ದಾವಣಗೆರೆ: ಜಾತಿ ಸಮೀಕ್ಷೆಗೆ ತೆರಳಿದ್ದ ವೇಳೆ ಶಿಕ್ಷಕನಿಗೆ ಹೃದಯಾಘಾತ ಆಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ತಾಲ್ಲೂಕಿನ ಹಳೆಕಡ್ಲೆಬಾಳು ಶಾಲೆಯ ಶಿಕ್ಷಕ ಪ್ರಕಾಶ್ ನಾಯಕ್ (44) ಅವರು ಸಮೀಕ್ಷೆ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದೆ.
ತಕ್ಷಣ ಸ್ಥಳೀಯರ ಸಹಾಯದಿಂದ ಅವರನ್ನ ನಗರದ ಹೈಟೆಕ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಬಳಿಕ ಸ್ಟೆಂಟ್ ಹಾಕಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಸ್ಥಳೀಯರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಶಿಕ್ಷಕ ಪ್ರಕಾಶ್ ನಾಯಕ್ ಪಾರಾಗಿದ್ದಾರೆ. ಘಟನೆ ತಿಳಿದ ದಾವಣಗೆರೆ ಡಿಸಿ ಗಂಗಾಧರ ಸ್ವಾಮಿ ದೂರವಾಣಿ ಕರೆ ಮಾಡಿ ಪ್ರಕಾಶ್ ನಾಯಕ್‌ಗೆ ಧೈರ್ಯ ತುಂಬಿದ್ದಾರೆ.
ಮೈಸೂರು: ಜಿಲ್ಲೆಯ ವಿಜ್ಞಾನ ಶಿಕ್ಷಕ ಕೆ.ಎಸ್.ಮಧುಸೂದನ್ (Madhusudan) ಅವರಿಗೆ ಈ ಬಾರಿಯ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ (National Teachers’ Award) ಬಂದಿದೆ.
ಮೈಸೂರಿನ ಹಿನಕಲ್ ಸರ್ಕಾರಿ ಶಾಲೆಯಲ್ಲಿ ಮಧುಸೂದನ್ ವಿಜ್ಞಾನ ಶಿಕ್ಷಕರಾಗಿದ್ದಾರೆ. ವರ್ಚುಯಲ್ ರಿಯಾಲಿಟಿ, ಕೃತಕ ಬುದ್ಧಿಮತ್ತೆ, ರೋಬೊಟಿಕ್ಸ್‌ನಂತಹ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದು ಸರ್ಕಾರಿ ಶಾಲೆ ಬಲವರ್ಧನೆಗೆ ಪಣತೊಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ.
ಕೆ.ಎಸ್.ಮಧುಸೂದನ್ ನವೋದಯ ಶಾಲೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ ನವೋದಯ ಶಾಲೆಯಲ್ಲಿ ಸಿಗುವ ರಾಷ್ಟ್ರಮಟ್ಟದ ಶಿಕ್ಷಣ ರಾಜ್ಯಮಟ್ಟದ ಶಾಲೆಗಳಿಗೂ ಸಿಗಬೇಕೆಂದು ಪಣ ತೊಟ್ಟಿದ್ದಾರೆ. ಈ ಬಾರಿ ದೇಶದ 45 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಬಂದಿದ್ದು ಇದರಲ್ಲಿ ರಾಜ್ಯದಿಂದ ಆಯ್ಕೆಯಾದ ಏಕೈಕ ಶಿಕ್ಷಕ ಮಧುಸೂದನ್ ಆಗಿರುವುದು ವಿಶೇಷ. ಇದನ್ನೂಓದಿ: 99,900 ರೂಪಾಯಿಗೆ TVS ಆರ್ಬಿಟರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
ಸರ್ಕಾರಿ ಶಾಲೆಯಲ್ಲಿ ಅತ್ಯಾಧುನಿಕ ಲ್ಯಾಬ್ ರೂಪಿಸಿದ್ದು ಹಿನಕಲ್ ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5 ರಿಂದ 7ನೇ ತರಗತಿವರೆಗಿನ ಮಕ್ಕಳಿಗಾಗಿ ಒಂದು ವಿಜ್ಞಾನ ಲ್ಯಾಬ್ ನಿರ್ಮಾಣ ಮಾಡಿದ್ದಾರೆ.
ಬೇಸಿಕ್ ಎಲೆಕ್ಟ್ರಾನಿಕ್ಸ್ ಕಲಿಕೆ, ಲರ್ನಿಂಗ್ ಮ್ಯಾನೇಜ್‌ಮೆಂಟ್, ಇಂಗ್ಲಿಷ್ ಶಿಕ್ಷಣ, ಕೃತಕ ಬುದಿಮತ್ತೆ, ರೋಬೊಟಿಕ್ಸ್ ತಂತ್ರಜ್ಞಾನದ ಶಿಕ್ಷಣ, 1 ಮತ್ತು 2ನೇ ತರಗತಿ ಮಕ್ಕಳಿಗೆ ಪ್ರೊಜೆಕ್ಟರ್ ಮೂಲಕ ಸ್ಮಾರ್ಟ್ ಕ್ಲಾಸ್. ಕ್ಯೂಆರ್ ಕೋಡ್ ಮತ್ತು ಸ್ಕ್ಯಾನರ್ ಬಳಸಿ ಮಕ್ಕಳ ದಾಖಲಾತಿ ನಮೂದು, ಮಕ್ಕಳ ಹಾಜರಾತಿ ಮಾಹಿತಿಯು ಪಾಲಕರ ಮೊಬೈಲ್‌ಗೆ ರವಾನೆ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ಬಗ್ಗೆ ವೆಬ್‌ಸೈಟ್ ಮುಖಾಂತರ ಪಡೆದುಕೊಳ್ಳುವ ರೀತಿಯಲ್ಲಿ ಮಧುಸೂದನ್ ಸಾಫ್ಟ್‌ವೇರ್ ಅಭಿವೃದ್ಧಿ ಮಾಡಿದ್ದಾರೆ.
ತುಮಕೂರು: ಬೀದಿ ದೀಪ (Street Light) ಆರಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕ (Teacher) ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ಗುಬ್ಬಿ ತಾಲೂಕಿನ ಬ್ಯಾಡಗೆರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಿಟ್ಟೂರು ಗ್ರಾಮದ ಲೋಕೇಶ್ ರಾವ್ (35) ವಿದ್ಯುತ್ ಸ್ಪರ್ಶಿಸಿ ಸೋಮವಾರ ಮೃತಪಟ್ಟಿದ್ದಾರೆ. ಬೆಳಗ್ಗೆ ಮನೆ ಸಮೀಪದ ಬೀದಿ ದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Chamarajanagar | ಕೌಟುಂಬಿಕ ಕಲಹ – 2 ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಬೀದಿ ದೀಪಗಳಿಗೆ ಅಳವಡಿಸಿರುವ ವೈರ್‌ಗೆ ಸ್ವಿಚ್ ಹಾಕುವಂತೆ ಅನೇಕ ಬಾರಿ ಸಂಬಂಧಿಸಿದ ಬೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಸ್ವಿಚ್ ಅಳವಡಿಸುವುದಕ್ಕೆ ಬದಲಾಗಿ ವೈರನ್ನೇ ಒಂದಕ್ಕೊಂದು ಸ್ಪರ್ಶಿಸಿ ಇಟ್ಟಿರುವುದೇ ಅನಾಹುತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಾತಿ ಜನಗಣತಿ ಯಾವುದೇ ಸಮಾಜದ ಪರ, ವಿರೋಧ ನಿರ್ಣಯ ಮಾಡೋದಲ್ಲ: ಶಿವಾನಂದ ಪಾಟೀಲ್
ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಶಿಕ್ಷಕನೊಬ್ಬ ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಿಂದ ಧಾರ್ಮಿಕ ದಾರವನ್ನು ಕತ್ತರಿಸಿರುವ ಘಟನೆ ನಡೆದಿದೆ.
ಈ ಘಟನೆ ಕಳೆದ ವಾರ ಕ್ವಾಜುಲು-ನಟಾಲ್ ಪ್ರಾಂತ್ಯದ ಡ್ರೇಕೆನ್ಸ್‌ಬರ್ಗ್ ಮಾಧ್ಯಮಿಕ ಶಾಲೆಯಲ್ಲಿ ನಡೆದಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಶಾಲೆಯು ಸಾಂಸ್ಕೃತಿಕ ಅಥವಾ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿ, ಶಿಕ್ಷಕಿ ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಿಂದ ಪವಿತ್ರ ದಾರವನ್ನು ಕತ್ತರಿಸಿದ್ದಾರೆ.
ದಕ್ಷಿಣ ಆಫ್ರಿಕಾದ ಹಿಂದೂ ಮಹಾಸಭಾ (SAHMS) ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಅಧಿಕಾರಿಗಳಿಗೆ ಒತ್ತಾಯಿಸಿದೆ. ಹಿಂದೂ ವಿದ್ಯಾರ್ಥಿಯ ಧಾರ್ಮಿಕ ದಾರವನ್ನು ಕತ್ತರಿಸಿದ ಶಿಕ್ಷಕನ ಅಸಂವೇದನಾಶೀಲ ಮತ್ತು ಬೇಜವಾಬ್ದಾರಿ ಕ್ರಮವನ್ನು SAHMS ಬಲವಾಗಿ ಖಂಡಿಸುತ್ತದೆ ಎಂದು ಸಂಘಟನೆ ತಿಳಿಸಿದೆ.
ಶಾಲೆಯಲ್ಲಿ ನಡೆದ ಧಾರ್ಮಿಕ ಅಸಹಿಷ್ಣುತೆ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.
ದಕ್ಷಿಣ ಆಫ್ರಿಕಾದ ಅತ್ಯುನ್ನತ ನ್ಯಾಯಾಂಗ ಪ್ರಾಧಿಕಾರವಾದ ಸಾಂವಿಧಾನಿಕ ನ್ಯಾಯಾಲಯವು ಶಾಲೆಯಿಂದ ಹಿಂದೂ ವಿದ್ಯಾರ್ಥಿನಿಯೊಬ್ಬಳು ಮೂಗುತಿಯನ್ನು ಧರಿಸುವುದನ್ನು ನಿಷೇಧಿಸಿತ್ತು. ಈ ಪ್ರಕರಣವನ್ನು ತ್ರಿಕಾಮ್ಜಿ ನೆನಪಿಸಿಕೊಂಡಿದ್ದಾರೆ.
ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನರಸಿಂಹ ಮೂರ್ತಿ (59) ಆತ್ಮಹತ್ಯೆ ಮಾಡಿಕೊಂಡ ಮುಖ್ಯ ಶಿಕ್ಷಕ. ಹೊಸಕೋಟೆ ಜಡಗನಹಳ್ಳಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜನವರಿ 15 ಕ್ಕೆ ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು.
10 ಕೋಟಿ ಜಾಗದ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಂಗನಗರದಲ್ಲಿ 25 ಗುಂಟೆ ಜಮೀನು ಹೊಂದಿದ್ದರು.
ಕಾಂಗ್ರೆಸ್ ಮುಖಂಡ ಸತೀಶ್ ಎಂಬವರು ಜಮೀನು ಖರೀದಿಸೋದಾಗಿ ಅಗ್ರಿಮೆಂಟ್ ಹಾಕಿಸಿಕೊಂಡಿದ್ದರು. 10 ಕೋಟಿ ಜಮೀನಿಗೆ 10 ಲಕ್ಷ ಕೊಟ್ಟು ಅಗ್ರಿಮೆಂಟ್ ಆಗಿತ್ತು. ಉಳಿದ ಹಣ ಕೊಡದೆ ಜಮೀನು ಲಪಟಾಯಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ.
ಹಣ ಕೇಳಲು ಹೋದಾಗ ಧಮ್ಕಿ ಹಾಕಿದ್ದರು. ಇದರಿಂದ ಮನನೊಂದು ನರಸಿಂಹ ಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಡೆಹ್ರಾಡೂನ್: 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು (SSLC Girl Student) ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡದ (Uttarakhand) ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ. ತನ್ನ ಶಾಲೆಯ ಶಿಕ್ಷಕನೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ವಾಟ್ಸಪ್ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ತನಗೆ ಬೆತ್ತೆಲೆ ಫೋಟೋಗಳನ್ನು ಕಳಿಸಿದ್ದಾನೆ. ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸರಿಗೆ (Uttarakhand Police) ದೂರು ನೀಡಲಾಗಿದೆ. ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ್ ಹೆಸರು – ಅಕ್ರಮವಾಗಿ ಭೂಪರಿವರ್ತನೆ ಆರೋಪ
ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಲ್ದ್ವಾನಿ ವೃತ್ತ ನಿರೀಕ್ಷಕ ನಿತಿನ್ ಲೋಹಾನಿ ಮಾಹಿತಿ ನೀಡಿದ್ದು, ಹಲ್ದ್ವಾನಿಯ ಖಾಸಗಿ ಶಾಲೆಯೊಂದರ ಶಿಕ್ಷಕನೊಬ್ಬ ಸೋಷಿಯಲ್ ಮೀಡಿಯಾದಲ್ಲಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನ ಕಳಿಸಿದ್ದಾನೆ. ಈ ಬಗ್ಗೆ ದೂರು ಸ್ವೀಕರಿಸಿ, ಎಫ್‌ಐಆರ್ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದೇವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಬಂಡುಕೋರರ ದಾಳಿ- ಒತ್ತೆಯಾಳುಗಳ 6 ಶವ ಪತ್ತೆಹಚ್ಚಿ ವಶಪಡಿಸಿಕೊಂಡ ಇಸ್ರೇಲ್
ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಇಲ್ಲಿನ ಖಾಸಗಿ ಶಾಲೆಯ ಶಿಕ್ಷಕ, ತನ್ನ ವಿದ್ಯಾರ್ಥಿನಿಗೆ ಆಗಾಗ್ಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಆಕೆಗೆ ಅನುಚಿತ ಸಂದೇಶಗಳನ್ನ ಕಳಿಸಿದ್ದಾನೆ. ಮೆಸೇಜ್ ಜೊತೆಗೆ ಸ್ನ್ಯಾಪ್ ಚಾಟ್ ಮತ್ತು ವಾಟ್ಸಪ್‌ಗಳಲ್ಲಿ ತನ್ನ ಬೆತ್ತಲೆ ಫೋಟೋಗಳನ್ನ ವಿದ್ಯಾರ್ಥಿನಿಗೆ ಕಳಿಸಿದ್ದಾನೆ. ಇದರಿಂದ ಮಾನಸಿಕ ತೊಂದರೆಗೆ ಒಳಗಾದ ವಿದ್ಯಾರ್ಥಿನಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ನಂತರ ಪೋಷಕರು ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ 2ನೇ ದಿನವೂ ಉತ್ತಮ ಸ್ಪಂದನೆ – ಸಂಜೆ 6 ಗಂಟೆವರೆಗೂ ಇರಲಿದೆ ಮೇಳ
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕ ಶಿಕ್ಷಕ ಹಣಮೇಗೌಡನ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಕೇಸ್ ದಾಖಲಾಗಿದೆ.
ಕಾಮುಕ ಶಿಕ್ಷಕ ಹಣಮೇಗೌಡ ಎರಡ್ಮೂರು ವರ್ಷಗಳಿಂದ ವಿದ್ಯಾರ್ಥಿಯರಿಗೆ ಲೈಂಗಿಕ ಕಿರುಕುಳ (Sexual Harassment) ನೀಡ್ತಿದ್ದ. ಈಗಾಗಲೇ ಅನುಚಿತ ವರ್ತನೆ ಆರೋಪದಡಿ ಶಿಕ್ಷಕ ಹಣಮೇಗೌಡನನ್ನು ಜಿಲ್ಲಾ ಪಂಚಾಯತಿ ಸಿಇಓ ಗರೀಮಾ ಪನ್ವಾರ್ ಅಮಾನತು ಮಾಡಿ ಆದೇಶಿಸಿದ್ರು. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ನಾಲ್ಕು ಜನ ಶಿಕ್ಷಕ ಇಲಾಖೆ ಅಧಿಕಾರಿಗಳ ತಂಡದಿಂದ ಶಾಲೆಗೆ ಭೇಟಿ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗಿತ್ತು.
ಅಧಿಕಾರಿಗಳ ತಂಡದ ಭೇಟಿ ವೇಳೆ ಶಾಲೆಯ ವಿದ್ಯಾರ್ಥಿನಿಯರು (Students) ಶಿಕ್ಷಕನ ಕರಾಳ ಮುಖ ಅನಾವರಣ ಮಾಡಿದ್ರು. ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಕಣ್ಣೀರಾಕುತ್ತಲೇ ಅಧಿಕಾರಿಗಳ ಮುಂದೆ ಎಲ್ಲಾ ವಿಚಾರವನ್ನ ವಿದ್ಯಾರ್ಥಿನಿಯರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ರು. ಪರಿಶೀಲನೆ ವರದಿಯ ಆಧಾರದ ಮೇಲೆ ಯಾದಗಿರಿ ಡಿಡಿಪಿಐ ಮಂಜುನಾಥ ಎಚ್.ಟಿ ಅವರಿಂದ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ: ಹೊಸಪೇಟೆಯ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ನಾಲ್ವರು ಮಹಿಳೆಯರ ರಕ್ಷಣೆ
ಪಾಟ್ನಾ: ಬಿಹಾರದಲ್ಲಿ (Bihar) ಶಿಕ್ಷಕನೊಬ್ಬನನ್ನು (Teacher) ಅಪಹರಿಸಿ, ಗನ್ ತೋರಿಸಿ ಬೆದರಿಸಿ ತನ್ನ ಮಗಳೊಂದಿಗೆ ಕಿಡ್ನ್ಯಾಪರ್ ಮದುವೆ (Mariiage) ಮಾಡಿಸಿರುವ ಘಟನೆಯೊಂದು ನಡೆದಿದೆ.
ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪಟೇಪುರ್‌ನ ರೇಪುರಾದಲ್ಲಿರುವ ಉತ್ಕ್ರಮಿತ್ ಮಧ್ಯ ವಿದ್ಯಾಲಯದಲ್ಲಿ ಹೊಸದಾಗಿ ನೇಮಕಗೊಂಡ ಶಿಕ್ಷಕ ಗೌತಮ್ ಕುಮಾರ್‌ನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸಲಾಗಿದೆ.
ಬುಧವಾರ ಗೌತಮ್ ಕುಮಾರ್ ಎಂದಿನಂತೆ ಶಾಲೆಗೆ ಹೋಗಿದ್ದಾಗ ಅಲ್ಲಿಗೆ ಬಂದ 3-4 ಜನರು ಆತನನ್ನು ಅಪಹರಿಸಿದ್ದಾರೆ. ಆತನಿಗೆ ಬಂದೂಕು ತೋರಿಸಿ, ಬೆದರಿಸಿ, ಅಪಹರಣವಾದ ಕೇವಲ 24 ಗಂಟೆಯಲ್ಲಿ ಕಿಡ್ನ್ಯಾಪರ್‌ನ ಮಗಳೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ.
ಗಮನಾರ್ಹ ವಿಚಾರವೆಂದರೆ ಈ ರೀತಿ ಯುವಕರನ್ನು ಅಪಹರಣ ಮಾಡಿ ಮದುವೆ ಮಾಡುವುದು ಬಿಹಾರದಲ್ಲಿ ಸಾಮಾನ್ಯವಾಗಿದೆ. ಇದನ್ನು ‘ಪಕಡ್ವಾ ವಿವಾಹ’ ಎಂದು ಕರೆಯಲಾಗುತ್ತದೆ. ಹೆಚ್ಚಾಗಿ ಒಳ್ಳೆಯ ಹುದ್ದೆಗೇರಿದ ಯುವಕರನ್ನು ಈ ರೀತಿ ಅಪಹರಣ ಮಾಡಿ ತಮ್ಮ ಮಕ್ಕಳೊಂದಿಗೆ ಮದುವೆ ಮಾಡಿಸುತ್ತಾರೆ. ಆದರೆ ಮದುವೆ ಬಗ್ಗೆ ಯೋಚನೆಯೇ ಮಾಡಿರದ ಗೌತಮ್ ಕುಮಾರ್ ಈಗ ಅನಿರೀಕ್ಷಿತವಾಗಿ ಪಕಡ್ವಾ ವಿವಾಹಕ್ಕೆ ಒಳಗಾಗಿದ್ದಾನೆ.
ಇತ್ತ ಗೌತಮ್ ಕುಮಾರ್ ಅಪಹರಣವಾಗುತ್ತಿದ್ದಂತೆ ಆತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬುಧವಾರ ರಾತ್ರಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಕಾಣೆಯಾಗಿದ್ದ ಶಿಕ್ಷಕನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಮಾಡಿದ್ದಾರೆ. ಇದನ್ನೂ ಓದಿ: ಉತ್ತರಕಾಶಿ ಘಟನೆ ಕುರಿತು ಸಿನಿಮಾ: 14ಕ್ಕೂ ಹೆಚ್ಚು ಶೀರ್ಷಿಕೆ ನೋಂದಣಿ
ಕುಮಾರ್‌ನ ಕುಟುಂಬ ರಾಜೇಶ್ ರೈ ಎಂಬ ವ್ಯಕ್ತಿಯ ಮೇಲೆ ಅಪಹರಣದ ಆರೋಪ ಹೊರಿಸಿದೆ. ರಾಜೇಶ್ ರೈ ಕುಟುಂಬ ಕುಮಾರ್‌ನನ್ನು ಬಲವಂತವಾಗಿ ಕರೆದೊಯ್ದು ತಮ್ಮ ಮಗಳು ಚಾಂದಿನಿಯೊಂದಿಗೆ ಮದುವೆ ಮಾಡಿದ್ದಾಗಿ ಆರೋಪಿಸಿದ್ದಾರೆ. ಈ ಹಿಂದೆ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಕುಮಾರ್‌ಗೆ ದೈಹಿಕ ಹಿಂಸೆ ನೀಡಿದ್ದಾಗಿಯೂ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು ಅಪಹರಣಕಾರರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರದಲ್ಲಿ ಪಕಡ್ವಾ ವಿವಾಹ ಸಾಮಾನ್ಯವಾಗಿದೆ. ಕಳೆದ ವರ್ಷ ಅನಾರೋಗ್ಯಕ್ಕೊಳಗಾದ ಪ್ರಾಣಿಯನ್ನು ಪರೀಕ್ಷಿಸಲು ಕರೆದಿದ್ದ ಪಶುವೈದ್ಯನನ್ನು ಮೂವರು ಅಪಹರಿಸಿ ಬೇಗುಸರಾಯ್‌ನಲ್ಲಿ ಬಲವಂತವಾಗಿ ಮದುವೆ ಮಾಡಿಸಿದ್ದರು. ಕೆಲವು ವರ್ಷಗಳ ಹಿಂದೆ ಬಿಹಾರದಲ್ಲಿ ಎಂಜಿನಿಯರ್‌ಗೆ ಸಂಬಂಧಿಸಿದ ಇಂತಹುದೇ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತ್ತು. ಬೊಕಾರೊ ಸ್ಟೀಲ್ ಪ್ಲಾಂಟ್‌ನಲ್ಲಿ ಜೂನಿಯರ್ ಮ್ಯಾನೇಜರ್ ಆಗಿದ್ದ 29 ವರ್ಷದ ವಿನೋದ್ ಕುಮಾರ್ ಎಂಬಾತನನ್ನು ಥಳಿಸಿ, ಪಾಟ್ನಾದ ಪಂಡರಕ್ ಪ್ರದೇಶದಲ್ಲಿ ಮಹಿಳೆಯನ್ನು ಬಲವಂತವಾಗಿ ವಿವಾಹವಾಗುವಂತೆ ಮಾಡಲಾಗಿತ್ತು. ಇದನ್ನೂ ಓದಿ: ರಷ್ಯಾದ ಮಹಿಳೆಯರು 8 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ: ಪುಟಿನ್ ಕರೆ
ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ (Davanagere) ನಗರದ ಸರ್ಕಾರಿ ಶಾಲೆಯೊಂದರಲ್ಲಿ (Government School) ನಡೆದಿದೆ.
ಅಪ್ರಾಪ್ತೆ ಮೇಲೆ ಕಾಮುಕ ಶಿಕ್ಷಕ ನಿರಂತರ ಅತ್ಯಾಚಾರ ಎಸಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ (Illness) ತುತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ.
ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಆದ್ರೆ ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬಸ್ ಹಳ್ಳಕ್ಕೆ ಉರುಳಿಬಿದ್ದು ಮಹಿಳೆ ಸಾವು – ಐವರು ಗಂಭೀರ
ವೀಡಿಯೋದಲ್ಲಿ ಏನಿದೆ..?: ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ಶಿಕ್ಷಕರ ಬಳಿ ಬಂದ ವಿದ್ಯಾರ್ಥಿ ಚಪ್ಪಲಿ ಹಿಡಿದುಕೊಂಡು ಹೊಡೆಯಲು ಶುರು ಮಾಡುತ್ತಾನೆ. ಆಗ ಶಿಕ್ಷಕರು ಆತನನ್ನು ತಡೆಯಲು ಪ್ರಯತ್ನಿಸುತ್ತಾರೆ. ಆದರೂ ವಿದ್ಯಾರ್ಥಿ ಹಲ್ಲೆ ಮುಂದುವರಿಸುತ್ತಾನೆ. ಬಳಿಕ ಅಲ್ಲಿಂದ ಶಿಕ್ಷಕ ತೆರಳುತ್ತಾರೆ.
ವಿದ್ಯಾರ್ಥಿ ಯಾವ ಕಾರಣಕ್ಕೆ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬುದು ತಿಳಿದುಬಂದಿಲ್ಲ. ಆದರೆ ಹಲ್ಲೆಯ ವೀಡಿಯೋ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೋ ನೋಡಿದ ಮಂದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.