Tag: ಶಿಕ್ಷಕರು

  • ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

    ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

    ಬೆಂಗಳೂರು: ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು (Govt School) ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದೆ.

    ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ ಮಾಡಿ ಶಿಕ್ಷಕರನ್ನ (Teachers) ಸರ್ವೆ (Caste Census) ಕಾರ್ಯಕ್ಕೆ ಬಳಸಿಕೊಂಡಿತ್ತು. ಸದ್ಯ ಸರ್ವೆ ಕಾರ್ಯ ಮುಂದುವರಿಯುತ್ತಿದ್ದರೂ ಶಿಕ್ಷಕರನ್ನ ಸರ್ವೆ ಕಾರ್ಯದಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರನ್ನ ಹೊರತುಪಡಿಸಿ ಉಳಿದವರಿಂದ ಸರ್ವೆ ಕಾರ್ಯ ಮುಂದುವರಿಯುತ್ತಿದೆ. ಈ ಹಿನ್ನೆಲೆ ಇಂದಿನಿಂದ ತರಗತಿಗಳು ಮರು ಪ್ರಾರಂಭವಾಗಿದೆ. ರಜೆಯಲ್ಲಿ ಮಿಸ್ ಆಗಿರುವ ಸಿಲಬಸ್ ಮುಕ್ತಾಯಕ್ಕೆ ಕೆಲವು ಮಹತ್ವದ ಸೂಚನೆಯನ್ನು ಶಿಕ್ಷಣ ಇಲಾಖೆ ನೀಡಿದೆ. ಇದನ್ನೂ ಓದಿ: ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

    ಶಿಕ್ಷಣ ಇಲಾಖೆ ಸೂಚನೆಗಳೇನು?
    *ಡಿಸೆಂಬರ್- ಜನವರಿ ಒಳಗೆ ಸಂಪೂರ್ಣ ಸಿಲಬಸ್ ಮುಕ್ತಾಯ ಆಗಬೇಕು.
    *ಒಂದು ತಿಂಗಳು ಆಗಿರೋ ಸಿಲಬಸ್ ಲಾಸ್ ತುಂಬಲು ವಿಶೇಷ ತರಗತಿಗಳನ್ನ ನಡೆಸಬೇಕು.
    *ಬೆಳಗ್ಗೆ ಶಾಲೆ ಮುಂಚೆ ಅಥವಾ ಸಂಜೆ ಶಾಲೆ ಮುಗಿದ ಮೇಲೆ ವಿಶೇಷ ತರಗತಿ ತೆಗೆದುಕೊಂಡು ಪಠ್ಯ ಪೂರ್ಣ ಮಾಡಬೇಕು.
    *ಶನಿವಾರ ಅರ್ಧ ದಿನದ ಬದಲಾಗಿ ಪೂರ್ಣ ತರಗತಿಗಳನ್ನು ನಡೆಸಿ ಪಠ್ಯ ಪೂರ್ಣ ಮಾಡಬೇಕು.
    *ತೀರಾ ಅಗತ್ಯವಿದ್ದರೆ ರಜಾ ದಿನಗಳಲ್ಲೂ ವಿಶೇಷ ತರಗತಿ ನಡೆಸಿ ಪಠ್ಯ ಬೋಧನೆ ಪೂರ್ಣ ಮಾಡಬೇಕು.

  • ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    – ಬೆಂಗಳೂರಿನಲ್ಲಿ ಗಣತಿಗೆ ಜನತೆ ನಿರಾಸಕ್ತಿ

    ಬೆಂಗಳೂರು: ಶಿಕ್ಷಕರ ಅಸಹಕಾರದಿಂದಾಗಿ ಸರ್ಕಾರದ ಮಹತ್ವಾಕಾಂಕ್ಷಿಯ ಜಾತಿ ಸಮೀಕ್ಷೆಗೆ (Caste Survey) ಭಾರೀ ಹಿನ್ನಡೆ ಆಗುತ್ತಿದೆ. ಸಮೀಕ್ಷೆಗೆ ಗೈರಾದ ಶಿಕ್ಷಕರ (Teacher) ವೇತನ ಕಡಿತಕ್ಕೆ ಸರ್ಕಾರ ಮುಂದಾಗಿದೆ.

    2,300 ಶಿಕ್ಷಕರು ಗಣತಿಗೆ ಗೈರಾಗಿದ್ದು, ಅವರ ವಿರುದ್ಧ ವೇತನ ಕಡಿತದ ಅಸ್ತ್ರ ಪ್ರಯೋಗ ಮಾಡಿದೆ. ಒಂದು ವೇಳೆ ಇದಕ್ಕೂ ಬಗ್ಗದಿದ್ದಲ್ಲಿ ಶಿಕ್ಷಕರನ್ನು ಅಮಾನತು ಮಾಡಲು  ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಇದನ್ನೂ ಓದಿ:  ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

     

    ಗಣತಿಗೆ ಬೆಂಗಳೂರಿನಲ್ಲಿ (Bengaluru) ಅಪಾರ್ಟ್‌ಮೆಂಟ್‌ ನಿವಾಸಿಗಳು ಇನ್ನೂ ಸ್ಪಂದಿಸಿಲ್ಲ. ಇದುವರೆಗೆ ಶೇ.29ರಷ್ಟು ಸರ್ವೆ ಆಗಿದ್ದು, ಇನ್ನೂ 39 ಲಕ್ಷ ಮನೆಗಳ ಸರ್ವೆ ಬಾಕಿ ಉಳಿದಿದೆ. ಹೀಗಾಗಿ ಬೆಂಗಳೂರಿನ ಶಾಸಕರು ಮತ್ತು ಸಂಸದರ ಸಹಕಾರ ಕೊರಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ನಿರ್ಧರಿಸಿದ್ದಾರೆ.

    ಈ ನಡುವೆ ಸಮೀಕ್ಷೆಗೆ ಹೋದವರಿಗೆ ನಾಯಿ ಕಾಟ ಜಾಸ್ತಿಯಾಗಿದೆ. ಬೆಂಗಳೂರಿನ ಪದ್ಮನಾಭನಗರದಲ್ಲಿ ಇಬ್ಬರು ಗಣತಿದಾರರಿಗೆ ನಾಯಿ ಕಚ್ಚಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದ ಬಿ.ಹೊಸಹಳ್ಳಿ ಶಾಲಾ ಶಿಕ್ಷಕಿ ಅಕ್ತರ್ ಬೇಗಂ ನಾಪತ್ತೆಯಾಗಿದ್ದಾರೆ. ಶಿಕ್ಷಕಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದಾರೆ.

  • ಜಾತಿಗಣತಿ ಸರ್ವೇ ಅವಧಿ ವಿಸ್ತರಣೆ – ಶಿಕ್ಷಕರಿಗೆ ಮಧ್ಯಾಹ್ನದ ನಂತರ ಸಮೀಕ್ಷೆ ಮಾಡಲು ಸೂಚನೆ

    ಜಾತಿಗಣತಿ ಸರ್ವೇ ಅವಧಿ ವಿಸ್ತರಣೆ – ಶಿಕ್ಷಕರಿಗೆ ಮಧ್ಯಾಹ್ನದ ನಂತರ ಸಮೀಕ್ಷೆ ಮಾಡಲು ಸೂಚನೆ

    – ಡಿಕೆಶಿ ಬಳಿಕ 60 ಪ್ರಶ್ನೆಗೆ ಸತೀಶ್‌ ಜಾರಕಿಹೊಳಿ ಆಕ್ಷೇಪ
    – ಚಿನ್ನ ಎಷ್ಟಿದೆ ಅಂತ ಪ್ರಶ್ನೆ ಕೇಳಿಲ್ಲ, ಚಿನ್ನ ಇದೆಯೋ, ಇಲ್ವೋ ಅಂತಷ್ಟೇ ಕೇಳಿದ್ದೇವೆ

    ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ (Education Department) ಆದೇಶಿಸಿದೆ.

    ರಾಜ್ಯದಲ್ಲಿ ಮಂಗಳವಾರಕ್ಕೆ (ಅ.7) ಅಂತ್ಯವಾಗಬೇಕಿದ್ದ ಸರ್ವೇ ಕಾರ್ಯವನ್ನು ಅ.12ರವರೆಗೂ, ಬೆಂಗಳೂರಿನಲ್ಲಿ (Bengaluru) 1 ವಾರ ತಡವಾಗಿರೋ ಕಾರಣ ಅ.24ರವರೆಗೂ ವಿಸ್ತರಿಸಲಾಗಿದೆ. ಅಲ್ಲದೇ ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಾಲಾ ತರಗತಿ ಮುಗಿಸಿ, ಮಧ್ಯಾಹ್ನದ ನಂತರ ಸರ್ವೇ ನಡೆಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

    ರಾಜ್ಯದಲ್ಲಿ ಈವರೆಗೆ ಶೇ.80.39ರಷ್ಟು ಸಮೀಕ್ಷೆಯಾಗಿದ್ದು, 1.43 ಕೋಟಿ ಮನೆಗಳ ಪೈಕಿ 1.15 ಕೋಟಿ ಮನೆಗಳ ಸರ್ವೇ ಮುಗಿದೆ. ಈವರೆಗೆ 4.32 ಕೋಟಿ ಜನರು ಗಣತಿ ವ್ಯಾಪ್ತಿಗೆ ಬಂದಿದ್ದಾರೆ. ಇವತ್ತು 5 ಲಕ್ಷದ 52 ಸಾವಿರದ 345 ಮನೆಗಳ ಸಮೀಕ್ಷೆ ಆಗಿದೆ. ಬೆಂಗಳೂರಿನಲ್ಲಿ ಇಂದು 1.36 ಲಕ್ಷ ಮನೆಗಳ ಸಮೀಕ್ಷೆಯಾಗಿದ್ದು, ಒಟ್ಟು 2.60 ಲಕ್ಷ ಮನೆಗಳ ಸರ್ವೇ ಆಗಿದೆ.

    ಬೆಂಗಳೂರಿನ ಅಪಾರ್ಟ್‌ಮೆಂಟ್‌ ನಿವಾಸಿಗಳು ಯಾವುದೇ ಮಾಹಿತಿ ನೀಡದೆ ಆಟ ಆಡಿಸುತ್ತಿರೋದು ತಲೆನೋವುಂಟು ಮಾಡಿದೆ. ಇನ್ನೂ ಗರ್ಭಿಣಿಯರು, ಬಾಣಂತಿಯರು, 1 ವರ್ಷಕ್ಕಿಂತ ಚಿಕ್ಕಮಕ್ಕಳನ್ನ ಹೊಂದಿರುವವರು, ಗಂಭೀರ ಆರೋಗ್ಯ ಸಮಸ್ಯೆ ಇರುವವರಿಗೆ ಸರ್ವೇಯಿಂದ ವಿನಾಯ್ತಿ ಕೊಡಲಾಗಿದೆ. ಕೆಲ ಗಣತಿದಾರರು ಇವತ್ತೂ ಕೂಡ ಅಳಲು ತೋಡಿಕೊಂಡಿದ್ದರು.

    ಇನ್ನು, ಗಣತಿ ವೇಳೆ ಚಿನ್ನದ ಬಗ್ಗೆ ಪ್ರಶ್ನೆಗೆ ಡಿಸಿಎಂ ಡಿಕೆಶಿ ಆಕ್ಷೇಪ ಸಂಬಂಧ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ನನಗೆ ಅರ್ಥ ಆಗ್ತಿಲ್ಲ ಅಂದಿದ್ದಾರೆ. ಚಿನ್ನ ಎಷ್ಟಿದೆ ಅಂತ ಪ್ರಶ್ನೆ ಕೇಳಿಲ್ಲ. ಚಿನ್ನ ಇದೆಯೋ, ಇಲ್ವೋ ಅಂತಷ್ಟೇ ಕೇಳಿದ್ದೇವೆ. ಜೀವನಮಟ್ಟ ತಿಳಿದುಕೊಳ್ಳಲು ಇದು ಅಗತ್ಯ ಅಂದಿದ್ದಾರೆ. ಈ ಮಧ್ಯೆ, ಸಚಿವ ಸತೀಶ್ ಜಾರಕಿಹೊಳಿ ಕೂಡ 60 ಪ್ರಶ್ನೆಗಳು ಜಾಸ್ತಿ ಆಯ್ತು ಅಂತ ಆಕ್ಷೇಪಿಸಿದ್ದಾರೆ.

  • ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಹಸುಗೂಸನ್ನು ಕಾಡಿಗೆ ಎಸೆದ ದಂಪತಿ

    ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಹಸುಗೂಸನ್ನು ಕಾಡಿಗೆ ಎಸೆದ ದಂಪತಿ

    ಭೋಪಾಲ್: ಅಬ್ಬಬ್ಬಾ ಎಂಥಾ ಜನರೆಲ್ಲ ಪ್ರಪಂಚದಲ್ಲಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಹೌದು, ಇಲ್ಲೊಂದು ದಂಪತಿ ತಮ್ಮ ಸರ್ಕಾರಿ ಕೆಲಸ ಉಳಿಸಿಕೊಳ್ಳಲು ನಾಲ್ಕನೇ ಮಗುವನ್ನು ಕಾಡಿಗೆ ಎಸೆದಿರುವ ಘಟನೆ ಮಧ್ಯಪ್ರದೇಶದ (Madhya Pradesh) ಛಿಂದ್ವಾರಾದಲ್ಲಿ ನಡೆದಿದೆ.

    ಬಬ್ಲು ದಾಂಡೋಲಿಯಾ ಹಾಗೂ ರಾಜಕುಮಾರಿ ದಾಂಡೋಲಿಯಾ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿದ್ದರು (Teachers). ಮಧ್ಯಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರು ಸರ್ಕಾರಿ ನೌಕರಿಯನ್ನು ಕಳೆದುಕೊಳ್ಳುತ್ತಾರೆ ಎಂಬ ನಿಯಮವಿದೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಅವಹೇಳನ – ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹತ್ಯೆಗೆ ಯತ್ನಿಸಿದ್ದ ಹಂತಕರು

    ಈಗಾಗಲೇ ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ತನ್ನ ನಾಲ್ಕನೆಯ ಗರ್ಭಧಾರಣೆಯನ್ನು ಮುಚ್ಚಿಟ್ಟಿದ್ದ ಶಿಕ್ಷಕಿ, ಸೆ.23 ರಂದು ಮಗುವಿಗೆ ಜನ್ಮ ನೀಡಿದ್ದಳು. ಈಗಾಗಲೇ ಮೂವರು ಮಕ್ಕಳಿರುವುದರಿಂದ, ನಾಲ್ಕನೇ ಮಗುವಿದೆ ಎಂದು ಗೊತ್ತಾದರೆ ಖಂಡಿತ ಕೆಲಸ ಕಳೆದುಕೊಳ್ಳುತ್ತೇವೆ ಎಂದು ಭಯಭೀತರಾಗಿ ಆಗಷ್ಟೇ ಹುಟ್ಟಿದ ಕಂದಮ್ಮನನ್ನು ದಂಪತಿಯು ಕಾಡಿನಲ್ಲಿ ಎಸೆದು ಬಂದಿದ್ದರು. ಇದನ್ನೂ ಓದಿ: ಹಿಟ್ & ರನ್‌ಗೆ ವಿದ್ಯಾರ್ಥಿನಿ ಬಲಿ – ಟಿಪ್ಪರ್‌ ಚಾಲಕ ಅರೆಸ್ಟ್‌

    ನAದನವಾಡಿ ಗ್ರಾಮದಲ್ಲಿ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರಿಗೆ ಮೊದಲು ಮಗುವಿನ ಕೂಗುವುದು ಕೇಳಿಸಿತ್ತು. ಇದು ಪ್ರಾಣಿಯ ಚೀರಾಟ ಎಂದು ಭಾವಿಸಿದ್ದರು. ಬಳಿಕ ಚೀರಾಟದ ಶಬ್ಧವನ್ನು ಆಲಿಸಿ, ಹಿಂಬಾಲಿಸಿದಾಗ ಮೈಯೆಲ್ಲ ರಕ್ತದ ಕಲೆಯಿದ್ದ ಮಗೊಂದು ಕಲ್ಲಿನ ಹಿಂದಿರುವುದು ಕಾಣಿಸಿತ್ತು.

    ಬಳಿಕ ಗ್ರಾಮಸ್ಥರು ಮಗುವನ್ನು ರಕ್ಷಣೆ ಮಾಡಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಮಗು ಸುರಕ್ಷಿತವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಪೊಲೀಸರ ತನಿಖೆ ವೇಳೆ ದಂಪತಿಯು ಸರ್ಕಾರಿ ಕೆಲಸದಾಸೆಗೆ ಮಗುವನ್ನು ಕಾಡಿಗೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಇದೀಗ ಪೊಲೀಸರು ದಂಪತಿ ವಿರುದ್ಧ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • Chitradurga | ಸಮೀಕ್ಷೆ ಕಾರ್ಯಕ್ಕೆ ಗೈರು – 68 ಸಿಬ್ಬಂದಿಗೆ ನೋಟಿಸ್

    Chitradurga | ಸಮೀಕ್ಷೆ ಕಾರ್ಯಕ್ಕೆ ಗೈರು – 68 ಸಿಬ್ಬಂದಿಗೆ ನೋಟಿಸ್

    – 5 ದಿನದಲ್ಲೇ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕಿ

    ಚಿತ್ರದುರ್ಗ: ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ (Caste Census) ಗೈರಾದ ಹಿನ್ನೆಲೆ ಚಿತ್ರದುರ್ಗದಲ್ಲಿ (Chitradurga) 68 ಸಿಬ್ಬಂದಿಗೆ ನೋಟಿಸ್ ನೀಡಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

    68 ಗಣತಿದಾರರು ಈವರೆಗೆ ಸಮೀಕ್ಷೆಗೆ ವರದಿ ಮಾಡಿಕೊಂಡಿಲ್ಲ. ಈ ಹಿನ್ನೆಲೆ ಗೈರಾಗಿ ನಿರ್ಲಕ್ಷ್ಯ ವಹಿಸಿದ 68 ಮಂದಿ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

    ಇನ್ನು ಗೈರಾದವರಿಗೆ ನೋಟಿಸ್ ಒಂದೆಡೆಯಾದರೆ ಇನ್ನೊಂದೆಡೆ ಶಿಕ್ಷಕಿಯೊಬ್ಬರು (Teacher) ಕೇವಲ 5 ದಿನದಲ್ಲೇ ಸಮೀಕ್ಷೆ ಕಾರ್ಯ ಮುಗಿಸಿ ಮೆಚ್ಚುಗೆ ಗಳಿಸಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದಾಸರ್ಲಹಳ್ಳಿ ಗ್ರಾಮದಲ್ಲಿ ಶಿಕ್ಷಕಿ ಎಂ.ರಾಧಾ ತ್ವರಿತಗತಿಯಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿದ್ದಾರೆ. ಗ್ರಾಮದ ಜನರು ಕೆಲಸಕ್ಕೆ ಹೋಗುವ ಮುನ್ನ ಶಿಕ್ಷಕಿ ಹಾಜರಾಗುತ್ತಿದ್ದು, ಗ್ರಾಮದಲ್ಲೇ ಉಳಿದುಕೊಂಡು ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ. ಶಿಕ್ಷಕಿ ಎಂ.ರಾಧಾ ಕಾರ್ಯಕ್ಕೆ ದಾಸರ್ಲಹಳ್ಳಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಸರ್ಕಾರದ ವಿರುದ್ಧ ಪಿಓಕೆಯಲ್ಲಿ ಭಾರೀ ಪ್ರತಿಭಟನೆ – ಷರೀಫ್‌, ಅಸಿಮ್ ಮುನೀರ್‌ಗೆ ಪುಕ ಪುಕ

  • ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶಿಕ್ಷಕರಿಗೆ ಶಿಕ್ಷೆ ಕೊಡ್ತಿದೆ: ರವಿಕುಮಾರ್

    ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶಿಕ್ಷಕರಿಗೆ ಶಿಕ್ಷೆ ಕೊಡ್ತಿದೆ: ರವಿಕುಮಾರ್

    ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Census) ವಿಳಂಬ ಆಗುತ್ತಿದ್ದು, ಸರ್ಕಾರದ ಸಮಸ್ಯೆ ಪರಿಹಾರ ಆಗುತ್ತಿಲ್ಲ. ಈ ಸಮೀಕ್ಷೆ ಶಿಕ್ಷಕರಿಗೆ ಶಿಕ್ಷೆ ಕೊಡುವ ಸಮೀಕ್ಷೆ ಆಗಿದೆ ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ (N Ravikumar) ಸರ್ಕಾರದ ವಿರುದ್ಧ ಕಿಡಿಕಾರಿದರು.

    ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಹೆಚ್ಚು ಸಮಸ್ಯೆ ಆಗುತ್ತಿದೆ. UHID ನಂಬರ್ ಸಮಸ್ಯೆ ಆಗುತ್ತಿದೆ. ಅಡ್ರೆಸ್ ಇಲ್ಲದೆ ಸಮಸ್ಯೆ ಆತಗುತ್ತಿದೆ. UHID ನಂಬರ್ ಸರಿಯಾಗಿ ಮನೆ ತೋರಿಸುತ್ತಿಲ್ಲ. ಸರ್ವೆ ಮಾಡಲು ಹೋಗಿರೋ ಶಿಕ್ಷಕರು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲ್ಲ, ದಿನಕ್ಕೆ 10% ಸಮೀಕ್ಷೆ ಟಾರ್ಗೆಟ್: ಸಿಎಂ

    15 ದಿನ ಅಲ್ಲ ಒಂದೂವರೆ ತಿಂಗಳು ಆದರೂ ಸರ್ವೆ ಮುಗಿಯಲ್ಲ. ಸರ್ಕಾರ ಯಾವುದೇ ತರಬೇತಿ ಸರಿಯಾಗಿ ಕೊಟ್ಟಿಲ್ಲ. ಸರ್ಕಾರ ಸರ್ವೆ ಮಾಡುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ಸರ್ವೆ ಶಿಕ್ಷಕರಿಗೆ ಶಿಕ್ಷೆ ಕೊಡುತ್ತಿದೆ. ಸಿಎಂ, ಸರ್ಕಾರ ಸಮಯ ತೆಗೆದುಕೊಂಡು ಸರ್ವೆ ಮಾಡಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ

  • ಕೊಡಗಿನಲ್ಲಿ ಗಣತಿದಾರರ ಪರದಾಟ – ಮುಂದುವರಿದ ಸರ್ವರ್​ ಸಮಸ್ಯೆ, 4 ದಿನಗಳಲ್ಲಿ ಕೇವಲ 1,133 ಮಂದಿ ದತ್ತಾಂಶ ಸಂಗ್ರಹ

    ಕೊಡಗಿನಲ್ಲಿ ಗಣತಿದಾರರ ಪರದಾಟ – ಮುಂದುವರಿದ ಸರ್ವರ್​ ಸಮಸ್ಯೆ, 4 ದಿನಗಳಲ್ಲಿ ಕೇವಲ 1,133 ಮಂದಿ ದತ್ತಾಂಶ ಸಂಗ್ರಹ

    – ʻಪಬ್ಲಿಕ್ ಟಿವಿʼ ರಿಯಾಲಿಟಿ ಚೆಕ್‌ ವೇಳೆ ಸಮೀಕ್ಷಕರ ಸಮಸ್ಯೆ ಅನಾವರಣ

    ಮಡಿಕೇರಿ: ರಾಜ್ಯಾದ್ಯಂತ ಆರಂಭಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ 4ನೇ ದಿನವೂ ಸರ್ವರ್‌ ಸಮಸ್ಯೆಯ ತಲೆನೋವಾಗಿದೆ. ಸಮೀಕ್ಷೆ ಶುರುವಾಗಿ 4ನೇ ದಿನಕ್ಕೆ ಕಾಲಿಟ್ಟರೂ ಸರ್ವರ್ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಮಾತ್ರ ಗೋಚರಿಸುತ್ತಿಲ್ಲ. ಹೀಗಾಗಿ ಶಾಲಾ ಶಿಕ್ಷಕರು ಪ್ರತಿ ಮನೆಮನೆಗೆ ತೆರಳಿ ಗಂಟೆಗಟ್ಟಲೇ ಓಟಿಪಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ʻಪಬ್ಲಿಕ್‌ ಟಿವಿʼ ರಿಯಾಲಿಟಿ ಚೆಕ್‌ ನಡೆಸಿದಾಗ ಸಮೀಕ್ಷಕರ ಪರದಾಟಗಳು ಅನಾವರಣಗೊಂಡಿದೆ.

    15 ದಿನಗಳಲ್ಲಿ ಜಾತಿ ಜನಗಣತಿ ಕಾರ್ಯ ಮುಗಿಸಬೇಕೆಂದು ಈಗಾಗಲೇ ಶಿಕ್ಷಕರಿಗೆ ಸೂಚನೆ ಕೊಟ್ಟಿದೆ. ದಸರಾ ರಜೆ ಕೂಡ ಇರೋದ್ರಿಂದ ಶಿಕ್ಷಕರು ನಿತ್ಯ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದಾರೆ. ಆದ್ರೆ ಕೊಡಗಿನಲ್ಲಿ ಸರ್ವರ್‌ ಸಮಸ್ಯೆ ಇರೋದ್ರಿಂದ ಸಮೀಕ್ಷಾ ಮಾಹಿತಿಯನ್ನ ಮೊಬೈಲ್‌ ಆ್ಯಪ್‌ನಲ್ಲಿ ದಾಖಲಿಸಲು ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್

    2-3 ಗಂಟೆ ಒಂದೇ ಮನೆಯಲ್ಲಿ ಠಿಕಾಣಿ
    ಹೇಗೋ ಹರಸಾಹಸ ಮಾಡಿ ಎಲ್ಲಾ ಮಾಹಿತಿಯನ್ನ ಆ್ಯಪ್‌ನಲ್ಲಿ ದಾಖಲಿಸಿದ್ರೆ ಓಟಿಪಿ ಹಾಕುವ ಸಂದರ್ಭದಲ್ಲೇ ಕೈಕೊಡುತ್ತಿದೆ. ಹೀಗಾಗಿ ಶಾಲಾ ಶಿಕ್ಷಕರು ಓಟಿಪಿಗಾಗಿ ಗಂಟೆಗಟ್ಟಲೆ ಕಾದು ಹೈರಾಣಾಗುತ್ತಿದ್ದಾರೆ. ಸರ್ವೇ ನಡೆಸಲು ಎರಡು ಮೂರು ಗಂಟೆಗಳ ಕಾಲ ಶಿಕ್ಷಕರು ಒಂದೇ ಮನೆ ಬಳಿ ಕುಳಿತಿರುತ್ತಾರೆ. ಇದರಿಂದ ಮಾಹಿತಿ ನೀಡುತ್ತಿರುವ ಜನಸಾಮಾನ್ಯರಿಗೂ ಕಿರಿಕಿರಿ ಉಂಟಾಗುತ್ತಿದೆ. ಇದನ್ನೂ ಓದಿ: ಜಾತಿ ಜನಗಣತಿ ವಿರೋಧಿಸಿ ಅರ್ಜಿ – ಕೇಂದ್ರ , ರಾಜ್ಯ, ಸೆನ್ಸಸ್ ಮಂಡಳಿ, ಹಿಂದುಳಿದ ಆಯೋಗಕ್ಕೆ ನೋಟಿಸ್ ಜಾರಿ

    ಸಂಜೆಯಾದ್ರೆ ಆನೆಕಾಟ, ಬೆಳಗ್ಗೆ ನೆಟ್‌ವರ್ಕ್‌ ಸಮಸ್ಯೆ
    ಇನ್ನೂ ಕೊಡಗು ಗುಡ್ಡಗಾಡು ಪ್ರದೇಶ ಆಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಗಣತಿದಾರರು ನೆಟ್‌ವರ್ಕ್ ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ಮನೆಯ ಪೂರ್ಣ ವಿವರ ದಾಖಲಿಸಿ ಅಪ್‌ಲೋಡ್‌ ಮಾಡಿದ ನಂತರ ಮತ್ತೊಂದು ಮನೆ ಗಣತಿ ನಡೆಸಬೇಕು. ಆದ್ರೆ ಇಲ್ಲಿನ ಜನರ ಬಳಿ ಬಹುತೇಕ 4ಜಿ ಮೊಬೈಲ್‌ಗಳಿವೆ ನೆಟ್‌ವರ್ಕ್‌ ಸಮಸ್ಯೆ ಕೂಡ ಕಾಡುತ್ತಿರೋದ್ರಿಂದ, ಆ್ಯಪ್‌ ಡೌನ್‌ಲೋಡ್‌ ಮಾಡೋದು ಕೂಡ ಸಮಸ್ಯೆಯಾಗ್ತಿದೆ. ಸಾರ್ವಜನಿಕರ ಮನೆಗಳ ಲೊಕೆಷನ್ ಮಾಹಿತಿಯೂ ನೆಟ್‌ವರ್ಕ್ ಸಮಸ್ಯೆಯಿಂದ ಸರಿಯಾಗಿ ನಮೂದಾಗುತ್ತಿಲ್ಲ. ಇನ್ನೂ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಸಂಜೆ 5 ಗಂಟೆ ನಂತರವೇ ಮನೆಗೆ ಬರ್ತಾರೆ. ಆದ್ರೆ ಸಂಜೆಯಾಗ್ತಿದ್ದಂತೆ ಕಾಡಾನೆಗಳ ಕಾಡ ಶುರುವಾಗುತ್ತಿದೆ ಎಂದು ಅಲವತ್ತುಕೊಂಡಿದ್ದಾರೆ.

    ಕೊಡಗು ಜಿಲ್ಲೆಯಲ್ಲಿ ಒಟ್ಟು 1,38,112 ಸಮೀಕ್ಷೆ ಮಾಡಲು ಗುರಿ ನೀಡಲಾಗಿದೆ. ಆದ್ರೆ ಕಳೆದ 3-4 ದಿನಗಳಲ್ಲಿ ಕೇವಲ 1,133 ಮನೆಗಳು ಮಾತ್ರ ಗಣತಿಯಾಗಿದೆ. ಈ ಬಗ್ಗೆ ವಕ್ಫ್‌ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ರಾಜ್ಯದಲ್ಲಿ ಈ ರೀತಿಯ ಸಮಸ್ಯೆಯಾಗಿದೆ. ಪ್ರತಿನಿತ್ಯ ಇದರ ಬಗ್ಗೆ ಜಮೀರ್‌ ಅಹ್ಮದ್‌ ಅಹಮದ್‌ ಮಾಹಿತಿ ಪಡೆಯುತ್ತಿದ್ದಾರೆ. ಸರ್ವರ್ ಸಮಸ್ಯೆ ಬಗ್ಗೆ ಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

  • ಶಾಲಾ ಅವಧಿ ಬದಲು ರಜೆ ವೇಳೆ ಸರ್ವೆಗೆ ಶಿಕ್ಷಕರ ಬಳಕೆ: ಮಧು ಬಂಗಾರಪ್ಪ

    ಶಾಲಾ ಅವಧಿ ಬದಲು ರಜೆ ವೇಳೆ ಸರ್ವೆಗೆ ಶಿಕ್ಷಕರ ಬಳಕೆ: ಮಧು ಬಂಗಾರಪ್ಪ

    ಬೆಂಗಳೂರು: ಸಾಮಾಜಿಕ, ಆರ್ಥಿಕ ಸಮೀಕ್ಷೆ ಕಾರ್ಯವನ್ನು ಶಿಕ್ಷಕ (Teachers) ವರ್ಗ ಉತ್ತಮವಾಗಿ ನಡೆಸಿಕೊಡಲಿದೆ. ಶಿಕ್ಷಕರ ವಿಚಾರದಲ್ಲಿ ಬಿಜೆಪಿ (BJP) ಗೊಂದಲಗಳನ್ನು ಮೂಡಿಸುವ ಕೆಲಸ ಮಾಡಬಾರದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಕಿಡಿಕಾರಿದರು.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಮೀಕ್ಷೆ ಮಾಡುವುದು ಅಗತ್ಯ. ವಿವಿಧ ಸಮುದಾಯಗಳ ಆರ್ಥಿಕ, ಸಾಮಾಜಿಕ ಪರಿಸ್ಥಿತಿ ತಿಳಿದುಕೊಳ್ಳಬೇಕಾಗುತ್ತದೆ. ಶಿಕ್ಷಕರನ್ನು ಬಳಸದ ಹೊರತು ಬೇರೆ ಪರ್ಯಾಯ ವ್ಯವಸ್ಥೆ ಇಲ್ಲ. ಅದಕ್ಕಾಗಿಯೇ ಶಾಲಾ ಅವಧಿ ಬದಲು ರಜೆ ವೇಳೆ ಶಿಕ್ಷಕರನ್ನು ಸರ್ವೆಗೆ ಬಳಸಿಕೊಳ್ಳುತ್ತಿದ್ದೇವೆ. ಬಿಜೆಪಿಯವರು ಗಣೇಶ ಹಬ್ಬ ದಲ್ಲಿ ಗಲಾಟೆ ಹಬ್ಬ ಮಾಡ್ತಾರೆ, ಬಿಜೆಪಿಯವರು ಹೇಳೋದೆಲ್ಲವೂ ಸುಳ್ಳು ಎಂದು ಹೇಳಿದರು. ಇದನ್ನೂ ಓದಿ: ಫಾದರ್ ಸಿದ್ದರಾಮಯ್ಯ ಕುಲ ಶಾಸ್ತ್ರೀಯ ಅಧ್ಯಯನ ಮಾಡಬೇಕು: ಸುನಿಲ್ ಕುಮಾರ್ ಟಾಂಗ್

    ಬಿಜೆಪಿ ಕಾಲದಲ್ಲೂ ಶಿಕ್ಷಕರ ವಲಯದ ಮೇಲೆ ಅನ್ಯ ಕೆಲಸಗಳ ಒತ್ತಡ ಇರಲಿಲ್ಲವಾ? ಶಿಕ್ಷಕರ ಮೇಲೆ ಅನ್ಯ ಕೆಲಸಗಳ ಒತ್ತಡ ಇದೆ ಎಂದು ಒಪ್ಪಿಕೊಳ್ಳುತ್ತೇವೆ, ಆದರೆ ಸಮೀಕ್ಷೆ ಅರ್ಥಪೂರ್ಣವಾಗಿ ಆಗಬೇಕು. ಇದು ಅಗತ್ಯವಾಗಿ ನಡೆಯಬೇಕಿರುವ ಬೆಳವಣಿಗೆ. ಜನ ಕೂಡಾ ಇದಕ್ಕೆ ಸಹಕಾರ ಕೊಡಬೇಕು. ಕೇಂದ್ರ ಸರ್ಕಾರವೂ ಶಿಕ್ಷಕರನ್ನೇ ಬಳಸಿಕೊಂಡು ಜನಗಣತಿ ಮಾಡೋದು ಎಂದರು. ಇದನ್ನೂ ಓದಿ: ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ಎಲ್ಲ ಸರಿಯಿದೆ ಅಂದಾಗ ಬಿಜೆಪಿಯವ್ರು ಏನಾದ್ರೂ ಒಂದು ಹುಳಿ ಹಾಕಿಬಿಡುತ್ತಾರೆ. ಶಿಕ್ಷಕರಿಗೆ ಸಮೀಕ್ಷೆ ಚೆನ್ನಾಗಿ ಮಾಡಿಕೊಡಿ, ಸಹಕಾರ ಕೊಡಿ ಅಂತ ಮನವಿ ಮಾಡಿಕೊಂಡಿದ್ದೇವೆ. ಶಿಕ್ಷಕರು ಸಹ ಅವರ ಹಕ್ಕು ಎಂದು ಭಾವಿಸಿ ಸಮೀಕ್ಷೆ ಮಾಡಬೇಕು. ಹತ್ತು ಜನ ನಾವು ಸಮೀಕ್ಷೆ ಮಾಡಲ್ಲ ಅಂದರೆ ಅವರೇ ಅವರ ಹಕ್ಕು ಉಲ್ಲಂಘನೆ ಮಾಡಿದ ಹಾಗೆ. ಶಿಕ್ಷಕರಿಗೆ ಅಂತ ದಸರಾ ರಜೆ ಕೆಲ ದಿನ ವಿಸ್ತರಣೆ ಮಾಡುವುದು ಈ ಹಂತದಲ್ಲಿ ಕಷ್ಟ. ದಸರಾ ರಜೆ ವಿಸ್ತರಣೆ ಪ್ರಸ್ತಾಪ ಇಲ್ಲ. ದಸರಾ ರಜೆ ಮುಗಿಯುತ್ತಿದ್ದ ಹಾಗೆ ಶಾಲೆಗಳು ಆರಂಭ ಆಗುತ್ತವೆ ಎಂದು ತಿಳಿಸಿದರು. ಇದನ್ನೂ ಓದಿ: ಅಧಿಕಾರ ಉಳಿಸಿಕೊಳ್ಳಲು ಎಲ್ಲರನ್ನೂ ಸೋನಿಯಾ ಧರ್ಮಕ್ಕೆ ಸೇರಿಸಲು ಸಿದ್ದರಾಮಯ್ಯ ಹೊರಟಿದ್ದಾರೆ: ಅಶೋಕ್‌ ಕಿಡಿ

  • Rajasthan | ಶಾಲಾ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು – ಐವರು ಶಿಕ್ಷಕರ ಅಮಾನತು

    Rajasthan | ಶಾಲಾ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವು – ಐವರು ಶಿಕ್ಷಕರ ಅಮಾನತು

    ಜೈಪುರ: ಝಲಾವರ್‌ನಲ್ಲಿ (Jhalawar) ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು (School Roof Collapse) 7 ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು (Suspend) ಮಾಡಲಾಗಿದೆ.

    ಶುಕ್ರವಾರ ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಅವಘಡ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮದ್ಯಪಾನ ಮಾಡಿ ಶಾಲಾ ಅಡುಗೆ ಕೋಣೆ ಮುಂದೆ ಮಲಗಿದ್ದ ಮುಖ್ಯ ಶಿಕ್ಷಕ ಅಮಾನತು

    ಶಾಲೆಯ ಮೇಲ್ಛಾವಣಿ ಬೀಳುವ ಪರಿಸ್ಥಿತಿಯಲ್ಲಿದೆ ಎಂದು ಮೊದಲೇ ಎಚ್ಚರಿಸಲಾಗಿತ್ತು. ಆದರೆ ಶಿಕ್ಷಕರು ನಿರ್ಲಕ್ಷ ತೋರಿದ್ದಾರೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Bengaluru | ಬಾಗಿಲು ಮುಚ್ಚುವ ವೇಳೆ ಗನ್ ಹಿಡಿದು ಬಂದು ಚಿನ್ನದಂಗಡಿ ದರೋಡೆ

    ಘಟನೆ ಸಂಬಂಧ ಮನೋಹರ್ಥಾನಾ ಬ್ಲಾಕ್‌ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂದು ರಜೆ ಘೋಷಿಸಲಾಗಿದೆ. ಇನ್ನು, ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ದುರಂತದ ಬಗ್ಗೆ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

  • ಶಾಲೆಯಲ್ಲಿ ಮಕ್ಕಳು ಟಾಯ್ಲೆಟ್‌ ಸ್ವಚ್ಛ ಮಾಡಿದ್ರೆ ಶಿಕ್ಷಕರ ಮೇಲೆ ಕೇಸ್‌

    ಶಾಲೆಯಲ್ಲಿ ಮಕ್ಕಳು ಟಾಯ್ಲೆಟ್‌ ಸ್ವಚ್ಛ ಮಾಡಿದ್ರೆ ಶಿಕ್ಷಕರ ಮೇಲೆ ಕೇಸ್‌

    ಬೆಂಗಳೂರು: ಶಾಲಾ ಮಕ್ಕಳಿಂದ (Students) ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ (Teachers) ಮೇಲೆಯೇ ಎಫ್‌ಐಆರ್‌ (FIR) ದಾಖಲಿಸಲಾಗುವುದು ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

    ಶಾಲಾ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ (Toilet Clenaing) ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ.

    ಶೌಚಾಲಯ ಕ್ಲೀನ್ ಮಾಡಿಸುವ ಶಿಕ್ಷಕರ ವಿರುದ್ದ ಮತ್ತು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ:ಯುವತಿಯೆಂದು ಯುವಕನಿಗೆ ಅಶ್ಲೀಲ ಮೆಸೇಜ್ – ಕಾಮುಕನಿಗೆ ಬಿತ್ತು ಧರ್ಮದೇಟು

    ಆದೇಶದಲ್ಲಿ ಏನಿದೆ?
    ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ. ಇದನ್ನೂ ಓದಿ: ಅಮೆರಿಕಕ್ಕೆ ಭಾರತದಿಂದ 5 ವಿಮಾನ ಭರ್ತಿ ಐಫೋನ್‌ ಕಳುಹಿಸಿದ ಆಪಲ್‌

    ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ ಆಕ್ಷೇಪಿಸಿದೆ.

    ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಉಲ್ಲೇಖಿತ ಪತ್ರದಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ.