ಬೆಂಗಳೂರು: ಬುಧವಾರ ಶಿಕ್ಷಕ ಸಂಘದ ಜೊತೆ ಚರ್ಚೆ ಮಾಡಿದ್ದೇವೆ. ಹಲವು ಸಮಸ್ಯೆ ಹೇಳಿದ್ದಾರೆ. ಸರ್ಕಾರಕ್ಕೆ ಸಮಸ್ಯೆಗಳ ಅರಿವಾಗಿದೆ. ಆದಷ್ಟು ಶೀಘ್ರವೇ ಶಿಕ್ಷಕರ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಶಿಕ್ಷಕರ ದಿನಾಚರಣೆ (Teacher’s Day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದೇ ವೇಳೆ ತಮ್ಮ ಬಾಲ್ಯದ ನೆನಪು ಮಾಡಿಕೊಂಡ ಸಿಎಂ, ನನಗೆ ಶಿಕ್ಷಕರು ಕಂಡರೆ ಅಪಾರಗೌರವ ಇದೆ. ನನಗೆ ರಾಜಪ್ಪ ಮೇಷ್ಟ್ರು ಕಂಡರೆ ಇಷ್ಟ. ನಾನು 1 ರಿಂದ 4ನೇ ತರಗತಿ ಓದಿರಲಿಲ್ಲ. ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ಸೇರಿಸಿದ್ರು. ಅಂತಹ ಶಿಕ್ಷಕರು ಇರಬೇಕು ಎಂದರು. ಇದನ್ನೂ ಓದಿ: ಶಿಕ್ಷಕರ ವೃತ್ತಿ ಸಾಮಾಜಿಕ ಜವಾಬ್ದಾರಿ: ಸಿದ್ದರಾಮಯ್ಯ
ನಾನು ಹೈಸ್ಕೂಲ್‌ಗೆ ಹೋಗೋವರೆಗೂ ಚಪ್ಪಲಿ ಹಾಕಿರಲಿಲ್ಲ. ಬರೀ ಕಾಲಲ್ಲಿ ನಡೆದಿದ್ದೆ. ಇದಕ್ಕಾಗಿ ಸಿಎಂ ಆದ ಮೇಲೆ ಶೂ ಭಾಗ್ಯ ತಂದೆ. ನಮ್ಮ ಸರ್ಕಾರ ಬಂದ ಮೇಲೆ ವಿದ್ಯಾಸಿರಿ ಕಾರ್ಯಕ್ರಮ ಮಾಡಿದೆ. ನಮ್ಮ ಅಪ್ಪ ಹಾಸ್ಟೆಲ್‌ಗೆ ಸೇರಿಸಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಓದುತ್ತಿದ್ದೆ. ನನ್ನ ಅನುಭವದಿಂದ ವಿದ್ಯಾಸಿರಿ ಯೋಜನೆ ಜಾರಿ ಮಾಡಿದೆ. ನಾನು ಇಲ್ಲಿಯವರೆಗೆ ಬರಲು ಶಿಕ್ಷಣ ಕಾರಣ ಮತ್ತು ರಾಜಪ್ಪ ಮೇಷ್ಟ್ರು ಕಾರಣ. ಶಿಕ್ಷಣ ಬಹಳ ಮಹತ್ವದ್ದು. ಶಿಕ್ಷಣ ಅತ್ಯಗತ್ಯ. ಅರಿವು ಮತ್ತು ಜ್ಞಾನ, ಸ್ವಾಭಿಮಾನ, ಜಾತ್ಯಾತೀತ ಭಾವ ಬಂದಾಗ ಮಾತ್ರ ಶಿಕ್ಷಣ ಪಡೆದಿದ್ದು ಸಾರ್ಥಕವಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ದರ ಏರಿಕೆ ನಿಯಂತ್ರಿಸಲು ಕಡಿಮೆ ಬೆಲೆಗೆ ಈರುಳ್ಳಿ ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ
ಬೆಂಗಳೂರು: ರೈತರು, ಶಿಕ್ಷಕರು, ಸೈನಿಕರು ದೇಶದ ನಿರ್ಮಾತೃಗಳು. ದೇಶದ ಅಭಿವೃದ್ಧಿ ಮತ್ತು ವ್ಯಕ್ತಿತ್ವ ರೂಪಿಸುವವರು ಶಿಕ್ಷಕರು. ಈ ವೃತ್ತಿ ಸಾಮಾಜಿಕ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ಡಾ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತೀ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಅನ್ನಿಸುತ್ತದೆ ಎಂದರು. ಇದನ್ನೂ ಓದಿ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ – ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ. ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು. ಇದನ್ನೂ ಓದಿ: FIRE ಮನವಿಯನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ : ಸಿಎಂ
ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹೋಟೆಲ್‌ಗೆ ನುಗ್ಗಿದ ಟಿಪ್ಪರ್ – ಇಬ್ಬರ ದುರ್ಮರಣ
ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರು ಹಣೆಬರಹ ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ. ಸಾವಿತ್ರಿಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ತಲೆ ಓಪನ್ – ‘ಡಿ’ ಗ್ಯಾಂಗ್ ಭೀಕರ ಕ್ರೌರ್ಯ ಫೋಟೊಗಳಿಂದ ಬಹಿರಂಗ
ಕಾರ್ಯಕ್ರಮದಲ್ಲಿ 20 ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲೆಯ 11 ಶಿಕ್ಷಕರು, ಪಿಯುಸಿ ವಿಭಾಗದಲ್ಲಿ ಒಬ್ಬ ಪ್ರಾಂಶುಪಾಲರು, 9 ಜನ ಉಪನ್ಯಾಸಕರಿಗೆ ಉತ್ತಮ ಶಿಕ್ಷಕ ಮತ್ತು ಉಪನ್ಯಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಚಿವ ಮಧು ಬಂಗಾರಪ್ಪ, ಡಾ. ಸುಧಾಕರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಶಾಲಾ-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ
ಉಡುಪಿ: ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ಪ್ರಾಂಶುಪಾಲನಿಗೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾಗಿದ್ದು, ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.
ಇಂದು (ಸೆ.5) ಶಿಕ್ಷಕರ ದಿನಾಚರಣೆ (Teachers Day) ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಕುಂದಾಪುರ (Kundapura) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವ ಕುರಿತು ಸರ್ಕಾರ ತಡೆ ಹಿಡಿದಿದೆ.ಇದನ್ನೂ ಓದಿ: 2023-24ರಲ್ಲಿ ಅತಿಹೆಚ್ಚು ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳು ಇವರೇ – ಕಿಂಗ್ ಕೊಹ್ಲಿ, ಬಾದ್ ಶಾಗೆ ಅಗ್ರಸ್ಥಾನ
ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ (Hijab Contraversy) ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿರುವಾಗ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ (Congress) ಸರ್ಕಾರ ಇದಕ್ಕೆ ತಡೆ ನೀಡಿದೆ.
ಏನಿದರ ಹಿನ್ನೆಲೆ:
ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದ್ದು, ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದರು. ಆ ಫೋಟೊ ವೈರಲ್ ಆಗಿತ್ತು. ಪ್ರಾಂಶುಪಾಲರ ಪ್ರಶಸ್ತಿ ಹಿಂಪಡೆಯುವಂತೆ ಕೆಲ ಪ್ರಗತಿಪರರು ಒತ್ತಡ ಹಾಕಿದ್ದರು. ಒತ್ತಡಕ್ಕೆ ಮಣಿದ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.ಇದನ್ನೂ ಓದಿ: ಅಮೆರಿಕದ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವು
ಬೆಂಗಳೂರು: ಶಿಕ್ಷಕರ ದಿನಾಚರಣೆ (Teachers Day) ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಇಬ್ಬರು ಉತ್ತಮ ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ಘೋಷಣೆ ಮಾಡಿದೆ.
2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರ ಪ್ರಶಸ್ತಿಗೆ ಮೈಸೂರು (Mysuru) ಜಿಲ್ಲೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹುಣಸೂರಿನ ರಾಮೇಗೌಡ ಎ ಮತ್ತು ಉಡುಪಿ(Udupi) ಜಿಲ್ಲೆ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ಹಾಲಿನ ಖರೀದಿಯಲ್ಲಿ 1.50 ರೂ. ಕಡಿತ – ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ
ಉತ್ತಮ ಉಪನ್ಯಾಸಕ ಪ್ರಶಸ್ತಿ
ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕ ವಾಸುದೇವ ಕೆ ಹೆಚ್
ಬೆಂಗಳೂರು ಉತ್ತರ ಮಲ್ಲೇಶ್ವರಂ 13ನೇ ಅಡ್ಡರಸ್ತೆ ಸರ್ಕಾರಿ ಎಸ್‌ಹೆಚ್‌ವಿಎನ್‌ಎಮ್ ಬಾಲಕಿಯರ ಪದವಿ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ನಾಗವೀಣಾ
ಬೆಳಗಾವಿ ಜಿಲ್ಲೆ ಶಹಪೂರ ಸರ್ಕಾರಿ ಚಿಂತಾಮಣಿ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಗಂಗಾಧರ ಬೆಟಗೇರಿ
ವಿಜಯಪುರ ಜಿಲ್ಲೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸಾವಲ್ ಸಂಗ್ ಎಸ್ ಬಿ. ಇದನ್ನೂ ಓದಿ: ತೋಳಗಳ ಹತ್ಯೆಗೆ ಕಂಡಲ್ಲಿ ಗುಂಡು – ಯೋಗಿ ಸರ್ಕಾರ ಆದೇಶ
ಉತ್ತರ ಕನ್ನಡ ಜಿಲ್ಲೆ ಶಿರಸಿ ವೆಂಕಟರಾವ್ ನೀಲೆಕಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ವಸಂತ ಕೆ ನಾಯಕ್
ಬಾಗಲಕೋಟೆ ಜಿಲ್ಲೆ ಮುಧೋಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕ ಸೈದುಸಾಬ್ ಪಡಸಲಗಿ
ಚಿಕ್ಕೋಡಿ ಜಿಲ್ಲೆ ರಾಯಭಾಗ ನ್ಯೂ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಅಣ್ಣಪ್ಪ ಸದಾಶಿವ ಕುಂಬಾರ
ಬೆಂಗಳೂರು ದಕ್ಷಿಣ ಬಸವನ ಗುಡಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಗೌರಮ್ಮ ಹನುಮಂತಪ್ಪ ಕಡೇಮನಿ ಇದನ್ನೂ ಓದಿ: ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, 1 ಲಕ್ಷ ಜನರಿಗೆ ನೇರ ಉದ್ಯೋಗ: ಪ್ರಿಯಾಂಕ್ ಖರ್ಗೆ
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಬ್ಯಾಲೆನ್ಸ್ ಕಳೆದುಕೊಂಡು ಬಿದ್ದರೂ ನಗುತ್ತಲೇ ಎದ್ದು ನಡೆದ ಪ್ರಸಂಗವೊಂದು ನಡೆದಿದೆ.
ಶಿಕ್ಷಕರ ದಿನಾಚರಣೆಯ (Teachers Day) ಹಿನ್ನೆಲೆಯಲ್ಲಿ ಪಾಟ್ನಾ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಅವರನ್ನು ಆಹ್ವಾನಿಸಲಾಗಿತ್ತು. ಅಂತೆಯೇ ಯೂನಿರ್ವಸಿಟಿಗೆ ಬಂದಿದ್ದ ಬಿಹಾರ ಸಿಎಂ, ಗವರ್ನರ್ ರಾಜೇಂದ್ರ ಅರ್ಲೇಕರ್ ಅನಾವರಣಗೊಳಿಸಿದ ಫಲಕದ ಕಡೆಗೆ ಸಾಗುತ್ತಿದ್ದಾಗ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ.
ಸಿಎಂ ಬೀಳುತ್ತಿದ್ದಂತೆಯೇ ಅವರ ಭದ್ರತಾ ಸಿಬ್ಬಂದಿ ಕೈ ಹಿಡಿದುಕೊಂಡಿದ್ದಾರೆ. ಈ ವೇಳೆ ಸಿಎಂ ಬಿದ್ದ ಜಾಗವನ್ನು ನೋಡಿ ನಗುತ್ತಲೇ ಎದ್ದು ನಡೆದಿದ್ದಾರೆ. ಬಳಿಕ ಕುಂಟುತ್ತಲೇ ವೇದಿಕೆ ಮೇಲೆ ಏರಿದ ಸಿಎಂ ಅವರು, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಇದನ್ನೂ ಓದಿ: 2.5 ಕೋಟಿ ರೂ.ಗೆ ಬೇಡಿಕೆ, ಕೊಡದಿದ್ದರೆ ಎನ್‍ಕೌಂಟರ್ ಬೆದರಿಕೆ – 9 ಪೊಲೀಸರು ಅರೆಸ್ಟ್
ಘಟನೆಯಿಂದ ನಿತೀಶ್ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಅವರು ಹೇಗೆ ಬ್ಯಾಲೆನ್ಸ್ ಕಳೆದುಕೊಂಡು ಬಿದ್ದರು ಎಂಬುದು ತಿಳಿದುಬಂದಿಲ್ಲ.
ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರಿಗೆ ಅಕ್ಷರ ಮಾತೆ ‘ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಲಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರು
ಶಿವಮೊಗ್ಗದ ಫೌಜಿಯ ಸರವತ್, ಚಿಕ್ಕಬಳ್ಳಾಪುರದ ಮಂಜುನಾಥ್, ದಾವಣಗೆರೆಯ ಬಿ.ಕೆ.ಸತೀಶ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಂ.ಜಿ.ಸುಜಾತ, ವಿಜಯಪುರದ ಮಹಮ್ಮದ ಹಾಶೀಮಸಾಬ ಹುಸೇನಸಾಬ ಲಷ್ಕರಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪ್ರತಾಪ ಶಂಕರ ಜೋಡಟ್ಟಿ, ಬಾಗಲಕೋಟೆಯ ಮೊಹಮದ್ ಹುಸೇನ ಅಬ್ದುಲ್ ಖಾದರ ಸೌದಾಗರ, ಬೀದರ್‌ನ ಮಾರ್ತಂಡಪ್ಪ ತೆಳಗೇರಿ, ಶಿರಸಿಯ ಅಕ್ಷತಾ ಅನಿಲ ಬಾಸಗೋಡ, ಧಾರವಾಡದ ಶೇಕಪ್ಪ ಭೀಮಪ್ಪ ಕೇಸರಿ, ಮೈಸೂರಿನ ಭಾಸ್ಕರ, ಹಾಸನದ ಎ.ಬಿ.ಮೂರ್ತಿ, ಬಳ್ಳಾರಿಯ ಎಂ.ಆರ್.ವನಜಾಕ್ಷಮ್ಮ, ರಾಯಚೂರಿನ ಸೈಯದಾ ಸಾಜೀದಾ ಫಾತೀಮಾ, ಮಂಡ್ಯದ ಜಿ.ಪ್ರಶಾಂತ, ಚಾಮರಾಜನಗರ ಜಿಲ್ಲೆಯ ವಿ.ವೀರಪ್ಪ, ತುಮಕೂರಿನ ಎಂ.ಜಿ.ಗಂಗಾಧರ, ಕೊಡಗಿನ ಬಿ.ಟಿ.ಪೂರ್ಣೇಶ್, ಉತ್ತರ ಕನ್ನಡದ ಮಂಜುನಾಥ ಹರಿಕಂತ್ರ, ಹಾವೇರಿಯ ಸೋಮಪ್ಪ ಫಕಿರಪ್ಪ ಕಠಾರಿ. ಇದನ್ನೂ ಓದಿ: ಪಾರ್ಲಿಮೆಂಟ್ ಚುನಾವಣೆ ಒಳಗೆ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಈಶ್ವರಪ್ಪ
ಪ್ರೌಢ ಶಾಲಾ ಶಿಕ್ಷಕರು
ಉತ್ತರ ಕನ್ನಡದ ಪ್ರಕಾಶ ನಾಯ್ಕ, ಧಾರವಾಡದ ಸುರೇಶ್ ಬಿ.ಮುಗಳಿ, ಚಿತ್ರದುರ್ಗದ ಕೆ.ಟಿ.ನಾಗಭೂಷಣ್, ಮಧುಗಿರಿಯ ಜಿ.ಹೆಚ್.ರೇಣುಕರಾಜ್, ಮಂಡ್ಯದ ಜಿ.ಸಿ.ರಜನಿ, ಕೊಪ್ಪಳದ ಬಸಪ್ಪ ವಾಲಿಕರ, ಬೆಂಗಳೂರಿನ ಪಿ.ಜಿ.ಇಂದಿರಾ, ಶಿವಮೊಗ್ಗದ ವಿಜಯ ಆನಂದರಾವ್, ಮೈಸೂರಿನ ಎಸ್.ಹರ್ಷ, ಉಡುಪಿಯ ನರೇಂದ್ರ, ಚಿಕ್ಕೋಡಿಯ ಶ್ರೀಶೈಲ ಸ ಗಸ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರು: ಮುಂಬರುವ ದಿನಗಳಲ್ಲಿ ಪ್ರತಿವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ನೀಡಲಾಗಿದೆ. 19 ಸಾವಿರ ಕೋಟಿ ರೂ. ಶಿಕ್ಷಕರ ಸಂಬಳ, 5,000 ಕೋಟಿ ರೂ. ಶಾಲೆಗಳ ಅಭಿವೃದ್ಧಿಗಾಗಿ ನೀಡಲಾಗಿದೆ. ಒಂದೇ ವರ್ಷದಲ್ಲಿ 8,101 ಶಾಲಾ ಕೊಠಡಿಗಳನ್ನು ನಿರ್ಮಿಸುವ ರಾಜ್ಯದ ಇತಿಹಾಸದಲ್ಲೇ ಮೊದಲು. 23 ಸಾವಿರ ಶಾಲಾ ಕೊಠಡಿಗಳನ್ನು ಪುನಃ ನಿರ್ಮಿಸಬೇಕಾಗಿದ್ದು, ಪ್ರಥಮ ಹಂತದಲ್ಲಿ 8101 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಉತ್ತಮ ಶಾಲೆಗಳಿದ್ದರೂ, ಉತ್ತಮ ಶಾಲಾ ಕೊಠಡಿಗಳು ಇಲ್ಲದಿದ್ದ ಕಾರಣ , ಈ ದಾಖಲೆಯ ಕಾರ್ಯಕ್ರಮವನ್ನು ಮಾಡಲಾಗಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ: ಶೌಚಾಲಯ ವ್ಯವಸ್ಥೆಯಿಲ್ಲದ ಕಾರಣ ಮಕ್ಕಳು ಶಾಲೆಗೆ ಬರುವುದನ್ನು ನಿಲ್ಲಿಸಿರುವುದನ್ನು ಗಮನಿಸಿ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಹೆಣ್ಣು ಮಕ್ಕಳಿಗೆ ಹಾಗೂ ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳನ್ನು ಪ್ರತ್ಯೇಕವಾಗಿ ಒಂದೇ ವರ್ಷದಲ್ಲಿ ನಿರ್ಮಿಸುವ ಯೋಜನೆಯನ್ನು ರೂಪಿಸಲಾಗಿದೆ. ಆಗಸ್ಟ್ 15 ರಂದು ಈ ಯೋಜನೆಯನ್ನು ಘೋಷಿಸಲಾಗಿದ್ದು, ಮುಂದಿನ ಆಗಸ್ಟ್ 15 ರೊಳಗೆ ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 4,000 ಅಂಗನವಾಡಿ ಕೇಂದ್ರಗಳನ್ನು ಮುಂದಿನ ಆಗಸ್ಟ್ 15 ರೊಳಗೆ ನಿರ್ಮಿಸಲಾಗವುದು. 15,000 ಶಿಕ್ಷಕರ ನೇಮಕಾತಿ ಮಾಡುವ ಮೂಲಕ ಶಿಕ್ಷಣ ಕಾರ್ಯದೊತ್ತಡ ಕಡಿಮೆಗೊಳಿಸಲಾಗುವುದು ಎಂದು ತಿಳಿಸಿದರು.
ಚಾರಿತ್ರ್ಯ ಕಟ್ಟುವ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ : ಶಿಕ್ಷಣದ ಗುಣಮಟ್ಟ ಹಾಗೂ ವ್ಯವಸ್ಥಿತ ಶಾಲೆಗಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದ್ದು, ಶಾಲಾಮಂಡಳಿ ಹಾಗೂ ಶಿಕ್ಷಕರು ಇವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶಿಕ್ಷಕರಿಗೆ ಕಿರುಕುಳ ತಪ್ಪಿಸಲು ನಿಯಮಗಳ ಸರಳೀಕರಣ ಹಾಗೂ ಶಿಸ್ತನ್ನು ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಯಾವುದೇ ಪರಿಶೀಲನೆಯಿಲ್ಲದೇ ಹೊಸ ಶಾಲೆಗಳ ಸ್ಥಾಪನೆಗೆ ಎನ್ಓಸಿ ನೀಡುತ್ತಿರುವ ಪ್ರಕರಣಗಳನ್ನು ಗಮನಿಸಲಾಗಿದೆ. ಇದು ಮಕ್ಕಳ ಶಿಕ್ಷಣ ಹಾಗೂ ಗುಣಮಟ್ಟದ ಮೇಲೆ ಪ್ರಭಾವ ಬೀರುತ್ತವೆ.
ಸರ್ಕಾರದ ನಿಯಮಗಳನ್ನು ಪಾಲಿಸದವರ ವಿರುದ್ಧ ಹಾಗೂ ಇದಕ್ಕೆ ಪ್ರೋತ್ಸಾಹ ನೀಡಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ, ಅಲ್ಲಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಶಿಕ್ಷಕರ ಕರ್ತವ್ಯ ನಿರ್ವಹಿಸಲು ಉತ್ತಮ ವಾತಾವರಣ, ಕರ್ತವ್ಯ ಪರಿಸರವನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಲಿದ್ದು, ಮಾನವೀಯತೆ ಹಾಗೂ ವಾಸ್ತವಾಂಶದ ಆಧಾರದ ಮೇಲೆ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಚಾರಿತ್ರ್ಯವನ್ನು ಕಟ್ಟುವ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.
ಶಿಕ್ಷಣದ ಜೀವಾಳ ಶಿಕ್ಷಕರು : ಶಿಕ್ಷಣದ ಜೀವಾಳ ಶಿಕ್ಷಕರು. ಶಿಕ್ಷಕರಿಲ್ಲದೆ ಶಿಕ್ಷಣವನ್ನು ಊಹಿಸಲೂ ಸಾಧ್ಯವಿಲ್ಲ. ಮಾನವ ಸಂಕುಲದ ಸಮಗ್ರ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ಗುರುಗಳು ವಹಿಸಿದ್ದಾರೆ. ಜ್ಞಾನದ ಗುರುಗಳು, ಗುರುಕುಲದ ಗುರುಗಳು, ಹಲವಾರು ರಂಗದಲ್ಲಿ ವಿವಿಧ ಗುರುಗಳಿದ್ದಾರೆ. ಆಧುನಿಕ ವ್ಯವಸ್ಥೆಯಲ್ಲಿ ಗುರುವಿನ ಪಾತ್ರ ನಿರ್ವಹಿಸುತ್ತಾರೆ ಎಂದರು.
ಬದುಕು ಎಲ್ಲಕ್ಕಿಂತ ದೊಡ್ಡ ಗುರು: ಬದುಕು ಎಲ್ಲಕ್ಕಿಂತ ದೊಡ್ಡ ಗುರು. ಬದುಕಿನಲ್ಲಿ ಕಲಿಯುವ ಪ್ರತಿಯೊಂದನ್ನು ಮನದಾಳದಲ್ಲಿ ಇಟ್ಟುಕೊಂಡರೆ, ಪ್ರತಿದಿನ, ಪ್ರತಿ ಹಂತದಲ್ಲಿ ನಾವು ಕಲಿಯಲು ಸಾಧ್ಯವಿದೆ. ಬದುಕು ಮೊದಲು ಪರೀಕ್ಷೆ ನೀಡುತ್ತದೆ ನಂತರ ಫಲಿತಾಂಶ ಹಾಗೂ ಪಾಠ. ಬದುಕಿನ ಅನುಭವದಿಂದ ಪಾಠವನ್ನು ಕಲಿಯುತ್ತೇವೆ. ಆದರೆ ಈ ಬದುಕಿನಿಂದ ಪಾಠ ಕಲಿಯಲು ಸಿದ್ಧ ಮಾಡುವ ಕೆಲಸ ಶಿಕ್ಷಕರು ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಗೆ ಜ್ಞಾನ, ಸರಿ ತಪ್ಪು ಎಂಬ ಪ್ರಜ್ಞೆ, ಪಾಪ ಪುಣ್ಯ ಎಂಬ ವಿಚಾರ ಬರುವುದು ಶಿಕ್ಷಕರು ನೀಡುವ ಜ್ಞಾನದಿಂದಾಗಿದೆ. ಶಿಕ್ಷಕರ ಕೆಲಸ ಅತ್ಯಂತ ಕಠಿಣ ಎಂದರು.
ಶಿಕ್ಷಕರ ಕರ್ತವ್ಯ ಪ್ರಜ್ಞೆ ಮೆಚ್ಚುವಂಥದ್ದು. ಮಗುವಿನ ಹಂತಕ್ಕೆ ಇಳಿದು ಅವರಿಗೆ ಅರ್ಥವಾಗುವ ಹಾಗೆ ಪಾಠ ಮಾಡಿ, ಜ್ಞಾನ, ತತ್ವಜ್ಞಾನ, ತಂತ್ರಜ್ಞಾನ, ತಂತ್ರಾಂಶ ಜ್ಞಾನವನ್ನು ತುಂಬಿರುವ ಗುರುಗಳಿಗೆ ಮೊದಲನೇ ನಮನಗಳನ್ನು ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಲ್ಲಿ-ಎಷ್ಟು ಮಳೆಯಾಗಿದೆ?
ಚಾರಿತ್ರ್ಯವನ್ನು ಕಟ್ಟಬೇಕು : ನಮ್ಮ ದೇಶಕ್ಕೆ ಬಹಳ ದೊಡ್ಡ ಚರಿತ್ರೆ ಇದೆ. ಆದರೆ ಬೇಕಾಗಿರುವುದು ಚಾರಿತ್ರ್ಯ. ಚಾರಿತ್ರ್ಯ ಆತ್ಮಸಾಕ್ಷಿಯ ಬೋಧನೆಯಿಂದ ಬರುತ್ತದೆ. ಸರಿ ತಪ್ಪು ಎನ್ನುವ ಭಾವ ಪ್ರತಿಯೊಬ್ಬರಲ್ಲೂ ಬಂದಾಗ ಖಂಡಿತವಾಗಿಯೂ ಉತ್ತಮ ಚಾರಿತ್ರ್ಯ ಮೂಡುತ್ತದೆ. ಆ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಚಾರಿತ್ರ್ಯವನ್ನು ಕಟ್ಟುವ ಕೆಲ ಗುರುಗಳು ಮಾಡುತ್ತಿದ್ದಾರೆ. ಅರಿವಿನಿಂದ, ಪ್ರಜ್ಞಾಪೂರ್ವಕವಾಗಿ ಕೆಲಸ ಮಾಡಿದಾಗ ಅದರ ಪರಿಣಾಮ ದೊಡ್ಡ ಪ್ರಮಾಣದಲ್ಲಿ ಆಗುತ್ತದೆ. ಪ್ರತಿಯೊಬ್ಬ ಗುರುಗಳು ಚಾರಿತ್ರ್ಯವನ್ನು ಕಟ್ಟುವ ಕೆಲಸವನ್ನು ಮಾಡಬೇಕು. ಈ ದೇಶದಲ್ಲಿ ಆಚಾರ್ಯರಿದ್ದಾರೆ. ಆದರೆ ಬೇಕಾಗಿರುವುದು ಆಚರಣೆ. ಆಚರಣೆ ತರಲು ಬುನಾದಿ ಶಿಕ್ಷಕರೇ ಮಾಡಬೇಕು. ಇದಾದರೆ ವ್ಯಕ್ತಿ ಯಶಸ್ವಿಯಾಗುತ್ತಾನೆ, ಸಮಾಜಕ್ಕೂ ಕೊಡುಗೆಯನ್ನು ನೀಡುತ್ತಾನೆ. ಈ ಎರಡು ಕೆಲಸ ಮಾಡಬೇಕು ಎಂದರು.
ಶ್ರೇಷ್ಠ ಶಿಕ್ಷಕಿ: ರಾಧಾಕೃಷ್ಣನ್ ಒಬ್ಬ ಶ್ರೇಷ್ಠ ಗುರುಗಳು ಹಾಗೂ ಮೇಧಾವಿಗಳು. ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯಾಗಿ ಮಾಡಿ ಶಿಕ್ಷಕರ ಸ್ಥಿತಿಗತಿ, ಚರ್ಚೆ, ಪರಿಹಾರ, ಒಳ್ಳೆ ಕೆಲಸ ಮಾಡಿದವರನ್ನು ಗುರುತಿಸುವ ಪರಂಪರೆ ಇದೆ. ಸಾವಿತ್ರಿ ಬಾಯಿ ಫುಲೆ ಅವರು ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ದೊಡ್ಡ ಬದಲಾವಣೆಯನ್ನು ತಂದ ಶ್ರೇಷ್ಠ ವ್ಯಕ್ತಿ. ಈ ಜಗತ್ತಿನಲ್ಲಿ ಬದಲಾವಣೆಗಳು ಕೇವಲ ವ್ಯಕ್ತಿಯಿಂದ ಸಾಧ್ಯವಾಗಿದೆ. ದೇಶ ಕಂಡ ಅಪ್ರತಿಮ ಶ್ರೇಷ್ಠ ಶಿಕ್ಷಕಿ. ಶಿಕ್ಷಣದಲ್ಲಿ ಕ್ರಾಂತಿ ತಂದ ಸಾವಿತ್ರಿ ಬಾಯಿ ಫುಲೆ ಅವರನ್ನು ಸ್ಮರಿಸಬೇಕು. ವರ್ಷವಿಡೀ ಕಷ್ಟಪಟ್ಟು ಮಕ್ಕಳಿಗೆ ಜ್ಞಾನಾರ್ಜನೆ ಮಾಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವವರು ಶಿಕ್ಷಕರು. ಎಲ್ಲರಿಗೂ ಗೌರವ ತರುವ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಪಡೆದ ಶಿಕ್ಷಕರನ್ನು ಅಭಿನಂದಿಸಿದರು. ಇದನ್ನೂ ಓದಿ: ತಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಅಂತ ಚಾಮುಂಡೇಶ್ವರಿ ಮೇಲೆ ಆಣೆ ಮಾಡಲಿ – ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲ್
ಬದಲಾವಣೆಗೆ ತೆರೆದುಕೊಳ್ಳಬೇಕು: ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಿದೆ. ಶಿಕ್ಷಣ ನೀತಿ, ವ್ಯವಸ್ಥೆ, ಗುರುಗಳು, ವಿದ್ಯಾರ್ಥಿಗಳು ಎಲ್ಲಾ ವಿಚಾರಗಳನ್ನು ಆಮೂಲಾಗ್ರವಾಗಿ ಬದಲಾವಣೆ ಮಾಡಬೇಕು. ಶಿಕ್ಷಣ ಯಾವ ರೀತಿ ಇರಬೇಕು, ಯಾತಕ್ಕಾಗಿ ಶಿಕ್ಷಣ ಎಂಬ ಮೂಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ. ವಿಜ್ಞಾನ ಯುಗಕ್ಕೆ, ಚಾರಿತ್ರ್ಯವನ್ನು ಕಟ್ಟಲು ನಮ್ಮ ಮಕ್ಕಳನ್ನು ತಯಾರು ಮಾಡುತ್ತಿದ್ದೇವೋ ಇಲ್ಲವೋ. ದೇಶಪ್ರೇಮದ ಕಲ್ಪನೆ ನಮ್ಮ ವಿದ್ಯಾರ್ಥಿಗಳಿಗೆ ಮುಟ್ಟಿಸಲು ಸಾಧ್ಯವಾಗಿದೆಯೇ ಎಂಬ ಬಗ್ಗೆ ಬದಲಾವಣೆ ಆಗುವ ಅವಶ್ಯಕತೆ ಇದೆ. ಜಗತ್ತು ಬದಲಾಗುತ್ತಿದೆ. ಅದಕ್ಕೆ ತಕ್ಕ ಹಾಗೆ ನಾವು ಕೂಡ ಬದಲಾವಣೆ ತಂದುಕೊಳ್ಳಬೇಕು. ಪ್ರತಿಯೊಬ್ಬ ಗುರುವೂ ವಿದ್ಯಾರ್ಥಿ ಸ್ವರೂಪವನ್ನು ಪಡೆದುಕೊಳ್ಳಬೇಕು. ಸಾಯುವವರೆಗೂ ನಾವು ವಿದ್ಯಾರ್ಥಿಗಳೇ ಎಂದು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಡಿ ಬಾಸ್ ದರ್ಶನ್ ಕಲಿಯುಗದ ಕರ್ಣ ಅಂಬರೀಶ್ ಅವರನ್ನು ಎಷ್ಟು ಇಷ್ಟಪಡುತ್ತಿದ್ದರು ಎಂಬುದು ತಿಳಿದೇ ಇದೆ. ಅದೇ ರೀತಿ ಅಂಬರೀಶ್-ಸುಮಲತಾ ದಂಪತಿ ಸಹ ದಾಸನನ್ನು ತಮ್ಮ ಮನೆ ಮಗನಂತೆ ಕಾಣುತ್ತಾರೆ. ಹೀಗಾಗಿ ಹಿರಿಯರಿಗೆ ಗೌರವ ನೀಡುವ ಸಮಯ ಸಿಕ್ಕಾಗಲೆಲ್ಲ ಡಿ ಬಾಸ್ ಇವರನ್ನು ನೆನದು ಪೋಸ್ಟ್ ಹಾಕುತ್ತಾರೆ. ಅದೇ ರೀತಿ ಇದೀಗ ಶಿಕ್ಷಕರ ದಿನಾಚರಣೆಯಂದು ವಿಶೇಷ ಪೋಸ್ಟ್ ಹಾಕಿದ್ದಾರೆ.
ಶಿಕ್ಷಕರ ದಿನಾಚರಣೆ ಅಂಗವಾಗಿ ದರ್ಶನ್ ವಿಶೇಷ ಪೋಸ್ಟ್ ಹಾಕಿದ್ದು, ಈ ಮೂಲಕ ತಮ್ಮ ಜೀವನದಲ್ಲಿ ಪಾಠ ಕಲಿಸಿದ ಗುರುವಿನ ಸಮಾನರಾದ ಮಹತ್ವದ ವ್ಯಕ್ತಿಗಳನ್ನು ನೆನೆದಿದ್ದಾರೆ. ತಮ್ಮ ತಂದೆ, ತಾಯಿ ತುಗುದೀಪ ಶ್ರೀನಿವಾಸ್ ದಂಪತಿ ಹಾಗೂ ಅಂಬರೀಶ್- ಸುಮಲತಾ ದಂಪತಿಯ ಫೋಟೋ ಹಾಕಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಲುಗಳನ್ನು ಬರೆದಿರುವ ಅವರು, ಹುಟ್ಟಿನಿಂದ ಸಾಯುವ ವರೆಗೂ ಸರಿಯಾದ ಮಾರ್ಗದರ್ಶನ ನೀಡಿ ನಮ್ಮನ್ನು ನಮ್ಮ ಗುರಿಯತ್ತ ಕೊಂಡೊಯ್ಯಲು ಶ್ರಮಿಸುವ ಶಿಕ್ಷಕರಿಗೆ, ಗುರು ಹಿರಿಯರಿಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹುಟ್ಟಿನಿಂದ ಸಾಯುವವರೆಗೂ ಸರಿಯಾದ ಮಾರ್ಗದರ್ಶನ ನೀಡಿ ನಮ್ಮನ್ನು ನಮ್ಮ ಗುರಿಯತ್ತ ಕೊಂಡೊಯ್ಯಲು ಶ್ರಮಿಸುವ ಶಿಕ್ಷಕರಿಗೆ, ಗುರು ಹಿರಿಯರಿಗೆ ಶಿಕ್ಷಕರ ದಿನಾಚರಣೆಯ ಹಾರ್ಧಿಕ ಶುಭಾಶಯಗಳು ????
ಗುರು, ಹಿರಿಯರನ್ನು ನೆನೆಯುವ ಸಂದರ್ಭ ಬಂದಾಗಲೆಲ್ಲ ಅವರ ತಂದೆ ತಾಯಿ ಹಾಗೂ ಅಂಬರೀಶ್- ಸುಮಲತಾರನ್ನು ಡಿ ಬಾಸ್ ನೆನೆಯುತ್ತಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲೂ ಸಹ ವಿಶೇಷ ಸಾಲುಗಳ ಮೂಲಕ ಭಾವನಾತ್ಮಕವಾಗಿ ಶುಭಕೋರುತ್ತಾರೆ. ಸುಮಲತಾ ಅಂಬರೀಶ್ ಸಹ ದರ್ಶನ್ ಹುಟ್ಟುಹಬ್ಬಕ್ಕೆ ಮುದ್ದಿನ ಮಗ ಎಂದೇ ಸಂಬೋೀಧಿಸಿ ಶುಭಾಶಯ ತಿಳಿಸುತ್ತಾರೆ.
ಆಗಸ್ಟ್ 27ರಂದು ಸುಮಲತಾ ಅಂಬರೀಶ್ ಹುಟ್ಟುಹಬ್ಬದಂದು ವಿಶೇಷ ಪೋಸ್ಟ್ ಮೂಲಕ ದರ್ಶನ್ ಶುಭ ಕೋರಿದ್ದರು. ಮದರ್ ಇಂಡಿಯಾ ಸುಮಲತಾ ಅಂಬರೀಶ್ ಅಮ್ಮನವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದರು. ಅದೇ ರೀತಿ ಸುಮಲತಾ ಅಂಬರೀಶ್ ಸಹ ಮಗ ಎಂದು ಹೇಳಿಯೇ ಹುಟ್ಟುಹಬ್ಬದ ಶುಭಾಶಯ ಕೋರುತ್ತಾರೆ.
“ಮದರ್ ಇಂಡಿಯಾ” Sumalatha Ambareesh ಅಮ್ಮರವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು.????????
ದರ್ಶನ್ ಹಾಗೂ ಅಂಬರೀಶ್ ಕುಟುಂಬ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಾರೆ. ಈ ಮೂಲಕ ತಮ್ಮ ಪ್ರೀತಿಯನ್ನು ಮೆರೆಯುತ್ತಾರೆ. ಅಂಬರೀಶ್ ಕುಟುಂಬದ ಮಗನಂತೆ ದರ್ಶನ್ ಇದ್ದಾರೆ. ಹೀಗಾಗಿ ದರ್ಶನ್‍ಗೆ ಅಂಬರೀಶ್ ಹಾಗೂ ಸುಮಲತಾ ಎಂದರೆ ಎಲ್ಲಿಲ್ಲದ ಪ್ರೀತಿ. ಇಂದು ಶಿಕ್ಷಕರ ದಿನಾಚರಣೆ ದಿನ ಸಹ ತಂದೆ ತಾಯಿ ಜೊತೆ ಅಂಬರೀಶ್ ಅವರನ್ನೂ ನೆನೆದಿದ್ದಾರೆ.
ಬೆಂಗಳೂರು: ನಮ್ಮ ಬದುಕು ಬದಲಾಯಿಸಿದ ಶಿಕ್ಷಕರಿಗೆ ಇಂದು ಕೃತಜ್ಞತೆ ಸಲ್ಲಿಸುವ ದಿನ. ಅಲ್ಲದೆ ದಾರಿ ತೋರಿರುವ ಗುರುವನ್ನು ಸ್ಮರಿಸಿಕೊಳ್ಳುವ ದಿನ ಇಂದಾಗಿದೆ. ಇಂದು ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಎಲ್ಲೆಡೆ ಶಿಕ್ಷಕರಿಗೆ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ
🔹ಖಾಸಗಿ ಶಾಲೆಗಳ 40,000+ ಶಿಕ್ಷಕರು ಕೆಲಸ ಕಳೆದುಕೊಂಡಿರುವಾಗ 🔹2,00,000+ ಶಿಕ್ಷಕರಿಗೆ ಸಂಬಳವಿಲ್ಲದೇ ಒದ್ದಾಡುತ್ತಿರುವಾಗ 🔹ಮಕ್ಕಳ ಭವಿಷ್ಯ ರೂಪಿಸುವವರು ತಳ್ಳುಗಾಡಿ ವ್ಯಾಪಾರ, ಗಾರೆ ಕೆಲಸ ಮಾಡುವಾಗ
ಶಿಕ್ಷಕರ ದಿನಾಚರಣೆಯಂದೇ ಸರಣಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಖಾಸಗಿ ಶಾಲೆಗಳ 40,000ಕ್ಕೂ ಹೆಚ್ಚು ಶಿಕ್ಷಕರು ಕೆಲಸ ಕಳೆದುಕೊಂಡಿರುವಾಗ, 2,00,000ಕ್ಕೂ ಹೆಚ್ಚು ಶಿಕ್ಷಕರಿಗೆ ಸಂಬಳವಿಲ್ಲದೇ ಒದ್ದಾಡುತ್ತಿರುವಾಗ, ಮಕ್ಕಳ ಭವಿಷ್ಯ ರೂಪಿಸುವವರು ತಳ್ಳುಗಾಡಿ ವ್ಯಾಪಾರ, ಗಾರೆ ಕೆಲಸ ಮಾಡುವಾಗ ಶಿಕ್ಷಣ ಕ್ಷೇತ್ರವನ್ನು ಸರಿದಾರಿಗೆ ತರಲು ಸರ್ಕಾರದ ಪ್ಲಾನ್ ಏನು ಎಂದು ಪ್ರಶ್ನಿಸಿ ಶಿಕ್ಷಕರಿಗೆ ಶಿಕ್ಷೆ ಎಂಬ ಹ್ಯಾಶ್‍ಟ್ಯಾಗ್ ಬಳಸಿ ಬರೆದುಕೊಂಡಿದ್ದಾರೆ.
ಈ ಕುರಿತಂತೆ ಸರ್ಕಾರ ಈ ಕೂಡಲೇ ನಿದ್ದೆಯಿಂದೆದ್ದು ಹಳಿತಪ್ಪಿರುವ ಶಿಕ್ಷಣದ ವ್ಯವಸ್ಥೆಯನ್ನು ಸರಿದಾರಿಗೆ ತರಲು ಹಾಗೂ ಶಿಕ್ಷಕರಿಗೆ ನೆರವಾಗಲು ಕಾಂಗ್ರೆಸ್ ನ ಹಕ್ಕೊತ್ತಾಯಗಳನ್ನು ಮುಂದಿಡುತ್ತಿದ್ದೇನೆ.#ShikshakarigeShikshepic.twitter.com/wKUnQ8IAI2
ರಾಜ್ಯದ 80 ಲಕ್ಷ ವಿದ್ಯಾರ್ಥಿಗಳ ಪೈಕಿ ಶೇ.62.5ರಷ್ಟು ಮಕ್ಕಳಿಗೆ ಮಾತ್ರ ಸ್ಮಾರ್ಟ್ ಫೋನ್, ಲ್ಯಾಪ್‍ಟಾಪ್‍ನ ಲಭ್ಯತೆ ಇದೆ. ಶೇ.53.75ರಷ್ಟು ಮಕ್ಕಳಿಗೆ ಮಾತ್ರ ಇಂಟರ್ನೆಟ್ ಸಂಪರ್ಕ ಲಭ್ಯವಿದೆ. ಈ ಎಲ್ಲಾ ತಂತ್ರಜ್ಞಾನದ ಲಭ್ಯತೆ ಇಲ್ಲದ ಮಕ್ಕಳು ಆನ್‍ಲೈನ್ ಶಿಕ್ಷಣ ಪಡೆಯುವುದಾದರೂ ಹೇಗೆ ಎಂದು ಕೂಡ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸರ್ಕಾರ ಈ ಕೂಡಲೇ ನಿದ್ದೆಯಿಂದೆದ್ದು ಹಳಿತಪ್ಪಿರುವ ಶಿಕ್ಷಣದ ವ್ಯವಸ್ಥೆಯನ್ನು ಸರಿದಾರಿಗೆ ತರಲು ಹಾಗೂ ಶಿಕ್ಷಕರಿಗೆ ನೆರವಾಗಲು ಕಾಂಗ್ರೆಸ್ಸಿನ ಹಕ್ಕೊತ್ತಾಯಗಳನ್ನು ಮುಂದಿಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
Former President of India, Bharat Ratna Shri. S. Radhakrishnan's birth anniversary is celebrated as #TeachersDay.
Tributes to the lakhs of teachers who through their hard work and service, guide millions of young minds and help in building a bright future for India pic.twitter.com/lfklhuZwvT
ಬೆಳಗಾವಿ: ಹಿಂದುಳಿದ ತಾಲೂಕಿನಲ್ಲಿ ಅದೊಂದು ಕುಗ್ರಾಮ. ಶಿಕ್ಷಣದ ಬದಲು ಈ ಗ್ರಾಮದಲ್ಲಿ ಕೊಲೆ ಸುಲಿಗೆ, ಮಚ್ಚುಲಾಂಗು ಅಬ್ಬರ ಜಾಸ್ತಿಯಾಗಿತ್ತು. ಹೀಗಿದ್ದ ಗ್ರಾಮದಲ್ಲಿ ಇದೀಗ ಶಿಕ್ಷಣದ ಕಂಪು ಪಸರಿಸಿ ಮನಗೊಬ್ಬರಂತೆ ಶಿಕ್ಷಕರಿದ್ದಾರೆ. ಸ್ವಾಮೀಜಿಯವರ ನಿಸ್ವಾರ್ಥ ಸೇವೆಯಿಂದ ಗ್ರಾಮದ ಮನೆಯಲ್ಲೊಬ್ಬರು ಶಿಕ್ಷಕರಿದ್ದಾರೆ. ಗ್ರಾಮವನ್ನ ಇದೀಗ ರಾಜ್ಯದಲ್ಲಿ ಶಿಕ್ಷಕರ ತವರೂರು ಎಂದೇ ಗುರುತಿಸಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮ ಇದೀಗ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಗ್ರಾಮ. ಈ ಗ್ರಾಮದಲ್ಲಿ ಮನಗೆ ಒಬ್ಬರಂತೆ ಶಿಕ್ಷರಿದ್ದಾರೆ ಅಂದ್ರೆ ನೀವು ನಂಬಲೇಬೇಕು. ನಲತ್ತೈದು ವರ್ಷದ ಹಿಂದೆ ಇಂಚಲ ಗ್ರಾಮದಲ್ಲಿ ಕೊಲೆ ಸುಲಿಗೆ ಅಕ್ರಮ ಚಟುವಟಿಕೆಗಳೇ ಹೆಚ್ಚಾಗಿತ್ತು. ಇದನ್ನ ಕಂಡ ಅದೇ ಗ್ರಾಮದಲ್ಲಿರುವ ಇಂಚಲ ಮಠದ ಶಿವಾನಂದ ಭಾರತಿ ಮಹಾಸ್ವಾಮಿಗಳು ಎಲ್ಲರೂ ವಿದ್ಯಾವಂತರಾದರೆ ನೆಮ್ಮದಿ ನೆಲಸಬಹುದು ಅಂದುಕೊಂಡು ಶಾಲೆಯನ್ನ ಪ್ರಾರಂಭಿಸುತ್ತಾರೆ.
1975ರಲ್ಲಿ ಪ್ರೌಢ ಶಿಕ್ಷಣ, 1982ರಲ್ಲಿ ಪಿಯು ಕಾಲೇಜು, 1985ರಲ್ಲಿ ಡಿಎಡ್ ಕಾಲೇಜು ಆರಂಭ ಮಾಡ್ತಾರೆ. ಹೀಗೆ ಆರಂಭದಲ್ಲಿ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳಿದ್ದರು. ಇದೀಗ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇಲ್ಲಿ ಓದುತ್ತಿದ್ದಾರೆ. ಇಂಚಲ ಗ್ರಾಮದಲ್ಲಿ ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆಯಿದ್ದು, ಸುಮಾರು ಒಂದು ಸಾವಿರಕ್ಕೂ ಅಧಿಕ ಮನೆಗಳಿವೆ. ಗ್ರಾಮದಲ್ಲಿ ಇಲ್ಲಿವರೆಗೂ ಸುಮಾರು ಒಂಬತ್ತನೂರಕ್ಕೂ ಅಧಿಕ ಶಿಕ್ಷಕರಿದ್ದು, ಎಲ್ಲರೂ ಸರ್ಕಾರಿ ಶಿಕ್ಷರೇ ಎಂಬುದು ವಿಶೇಷ. ಕೆಲವು ಮನೆಗಳಲ್ಲಿ ಮೂರು ನಾಲ್ಕರಿಂದ ಹನ್ನೆರಡು ಜನರವರೆಗೂ ಶಿಕ್ಷಕರಿದ್ದಾರೆ. ಸತಾರ್ ಇಸ್ಮಾಯಿಲ್ ಸಾಬ್ ಎಂಬವರ ಮನೆಯಲ್ಲೇ ಹನ್ನೆರಡು ಜನ ಶಿಕ್ಷರಿದ್ದಾರೆ.
ಕೇವಲ ಶಿಕ್ಷಣ ಇಲಾಖೆಯಲ್ಲಿ ಮಾತ್ರ ಸೇವೆ ಸಲ್ಲಿಸುತ್ತಿಲ್ಲ, 300ಕ್ಕೂ ಹೆಚ್ಚು ಯುವಕರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈಗಾಗಲೇ 70ಕ್ಕೂ ಹೆಚ್ಚು ಸೈನಿಕರು ನಿವೃತ್ತರಾಗಿ ಗ್ರಾಮಕ್ಕೆ ಮರಳಿದ್ದಾರೆ. ಇದಲ್ಲದೇ ಡಾಕ್ಟರ್, ಇಂಜಿನಿಯರ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ.