Tag: ಶಾಹಿ ಈದ್ಗಾ ಸಮಿತಿ

  • ಡಿ.10ರ ವರೆಗೆ ಸಂಭಾಲ್‌ಗೆ ಹೊರಗಿನವರ ಪ್ರವೇಶ ನಿಷೇಧ; ಎಸ್‌ಪಿ ಮುಖಂಡರಿಗೆ ಗೃಹ ಬಂಧನ

    ಡಿ.10ರ ವರೆಗೆ ಸಂಭಾಲ್‌ಗೆ ಹೊರಗಿನವರ ಪ್ರವೇಶ ನಿಷೇಧ; ಎಸ್‌ಪಿ ಮುಖಂಡರಿಗೆ ಗೃಹ ಬಂಧನ

    ಲಕ್ನೋ: ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಭಾಲ್ (Sambhal) ಜಿಲ್ಲಾಡಳಿತ ಡಿಸೆಂಬರ್ 10ರ ವರೆಗೆ ಹೊರಗಿನವರ ಪ್ರವೇಶವನ್ನು ನಿಷೇಧಿಸಿ ಶನಿವಾರ ಆದೇಶ ಪ್ರಕಟಿಸಿದೆ. ‌

    ಡಿ.10ರ ವರೆಗೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಹೊರಗಿನವರು, ಯಾವುದೇ ಸಾಮಾಜಿಕ ಸಂಘಟನೆ ಅಥವಾ ಯಾವುದೇ ಸಾರ್ವಜನಿಕ ಪ್ರತಿನಿಧಿಗಳು ಜಿಲ್ಲೆಯ ಗಡಿ ಪ್ರವೇಶಿಸುವಂತಿಲ್ಲ ಎಂದು ಸಂಭಾಲ್ ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ಪ್ರಕಟಿಸಿದ್ದಾರೆ.

    ಶಾಹಿ ಜಾಮಾ ಮಸೀದಿ (Shahi Jama Masjid) ಸಂಕೀರ್ಣದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಹಿತಿ ಸಂಗ್ರಹಿಸಲು ಸಮಾಜವಾದಿ ಪಕ್ಷದ 15 ಸದಸ್ಯರ ನಿಯೋಗ ಸಂಭಾಲ್‌ಗೆ ಭೇಟಿ ನೀಡುಕ್ಕೂ ಮುನ್ನ ಈ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ. ಈ ಕುರಿತು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಮಾತನಾಡುತ್ತಾ, ಗೃಹ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರು ತಮಗೆ ಕರೆ ಮಾಡಿ ಸಂಭಾಲ್‌ಗೆ ಭೇಟಿ ನೀಡದಂತೆ ವಿನಂತಿಸಿದ್ದಾರೆ. ಡಿಎಂ ಸಂಭಾಲ್ ಕೂಡ ನನಗೆ ಕರೆ ಮಾಡಿ ಹೊರಗಿನವರ ಪ್ರವೇಶ ನಿಷೇಧವನ್ನು ಡಿಸೆಂಬರ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದರು. ಹಾಗಾಗಿ ನಾನು ಈಗ ಪಕ್ಷದ ಕಚೇರಿಗೆ ಭೇಟಿ ನೀಡಿ ನಮ್ಮ ಮುಂದಿನ ಕ್ರಮವನ್ನು ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಹೇಳಿದರು.

    ಸಂಭಾಲ್‌ಗೆ ನಾವು ಭೇಟಿ ನೀಡಿದರೆ, ಹಲವಾರು ತಪ್ಪುಗಳು ಬಹಿರಂಗವಾಗುತ್ತವೆ. ಆದ್ದರಿಂದ ಯುಪಿ ಸರ್ಕಾರ ಸಂಭಾಲ್‌ನಲ್ಲಿ ತನ್ನ ತಪ್ಪುಗಳನ್ನು ಮರೆಮಾಚಲು ನಿರ್ಧರಿಸಿದೆ ಎಂದು ತಿಳಿಸಿದರು.

    ಶುಕ್ರವಾರ ರಾತ್ರಿಯಿಂದಲೇ ಪಾಂಡೆ ನಿವಾಸದ ಹೊರಗೆ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಸೂಚನೆ ಮೇರೆಗೆ ಪಕ್ಷದ ನಿಯೋಗ ಶನಿವಾರ ಸಂಭಾಲ್‌ಗೆ ಹೋಗಲಿದೆ ಎಂದು ಎಸ್‌ಪಿ ರಾಜ್ಯಾಧ್ಯಕ್ಷ ಶ್ಯಾಮ್ ಲಾಲ್ ಪಾಲ್ ತಿಳಿಸಿದ್ದರು. ಎಸ್ಪಿ ನಿಯೋಗವು ಭೇಟಿ ನೀಡಿ, ಅಲ್ಲಿನ ಹಿಂಸಾಚಾರದ ಕುರಿತು ವರದಿ ಮಾಡಿ, ಪಕ್ಷದ ಮುಖ್ಯಸ್ಥರಿಗೆ ಸಲ್ಲಿಸಲಿದೆ ಎಂದು ಹೇಳಿದ್ದರು.

    ಒಂದು ದಿನದ ಹಿಂದೆಯಷ್ಟೇ ಉತ್ತರ ಪ್ರದೇಶದ ಸಂಬಾಲ್‌ನಲ್ಲಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ತೆರಳುವಂತೆ ಜಾಮಾ ಮಸೀದಿಯ (Jama Masjid) ಶಾಹಿ ಈದ್ಗಾ ಸಮಿತಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಅಲ್ಲದೇ ಈದ್ಗಾ ಸಮಿತಿಯು ಹೈಕೋರ್ಟ್‌ಗೆ ತೆರಳುವವರೆಗೆ ಮಸೀದಿ ಸರ್ವೆ (Sambhal Mosque Survey) ಪ್ರಕರಣವನ್ನು ಮುಂದುವರಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಶುಕ್ರವಾರ ಹೇಳಿತ್ತು.

  • ಹೈಕೋರ್ಟ್‌ಗೆ ತೆರಳುವಂತೆ ಶಾಹಿ ಈದ್ಗಾ ಸಮಿತಿಗೆ ಸೂಚನೆ; ʻಹೈʼಆದೇಶ ಬರೋವರೆಗೆ ಮಸೀದಿ ಸಮೀಕ್ಷೆಗೆ ಸುಪ್ರೀಂ ತಡೆ

    ಹೈಕೋರ್ಟ್‌ಗೆ ತೆರಳುವಂತೆ ಶಾಹಿ ಈದ್ಗಾ ಸಮಿತಿಗೆ ಸೂಚನೆ; ʻಹೈʼಆದೇಶ ಬರೋವರೆಗೆ ಮಸೀದಿ ಸಮೀಕ್ಷೆಗೆ ಸುಪ್ರೀಂ ತಡೆ

    ನವದೆಹಲಿ: ಉತ್ತರ ಪ್ರದೇಶದ ಸಂಬಾಲ್‌ನಲ್ಲಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ತೆರಳುವಂತೆ ಜಾಮಾ ಮಸೀದಿಯ (Jama Masjid) ಶಾಹಿ ಈದ್ಗಾ ಸಮಿತಿಗೆ ಸುಪ್ರೀಂ ಕೋರ್ಟ್ ಇಂದು ಸೂಚಿಸಿದೆ. ಅಲ್ಲದೇ ಈದ್ಗಾ ಸಮಿತಿಯು ಹೈಕೋರ್ಟ್‌ಗೆ ತೆರಳುವವರೆಗೆ ಮಸೀದಿ ಸರ್ವೆ (Sambhal Mosque Survey) ಪ್ರಕರಣವನ್ನು ಮುಂದುವರಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಶುಕ್ರವಾರ ಹೇಳಿದೆ.

    ಮಸೀದಿಯ ಸರ್ವೆ ಕಾರ್ಯಕ್ಕೆ ಟ್ರಯಲ್ ಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಂಭಾಲ್ ಶಾಹಿ ಜಾಮಾ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ (Supreme Court) ಈ ಆದೇಶ ನೀಡಿತು. ಇದನ್ನೂ ಓದಿ: ದೆಹಲಿಯಲ್ಲಿ ಮೋದಿ ಭೇಟಿಯಾದ ಸಿಎಂ – ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಬಿಡುಗಡೆಗೆ ಮನವಿ

    ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಮಸೀದಿಯ ಸಮೀಕ್ಷೆಯನ್ನು ನಡೆಸಿದ ಆಯುಕ್ತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿಡಬೇಕು. ಮುಂದಿನ ಆದೇಶ ಬರುವವರೆಗೆ ವರದಿಯನ್ನು ತೆರೆಯಬಾರದು ಎಂದು ನ್ಯಾಯಪೀಠ ಹೇಳಿತು.

    ಸದ್ಯಕ್ಕೆ ಸಂಭಾಲ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು. ಅದಕ್ಕಾಗಿ ಕ್ರಮವನ್ನು ಕಾಯ್ದರಿಸುತ್ತೇವೆ. ಸಮೀಕ್ಷೆ ಆಗಬಾರದು ಎಂದಲ್ಲ. ಆದ್ರೆ ಸದ್ಯಕ್ಕೆ ಸಂಪೂರ್ಣವಾಗಿ ತಟಸ್ಥರಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಹಾಗಾಗಿ ಜನವರಿ 8ರ ವರೆಗೆ ಯಾವುದೇ ಆದೇಶ ಪ್ರಕಟಿಸದಂತೆ ಎಂದು ಕೋರ್ಟ್‌ ತಿಳಿಸಿದೆ. ಇದನ್ನೂ ಓದಿ: 19ರ ಯುವತಿ ಮೇಲೆ ಅತ್ಯಾಚಾರ, ಕೊಲೆ – ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಿದ್ದ ಸರಣಿ ಹಂತಕ ಅರೆಸ್ಟ್‌

    ಇದಕ್ಕೂ ಮುನ್ನ ವಿಚಾರಣಾ ನ್ಯಾಯಾಲಯದ ಆದೇಶವು ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂಬ ಅರ್ಜಿದಾರರ ಹಕ್ಕುಗಳ ಆಧಾರದ ಮೇಲೆ ಮಸೀದಿಯ ಸಮೀಕ್ಷೆಯನ್ನು ಕಡ್ಡಾಯಗೊಳಿಸಿತ್ತು. ಮುಂದಿನ ವಿಚಾರಣೆಯನ್ನು ಮುಂದೂಡಿತ್ತು. ಇದನ್ನೂ ಓದಿ: ಅಂಬುಲೆನ್ಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಅರೆಸ್ಟ್