ ಕಲೆಗೆ ಹೆಸರು ಮಾಡಿರುವ ದೇಶ ವಿದೇಶದ ಪ್ರವಾಸಿಗರನ್ನು ತನ್ನೆಡೆಗೆ ಸೆಳೆಯುತ್ತಿರುವ ಬೇಲೂರಿನ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ಬಾಗಿಲನ್ನು ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸೋಮವಾರ ತೆರೆದು ಭಕ್ತರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಯಿತು.

    ಈ ಸಂದರ್ಭ ಹಾಜರಿದ್ದ ಶಾಸಕ ಕೆ.ಎಸ್.ಲಿಂಗೇಶ್ ಮತ್ತು ದೇಗುಲದ ಕಾರ್ಯನಿರ್ವಾಹಣಾಧಿಕಾರಿ ವಿದ್ಯಲ್ಲತಾ ದ್ವಾರಬಾಗಿಲಿಗೆ ಪೂಜೆ ಸಲ್ಲಿಸಿದರು. ಆ ನಂತರ ಚೆನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಶಾಸಕರು ದೇವರ ದರ್ಶನ ಪಡೆದು, ಅರ್ಚಕ ಸಮೂಹವನ್ನು ಗೌರವಿಸಿದರು.

    ಬಳಿಕ ಮಾತನಾಡಿದ ಶಾಸಕ ಕೆ.ಎಸ್.ಲಿಂಗೇಶ್, ಕೊರೊನಾ ಒಂದು ಮತ್ತು ಎರಡನೇ ಅಲೆ ಕಾರಣದಿಂದ ದೇಗುಲದ ಬಾಗಿಲನ್ನು ಮುಚ್ಚಲಾಗಿತ್ತು. ಇದೀಗ ಕೊರೊನಾ ಪ್ರಕರಣ ಇಳಿಮುಖ ಕಂಡಿರುವುದರಿಂದ ರಾಜ್ಯ ಸರ್ಕಾರದ ಆದೇಶದಂತೆ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ. ದೇಗುಲಕ್ಕೆ ಆಗಮಿಸುವ ಭಕ್ತರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುದನ್ನು ಮರೆಯಬಾರದು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.

    ದೇಗುಲದ ಕಾರ್ಯನಿರ್ವಹಣಾಧಿಕಾರಿ ವಿದ್ಯುಲ್ಲತಾ, ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಆದರೆ ದಾಸೋಹದ ವ್ಯವಸ್ಥೆಗೆ ಸರ್ಕಾರದಿಂದ ಆದೇಶ ಬರಬೇಕಿದೆ. ದೇಗುಲಕ್ಕೆ ಬರುವ ಭಕ್ತರು ಕೊರೊನಾ ನಿಯಮ ಪಾಲಿಸಬೇಕೆಂದರು. ಆಗಮಿಕ ಅರ್ಚಕರಾದ ಕೃಷ್ಣ ಸ್ವಾಮಿ ಭಟ್ಟರ್, ಶ್ರೀನಿವಾಸ ಭಟ್ಟರ್ ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿ ದೇವರ ದರ್ಶನ ಪಡೆಯಬೇಕೆಂದು ಮನವಿ ಮಾಡಿದರು. ಇದನ್ನೂ ಓದಿ:ರಾಜಕೀಯಕ್ಕೆ ನಾನು ಬರಲ್ಲ – ಸಂಘವನ್ನು ವಿಸರ್ಜಿಸಿದ ರಜನಿಕಾಂತ್

  • ಬೇಲೂರು ಶಾಸಕ ಲಿಂಗೇಶ್‍ಗೆ ಕೊರೊನಾ ಪಾಸಿಟಿವ್

    ಬೇಲೂರು ಶಾಸಕ ಲಿಂಗೇಶ್‍ಗೆ ಕೊರೊನಾ ಪಾಸಿಟಿವ್

    ಹಾಸನ: ಜಿಲ್ಲೆಯ ಬೇಲೂರು ಕ್ಷೇತ್ರದ ಶಾಸಕ ಲಿಂಗೇಶ್‍ಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ರ‍್ಯಾಂಡಮ್ ಟೆಸ್ಟ್ ವೇಳೆ ಶಾಸಕ ಲಿಂಗೇಶ್‍ಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ವಿಡಿಯೋ ಮಾಡಿರುವ ಶಾಸಕ ಲಿಂಗೇಶ್, ನನಗೆ ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಕಂಡು ಬಂದಿದೆ. ನಿಮ್ಮನ್ನು ಭೇಟಿಯಾಗದೆ ಇರುವುದಕ್ಕೆ ಬೇಸರ ಆಗುತ್ತಿದೆ ಎಂದು ಹೇಳಿದ್ದಾರೆ.

    ತಮ್ಮ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ತಮಗೆ ಕೊರೊನಾ ಇರುವ ಬಗ್ಗೆ ವಿಡಿಯೋ ಮಾಡಿ ಹೇಳಿಕೊಂಡಿದ್ದರು. ಇದೀಗ ಹಾಸನ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಇದನ್ನೂ ಓದಿ:ಶಾಸಕ ಶಿವಲಿಂಗೇಗೌಡರಿಗೆ ಕೊರೊನಾ ಪಾಸಿಟಿವ್