Tag: ಶಿವಕುಮಾರ್

  • ಡಿಸಿಎಂ ಜೊತೆ ಸಭೆ ನಡೆಸಿದ್ದೇವೆ, ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ: ಎಂಬಿ ಪಾಟೀಲ್‌

    ಡಿಸಿಎಂ ಜೊತೆ ಸಭೆ ನಡೆಸಿದ್ದೇವೆ, ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ: ಎಂಬಿ ಪಾಟೀಲ್‌

    ಬೆಂಗಳೂರು: ನಾವು ಡಿಸಿಎಂ ಡಿಕೆ ಶಿವಕುಮಾರ್‌ (Dk Shivakumar) ಜೊತೆ ಸಭೆ ನಡೆಸಿದ್ದೇವೆ. ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು ಬೆಳಗಾವಿ ಅಧಿವೇಶನ ಬಗ್ಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಯಾರಲ್ಲೂ ಅಸಮಾಧಾನ ಇಲ್ಲ. ಎಲ್ಲರೂ ಕೂಡ ಪಕ್ಷ, ಸರ್ಕಾರದ ಹಿತದೃಷ್ಟಿಯಲ್ಲಿ ಕೆಲಸ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲ (Randeep Surjewala) ಹೇಳಿರುವುದಾಗಿ ತಿಳಿಸಿದರು.

    ಬೆಳಗಾವಿ ರಾಜಕೀಯ ಬಗ್ಗೆ ಡಿಕೆಶಿ ಮಾಹಿತಿ ಕೊರತೆ ಇಲ್ಲ. ಪಕ್ಷದ ಎಲ್ಲ ಮಾಹಿತಿ ಅವರ ಬಳಿಯಿದೆ. ಸೋಮವಾರ ಬೆಳಗ್ಗೆ ನಡೆದ ಸರ್ವ ಸದಸ್ಯರ ಸಭೆಗೆ ಕಾರಣಾಂತರಗಳಿಂದ ಪರಮೇಶ್ವರ್‌ ಬರಲು ಸಾಧ್ಯವಾಗಿಲ್ಲ ಎಂದರು.  ಇದನ್ನೂ ಓದಿ: ಕಿಯೋನಿಕ್ಸ್ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡ್ರೆ ಪ್ರಿಯಾಂಕ್, ಶರತ್ ಬಚ್ಚೇಗೌಡ ಕಾರಣ: ರಾಷ್ಟ್ರಪತಿಗಳಿಗೆ ಪತ್ರ

    ನಮ್ಮಲ್ಲಿ ಹೈ ಕಮಾಂಡ್ ತೀರ್ಮಾನವೇ ಅಂತಿಮ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವನ್ನು ಪಕ್ಷ ತೀರ್ಮಾನ ಮಾಡುತ್ತದೆ. ಸಚಿವರ ಬಗ್ಗೆ ಹೈಕಮಾಂಡ್‌ಗೆ ವರದಿ ನೀಡಿದರೆ ತಪ್ಪೇನು? ನಾವು ಕೆಲಸ ಮಾಡಿರುವುದು ಅವರಿಗೂ ಅರ್ಥವಾಗುತ್ತದೆ. ಪಕ್ಷದಲ್ಲಿ ಏನೇ ತೀರ್ಮಾನ ನಡೆದರೂ ಎಐಸಿಸಿ ಅಧ್ಯಕ್ಷರು ಮಾಡುತ್ತಾರೆ ಎಂದು ಹೇಳಿದರು.

    ಹಿಂದಿನ ಸರ್ಕಾರ 32-40 ಸಾವಿರ ಕೋಟಿ ರೂ. ಬಾಕಿಯಿಟ್ಟಿತ್ತು. ಬಾಕಿ ಇರಿಸಿದ ಪರಿಣಾಮ ನಮ್ಮ ಮೇಲೆ ಹೊರೆ ಆಗುತ್ತಿದೆ. ಸಿದ್ದರಾಮಯ್ಯನವರು 16 ಬಜೆಟ್‌ ಮಂಡನೆ ಮಾಡಿದ್ದು ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಗುತ್ತಿಗೆದಾರರ ಬಾಕಿ ಇರುವ ಎಲ್ಲಾ ಬಿಲ್‌ಗಳನ್ನು ನಾವು ಕ್ಲೀಯರ್‌ ಮಾಡುತ್ತೇವೆ. ಆದರೆ ಅನುಮತಿ ಇಲ್ಲದೇ ಪ್ರಾರಂಭ ಮಾಡಿದ್ದರೆ ಅದಕ್ಕೆ ಸರ್ಕಾರ ಭಾಗಿಯಾಗುವುದಿಲ್ಲ. ಕೆಐಡಿಬಿಯಲ್ಲಿ 960 ಕೋಟಿ ರೂ. ಬಾಕಿಯಿದೆ. ನಮ್ಮ ಇಲಾಖೆಯಲ್ಲಿ ಜಾಸ್ತಿ ಬಾಕಿ ಇಲ್ಲ ಎಂದರು.

    ಜಾತಿ ಜನಗಣತಿಗೆ ನಾನು ಎಂದು ವಿರೋಧ ಮಾಡಿಲ್ಲ. ವರದಿಯಲ್ಲಿ ಏನಿದೆ ನೋಡಿ ಆಮೇಲೆ ನಮ್ಮ ನಿಲುವು ತಿಳಿಸುತ್ತೇವೆ. ನೋಡದೇ ಯಾವುದೇ ಪ್ರತಿಕ್ರಿಯೆ ನೀಡಬಾರದು. ಲಿಂಗಾಯತ ಪಂಗಡ ಕೂಡಿಸಿ ಮಾಡಿ ಅಂತ ನಾನು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ಲಿಂಗಾಯತ ಉಪ ಪಂಗಡ ಒಂದಾಗಿ ಸೇರಿಸಿ ಲೆಕ್ಕ ಮಾಡಿದರೆ ಎಲ್ಲರೂ ಆಪ್ತರೇ ಆಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

     

  • ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    – ಶಿಸ್ತು ಕ್ರಮಕ್ಕೆ ಮುಂದಾದ ಕಾಂಗ್ರೆಸ್‌

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಶತಾಯಗತಾಯ ಶಿಸ್ತು ಕ್ರಮದ ಚಾಟಿ ಬೀಸಲೇಬೇಕು ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಎರಡು ಬಣದಲ್ಲಿ ಒಬ್ಬೊಬ್ಬರ ಟಾರ್ಗೆಟ್ ಮಾಡಿ ನೋಟಿಸ್ ನೀಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.

    ಸಿದ್ದರಾಮಯ್ಯ ಬಣದಲ್ಲಿ ಸಚಿವರೊಬ್ಬಗೆ ಮತ್ತು ಡಿಕೆಶಿ ಬಣದ ಶಾಸಕರೊಬ್ಬರಿಗೆ ಶೋಕಾಸ್ ನೋಟಿಸ್ ಫಿಕ್ಸ್ ಎನ್ನಲಾಗುತ್ತಿದೆ. ವಾರದೊಳಗೆ ಇಬ್ಬರಿಗೂ ನೋಟಿಸ್ ಕಳುಹಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಬೀದರ್‌ | ಕನ್ನಡ ಕೃಷಿ ಡಿಪ್ಲೊಮಾ ಕೋರ್ಸ್‌ ಬಂದ್‌

     

    ಕಾಂಗ್ರೆಸ್ ಅಂತರಿಕ ಭಿನ್ನಾಭಿಪ್ರಾಯಕ್ಕೆ ಮದ್ದು ಅರೆಯಲು ಶೀಘ್ರ ಶಾಸಕಾಂಗ ಪಕ್ಷದ ಸಭೆ ಕರೆಯಲು ಎಐಸಿಸಿಯಿಂದಲೇ (AICC) ಸೂಚನೆ ಬಂದಿದೆ. ಜುಲೈ ಎರಡನೇ ವಾರದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಭಾಗವಹಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

    ಹೈಕಮಾಂಡ್ ಸಂದೇಶವನ್ನು ಎಐಸಿಸಿ ನಾಯಕರ ಮೂಲಕವೇ ಶಾಸಕರು ಹಾಗೂ ಸಚಿವರಿಗೆ ಹೇಳಿಸುವುದು ಎಐಸಿಸಿ ಲೆಕ್ಕಾಚಾರ ಎನ್ನಲಾಗಿದೆ. ಅಧಿವೇಶನಕ್ಕೆ ಮೊದಲೇ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದು ಸಚಿವ ಶಾಸಕರಿಗೆ ಶಿಸ್ತಿನ ಪಾಠ  ಹೇಳಲು ಎಐಸಿಸಿ ತೀರ್ಮಾನಿಸಲಾಗಿದೆ ಎನ್ನಲಾಗಿದೆ.

     

  • ಸೂರಜ್‌ ಪರ ದೂರು ನೀಡಿದ್ದ ಶಿವಕುಮಾರ್‌ ವಿರುದ್ಧ ಹಣ ದುರುಪಯೋಗ ಆರೋಪ, ಎಫ್‌ಐಆರ್‌ ದಾಖಲು

    ಸೂರಜ್‌ ಪರ ದೂರು ನೀಡಿದ್ದ ಶಿವಕುಮಾರ್‌ ವಿರುದ್ಧ ಹಣ ದುರುಪಯೋಗ ಆರೋಪ, ಎಫ್‌ಐಆರ್‌ ದಾಖಲು

    ಹಾಸನ: ಸೂರಜ್‌ ರೇವಣ್ಣಗೆ (Suraj Revanna) ಬ್ಲಾಕ್‌ಮೇಲ್ ಮಾಡಲಾಗಿದೆ ಎಂದು ದೂರು ನೀಡಿದ್ದ ಶಿವಕುಮಾರ್‌ (Shivakumar) ವಿರುದ್ಧ ಹಣ ದುರುಪಯೋಗ ಆರೋಪದಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

    ಶ್ರೀರಾಮ್ ಫೈನಾನ್ಸ್‌ನ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಮೇಲೆ ವಾಹನ ಸಾಲ ಪಡೆದ ಗ್ರಾಹಕರು  ನೀಡಿದ್ದ ಹಣವನ್ನು ದುರ್ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ.

    ಆರು ಗ್ರಾಹಕರು ವಾಹನ ಸಾಲದ ವಂತಿಗೆ ಕಟ್ಟಲು ನೀಡಿದ್ದ 2,91,916 ರೂ. ಹಣವನ್ನು ಶಿವಕುಮಾರ್ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ರಾಮನಾಥಪುರ ಶಾಖೆಯ ಮ್ಯಾನೇಜರ್ ಕೇಶವಮೂರ್ತಿ ಅವರು ಜೂ.21 ರಂದು ಕೊಣನೂರು ಠಾಣೆಗೆ ದೂರು ನೀಡಿದ್ದರು.  ಇದನ್ನೂ ಓದಿ: ಗಂಡ ಇಲ್ಲದೇ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿದೆ: ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ4 ಆರೋಪಿ ಪತ್ನಿ ಕಣ್ಣೀರು

    ಅರಕಲಗೂಡು ಮೂಲದ ಯುವಕನೋರ್ವನಿಂದ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಆರೋಪಿಸಿ ಶಿವಕುಮಾರ್ ದೂರು ನೀಡಿದ್ದರು.

  • 2 ಕೋಟಿ ಹಣ, ಕೆಲಸದ ಆಮಿಷ- ಸೂರಜ್‌ ಆಪ್ತ ಶಿವಕುಮಾರ್ ವಿರುದ್ಧವೇ ಸಂತ್ರಸ್ತ ದೂರು

    2 ಕೋಟಿ ಹಣ, ಕೆಲಸದ ಆಮಿಷ- ಸೂರಜ್‌ ಆಪ್ತ ಶಿವಕುಮಾರ್ ವಿರುದ್ಧವೇ ಸಂತ್ರಸ್ತ ದೂರು

    – ಆಪ್ತನಿಂದಲೇ ಖೆಡ್ಡಾಕ್ಕೆ ಬಿದ್ರಾ ಸೂರಜ್ ರೇವಣ್ಣ?

    ಬೆಂಗಳೂರು: ಎಂಎಲ್‍ಸಿ ಡಾ. ಸೂರಜ್ ರೇವಣ್ಣ (Dr. Suraj Revanna) ಅವರ ಸಲಿಂಗಕಾಮ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ದೊರೆಯುತ್ತಿದೆ. ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾರ್ ನಾಪತ್ತೆಯಾದರೆ ಇತ್ತ ಶಿವಕುಮಾರ್ ವಿರುದ್ಧವೇ ಸಂತ್ರಸ್ತ ಇದೀಗ ದೂರು ನೀಡಿದ್ದಾನೆ.

    ಶಿವಕುಮಾರ್ ಬಳಿ ಎಲ್ಲವನ್ನೂ ನಾನು ಹೇಳಿದ್ದೆ. ಆತ ಆಸ್ಪತ್ರೆಗೆ ಹೋಗಲು ಬಿಡದೆ ಕೂಡಿ ಹಾಕಿದ್ದ. 2 ಕೋಟಿ ಹಣ, ಕೆಲಸ ಕೊಡಿಸುವುದಾಗಿ ಹೇಳಿದ್ದ. ಯಾರಿಗಾದರೂ ಹೇಳಿದರೆ ಕೊಲೆ ಮಾಡ್ತೇನೆ ಅಂತ ಬೆದರಿಕೆಯೂ ಹಾಕಿದ್ದ ಎಂದು ಸಂತ್ರಸ್ತ ಪೊಲೀಸರ ಮುಂದೆ ದೂರಿದ್ದಾನೆ.

    ದೂರಿನಲ್ಲಿ ಏನಿದೆ..?: ನನ್ನ ಮೇಲೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ (Shivakumar) ಬಳಿ ಹೇಳಿದ್ದೆ. ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ. ಶಿವಕುಮಾರ್ ತನ್ನ  ಫೋನ್‍ ಮೂಲಕ ಸೂರಜ್ ಜೊತೆ ಮಾತನಾಡಿಸಿದರು. ಅಲ್ಲದೇ 2 ಕೋಟಿ ರೂ. ಹಣ, ಕೆಲಸ ಕೊಡಿಸುವುದಾಗಿ ಹೇಳಿದ್ದರು. ನಾನು ಒಪ್ಪದಿದ್ದಾಗ ಬಾಯಿಬಿಟ್ಟರೆ ನಿನ್ನ ಮುಗಿಸ್ತೇನೆ ಎಂದು ಶಿವಕುಮಾರ್ ಕೊಲೆ ಬೆದರಿಕೆ ಹಾಕಿದ್ದರು ಎಂದು ತಿಳಿಸಿದ್ದಾನೆ.

    ಶಿವಕುಮಾರ್ ನನ್ನನ್ನು ಮನೆಗೆ ಹೋಗಲು ಬಿಡದೆ ಲಾಡ್ಜ್ ನಲ್ಲಿ ಕೂಡಿ ಹಾಕಿದ್ದ. ನನ್ನಿಂದಲೇ 1,000 ರೂ ಹಣ ಪಡೆದು ಊಟದ ವ್ಯವಸ್ಥೆ ಮಾಡಿದ್ದ. ನಂತರ ಅಲ್ಲಿಂದ ತಪ್ಪಿಸಿಕೊಂಡು ಸಂಬಂಧಿಕರ ಮನೆಗೆ ಹೋದೆ. ಶಿವಕುಮಾರ್ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.

  • ಸಿಎಂ, ಡಿಸಿಎಂ ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ ಕಂತೆಕಂತೆ‌ ನೋಟಿನ ಬಗ್ಗೆ ತನಿಖೆ ಮಾಡಿಸಲಿ: ಹೆಚ್‌ಡಿಕೆ

    ಸಿಎಂ, ಡಿಸಿಎಂ ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ ಕಂತೆಕಂತೆ‌ ನೋಟಿನ ಬಗ್ಗೆ ತನಿಖೆ ಮಾಡಿಸಲಿ: ಹೆಚ್‌ಡಿಕೆ

    – ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ?
    – ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ?

    ಬೆಂಗಳೂರು: ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ. ಕಳ್ಳನ ಮನಸ್ಸು ಹುಳ್ಳುಳ್ಳಗೆ. ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ.

    ಕುಮಾರಸ್ವಾಮಿ ಅವರು ಆದಾಯ ತೆರಿಗೆ (Income Tax) ಇಲಾಖೆಯ ಪ್ರತಿನಿಧಿಯೇನೂ ಅಲ್ಲ ಎಂದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಅವರ ಹೇಳಿಕೆ ಹತಾಶೆಯ ಹೇಳಿಕೆಯಷ್ಟೇ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ಅಂಬಿಕಾಪತಿ, ಸಂತೋಷ್‌ ಕೃಷ್ಣಪ್ಪ ರಾಜ್ಯದ ನಂ 1, ನಂ 2 ಅವರ ಬೇನಾಮಿಗಳು: ಸಿಟಿ ರವಿ

    ಹೆಚ್‌ಡಿಕೆ ಹೇಳಿದ್ದೇನು?
    ಶಿವಕುಮಾರ್‌ ತಿಹಾರ್‌ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ. ಆದರೆ ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ. ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ. ಅಂದಹಾಗೆ ನಾನು ಐಟಿ ಪ್ರತಿನಿಧಿಯೂ ಅಲ್ಲ, ಇಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ?

    40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್‌ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ?

    ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು! ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ. #ಪರ್ಸಂಟೇಜ್_ಪಟಾಲಂ

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಪ್ರಕರಣ; ಗಂಭೀರ ಸ್ಥಿತಿಯಲ್ಲಿದ್ದ ಚೀಫ್‌ ಎಂಜಿನಿಯರ್‌ ಶಿವಕುಮಾರ್‌ ನಿಧನ

    ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಪ್ರಕರಣ; ಗಂಭೀರ ಸ್ಥಿತಿಯಲ್ಲಿದ್ದ ಚೀಫ್‌ ಎಂಜಿನಿಯರ್‌ ಶಿವಕುಮಾರ್‌ ನಿಧನ

    ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯ ಎಂಜಿನಿಯರ್‌ ಶಿವಕುಮಾರ್‌ (Shivakumar) ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

    ಶಿವಕುಮಾರ್‌ ಅವರು ಗುಣ ನಿಯಂತ್ರಣ ವಿಭಾಗದದಲ್ಲಿ ಮುಖ್ಯ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಕಿ ಅವಘಡದ ವೇಳೆ ಎಲ್ಲರನ್ನೂ ರಕ್ಷಿಸುವಾಗ ವಿಷಾನಿಲ ದೇಹದ ಶ್ವಾಸಕೋಶಕ್ಕೆ ಹೊಕ್ಕಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ – ಪಾಲಿಕೆ ಸಿಬ್ಬಂದಿ ಸೇರಿ 9 ಮಂದಿಗೆ ಗಾಯ

    ಕೆಲ ದಿನಗಳ ಹಿಂದೆ ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಹೊತ್ತಿ ಉರಿದ ಬೆಂಕಿಯಿಂದಾಗಿ 9 ಮಂದಿ ಬಿಬಿಎಂಪಿ ನೌಕರರಿಗೆ ತೀವ್ರ ಗಾಯಗಳಾಗಿದ್ದವು. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಬೆಂಕಿ ಅವಘಡದಿಂದಾಗಿ ಗಂಭೀರ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಶಿವಕುಮಾರ್‌ ಅವರು ಇಂದು ನಿಧನರಾಗಿದ್ದಾರೆ.

    ಬಿಬಿಎಂಪಿ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯ ಅಗ್ನಿ ದುರಂತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಬಿಎಂಪಿ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: BBMP ಬೆಂಕಿ ಪ್ರಕರಣದ ತನಿಖೆ ಚುರುಕು- ಚೀಫ್ ಎಂಜಿನಿಯರ್‌ಗೆ  ನೋಟಿಸ್

    “ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ” ಎಂದು ವಿಷಾದಿಸಿದ್ದಾರೆ.

    “ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟು ಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: BBMP ಮುಖ್ಯ ಕಚೇರಿಯಲ್ಲಿ ಬೆಂಕಿ ಪ್ರಕರಣ – ಮೂವರು ಡಿ ಗ್ರೂಪ್ ನೌಕರರು ವಶಕ್ಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ; ಬೇರೆ ಆಪ್ಷನ್‌ ನೋಡ್ತಿದ್ದೇವೆ: ಡಿಕೆಶಿ

    ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ; ಬೇರೆ ಆಪ್ಷನ್‌ ನೋಡ್ತಿದ್ದೇವೆ: ಡಿಕೆಶಿ

    ಬೆಂಗಳೂರು: ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳುತ್ತಿಲ್ಲ. ಬೇರೆ ಆಪ್ಷನ್‌ ನೋಡ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು.

    ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಡಿಕೆಶಿ, ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ. ಫೆಡರಲ್ ಸ್ಟ್ರಕ್ಚರ್‌ನಲ್ಲಿ ಇದ್ದೇವೆ. ಆಪ್ಷನ್ ನೋಡ್ತಿದ್ದೇವೆ. ಅಕ್ಕಿಯನ್ನ ಬೇರೆ ರಾಜ್ಯದಿಂದ ತರುವ ಬಗ್ಗೆ ಮಾತುಕತೆ ನಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇವಲ 2 ಬಲ್ಬ್ ಇದ್ದ ತಗಡಿನ ಮನೆಗೆ 1 ಲಕ್ಷ ರೂ. ಬಿಲ್ – ಶಾಕ್ ಆಗಿ ವೃದ್ಧೆ ಮನೆಗೆ ಅಧಿಕಾರಿ ದೌಡು!

    ನಿಮ್ಮ ಪಕ್ಷಕ್ಕಿಂತ ನಮ್ಮ ಪಕ್ಷ ವಿಭಿನ್ನವಾಗಿದೆ. ನಾವು ಕೊಟ್ಟ ಮಾತು ಉಳಿಸಿಕೊಳ್ತೇವೆ. ಸಿಎಂ, ಸಚಿವರು ದೆಹಲಿಗೆ ಹೋಗಿ ಯಾರನ್ನ ಭೇಟಿರಾಗಿದ್ದಾರೆ, ಏನು ಮಾಡಿದ್ದಾರೆ ಗೊತ್ತಿಲ್ಲ. ನಾನು ದೆಹಲಿಗೆ ಹೋಗಿಲ್ಲ. ಹೋಗುವ ಟೈಮ್ ಬರುತ್ತೆ. ಆಗ ಹೋಗ್ತೇನೆ ಎಂದರು.

    ಶೋಭಾ ಕರಂದ್ಲಾಜೆ ಮೆದುಳು ಇರಲಿಲ್ವ ಎಂದು ಮಾತನಾಡಿದ್ದಾರೆ. ಅವರು ಉದ್ಯೋಗ ಸೃಷ್ಟಿ ಮಾಡ್ತೀನಿ, 15 ಲಕ್ಷ ಕೊಡ್ತೀನಿ, ಕಪ್ಪು ಹಣ ತರ್ತೀನಿ ಅಂತ ಏಕೆ ಮಾತಾಡಿದ್ರು? 5 ವರ್ಷದಲ್ಲಿ ಅವರ ಪ್ರಣಾಳಿಕೆ ಪೂರ್ಣ ಮಾಡಲಿಲ್ಲ. ನಾವು ಮಾಡ್ತಿದ್ದೇವೆ. ನಮಗೆ ಬಡವರ ಬಗ್ಗೆ ಕಾಳಜಿ ಇದೆ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಅಕ್ರಮವಾಗಿ ಸಾಗಿಸ್ತಿದ್ದ 16,200 KG ಅಕ್ಕಿ ವಶಕ್ಕೆ

    ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಗೆ ಜ್ಞಾನ ಇರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿ, ನಮಗೆ ಖಂಡಿತ ಜ್ಞಾನ ಇರಲಿಲ್ಲ. ಕುಮಾರಣ್ಣಗೆ ಜ್ಞಾನ ಇದೆಯಲ್ಲಾ ಸಾಕು. ಪ್ರಧಾನಿ ತಮ್ಮ ಬಳಿ ಅಲ್ಲದಿದ್ರೂ, ವಿದೇಶಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ನೀವೂ ಖುಷಿ ಪಡಿ ಎಂದು ಲೇವಡಿ ಮಾಡಿದ್ದಾರೆ.

  • ಸುದೀಪ್ ನಟನೆಯ 46ನೇ ಸಿನಿಮಾ: ಇನ್ನಷ್ಟು, ಮತ್ತಷ್ಟು ಸುದ್ದಿ

    ಸುದೀಪ್ ನಟನೆಯ 46ನೇ ಸಿನಿಮಾ: ಇನ್ನಷ್ಟು, ಮತ್ತಷ್ಟು ಸುದ್ದಿ

    ಕಿಚ್ಚ ಸುದೀಪ್ (Kichcha Sudeep) ನಟನೆಯ ಹೊಸ ಸಿನಿಮಾದ ಕುರಿತು ದಿನಕ್ಕೊಂದು ಸುದ್ದಿ ಹೊರ ಬೀಳುತ್ತಿವೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ಈ ಸಿನಿಮಾಗೆ ತಮಿಳು ನಿರ್ದೇಶಕರು ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಮಾಹಿತಿ ಇದೆ. ಜೊತೆಗೆ ಈ ಸಿನಿಮಾದ ನಾಯಕಿಯನ್ನು ಬಾಲಿವುಡ್ ನಿಂದ ಕರೆತರಲಾಗುತ್ತಿದೆಯಂತೆ. ಅಲ್ಲದೇ, ತಂತ್ರಜ್ಞರು ಮಾತ್ರ ಕನ್ನಡದವರೇ ಇರಲಿದ್ದಾರೆ ಎನ್ನುವುದು ಲೇಟೆಸ್ಟ್ ಅಪ್ ಡೇಟ್.

    ಈ ಹೊಸ ಸಿನಿಮಾವನ್ನು ತಮಿಳು ನಿರ್ದೇಶಕರು ಹಾಗೂ ತಮಿಳು ಚಿತ್ರ ನಿರ್ಮಾಣ ಸಂಸ್ಥೆ ತಯಾರಿಸುತ್ತಿದ್ದರೆ, ಸಂಗೀತ, ಸಿನಿಮಾಟೋಗ್ರಫಿ ಮತ್ತು ಕಲಾ ನಿರ್ದೇಶನವನ್ನು ಕನ್ನಡದ ತಂತ್ರಜ್ಞರೇ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಜನೀಶ್ ಲೋಕನಾಥ (Ajanish Loknath) ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದರೆ, ಶಿವಕುಮಾರ್ ಕಲಾನಿರ್ದೇಶಕ. ಶೇಖರ್ ಚಂದ್ರ ಅವರ ಸಿನಿಮಾಟೋಗ್ರಫಿ ಚಿತ್ರಕ್ಕೆ ಇರಲಿದೆಯಂತೆ. ಆದರೆ, ಈ ಮಾಹಿತಿಯನ್ನು ಚಿತ್ರತಂಡ ಇನ್ನೂ ಖಚಿತ ಪಡಿಸಿಲ್ಲ. ಇದನ್ನೂ ಓದಿ:ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ಈ ಸಿನಿಮಾವನ್ನು ತಮಿಳು (Tamil) ನಿರ್ದೇಶಕ ವಿಜಯ್ (Vijay) ಎನ್ನುವವರು ನಿರ್ದೇಶನ ಮಾಡಲಿದ್ದು, ಈ ಸಿನಿಮಾ ಮೂಲಕ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ತಮಿಳಿನ ಕಲೈಪುಲಿ ಎಸ್ ತನು (Kalaipuli S Tanu) ನಿರ್ಮಾಣ ಸಂಸ್ಥೆ ಚಿತ್ರಕ್ಕೆ ಹಣ ಹೂಡಿದೆ. ಮೊನ್ನೆಯಷ್ಟೇ ಕಿಚ್ಚ ಕಾರಿನಿಂದ ಇಳಿಯುವುದರ ಜೊತೆಗೆ ಮೇಕಪ್ ನಲ್ಲಿ ಭಾಗಿಯಾಗುವ ಸಣ್ಣದೊಂದು ವಿಡಿಯೋ ಬಿಡುಗಡೆ ಮಾಡಿತ್ತು ಚಿತ್ರತಂಡ. ಸುದೀಪ್ ಅವರ ಗೆಟಪ್ ಜಭರದಸ್ತಾಗಿ ಇರಲಿದೆ ಎನ್ನುವ ಸುಳಿವನ್ನೂ ನೀಡಿತ್ತು.

    ಒಂದು ದಿನದಲ್ಲಿ ನಡೆಯುವ ಕಥೆಯು ಇದಾಗಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಚಿತ್ರವಂತೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಭಾರೀ ಬಜೆಟ್ ನ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಮಾಹಿತಿ ಕೊಡದೇ ಇದ್ದರೂ, ಸುದೀಪ್ ಅವರ ಆಪ್ತರಿಂದಲೇ ಇವಿಷ್ಟು ಮಾಹಿತಿ ಹೊರ ಬಂದಿವೆ.

     

    ಈ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ‘ಬಿಲ್ಲ ರಂಗ ಬಾಷಾ’ (Billa Ranga Basha) ಮೊದಲು ಮೂಡಿ ಬರಲಿದೆ ಎನ್ನಲಾಗಿತ್ತು. ಆದರೆ, ಅದಕ್ಕೂ ಮುನ್ನ ವಿಜಯ್ ನಿರ್ದೇಶನದ ಚಿತ್ರ ತಯಾರಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.

  • ಉರಿ-ನಂಜೇಗೌಡ ಟ್ವೀಟ್ ಪ್ರಕರಣ : 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್

    ಉರಿ-ನಂಜೇಗೌಡ ಟ್ವೀಟ್ ಪ್ರಕರಣ : 14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್

    ಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಇಂದು ಬೆಳಗ್ಗೆ ನಟ ಚೇತನ್ ನನ್ನು (Chetan) ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಅವರನ್ನು ಕೋರ್ಟಿಗೂ ಹಾಜರುಪಡಿಸಿದ್ದರು. ಪೊಲೀಸರು ಹಾಕಿರುವ ಎಫ್‍ ಐಆರ್ ಆಧರಿಸಿ ನ್ಯಾಯಾಲಯವು  ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಸಂದರ್ಭದಲ್ಲಿ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಾನ್ಯ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

    ಚೇತನ್ ಅವರು ಉರಿಗೌಡ (Urigowda), ನಂಜೇಗೌಡ (Nanjegowda) ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

    ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರಿಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

    ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಕೋರ್ಟಿಗೆ ಹಾಜರುಪಡಿಸಿದ್ದರು.

  • Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್:  ನಟ ಚೇತನ್ ಬಂಧನ

    Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ

    ಟ, ಸಾಮಾಜಿಕ ಹೋರಾಟಗಾರ ಚೇತನ್ (Chetan) ಬಂಧನವಾಗಿದೆ. ಉರಿಗೌಡ (Urigowda) ನಂಜೇಗೌಡ (Nanjegowda) ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ತೆಲುಗು ನಟ ನಾಗಬಾಬು ಪುತ್ರಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು

    ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.