ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣದಿಂದ ಈ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಾಗಿದೆ. ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಇಂದು ಬೆಂಗಳೂರು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನೆಲಗದೇರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಸಚಿವರು ಪರಿಶೀಲಿಸಿದರು. ಅತ್ಯಂತ ಗುಣಮಟ್ಟದ ಶಿಕ್ಷಣ ನೀಡುವ ನೆಲಗದೇರನಹಳ್ಳಿ ಸರ್ಕಾರಿ ಶಾಲೆಯಲ್ಲಿ ದಾಖಲಾತಿಗಾಗಿ ಹಲವು ಕಡೆಗಳಿಂದ ಬೇಡಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಸಚಿವರು, ಶಾಲಾ ದಾಖಲಾತಿಗಾಗಿ ಸರದಿ ಸಾಲಿನಲ್ಲಿ ನಿಂತಿದ್ದ ಮಕ್ಕಳು ಮತ್ತು ಪೋಷಕರನ್ನು ಮಾತನಾಡಿಸಿದರು. ಇದನ್ನೂ ಓದಿ: ರಾಷ್ಟ್ರಮಟ್ಟಕ್ಕೆ ಕಾಫಿನಾಡಿನ ಎರಡು ಸರ್ಕಾರಿ ಶಾಲೆಗಳು ಆಯ್ಕೆ
ಶಾಲೆಯಲ್ಲಿ ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಸದಸ್ಯರು ಮತ್ತು ಶಿಕ್ಷಕರೊಂದಿಗೆ ಸಚಿವರು ಚರ್ಚೆ ನಡೆಸಿದರು. ಮೊದಲೆಲ್ಲಾ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೊಂದಲು ಪ್ರಭಾವ ತರುವುದನ್ನು ಕಾಣುತ್ತಿದ್ದೆವು. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಿರುವುದರಿಂದ ಈಗ ಇಂತಹ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯಲು ಹಲವಾರು ಮಂದಿ ಶಾಸಕರು ಮತ್ತು ಸಚಿವರ ಮೂಲಕ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ರಾಜ್ಯದೆಲ್ಲೆಡೆ ದಾಖಲಾತಿ ಪ್ರಕ್ರಿಯೆ ಮುಂದುವರಿದಿದ್ದು, ಚಂದನಾ ದೂರದರ್ಶನ ವಾಹಿನಿಯಲ್ಲಿ ಸಂವೇದ ಪಾಠಗಳು ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿರುವುದು ಕಂಡು ಬರುತ್ತಿದೆ ಎಂದು ಮಾಹಿತಿ ಹಂಚಿಕೊಂಡರು.
ಬೆಂಗಳೂರು: ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ ವಿಷಯ. ಇದು ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ತೀರ್ಮಾನವನ್ನು ಗೌರವಿಸಿದಂತಾಗಿದೆ. ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ನಡೆಸುವುದಾಗಿ ಪ್ರಕಟಿಸಿರುವುದು ಅರ್ಥಹೀನವಾಗಿದೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಪ್ರಕಟನೆಯನ್ನು ಹೊರಡಿಸಿದ ನಿರಂಜನಾರಾಧ್ಯ ಅವರು, ಸಾಮಾನ್ಯವಾಗಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ನಾವು ಮಂಡಳಿ ಪರೀಕ್ಷೆಗಳಿಲ್ಲದೆ ತೇರ್ಗಡೆಗೆ ಪರಿಗಣಿಸುವಾಗ ಪ್ರಥಮ ಪಿಯುಸಿಯಲ್ಲಿ ಅವರ ಸಾಧನೆ, ತರಗತಿ ಪರೀಕ್ಷೆಗಳ ಹಾಗೂ ಪ್ರಾಯೋಗಿಕ ಪರೀಕ್ಷೆಗಳ ಅಂಕ, ಅಂದರೆ ಒಂದು ವರ್ಷದ ಸಾಧನೆಯನ್ನು ಪರಿಗಣಿಸಿ ಎಲ್ಲರನ್ನೂ ತೇರ್ಗಡೆ ಮಾಡುವ ಕ್ರಮ ಅನುಸರಿಸುತ್ತೇವೆ. ಅದರ ಜೊತೆಗೆ ಅಗತ್ಯವಿದ್ದಲ್ಲಿ ಅವರು ಹಿಂದಿನ ಮಂಡಳಿ ಪರೀಕ್ಷೆಯಾದ 10ನೇ ತರಗತಿಯ ಸಾಧನೆಯನ್ನು ಪರಿಗಣಿಸಬಹುದಾಗಿದೆ. ಇಲ್ಲಿ ಸಾಧನೆಯನ್ನು ಓರೆಗಲ್ಲಿಗೆ ಹಚ್ಚಲು ಹೆಚ್ಚಿನ ಆಯಾಮಗಳು ಕಷ್ಟ ಎಂದಿದ್ದಾರೆ. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?
10ನೇ ತರಗತಿಯಲ್ಲಿರುವ ಮಕ್ಕಳ ಸಂಚಿತ (ಕ್ಯುಮ್ಯುಲೇಟೀವ್) ಸಾಧನೆಯನ್ನು ಪರಿಗಣಿಸಿ ಮಂಡಳಿ ಪರೀಕ್ಷೆಯಿಲ್ಲದೆ ವಸ್ತುನಿಷ್ಠವಾಗಿ ಹಾಗೂ ವೈಜ್ಞಾನಿಕವಾಗಿ ತೇರ್ಗಡೆಗೊಳಿಸುವ ಸಾಧ್ಯತೆಗಳು ಹೆಚ್ಚಿರುತ್ತವೆ ಮತ್ತು ದೀರ್ಘಕಾಲದ ಸಾಧನೆಯನ್ನು ಪರಿಗಣಿಸಬಹುದಾಗಿದೆ. ಸಾಮಾನ್ಯವಾಗಿ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳು 1 ರಿಂದ 10 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ಕಲಿಯುತ್ತಿರುತ್ತಾರೆ. ಅಥವಾ ಕನಿಷ್ಠ ಮೂರು ವರ್ಷಗಳಾದರು ಒಂದು ಶಾಲೆಯಲ್ಲಿ( 8, 9 ಮತ್ತು 10 ನೇ ತರಗತಿ) ಮಕ್ಕಳ 10 ವರ್ಷದ ಸಂಚಿತ ಸಾಧನೆ ಅಥವಾ ಮೂರು ವರ್ಷದ ಸಂಚಿತ ಸಾಧನೆ ಹೆಚ್ಚು ವಸ್ತುನಿಷ್ಠವಾಗಿರುವುದಲ್ಲದೆ ಕಲಿಕೆಯ ಹಲವು ಆಯಾಮಗಳನ್ನು ಪರಿಗಣಿಸಿ ಮಕ್ಕಳನ್ನು ತೇರ್ಗಡೆಗೊಳಿಸುವ ವಿಫುಲ ಅವಕಾಶಗಳಿವೆ ಎಂದರು. ಇದನ್ನೂ ಓದಿ: ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ
ಪರಿಸ್ಥಿತಿ ಹೀಗಿರುವಾಗ, ಸರ್ಕಾರ 10 ನೇ ತರಗತಿಯನ್ನು ರದ್ದುಗೊಳಿಸದಿರುವುದು ಅವೈಜ್ಞಾನಿಕ ಮಾತ್ರವಲ್ಲ ಶೈಕ್ಷಣಿಕವಾಗಿ ತಪ್ಪು ನಿರ್ಧಾರ. ಜೊತೆಗೆ ಈಗಾಗಲೇ ಉಳಿದ ಎರಡು ಮಂಡಳಿಗಳಾದ ಸಿಬಿಎಸ್‍ಇ ಮತ್ತು ಐಸಿಎಸ್‍ಇ ಮಂಡಳಿಗಳು ತಮ್ಮ ಪರೀಕ್ಷೆಗಳನ್ನು ರದ್ದು ಮಾಡಿರುವಾಗ, ರಾಜ್ಯ ಮಂಡಳಿಯ ಪಠ್ಯಕ್ರಮಕ್ಕೆ ಸಂಯೋಜನೆಗೊಂಡಿರುವ ಮಕ್ಕಳ ಮೇಲೆ ಪರೀಕ್ಷೆ ಹೇರುವುದು ಅಮಾನವೀಯ, ತಾರತಮ್ಯ ಮತ್ತು ಶೈಕ್ಷಣಿಕವಾಗಿ ಅಪಕ್ವ-ಅಪ್ರಬುದ್ಧ ನಿರ್ಧಾರ. ಈ ಮಕ್ಕಳು ಕಳೆದ 14 ತಿಂಗಳುಗಳಿಂದ ಸಂಕಷ್ಟಕ್ಕೆ ಗುರಿಯಾಗಿದ್ದು, ಸರಿಯಾದ ಕಲಿಕಾ ವ್ಯವಸ್ಥೆಯಿಲ್ಲದೆ ಮಾನಸಿಕವಾಗಿ ಸೊರಗಿರುವ ಈ ಸಂದರ್ಭದಲ್ಲಿ ಸಮಾನಾಂತರ ತರಗತಿಯಲ್ಲಿ ಕಲಿಯುತ್ತಿರುವ ಅವರ ಗೆಳೆಯರು ಮಂಡಳಿ ಪರೀಕ್ಷೆಯಿಲ್ಲದೆ ತೇರ್ಗಡೆ ಹೊಂದಿ ಇವರು ಮಾತ್ರ ರಾಜ್ಯ ಪಠ್ಯಕ್ರಮದಲ್ಲಿ ಓದಿದಕ್ಕಾಗಿ ಪರೀಕ್ಷೆ ಬರೆಯುವುದು ಎಷ್ಟು ಸಮಂಜಸ? ಇದು ತಾರತಮ್ಯವಲ್ಲವೇ? ಇದು ಅತ್ಯಂತ ಅವೈಜ್ಞಾನಿಕ ನಿರ್ಧಾರ ಎಂದು ಟೀಕಿಸಿದ್ದಾರೆ.
ಸಚಿವರೂ ಕೂಡಲೇ ತಮ್ಮ ನಿರ್ಧಾರವನ್ನು ಹಿಂಪಡೆದು ಮಕ್ಕಳ ಹಾಗೂ ಪಾಲಕರ ಆತಂಕ ಮತ್ತು ಮಾನಸಿಕ ಒತ್ತಡವನ್ನು ನಿವಾರಿಸಲು 10ನೇ ತರಗತಿ ಪರೀಕ್ಷೆಗಳನ್ನು ಕೂಡ ರದ್ದು ಮಾಡುವಂತೆ ವಿನಂತಿಸುತ್ತೇನೆ. ಜೊತೆಗೆ ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ತೇರ್ಗಡೆಯಾಗದೆ ಈಗ ಪೂರಕ ಪರೀಕ್ಷೆಗಳಿಗೆ ಸಿದ್ಧವಾಗಿದ್ದ ಪುನರಾವರ್ತಿ ವಿದ್ಯಾರ್ಥಿಗಳನ್ನು ಸಹ ತೇರ್ಗಡೆಗೊಳಿಸಿ ಅವರು ತಮ್ಮ ಮುಂದಿನ ಶಿಕ್ಷಣ ಮತ್ತು ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ತೀರ್ಮಾನವನ್ನು ಪ್ರಕಟಿಸಬೇಕು ಎಂದು ಮನವಿಮಾಡಿಕೊಂಡರು. ಇದನ್ನೂ ಓದಿ: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು
10ನೇ ಅಥವಾ 12ನೇ ತರಗತಿಯ ಮಕ್ಕಳಾಗಲಿ ಅಥವಾ ಇತರೆ ಯಾವುದೇ ತರಗತಿಯ ಮಕ್ಕಳ ಕಲಿಕೆ ಕಳೆದ 15 ತಿಂಗಳಿಗಳಿಂದ ಸಮರ್ಪಕವಾಗಿ ನಡೆದಿಲ್ಲವೆಂಬ ಸತ್ಯವನ್ನು ಒಪ್ಪಿ, ಈ ಮಕ್ಕಳು ಮುಂದಿನ ಯಾವುದೇ ತರಗತಿಗಳಿಗೆ ತೇರ್ಗಡೆಯಾಗಿ ಹೋಗುವ ಸಂದರ್ಭದಲ್ಲಿ, 2021-22ನೇ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ಅವರಿಗೆ ಮೂರು ತಿಂಗಳ ವೇಗ ವರ್ಧಿತ ಕಲಿಕಾ ಸೇತು ಬಂಧ ಕಾರ್ಯಕ್ರಮದ ಮೂಲಕ ಕಲಿಕೆಯಲ್ಲಿನ ನಷ್ಟವನ್ನು ತುಂಬಿ ಕೊಡುವುದು ಹಾಗೂ ಬುನಾದಿ ಜ್ಞಾನವನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ಯೋಚಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯ ಮತ್ತು ಆದ್ಯತೆಯಾಗಬೇಕೆಂದು ನಾನು ಒತ್ತಾಯಿಸುತ್ತೇನೆ. ಸರ್ಕಾರ ಪರೀಕ್ಷೆಗಳ ಸುಳಿಯಿಂದ ಹೊರಬಂದು ಈ ನಿಟ್ಟಿನಲ್ಲಿ ಯೋಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೀವ ಪಣಕ್ಕಿಟ್ಟು ಕೆಲಸ ಮಾಡಿದ ೫೦೦ಕ್ಕೂ ಹೆಚ್ಚು ಕೊರೊನ ವಾರಿಯರ್ಗಳು ಜೀವ ಕಳೆದುಕೊಂಡಿದ್ದು, ಆ ಪೈಕಿ ಕೇವಲ ಒಂದೇ ಒಂದು ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಿದೆ ಎಂಬ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. 1/6
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020
ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೀವ ಪಣಕ್ಕಿಟ್ಟು ಕೆಲಸ ಮಾಡಿದ 500ಕ್ಕೂ ಹೆಚ್ಚು ಕೊರೊನ ವಾರಿಯರ್ ಗಳು ಜೀವ ಕಳೆದುಕೊಂಡಿದ್ದು, ಆ ಪೈಕಿ ಕೇವಲ ಒಂದೇ ಒಂದು ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಿದೆ ಎಂಬ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಕೇವಲ ಬಾಯಿ ಚಪಲ ತೀರಿಸಿಕೊಳ್ಳಲು ಕೊರೊನ ವಾರಿಯರ್‍ಗಳನ್ನು ಭೇಷ್ ಎನ್ನುವ ಸರ್ಕಾರ, ಅವರ ಜೀವದ ಜತೆ ಆಟವಾಡುತ್ತಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ತಮ್ಮ ಸರ್ವಸ್ವವನ್ನೇ ಬಲಿಕೊಟ್ಟ ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?
ತನ್ನ ಹೆತ್ತ ತಾಯಿಯನ್ನು ಉಳಿಸಿಕೊಡಿ ಎಂದು ವಿದ್ಯಾಗಮ ಯೋಜನೆಯಡಿ ಕೆಲಸ ಮಾಡಿದ ಶಿಕ್ಷಕಿಯ ಪುತ್ರಿ ಸರ್ಕಾರಕ್ಕೆ ಪತ್ರ ಬರೆದರೆ, ಶಿಕ್ಷಕಿಯ ಚಿಕಿತ್ಸಾ ವೆಚ್ಚದ ಬಿಲ್ ಕೊಡುತ್ತೇನೆ ಎಂಬ ಹೃದಯಹೀನ ಉತ್ತರ ಕೊಡುವ ಶಿಕ್ಷಣ ಮಂತ್ರಿಯಿಂದ ಹಾಗೂ ಇಂತಹ ಮನಸ್ಥಿತಿಯ ಸರ್ಕಾರದಿಂದ ಕೊರೊನ ವಾರಿಯರ್ಗಳ ಕುಟುಂಬಗಳು ಇನ್ನೇನು ನಿರೀಕ್ಷಿಸಲು ಸಾಧ್ಯ? 3/6
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020
ತನ್ನ ಹೆತ್ತ ತಾಯಿಯನ್ನು ಉಳಿಸಿಕೊಡಿ ಎಂದು ವಿದ್ಯಾಗಮ ಯೋಜನೆಯಡಿ ಕೆಲಸ ಮಾಡಿದ ಶಿಕ್ಷಕಿಯ ಪುತ್ರಿ ಸರ್ಕಾರಕ್ಕೆ ಪತ್ರ ಬರೆದರೆ, ಶಿಕ್ಷಕಿಯ ಚಿಕಿತ್ಸಾ ವೆಚ್ಚದ ಬಿಲ್ ಕೊಡುತ್ತೇನೆ ಎಂಬ ಹೃದಯಹೀನ ಉತ್ತರ ಕೊಡುವ ಶಿಕ್ಷಣ ಮಂತ್ರಿಯಿಂದ ಹಾಗೂ ಇಂತಹ ಮನಸ್ಥಿತಿಯ ಸರ್ಕಾರದಿಂದ ಕೊರೊನ ವಾರಿಯರ್ ಗಳ ಕುಟುಂಬಗಳು ಇನ್ನೇನು ನಿರೀಕ್ಷಿಸಲು ಸಾಧ್ಯ. 60 ವೈದ್ಯರು, 20 ನರ್ಸ್‍ಗಳು, 82 ಪೊಲೀಸರು, 10 ಪೌರ ಕಾರ್ಮಿಕರು, 96 ಚಾಲಕ-ನಿರ್ವಾಹಕರು, 235 ಶಿಕ್ಷಕರು- ಉಪನ್ಯಾಸಕರು, 10 ಆಶಾ ಕಾರ್ಯಕರ್ತೆಯರು ಹೀಗೆ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೂಡಬಿದಿರೆ ಶಿಕ್ಷಕಿ ನಿಧನ– ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದ ವಿದ್ಯಾರ್ಥಿನಿ
ಇನ್ನು ಪತ್ರಕರ್ತರು, ಬ್ಯಾಂಕ್ ಸೇರಿದಂತೆ ವಿವಿಧ ಸೇವಾ ವಲಯದ ನೌಕರರು ಕೂಡ ಜೀವ ತೆತ್ತಿದ್ದಾರೆ. ಇವರ ಕುಟುಂಬಗಳಿಗೆ ಸರ್ಕಾರ ಉತ್ತರದಾಯಿತ್ವ ಪ್ರದರ್ಶಿಸಬೇಕಲ್ಲವೇ? 5/6
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020
ಇನ್ನು ಪತ್ರಕರ್ತರು, ಬ್ಯಾಂಕ್ ಸೇರಿದಂತೆ ವಿವಿಧ ಸೇವಾ ವಲಯದ ನೌಕರರು ಕೂಡ ಜೀವ ತೆತ್ತಿದ್ದಾರೆ. ಇವರ ಕುಟುಂಬಗಳಿಗೆ ಸರ್ಕಾರ ಉತ್ತರದಾಯಿತ್ವ ಪ್ರದರ್ಶಿಸಬೇಕಲ್ಲವೇ? ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್ ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಕನಿಷ್ಠ ಪಕ್ಷ ಕೊರೊನ ವಾರಿಯರ್ ಗಳ ಸುರಕ್ಷತೆಗೆ ಸರ್ಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಟ್ವೀಟ್ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಕನಿಷ್ಠ ಪಕ್ಷ ಕೊರೊನ ವಾರಿಯರ್ಗಳ ಸುರಕ್ಷತೆಗೆ ಸರ್ಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ! 6/6
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020
– ಆಗಸ್ಟ್‌ನಲ್ಲಿ SSLC, ಜುಲೈನಲ್ಲಿ PUC ಫಲಿತಾಂಶ
– ಆನ್‍ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದ ಗೈಡ್ ಲೈನ್ಸ್
ಚಿಕ್ಕಬಳ್ಳಾಪುರ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿರೋ ಮಕ್ಕಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಸುರಕ್ಷತೆ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲು ನಾನು ಪರೀಕ್ಷಾ ಕೇಂದ್ರಗಳಿಗೆ ಭೇಟಿ ಮಾಡುತ್ತಿದ್ದೇನೆ. ಇದು ಪರೀಕ್ಷಾ ಕೇಂದ್ರ ಆಗಬಾರದು ಮಕ್ಕಳಿಗೆ ಸುರಕ್ಷಾ ಕೇಂದ್ರ ಆಗಿರಬೇಕು ಅಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಅಗಲಗುರ್ಕಿ ಗ್ರಾಮದ ಬಿಜಿಎಸ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ನಂತರ ಮಾತನಾಡಿದ ಸುರೇಶ್ ಕುಮಾರ್, ಇಂಗ್ಲೀಷ್ ಹಾಗೂ ಗಣಿತ ಪರೀಕ್ಷೆ ದಿನ ಸರಾಸರಿ ಶೇ.98 ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ಇದು 98.68 ಆಗಿತ್ತು. ಹೀಗಾಗಿ ಇದು ಸಹ ಉತ್ತಮ ನಡೆ. ಶಾಲೆಗೆ ಬಂದು ವ್ಯಾಸಂಗ ಮಾಡಿರೋ ಮಕ್ಕಳು ಗೈರಾಗುತ್ತಿಲ್ಲ. ಕೆಲ ಮಕ್ಕಳ ಗೈರಾಗಿದ್ದಕ್ಕೆ ಸ್ವತಃ ನಮ್ಮ ಅಧಿಕಾರಿಗಳು ಪೋಷಕರನ್ನ ಸಂಪರ್ಕಿಸಿ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಹೀಗಾಗಿ ಅಂತಹ ಮಕ್ಕಳು ಮತ್ತೆ ಬಂದು ಪರೀಕ್ಷೆ ಎದುರಿಸಿದ್ದಾರೆ ಎಂದರು.
ಖಾಸಗಿ ಶಾಲೆಗಳಿಗೆ ವಾರ್ನಿಂಗ್
ಈ ವರ್ಷ ಕೊರೊನಾ ಇರುವುದರಿಂದ ಯಾವುದೇ ಖಾಸಗಿ ಶಾಲೆ ಶುಲ್ಕ ಹೆಚ್ಚಳ ಮಾಡುವಂತಿಲ್ಲ ಅಂತ ಸುರೇಶ್ ಕುಮಾರ್ ಹೇಳಿದರು. ಈ ಒಂದು ವರ್ಷ ವಿಶೇಷವಾದ, ವಿಚಿತ್ರವಾದ ವರ್ಷ, ಕೊರೊನಾದಿಂದ ಎಲ್ಲರೂ ಸಮಸ್ಯೆಗಳಿಗೆ ಸಿಲುಕಿದ್ದು, ಮಾನವೀಯತೆ ದೃಷ್ಠಿಯಿಂದಲೂ ಸಹ ಯಾರೂ ಶುಲ್ಕ ಹೆಚ್ಚಳ ಮಾಡಬಾರದು. ಯಾವುದೇ ಶಾಲೆ ಶುಲ್ಕ ಹೆಚ್ಚಳ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೀವಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸರಿ ಸುಮಾರು 1150 ಶಾಲೆಗಳ ಬಗ್ಗೆ ನಮಗೆ ದೂರು ಬಂದಿದ್ದು ಅದರಲ್ಲಿ 450 ಶಾಲೆಗಳ ವಿರುದ್ದ ಕ್ರಮ ಕೈಗೊಂಡಿದ್ದು, ಅವರು ಸಹ ಶುಲ್ಕವನ್ನ ಇಳಿಸಿದ್ದಾರೆ. ಉಳಿದ ಶಾಲೆಗಳ ಮೇಲೂ ಕ್ರಮ ಜರುಗುತ್ತಿದೆ ಎಂದರು.
ಆಗಸ್ಟ್‌ನಲ್ಲಿ SSLC, ಜುಲೈನಲ್ಲಿ PUC ಫಲಿತಾಂಶ:
ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಹಾಗೂ ಜುಲೈ ಕೊನೆ ವಾರದಲ್ಲಿ ಪಿಯುಸಿ ಪರೀಕ್ಷಾ ಫಲಿತಾಂಶ ನೀಡಲು ಬಹುತೇಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಬಹುತೇಕ ಪ್ರಾಥಮಿಕ ಶಾಲೆಯ ಮಕ್ಕಳ ಪೋಷಕರಿಗೆ ಮಕ್ಕಳನ್ನ ಶಾಲೆಗಳಿಗೆ ಕಳುಹಿಸುವ ಮನಸ್ಥಿತಿಯಲ್ಲಿ. ಶಾಲೆಗಳನ್ನು ಯಾವಾಗಿನಿಂದ ಪ್ರಾರಂಭ ಮಾಡಬೇಕು ಅನ್ನೋದೆ ಪ್ರಶ್ನೆಯಾಗಿದೆ. ಹಲವರು ಆಗಸ್ಟ್ ಹಾಗೂ ಸೆಪ್ಟೆಂಬರಿನಲ್ಲಿ ಮಾಡಿ ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನಾವು ನಿರ್ಧಾರ ಕೈಗೊಳ್ಳುತ್ತೀವಿ ಎಂದರು.
ಆನ್‍ಲೈನ್ ಶಿಕ್ಷಣ.
ಆನ್‍ಲೈನ್ ಶಿಕ್ಷಣದ ಬಗ್ಗೆ ಕೇಂದ್ರ ಸರ್ಕಾರದ ಗೈಡ್ ಲೈನ್ಸ್ ಇದ್ದು, ಅದರಲ್ಲೂ ಎಲ್‍ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಮಾಡಬಾರದು ಅಂತ ನಿಯಮವಿದೆ. ಬೇಕಾದರೇ ಮಕ್ಕಳ ಪಾಲಕರ ಜೊತೆ ವಾರಕ್ಕೆ ಎರಡು ಬಾರಿ ಮಾತನಾಡಬಹುದು. ಮಕ್ಕಳನ್ನ ಹೇಗೆ ನೋಡಿಕೊಳ್ಳಬೇಕು ಅಂತ ಶಿಕ್ಷಣ ಕೊಡಬಹುದು. 1 ರಿಂದ 6 ಹಾಗೂ 06 ರಿಂದ 10 ನೇ ತರಗತಿ ಮಕ್ಕಳಿಗೆ ಯಾವ ರೀತಿ ಶಿಕ್ಷಣ ಕೊಡಬಹುದು ಅಂತ ಕೇಂದ್ರದ ಗೈಡ್ ಲೈನ್ ಬಂದಿದೆ. ಅದಕ್ಕೆ ನಾವು ಒಂದಷ್ಟು ಬದಲಾವಣೆ ಮಾಡಿ ತಜ್ಞರ ಸಮಿತಿ ರಚಿಸಿದ್ದೀವಿ. ಅವರ ವರದಿ ಬಂದ ನಂತರ ಅಂತಿಯ ರೂಪು ರೇಷೆ ಸಿದ್ಧ ಮಾಡುತ್ತೀವಿ ಎಂದು ತಿಳಿಸಿದರು.
ಬೆಂಗಳೂರು: ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಕೌನ್ಸಿಲಿಂಗ್‍ನ್ನು ತಡೆ ಹಿಡಿಯುವಂತೆ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.
ವರ್ಗಾವಣೆಯಲ್ಲಿರುವ ಗೊಂದಲ ನಿವಾರಣೆಗಾಗಿ ವರ್ಗಾವಣೆ ಪ್ರಕ್ರಿಯೆ ತಡೆ ಹಿಡಿಯಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತಡೆ ಹಿಡಿಯಲು ನೂತನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ನಾಳೆಯಿಂದಲೇ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಡೆಯಬೇಕಿತ್ತು.
ಶಿಕ್ಷಕರ ಕಡ್ಡಾಯ ವರ್ಗಾವಣೆ ಕುರಿತು ಅನೇಕ ಶಿಕ್ಷಕರು, ವಿಶೇಷವಾಗಿ ಶಿಕ್ಷಕಿಯರು ಮನವಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ವಿವರಿಸಿ ಕೆಲವು ನ್ಯಾಯಯುತ ಪ್ರಸ್ತಾವನೆಗಳನ್ನು ನನ್ನ ಮುಂದೆ ಇಟ್ಟಿದ್ದಾರೆ. ಈ ವರ್ಗಾವಣೆ ವ್ಯವಸ್ಥೆಯಲ್ಲಿರುವ ಕೆಲವು ದೋಷಗಳನ್ನೂ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ಕೆಲ ಗೊಂದಲಗಳನ್ನು ನಿವಾರಿಸಿ, ಎಲ್ಲರಿಗೂ ಅನುಕೂಲವಾಗುವ ರೀತಿಯ ವ್ಯವಸ್ಥೆ ಕುರಿತು ಚಿಂತನೆ ಮತ್ತು ಪ್ರಯತ್ನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇವಲ ಕೆಲದಿನಗಳ ಮಟ್ಟಿಗೆ ಮಾತ್ರ ಹಾಲಿ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಬಹಳ ಬೇಗ ಸುಧಾರಿತ ವರ್ಗಾವಣೆ ಪ್ರಕ್ರಿಯೆ ಜಾರಿ ತರಲು ಕ್ರಮ ಕೈಗೊಳ್ಳಲಾಗುತ್ತದೆ. ಯಾರಿಗೂ ಆತಂಕ ಬೇಡ ಎಂದು ನೂತನ ಶಿಕ್ಷಣ ಸಚಿವರು ತಿಳಿಸಿದ್ದಾರೆ.