Tag: ಶಿವಮೊಗ್ಗ ಏರ್‌ಪೋರ್ಟ್

  • ತಿಥಿಮತಿ ಮೇಲ್ಸೇತುವೆಗೆ ಅರ್ಜುನನ ಹೆಸರು, ಶಿವಮೊಗ್ಗ ಏರ್‌ಪೋರ್ಟ್‌ಗೆ ಕುವೆಂಪು ಹೆಸರಿಡಲು ಆಗ್ರಹ

    ತಿಥಿಮತಿ ಮೇಲ್ಸೇತುವೆಗೆ ಅರ್ಜುನನ ಹೆಸರು, ಶಿವಮೊಗ್ಗ ಏರ್‌ಪೋರ್ಟ್‌ಗೆ ಕುವೆಂಪು ಹೆಸರಿಡಲು ಆಗ್ರಹ

    – ದೇವರಾಜ್ ಅರಸ್ ಪ್ರತಿಮೆ ಸ್ಥಾಪನೆಗೆ ಬಿ.ಕೆ ಹರಿಪ್ರಸಾದ್‌ ಒತ್ತಾಯ

    ಬೆಳಗಾವಿ: ವಿಧಾನ ಪರಿಷತ್ (Vidhan Parishad) ಕಲಾಪದ ಶೂನ್ಯ ವೇಳೆಯಲ್ಲಿಂದು ಹಲವು ಮಹತ್ವದ ವಿಷಯಗಳು ಪ್ರಸ್ತಾಪವಾಯಿತು. ಆದ್ರೆ ಸರ್ಕಾರ ಯಾವುದಕ್ಕೂ ತಕ್ಷಣ ಸದನದಲ್ಲಿ ಉತ್ತರ ಕೊಡದೇ ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವ ಭರವಸೆ ನೀಡಿತು.

    ಸಾವರ್ಕರ್ (VD Savarkar) ಫೋಟೋ ತೆಗೆಯಲು ನನಗೆ ಅವಕಾಶ ಕೊಡಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವನ್ನು ಶೂನ್ಯ ವೇಳೆಯಲ್ಲಿ ಬಿಜೆಪಿ (BJP) ಸದಸ್ಯ ರವಿಕುಮಾರ್ ಪ್ರಸ್ತಾಪಿಸಿದರು. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು, ಪ್ರಿಯಾಂಕ್ ಖರ್ಗೆ (Priyank Kharge) ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯ ಮಾಡಿದರು.

    ನಂತರ ಚಿಕ್ಕೋಡಿ ತಾಲೂಕನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಬೇಕು ಅಂತ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ವಿಷಯ ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ಮುಂದಿನ ವರ್ಷದಿಂದ್ಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ – ಮಧು ಬಂಗಾರಪ್ಪ ಭರವಸೆ

    ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರಿಗೆ `ಭಾರತ ರತ್ನ’ ಘೋಷಣೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಬೇಕು. ತಲಕಾವೇರಿ ಉದ್ಭವ ದಿನದಂದು ರಜೆ ಘೋಷಿಸಬೇಕು. ದಸರಾದಲ್ಲಿ ಭಾಗವಹಿಸುವ ಆನೆಗಳು ಸೇರಿದಂತೆ ಇತರೇ ಆನೆಗಳ ಕುರಿತು ಒಂದು ವಸ್ತುಸಂಗ್ರಹಾಲಯ ಸ್ಥಾಪಿಸಬೇಕು. ತಿಥಿಮತಿ ಮೇಲ್ಸೇತುವೆಗೆ ಅರ್ಜುನ ಆನೆಯ ಹೆಸರು ಇಡಬೇಕು ಅಂತ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಒತ್ತಾಯಿಸಿದರು.

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamoga Airport) ಕುವೆಂಪು ಹೆಸರು ಇಡಬೇಕು ಅಂತ ಶೂನ್ಯ ವೇಳೆಯಲ್ಲಿ ಮಂಜುನಾಥ್ ಭಂಡಾರಿ ವಿಷಯ ಪ್ರಸ್ತಾಪ ಮಾಡಿದ್ರು. ಕೂಡಲೇ ಸರ್ಕಾರ ಕ್ಯಾಬಿನೆಟ್ ನಿರ್ಧಾರ ಮಾಡಿ ಕುವೆಂಪು ಹೆಸರು ಅಂತಿಮ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರೋಹಿತ್ ಶರ್ಮಾ ಫಾರ್ಮ್‍ನಲ್ಲಿದ್ದರೆ 2024ರ ಟಿ20 ವಿಶ್ವಕಪ್‍ನಲ್ಲಿ ತಂಡವನ್ನು ಮುನ್ನೆಡಸಲಿ: ಗಂಭೀರ್

    ಇನ್ನೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad), ಮೈಸೂರು ಡಿಸಿ ಕಚೇರಿ ಹಾಗೂ ಬೆಳಗಾವಿ ಸುವರ್ಣಸೌಧದ ಮುಂದೆ ದೇವರಾಜ್ ಅರಸ್ ಪ್ರತಿಮೆ ನಿರ್ಮಾಣ ಮಾಡಬೇಕು ಅಂತ ಶೂನ್ಯ ವೇಳೆಯಲ್ಲಿ ಒತ್ತಾಯಿಸಿದರು. ಎಲ್ಲಾ ಸಮುದಾಯಗಳ ವರ್ಗಕ್ಕೆ ಅರಸರ ಕೊಡುಗೆ ಅಪಾರವಾಗಿದೆ. ಎರಡು ಬಾರಿ ಸಿಎಂ ಆಗಿ ರಾಜ್ಯದ ಸೇವೆ ಸಲ್ಲಿಸಿದ್ದಾರೆ. ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣ ಅವಶ್ಯಕವಾಗಿದೆ ಎಂದು ಸಿಎಂಗೆ ಒತ್ತಾಯ ಮಾಡಿದರು.

  • ಯಡಿಯೂರಪ್ಪರಿಗೆ ಕಣ್ಣೀರು ಹಾಕಿಸಿದ ಬಗ್ಗೆ ಮೋದಿ ಉತ್ತರ ಕೊಡಲಿ- ಡಿಕೆಶಿ

    ಯಡಿಯೂರಪ್ಪರಿಗೆ ಕಣ್ಣೀರು ಹಾಕಿಸಿದ ಬಗ್ಗೆ ಮೋದಿ ಉತ್ತರ ಕೊಡಲಿ- ಡಿಕೆಶಿ

    ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪಗೆ (BS Yediyurappa) ಬಿಜೆಪಿ ಕೇಂದ್ರ ನಾಯಕರು ಕೊಟ್ಟ ನೋವಿನ ಬಗ್ಗೆ ಪ್ರಧಾನಿ ಮೋದಿ (Narendra Modi) ಅವರು ಮಾತಾಡಬೇಕು ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಆಗ್ರಹಿಸಿದರು.

    ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಉದ್ಘಾಟನಾ ಕಾರ್ಯಕ್ರಮದಲ್ಲಿ ಮೋದಿ ಅವರು ಬಿಎಸ್‌ವೈರನ್ನ ಹಾಡಿ ಹೊಗಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಎಸ್‌ವೈಗೆ ಈಗ ತೋರಿದ ನಮ್ರತೆ ಇಷ್ಟು ದಿನ ಎಲ್ಲಿ ಹೋಗಿತ್ತು? ಅವರ ಕಣ್ಣಲ್ಲಿ ನೀರು ಹಾಕಿಸಿ ಅಧಿಕಾರದಿಂದ ಕೆಳಗೆ ಇಳಿಸಿದ್ದು ಯಾಕೆ? ಎಂಬುದರ ಬಗ್ಗೆ ಪ್ರಧಾನಿಗಳು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಯಡಿಯೂರಪ್ಪರ ಭಾಷಣ, ಜೀವನ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

    narendra modi bs yediyurappa

    ಮೋದಿ ಈ ದೇಶದ ಪ್ರಧಾನಿ, ನಾವು ಅವರನ್ನ ಗೌರವಿಸುತ್ತೇವೆ. ಆದರೆ ಬಿಜೆಪಿಯಲ್ಲಿ ಬಿಎಸ್‌ವೈ ಅವರಿಗೆ ಕೊಟ್ಟ ನೋವು, ವಿಧಾನಸೌಧದಿಂದ ರಾಜ್ಯಪಾಲರ ಮನೆವರೆಗೂ ಕಣ್ಣೀರು ಹಾಕಿಕೊಂಡೇ ಹೋಗಿ ರಾಜೀನಾಮೆ ನೀಡಿದ್ರಲ್ಲ, ಆ ಬಗ್ಗೆ ಮೋದಿ ಅವರು ಮಾತನಾಡಬೇಕು. ಯಡಿಯೂರಪ್ಪ, ಅವರ ಕುಟುಂಬದ ಸದಸ್ಯರು, ಆಪ್ತರ ಮೇಲೆ ಇ.ಡಿ (ED) ದಾಳಿ ನೋಟೀಸ್ ನೀಡಿರುವ ಬಗ್ಗೆ, ಅವರನ್ನು ತನಿಖಾಧಿಕಾರಿಗಳು ಎಷ್ಟು ಬಾರಿ ಕರೆಸಿಕೊಂಡು ವಿಚಾರಣೆ ಮಾಡಿದ್ದಾರೆ ಎಂಬುದರ ಬಗ್ಗೆ ಮೋದಿ ವಿವರಣೆ ನೀಡಬೇಕು ಎಂದರು. ಇದನ್ನೂ ಓದಿ: ಡಬಲ್ ಎಂಜಿನ್ ಸರ್ಕಾರದಿಂದ ಗ್ರಾಮೀಣ ಜನರ ಕನಸು ನನಸಾಗಿದೆ: ಬಿಎಸ್‌ವೈ

    narendra modi 5

    ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಚುನಾವಣೆ ನಡೆಸಿ 104 ಸೀಟು ಪಡೆದ ನಂತರ ಅಧಿಕಾರದಿಂದ ಯಾಕೆ ಇಳಿಸಿದರು? ಚುನಾವಣೆ ಮಾಡಲು ಅವರು ಬೇಕಾಗಿತ್ತು, ಆಪರೇಷನ್ ಕಮಲ ಮಾಡಲು ಅವರೇ ಬೇಕಾಗಿತ್ತು. ಆದರೆ ಅಧಿಕಾರವನ್ನು ಮಾತ್ರ ಯಾಕೆ ಅವರಿಂದ ಕಸಿದುಕೊಂಡರು? ಅವರನ್ನು ನಾಯಕತ್ವದಿಂದ ತೆಗೆದ ನಂತರ ಪಕ್ಷಕ್ಕೆ ಅಭದ್ರತೆ ಎಂದುರಾಗಿದೆ. ಅವರ ಅಭಿಮಾನಿಗಳು ಬಿಎಸ್‌ವೈ ಹುಟ್ಟುಹಬ್ಬ ಆಚರಿಸಲು ಮುಂದಾದಾಗ ಅದಕ್ಕೆ ಒಪ್ಪಿಗೆ ನೀಡಲಿಲ್ಲ. ಅವರ ಕಾಲದಲ್ಲಿ ಮಾಡಿದ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದಾರೆ ಸಂತೋಷ. ಆದರೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಗೆ ತೋರಿದ ನಮ್ರತೆ ಇಷ್ಟು ದಿನ ಎಲ್ಲಿಗೆ ಹೋಗಿತ್ತು? ಎಂದು ಪ್ರಶ್ನಿಸಿದರು.

    ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎಂದು ಅಧಿಕೃತವಾಗಿ ಘೋಷಿಸಿ, ಅವರಿಗೆ ಜವಾಬ್ದಾರಿ ನೀಡಲಿ. ಬೊಮ್ಮಾಯಿ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ ಯಡಿಯೂರಪ್ಪ ಅವರಿಗೆ ಅಧಿಕಾರ ನೀಡಲಿ. ಆಗ ಅವರ ನಮ್ರತೆಯನ್ನ ಜನ ನಂಬುತ್ತಾರೆ. ಅದನ್ನು ಬಿಟ್ಟು ರಾಜಕಾರಣದಲ್ಲಿ ನಾಟಕೀಯ ಸಿಂಪಥಿಯನ್ನು ಜನ ಒಪ್ಪಲ್ಲ ಎಂದು ಕುಟುಕಿದರು.