Tag: ಶಿಕ್ಷೆ

  • ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸಿನ್ ಮಲಿಕ್‌ಗೆ ರಾಷ್ಟ್ರೀಯ ತನಿಖಾದಳದ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,00,000 ರೂ. ದಂಡ  ವಿಧಿಸಿದೆ.

    ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳು ಯಾಸಿನ್ ಮಲಿಕ್ ಮೇಲೆ ದಾಖಲಾಗಿತ್ತು. ತನ್ನ ಮೇಲೆ ದಾಖಲಾದ ಆರೋಪಗಳ ಸಂಬಂಧ ಮೇ 10ರಂದು ಕೋರ್ಟ್‌ನಲ್ಲಿ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಲಿಕ್‌ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಕೋರ್ಟ್‌ಗೆ ಮನವಿ ಮಾಡಿತ್ತು. ಇದನ್ನೂ ಓದಿ: ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

    ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಹಾಗೂ ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ಇದನ್ನೂ ಓದಿ: ಹೆಲ್ಮೆಟ್ ಧರಿಸದಿದ್ರೆ 3 ತಿಂಗಳು ಲೈಸನ್ಸ್ ರದ್ದು

    ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ:
    ಯಾಸಿನ್ ಮಲಿಕ್ ಬಗ್ಗೆ ನ್ಯಾಯಾಲಯ ತೀರ್ಪು ಹೊರಬೀಳುವ ಹಿನ್ನೆಲೆ ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ನಗರದಲ್ಲಿ ಕಲ್ಲು ತೂರಾಟದಂತಹ ಕೃತ್ಯಗಳನ್ನು ತಡೆಗಟ್ಟಲು ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಶ್ರೀನಗರಲ್ಲಿ ಇಂಟರ್‌ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.

  • ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

    ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್‌ಐಎ ಮನವಿ

    ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್‌ಗೆ ಮರಣ ದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮನವಿ ಮಾಡಿದೆ.

    ಬುರ್ಹಾನ್‌ವಾನಿ ಎನ್‌ಕೌಂಟರ್ ಆದ 30 ನಿಮಿಷಗಳಲ್ಲಿ ನನ್ನನ್ನು ಬಂಧಿಸಲಾಯಿತು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಪಾಸ್‌ಪೋರ್ಟ್ ಮಂಜೂರು ಮಾಡಿದ್ದರು ಹಾಗೂ ನಾನು ಅಪರಾಧಿ ಅಲ್ಲ ಎಂಬ ಕಾರಣಕ್ಕೆ ನನಗೆ ಹೇಳಿಕೆ ನೀಡಲು ಭಾರತ ಅವಕಾಶ ಮಾಡಿಕೊಟ್ಟಿತು ಎಂದು ಯಾಸಿನ್ ಮಲಿಕ್ ನ್ಯಾಯಾಲಯದಲ್ಲಿ ಹೇಳಿದ್ದಾನೆ. ಇದನ್ನೂ ಓದಿ: ಬರಾಮುಲ್ಲಾದಲ್ಲಿ ಎನ್‌ಕೌಂಟರ್ – 3 ಭಯೋತ್ಪಾದಕರ ಹತ್ಯೆ, ಪೊಲೀಸ್ ಹುತಾತ್ಮ,

    1994ರಲ್ಲಿ ನಾನು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಗಾಂಧಿಯವರ ತತ್ವಗಳನ್ನು ಅನುಸರಿಸುತ್ತಿದ್ದೆ. ನಾನು ಕಾಶ್ಮೀರದಲ್ಲಿ ಅಹಿಂಸಾತ್ಮಕ ರಾಜಕೀಯ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ.

    ನಾನು ಈ ಹಿಂದೆ 7 ಪ್ರಧಾನಿಗಳೊಂದಿಗೆ ಕೆಲಸ ಮಾಡಿದ್ದೇನೆ. ಕಳೆದ 24 ವರ್ಷಗಳಲ್ಲಿ ಯಾವುದೇ ಭಯೋತ್ಪಾದನಾ ಚಟುವಟಿಕೆ ಅಥವಾ ಹಿಂಸಾಚಾರಗಳಲ್ಲಿ ಭಾಗಿಯಾಗಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಭಾರತೀಯ ಗುಪ್ತಚರ ಇಲಾಖೆಗೆ ಸವಾಲು ಹಾಕಿದ್ದಾನೆ. ಇದನ್ನೂ ಓದಿ: ಶೂಟೌಟ್‍ಗೂ ಮೊದಲೇ ಇನ್‍ಸ್ಟಾಗ್ರಾಮ್‍ನಲ್ಲಿ ಗನ್‍ಗಳ ಚಿತ್ರ ಪೋಸ್ಟ್ ಮಾಡಿದ್ದ ಆರೋಪಿ

    ನಾನು ರಾಜಕೀಯದಿಂದ ನಿವೃತ್ತಿ ಹೊಂದಿ, ಮರಣದಂಡನೆಯನ್ನು ಸ್ವೀಕರಿಸುತ್ತೇನೆ ಎಂದು ಮಲಿಕ್ ಹೇಳಿದ್ದಾನೆ. ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ಯಾಸಿನ್ ಮಲಿಕ್ ತಪ್ಪೊಪ್ಪಿಕೊಂಡ ಹಿನ್ನೆಲೆ ಎನ್‌ಐಎ ಕೋಟ್ ಅವರನ್ನು ದೋಷಿ ಎಂದು ಘೋಷಿಸಿದೆ. ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು.

  • ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ

    ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ

    ಗುವಾಹಟಿ: ಅಸ್ಸಾಂನ ಹೈಲಕಂಡಿ ಜಿಲ್ಲೆಯ ನ್ಯಾಯಾಲಯವೊಂದು 11 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

    ಹೈಲಕಂಡಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ವಿಶೇಷ ನ್ಯಾಯಾಧೀಶ) ಸಂಜೋಯ್ ಹಜಾರಿಕಾ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ಅನೈಸರ್ಗಿಕ ಅತ್ಯಾಚಾರ) ಅಡಿಯಲ್ಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20,000 ರೂ. ದಂಡವನ್ನು ವಿಧಿಸಿದ್ದಾರೆ. ಇದನ್ನೂ ಓದಿ: ಉಡದ ಮೇಲೆ ಅತ್ಯಾಚಾರಗೈದ ನಾಲ್ವರು ಅರೆಸ್ಟ್

    BRIBE

    ಒಂದು ವೇಳೆ ದಂಡ ಪಾವತಿಸಲು ತಪ್ಪಿದಲ್ಲಿ ಅಪರಾಧಿ ಆರು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತೀರ್ಪಿನಲ್ಲಿ ಹೇಳಿದೆ. ಇದನ್ನೂ ಓದಿ: ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

    2018ರ ಜೂನ್ 5ರಂದು ಲಾಲಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರಕಾರ, ಅಪರಾಧಿ ಆಗ 21 ವರ್ಷ ವಯಸ್ಸಿನವನಾಗಿದ್ದನು. ಅವನು ಇಬ್ಬರು ಮಕ್ಕಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಒಬ್ಬ ಬಾಲಕನನ್ನು ಲಾಲಾ ರೂರಲ್ ಕಾಲೇಜು ಆವರಣದಲ್ಲಿರುವ ಶೌಚಾಲಯಕ್ಕೆ ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದನು.

    ನಂತರ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಕಳೆದ ವರ್ಷ ಚಾರ್ಜ್ ಶೀಟ್ ಸಲ್ಲಿಸಿದ್ದರು.

  • ಲಾರಿ, ಬೈಕ್ ಅಪಘಾತ- ಲಾರಿ ಚಾಲಕನಿಗೆ 9 ವರ್ಷದ ನಂತರ ಶಿಕ್ಷೆ

    ಲಾರಿ, ಬೈಕ್ ಅಪಘಾತ- ಲಾರಿ ಚಾಲಕನಿಗೆ 9 ವರ್ಷದ ನಂತರ ಶಿಕ್ಷೆ

    ಧಾರವಾಡ: 2013ರಲ್ಲಿ ನಡೆದ ಲಾರಿ, ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಲಾರಿ ಚಾಲಕನಿಗೆ ಒಂದು ವರ್ಷದ 6 ತಿಂಗಳ ಕಾಲ ಶಿಕ್ಷೆ ಹಾಗೂ 11 ಸಾವಿರ ದಂಡ ವಿಧಿಸಿದೆ.

    ಮಂಜುನಾಥ್ ಖಜ್ಜಿಡೊಣಿ ಶಿಕ್ಷೆಗೆ ಒಳಗಾದ ಲಾರಿ ಚಾಲಕ. ಮಂಜುನಾಥ್ ಅವರ ನಿರ್ಲಕ್ಷ್ಯದಿಂದ 2013ರಲ್ಲಿ ಬೈಕ್ ಸವಾರ ಕೀರ್ತವಂತ ಕಳ್ಳಿಮನಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದ. ಕೀರ್ತವಂತ ಹುಬ್ಬಳ್ಳಿ, ಧಾರವಾಡ ಬೈಪಾಸ್ ಮಧ್ಯೆ ಬರುತ್ತಿದ್ದರು. ಹುಬ್ಬಳ್ಳಿ ಕಡೆಯಿಂದ ಮಂಜುನಾಥ್ ಬೆಳಗಾವಿ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

    ಲಾರಿ ಚಾಲಕ ಮಂಜುನಾಥ್‌, ಬೈಕ್ ಸವಾರ ಕಿರ್ತವಂತ ಕಳ್ಳಿಮನಿಗೆ ಡಿಕ್ಕಿ ಹೊಡೆದಿದ್ದರಿಂದ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅಪಘಾತ ಪಡಿಸಿದ ಲಾರಿ ಚಾಲಕನಿಗೆ ಧಾರವಾಡದ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ಒಂದು ವರ್ಷ 6 ತಿಂಗಳ ಕಾಲ ಶಿಕ್ಷೆ ಹಾಗೂ 11 ಸಾವಿರ ರೂ. ದಂಡ ವಿಧಿಸಿದೆ. ಇದನ್ನೂ ಓದಿ: ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳು ಲೋಕಾರ್ಪಣೆ: ಬಿ.ಸಿ ಪಾಟೀಲ್

    ಅಪಘಾತದ ತನಿಖೆ ನಡೆಸಿದ್ದ ಪೊಲೀಸರು, ಲಾರಿ ಚಾಲಕನ ಮೇಲೆ ಗಂಭೀರ ಆರೋಪ ಕಂಡು ಬಂದ ಕಾರಣ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ಮಾಡಿದ ನ್ಯಾಯಾಲಯ ಲಾರಿ ಚಾಲಕನ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದು ವರ್ಷ 6 ತಿಂಗಳ ಶಿಕ್ಷ ವಿಧಿಸಿ ಆದೇಶಿಸಿದೆ. ಅಲ್ಲದೇ 11 ಸಾವಿರ ದಂಡ ಕೂಡಾ ಆ ಲಾರಿ ಚಾಲಕನಿಗೆ ವಿಧಿಸಿ ಆದೇಶಿಸಿದೆ. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

  • ಅಪಘಾತ ಮಾಡಿದ್ದ ವ್ಯಕ್ತಿಗೆ 9 ವರ್ಷದ ಬಳಿಕ ಶಿಕ್ಷೆ!

    ಅಪಘಾತ ಮಾಡಿದ್ದ ವ್ಯಕ್ತಿಗೆ 9 ವರ್ಷದ ಬಳಿಕ ಶಿಕ್ಷೆ!

    ಬೆಂಗಳೂರು: ಕಂಠ ಪೂರ್ತಿ ಕುಡಿದು ಕಾರು ಚಾಲನೆ ಮಾಡಿ ಇಬ್ಬರು ಸ್ನೇಹಿತರ ಸಾವಿಗೆ ಕಾರಣವಾದ ವ್ಯಕ್ತಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

    ಭಾನುಕುಮಾರ್ ಅಪರಾಧಿ. ಉಪ್ಪು ತಿಂದವ ನೀರು ಕುಡಿಯಲೇ ಬೇಕು ಅನ್ನೋ ನಾಡು ನುಡಿಯಂತೆ ತಪ್ಪು ಮಾಡಿದವನು ಇಂದಲ್ಲ ನಾಳೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ. ಬೆಂಗಳೂರು ಜಿಲ್ಲಾ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ. ಭಾನುಕುಮಾರ್‌ಗೆ ಆರು ವರ್ಷ ಆರು ತಿಂಗಳು ಶಿಕ್ಷೆ ಹಾಗೂ ಒಂದು ಲಕ್ಷ ನಾಲ್ಕು ಸಾವಿರ ದಂಡ ವಿಧಿಸಿದೆ.

    ಭಾನುಕುಮಾರ್ ಅವರು 2013ರ ಮಾರ್ಚ್ 4ರಂದು ವಿಟ್ಟಸಂದ್ರ ಫ್ಲೈ ಓವರ್ ಬಳಿ ಆದ ಅಪಘಾತಕ್ಕೆ ಕಾರಣರಾಗಿದ್ದರು. ಭಾನುಕುಮಾರ್ ಎಲೆಕ್ಟ್ರಾನಿಕ್ ಸಿಟಿ ಕಡೆಯಿಂದ ಬನ್ನೇರುಘಟ್ಟ ರಸ್ತೆ ಕಡೆಗೆ ಹೊರಟ್ಟಿದ್ದಾಗ ಕುಡಿದು ಅಮಲಿನಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಅಪಘಾತವಾಗಿತ್ತು. ಅಪಘಾತದಲ್ಲಿ ಆತನ ಸ್ನೇಹಿತರಾದ ವಿಶ್ವನಾಥ್, ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:  ಕದ್ದು ಪರಾರಿಯಾಗುತ್ತಿದ್ದವನನ್ನು ಹಿಡಿದು ಥಳಿಸಿದ ಸ್ಥಳೀಯರು – ಕಳ್ಳ ಸಾವು

    ಭಾನುಕುಮಾರ್ ಅವರ ಸ್ನೇಹಿತರಾದ ಸಂತೋಷ್, ವಿಶ್ವನಾಥ್, ನಿಖಿಲ್ ಕುಮಾರ್, ಮಣಿಕಂಠರೊಂದಿಗೆ ಜಾಲಿ ರೈಡ್ ಹೋಗಿರುವಾಗ ಕುಡಿದು ಕಾರು ಚಾಲನೆ ಮಾಡಿರುವುದು ಸಾಬೀತು ಮಾಡಲು ಪೆÇಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜೀಪಿನಿಂದ ಡಿಕ್ಕಿ ಹೊಡಿಸಿ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ

  • ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ

    ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ

    – ಪಾಕ್ ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

    ಇಸ್ಲಾಮಾಬಾದ್: ಪದೇ-ಪದೇ ಅತ್ಯಾಚಾರ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮಕ್ಕೆ ಪಾಕಿಸ್ತಾನ ಮುಂದಾಗಿದೆ. ಇಂಥ ಕೃತ್ಯಗಳಲ್ಲಿ ಆಗ್ಗಾಗ್ಗೆ ಭಾಗಿಯಾಗಿ ಬಂಧನಕ್ಕೊಳಗಾಗುವವರಿಗೆ ಲೈಂಗಿಕ ಉತ್ಸಾಹವನ್ನೇ ಕುಂಠಿತ ಗೊಳಿಸುವ ಶಿಕ್ಷೆಗೆ ಗುರಿ ಪಡಿಸಲು ನಿರ್ಧರಿಸಿದೆ.

    ಅತ್ಯಾಚಾರ ಪ್ರಕರಣಗಳ ತ್ವರಿತ ತನಿಖೆ, ಸಾಕ್ಷ್ಯ ಸಂಗ್ರಹ, ವಿಚಾರಣೆ ಪೂರ್ಣ ಮತ್ತು ಲೈಂಗಿಕ ಶಕ್ತಿ ಕುಂಠಿತಗೊಳಿಸುವ ಶಿಕ್ಷೆ ಜಾರಿ ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡ ಮಸೂದೆಗೆ ಪಾಕ್ ಸಂಸತ್ ಬುಧವಾರ ಅಂಗೀಕಾರ ನೀಡಿದೆ. ಇದನ್ನೂ ಓದಿ: ತಿರುಪತಿಯಲ್ಲಿ ಪ್ರವಾಹ- ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು, ಕೊಚ್ಚಿ ಹೋಗ್ತಿವೆ ವಾಹನಗಳು!

    ಪಾಕ್‍ನಲ್ಲಿ ಅತ್ಯಚಾರ ಪ್ರಕರಣದ ದೋಷಿಗಳಿಗೆ 20-25 ವರ್ಷ ಜೈಲು ಅಥವಾ ಮರಣದಂಡನೆ ವಿಧಿಸುವ ಅವಕಾಶ ಇದೆ. ಆದರೆ ಸಾವಿರಾರು ಅತ್ಯಾಚಾರ ಪ್ರಕರಣ ದಾಖಲಾದರೂ ಶಿಕ್ಷೆ ಜಾರಿಯಾಗುವ ಪ್ರಮಾಣ ಕೇವಲ ಶೇ.3 ಕ್ಕಿಂತ ಕಡಿಮೆ ಇದೆ. ಇದನ್ನೂ ಓದಿ: ಸೋನಿಯಾ ಮಗಳು, ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದ್ರೆ ಖರ್ಗೆ ಪುತ್ರ ಯಾವ ಪ್ರಿಯಾಂಕ: ಪ್ರತಾಪಸಿಂಹ ಪ್ರಶ್ನೆ

    RAPE CASE

    ಜೊತೆಗೆ ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಮಕ್ಕಳು ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚುತ್ತಿದೆ. ಈ ಬಗ್ಗೆ ದೇಶದಾದ್ಯಂತ ಭಾರೀ ಪ್ರತಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಂಥ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಶಿಕ್ಷೆ ಯನ್ನು ಕೆಲವೊಂದು ರಾಸಾಯನಿಕ ಬಳಸಿ ಇಂಜೆಕ್ಷನ್ ಮೂಲಕ ಜಾರಿಗೊಳಿಸಲಾಗುತ್ತದೆ. ಶಿಕ್ಷೆ ಈಗಾಗಲೇ ದಕ್ಷಿಣ ಕೊರಿಯಾ, ಪೊಲೆಂಡ್, ಅಮೆರಿಕಾದ ಕೆಲ ರಾಜ್ಯಗಳು ಜೆಕ್‍ರಿಪಬ್ಲಿಕ್ ಮೊದಲಾದ ದೇಶಗಳಲ್ಲಿ ಜಾರಿಯಲ್ಲಿದೆ.

  • ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

    ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

    ನವದೆಹಲಿ: ಮಾದಕ ವಸ್ತು ಖರೀದಿ, ಮಾರಾಟ, ಸೇವೆನೆ ವಿದುದ್ಧ ಕಠಿಣ ಕ್ರಮಕ್ಕೆ ದೇಶಾದ್ಯಂತ ಒತ್ತಾಯ ಹೆಚ್ಚುತ್ತಿರುವ ನಡುವೆಯೇ, ವೈಯಕ್ತಿಕ ಉದ್ದೇಶಕ್ಕಾಗಿ ಸಣ್ಣಪ್ರಮಾಣದ ಡ್ರಗ್ಸ್ ಸೇವಿಸುತ್ತಿರುವ ವ್ಯಕ್ತಿಗಳನ್ನು ಅಪರಾಧದಿಂದ(ಜೈಲು ಶಿಕ್ಷೆಯಿಂದ) ಹೊರಗಡೆ ಇಡುವ ಮಹತ್ವ ಶಿಫಾರಸನ್ನು ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮಾಡಿದೆ. ಈ ಶಿಫಾರಸನ್ನು ಕೇಂದ್ರ ಕಂದಾಯ ಇಲಾಖೆಗೆ ಕಳಿಸಲಾಗಿದ್ದು, ಮಾದಕ ವಸ್ತು ನಿಗ್ರಹ ಕಾಯ್ದೆಎನ್‍ಡಿಪಿಎಸ್( Narcotic Drugs and Psychotropic Substances Act)ತಿದ್ದು ಪಡಿ ಮಾಡಬೇಕು ಎಂದು ತಿಳಿಸಿದೆ.

    ಇದೀಗ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಇದಕ್ಕೂ ಮುನ್ನ ಕನ್ನಡದ ಚಿತ್ರರಂಗದ ಹಲವು ಕಲಾವಿದರು ಕೂಡಾ ಇದೇ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಹೀಗಾಗಿ ಈ ಹೊಸ ಪ್ರಸ್ತಾಪಕ್ಕೆ ಮಹತ್ವ ಬಂದಿದೆ. ಇದನ್ನೂ ಓದಿ:  ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!

    ಈಗ ಇರುವ ಎನ್‍ಡಿಪಿಎಸ್(NDPS) ಕಾಯ್ದೆ ಪ್ರಕಾರ ಮಾದಕ ವಸ್ತು ವ್ಯಸನಿಗಳನ್ನು ಅಪರಾಧಿಗಳು ಎಂದೇ ಪರಿಗಣಿಸಲಾಗುತ್ತದೆ. ಆದರೆ ತಾವಾಗೇ ಈ ವ್ಯಸನಿಗಳು ಮನಃಪರಿವರ್ತನೆ ಮಾಡಿಕೊಂಡು ಮರುವಸತಿ ಕೇಂದ್ರಗಳಲ್ಲಿ ತಮ್ಮ ಚಟವನ್ನು ಬಿಟ್ಟರೆ ಅವರಿಗೆ ತನಿಖೆ ಹಾಗೂ ಜೈಲಿನಿಂದ ವಿನಾಯ್ತಿ ದೊರಕುತ್ತದೆ. ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

    ಈಗ ಹೊಸ ಪ್ರಸ್ತಾವದ ಪ್ರಕಾರ, ವೈಯಕ್ತಿಕ ಕಾರಣಗಳಿಗೆ ಸಣ್ಣ ಪ್ರಮಾಣದಲ್ಲಿ ಡ್ರಗ್ಸ್ ಸೇವಿಸಿ ಸಿಕ್ಕಿಬಿದ್ದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸೆ ಕೊಡಿಸಬೇಕು. ಜೈಲುವಾಸದ ಬಲೆಗೆ ಈ ಆಯ್ಕೆಯುನ್ನು ಅವರಿಗೆ ನೀಡಬೇಕು ಎಂದು ಶಿಫಾರಸಿನಲ್ಲಿ ತಿಳಿಸಲಾಗಿದೆ. ಈಗಿನ ಎನ್‍ಡಿಪಿಎಸ್ ಕಾಯ್ದೆಯ 27ನೇ ಪರಿಚ್ಛೇದ ಹೇಳುವಂತೆ ಯಾವುದೇ ಮಾದಕ ವಸ್ತು ಇಟ್ಟುಕೊಂಡವರಿಗೆ 1ವರ್ಷದವರೆಗೆ ಕೈಲು ಶಿಕ್ಷೆ ಹಾಗೂ 20 ಸಾವಿರವರೆಗೆ ದಂಡ ವಿಧಿಸಲಾಗುತ್ತಿದೆ.

  • ಹಾವಿನಿಂದ ಕಚ್ಚಿಸಿ ಪತ್ನಿ ಕೊಂದಿದ್ದಾತನಿಗೆ ಡಬಲ್ ಜೀವಾವಧಿ ಶಿಕ್ಷೆ, 5 ಲಕ್ಷ ರೂ. ದಂಡ

    ಹಾವಿನಿಂದ ಕಚ್ಚಿಸಿ ಪತ್ನಿ ಕೊಂದಿದ್ದಾತನಿಗೆ ಡಬಲ್ ಜೀವಾವಧಿ ಶಿಕ್ಷೆ, 5 ಲಕ್ಷ ರೂ. ದಂಡ

    ತಿರುವನಂತಪುರಂ: ಕೇರಳದಲ್ಲಿ ಹಾವಿನಿಂದ ಕಚ್ಚಿಸಿ ಪತ್ನಿಯನ್ನ ಕೊಂದಿದ್ದ ಖತರ್ನಾಕ್ ಪತಿಗೆ ಕೊನೆಗೂ ಶಿಕ್ಷೆಯಾಗಿದೆ.

    ಯಾರಿಗೂ ಅನುಮಾನ ಬಾರದಂತೆ, ಹಾವಿನಿಂದ ಕಚ್ಚಿಸಿ ಪತ್ನಿ ಉತ್ತರಾಳನ್ನು ಪತಿ ಸೂರಜ್ ಕೊಲೆ ಮಾಡಿದ್ದ. ಈತನ ಮೇಲಿನ ಕೊಲೆ ಆರೋಪ ಸಾಬೀತಾಗಿ ಇಂದಿಗೆ ತೀರ್ಪನ್ನು ಕಾಯ್ದಿರಿಸಲಾಗಿತ್ತು. ಇದೀಗ ಸೂರಜ್‍ಗೆ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಜೊತೆಗೆ 5 ಲಕ್ಷ ರೂ. ದಂಡವನ್ನು ವಿಧಿಸಿದೆ.

    ಏನಿದು ಪ್ರಕರಣ?:
    ಉತ್ತರಾಗೆ 20201 ಫೆಬ್ರವರಿಯಲ್ಲಿ ಹಾವು ಕಚ್ಚಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ಇದ್ದಾಗಲೇ ಅಂದ್ರೆ ಮೇ 7ರಂದು ಎರಡನೇ ಬಾರಿ ಹಾವು ಕಚ್ಚಿತ್ತು. ಆದರೆ ಉತ್ತರಾಳ ಪೋಷಕರು ಅಳಿಯನ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೆ ಸೂರಜ್ ವರದಕ್ಷಿಣೆಗಾಗಿ ನಮ್ಮ ಮಗಳಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಮಯದಲ್ಲಿ ನೀಡಿದ್ದ ಕೆಲವು ಆಭರಣಗಳು ಲಾಕರ್ ನಿಂದ ಕಾಣೆಯಾಗಿವೆ ಎಂದು ದೂರಿದ್ದರು.  ಇದನ್ನೂ ಓದಿ: ಆಸ್ತಿಗಾಗಿ ಪತ್ನಿಯನ್ನ ಕೊಂದು ಹಾವಿನ ದ್ವೇಷದ ಕಥೆ ಕಟ್ಟಿದ್ದ ಪತಿ ಅರೆಸ್ಟ್

    ಈ ಹಿನ್ನೆಲೆ ತನಿಖೆ ಆರಂಭಿಸಿದ ಪೊಲೀಸರಿಗೆ ಆಘಾತವೇ ಕಾದಿತ್ತು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೆಲ ಸತ್ಯಗಳು ಬೆಳಕಿಗೆ ಬಂದಿದ್ದವು. ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್ ಕಳೆದ ಐದು ತಿಂಗಳುಗಳಿಂದ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದ. ಈ ಕುರಿತು ಇಂಟರ್ನೆಟ್‍ನಲ್ಲಿ ವಿಡಿಯೋ ಕೂಡ ನೋಡಿದ್ದ. ಇದನ್ನೂ ಓದಿ: ಅನ್ಯಧರ್ಮದ ಯುವಕನ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಗೆ ಥಳಿತ

    ಸೂರಜ್ 10 ಸಾವಿರ ರೂ. ಪಾವತಿಸಿ ಕೊಲ್ಲಂ ಜಿಲ್ಲೆಯ ಹಾವಾಡಿಗ ಸುರೇಶ್‍ನಿಂದ ಹಾವನ್ನು ಖರೀದಿಸಿದ್ದ. ಬಳಿಕ ತನ್ನ ರೂಮ್‍ನಲ್ಲಿ ಹಾವನ್ನು ಬಿಟ್ಟು ಪತ್ನಿಗೆ ಕಚ್ಚುವಂತೆ ಮಾಡಿದ್ದ. ಮೊದಲ ಬಾರಿಗೆ ಹಾವು ಕಚ್ಚಿದಾಗಲೇ ಪತ್ನಿ ಸಾಯುತ್ತಾಳೆ ಎಂದು ಸೂರಜ್ ತಿಳಿಸಿದ್ದ. ಆದರೆ ಅದೃಷ್ಟವಶಾತ್ ಉತ್ತರ ಬದುಕುಳಿದಿದ್ದಳು. ಅಳಿಯನ ಮೇಲೆ ಆಗಲೇ ಅನುಮಾನ ವ್ಯಕ್ತಪಡಿಸಿದ್ದ ಉತ್ತರಾಳ ಪೋಷಕರು ಮಗಳನ್ನು ತಮ್ಮ ಊರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತಿದ್ದರು. ಇದನ್ನೂ ಓದಿ: ಮರ್ಯಾದಾ ಹತ್ಯೆ – ಮಗಳು ಪ್ರೀತಿಸಿ ವಿವಾಹವಾಗಿದ್ದಕ್ಕೆ ಇಡೀ ಕುಟುಂಬವನ್ನೇ ಜೀವಂತ ಸುಟ್ಟ ತಂದೆ

    ಆರೋಪಿ ಮೇ 6ರಂದು ಮತ್ತೆ ಹಾವಿನಿಂದ ಪತ್ನಿಗೆ ಕಚ್ಚಿಸಿ ಕೊಲೆಗೈದಿದ್ದ. ಅಷ್ಟೇ ಅಲ್ಲದೆ ಹಾವನ್ನು ಕೊಂದು ಒಳ್ಳೆಯವನಂತೆ ನಾಟಕವಾಡಿದ್ದ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು. ಪತ್ನಿಯನ್ನ ಕೊಂದರೆ ಆಕೆಯ ಹೆಸರಿನಲ್ಲಿದ್ದ ಆಸ್ತಿ ತನಗೆ ಬರುತ್ತದೆ ಎಂದು ಸೂರಜ್ ಕೃತ್ಯ ಎಸೆಗಿದ್ದಾನೆ. ಅಷ್ಟೇ ಅಲ್ಲದೆ ವರದಕ್ಷಿಣೆಗಾಗಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನುವುದು ವಿಚಾರಣೆ ವೇಳೆ ಸ್ಪಷ್ಟವಾಗಿತ್ತು.

  • ಗದ್ದೆಗೆ ಹೋಗೋ ನೆಪದಲ್ಲಿ ಬಾವಿಗೆ ತಳ್ಳಿ ಹೆಂಡ್ತಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ

    ಗದ್ದೆಗೆ ಹೋಗೋ ನೆಪದಲ್ಲಿ ಬಾವಿಗೆ ತಳ್ಳಿ ಹೆಂಡ್ತಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ

    ಚಾಮರಾಜನಗರ:  ಪತ್ನಿಯನ್ನು ಕೊಲೆಗೈದ ಪತಿಗೆ ಚಾಮರಾಜನಗರ  ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

    2017 ರ ಫೆಬ್ರವರಿ 22ರಂದು ಗದ್ದೆ ನೋಡಲು ಹೋಗೋಣ ಬಾ ಎಂದು ಪತ್ನಿಯನ್ನು ಕರೆದೊಯ್ದು ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಆತನಿಗೆ ಜೀವಾವಧಿ ಶಿಕ್ಷೆ ಹಾಗೂ 45 ಸಾವಿರ ರೂ. ದಂಡವನ್ನು ನ್ಯಾಯಾಧೀಶ ಲೋಕಪ್ಪ ವಿಧಿಸಿದ್ದಾರೆ. ಈ ಸಂಬಂಧ ಮೃತಳ ತಾಯಿ ಸಾವಿತ್ರಮ್ಮ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸರ್ಕಾರಿ ಅಭಿಯೋಜಕರಾಗಿ ಉಷಾ ವಾದ ಮಂಡಿಸಿದ್ದರು.

    ವಿವಾಹವಾದ ಕೇವಲ 9 ದಿನಕ್ಕೆ ವರದಕ್ಷಿಣೆ ಕೊಡಲಿಲ್ಲವೆಂದು ಪತ್ನಿ ಕೊಂದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಅಪರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಲೋಕಪ್ಪ ಜೀವಾವಧಿ ಶಿಕ್ಷೆ ವಿಧಿಸಲು ಆದೇಶಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದುಬಾರಿ ಶುಲ್ಕ- ರಮೇಶ್ ಕುಮಾರ್ ಉಪಸ್ಥಿತಿಯಲ್ಲಿ ಚಿಂತನ ಮಂಥನ

    ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದ ವೆಂಕಟೇಶ್ ಶಿಕ್ಷೆಗೊಳಗಾದ ಅಪರಾಧಿ. ಈತ ವೃತ್ತಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಆಗಿದ್ದು, ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಸಾವಿತ್ರಮ್ಮರವರ ಪುತ್ರಿ ದಿವ್ಯಾರನ್ನು 2017ರ ಫೆಬ್ರವರಿ 2ರಂದು ವಿವಾಹ ಮಾಡಿಕೊಂಡಿದ್ದ. ಮದುವೆಗೂ ಮುನ್ನ ಹುಡುಗಿಗೆ ಮಾಂಗಲ್ಯ ಸರ, ಹುಡುಗನಿಗೆ ಚಿನ್ನದ ಉಂಗುರ, 2.5 ಲಕ್ಷ ವರದಕ್ಷಿಣೆ ಕೊಡಲು ಒಪ್ಪಂದ ಮಾಡಿಕೊಂಡು ಅದರಂತೆ ವಿವಾಹಕ್ಕೂ ಮುನ್ನ ಮದುಮಗನಿಗೆ 2 ಲಕ್ಷ ಹಣ, ಚಿನ್ನದ ಉಂಗುರ ನೀಡಲಾಗಿತ್ತು. ಇದನ್ನೂ ಓದಿ: ಸರ್ಕಾರ ಕೊಟ್ಟ ಮಾತಿನಂತೆ ನಡೆಯದಿದ್ದರೇ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ: ಕಾಶಪ್ಪನವರ್

    chamarajanagara

    ಮದುವೆಯಾದ ಮೂರೇ ದಿನಕ್ಕೆ ಮಾಂಗಲ್ಯ ಸರ, ಉಳಿದ ಹಣ 50 ಸಾವಿರ ರೂ. ಹಣವನ್ನು ತರುವಂತೆ ಕಿರುಕುಳ ಕೊಟ್ಟು ಫೆಬ್ರವರಿ 20ರಂದು ಹೆಂಡತಿಯನ್ನು ತವರಿಗೆ ಕಳುಹಿಸಿದ್ದ. ಆದರೆ ಫೆಬ್ರವರಿ 22ರಂದು ಗದ್ದೆ ನೋಡಲು ಹೋಗೋಣ ಬಾ ಎಂದು ಪತ್ನಿಯನ್ನು ಕರೆದೊಯ್ದು ಬಾವಿಗೆ ತಳ್ಳಿ ಕೊಲೆ ಮಾಡಿದ್ದ. ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

  • ಅತ್ಯಾಚಾರಿಗಳಿಗೆ ನಡು ರಸ್ತೆಯಲ್ಲೇ ಶಿಕ್ಷೆ ನೀಡಿ – ವಿದ್ಯಾಕಾಶಿ ವಿದ್ಯಾರ್ಥಿನಿಯರ ಆಗ್ರಹ

    ಅತ್ಯಾಚಾರಿಗಳಿಗೆ ನಡು ರಸ್ತೆಯಲ್ಲೇ ಶಿಕ್ಷೆ ನೀಡಿ – ವಿದ್ಯಾಕಾಶಿ ವಿದ್ಯಾರ್ಥಿನಿಯರ ಆಗ್ರಹ

    ಧಾರವಾಡ: ಮೈಸೂರಿನಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾಕಾಶಿ ಧಾರವಾಡದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.

    ಎಐಡಿಎಸ್‍ಒ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅತ್ಯಾಚಾರಿಗಳಿಗೆ ನಡು ರಸ್ತೆಯಲ್ಲೇ ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಆಗಸ್ಟ್ 30ರವರೆಗೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ಇನ್ನೊಮ್ಮೆ ಯಾರೂ ಈ ಈ ರೀತಿಯ ಕೃತ್ಯ ಎಸಗದಂತೆ ಶಿಕ್ಷೆ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲವಾ? ರಾತ್ರಿ ಮಹಿಳೆಯರು ಓಡಾಡುವುದು ತಪ್ಪಾ ಎಂದು ಪ್ರಶ್ನೆ ಮಾಡಿದ್ದಾರೆ. ಸರ್ಕಾರ ಮೊದಲು ಅಶ್ಲೀಲ ಚಿತ್ರಗಳನ್ನ ಬಂದ್ ಮಾಡಬೇಕು ಹಾಗೂ ಮದ್ಯಪಾನ ಮಾರಾಟ ಬಂದ್ ಮಾಡಲಿ ಎಂದು ಒತ್ತಾಯಿಸಿದ್ದಾರೆ.