Tag: ಶಿಂಜೋ ಅಬೆ

  • ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

    ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

    ಟೊಕಿಯೊ: ಜಪಾನ್‌ನ (Japan) ಮಾಜಿ ಪ್ರಧಾನಿ ಶಿಂಜೋ ಅಬೆ (Shinzo Abe) ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾಗವಹಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

    ನೇರಳೆ ಬಣ್ಣದ ಬಟ್ಟೆಯಿಂದ ಸುತ್ತಿಡಲಾಗಿದ್ದ ಮರದ ಪೆಟ್ಟಿಗೆಯಲ್ಲಿ ಅಬೆ ಅವರ ಚಿತಾಭಸ್ಮವನ್ನು ಇಡಲಾಗಿತ್ತು. ಇದನ್ನು ಇಂದು ಟೋಕಿಯೊದ ಬುಡೋಕನ್ ಸಭಾಂಗಣಕ್ಕೆ ಪತ್ನಿ ಅಕಿ ಅಬೆ ತಂದರು. ಶಿಂಜೋ ಅಬೆ ಅವರ ಅಂತ್ಯಕ್ರಿಯೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಆಸ್ಟ್ರೆಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸೇರಿದಂತೆ ಹಲವಾರು ಜಾಗತಿಕ ನಾಯಕರು ಸೇರಿದ್ದರು. ಈ ಸಂದರ್ಭದಲ್ಲಿ ಅವರೆಲ್ಲರೂ ಶಿಂಜೋ ಅಬೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

    ಜಪಾನ್ ಪ್ರಧಾನಿಯಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಶಿಂಜೋ ಅಬೆ ಅವರನ್ನು ಜುಲೈ 8ರಂದು ಪಶ್ಚಿಮ ಜಪಾನಿನ ನಾರಾ ನಗರದ ಸ್ಟ್ರೀಟ್‌ವೊಂದರಲ್ಲಿ ಭಾಷಣ ಮಾಡುವಾಗ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಜುಲೈನಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿತ್ತು. ಇದನ್ನೂ ಓದಿ: ಕಟೀಲ್ ಒಬ್ಬ ವಿದೂಷಕ, ಪಾಪ ಇನ್ನೂ ಮೆಚ್ಯೂರಿಟಿ ಇಲ್ಲ: ಸಿದ್ದರಾಮಯ್ಯ

    ಪ್ರಧಾನಿ ಮೋದಿ ಅವರು ನಿನ್ನೆ ಟ್ವೀಟ್ ಮಾಡಿ, ಆತ್ಮೀಯ ಸ್ನೇಹಿತ ಹಾಗೂ ಭಾರತ-ಜಪಾನ್ ಸ್ನೇಹದ ಶ್ರೇಷ್ಠ ಚಾಂಪಿಯನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ನಾನು ಇಂದು ರಾತ್ರಿ ಟೋಕಿಯೊಗೆ ಪ್ರಯಾಣಿಸುತ್ತಿದ್ದೇನೆ. ಎಲ್ಲಾ ಭಾರತೀಯರ ಪರವಾಗಿ ಸಂತಾಪ ಸೂಚಿಸಲು ಜಪಾನ್ ಪ್ರಧಾನಿ ಕಿಶಿದಾ ಅವರನ್ನು ಭೇಟಿ ಮಾಡಲಿದ್ದೇನೆ ಎಂದಿದ್ದರು.  ಇದನ್ನೂ ಓದಿ: ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ: ಖಾದರ್

    Live Tv
    [brid partner=56869869 player=32851 video=960834 autoplay=true]

  • ಶಿಂಜೋ ಅಬೆ ಹತ್ಯೆಗೆ ಕಾರಣ ತಿಳಿಸಿದ ಯಮಗಾಮಿ – ತಾನೇ ತಯಾರಿಸಿದ್ದ ಗನ್ ಬಳಕೆ

    ಶಿಂಜೋ ಅಬೆ ಹತ್ಯೆಗೆ ಕಾರಣ ತಿಳಿಸಿದ ಯಮಗಾಮಿ – ತಾನೇ ತಯಾರಿಸಿದ್ದ ಗನ್ ಬಳಕೆ

    ಟೋಕಿಯೋ: ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮೃತಪಟ್ಟ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ (62) ಹಂತಕ ಟೆಟ್ಸುಯಾ ಯಮಗಾಮಿ ಪೊಲೀಸರ ಮುಂದೆ ಹತ್ಯೆಗೆ ಕಾರಣ ತಿಳಿಸಿದ್ದಾನೆ.

    ನಿನ್ನೆ ಜಪಾನ್ ಸಂಸತ್‍ನ ಮೇಲ್ಮನೆಗೆ ಚುನಾವಣೆ ನಡೆಯುತ್ತಿದ್ದ ಪ್ರಚಾರದ ವೇಳೆ ಶಿಂಜೋ ಅಬೆ ಹಿಂದೆ 10 ಅಡಿ ದೂರದಲ್ಲಿ ನಿಂತಿದ್ದ ಟೆಟ್ಸುಯಾ ಯಮಗಾಮಿ 2 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಹಂತಕನನ್ನು ಕೂಡಲೇ ಪೊಲೀಸರು ಬಂಧಿಸಿದ್ದರು. ಬಳಿಕ ತನಿಖೆಯಲ್ಲಿ ಆರೋಪಿ ನಾರಾ ಸಿಟಿಯ ನಿವಾಸಿಯಾಗಿದ್ದು ನೌಕಾಸೇನೆಯ ಮಾಜಿ ಅಧಿಕಾರಿಯಾಗಿದ್ದ. ಜಪಾನೀಸ್ ನೌಕಾಪಡೆಯಾಗಿರುವ ಜಪಾನೀಸ್ ಮಾರಿಟೈಮ್ ಸೆಲ್ಫ್ ಡಿಫೆನ್ಸ್ ಫೋರ್ಸ್ (JMSDF)ನಲ್ಲಿ 2005ರ ವರೆಗೆ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಯಮಗಾಮಿ ಕೆಲಸವಿಲ್ಲದೆ ಜೀವನ ಸಾಗಿಸುತ್ತಿದ್ದ. ಘಟನೆಗೆ ಮನೆಯಲ್ಲಿ ತಯಾರಿಸಿದ ದೇಸಿ ಗನ್ ಬಳಕೆ ಮಾಡಿ ಎರಡು ಸುತ್ತು ಗುಂಡು ಹಾರಿಸಿ ಶಿಂಜೋ ಅಬೆಯನ್ನು ಹತ್ಯೆ ಮಾಡಿದ್ದ. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

     

    ಹತ್ಯೆಯ ಬಳಿಕ ಯಮಗಾಮಿಯನ್ನು ನಾರಾದ ನಿಶಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದಾಗ ಹತ್ಯೆಗೆ ಕಾರಣ ತಿಳಿಸಿದ್ದಾನೆ. ಯಮಗಾಮಿ ಸೇನೆಯಲ್ಲಿ ಸೇವೆಸಲ್ಲಿಸಿದ ಬಳಿಕ ನಿರುದ್ಯೋಗಿಯಾಗಿದ್ದ. ಹಾಗಾಗಿ ನಿರುದ್ಯೋಗದಿಂದ ಬೇಸತ್ತು ಮತ್ತು ಶಿಂಜೋ ಅಬೆಯ ರಾಜಕೀಯ ನಡೆಯಿಂದ ಅಸಮಾಧಾನಗೊಂಡು ಹತ್ಯೆಗೆ ಮುಂದಾಗಿದ್ದ. ಹತ್ಯೆಗಾಗಿ ತಾನೇ ತಯಾರಿಸಿದ್ದ ಗನ್ ಬಳಕೆ ಮಾಡಿದ್ದ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ. ಇದನ್ನೂ ಓದಿ: ಅಮರನಾಥ ಮೇಘಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ, 40 ಮಂದಿ ನಾಪತ್ತೆ – ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

    https://twitter.com/Gretche55113699/status/1545314377812922369

    ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರ ಹೊಂದುವಂತಿಲ್ಲ:
    ಜಪಾನ್‍ನಲ್ಲಿ ಶಸ್ತ್ರಾಸ್ತ್ರ ಕಾನೂನುಗಳು ಅತ್ಯಂತ ಕಠಿಣವಾಗಿದ್ದು, ಯಾವುದೇ ವ್ಯಕ್ತಿ ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರ ಹೊಂದುವಂತಿಲ್ಲ. ಪರವಾನಗಿ ಕೂಡ ಜಪಾನ್‍ನಲ್ಲಿ ಅಷ್ಟು ಸುಲಭವಾಗಿ ಸಿಗುವುದಿಲ್ಲ. ಹಾಗಾಗಿ ಯಮಗಾಮಿ ತಾನೇ ಗನ್ ತಯಾರಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಚ್ಚರಿ ಎಂದರೆ ಅಬೆ ಹತ್ಯೆಯ ಬಳಿಕ ಯಮಗಾಮಿ ಓಡಿ ಹೋಗಲೂ ಕೂಡ ಯತ್ನಿಸಿಲ್ಲ. ಕೂಡಲೇ ಆತನನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದರು. ಜಪಾನ್ ಇತಿಹಾಸದಲ್ಲೇ ಸುಮಾರು ನೂರು ವರ್ಷಗಳಲ್ಲಿ ಜಪಾನ್‍ನ ಹಾಲಿ ಅಥವಾ ಮಾಜಿ ಪ್ರಧಾನಿಯೊಬ್ಬರನ್ನು ಹತ್ಯೆ ಮಾಡಿರುವುದು ಇದೇ ಮೊದಲು ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ ಜೊತೆ ಉತ್ತಮ ಸಂಬಂಧ – ಅಬೆಗೆ ಸಿಕ್ಕಿತ್ತು ಪದ್ಮ ವಿಭೂಷಣ ಗೌರವ

    ಭಾರತದ ಜೊತೆ ಉತ್ತಮ ಸಂಬಂಧ – ಅಬೆಗೆ ಸಿಕ್ಕಿತ್ತು ಪದ್ಮ ವಿಭೂಷಣ ಗೌರವ

    ನವದೆಹಲಿ: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಭಾರತದ ಜೊತೆ ಉತ್ತಮ ಸಂಬಂಧ ಹೊದಿದ್ದರು. ಕಳೆದ ವರ್ಷ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ಭಾರತ ಸರ್ಕಾರ ಘೋಷಿಸಿತ್ತು.

    ಲಿಬರಲ್ ಡೆಮಾಕ್ರಾಟಿಕ್ ಪಕ್ಷದ ಅಧ್ಯಕ್ಷರಾಗಿದ್ದ ಅಬೆ ನಾಲ್ಕು ಬಾರಿ ಸುಧೀರ್ಘ ಕಾಲ ಪ್ರಧಾನಿಯಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡಿದ್ದರು. ಆರೋಗ್ಯ ಚೇತರಿಕೆಯಾದ ಬೆನ್ನಲ್ಲೇ ಮತ್ತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದರು.

    ಭಾರತದ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಅವರು ಜಪಾನ್‌ನಿಂದ ಭಾರತಕ್ಕೆ ಅತಿ ಹೆಚ್ಚು ಬಾರಿ ಭೇಟಿ ನೀಡಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.

    2006-07 ಅವಧಿಯಲ್ಲಿ ಮೊದಲ ಬಾರಿ ಭಾರತಕ್ಕೆ ಬಂದಿದ್ದ ಅವರು ಸಂಸತ್ ಉದ್ದೇಶಿಸಿ ಮಾತನಾಡಿದ್ದರು. ಎರಡನೇ ಬಾರಿ ಪ್ರಧಾನಿಯಾದಾಗ ಮೂರು ಬಾರಿ ಭೇಟಿ ನೀಡಿದ್ದರು. 2014 ಜನವರಿ, ಡಿಸೆಂಬರ್ 2015, ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು.

    2014 ರಲ್ಲಿ ಭಾರತದ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದರು. ಹೀಗೆ ಅತಿಥಿಯಾದ ಜಪಾನ್ ಮೊದಲ ಪ್ರಧಾನಿ ಇವರಾಗಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಅತ್ಯುತ್ತಮ ಒಡನಾಟ ಹೊಂದಿದ್ದರು. 2001 ರಿಂದ ಭಾರತ ಜಪಾನ್ ಗೆಳೆತನ ಶುರುವಾಗಿದ್ದು 2012 ರಿಂದ ಈ ಸಂಬಂಧ ಗಟ್ಟಿ ಮಾಡುವಲ್ಲಿ ಅಬೆ ಪಾತ್ರ ದೊಡ್ಡದು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಗುಜರಾತ್ ಸಿಎಂ ಆದ ಕಾಲದಿಂದ ಅಬೆ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನಂಟು ಹೊಂದಿದ್ದರು. ಮೋದಿ ಪ್ರಧಾನಿಯಾದ ಬಳಿಕ ಹಲವು ಒಪ್ಪಂದಗಳು ಭಾರತ ಜಪಾನ್ ನಡುವೆ ನಡೆದಿದ್ದವು. ಬುಲೆಟ್‌ ರೈಲು ನಿರ್ಮಾಣ ಯೋಜನೆಗೆ ಮೋದಿ ಮತ್ತು ಅಬೆ ಸೇರಿ ಅಹಮದಾಬಾದ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು. ಅಷ್ಟೇ ಅಲ್ಲದೇ ಅಹಮದಾಬಾದ್‌ನಲ್ಲಿ ನಾಯಕರು ರೋಡ್‌ ಶೋ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಅಬೆಯೊಂದಿಗಿನ ಹಳೆ ಕ್ಷಣ ನೆನೆದ ಮೋದಿ – ಜುಲೈ 9ರಂದು ರಾಷ್ಟ್ರೀಯ ಶೋಕಾಚರಣೆ ಘೋಷಣೆ

    ಅಬೆಯೊಂದಿಗಿನ ಹಳೆ ಕ್ಷಣ ನೆನೆದ ಮೋದಿ – ಜುಲೈ 9ರಂದು ರಾಷ್ಟ್ರೀಯ ಶೋಕಾಚರಣೆ ಘೋಷಣೆ

    ನವದೆಹಲಿ: ದುಷ್ಕರ್ಮಿಯೊಬ್ಬನ ಗುಂಡೇಟಿಗೆ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ(62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಮ್ಮ ಆತ್ಮೀಯನ ಅಗಲಿಕೆಯಿಂದ ಕಂಬನಿ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಆಳವಾದ ಗೌರವದ ಸಂಕೇತವಾಗಿ ಜುಲೈ 9ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆ ನಡೆಸಲು ಸೂಚಿಸಿದ್ದಾರೆ.

    ನರೇಂದ್ರ ಮೋದಿ ತಮ್ಮ ಗೆಳೆಯ ಶಿಂಜೋ ಅಬೆಯವರ ಒಡನಾಟದ ನೆನಪನ್ನು ಭಾವುಕರಾಗಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮೋದಿ, ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ಆಘಾತ ಮತ್ತು ದುಃಖಿತನಾಗಿದ್ದೇನೆ. ಅವರು ಅತ್ಯುನ್ನತ ಜಾಗತಿಕ ರಾಜಕಾರಣಿ, ಅತ್ಯುತ್ತಮ ನಾಯಕ ಹಾಗೂ ಗಮನಾರ್ಹ ಆಡಳಿತಗಾರರಾಗಿದ್ದರು. ಜಪಾನ್ ಹಾಗೂ ಜಗತ್ತನ್ನು ಉತ್ತಮವಾಗಿಸಲು ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಅಬೆ ಅವರೊಂದಿಗಿನ ನನ್ನ ಒಡನಾಟ ಹಲವು ವರ್ಷಗಳ ಹಿಂದಿನದು. ನಾನು ಗುಜರಾತ್ ಸಿಎಂ ಆಗಿದ್ದಾಗ ಅವರನ್ನು ಪರಿಚಯ ಮಾಡಿಕೊಂಡಿದ್ದೆ. ನಾನು ಪ್ರಧಾನಿಯಾದ ಬಳಿಕವೂ ನಮ್ಮ ಸ್ನೇಹ ಮುಂದುವರಿಯಿತು. ಆರ್ಥಿಕತೆ ಮತ್ತು ಜಾಗತಿಕ ವ್ಯವಹಾರಗಳ ಬಗ್ಗೆ ಅವರ ತೀಕ್ಷ್ಣವಾದ ಒಳನೋಟ ಯಾವಾಗಲೂ ನನ್ನ ಮೇಲೆ ಆಳವಾದ ಪ್ರಭಾವ ಬೀರಿತ್ತು ಎಂದರು.

    ನನ್ನ ಇತ್ತೀಚಿನ ಜಪಾನ್ ಪ್ರವಾಸದ ಸಂದರ್ಭದಲ್ಲಿ ಅಬೆ ಅವರನ್ನು ಮತ್ತೊಮ್ಮೆ ಭೇಟಿ ಮಾಡಲು ಹಾಗೂ ಅನೇಕ ವಿಷಯಗಳನ್ನು ಚರ್ಚಿಸಲು ನನಗೆ ಅವಕಾಶ ಸಿಕ್ಕಿತು. ಅವರು ಎಂದಿನಂತೆ ಬುದ್ಧಿವಂತ ಮತ್ತು ಒಳನೋಟವುಳ್ಳವರಾಗಿದ್ದರು. ಆದರೆ ಅದು ನಮ್ಮ ಕೊನೆಯ ಸಭೆ ಎಂದು ನನಗೆ ತಿಳಿದಿರಲಿಲ್ಲ ಎಂದು ಆಘಾತ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಅಬೆ ಅವರು ಭಾರತ-ಜಪಾನ್ ಸಂಬಂಧಗಳನ್ನು ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಮಟ್ಟಕ್ಕೆ ಏರಿಸಲು ಅಪಾರ ಕೊಡುಗೆ ನೀಡಿದ್ದಾರೆ. ಇಂದು, ಇಡೀ ಭಾರತ ಜಪಾನ್‌ನೊಂದಿಗೆ ದುಃಖಿಸುತ್ತಿದೆ. ಈ ಕಷ್ಟದ ಕ್ಷಣದಲ್ಲಿ ನಾವು ಜಪಾನಿನ ಸಹೋದರ-ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

    ಮಾಜಿ ಪ್ರಧಾನಿ ಅಬೆ ಶಿಂಜೋ ಅವರಿಗೆ ನಮ್ಮ ಆಳವಾದ ಗೌರವದ ಸಂಕೇತವಾಗಿ, ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಟೋಕಿಯೋ: ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆ (62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಪಾನ್‌ ಸರ್ಕಾರ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದೆ.

    ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಹಿಂದಿನಿಂದ ವ್ಯಕ್ತಿಯೊಬ್ಬ ಶೂಟ್‌ ಮಾಡಿದ್ದ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಜಪಾನ್‌ನ ದೀರ್ಘ ಕಾಲದ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ಜಪಾನ್‌ ಕಾಲಮಾನ ಬೆಳಗ್ಗೆ 11 ಗಂಟೆಗೆ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗ 2 ಬಾರಿ ಶೂಟ್‌ ಮಾಡಿ ಮಾಡಲಾಗಿತ್ತು.

    ಜಪಾನ್ ಸಂಸತ್​ನ ಮೇಲ್ಮನೆಗೆ ಚುನಾವಣೆ ನಡೆಯುತ್ತಿದ್ದ ಪ್ರಚಾರದ ವೇಳೆ ಈ ಘಟನೆ ನಡೆದಿದೆ. ಅವರ ಹಿಂದೆ ಸ್ವಲ್ಪ ದೂರದಲ್ಲೇ  ನಿಂತಿದ್ದ 41 ವರ್ಷದ ಟೆಟ್ಸುಯಾ ಯಮಗಾಮಿ ಎಂಬಾತ ಶಿಂಜೋ ಅಬೆ ಹತ್ಯೆ ಮಾಡಿದ್ದಾನೆ. ಹಂತಕನನ್ನು ಕೂಡಲೇ ಪೊಲೀಸರು ಬಂಧಿಸಿದ್ದಾರೆ. ತನಿಖೆಯಲ್ಲಿ ಆರೋಪಿ ನಾರಾ ಸಿಟಿಯ ನಿವಾಸಿಯಾಗಿದ್ದು ನೌಕಾಸೇನೆಯ ಮಾಜಿ ಅಧಿಕಾರಿ ಎಂದು ಗುರುತಿಸಲಾಗಿದೆ. ಘಟನೆಗೆ ಮನೆಯಲ್ಲಿ ತಯಾರಿಸಿದ ದೇಸಿ ಗನ್ ಬಳಿಕೆ ಮಾಡಿ ಎರಡು ಸುತ್ತು ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಘಟನೆಗೆ ನಿಖರ ಕಾರಣ ಇನ್ನು ವರದಿಯಾಗಿಲ್ಲ.

    ಆಸ್ಪತ್ರೆ ದಾಖಲಿಸುವ ವೇಳೆಗೆ ಅವರ ಉಸಿರಾಟ ನಿಂತು ಹೋಗಿತ್ತು. ಅದಾಗ್ಯೂ ಅವರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ವೈದ್ಯರು ಮಾಡಿದರು. ಆದರೆ ಯಾವ ಚಿಕಿತ್ಸೆಗೆ ಸ್ಪಂಧಿಸದ ಹಿನ್ನಲೆ ಜಪಾನ ಕಾಲ ಮಾನದ ಪ್ರಕಾರ ಸಂಜೆ ಐದು ಗಂಟೆಗೆ ಅವರ ಸಾವಿನ ಸುದ್ದಿಯನ್ನು ಅಧಿಕೃತಗೊಳಿಸಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

    ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

    ನವದೆಹಲಿ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾಷಣ ಮಾಡುತ್ತಿದ್ದ ಸಂದರ್ಭದಲ್ಲೇ ದುಷ್ಕರ್ಮಿಯೊಬ್ಬ ಎದೆಗೆ ಗುಂಡು ಹಾರಿಸಿದ್ದು, ಅಬೆಗೆ ತೀವ್ರ ರಕ್ತಸ್ರಾವವಾಗಿದೆ.

    ಈ ಆಘಾತಕಾರಿ ಘಟನೆಗೆ ವಿಶ್ವದ ನಾಯಕರು ಪ್ರತಿಕ್ರಿಯಿಸಿದ್ದಾರೆ. ಜಪಾನ್ ಮಾಜಿ ಪ್ರಧಾನಿಯ ಉಳಿವಿಗಾಗಿ ಪ್ರಾರ್ಥನೆ ನಡೆಸಿದ್ದಾರೆ.

    ಘಟನೆ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನನ್ನ ಆತ್ಮೀಯ ಸ್ನೇಹಿತ ಅಬೆ ಶಿಂಜೋ ಮೇಲಿನ ದಾಳಿ ತೀವ್ರ ಆಘಾತ ತಂದಿದೆ. ನಮ್ಮ ಆಲೋಚನೆ ಹಾಗೂ ಪ್ರಾರ್ಥನೆಗಳು ಅವರೊಂದಿಗೆ, ಅವರ ಕುಟುಂಬ ಹಾಗೂ ಜಪಾನ್ ಜನರೊಂದಿಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಅಮೆರಿಕದ ರಾಯಭಾರಿ ರಹಮ್ ಇಮ್ಯಾನುಯೆಲ್, ಅಬೆ-ಸಾನ್ ಜಪಾನ್‌ನ ಅತ್ಯುತ್ತಮ ನಾಯಕ ಹಾಗೂ ಅಮೆರಿಕದ ಅಚಲ ಮಿತ್ರರಾಗಿದ್ದಾರೆ. ಅಮೆರಿಕ ಸರ್ಕಾರ ಹಾಗೂ ಅಮೆರಿಕದ ಜನರು ಅಬೆ-ಸಾನ್ ಅವರ ಕುಟುಂಬ ಹಾಗೂ ಜಪಾನ್‌ನ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡು ಹಾರಿಸಲಾಗಿದೆ ಎಂದು ಜಪಾನ್‌ನಿಂದ ಬಂದ ಆಘಾತಕಾರಿ ಸುದ್ದಿ – ಈ ಸಮಯದಲ್ಲಿ ನಮ್ಮ ಆಲೋಚನೆಗಳು ಅವರ ಕುಟುಂಬ ಹಾಗೂ ಜಪಾನ್‌ನ ಜನರೊಂದಿಗೆ ಇದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ತೈವಾನ್ ಅಧ್ಯಕ್ಷ ತ್ಸೈ ಇಂಗ್-ವೆನ್, ಎಲ್ಲರಿಗೂ ನನ್ನಂತೆಯೇ ಆಘಾತ ಹಾಗೂ ದುಃಖ ತಂದಿದೆ ಎಂದು ನಾನು ಭಾವಿಸುತ್ತೇನೆ. ತೈವಾನ್ ಹಾಗೂ ಜಪಾನ್ ಎರಡೂ ಕಾನೂನು ಆಳ್ವಿಕೆಯನ್ನು ಹೊಂದಿರುವ ಪ್ರಜಾಪ್ರಭುತ್ವ ರಾಷ್ಟ್ರಗಳು. ನನ್ನ ಸರ್ಕಾರದ ಪರವಾಗಿ, ನಾನು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಟೋಕಿಯೋ: ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ದುಷ್ಕರ್ಮಿಗಳಿಂದ ಗುಂಡೇಟು ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಜಪಾನ್ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಗುಂಡೇಟು ಬಿದ್ದಿದೆ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಜಪಾನ್‌ ಕಾಲಮಾನ ಬೆಳಗ್ಗೆ 11 ಗಂಟೆಗೆ ಘಟನೆ ನಡೆದಿದೆ. ‌ಇದನ್ನೂ ಓದಿ: ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಈ ಹಿಂದೆ ಭಾರತಕ್ಕೂ ಕೂಡ ಶಿಂಜೋ ಅಬೆ ಭೇಟಿ ನೀಡಿದ್ದರು. ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅತ್ಯಾಪ್ತರಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]