Tag: ಶಿಮ್ಲಾ

  • ಹಿಮಾಚಲ ಪ್ರದೇಶ | ಭಾರೀ ಮಳೆಗೆ 63 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

    ಹಿಮಾಚಲ ಪ್ರದೇಶ | ಭಾರೀ ಮಳೆಗೆ 63 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

    -40ಕ್ಕೂ ಹೆಚ್ಚು ಜನರು ನಾಪತ್ತೆ, ಜು.7ರವರೆಗೆ ಆರೆಂಜ್ ಅಲರ್ಟ್

    ಶಿಮ್ಲಾ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 63 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ 400 ಕೋಟಿ ರೂ.ಗೂ ಹೆಚ್ಚು ಹಾನಿಯಾಗಿದೆ.

    ನಿರಂತರ ಮಳೆಯಿಂದಾಗಿ ಮಂಡಿ (Mandi) ಜಿಲ್ಲೆಯೊಂದರಲ್ಲಿಯೇ ಹನ್ನೊಂದು ಜನರು ಸಾವನ್ನಪ್ಪಿರುವುದು ಧೃಡಪಟ್ಟಿದ್ದು, 34 ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ ಕೆಲವೆಡೆ ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯ ಸೇವೆಗಳು ಅಸ್ತವ್ಯಸ್ತಗೊಂಡಿವೆ. ರಾಜ್ಯಾದ್ಯಂತ ಸುಮಾರು 250 ರಸ್ತೆಗಳ ಸಂಪರ್ಕ ಬಂದ್ ಆಗಿದೆ. 500ಕ್ಕೂ ಹೆಚ್ಚು ವಿದ್ಯುತ್ ವಿತರಣಾ ಟ್ರಾನ್ಸ್ಫಾರ್ಮರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಸುಮಾರು 700 ಕುಡಿಯುವ ನೀರಿನ ಘಟಕಗಳ ಮೇಲೆ ಪರಿಣಾಮ ಬೀರಿದೆ.ಇದನ್ನೂ ಓದಿ: ಗುತ್ತಿಗೆದಾರನ ಹತ್ಯೆ ಆರೋಪಿ ಮನೆಗೆ ಬೆಂಕಿ – 6 ಜನ ಅರೆಸ್ಟ್‌

    ರಾಜಧಾನಿ ಶಿಮ್ಲಾದಲ್ಲಿ ಶಾಲೆಗಳು ನೀರಿನಿಂದ ಜಲಾವೃತಗೊಂಡಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಒಂದೆಡೆ ಚತುಷ್ಪಥ ರಸ್ತೆಯ ಒಂದು ಭಾಗದ ಕುಸಿದಿದೆ. ಜೊತೆಗೆ ಮನೆಗಳು ಕುಸಿಯುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ರಾಜ್ಯದ ಕೆಲವು ಕಡೆಗಳಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಪೊಲೀಸರ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿವೆ.

    ಭಾರತೀಯ ಹವಾಮಾನ ಇಲಾಖೆ ಶಿಮ್ಲಾ, ಸೋಲನ್, ಸಿರ್ಮೌರ್, ಉನಾ, ಬಿಲಾಸ್ಪುರ್, ಹಮೀರ್ಪುರ್, ಕಾಂಗ್ರಾ, ಚಂಬಾ ಮತ್ತು ಮಂಡಿಗಳಿಗೆ ಜು.7ರವರೆಗೆ ಆರೆಂಜ್ ಅಲರ್ಟ್ ನೀಡಿದೆ.ಇದನ್ನೂ ಓದಿ: 2ನೇ ಆಷಾಢ ಶುಕ್ರವಾರ – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ

  • ಹಿಮಾಚಲ ಪ್ರದೇಶದಲ್ಲಿ ಮಳೆಯ ಅವಾಂತರ – 18 ಸ್ಥಳಗಳಲ್ಲಿ ಭೂಕುಸಿತದ ಆತಂಕ, 259 ಪ್ರಮುಖ ರಸ್ತೆಗಳು ಬಂದ್‌

    ಹಿಮಾಚಲ ಪ್ರದೇಶದಲ್ಲಿ ಮಳೆಯ ಅವಾಂತರ – 18 ಸ್ಥಳಗಳಲ್ಲಿ ಭೂಕುಸಿತದ ಆತಂಕ, 259 ಪ್ರಮುಖ ರಸ್ತೆಗಳು ಬಂದ್‌

    – ಇಡೀ ರಾಜ್ಯಾದ್ಯಂತ ನೀರು ಸರಬರಾಜಿನಲ್ಲಿ ವ್ಯತ್ಯಯ

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ನಿರಂತರ ಮಳೆಯಿಂದಾಗಿ ಅವಾಂತರಗಳು ಮುಂದುವರಿಯುತ್ತಲೇ ಇವೆ. ಭಾರೀ ಮಳೆಯ ಬಳಿಕ ಹವಾಮಾನ ಇಲಾಖೆ 22 ಸೂಕ್ಷ್ಮ ಪ್ರದೇಶಗಳ ಪೈಕಿ 18 ಸ್ಥಳಗಳಲ್ಲಿ ಭೂಕುಸಿತ (Landslide) ಸಾಧ್ಯತೆಗಳಿರುವುದಾಗಿ ಎಚ್ಚರಿಸಿದೆ.

    ಈಗಾಗಲೇ ಮಳೆಯಿಂದ ಸುಮಾರು 130 ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಇಡೀ ರಾಜ್ಯದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಆಗಾಗ್ಗೆ ಬರುತ್ತಿರುವ ಸಣ್ಣ ಸಣ್ಣ ಹಠಾತ್‌ ಮಳೆಯಿಂದ ರಾಜ್ಯದಲ್ಲಿ 259 ರಸ್ತೆಗಳಲ್ಲಿ ಸಂಚಾರವನ್ನೇ ಬಂದ್‌ ಮಾಡಲಾಗಿದೆ. ಇದನ್ನೂ ಓದಿ: ʻಪಬ್ಲಿಕ್‌ ಟಿವಿʼಯ ಅರುಣ್‌ ಬಡಿಗೇರ್‌ಗೆ ಕೊಪ್ಪಳ ಮೀಡಿಯಾ ಕ್ಲಬ್ ವಾರ್ಷಿಕ ಪ್ರಶಸ್ತಿ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸುಖ್ವಿಂದರ್‌ ಸಿಂಗ್ ಸುಖು, ಮಂಡಿ, ಕಾಂಗ್ರಾ, ಸೋಲನ್ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಅಲರ್ಟ್‌ ಆಗಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಇನ್ನೂ ಮಳೆಯಿಂದಾಗಿ ರೈಲು ಸೇವೆಗಳ ಮೇಲೂ ಪರಿಣಾಮ ಬೀರಿದೆ. ಶಿಮ್ಲಾ-ಕಲ್ಕಾ ರೈಲು ಮಾರ್ಗದಲ್ಲಿ ಮರಗಳು ಮತ್ತು ಅವಶೇಷಗಳು ಉರುಳಿ ಬಿದ್ದ ಪರಿಣಾಮ ಬಲವು ಗಂಟೆಗಳ ಕಾಲ ರೈಲು ಸೇವೆಯಲ್ಲಿ ವ್ಯತ್ಯಯವಾಗಿತ್ತು. ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡಲು ಪ್ಲ್ಯಾನ್‌ ಮಾಡಿದ್ದ ಆರೋಪಿಗಳು

  • ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯ ಆರಂಭ – 5 ಮಹಡಿಯ ಕಟ್ಟಡದಲ್ಲಿ 3 ಮಹಡಿ ಅಕ್ರಮ ನಿರ್ಮಾಣ

    ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯ ಆರಂಭ – 5 ಮಹಡಿಯ ಕಟ್ಟಡದಲ್ಲಿ 3 ಮಹಡಿ ಅಕ್ರಮ ನಿರ್ಮಾಣ

    ಶಿಮ್ಲಾ: ಶಿಮ್ಲಾದ (Shimla) ಸಂಜೌಲಿ ಪ್ರದೇಶದಲ್ಲಿ ಮಸೀದಿಯ (Mosque) ಅನಧಿಕೃತ ಮಹಡಿಗಳನ್ನು ಪುರಸಭೆಯ ಆಯುಕ್ತರ ಆದೇಶದ ಮೇಲೆ ನೆಲಸಮ ಮಾಡುವ ಕಾರ್ಯ ಆರಂಭವಾಗಿದೆ. ತೆರವು ಹಿನ್ನೆಲೆಯಲ್ಲಿ ಶಿಮ್ಲಾದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

    5 ಮಹಡಿಯ ಮಸೀದಿ ಕಟ್ಟಡದಲ್ಲಿ 3 ಮಹಡಿ ಅಕ್ರಮ ನಿರ್ಮಾಣವಾಗಿದೆ. ಈ ಕಾರಣಕ್ಕಾಗಿ ಅಕ್ಟೋಬರ್ 16 ರಂದು ಮಸೀದಿಯ ಅಕ್ರಮ ಮಹಡಿಗಳನ್ನು ಕೆಡವಲು ಆದೇಶಿಸಲಾಗಿತ್ತು. ಆದೇಶದದ ಅನ್ವಯ ಇಂದು (ಸೋಮವಾರ) ಕಟ್ಟಡದ ಅನಧಿಕೃತ ಮಹಡಿಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭವಾಗಿದೆ.

    ಸಂಜೌಲಿ ಮಸೀದಿ ಸಮಿತಿಯ ಅಧ್ಯಕ್ಷ ಮುಹಮ್ಮದ್ ಲತೀಫ್, ವಕ್ಫ್ ಬೋರ್ಡ್ ಕಟ್ಟಡ ಕೆಡವಲು ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿರುವುದನ್ನು ಖಚಿತಪಡಿಸಿದ್ದಾರೆ. ಬೇರೆ ಆರ್ಥಿಕ ಮೂಲಗಳ ಸಹಾಯವಿಲ್ಲದೆ ಸಮಿತಿಯೇ ಕಟ್ಟಡ ತೆರವುಗೊಳಿಸುವ ವೆಚ್ಚವನ್ನು ಭರಿಸುತ್ತಿರುವುದಾಗಿ ಹೇಳಿತ್ತು. ಇದರಿಂದ ಕಾರ್ಯ ಪೂರ್ಣಗೊಳಿಸಲು ಒಂದೆರಡು ತಿಂಗಳು ಬೇಕಾಗಬಹುದು ಎಂದಿದ್ದಾರೆ.

    ಸಮಿತಿಯು ತಮ್ಮ ಯೋಜನೆಯ ಬಗ್ಗೆ ಜಿಲ್ಲಾಡಳಿತ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಶಿಮ್ಲಾ ಮುನ್ಸಿಪಲ್ ಕಾರ್ಪೊರೇಶನ್‌ಗೆ ತಿಳಿಸಿತ್ತು. ಸೆಪ್ಟೆಂಬರ್ 12 ರಂದು ಸಮಿತಿಯ ನಿಯೋಗವು ಅನಧಿಕೃತ ಮಹಡಿಗಳನ್ನು ಸ್ವಯಂಪ್ರೇರಣೆಯಿಂದ ಕೆಡವಲು ಪ್ರಸ್ತಾಪವನ್ನು ಸಲ್ಲಿಸಿತ್ತು ಎಂದು ಅವರು ಹೇಳಿದ್ದಾರೆ.

    ಮಸೀದಿ ಇರುವ ಜಾಗದ ಮಾಲೀಕತ್ವವನ್ನು ವಕ್ಫ್‌ ಬೋರ್ಡ್‌ ಹೊಂದಿದ್ದರೂ, ಅಕ್ರಮ ಮಹಡಿಗಳ ನಿರ್ಮಾಣಕ್ಕೆ ಸ್ಥಳೀಯರು ವಿರೋಧಿಸಿದ್ದರು. ಈ ಭೂಮಿ ರಾಜ್ಯ ಕಂದಾಯ ಇಲಾಖೆಗೆ ಸೇರಿದ್ದು ಮತ್ತು ಮಸೀದಿಯ ವಿಸ್ತರಣೆಯಿಂದ ತಮಗೆ ತೊಂದರೆಯಾಗಿದೆ ಎಂದು ಹೇಳಿಕೊಂಡಿದ್ದರು. ಅಲ್ಲದೇ ಕಳೆದ ತಿಂಗಳು, ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳು ದೊಡ್ಡ ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ವೇಳೆ ಮಸೀದಿಯನ್ನು ಕೆಡವಲು ಒತ್ತಾಯಿಸಿದ್ದರು.

  • ಶಿಮ್ಲಾದಲ್ಲಿ ಅಕ್ರಮ ಮಸೀದಿ ನಿರ್ಮಾಣ ವಿಚಾರ – ಸ್ಥಳೀಯರು, ಪೊಲೀಸರ ನಡುವೆ ಗಲಾಟೆ

    ಶಿಮ್ಲಾದಲ್ಲಿ ಅಕ್ರಮ ಮಸೀದಿ ನಿರ್ಮಾಣ ವಿಚಾರ – ಸ್ಥಳೀಯರು, ಪೊಲೀಸರ ನಡುವೆ ಗಲಾಟೆ

    ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ (Shimla) ಅಕ್ರಮ ಮಸೀದಿ ವಿಚಾರವಾಗಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನ ಸ್ವರೂಪ ಪಡೆದುಕೊಂಡಿತು.

    ಮಹಿಳೆಯರು ಸೇರಿದಂತೆ ಪ್ರತಿಭಟನಾಕಾರರು ಮಸೀದಿಯ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಪ್ರತಿಭಟನಾಕಾರರ ಗುಂಪು ಬ್ಯಾರಿಕೇಡ್‌ಗಳ ತೆಗೆದು ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು. ಈ ವೇಳೆ ಪೊಲೀಸರು ಜಲಫಿರಂಗಿ ಮತ್ತು ಲಘು ಲಾಠಿ ಪ್ರಹಾರ ನಡೆಸಿದರು. ಇದನ್ನೂ ಓದಿ: ವಿಶ್ವದ ಎಲ್ಲ ಸಾಧನಗಳಲ್ಲಿ ಭಾರತ ನಿರ್ಮಿತ ಚಿಪ್ ಇರಬೇಕೆನ್ನುವುದು ನಮ್ಮ ಕನಸು: ಮೋದಿ

    mosque-loudspeakers

    ಮಲೆನಾಡಿನ ನಗರದಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಬುಧವಾರ ಶಿಮ್ಲಾದ ಧಲ್ಲಿ ಪ್ರದೇಶದಲ್ಲಿ ಜಮಾಯಿಸಿದರು. ಸಂಜೌಲಿ ಪ್ರದೇಶದಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿದರು.

    ಇದನ್ನು ಹಿಂದೂ-ಮುಸ್ಲಿಂ ಸಮಸ್ಯೆಯನ್ನಾಗಿ ಮಾಡಲು ಬಿಜೆಪಿ ಬಯಸಿದೆ ಎಂದು ಹಿಮಾಚಲ ಪ್ರದೇಶ ಸಿಎಂ ನರೇಶ್ ಚೌಹಾಣ್ ಅವರ ಮಾಧ್ಯಮ ಸಲಹೆಗಾರ ಆರೋಪಿಸಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್, ಅಕ್ರಮ ನಿರ್ಮಾಣದ ವಿರುದ್ಧ ರಾಜ್ಯವು ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ರ‍್ಯಾಲಿ ವೇಳೆ ಸ್ಫೋಟ ಪ್ರಕರಣ – ನಾಲ್ವರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಬದಲಿಸಿದ ಪಾಟ್ನಾ ಹೈಕೋರ್ಟ್

    ಶಿಮ್ಲಾದ ಧಲ್ಲಿ ಸುರಂಗ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪೊಲೀಸರು ಸಂಜೌಲಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

  • ತುಂಬಿ ಹರಿಯುತ್ತಿರುವ ಡ್ಯಾಂನಲ್ಲಿ ಸಿಲುಕಿದ 10 ಮಂದಿ – ರಕ್ಷಣೆಗೆ ಹರಸಾಹಸ

    ತುಂಬಿ ಹರಿಯುತ್ತಿರುವ ಡ್ಯಾಂನಲ್ಲಿ ಸಿಲುಕಿದ 10 ಮಂದಿ – ರಕ್ಷಣೆಗೆ ಹರಸಾಹಸ

    ಶಿಮ್ಲಾ: ತುಂಬಿ ಹರಿಯುತ್ತಿರುವ ಡ್ಯಾಂ ನಡುವೆ ಐವರು ಅರಣ್ಯ ಇಲಾಖೆ ಸಿಬ್ಬಂದಿ ಸೇರಿ 10 ಜನ ಸಿಲುಕಿಕೊಂಡಿರುವ ಘಟನೆ ಹಿಮಾಚಲ ಪ್ರದೇಶದ (Himachal Pradesh) ಮಂಡಿಯ ಕೋಲ್ ಡ್ಯಾಮ್ ಹೈಡಲ್ ಪ್ರಾಜೆಕ್ಟ್‍ನಲ್ಲಿ ನಡೆದಿದೆ.

    ಭಾರೀ ಮಳೆಯಿಂದ  (Rain) ಉತ್ತರಖಂಡ ಹಾಗೂ ಹಿಮಾಚಲ ಪ್ರದೇಶ ತತ್ತರಿಸಿದೆ. ಇದರಿಂದ ನದಿ ಪಾತ್ರಗಳಿಗೆ ಹಾಗೂ ಆಣೆಕಟ್ಟಿನ ಸಮೀಪ ಜನರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಆದರೂ ಈ ಹತ್ತು ಜನ ಹೇಗೆ ಅಲ್ಲಿ ಸಿಲುಕಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಅವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ – ಐವರು ಪ್ರವಾಸಿಗರಿಗೆ ಗಾಯ

    ಸ್ಥಳೀಯ ಆಡಳಿತ ಮತ್ತು ನಿವಾಸಿಗಳ ಸಹಾಯದಿಂದ ಎನ್‍ಡಿಆರ್‍ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಅಲ್ಲದೇ ಪರಿಣಿತ ಈಜುಗಾರರನ್ನು ಕರೆಸಲಾಗಿದೆ. ಘಟನೆಯ ಬ್ಗಗೆ ಸಿಲುಕಿದ್ದವರ ರಕ್ಷಣೆ ಬಳಿಕ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಡ್ಯಾಂನಲ್ಲಿ ಸಿಲುಕಿರುವ ಐವರು ಅರಣ್ಯ ಇಲಾಖೆಯ ನೌಕರರನ್ನು ಭಾದೂರ್ ಸಿಂಗ್, ಭೂಪೇಶ್ ಠಾಕೂರ್, ರೂಪ್ ಸಿಂಗ್, ಬಾಬು ರಾಮ್ ಮತ್ತು ಅಂಗದ್ ಕುಮಾರ್ ಎಂದು ಗುರುತಿಸಲಾಗಿದೆ. ಇತರ ಐವರು ಸ್ಥಳೀಯರನ್ನು ನೈನ್ ಸಿಂಗ್, ಡಾಗು ರಾಮ್, ಹೇಮ್ ರಾಜ್, ಭೂಧಿ ಸಿಂಗ್ ಮತ್ತು ಧಮೇರ್ಂದ್ರ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತುಂಗಭದ್ರಾ ಕಾಲುವೆಯಲ್ಲಿ ತೇಲಿಬಂತು ಮಹಿಳೆಯ ಶವ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Himachal Pradesh Rain: ರಣಭೀಕರ ಮಳೆಗೆ 74 ಮಂದಿ ಸಾವು – 10 ಸಾವಿರ ಕೋಟಿ ನಷ್ಟ!

    Himachal Pradesh Rain: ರಣಭೀಕರ ಮಳೆಗೆ 74 ಮಂದಿ ಸಾವು – 10 ಸಾವಿರ ಕೋಟಿ ನಷ್ಟ!

    ಶಿಮ್ಲಾ: ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ರಣಭೀಕರ ಮಳೆಯಿಂದಾಗಿ (Himachal Pradesh Rain) ಸಾವಿನ ಸಂಖ್ಯೆ 74ಕ್ಕೆ ಏರಿಕೆಯಾಗಿದ್ದು, ಸುಮಾರು 10 ಸಾವಿರ ಕೋಟಿ ನಷ್ಟವಾಗಿದೆ. ಈ ಮಾನ್ಸೂನ್‌ನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಮರುನಿರ್ಮಾಣ ಮಾಡಲು ಒಂದು ವರ್ಷ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

    ರಣ ಮಳೆಯಿಂದ ಅಲ್ಲಲ್ಲಿ ಭೂಕುಸಿತ (Landslides) ಉಂಟಾಗುತ್ತಿದೆ. ಸಮ್ಮರ್‌ ಹಿಲ್‌ನಲ್ಲಿರುವ ಶಿವ ದೇವಾಲಯದಲ್ಲಿ ಭೂಕುಸಿತ ಹಾಗೂ ಶಿಮ್ಲಾದಲ್ಲಿ ಸಂಭವಿಸಿದ ಮೂರು ಭೂಕುಸಿತಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಜೂನ್ 24 ರಂದು ಆರಂಭವಾದ ಮುಂಗಾರು ಮಳೆಯಿಂದಾಗಿ ರಾಜ್ಯದಲ್ಲಿ ಒಟ್ಟು 217 ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಎಂಟು ಮಂದಿ ಇನ್ನೂ ದೇವಾಲಯದ ಅವಶೇಷಗಳಲ್ಲಿ ಸಮಾಧಿಯಾಗಿರುವ ಶಂಕೆ ಇದೆ.

    ಮುಂಗಾರು ಆರಂಭವಾದ 55 ದಿನಗಳಲ್ಲಿ ರಾಜ್ಯದಲ್ಲಿ 113 ಕಡೆ ಭೂಕುಸಿತ ಉಂಟಾಗಿದ್ದು ಲೋಕೋಪಯೋಗಿ ಇಲಾಖೆಗೆ (PWD) 2,491 ಕೋಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) 1,000 ಕೋಟಿ ನಷ್ಟವಾಗಿದೆ. ಅಲ್ಲದೇ ನಿರಂತರ ಮಳೆಯಿಂದ ರಾಜ್ಯದಲ್ಲಿ ತೀವ್ರ ಹಾನಿಯುಂಟಾಗಿದ್ದು, ಒಟ್ಟು ರಾಜ್ಯಾದ್ಯಂತ 10 ಸಾವಿರ ಕೋಟಿಯಷ್ಟು ಸಂಪತ್ತು ಹಾನಿಯಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹಿಮಾಚಲ, ಉತ್ತರಾಖಂಡದಲ್ಲಿ ಮಳೆಗೆ 81 ಸಾವು – ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ

    ಇನ್ನೂ ಮೂರು ದಿನ ಮಳೆ:
    ಹಿಮಾಚಲ ಪ್ರದೇಶದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ. ಶಿಮ್ಲಾ, ಸೋಲನ್, ಮಂಡಿ, ಚಂಬಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಮುಸ್ಲಿಮರು ಮೊದಲು ಹಿಂದುಗಳಾಗಿದ್ದರು, ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು: ಗುಲಾಂ ನಬಿ ಆಜಾದ್

    ಪ್ರವಾಸೋದ್ಯಮಕ್ಕೂ ನಷ್ಟ:
    ರಣಭೀಕರ ಮಳೆ ರಾಜ್ಯದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಮಳೆಯಿಂದಾಗಿ ಪ್ರವಾಸೋದ್ಯಮ ಹಾಗೂ ಸೇಬು ವ್ಯಾಪಾರದ ಮೇಲೂ ಪರಿಣಾಮ ಬೀರಲಿದೆ. ದಿನಕ್ಕೆ 2 ಸಾವಿರ ರೂ. ಗಳಿಸುತ್ತಿದ್ದ ಟ್ಯಾಕ್ಸಿ ಚಾಲಕರು ಕೇವಲ 200 ರೂ. ಅಷ್ಟೇ ಸಂಪಾದಿಸುತ್ತಿದ್ದಾರೆ. ಮಳೆ ಹೀಗೆ ಮುಂದುವರಿದರೆ ರಾಜ್ಯದ ಮೇಲೆ ಇನ್ನಷ್ಟು ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ. ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಹಿಮಾಚಲ ಪ್ರದೇಶ ಸಿಎಂ ಸುಖ್‌ವೀರ್ ಸಿಂಗ್ ಸುಕು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕಂಗ್ರಾ ಜಿಲ್ಲೆಯ ಫತೇಪುರ್ ಮತ್ತು ಇಂದೋರಾದ ಪಾಂಗ್ ಡ್ಯಾಮ್‌ನಲ್ಲಿ ಪ್ರವಾಹ ಪೀಡಿತ ಪ್ರದೇಶದಿಂದ ಭಾರತೀಯ ಸೇನೆ, ವಾಯುಪಡೆ ಮತ್ತು ಇತರ ರಕ್ಷಣಾ ಸಿಬ್ಬಂದಿ 309 ಜನರನ್ನು ಸ್ಥಳಾಂತರಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಈ ಪ್ರದೇಶಗಳಿಂದ 2074 ಜನರನ್ನು ಸ್ಥಳಾಂತರಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ – 9 ಸಾವು, ಹಲವರು ಸಿಲುಕಿರುವ ಶಂಕೆ

    ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ – 9 ಸಾವು, ಹಲವರು ಸಿಲುಕಿರುವ ಶಂಕೆ

    ಶಿಮ್ಲಾ: ಭಾರೀ ಮಳೆಗೆ ಹಿಮಾಚಲ ಪ್ರದೇಶದ (Himachal Pradesh) ಶಿಮ್ಲಾದಲ್ಲಿ (Shimla) ಶಿವ ದೇವಾಲಯವೊಂದು ಕುಸಿದು ಬಿದ್ದಿದ್ದು (Temple Collapse) ಅವಶೇಷಗಳಡಿ ಸಿಲುಕಿ ಹಲವರ ಸಾವಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ.

    ಭಾರೀ ಮಳೆಯಿಂದಾಗಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.

    ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರ್ಘಟನೆಯ ಸಂದರ್ಭ ದೇವಾಲಯದ ಆವರಣದಲ್ಲಿ ಸುಮಾರು 50 ಜನರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ 7 ಬಲಿ – ಕೊಚ್ಚಿ ಹೋದ ಮನೆಗಳು

    ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್‌ನಲ್ಲಿರುವ ಶಿವ ಮಂದಿರ ಕುಸಿದು ಬಿದ್ದಿದೆ. ಸದ್ಯಕ್ಕೆ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯ ಆಡಳಿತವು ಅವಶೇಷವನ್ನು ತೆರವುಗೊಳಿಸಲು ಹಾಗೂ ಸಿಲುಕಿರುವವರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

    ಈ ನಡುವೆ ಹಿಮಾಚಲ ಪ್ರದೇಶದ ಸೋಲನ್‌ನ ಹಳ್ಳಿಯೊಂದರಲ್ಲಿ ಮೇಘಸ್ಫೋಟವಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವು ಮನೆಗಳು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿವೆ. 6 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್‌ ಸಿಸ್ಟಮ್‌, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈ ವರ್ಷ ಜೂನ್‌ನಲ್ಲಿ ಶಿಮ್ಲಾದಲ್ಲಿ 324.9 ಮಿಮೀ ಮಳೆ – ಕಳೆದ 20 ವರ್ಷಗಳಲ್ಲೇ ಇದು 2ನೇ ದಾಖಲೆ

    ಈ ವರ್ಷ ಜೂನ್‌ನಲ್ಲಿ ಶಿಮ್ಲಾದಲ್ಲಿ 324.9 ಮಿಮೀ ಮಳೆ – ಕಳೆದ 20 ವರ್ಷಗಳಲ್ಲೇ ಇದು 2ನೇ ದಾಖಲೆ

    ಶಿಮ್ಲಾ: ಈ ವರ್ಷ ಜೂನ್ ತಿಂಗಳಲ್ಲಿ ಹಿಮಾಚಲ ಪ್ರದೇಶದ (Himachal Pradesh) ರಾಜಧಾನಿಯಲ್ಲಿ 324.9 ಮಿಮೀ ಮಳೆ ದಾಖಲಾಗಿದೆ. ಇದು ಕಳೆದ 20 ವರ್ಷಗಳಲ್ಲೇ ಜೂನ್ (June) ತಿಂಗಳಲ್ಲಿ ಶಿಮ್ಲಾದಲ್ಲಿ (Shimla) ಸುರಿದ 2ನೇ ದಾಖಲೆಯ ಮಳೆಯಾಗಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 2008ರ ಜೂನ್‌ನಲ್ಲಿ ಶಿಮ್ಲಾದಲ್ಲಿ 570.2 ಮಿಮೀ ಮಳೆಯಾಗಿತ್ತು.

    ಮುಂದಿನ 2 ದಿನಗಳಲ್ಲಿ ರಾಜಸ್ಥಾನ, ಹರಿಯಾಣ ಹಾಗೂ ಪಂಜಾಬ್‌ನಂತಹ ಉಳಿದ ದೇಶದ ಭಾಗಗಳಲ್ಲಿ ನೈಋತ್ಯ ಮುಂಗಾರಿನ ಪ್ರಭಾವ ಇರಲಿದೆ. ವಾಯುವ್ಯ, ಮಧ್ಯ ಹಾಗೂ ಪಶ್ಚಿಮ ಭಾರತದಲ್ಲಿ ಮಾನ್ಸೂನ್‌ನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

     

    ಹವಾಮಾನ ಇಲಾಖೆ ಗುರುವಾರ ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ, ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ಹರ್ಯಾಣದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದಿದೆ. ಈ ನಡುವೆ ಮುಂದಿನ 4 ದಿನಗಳಲ್ಲಿ ಗೋವಾ, ಗುಜರಾತ್ ಹಾಗೂ ಮಹಾರಾಷ್ಟ್ರದ ಘಾಟ್ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಮೆಟ್ರೋದಲ್ಲಿ ಎರಡು ಮದ್ಯದ ಬಾಟಲ್ ಕೊಂಡೊಯ್ಯಲು ಅನುಮತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ – ಖಾಸಗಿ ವಾಹನದಲ್ಲಿ EVM ಸಾಗಾಟ: ಕಾಂಗ್ರೆಸ್ ದೂರು

    ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ – ಖಾಸಗಿ ವಾಹನದಲ್ಲಿ EVM ಸಾಗಾಟ: ಕಾಂಗ್ರೆಸ್ ದೂರು

    ಶಿಮ್ಲಾ: ಖಾಸಗಿ ವಾಹನದಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು (EVM) ಸಾಗಿಸಿರುವುದಾಗಿ ಆರೋಪಿಸಿ, ಶನಿವಾರ ರಾತ್ರಿ ಶಿಮ್ಲಾ (Shimla) ಜಿಲ್ಲೆಯ ರಾಂಪುರ (Rampur) ಪ್ರದೇಶದಲ್ಲಿ ಕಾಂಗ್ರೆಸ್ (Congress) ಕಾರ್ಯಕರ್ತರ ಗುಂಪೊಂದು ಮತಗಟ್ಟೆಯನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಮಾತ್ರವಲ್ಲದೇ ತಕ್ಷಣವೇ ಮತಗಟ್ಟೆ ಸದಸ್ಯರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.

    ಶನಿವಾರ ಹಿಮಾಚಲ ಪ್ರದೇಶದಲ್ಲಿ (Himachal Pradesh) ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಮತದಾನ ನಡೆದಿದೆ. ಇದರ ಬೆನ್ನಲ್ಲೇ ಇವಿಎಂ ಗಳನ್ನು ಅಧಿಕೃತವಲ್ಲದ ಖಾಸಗಿ ವಾಹನದಲ್ಲಿ ಸಾಗಿಸಲಾಗಿರುವುದಾಗಿ ಕಾಂಗ್ರೆಸ್ ಆರೋಪಿಸಿದೆ.

    ಇವಿಎಂಗಳನ್ನು ಖಾಸಗಿ ಕಾರಿನಲ್ಲಿ ಸಾಗಿಸಲಾಗುತ್ತಿದ್ದು, ನಾವು ವಾಹನವನ್ನು ಹಿಂಬಾಲಿಸಿದ್ದೇವೆ. ಈ ಬಗ್ಗೆ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಕಾಂಗ್ರೆಸ್ ಶಾಸಕ ನಂದ್ ಲಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಟಿಕೆಟ್ ಸಿಗದ್ದಕ್ಕೆ ಟವರ್ ಹತ್ತಿ ಬೆದರಿಕೆ ಹಾಕಿದ ಆಪ್ ಮುಖಂಡ

    ನಿಯಮದ ಪ್ರಕಾರ, ಮತದಾನ ಪ್ರಕ್ರಿಯೆ ಮುಗಿದ ಬಳಿಕ, ಇವಿಎಂಗಳನ್ನು ಸರ್ಕಾರಿ ವಾಹನಗಳಲ್ಲಿ ಎಣಿಕೆ ಕೇಂದ್ರಕ್ಕೆ ಸಾಗಿಸಬೇಕು. ಅಧಿಕಾರಿಗಳು ತಿಳಿಸಿರುವಂತೆ, 66-ರಾಮ್‌ಪುರ (SC) ವಿಧಾನಸಭಾ ಕ್ಷೇತ್ರಕ್ಕೆ ಶನಿವಾರ ಮತದಾನ ನಡೆದಿದೆ. ಬಳಿಕ ಇವಿಎಂಗಳನ್ನು ಖಾಸಗಿ ವಾಹನಗಳಲ್ಲಿ ಕೊಂಡೊಯ್ದಿರುವ ಬಗ್ಗೆ ಮಾಹಿತಿ ಲಭಿಸಿರುವುದಾಗಿ ಜಿಲ್ಲಾ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

    ಇವಿಎಂ ಯಂತ್ರಗಳನ್ನು ಖಾಸಗಿ ವಾಹನದಲ್ಲಿ ಸಾಗಿಸಿರುವ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದೀಗ ಮತಗಟ್ಟೆ ಸದಸ್ಯರಾದ ಜಗತ್ ರಾಮ್, ಬೌರ್ ನರ್ವಾ, ಇಂದರ್ ಪಾಲ್, ಕುಮಾರಸೇನ್, ರಾಜೇಶ್ ಕುಮಾರ್, ಪ್ರದೀಪ್ ಕುಮಾರ್, ಗೋವರ್ಧನ್ ಸಿಂಗ್ ಹಾಗೂ ಇತರರನ್ನು ಜಿಲ್ಲಾ ಚುನಾವಣಾ ಆಯೋಗ ಅಮಾನತುಗೊಳಿಸಿದೆ. ಇದನ್ನೂ ಓದಿ: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

    Live Tv
    [brid partner=56869869 player=32851 video=960834 autoplay=true]

  • ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ಶಿಮ್ಲಾ: ಗರೀಬ್ ಕಲ್ಯಾಣ್ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಮೋದಿಯವರು ಮಂಗಳವಾರ ಹಿಮಾಚಲ ಪ್ರದೇಶಕ್ಕೆ ಬಂದಿಳಿದಿದ್ದು, ಅವರನ್ನು ಸ್ವಾಗತಿಸಲು ನಗರದ ಮಾಲ್ ರಸ್ತೆಯ ಬೀದಿಗಳಲ್ಲಿ ಅಪಾರ ಬೆಂಬಲಿಗರು ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಜನಸಮೂಹದ ನಡುವೆ ಒಬ್ಬ ಮಹಿಳೆ ಹೀರಾಬೆನ್ ಮೋದಿಯವರ ಪೆನ್ಸಿಲ್ ಸ್ಕೆಚ್ ಅನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಿದ್ದಾರೆ.

    ನಂತರದಲ್ಲಿ ಮಹಿಳೆಯು ಪ್ರಧಾನಿಯವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ಅವರು ತಮ್ಮ ಬೆಂಬಲಿಗರಿಂದ ಈ ಅದ್ಭುತ ಉಡುಗೊರೆಯನ್ನು ಸ್ವೀಕರಿಸಲು ಸಂಪೂರ್ಣವಾಗಿ ಉತ್ಸುಕರಾಗಿದ್ದರು. ಅಷ್ಟೇ ಅಲ್ಲದೇ ಮಹಿಳೆಯು ಪ್ರಧಾನಿಯವರ ಚಿತ್ರವನ್ನು ಸಹ ಚಿತ್ರಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಅವರು ಮಹಿಳೆಯೊಂದಿಗೆ ಸಂಭಾಷಣೆ ನಡೆಸುತ್ತಿರುವ ಸಂದರ್ಭವು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ವೈರಲ್ ಆಗಿರುವ ವೀಡಿಯೊದಲ್ಲಿ, ಪ್ರಧಾನಿ ಅವರು ತಮ್ಮ ಬೆಂಬಲಿಗರಿಂದ ತಮ್ಮ ತಾಯಿಯ ಸ್ಕೆಚ್‍ನ್ನು ಉಡುಗೊರೆಯಾಗಿ ಸ್ವೀಕರಿಸುತ್ತಿದ್ದಾರೆ. ಈ ಅಮೂಲ್ಯವಾದ ಪೋಟೋವನ್ನು ಉಡುಗೊರೆಯಾಗಿ ನೀಡಿದ ಮಹಿಳೆಯೊಂದಿಗೆ ಸಂಭಾಷಣೆಯನ್ನು ನಡೆಸಿದ ಅವರು, ಇದನ್ನು ನೀವೇ ತಯಾರಿಸಿದ್ದೀರಾ? ಇದನ್ನು ಮಾಡಲು ನೀವು ಎಷ್ಟು ಸಮಯ ತೆಗೆದುಕೊಂಡಿದ್ದೀರಿ ಎಂದು ಕೇಳಿದ್ದಾರೆ. ಇದನ್ನೂ ಓದಿ:  ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

    ಗರೀಬ್ ಕಲ್ಯಾಣ್ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಂಗಳವಾರ ಬೆಳಗ್ಗೆ ಶಿಮ್ಲಾ ತಲುಪಿದ್ದಾರೆ. ಅವರು 16 ಕೇಂದ್ರ ಪ್ರಾಯೋಜಿತ ಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮೋದಿ ಸರ್ಕಾರದ ಎಂಟು ವರ್ಷಗಳ ವಾರ್ಷಿಕೋತ್ಸವದ ಅಂಗವಾಗಿ ದೇಶಾದ್ಯಂತ ಇದೇ ರೀತಿಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.