Tag: ಶಿಲ್ಪಾನಾಗ್

  • ಮನುಷ್ಯತ್ವ ಇರೋರು ಜನ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ – ಫೇಸ್‌ಬುಕ್‌ನಲ್ಲಿ ರೋಹಿಣಿ ವಿರುದ್ಧ ರೂಪಾ ಕಿಡಿ

    ಮನುಷ್ಯತ್ವ ಇರೋರು ಜನ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ – ಫೇಸ್‌ಬುಕ್‌ನಲ್ಲಿ ರೋಹಿಣಿ ವಿರುದ್ಧ ರೂಪಾ ಕಿಡಿ

    – ಅಧಿಕಾರಿಯಾಗಿ ರಾಜಕಾರಣಿಗಳ ಜೊತೆ ಸಂಧಾನ ಏಕೆ?
    – ಕನ್ನಡದ ಹುಡುಗಿ ಶಿಲ್ಪಾನಾಗ್ (ಐಎಎಸ್) ಜೊತೆ ಜಗಳ ಯಾಕೆ?
    – ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿ ಹೋಗಿದ್ದು ಹೇಗೆ?

    ಮೈಸೂರು/ಬೆಂಗಳೂರು: ಐಎಎಸ್ ವರ್ಸಸ್ ಐಪಿಎಸ್ ಅಧಿಕಾರಿಗಳ ನಡುವಿನ ಕಿತ್ತಾಟ ತಾರಕಕ್ಕೇರಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಐಜಿಪಿ ಡಿ. ರೂಪಾ (D Roopa) ಸರಣಿ ಆರೋಪಗಳನ್ನ ಮಾಡಿದ್ದಾರೆ.

    `ಮಾಜಿ ಸಚಿವ ಸಾ.ರಾ ಮಹೇಶ್ (Sa Ra Mahesh) ಜೊತೆ ರೋಹಿಣಿ ಸಿಂಧೂರಿ ಸಂಧಾನ’ ಶೀರ್ಷಿಕೆಯ ಯುಟ್ಯೂಬ್ ವೀಡಿಯೋ ಲಿಂಕ್‌ವೊಂದನ್ನು ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿರುವ ರೂಪಾ ಅವರು 19 ಸರಣಿ ಆರೋಪಗಳನ್ನ ಮಾಡಿದ್ದಾರೆ. ರೋಹಿಣಿ ಮಾಡಿರೊ ಅಕ್ರಮ ಕಾರ್ಯಕ್ಕೆ ನನ್ನ ಬಳಿ ಸಾಕ್ಷಿಗಳು ಇವೆ. ಅನೇಕ ಹಿರಿಯ ಐಎಎಸ್ ಅಧಿಕಾರಿಗಳಿಗೆ ಈಕೆಯ ಆಕ್ಷೇಪಾರ್ಹ ಚಿತ್ರ ಕಳಿಸಿದ್ದಾರೆ. ಈಗಲೂ ನನ್ನ ಬಳಿ ಆ ಫೋಟೊಗಳಿವೆ. ಚಾಮರಾಜನಗರಲ್ಲಿ ಆಕ್ಸಿಜನ್ ದುರಂತದಿಂದ 24 ಜನ ಸತ್ತಾಗ ಈಕೆಯ ಮೇಲೆ ತನಿಖೆ ನಡೆಸದೆ ಪಾರಾದ್ರು. ಕನ್ನಡದ ಹುಡುಗಿ ಐಎಎಸ್ ಶಿಲ್ಪಾನಾಗ್ ವಿರುದ್ಧ ಜಗಳ, ರಂಪ ಏತಕ್ಕೆ ಮಾಡಿದ್ರು? ಅಧಿಕಾರಿಯಾಗಿ ರಾಜಕಾರಣಿಗಳ ಜೊತೆ ಸಂಧಾನ ಏಕೆ ಎಂದೆಲ್ಲಾ ಪ್ರಶ್ನಿಸಿದ್ದಾರೆ.

    ಅಲ್ಲದೇ ಕೋವಿಡ್ ನಿಂದ ಜನ ಸಾಯ್ತಿದ್ರೆ ಮಾನವೀಯತೆ ಇಲ್ಲದೇ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿದ್ದು ಸಾಬೀತಾಗಿದೆ. ಮನುಷ್ಯತ್ವ ಇರೋರು ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಾರ್ಚ್‌ನಲ್ಲಿ ದಶಪಥ ರಸ್ತೆ ಲೋಕಾರ್ಪಣೆ, 250 ರೂ. ಟೋಲ್ ನಿಗದಿ ಸಾಧ್ಯತೆ: ಪ್ರತಾಪ್ ಸಿಂಹ

    ಫೇಸ್‌ಬುಕ್ ಪುಟದಲ್ಲಿ ರೂಪಾ ಆರೋಪಗಳೇನು?
    ಇಂದಿನ ಸುದ್ದಿ, ಎಲ್ಲಾ ಕಡೆ viral ಆಗಿರೋದು, ರೋಹಿಣಿ ಸಿಂಧೂರಿ , ಸಾ.ರಾ. ಮಹೇಶ್, ಮಾನ್ಯ ಎಂಎಲ್ಎ ಅವರ ಬಳಿ ಸಂಧಾನಕ್ಕೆ ಹೋಗಿದ್ದರು ಅಂತ. ಸಂಧಾನಕ್ಕೆ ಹೋಗುವುದು ಅಂದರೆ ಅರ್ಥ ಏನು? ಯಾವ ಐಎಎಸ್ ಅಧಿಕಾರಿ ಕೂಡ ಎಂಎಲ್ಎ ಅಥವಾ ರಾಜಕೀಯ ವ್ಯಕ್ತಿಗಳ ಜೊತೆ, ತಾವು ನಿರ್ವಹಿಸಿದ ಕರ್ತವ್ಯ ನಿಮಿತ್ತ ಸಂಧಾನಕ್ಕೆ ಹೋಗಿದ್ದು ನಾನು ಇದೇ ಮೊದಲು ಕೇಳಿದ್ದು. ಹಾಗಾದರೆ, ರೋಹಿಣಿ ಸಿಂಧೂರಿ ಸಂಧಾನಕ್ಕೆ ಹೋಗಿದ್ದು ಯಾಕೆ? ಆಕೆ ಏನನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ? ತಮ್ಮ ಕರ್ತವ್ಯ ಲೋಪದ ಬಗ್ಗೆಯೋ, ತಮ್ಮ ಭ್ರಷ್ಟಾಚಾರ ಬಗ್ಗೆಯೋ ಏನು?

    1. ಡಿಕೆ Ravi ias, ಸಂಭಾವಿತ ವ್ಯಕ್ತಿ. ಸಿಬಿಐ ರಿಪೋರ್ಟ್ ನಲ್ಲಿ ಅವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ limit cross ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.

    2. ಮುಂದೆ ಸಿಇಒ ಮಂಡ್ಯ ಆದಾಗ ಈಕೆ ಕಟ್ಟಿಸಿದ toilets ಗಿಂತ ಹೆಚ್ಚು ತೋರಿಸಿ figures fudge ಮಾಡಿ ಕೇಂದ್ರ ಸರ್ಕಾರದ ಪ್ರಶಸ್ತಿ ತೆಗೆದುಕೊಂಡರು ಎಂಬ ಆರೋಪ ಕೇಳಿ ಬಂತು. ಅದರ ತನಿಖೆಯೇ ಆಗಲಿಲ್ಲ. ಇದನ್ನೂ ಓದಿ: ಸಿದ್ದು ತವರಲ್ಲಿ ಆಪರೇಷನ್ ಕಾಂಗ್ರೆಸ್- ಜೆಡಿಎಸ್, ಬಿಜೆಪಿ ಮುಖಂಡರ ನಿದ್ದೆಗೆಡಿಸಿದ ಡಿಕೆಶಿ ತಂತ್ರ

    3. ಚಾಮರಾಜನಗರದಲ್ಲಿ 24 ಜನರು Oxygen ಇಲ್ಲದೇ ಸತ್ತಾಗ, ಆಪಾದನೆಗಳು ಇವರ ಮೇಲೇ ನೇರವಾಗಿ ಬಂತು. ಅದರಿಂದ ಹೇಗೋ ಪಾರಾದರು.

    4. ಕನ್ನಡದ ಹುಡುಗಿ ಶಿಲ್ಪಾ ನಾಗ್ ಐಎಎಸ್. ಅವರ ಜೊತೆ ಜಗಳ, ರಂಪ. ಏತಕ್ಕಾಗಿ? ಅಲ್ಲಿ ಯಾವುದೇ ಮೌಲ್ಯಾಧಾರಿತ ವಸ್ತು ವಿಷಯ ಇರಲಿಲ್ಲ. ಕೋಳಿ ಜಗಳ. ಶಿಲ್ಪಾ ಗೆ ಹೆಚ್ಚು ಕೆಲಸ ಮಾಡಿದ್ದು, ಹೆಚ್ಚು ಅವರ ಬಗ್ಗೆ ಪಾಸಿಟಿವ್ ಆಗಿ ಬರೆಯಲಾಯಿತು. ಅದನ್ನು ಸಹಿಸಿಕೊಳ್ಳಲಾಗದೆ ಶಿಲ್ಪಾ ಗೆ harrassment ಮಾಡಿದರು ಎಂದು ಕೆಲವರು ಹೇಳಿದರು. ಕಡೆಗೆ ಮೈಸೂರಲ್ಲಿ ಗೌಡ, journalists Shilpa nag ಅವರಿಗೆ ಜಾತಿ ಬೆಂಬಲ ನೀಡುತ್ತಿದ್ದಾರೆ ಎಂಬ ಮಟ್ಟಿಗೆ ಸ್ವತಃ ಇಲ್ಲದ ಜಾತೀಯತೆ ಮೈಸೂರಿನ ಜರ್ನಲಿಸ್ಟ್‌ಗಳಲ್ಲಿ ಬಿತ್ತಿದರು ಈಕೆ ಎಂದು ಅನೇಕರು ಹೇಳುತ್ತಾರೆ.

    5. ಹರ್ಷ ಗುಪ್ತ ಐಎಎಸ್ ಅತ್ಯಂತ ಪ್ರಾಮಾಣಿಕ ಅಧಿಕಾರಿ. ಅವರ ಜೊತೆ ಜಗಳ. ಎಲ್ಲಾ ಐಎಎಸ್ ಅಧಿಕಾರಿಗಳಿಗೆ ಈ ವಿಷಯ ಗೊತ್ತಿದೆ.

    6. ಮಣಿವಣ್ಣನ್ ಐಎಎಸ್ ಜೊತೆ ಲೇಬರ್/ ಕಾರ್ಮಿಕ ಇಲಾಖೆಯಲ್ಲಿ ಇದ್ದಾಗ ಜಗಳ ಮಾಡಿದ್ದು ಜಗಜನಿತ. ಮಣಿವಣ್ಣನ್ ಒಂದು ರೀತಿ ಅಜಾತಶತ್ರು. ಅಂಥದರಲ್ಲಿ…ಅವರ ಜೊತೆ ಜಗಳ.

    7. ಡಿಕೆ ರವಿ ತೀರಿದ ಕೆಲ ತಿಂಗಳು ಮುಂಚೆ ಕನ್ನಡದ ಹುಡುಗ, N ಹರೀಶ್ ಐಪಿಎಸ್, ಈಕೆಯ batchmate. ಮದ್ವೆ ಆಗಿರಲಿಲ್ಲ. ಆತ ಈಕೆಗೆ ಕಾದು ಕಾದು ಆತ ಆತ್ಮಹತ್ಯೆ ಮಾಡಿಕೊಂಡದ್ದು ಎಂದು ಹಲವರು ಹೇಳಿದರೂ ನಾನು ಅದನ್ನು ನಂಬಲಿಲ್ಲ, ಈಗೂ ನಂಬಿಲ್ಲ.

    8. ಸಾ.ರಾ.mahesh, ಎಂಎಲ್ಎ ಅವರ ಮೇಲೆ ಅನೇಕ ಆಪಾದನೆಗಳನ್ನು ಮಾಡಿದ ಈಕೆ ಒಂದನ್ನೂ prove ಮಾಡಲಿಲ್ಲ. ಅದಕ್ಕೇ ಸಂಧಾನಕ್ಕೆ ಹೋದರಾ?

    9. ಮೈಸೂರು ಎಂಪಿ ಪ್ರತಾಪ್ ಸಿಂಹ ಮೇಲೆ ಕೂಡ ಅನೇಕರ ಬಳಿ ಈಕೆ prove ಮಾಡಲಾರದ allegations ಮಾಡಿದರು. ಅಂದರೆ, ಪ್ರತಾಪ್ ಸಿಂಹ ಅವರು private clinics ಗೆ Oxygen ಕೇಳುತ್ತಾ ತಮ್ಮ ಸ್ವಂತ ಲಾಭಕ್ಕೆ ನಿಂತಿದ್ದಾರೆ ಎಂಬ ನಿರಾಧಾರ ಆರೋಪ ಮಾಡಿದರು. ನಿಜ ಇದ್ದಿದ್ದೇ ಆದರೆ ಅದನ್ನು prove ಯಾಕೆ ಮಾಡಲಿಲ್ಲ?

    10. ಹಾಸನದಲ್ಲಿ ತನ್ನನ್ನು ಒಂದು ವರ್ಷದ ಒಳಗೆ ಎತ್ತಂಗಡಿ ಮಾಡಿದ ಸರ್ಕಾರದ ವಿರುದ್ಧ CAT/ Central administrative tribunal, ಇಲ್ಲಿ ದಾವೆ ಹೂಡಿದರು. ಆ ದಾವೆಗೆ application ಬರೆದು ಕೊಟ್ಟಿದ್ದೇ ನನ್ನ ಪತಿ, Munish moudgil ias. ನನ್ನೆದುರಿಗೆ ಬರೆದು ಆಕೆಗೆ, ಆಕೆಯ ತಂದೆಗೆ, ಲಾಯರ್ ಗೆ ಕಳಿಸಿದ್ದರು. ಆದರೆ ಈಕೆ, ಮೈಸೂರು ಡಿಸಿ ಆಗಿ ಹೋದದ್ದು ಹೇಗೆ? ತನಗಿಂತ ಕೇವಲ 29 ದಿನ ಮುಂಚೆ ಮೈಸೂರಿಗೆ ಡಿಸಿ ಎಂದು transfer ಆಗಿದ್ದ ಕನ್ನಡ ಹುಡುಗ ಶರತ್ ಅವರನ್ನು ಒಕ್ಕಲೆಬ್ಬಿಸಿದ್ದು ನ್ಯಾಯವೇ? ತನ್ನಂತೆ ಪರರು ಎಂಬ ಭಾವನೆ ಇಲ್ಲವೇಕೆ? 29 ದಿನದಲ್ಲಿ ಯಾವುದೇ ಕಳಂಕ, ಆರೋಪ ಇಲ್ಲದ ಶರತ್ ರನ್ನು replace ಮಾಡಿದ್ದು ಯಾವ high level influence ನಿಂದಾ?

    11. Dr Ravishankar IAS ಈಕೆಯ ಮೇಲೆ ಪ್ರಿಲಿಮಿನರಿ inquiry ಯಲ್ಲಿ ತಪ್ಪುಮಾಡಿರುವುದು ಸಾಬೀತಾಗಿದೆ. ಮೈಸೂರಿನ ಡಿಸಿ ಮನೆ, ಹೆರಿಟೇಜ್ building ಅಂತಾ ಇದ್ದರೂ ಅಲ್ಲಿ ಟೈಲ್ಸ್ ಹಾಕಿದ್ದು, ಸ್ವಿಮ್ಮಿಂಗ್ ಪೂಲ್ ಮಾಡಿದ್ದು. ಮನುಷ್ಯತ್ವ ಇರೋರು covid ಸಮಯದಲ್ಲಿ ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರ? John was fiddling when Rome was burning ಅಂದ ಹಾಗೆ. Marie Antoinette ಎಂಬ ರಾಣಿ , ಜನರು bread ಇಲ್ಲದೆ ಸಾಯ್ತಿದ್ದಾರೆ ಅಂತ ಕೇಳಿಸಿಕೊಂಡಾಗ, bread ಇಲ್ಲದೆ ಇದ್ದರೆ ಏನು, ಜನರು cake ತಿನ್ನಲಿ ಅಂದಳಂತೆ. ಆ ರಾಣಿಯ ನೆನಪಾಯ್ತು.

    12. ಹಿಂದೆ ನನಗೆ ಒಬ್ಬರು whatsapp ಮೆಸೇಜ್ ಮಾಡಿ ತಾವು ಇವರ ಪರವಾಗಿ ನಡೆಸುವ social media handling agency ಒಂದರಲ್ಲಿ ಕೆಲಸ ಮಾಡಿದ್ದು, ಈಗ ಆ ಕೆಲಸ ಬಿಟ್ಟಿದ್ದೇನೆ ಎಂದು ಹೇಳುತ್ತಾ, ಹೇಗೆ ಅಲ್ಲಿ ಈಕೆಯ ಪರವಾಗಿ ಸುದ್ದಿ, photos ,videos create ಮಾಡುತ್ತಾರೆ, ಹೇಗೆ ಈಕೆಯ ವಿರುದ್ಧ ಇರುವವರ ಟ್ರೋಲ್ ಮಾಡುವ content ಹಾಗೂ ಹ್ಯಾಂಡಲ್ ಗಳು ತಯಾರಾಗುತ್ತವೆ ಎಂಬುದು ಹೇಳಿದ್ದರು. ನಾನು ಅದನ್ನು ಫೇಸ್‌ಬುಕ್‌ನಲ್ಲಿಯೂ ಹಾಕಿದ್ದೆ.

    13. ಈಕೆಯ ಮೇಲೆ ಅಗ್ಗದ ಬ್ಯಾಗ್ ಗಳನ್ನೂ ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಿರುವ ಕಂಪ್ಲೇಂಟ್‌ ಲೋಕಾಯುಕ್ತದಲ್ಲಿ register ಆಗಿದ್ದು, ಅದರ ತನಿಖೆ ಕೈಗೆತ್ತಿಕೊಳ್ಳಲು ಲೋಕಾಯುಕ್ತ ಈಗಾಗಲೇ ಸರ್ಕಾರಕ್ಕೆ ಬರೆದಿದೆ. ಆದರೂ ಸರ್ಕಾರ ಮಟ್ಟದಲ್ಲಿ ಕಾರಣ ಕೊಡದೆ ಆಕೆಯನ್ನು ತನಿಖೆಗೆ ಒಳಪಡಿಸಲು ಅನುಮತಿ reject/ ನಿರಾಕರಣೆ ಮಾಡಲಾಗಿದೆ. ಅದರ copy ನನ್ನ ಬಳಿ ಇದೆ. ಸಾಮಾನ್ಯವಾಗಿ ಅಧಿಕಾರಿಗಳಿಗೆ ಈ ರೀತಿಯ support ಇರುತ್ತದೆಯೇ?

    14. ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ, ಒಂದಲ್ಲ, ಎರಡಲ್ಲ, ಅನೇಕರಿಗೆ ತನ್ನ not so decent ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಪಿಕ್ಸ್ ಗಳು ನನಗೆ ಸಿಕ್ಕಿವೆ. ಇದು private vishaya ಆಗುವುದಿಲ್ಲ. All India service conduct rules ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಪಿಕ್ಸ್ , ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾಸತ್ಯತೆ ಹೊರ ಬರಬೇಕಿದೆ.

    15. ಮೊನ್ನೆ ಇವರ ಬಾವ ಮಧುಸೂಧನ್ ರೆಡ್ಡಿ ಅವರು, lucky Ali ಎಂಬ ಗಾಯಕರ ಜಾಗಕ್ಕೆ 20 – 30 ಜನ ಕರೆದುಕೊಂಡು ಹೋಗಿ ರೌಡಿಸಂ ಮಾಡಿರುವ ವಿಷಯ ಮಾಧ್ಯಮಗಳಲ್ಲಿ ಬಂತು. ಈಕೆಯು ತನ್ನ ಐಎಎಸ್ ಪ್ರಭಾವ ಬಳಸಿ ದುರುಪಯೋಗ ಮಾಡಿಕೊಂಡು ಇರುವುದಾಗಿ lucky Ali ಆರೋಪ ಮಾಡಿದರು. ವ್ಯಾಜ್ಯದ ಜಮೀನಿಗೆ 20-30 ಜನ ಕರೆದುಕೊಂಡು ಹೋಗಿ ಕಾನೂನು ಕೈಗೆ ತೆಗೆದುಕೊಳ್ಳಬಹುದು? ಈ ರೀತಿಯ ಬಂಡ ಧೈರ್ಯ ಎಲ್ಲಿಂದ ಬರುತ್ತದೆ? ಐಎಎಸ್ ಅಧಿಕಾರದಿಂದ?

    16. ಇವರ ಗಂಡ , ಹಾಗೂ ಇವರ ಮಾವನವರು ( ಈಗ ತೀರಿ ಹೋಗಿದ್ದಾರಂತೆ) real estate ಬ್ಯುಸಿನೆಸ್ ನಡೆಸುತ್ತಾರೆ. ಅನೇಕ ಬಾರಿ ಸರ್ವೇ ಹಾಗೂ ಭೂ ದಾಖಲೆ ಕಚೇರಿಯ ಮೂಲಕ ತನ್ನ family business ಗೆ ಅಗತ್ಯ ಇರುವ ಅನೇಕ land related ಮಾಹಿತಿ , ಅಂದರೆ, ಒಂದು ಭೂಮಿಯ ಫೋಡಿ, ಇನ್ನೊಂದರ ಬಗ್ಗೆ ಅದು ವ್ಯಾಜ್ಯ ಇರುವ ಭೂಮಿಯೇ ಅಥವಾ ಖರೀದಿಸಲು ಯೋಗ್ಯವೇ ಎಂಬಂತಹ ಮಾಹಿತಿಗಳನ್ನು ತಮ್ಮ ಐಎಎಸ್ ಸ್ಥಾನ ಅಧಿಕಾರದಿಂದ ಪಡೆದು ಕೊಂಡಿರುವ ಮಾಹಿತಿ ದಾಖಲೆ ಸಮೇತ ಇದ್ದು, ಇದರ ಮೇಲೆ ಕ್ರಮ ಆಗುತ್ತದೆಯೇ? ನೋಡಬೇಕು.

    17. ಅನೇಕ ಬಾರಿ ಸರ್ಕಾರ ಅಧಿಕಾರಿಗಳನ್ನು transfer ಮಾಡಿದಾಗ ಆ ಜಾಗದಲ್ಲಿ ಇದ್ದವರು ಕ್ಯಾಟ್/ಕೋರ್ಟ್ ಗೆ ಹೋಗುವುದು ಸಹಜ. ನಾನು 3 ವರ್ಷ ದೂರದ ಯಾದಗಿರಿಯಲ್ಲಿ ಕೆಲಸ ಮಾಡಿ ( senior most sp in the state, 2013 ರಲ್ಲೀ ನಾನು) ಬೆಂಗಳೂರಿಗೆ ವರ್ಗವಾದಾಗ, ಆ ಜಾಗದಲ್ಲಿ ಇದ್ದ ಅಧಿಕಾರಿ, ಪವಾರ್, ನನ್ನ ವರ್ಗಾವಣೆ ಪ್ರಶ್ನಿಸಿ ಕ್ಯಾಟ್ ಗೆ ಹೋದರು. ಆದರೆ, ರೋಹಿಣಿ ಸಿಂಧೂರಿಗೆ ಸಾಕ್ಷಾತ್ ಅಡ್ವೊಕೇಟ್ ಜನರಲ್ ಅವರೇ ಬಂದು ವಾದ ಮಾಡಿದರಲ್ಲ, ಮೈಸೂರು ಡಿಸಿ ವರ್ಗಾವಣೆ ವಿಷಯದಲ್ಲಿ, ಆ ಸೌಲಭ್ಯ ನನಗೇಕೆ ಸಿಗಲಿಲ್ಲ? ನನ್ನಂತಹ ಕನ್ನಡಿಗ ಅಧಿಕಾರಿಗಳು, ಹೇಗೆ ನಡೆಸಿಕೊಂಡರೂ ಸುಮ್ಮನೆ ಇರ್ತಾರೆ ಅಂತಲೇ? ಸ್ವತಃ ಅಡ್ವೊಕೇಟ್ ಜನರಲ್ ಹಾಜರಾಗಿ ವಾದ ಮಾಡಿದ್ದು ಈಕೆಗಲ್ಲದೇ ಮತ್ಯಾವ ಅಧಿಕಾರಿಗೂ ಈ ಸೌಲಭ್ಯ ಸಿಕ್ಕಿಲ್ಲ. ಯಾಕೆ ಈ ಮಲತಾಯಿ ಧೋರಣೆ?

    18. ಈಕೆ ಪ್ರೊಬೇಷನರಿ ಅಂತ ಇದ್ದಾಗ, ಅಲ್ಲಿಯ ಡಿಸಿ ಹಾಗೂ ಅವರ ಪತ್ನಿ ನೆರೆಯ ಜಿಲ್ಲೆಯ ಡಿಸಿ, ಇವರಿಬ್ಬರ ಸಂಸಾರದಲ್ಲಿ ಹುಳಿ ಬಿದ್ದು ಅವರು ಬೇರ್ಪಟ್ಟಿದ್ದಾರೀಗ ಹಾಗೂ ಇದು ಈಕೆಯ ದೆಸೆಯಿಂದ ಎಂಬ ಮಾತು ಅನೇಕರ ಬಾಯಲ್ಲಿ ಕೇಳಿದ್ದೇನೆ.

    19. ಜಾಲಹಳ್ಳಿ ಯಲ್ಲಿ ಈಕೆಯ( ಪತಿಯದ್ದು ಇದ್ದರೂ ಈಕೆಯದೂ ಆಗುತ್ತದೆ) ದೊಡ್ಡ ಮನೆ ಒಂದು ಕಟ್ಟುತ್ತಿದ್ದು, ಐಎಎಸ್ ಅಧಿಕಾರಿ ಸಲ್ಲಿಸಬೇಕಾದ immovable property returns ನಲ್ಲಿ ಈ ಮನೆಯ ಉಲ್ಲೇಖ ಇರದೆ, ಬೇರೆಲ್ಲಾ ಲಂಗು ಲೊಟ್ಟು property ಬಗ್ಗೆ ವರದಿ ಕೊಟ್ಟಿದ್ದಾರೆ. ಆ ಮನೆಗೆ ಕೋಟಿಗಟ್ಟಲೆ ಇಟಲಿ ಫರ್ನೀಚರ್, 26 ಲಕ್ಷದ ಜರ್ಮನ್ appliances ( ಅದನ್ನು duty free ಮಾಡಿಸಿಕೊಳ್ಳುವ ಬಗ್ಗೆ ಚರ್ಚೆ ಇರುವ, 6 lakhs ಕೇವಲ ಬಾಗಿಲಿನ hinges ಗೆ ಖರ್ಚು ಮಾಡಿರುವ ಬಗ್ಗೆ ಈಕೆ ಮಾಡಿರುವ ಚಾಟ್ ಗಳ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ. ಇದರ ಮೇಲೆ ಕೂಲಂಕಷ ತನಿಖೆ ಆಗುವ ಹಾಗೆ ನೋಡಬೇಕಿದೆ. ಇಷ್ಟೆಲ್ಲಾ ಆದ್ರೂ, ಯಾರು ಪ್ರತಿ ಬಾರಿ ಈಕೆಯನ್ನು ತನಿಖೆಗೂ ಒಳಪಡಿಸದೇ ಬಚಾವ್ ಮಾಡುತ್ತಾ ಇರುವುದು. ಈಕೆ ಯಾವುದೇ ಶಿಕ್ಷೆಯಿಲ್ಲದೆ ಪ್ರತಿ ಬಾರಿ ಬಚಾವ್ ಆಗಿರುವುದೇ? ಅಥವಾ ಕಿಂದರಿ ಜೋಗಿ ಮಾಡಿದ ರೀತಿಯಲ್ಲಿ ಸರ್ಕಾರದಲ್ಲಿ ಇರುವ ಪ್ರಭಾವಿಗಳು ಕಿಂದರಿ ಜೋಗಿಯ ಪಾಶಕ್ಕೆ ಸಿಲುಕಿದರೆ?

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ – ರೋಹಿಣಿ ಸಿಂಧೂರಿ

    ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ – ರೋಹಿಣಿ ಸಿಂಧೂರಿ

    ಮೈಸೂರು: ಮೈಸೂರು ನನಗೆ ತಾಯಿ ಮನೆ ಅನುಭವ ನೀಡಿದೆ. ಇದೀಗ ಮಗಳು ತವರು ಮನೆ ಬಿಟ್ಟು ಹೋಗುವಂತೆ ಜಿಲ್ಲೆಯಿಂದ ನಿರ್ಗಮಿಸುತ್ತಿದ್ದೇನೆ ಎಂದು ರೋಹಿಣಿ ಸಿಂಧೂರಿ ಭಾವನಾತ್ಮಕ ನುಡಿಗಳನ್ನು ನುಡಿದಿದ್ದಾರೆ.


    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿಣಿ ಸಿಂಧೂರಿ, ವರ್ಗಾವಣೆ ಬಳಿಕ ಸಾಕಷ್ಟು ಜನ ತಮ್ಮ ಪ್ರೀತಿ ಮತ್ತು ಅಭಿಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಮಗಳಾಗಿ ಮೈಸೂರಿನ ಎಲ್ಲಾ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಉತ್ತಮ ಕೆಲಸ ಮಾಡುವ ಸಂದರ್ಭದಲ್ಲಿ ಈ ರೀತಿಯಾಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಆದರೂ ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗುತ್ತಿದ್ದೇನೆ ಎಂದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

    ಹೊಸದಾಗಿ ಬಂದ ಜಿಲ್ಲಾಧಿಕಾರಿಗೆ ಶುಭಾಶಯ ಹೇಳಲು ಬಂದಿದ್ದೆ. ಜಿಲ್ಲೆಯ ವಸ್ತುಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಜಿಲ್ಲೆಯಲ್ಲಿ ಕೋವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ಈ ವರ್ಗಾವಣೆ ಆಗಿದೆ. ಏನು ನಡೆದಿದೆ ಹೇಗೆ ನಡೆದಿದೆ ಅನ್ನೋದು ಎಲ್ಲರ ಮುಂದೆ ನಡೆದಿದೆ. ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಹತಾಶೆ ಹಾಗೂ ಅಭದ್ರತೆ, ಒತ್ತಾಸೆಗೆ ಈ ರೀತಿ ಮಾತನಾಡೋದು ಸರಿಯಲ್ಲ ಎಂದರು. ಇದನ್ನೂ ಓದಿ:ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ಇಬ್ಬರೂ ವರ್ಗಾವಣೆ- ಸರ್ಕಾರದಿಂದ ಆದೇಶ

    ಯಾವುದೋ ಕಾರಣಕ್ಕೆ ಅಧಿಕಾರಿಯನ್ನು ತೆಗೆಸಿ ಮಿಷನ್ ಮುಗಿಯಿತು ಅಂದುಕೊಳ್ಳೋದು ತಪ್ಪು. ಈ ಥರ ಬೆಳವಣಿಗೆ ಯಾವ ಜಿಲ್ಲೆಯಲ್ಲೂ ಯಾವ ಸಂಸ್ಥೆಯಲ್ಲೂ ಆದರೂ ವ್ಯವಸ್ಥೆ ಸರಿ ಮಾಡಲು ಆಗುವುದಿಲ್ಲ ಎಂದು ಹೇಳಿದರು.

    ರೋಹಿಣಿ ಸಿಂಧೂರಿ ಭೂ ಮಾಫೀಯಾಗೆ ಬಲಿಯಾದರು ಎಂಬ ಪತ್ರಕರ್ತರ ಪ್ರಶ್ನೆಗೆ ನೋ ಕಾಮೆಂಟ್, ಥ್ಯಾಂಕ್ಯೂ ಮೈಸೂರು ಎಂದು ಹೇಳಿ ರೋಹಿಣಿ ಸಿಂಧೂರಿ ನಿರ್ಗಮಿಸಿದರು.ಇದನ್ನೂ ಓದಿ: CSR ಫಂಡ್ ಲೆಕ್ಕ ನೀಡಿಲ್ಲ, ಕೋವಿಡ್ ಕೇರ್ ಸೆಂಟರ್ ತೆರೆದಿಲ್ಲ- ಶಿಲ್ಪಾ ನಾಗ್ ವಿರುದ್ಧ ಡಿಸಿ ರೋಹಿಣಿ ಸಿಂಧೂರಿ ಪ್ರತ್ಯಾರೋಪ

    ವರ್ಗಾವಣೆ

    ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಕಿತ್ತಾಟ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರ ಸಹ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದಾದ ಬೆನ್ನಲ್ಲೇ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

    ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಇ-ಗವರ್ನೆನ್ಸ್ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಲಾಗಿದೆ.

    ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ಬಗಾದಿ ಗೌತಮ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆಗೊಳಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಎಂಡಿ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

    ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಪಿ.ರಾಜೇಂದ್ರ ಚೋಳನ್ ಅವರಿಗೆ ಹೆಚ್ಚುವರಿಯಾಗಿ ಬೆಸ್ಕಾಂ ಎಂಡಿಯಾಗಿ ಜವಾಬ್ದಾರಿಯನ್ನು ನೀಡಲಾಗಿದೆ. ಬೆಸ್ಕಾಂ ಎಂಡಿ ಆಗಿದ್ದ ರಾಜೇಶ್ ಗೌಡ ಅವರನ್ನು ಬಿಡುಗಡೆಗೊಳಿಸಲಾಗಿದೆ.

  • ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ಇಬ್ಬರೂ ವರ್ಗಾವಣೆ- ಸರ್ಕಾರದಿಂದ ಆದೇಶ

    ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ಇಬ್ಬರೂ ವರ್ಗಾವಣೆ- ಸರ್ಕಾರದಿಂದ ಆದೇಶ

    ಬೆಂಗಳೂರು: ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಕಿತ್ತಾಟ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರ ಸಹ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದಾದ ಬೆನ್ನಲ್ಲೇ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

    ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಇ-ಗವರ್ನೆನ್ಸ್ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಲಾಗಿದೆ. ಇದನ್ನೂ ಓದಿ:  ಮೈಸೂರು ಡಿಸಿ ವರ್ಸಸ್ ಪಾಲಿಕೆ ಆಯುಕ್ತೆ – ಸುತ್ತೂರು ಶ್ರೀಗಳ ಮನವೊಲಿಕೆ ಯಶಸ್ವಿ!?

    ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ಬಗಾದಿ ಗೌತಮ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆಗೊಳಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಎಂಡಿ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

    ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಪಿ.ರಾಜೇಂದ್ರ ಚೋಳನ್ ಅವರಿಗೆ ಹೆಚ್ಚುವರಿಯಾಗಿ ಬೆಸ್ಕಾಂ ಎಂಡಿಯಾಗಿ ಜವಾಬ್ದಾರಿಯನ್ನು ನೀಡಲಾಗಿದೆ. ಬೆಸ್ಕಾಂ ಎಂಡಿ ಆಗಿದ್ದ ರಾಜೇಶ್ ಗೌಡ ಅವರನ್ನು ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

    ನಡೆದಿದ್ದೇನು..?
    ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆ ಅಂಗೀಕಾರವಾಗಿರಲಿಲ್ಲ.

    ಈ ಹಿಂದೆ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ: CSR ಫಂಡ್ ಲೆಕ್ಕ ನೀಡಿಲ್ಲ, ಕೋವಿಡ್ ಕೇರ್ ಸೆಂಟರ್ ತೆರೆದಿಲ್ಲ- ಶಿಲ್ಪಾ ನಾಗ್ ವಿರುದ್ಧ ಡಿಸಿ ರೋಹಿಣಿ ಸಿಂಧೂರಿ ಪ್ರತ್ಯಾರೋಪ

    ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾಗಿದ್ದರು.

    ಶಿಲ್ಪಾ ನಾಗ್ ಆರೋಪದ ಬೆನ್ನಲ್ಲೇ ರೋಹಿಣಿ ಸಿಂಧೂರಿ ಕೂಡ ಸುದ್ದಿಗೋಷ್ಠಿ ನಡೆಸಿದ್ದು, ನಾನು ಕಿರುಕುಳ ನೀಡಿದ್ದೇನೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ಸುಳ್ಳು ಹೇಳಿದ್ದಾರೆ. ಅಲ್ಲದೆ ಯಾವ ರೀತಿಯ ಕಿರುಕುಳ ಎಂಬುದನ್ನು ಸಹ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿಲ್ಲ ಎಂದಿದ್ದಾರೆ. ಜಿಲ್ಲಾಧಿಕಾರಿಯಾಗಿ ಕೊರೊನಾ ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವ ಕೆಲಸದಲ್ಲಿ ಹಾಗೂ ನಿಯಂತ್ರಿಸುವ ಸಂದರ್ಭದಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ನನ್ನ ಗುರಿ ಹಾಗೂ ಕ್ರಮಗಳು ಕೊರೊನಾ ನಿರ್ವಹಣೆಗಾಗಿ ಮಾತ್ರ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: 12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

    ಶಿಲ್ಪಾ ನಾಗ್ ಕುರಿತು ಪ್ರತ್ಯಾರೋವನ್ನೂ ಮಾಡಿರುವ ಡಿಸಿ ರೋಹಿಣಿ ಸಿಂಧೂರಿ, ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ಕೊರೊನಾ ನಿರ್ವಹಣೆ ಕುರಿತು ಸಭೆಯಲ್ಲಿ ಭಾಗವಹಿಸಿಲ್ಲ. ವಾರ್ಡ್‍ವಾರು ಕೊರೊನಾ ಹೊಸ ಪ್ರಕರಣಗಳು, ಸಾವು ಹಾಗೂ ಸಕ್ರಿಯ ಪ್ರಕರಣಗಳ ಅಂಕಿ ಸಂಶಗಳನ್ನು ತಪ್ಪಾಗಿ ಹಾಗೂ ಸಹಿ ಮಾಡದೆ ನೀಡಿದ್ದಾರೆ. ಹೀಗಾಗಿ ಈ ಅಂಕಿ ಅಂಶಗಳನ್ನು ಸರಿ ಪಡಿಸುವಂತೆ ನಾನು ಆದೇಶಿಸಿದ್ದೆ ಎಂದು ತಿಳಿಸಿದ್ದರು. ಇದಾದ ಬಳಿಕ ಇಬ್ಬರನ್ನು ಸಂಧಾನ ಮಾಡುವ ಪ್ರಯತ್ನ ನಡೆಸಿದರೂ ಅದು ವಿಫಲವಾಗಿತ್ತು.

  • ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

    ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

    ಮೈಸೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲವನ್ನು ಚಾಮುಂಡಿ ತಾಯಿ ನೋಡುತ್ತಿದ್ದಾಳೆ. ನ್ಯಾಯದ ತೀರ್ಮಾನ ಚಾಮುಂಡಿ ತಾಯಿಗೆ ಬಿಟ್ಟ ವಿಚಾರ ಎಂದು ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

    ಮೈಸೂರಿನಲ್ಲಿ ನಿನ್ನೆಯಿಂದ ನಡೆಯುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಘಟನೆಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಇಂದು ಮುಖ್ಯ ಕಾರ್ಯದರ್ಶಿ ಅವರು ಕೂಡ ಮೈಸೂರಿಗೆ ಬರುತ್ತಿದ್ದಾರೆ. ಮೈಸೂರಿನಲ್ಲಿ ಅಧಿಕಾರಿಗಳು ಅಹಂ ಬಿಟ್ಟು ಅವರವರ ಕೆಲಸ ಮಾಡಬೇಕು. ಮೈಸೂರಿನ ಚಾಮುಂಡಿ ದೇವಿ ಎಲ್ಲವನ್ನೂ ನೋಡುತ್ತಿದ್ದಾಳೆ. ಯಾವುದು ಕೆಟ್ಟದ್ದು, ಯಾವುದು ಒಳ್ಳೆಯದು ಎನ್ನುವುದು ಅವಳಿಗೆ ಗೊತ್ತು. ಯಾರು ಯಾರ ಮೇಲೆ ದ್ವೇಷ ಕಾರುತ್ತಿದ್ದಾರೆ ಎಂಬುದು ಅವಳಿಗೆ ಗೊತ್ತಿದೆ ಎಂದರು. ಇದನ್ನೂ ಓದಿ:12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

    ನಾನು ದೇವರಿಗೆ ಒಂದು ನಮಸ್ಕಾರ ಹಾಕುತ್ತೇನೆ ಯಾರು ಸರಿಯಾಗಿ ಕೆಲಸ ಮಾಡುತ್ತಾರೆ ಪ್ರಾಮಾಣಿಕರಾಗಿದ್ದಾರೋ ಅವರನ್ನು ರಕ್ಷಿಸು ಎಂದು ಕೇಳಿಕೊಳ್ಳುವುದು ಬಿಟ್ಟು ಬೇರೆ ಬೇರೆ ಏನೂ ಇಲ್ಲ ಎಂದು ಅಭಿಪ್ರಾಯಪಟ್ಟರು.

    ಸಂಘರ್ಷ ಏನು ?

    ನಿನ್ನೆತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

    ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾದರು. ಇದನ್ನೂ ಓದಿ:ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

    ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆ ಬಿಟ್ಟು ತೊಲಗಿ, ತುಂಬಾ ಚೀಪ್ ಮೆಂಟಾಲಿಟಿ ಅಧಿಕಾರಿ ಅವರು. ಒಳ್ಳೆಯ ಜನರು ಇರೋ ಮೈಸೂರು ನಗರದಲ್ಲಿ ಜಿಲ್ಲಾಧಿಕಾರಿಗಳು ಈ ರೀತಿ ಗಲೀಜು ಎಬ್ಬಿಸುತ್ತಿದ್ದಾರೆ. ಯಾಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ. ನಾನು 2014ನೇ ಬ್ಯಾಚ್ ಅಧಿಕಾರಿ, ಅವರು 2009 ನೇ ಬ್ಯಾಚ್ ಅಧಿಕಾರಿ. ನನ್ನ ಮೇಲಿನ ಅವರ ದ್ವೇಷ ಮೈಸೂರು ಜನರ ಮೇಲೆ ಪರಿಣಾಮ ಆಗೋದು ಬೇಡ. ನಾನೇ ಸುಪ್ರೀಂ ಅಂತಾ ಅಧಿಕಾರಿಗಳ ಸಭೆಯಲ್ಲಿ ವರ್ತನೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಗೌರವ ಕೊಡದೆ ಅಧಿಕಾರಿಗಳನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

  • ಶಿಲ್ಪಾನಾಗ್ ರಾಜೀನಾಮೆ ಯಾವುದೇ ಕಾರಣಕ್ಕೂ ಸ್ವೀಕಾರ ಮಾಡಲ್ಲ: ಎಸ್.ಟಿ ಸೋಮಶೇಖರ್

    ಶಿಲ್ಪಾನಾಗ್ ರಾಜೀನಾಮೆ ಯಾವುದೇ ಕಾರಣಕ್ಕೂ ಸ್ವೀಕಾರ ಮಾಡಲ್ಲ: ಎಸ್.ಟಿ ಸೋಮಶೇಖರ್

    ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮೈಸೂರು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಶಿಲ್ಪಾನಾಗ್ ರಾಜೀನಾಮೆ ಯಾವುದೇ ಕಾರಣಕ್ಕೂ ಸ್ವೀಕಾರ ಮಾಡುವುದಿಲ್ಲ ಎಂದಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಟಿ ಸೋಮಶೇಖರ್, ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಉತ್ತಮವಾಗಿ ಪಾಲಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ದಕ್ಷ ಅಧಿಕಾರಿ, ಮಾನಸಿಕವಾಗಿ ಕಿರುಕುಳದಿಂದ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ನಾವು ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಸ್ವೀಕಾರ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

    ನಾನು ಈ ವಿಚಾರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ನಾಳೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮೈಸೂರು ರಿವ್ಯೂಗೆ ಹೋಗುತ್ತಿದ್ದಾರೆ ಬಳಿಕ ಈ ಕುರಿತು ನಿರ್ಧಾರ ಮಾಡಲಾಗುವುದು. ಡಿಸಿ ಕಿರುಕುಳ ವಿಚಾರ ಕಳೆದ ವಾರ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳಾದ ರಮಣರೆಡ್ಡಿ ಅವರ ಗಮನಕ್ಕೆ ತರಲಾಗಿದೆ. ನಾಳೆ ನಾನೇ ಮೈಸೂರಿಗೆ ತೆರಳಿ ಎಲ್ಲವನ್ನು ಸರಿ ಮಾಡುವ ಕೆಲಸ ಮಾಡುತ್ತೇನೆ. ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದರು.  ಇದನ್ನೂ ಓದಿ:ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಏನು ಆರೋಪ?:

    ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಶಿಲ್ಪಾನಾಗ್ ಆರೋಪಗಳ ಸುರಿಮಳೆ ಗೈದರು.

    ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

    ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾದರು.