Tag: ಶಿರೂರು ಭೂಕುಸಿತ

  • ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ

    ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ

    ಕಾರವಾರ: ಶಿರೂರು ಭೂ ಕುಸಿತ ದುರಂತದ (Shiruru LandSlide) ಹಿನ್ನೆಲೆ ನಡೆಯುತ್ತಿದ್ದ ಮೂರನೇ ಹಂತದ ಡ್ರಜ್ಜಿಂಗ್ ಕಾರ್ಯಾಚರಣೆಯನ್ನು (Dregding Operation) ಸ್ಥಗಿತಮಾಡಲಾಗಿದೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲದ (Ankola) ಶಿರೂರು ಭೂ ಕುಸಿತದ ಹಿನ್ನೆಲೆ ಮೂರನೇ ಹಂತದ ಕಾರ್ಯಾಚರಣೆಯು ನಡೆಯುತ್ತಿತ್ತು. 13 ದಿನ ಪೂರೈಸಿದ ಡ್ರಜ್ಜಿಂಗ್ ಬೋಟ್ ಮೂಲಕ ನಡೆಯುತ್ತಿದ್ದ ಕಾರ್ಯಾಚರಣೆಯನ್ನು ಇಂದು ಸ್ಥಗಿತಮಾಡಲಾಗಿದೆ.ಇದನ್ನೂ ಓದಿ: ಒಳಮೀಸಲಾತಿಗೆ ಆಗ್ರಹಿಸಿ ರಾಯಚೂರು ಬಂದ್: ಬಸ್ ಸಂಚಾರ ಸಂಪೂರ್ಣ ಸ್ಥಗಿತ

    ಕಳೆದ 13 ದಿನದಿಂದ ಅಂಕೋಲದ ಗಂಗಾವಳಿ ನದಿಯಲ್ಲಿ ಓಷಿಯನ್ ಕಂಪನಿ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿತ್ತು. 90 ಲಕ್ಷದ ಮೊತ್ತದಲ್ಲಿ 13 ದಿನ ಕಾರ್ಯಾಚರಣೆ ಪೂರ್ಣಗೊಂಡಿದೆ. 13 ದಿನದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಶವ ಹಾಗೂ ಲಾರಿ ಹೊರತೆಗೆದಿದ್ದು, ನಂತರ ಮನುಷ್ಯನ ಮೂಳೆಗಳು ಹಾಗೂ ಕೆಲವು ವಸ್ತುಗಳನ್ನು ಸಹ ಹೊರತೆಗೆಯಲಾಗಿದೆ.

    ಇದಾದ ಬಳಿಕ ಗಂಗಾವಳಿ ನದಿಯಲ್ಲಿ ಬಿದ್ದಿದ್ದ ಬೃಹತ್ ಆಲದ ಮರ ಹೊರತೆಗೆಯಲಾಗಿತ್ತು. ಆದರೆ ಇದೀಗ ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ. ಇದರ ಬದಲಿಗೆ ಇಂದಿನಿಂದ ಇಬ್ಬರು ಮುಳುಗು ತಜ್ಞರು ಹಾಗೂ ಪೋಕ್ ಲೈನ್ ಮೂಲಕ ಹೋಟೆಲ್ ಕುಸಿದುಹೋದ ಸ್ಥಳದಲ್ಲಿ ನಿಗದಿ ಮಾಡಿದ ಎರಡನೇ ಪಾಯಂಟ್‌ನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಭೂಕುಸಿತ ದುರಂತದಲ್ಲಿ ಸತತ 77 ದಿನದ ದೀರ್ಘ ಕಾರ್ಯಾಚರಣೆ ಇದಾಗಿದ್ದು, ಒಟ್ಟು ಮೂರು ಹಂತದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಸಿಕ್ಕ ಮೂಳೆಗಳ ಡಿ.ಎನ್.ಎ ವರದಿ ಬರಬೇಕಿದ್ದು, ಕಾಣೆಯಾದ ಜಗನ್ನಾಥ್, ಲೋಕೇಶ್ ಶವ ಶೋಧ ನಡೆಯಬೇಕಿದೆ.ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತು

  • ಶಿರೂರು ಕಾರ್ಯಾಚರಣೆಯಲ್ಲಿ ಸಿಕ್ತು ಮನುಷ್ಯನ ಮೂಳೆಗಳು

    ಶಿರೂರು ಕಾರ್ಯಾಚರಣೆಯಲ್ಲಿ ಸಿಕ್ತು ಮನುಷ್ಯನ ಮೂಳೆಗಳು

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲದ (Ankola) ಶಿರೂರಿನಲ್ಲಿ (Shirur) ಇಂದು (ಸೋಮವಾರ) ಗಂಗಾವಳಿ ನದಿಯಲ್ಲಿ (Gangavali River) ನಡೆದ ಶವ ಶೋಧ ಕಾರ್ಯಾಚರಣೆಯಲ್ಲಿ ಮನುಷ್ಯನ ಎದೆ ಹಾಗೂ ಕೈ ಭಾಗದ ಮೂಳೆಗಳು ದೊರೆತಿವೆ.

    ಭಾನುವಾರ ನಡೆದ ಕಾರ್ಯಾಚರಣೆಯಲ್ಲಿ ಆಲದ ಮರ ಸೇರಿದಂತೆ ಹಲವು ವಸ್ತುಗಳನ್ನು ಹೊರತೆಗೆಯಲಾಗಿತ್ತು. ಇಂದು ಶವದ ಪಳೆಯುಳಿಕೆಗಳು ದೊರೆತಿದ್ದು, ಡಿಎನ್‌ಎ ಪರೀಕ್ಷೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: MUDA Scam Case: ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED

    ಮೂರನೇ ಹಂತದ ಶವ ಶೋಧದಲ್ಲಿ ಅರ್ಜುನ್ ಶವ ಹೊರ ತೆಗೆಯಲಾಗಿದೆ. ಶಿರೂರಿನ ಜಗನ್ನಾಥ್, ಲೋಕೇಶ್ ಅವರ ಶವ ಇನ್ನಷ್ಟೇ ಸಿಗಬೇಕಿದೆ. ಅಂಕೋಲ ಪೊಲೀಸರು ಸಿಕ್ಕ ಅಸ್ತಿಪಂಜರದ ಮೂಳೆಗಳನ್ನು ಡಿಎನ್‌ಎ ಪರೀಕ್ಷೆಗೆ ರವಾನೆ ಮಾಡಲಿದ್ದಾರೆ. ಸದ್ಯ ಈ ಮೂಳೆಗಳು ಯಾರದ್ದು ಎಂಬ ಬಗ್ಗೆ ಮಾಹಿತಿ ಡಿಎನ್‌ಎ ಪರೀಕ್ಷೆ ನಂತರ ತಿಳಿದು ಬರಲಿದೆ. ಇದನ್ನೂ ಓದಿ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ತಂದೆ, ಮೂವರು ಮಕ್ಕಳು ಸಾವು

  • ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಶವಗಳಿಗೆ ಶೋಧ – ಕಾರವಾರ ಬಂದರಿಗೆ ಡ್ರಜ್ಜಿಂಗ್ ಬೋಟ್!

    ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಶವಗಳಿಗೆ ಶೋಧ – ಕಾರವಾರ ಬಂದರಿಗೆ ಡ್ರಜ್ಜಿಂಗ್ ಬೋಟ್!

    – 90 ಲಕ್ಷ ರೂ. ವೆಚ್ಚದಲ್ಲಿ ಕಾಣೆಯಾದವರ ಶೋಧ ಕಾರ್ಯ

    ಕಾರವಾರ: ಜುಲೈ ತಿಂಗಳಿನಲ್ಲಿ ಸಂಭವಿಸಿದ್ದ ಶಿರೂರು ಭೂಕುಸಿತ ದುರಂತದ (Shiruru LandSlide) ಹಿನ್ನಲೆ ಇದೀಗ ಮತ್ತೆ ಶವಗಳ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾದ (Ankola) ಶಿರೂರಿನಲ್ಲಿ (Shiruru) ಜುಲೈ 16ರಂದು ಭೂಕುಸಿತವಾಗಿ 11 ಜನ ಮೃತಪಟ್ಟಿದ್ದು, 8 ಜನರ ಶವ ಶೋಧ ಮಾಡಲಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಮೃತದೇಹಗಳು ದೊರೆಯದೇ ಮುಳುಗು ತಜ್ಞರು ಶೋಧ ನಡೆಸಿದರೂ ಮಳೆಯ ಕಾರಣ ಯತ್ನಗಳು ವಿಫಲವಾಗಿದ್ದವು. ಹೀಗಾಗಿ ಜುಲೈ 28 ರಂದು ಕಾರ್ಯಾಚರಣೆ ಸ್ಥಗಿತ ಮಾಡಲಾಗಿತ್ತು. ಇದರ ನಂತರ ಶೋಧಕ್ಕೆ ಪ್ರಯತ್ನ ನಡೆಸಿದರೂ ಗಂಗಾವಳಿ ನದಿಯಲ್ಲಿ ಮಳೆಯಿಂದ ನೀರು ಹೆಚ್ಚಾದ ಪರಿಣಾಮ ಮುಳುಗು ತಜ್ಞರು ಸಹ ಕೈಚೆಲ್ಲಿ ಕೂರುವಂತಾಗಿತ್ತು.ಇದನ್ನೂ ಓದಿ: ಪೇಜರ್‌ ಆಯ್ತು ಈಗ ಹಿಜ್ಬುಲ್ಲಾ ಘಟಕಗಳಲ್ಲಿ ವಾಕಿಟಾಕಿಗಳ ಸ್ಫೋಟ – 14 ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ

    ಈ ಹಿನ್ನೆಲೆಯಲ್ಲಿ ಗೋವಾದ ಅಭಿಷೇನಿಯ ಓಷನ್ ಸರ್ವಿಸಸ್ ಕಂಪನಿಗೆ 90 ಲಕ್ಷದ ಟೆಂಡರ್ ನೀಡಿ ಇದೀಗ ಕಾರವಾರಕ್ಕೆ ಡ್ರಜ್ಜಿಂಗ್ ಬೋಟ್ (Dredging Boat) ತರಿಸಲಾಗಿದ್ದು, ಶುಕ್ರವಾರದಿಂದ ಕಾರ್ಯಾಚರಣೆ ನಡೆಸಲಿದೆ.

    ಇನ್ನೂ ಹೆದ್ದಾರಿ ಪ್ರಾಧಿಕಾರ, ಶಾಸಕರ ನಿಧಿ ಹಾಗೂ ದಾನಿಗಳ ಸಹಾಯದಿಂದ 90 ಲಕ್ಷ ಹಣ ಒದಗಿಸಲಾಗಿದ್ದು, ಮುಂಗಡವಾಗಿ ಡ್ರಜ್ಜಿಂಗ್ ಬೋಟ್‌ಗೆ 40 ಲಕ್ಷ ರೂ. ಹಣ ಸಂದಾಯ ಮಾಡಲಾಗಿದೆ. ಈ ಮೊದಲು ಶವ ಶೋಧದ ನಂತರ ಗಂಗಾವಳಿ ನದಿಯಲ್ಲಿ ಭೂ ಕುಸಿತದಿಂದ ಉಂಟಾದ ಗುಡ್ಡದ ಮಣ್ಣನ್ನು ತೆರವು ಮಾಡುವುದಾಗಿ ಕಾರವಾರದ ಶಾಸಕ ಸತೀಶ್ ಸೈಲ್ ತಿಳಿಸಿದ್ದರು. ಕಾರವಾರದ ಬಂದರಿನಿಂದ ಗಂಗಾವಳಿ ನದಿಯವರೆಗೆ ಸಮುದ್ರದ ಮೂಲಕ ಡ್ರಜ್ಜಿಂಗ್ ಬೋಟ್ ಕೊಂಡೊಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

    ಸದ್ಯ ಅಬ್ಬರದ ಮಳೆ ನಿಂತಿದೆ. ಈಗಾಗಲೇ ಭೂ ಕುಸಿತದಿಂದ ಹಾನಿಯಾಗಿರುವ ಪ್ರದೇಶದ ಮಣ್ಣು ತೆರವಿಗೆ ಕೋಟಿಗಟ್ಟಲೇ ಹಣ ವ್ಯಯಿಸಲಾಗಿದೆ. ಜೊತೆಗೆ ದೆಹಲಿಯಿಂದ ಬಂದ ಕ್ವಿಕ್ ಸೆಕ್ಯುರಿಟಿ ಸರ್ವಿಸ್ ಸೆಲ್ಯೂಷನ್‌ನ ದ್ರೋಣ್ ವಿಶೇಷ ತಂಡಕ್ಕೆ ಲಕ್ಷಗಟ್ಟಲೆ ಹಣ ನೀಡಬೇಕಿದ್ದು, ಇದೀಗ ಹಣದ ಕೊರತೆಯಿದ್ದರೂ ದಾನಿಗಳು, ಶಾಸಕರ ನಿಧಿಯ ಹಣ ಬಳಸಿ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.