Tag: ಶಿಕ್ಷಣ ಸಂಸ್ಥೆ

  • ರಾಮಮಂದಿರ ಉದ್ಘಾಟನೆ – ಜ.22ರಂದು ಉತ್ತರ ಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

    ರಾಮಮಂದಿರ ಉದ್ಘಾಟನೆ – ಜ.22ರಂದು ಉತ್ತರ ಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

    ಲಕ್ನೋ: ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಹೊತ್ತಲ್ಲೇ ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ (Educational Institution) ರಜೆ (Holiday) ಘೋಷಿಸಿದ್ದಾರೆ.

    ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕಾಗಿ 30 ವರ್ಷಗಳಿಂದ ‘ಮೌನ ವ್ರತ’ – ಒಂದು ಮಾತೂ ಆಡದೇ ಇದ್ದ ಮಹಿಳೆ ಮುಖದಲ್ಲಿ ಮಂದಹಾಸ

    ಮಾತ್ರವಲ್ಲದೇ ಯೋಗಿ ಅಯೋಧ್ಯೆಯಲ್ಲಿ ಸ್ವಚ್ಛತೆಯ ‘ಕುಂಭ ಮಾದರಿ’ ಅನುಷ್ಠಾನಕ್ಕೆ ನಿರ್ದೇಶನ ನೀಡಿದ್ದಾರೆ. ಜನವರಿ 14ರಂದು ಅಯೋಧ್ಯೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಪೂರ್ಣಕುಂಬಾಭಿಷೇಕದ ಸಮಯದಲ್ಲಿ ಸ್ವಚ್ಛ ಮತ್ತು ನೈರ್ಮಲ್ಯ ನಗರವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಎಲ್ಲರಿಗೂ ಒತ್ತಿ ಹೇಳಿದರು. ಇದನ್ನೂ ಓದಿ: Ayodhya Ram Mandir: ಶೀಘ್ರದಲ್ಲೇ ಸಂಚರಿಸಲಿವೆ ನೋಯ್ಡಾದಿಂದ ಅಯೋಧ್ಯೆಗೆ ಡೈರೆಕ್ಟ್ ಬಸ್‌

  • ದಾವೂದಿ ಬೋಹ್ರಾ ಸಮುದಾಯದ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ ಮೋದಿ

    ದಾವೂದಿ ಬೋಹ್ರಾ ಸಮುದಾಯದ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ ಮೋದಿ

    ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಮುಂಬೈಗೆ (Mumbai) ಭೇಟಿ ನೀಡಿದ್ದ ಸಂದರ್ಭ ದಾವೂದಿ ಬೋಹ್ರಾ ಮುಸ್ಲಿಂ ಸಮುದಾಯದ (Dawoodi Bohra Community) ಶಿಕ್ಷಣ ಸಂಸ್ಥೆಯ (Education Institute) ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಿದ್ದಾರೆ.

    ನೂತನವಾಗಿ ಉದ್ಘಾಟನೆಗೊಂಡಿರುವ ಅಲ್ಜಮಿಯಾ-ತುಸ್-ಸೈಫಿಯಾ, ಅಥವಾ ಸೈಫೀ ಅಕಾಡೆಮಿಯು ದಾವೂದಿ ಬೊಹ್ರಾ ಸಮುದಾಯದ ಪ್ರಾಥಮಿಕ ಶೈಕ್ಷಣಿಕ ಕಾಲೇಜಾಗಿದ್ದು, ಇದು ಮುಂಬೈನ ಉಪನಗರವಾದ ಮರೋಲ್‌ನಲ್ಲಿದೆ.

    ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ನಾನು ಇಲ್ಲಿ ಪ್ರಧಾನಿಯಾಗಿ ಅಥವಾ ಸಿಎಂ ಆಗಿ ಬಂದಿಲ್ಲ. ಬಹುಶಃ ಕೆಲವರಿಗಷ್ಟೇ ಸಿಗುವ ಭಾಗ್ಯ ನನಗೆ ಸಿಕ್ಕಿದೆ. ನಾನು ಈ ಕುಟುಂಬದೊಂದಿಗೆ 4 ತಲೆಮಾರುಗಳಿಂದ ಸಂಪರ್ಕ ಹೊಂದಿದ್ದೇನೆ. ಈ ಎಲ್ಲಾ 4 ತಲೆಮಾರಿನವರು ನನ್ನ ಮನೆಗೆ ಭೇಟಿ ನೀಡಿದ್ದಾರೆ ಎಂದು ನುಡಿದರು.

    ದಾವೂದಿ ಬೊಹ್ರಾ ಸಮುದಾಯವು ಸಮಯ ಮತ್ತು ಅಭಿವೃದ್ಧಿಯೊಂದಿಗೆ ಯಾವಾಗಲೂ ತನ್ನನ್ನು ತಾನು ಸಾಬೀತುಪಡಿಸಿದೆ. ಇಂದು ಅಲ್ಜಮಿಯಾ-ತುಸ್-ಸೈಫಿಯಾದಂತಹ ಪ್ರಮುಖ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯೇ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು ಹೊಗಳಿದರು. ಇದನ್ನೂ ಓದಿ: ಸಿದ್ದು-ಡಿಕೆಶಿಯನ್ನೇ ಬಿಟ್ಟು ಕಾಂಗ್ರೆಸ್ ಹೈಕಮಾಂಡ್ ಪಿಚ್ ರಿಪೋರ್ಟ್ ತಯಾರಿಸಿದ್ಯಾ?

    ಮೋದಿ ಶಿಕ್ಷಣ ಸಂಸ್ಥೆಯ ಉದ್ಘಾಟನೆ ಬಳಿಕ ಸಮುದಾಯದ ಮುಖಂಡ ಸೆಯೆದ್ನ್ ಮುಫದ್ದಾಲ್ ಸೈಫುದ್ದಿನ್ ಅವರ ಕೈಯನ್ನು ಹಿಡಿದು ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಸಂಚರಿಸಿದ್ದಾರೆ. ಇದನ್ನೂ ಓದಿ: ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣಾ ರಣತಂತ್ರ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಕಿ ರೇಪ್ & ಮರ್ಡರ್ – ಅನಧಿಕೃತ ಟ್ಯೂಷನ್ ಸೆಂಟರ್‌ಗಳಿಗೆ ಡಿಡಿಪಿಐ ಎಚ್ಚರಿಕೆ

    ಬಾಲಕಿ ರೇಪ್ & ಮರ್ಡರ್ – ಅನಧಿಕೃತ ಟ್ಯೂಷನ್ ಸೆಂಟರ್‌ಗಳಿಗೆ ಡಿಡಿಪಿಐ ಎಚ್ಚರಿಕೆ

    ಮಂಡ್ಯ: ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್‌ಗೆ ಹೋದ ಬಾಲಕಿಯನ್ನು ರೇಪ್ ಮಾಡಿ, ಕೊಲೆ ಮಾಡಿದ ಪ್ರಕರಣ ಜರುಗಿದ ಬೆನ್ನಲ್ಲೆ ಶಿಕ್ಷಣ ಇಲಾಖೆ ಅಲರ್ಟ್ ಆಗಿದೆ. ಅನಧಿಕೃತ ಟ್ಯೂಷನ್ ಸೆಂಟರ್‌ಗಳ (Tuition Centre) ಮೇಲೆ ಮಂಡ್ಯ ಶಿಕ್ಷಣ ಇಲಾಖೆ (Mandya Education Department) ಹದ್ದಿನ ಕಣ್ಣು ಇಟ್ಟಿದೆ.

    ಅನುಮತಿ ಪಡೆಯದೆ ಟ್ಯೂಷನ್ ಸೆಂಟರ್‌ಗಳನ್ನು ನಡೆಸಿದರೆ ಕೇಸ್‌ಗಳನ್ನು ದಾಖಲು ಮಾಡುವುದಾಗಿ ಡಿಡಿಪಿಐ ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ‌ ಮೇಲ್ವಿಚಾರಕನಿಂದಲೇ ಪೈಶಾಚಿಕ ಕೃತ್ಯ ಜರುಗಿದ್ದು, ಈ ಕೃತ್ಯದ ಬಳಿಕ ತಂದೆ-ತಾಯಿಗಳು ಮಕ್ಕಳನ್ನು ಟ್ಯೂಷನ್‌ಗೆ ಕಳುಹಿಸಲು ಹಿಂದೆ ಮುಂದೆ ನೋಡುವ ಸನ್ನಿವೇಶ ಎದುರಾಗಿದೆ. ಇದೀಗ ಘಟನೆ ಬಳಿಕ ಹೈ ಅಲರ್ಟ್ ಆಗಿರುವ ಶಿಕ್ಷಣ ಇಲಾಖೆ ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿದೆ.

    ಅನಧಿಕೃತ ಟ್ಯೂಷನ್ ಕಂಡು ಬಂದರೆ ತಕ್ಷಣವೇ ಕ್ರಮ ವಹಿಸುವುದರ ಜೊತೆಗೆ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಶಿಸ್ತುಕ್ರಮ ವಹಿಸಲಾಗುವುದು ಎಂದು ಡಿಡಿಪಿಐ ಜವರೇಗೌಡ ಶಿಕ್ಷಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: ರೇಪ್ ಮಾಡಿ ಬಾಲಕಿಯನ್ನು ಹತ್ಯೆಗೈದ – ಕಾಮುಕ ಕಾಂತರಾಜು ಗಲ್ಲಿಗೆ ಆಗ್ರಹ

    ಟ್ಯೂಷನ್ ಸೆಂಟರ್ ನಡೆಸುವವರು ಸರ್ಕಾರದ ಗೈಡ್‌ಲೈನ್‌ಗಳನ್ನು ಪಾಲಿಸುವುದರ ಜೊತೆಗೆ ಮೊದಲು ಶಿಕ್ಷಣ ಇಲಾಖೆಯಿಂದ ಲೈಸೆನ್ಸ್ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಕೇಸ್ ದಾಖಲು ಮಾಡುವುದಾಗಿಯು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಮಳವಳ್ಳಿ ಬಾಲಕಿ ಕುಟಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • ನೋಡ ಬನ್ನಿ ಬೊಂಬೆ ಸೊಬಗ – ಬೆಂಗ್ಳೂರಿನ ಶ್ರೀವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ ದಸರಾ ವೈಭವ

    ನೋಡ ಬನ್ನಿ ಬೊಂಬೆ ಸೊಬಗ – ಬೆಂಗ್ಳೂರಿನ ಶ್ರೀವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ ದಸರಾ ವೈಭವ

    ಬೆಂಗಳೂರು: ಇಲ್ಲಿನ ಶ್ರೀ ವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ (Sri Vidyamanya Vidya Kendra) ದಸರಾ ಹಬ್ಬದ (Dasara Festival) ಸೊಬಗು ಕಳೆಗಟ್ಟಿದ್ದು, ಭಾರತೀಯ ಸಂಸ್ಕೃತಿಯೇ ಅಲ್ಲಿ ಅನಾವರಣಗೊಂಡಿದೆ.

    ಆಡಳಿತ ಮಂಡಳಿ ಸಹಯೋಗದೊಂದಿಗೆ ಬೋಧಕ ಸಿಬ್ಬಂದಿಯೇ ಆಯೋಜಿಸಿರುವ ಈ ಬೊಂಬೆ ಪ್ರದರ್ಶನದಲ್ಲಿ (Doll Festival) ರಾಮಾಯಣದ ಗತವೈಭವದೊಂದಿಗೆ ಮೈಸೂರಿನ ದಸರಾ (Mysuru Dasara) ಸೊಬಗೇ ಬೊಂಬೆ ಲೋಕದಲ್ಲಿ ಅನಾವರಣಗೊಳಿಸಿದೆ. ಇದನ್ನೂ ಓದಿ: ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR

    ಏನೇನು ವಿಶೇಷತೆ?
    ಸಂಪೂರ್ಣ ರಾಮಾಯಣ ದೃಶ್ಯಗಳಾದ ರಾಮನ ಹುಟ್ಟು, ವನವಾಸ, ಶ್ರೀರಾಮನ ಪಟ್ಟಾಭಿಷೇಕ, ಲವಕುಶರ ಜನನ, ಲವಕುಶರ ಪಟ್ಟಾಭೀಷೇಕ, ಮೈಸೂರು ದಸರಾ ಜಂಬೂ ಸವಾರಿ ಗೊಂಬೆಗಳು, ಶ್ರೀ ಕೃಷ್ಣ ಲೀಲಾ, ನವದುರ್ಗೆಯರು, ಮದುವೆ ಮಂಟಪ, ಚೆನ್ನಪಟ್ಟಣದ ಬೊಂಬೆಗಳು, ಪಟ್ಟದ ಬೊಂಬೆಗಳು, ತೋಪುಗಳು, ಕಾಮದೇನು, ಹಳ್ಳಿಗಾಡು ಸೇರಿದಂತೆ ಅನೇಕ ಪ್ರಕಾರದ ಬೊಂಬೆಗಳನ್ನು ಅಚ್ಚುಕಟ್ಟಾಗಿ ಜೋಡಿಸಿದ್ದು, ನೋಡುಗರನ್ನು ಕೈಬೀಸಿ ಕರೆಯುತ್ತಿದೆ. ಇದನ್ನೂ ಓದಿ: ರಷ್ಯಾದ ಶಾಲೆಯಲ್ಲಿ ಮನಸ್ಸೋಇಚ್ಛೆ ಗುಂಡು ಹಾರಿಸಿದ ಬಂದೂಕುಧಾರಿ- 5 ಮಕ್ಕಳು ಸೇರಿ 9 ಮಂದಿ ದುರ್ಮರಣ

    ಕಳೆದ 7 ವರ್ಷಗಳಿಂದಲೂ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ದಸರಾ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಹಾಗೆಯೇ ಈ ಬಾರಿ ಸಂಪೂರ್ಣ ರಾಮಾಯಣ (Sri Ramayana), ಕೃಷ್ಣ ಲೀಲೆ, ಮಹಾಭಾರತದ ಸನ್ನಿವೇಷಗಳು, ಪೂರಿ ಜಗನ್ನಾಥ ರಥಯಾತ್ರೆ, ಮೈಸೂರು ದಸರಾ ಪ್ರದರ್ಶನದ ದೃಶ್ಯಗಳನ್ನು ಬೊಂಬೆ ಲೋಕದಲ್ಲಿ ಕಟ್ಟಿಕೊಟ್ಟಿದ್ದೇವೆ. ನಾಡ ಹಬ್ಬವನ್ನು ಉಳಿಸುವುದು ನಮ್ಮ ಸಂಸ್ಕೃತಿ ಹಾಗೂ ಜವಾಬ್ದಾರಿಯಾಗಿದೆ. ನಾವೆಲ್ಲರೂ ಒಟ್ಟಾಗಿ ದಸರಾ ಸಂಭ್ರಮಿಸೋಣ ಎಂದು ಪ್ರಾಂಶುಪಾಲರಾದ ಶಾರದಾ ಮನವಿ ಮಾಡಿದ್ದಾರೆ.

    ಬೊಂಬೆ ಪ್ರರ್ದಶನ ಇಂದಿನಿಂದ ಶುರುವಾಗಿದ್ದು, ಅಕ್ಟೋಬರ್‌ 5ರ ವರೆಗೂ ನಡೆಯಲಿದೆ. ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 6.30ರ ವರೆಗೆ ವೀಕ್ಷಿಸಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸ್ಕಾಲರ್ಶಿಪ್‌ಗಾಗಿ ಜೆಎನ್‌ಯು ವಿದ್ಯಾರ್ಥಿಗಳು, ಸಿಬ್ಬಂದಿ ನಡುವೆ ಸಂಘರ್ಷ- 6 ವಿದ್ಯಾರ್ಥಿಗಳಿಗೆ ಗಾಯ

    ಸ್ಕಾಲರ್ಶಿಪ್‌ಗಾಗಿ ಜೆಎನ್‌ಯು ವಿದ್ಯಾರ್ಥಿಗಳು, ಸಿಬ್ಬಂದಿ ನಡುವೆ ಸಂಘರ್ಷ- 6 ವಿದ್ಯಾರ್ಥಿಗಳಿಗೆ ಗಾಯ

    ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ(ಜೆಎನ್‌ಯು) ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ವಿದ್ಯಾರ್ಥಿವೇತನ ವಿಚಾರವಾಗಿ ಘರ್ಷಣೆ ಉಂಟಾಗಿದೆ. ಘಟನೆಯಲ್ಲಿ 6 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.

    ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವಿದ್ಯಾರ್ಥಿಗಳ ಗುಂಪು ಇಂದು 2 ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದು, ಈ ವೇಳೆ ಸಂಸ್ಥೆಯ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ನಡೆಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ವಿದ್ಯಾರ್ಥಿವೇತನದ ಬಗ್ಗೆ ವಿಚಾರಿಸಲು ಬೆಳಗ್ಗೆ 11 ಗಂಟೆಗೆ 5 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿಭಾಗಕ್ಕೆ ತೆರಳಿದ್ದರು. ಈ ವೇಳೆ ಸಂಸ್ಥೆಯ ಸಿಬ್ಬಂದಿ ವಿದ್ಯಾರ್ಥಿಗಳನ್ನು ನಿಂದಿಸಿ, ಅನುಚಿತವಾಗಿ ವರ್ತಿಸಿದರು. ಈಗ ಸಂಸ್ಥೆಯ ಸ್ಥಿತಿ ಹೀಗಿದೆ, ಈ ಹಿಂದೆ 17 ಸಿಬ್ಬಂದಿ ಇದ್ದರು. ಈಗ 4 ಸಿಬ್ಬಂದಿ ಇದ್ದಾರೆ. ವಿದ್ಯಾರ್ಥಿಗಳು 2 ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಎಬಿವಿಪಿ ಜೆಎನ್‌ಯು ಅಧ್ಯಕ್ಷ ರೋಹಿತ್ ಕುಮಾರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: 8 ತಿಂಗಳ ಗರ್ಭಿಣಿಯನ್ನು ಒದ್ದ ಟಿಎಂಸಿ ಶಾಸಕನ ಬೆಂಬಲಿಗರು

    ಅಧಿಕಾರಿಗಳು ಆಗಾಗ ಅನುಚಿತವಾಗಿ ವರ್ತಿಸುತ್ತಾರೆ, ಸುಳ್ಳು ಹೇಳುತ್ತಾರೆ. ನಾವು ಎಷ್ಟು ಕಾದರೂ ನಮಗೆ ಪರಿಹಾರ ನೀಡುವುದಿಲ್ಲ. ನಮಗೆ ಸ್ಕಾಲರ್‌ಶಿಪ್ ಹಣ ಬಿಡುಗಡೆಯಾಗುವವರೆಗೂ ಕಚೇರಿಯಿಂದ ಕದಲುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ವಿಳಂಬ – ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

    ಸಂಘರ್ಷದ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ಸಂಘರ್ಷ ಕಂಡುಬಂದಿದೆ. ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳನ್ನು ಸಿಬ್ಬಂದಿ ತಳ್ಳುವ ಹಾಗೂ ತಡೆಯುವುದು ಕಾಣಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸಾವು- ಓರ್ವ ಗಂಭೀರ

    ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸಾವು- ಓರ್ವ ಗಂಭೀರ

    ಲಕ್ನೋ: ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್‌ನಲ್ಲಿ ಇಂದು ನಸುಕಿನ 2.15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ನನ್ನ ಲೆವಲ್‍ಗೆ ಮಾತನಾಡೋರು ಇದ್ರೆ ನಾನು ಮಾತಾಡ್ತೇನೆ- ಜಮೀರ್‌ಗೆ ಡಿಕೆಶಿ ಟಾಂಗ್

    ಕನ್ವರ್ ಯಾತ್ರೆ ಕೈಗೊಂಡಿದ್ದ ಭಕ್ತರು ಹರಿದ್ವಾರದಿಂದ ಗ್ವಾಲಿಯರ್‌ಗೆ ಹೋಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು. ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಆಗ್ರಾ ವಲಯದ ಎಡಿಜಿ ರಾಜೀವ್ ಕೃಷ್ಣ ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ – ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅರೆಸ್ಟ್

    ಕನ್ವರ್ ಯಾತ್ರೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನ ಶಾಲೆಗಳು ಹಾಗೂ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಜುಲೈ 25 ಮತ್ತು 26ರಂದು ಬಂದ್ ಮಾಡಲಾಗುವುದು. ಈಗಾಗಲೇ ಕನ್ವರ್ ಯಾತ್ರೆಯಿಂದಾಗಿ ಉತ್ತರಾಖಂಡದ ಹರಿದ್ವಾರ ಮತ್ತು ಉತ್ತರಪ್ರದೇಶದ ಮೀರತ್‌ನಲ್ಲಿಯೂ ಶಾಲೆಗಳನ್ನು ಮುಚ್ಚಲಾಗಿದೆ. ಯಾತ್ರಿಕರು ಈ ಪ್ರದೇಶಗಳಲ್ಲಿ ಹಾದು ಹೋಗುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ತಡೆಯಲು ಎರಡೂ ದಿನ ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವುದಿಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ – ಬಿಎಸ್‍ವೈ ವಿರುದ್ಧ ಎಸಿಬಿಗೆ ದೂರು

    ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ – ಬಿಎಸ್‍ವೈ ವಿರುದ್ಧ ಎಸಿಬಿಗೆ ದೂರು

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಕೆ.ಸಿ ರಾಜಣ್ಣ ಹಾಗೂ ವಕೀಲರ ತಂಡ ಎಸಿಬಿಗೆ ದೂರು ನೀಡಿದ್ದಾರೆ.

    ಅರ್ಹತೆ ಇಲ್ಲದ CESS ಎನ್ನುವ ಖಾಸಗಿ ಶಿಕ್ಷಣ ಸಂಸ್ಥೆಗೆ 116 ಎಕರೆ ಜಮೀನು ಮಂಜೂರು ಮಾಡಿದ್ದು, ತನಿಖೆ ನಡೆಸುವಂತೆ ಎಸಿಬಿಗೆ ದೂರು ನೀಡಲಾಗಿದೆ.

    ದೂರಿನಲ್ಲಿ ಏನಿದೆ?: ಹರಳೂರು ಮತ್ತು ಪೂಲನಹಳ್ಳಿ ಬಳಿ ಇದ್ದ ಕೆಐಎಡಿಬಿಗೆ ಸೇರಿದ ಜಮೀನನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಅರ್ಜಿ ಸಲ್ಲಿದ 30 ದಿನಗಳಲ್ಲಿ 166 ಎಕರೆ ಜಮೀನು ಮಂಜೂರು ಮಾಡಲಾಗಿದೆ.

    ಚೆಸ್ ಸಂಸ್ಥೆ 130 ಎಕರೆ ಭೂಮಿ ಮಂಜೂರು ಮಾಡಲು ನೇರವಾಗಿ ಅಂದಿನ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿತ್ತು. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು. ಈ ನಿಯಮವನ್ನು ಗಾಳಿಗೆ ತೂರಿ ಖಾಸಗಿ ವಿ.ವಿ ಸ್ಥಾಪಿಸಲು ಬಿಎಸ್‍ವೈ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: 32 ವರ್ಷಗಳ ನಂತ್ರ ಕಾಶ್ಮೀರಿ ಪಂಡಿತರಿಗೆ ಸಿಕ್ಕಿದ್ದು ಸಿನಿಮಾ, ನ್ಯಾಯವಲ್ಲ: ಕೇಜ್ರಿವಾಲ್

    ಅಇSS ಸಂಸ್ಥೆ ಜಮೀನು ಮಂಜೂರು ಮಾಡಲು ಪ್ರತಿ ಎಕರೆಗೆ 1.61 ಕೋಟಿ ದರವನ್ನು ಅಪರ ಮುಖ್ಯ ಕಾರ್ಯದರ್ಶಿ ನಿಗದಿ ಪಡಿಸಿದ್ದರು. ಆದರೆ ಬಿಎಸ್‍ವೈ 2021 ಎಪ್ರಿಲ್ 26ರಂದು ಸಚಿವ ಸಂಪುಟದ ಮುಂದೆ ತಂದು 116.16 ಎಕರೆ ಜಾಗವನ್ನು 50 ಕೋಟಿಗೆ ಮಂಜೂರು ಮಾಡಿಕೊಟ್ಟಿದ್ದಾರೆ. ನಿಗದಿ ಪಡಿಸಿದ್ದ 186.76 ಕೋಟಿ ರೂ.ಗೆ ನೀಡದೇ ಕೇವಲ 50 ಕೋಟಿಗೆ ಮಂಜೂರು ಮಾಡಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. ಈ ಅಕ್ರಮದ ವಿರುದ್ಧ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅನ್ನೋದೊಂದು ಶಕ್ತಿ: ಬಸವರಾಜ್ ರಾಯರೆಡ್ಡಿ

  • ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ

    ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ

    ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರ ವೈರಸ್ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

    ಪ್ರಮುಖವಾಗಿ ಧಾರವಾಡ, ಬೆಂಗಳೂರು, ಮೈಸೂರು ಕ್ಲಸ್ಟರ್ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಒಮಿಕ್ರಾನ್ ಆತಂಕ – ಸೋಂಕಿತ ರಾಷ್ಟ್ರಗಳಿಂದ ಬರೋರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    ಹೊಸ ಗೈಡ್ ಲೈನ್:
    ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ ಟೆಸ್ಟ್. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್. ಕೇರಳ ಗಡಿ ಭಾಗದವರಿಗೆ ಸ್ಕ್ರೀನಿಂಗ್ ಕಡ್ಡಾಯ ಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ತಿಂಗಳು ಬ್ರೇಕ್ ಹಾಕಲಾಗಿದ್ದು, ಕಾರ್ಯಾಗಾರ, ಸೆಮಿನಾರ್ ಮುಂದೂಡಲು ಸೂಚನೆ ನೀಡಿದೆ. ವಿದ್ಯಾರ್ಥಿಗಳು ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚನೆ ಹೊರಡಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಭಾರೀ ಡೇಂಜರ್ – ಹೊಸ ವೈರಸ್, ಹೊಸ ಲಕ್ಷಣ!

  • ಜೀವದ ಜೊತೆಗೆ ಜೀವನಾನು ಕಟ್ಟಿಕೊಳ್ಳಿ: ಸಿಟಿ.ರವಿ

    ಜೀವದ ಜೊತೆಗೆ ಜೀವನಾನು ಕಟ್ಟಿಕೊಳ್ಳಿ: ಸಿಟಿ.ರವಿ

    – ಡಿಕೆಶಿಗೆ ರವಿ ತಿರುಗೇಟು

    ಬೆಂಗಳೂರು: ಕೊರೊನಾ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹಂತ ಹಂತವಾಗಿ ತೆರೆಯುವುದು ಒಳ್ಳೆಯ ವಿಷಯವಾಗಿದೆ. ಜೀವದ ಜೊತೆ ಜೀವನಾನು ಕಟ್ಟಿಕೊಳ್ಳಬೇಕಾಗಿದೆ ಎಂದು ಸಚಿವ ಸಿಟಿ.ರವಿ ಹೇಳಿದ್ದಾರೆ.

    ಹಾಸನಾಂಬೆ ದರ್ಶನ ಪಡೆಯಲು ಬಂದಿದ್ದ ಸಿಟಿ,ರವಿ ಅವರು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಶಿಕ್ಷಣ ಸಂಸ್ಥೆಗಳನ್ನು ತೆರೆಯುಲು ಸೂಕ್ತ ಸಮಯವಾಗಿದೆ. ಕಾಲೇಜಿಗೆ ಕಳುಹಿಸಿದ ನಂತರ ಯಾರ ಮೇಲೂ ದೂರಬಾರದು. ಮಕ್ಕಳನ್ನು ಶಾಲೆಗೆ ಕಳುಹಿಸುವ ತೀರ್ಮಾನ ಪೋಷಕರಿಗೆ ಬಿಟ್ಟಿದ್ದಾಗಿದೆ. ಕಾಲೇಜಿನ ವಿದ್ಯಾರ್ಥಿಗಳು ತಿಳುವಳಿಕೆ ಉಳ್ಳವರಾಗಿದ್ದಾರೆ. ನಾಳೆ ದೂರಬಾರದು ಎಂದಷ್ಟೇ ಪೋಷಕರ ಪತ್ರ ಪಡೆಯುತ್ತಿದ್ದೇವೆ. ಈ ವಿಷ್ಯದಲ್ಲಿ ಜವಬ್ದಾರಿ ಮರೆಯುವುದಿಲ್ಲ, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

    ಅಧಿಕಾರ ದುರುಪಯೋಗ ಆಗುತ್ತಿದೆ ಎಂಬ ಡಿಕೆಶಿ ಹೇಳಿಕೆ ಕುರಿತಾಗಿ ಮಾತನಾಡಿದ ಸಿಟಿ.ರವಿ, ದುರುಪಯೋಗದ ಪರಮಾವಧಿ ಮುಟ್ಟಿದವರು ಡಿಕೆಶಿ ಆಗಿದ್ದಾರೆ. ಆ ಪರಮಾವಧಿ ಕಾರಣಕ್ಕೆ ಇಂದು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಉಳಿದವರು ಹಾಗೇ ಇರುತ್ತಾರೆ ಎಂದು ಅವರು ಭಾವಿಸಿದ್ದಾರೆ. ಜನಸ್ನೇಹಿ ಆಡಳಿತ ನೀಡೋದು ಬಿಜೆಪಿಯ ಆಡಳಿತವಾಗಿದೆ. ಕಾಂಗ್ರೆಸ್ ಅವರಿಗಲ್ಲದೆ ಇನ್ಯಾರಿಗೂ ಅಧಿಕಾರ ದುರುಪಯೋಗದ ವಿಷಯದಲ್ಲಿ ನಂಬರ್ ಒನ್ ಸರ್ಟಿಫಿಕೇಟ್ ಸಿಗುವುದಿಲ್ಲ. ಎ ಯಿಂದ ಝಡ್ ವರೆಗೂ ಅಧಿಕಾರ ದುರುಪಯೋಗ ಪಡಿಸಿಕೊಂಡ ಕೀರ್ತಿ, ಅಪಕೀರ್ತಿ ಇದ್ದರೆ ಅದು ಕಾಂಗ್ರಸ್ಸಿಗೆ ಮಾತ್ರ ಇದನ್ನು ಅರ್ಥ ಮಾಡಿಕೊಂಡು ಡಿಕೆ.ಶಿವಕುಮಾರ್ ಮಾತನಾಡಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನು ಓದಿ: ಬೆಳ್ಳಂಬೆಳಗ್ಗೆ ಪತ್ನಿ ಜೊತೆ ಹಾಸನಾಂಬೆಯ ದರ್ಶನ ಪಡೆದ ಡಿಕೆಶಿ

    ಮುಖ್ಯಮಂತ್ರಿಗಳು ಪಕ್ಷಕ್ಕೆ ಬರುವ ಸಂದರ್ಭದಲ್ಲಿ ಯಾರ್ಯಾರಿಗೆ ವಾಗ್ದಾನ ನೀಡಿದ್ದಾರೋ ಅದನ್ನೆಲ್ಲ ಈಡೇರಿಸಿದ್ದಾರೆ. ಮುನಿರತ್ನ ಅವರಿಗೆ ಏನು ವಾಗ್ದಾನ ನೀಡಿದ್ದಾರೋ ನನಗೆ ಗೊತ್ತಿಲ್ಲ. ಕೊಟ್ಟಿರುವುದನ್ನು ಈಡೇರಿಸುತ್ತಾರೆ. ಹಾಸನಕ್ಕೂ ಸಚಿವ ಸ್ಥಾನ ಸಿಗಲಿ, ಚಿಕ್ಕಮಗಳೂರಿಗೂ ಸಚಿವ ಸ್ಥಾನ ಒಲಿದು ಬರಲಿ ಎಂದು ಆಶಿಸುತ್ತೇನೆ. ಸಚಿವ ಸಂಪುಟ ಪುನಾರಚನೆ ವಿಷಯದಲ್ಲಿ ಅಸಮಾಧಾನ ಎಂಬುದು ಮನಸ್ಥಿತಿ ಆಧರಿಸಿರುತ್ತೆ. ಅದನ್ನು ಸಮಾಧಾನ ಮಾಡಲು ಬರುತ್ತೆ ಸಮಾಧಾನ ಮಾಡ್ತೇವೆ ಎಂದು ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿದ್ದಾರೆ.

  • ಶಿಕ್ಷಣ ಸಂಸ್ಥೆ ಬಿಟ್ಟು, ಯಾವುದೇ ವ್ಯವಹಾರ ನಡೆಸುತ್ತಿಲ್ಲ- ಪರಮೇಶ್ವರ್

    ಶಿಕ್ಷಣ ಸಂಸ್ಥೆ ಬಿಟ್ಟು, ಯಾವುದೇ ವ್ಯವಹಾರ ನಡೆಸುತ್ತಿಲ್ಲ- ಪರಮೇಶ್ವರ್

    – ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೋ ಗೊತ್ತಿಲ್ಲ

    ಬೆಂಗಳೂರು: ನಾವು ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಇನ್ನಾವುದೇ ವ್ಯವಹಾರವನ್ನು ನಡೆಸುತ್ತಿಲ್ಲ. ಐಟಿಯವರಿಗೆ ಯಾವ ಮಾಹಿತಿ ಲಭ್ಯವಾಗಿದೆಯೋ ಗೊತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.

    ತಮ್ಮ ನಿವಾಸ ಹಾಗೂ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿರುವ ಕುರಿತು ಮಾತನಾಡಿದ ಅವರು, ಖಾಸಗಿ ಬಸ್ ಸೇರಿದಂತೆ ನಾವು ಯಾವುದೇ ವ್ಯವಹಾರ ನಡೆಸುತ್ತಿಲ್ಲ. ಕೇವಲ ಶಿಕ್ಷಣ ಸಂಸ್ಥೆಯನ್ನು ಮಾತ್ರ ನಡೆಸುತ್ತಿದ್ದೇವೆ. ಶಿಕ್ಷಣ ಸಂಸ್ಥೆ ಸಹ ನಮ್ಮ ತಂದೆಯವರು ಮಾಡಿದ್ದು ಬಿಟ್ಟರೆ ನಮ್ಮದು ಯಾವುದೇ ಬಿಸಿನೆಸ್ ಇಲ್ಲ. ನನಗೆ ಬೇರೆ ಯಾವುದೇ ಹೆಚ್ಚಿನ ಮಾಹಿತಿ ಇಲ್ಲ. ಯಾವ ಕಾರಣಕ್ಕೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಯಾವ ಮಾಹಿತಿ ಬೇಕೋ ಅದನ್ನು ನಾವು ಕೊಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

    ರಾಜಕೀಯ ದುರುದ್ದೇಶದಿಂದ ನಡೆದ ದಾಳಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ನಾನು ಹೆಚ್ಚು ಮಾತನಾಡುವುದಿಲ್ಲ. ನಮ್ಮ ಶಿಕ್ಷಣ ಸಂಸ್ಥೆ 56, 58 ವರ್ಷಕ್ಕೂ ಹಳೆಯದು. ನಾವು ಎಲ್ಲ ರೀತಿಯ ಐಟಿ ಫೈಲ್ ಮಾಡಿದ್ದೇವೆ. ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ. ಅವರಿಗೆ ಯಾವ ಮಾಹಿತಿ ಬೇಕೆಂದು ಗೊತ್ತಿಲ್ಲ. ದಾಳಿ ರಾಜಕೀಯ ಪ್ರೇರಿತವೂ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

    ಐಟಿ ದಾಳಿ
    ಮಾಜಿ ಡಿಸಿಎಂ, ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು ಏಳು ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಪರಮೇಶ್ವರ್ ಅವರ ಒಡೆತನದ ಶಾಲಾ-ಕಾಲೇಜುಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ನೆಲಮಂಗಲದಲ್ಲಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನಲ್ಲಿರುವ ಶಾಲಾ-ಕಾಲೇಜುಗಳ ಕಚೇರಿಯ ಮೇಲೆ ಅಧಿಕಾರಿಗಳು ನಡೆಸಿದ್ದಾರೆ.

    ಐಟಿ ದಾಳಿ ರಾಜಕೀಯ ಪ್ರೇರಿತವಾದದ್ದು. ಬಿಜೆಪಿ ನಾಯಕರ ಮೇಲೇಕೆ ಐಟಿ ದಾಳಿ ನಡೆಯುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಕುಗ್ಗಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.