Tag: ಶಿವಮೊಗ್ಗ ಗಲಭೆ

  • ಮುಸ್ಲಿಮರು ಹಿಂದೂ ಸಮಾಜವನ್ನ ಹೇಡಿ ಸಮಾಜ ಎಂದು ತೋರಿಸುವ ಪ್ರಯತ್ನ ಮಾಡ್ತಿದ್ದಾರೆ: ಚಕ್ರವರ್ತಿ ಸೂಲಿಬೆಲೆ

    ಮುಸ್ಲಿಮರು ಹಿಂದೂ ಸಮಾಜವನ್ನ ಹೇಡಿ ಸಮಾಜ ಎಂದು ತೋರಿಸುವ ಪ್ರಯತ್ನ ಮಾಡ್ತಿದ್ದಾರೆ: ಚಕ್ರವರ್ತಿ ಸೂಲಿಬೆಲೆ

    ಕಾರವಾರ: ರಾಜ್ಯ ಕಾಂಗ್ರೆಸ್‌ ಸರ್ಕಾರವೇ (Congress Government) ಶಿವಮೊಗ್ಗ ಗಲಭೆಗೆ ಮುಖ್ಯಕಾರಣ. ಈ ಸರ್ಕಾರ ಇರುವ ವರೆಗೆ ಏನು ಮಾಡಬೇಕೋ ಅದನ್ನು ಮಾಡಿ ಹೋಗಬೇಕು ಎಂದು ಮುಸ್ಲಿಮರು ತೀರ್ಮಾನಿಸಿದ್ದಾರೆ. ಹಿಂದೂ ಸಮಾಜವನ್ನು ಹೇಡಿ ಸಮಾಜವೆಂದು ತೋರಿಸುವ ಪ್ರಯತ್ನ ಅವರು ಮಾಡುತ್ತಿದ್ದಾರೆ. ಸಾಮೂಹಿಕ ದಂಗೆಗೆ ಪ್ರಚೋದನೆ ಕೊಡುತ್ತಿದ್ದಾರೆ ಎಂದು ಹಿಂದೂಪರ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಕಿಡಿಕಾರಿದ್ದಾರೆ.

    ಕಾರವಾರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂತ್ರಿಗಳು, ರಾಜ್ಯ ಸರ್ಕಾರದ ಪ್ರತಿನಿಧಿಗಳು ಮುಸ್ಲಿಮರಿಗೆ (Muslims) ತಾನು ಹತ್ತಿರ ಎಂದು ತೋರಿಸಿಕೊಳ್ಳುವ ಪ್ರಯತ್ನದ ಪ್ರತಿಫಲವಾಗಿ ಊರೂರಿನಲ್ಲೂ ದಂಗೆಯ ವಾತಾವರಣ ಸೃಷ್ಟಿಯಾಗಿದೆ. ಗಲಭೆಗೆ ಸರ್ಕಾರದ ಬೆಂಬಲವಿದೆ. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲಲ್ಲಿ ಮುಸ್ಲಿಮರು ಸ್ಕಾಟ್ ಫ್ರೀ ಯಾಗಿ ತಿರುಗುತಿದ್ದಾರೆ. ಅವರಿಗೆ ಸರ್ಕಾರ ಏನೂ ಮಾಡುವುದಿಲ್ಲ ಎಂಬ ಧೈರ್ಯವಿದೆ. ಕರ್ನಾಟಕದಲ್ಲಿ ಮುಂಬರುವ ದಿನಗಳು ಭಯಾನಕವಾಗಿರಲಿದೆ ಎಂದು ತೋರಿಸಿಕೊಡುತ್ತಿದ್ದಾರೆ. ಎಚ್ಚರಿಕೆಯ ವಾತಾವರಣ ರೂಪಿಸುತಿದ್ದಾರೆ, ನೀವು ಎಚ್ಚರಿಕೆಯಿಂದಿರಿ ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇವೆ ಎಂಬ ಹೇಳಿಕೆ ಕೊಡಲು ಸಿದ್ದರಾಮಯ್ಯ (Siddaramaiah) ಅವರೇ ಕಾರಣ ಆಗುವುದನ್ನು ಮುಂದಿನ ದಿನಗಳಲ್ಲಿ ನೋಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯದಲ್ಲೇ ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗಿದೆ. ಮಂಗಳೂರಿನಲ್ಲಿ ಏನು ಮಾಡಲಾಗಿಲ್ಲವೋ ಅದೆಲ್ಲವನ್ನು ಶಿವಮೊ‌ಗ್ಗಕ್ಕೆ ಸ್ಥಳಾಂತರ ಮಾಡಿದ್ದಾರೆ. ಶಿವಮೊಗ್ಗ ಅವರ ಬ್ರೀಡಿಂಗ್ ಸೆಂಟರ್ ಆಗುತ್ತಿದೆ. ನಾಳೆ ದಿನ ಐಸಿಸ್, ಎಲ್‌ಇಟಿಗೆ ಶಿವಮೊಗ್ಗ ದಿಂದ ರಿಕ್ರೂಪ್ಮೆಂಟ್ ಆಗಿ ಹೋದರೂ ಆಶ್ಚರ್ಯವಿಲ್ಲ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ಅ. 10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ- ಕೆನಡಾಗೆ ಭಾರತ ಗಡುವು

    ಶಿವಮೊಗ್ಗ ಕುದಿಯುತ್ತಿರುವ ಲಾವದಮೇಲೆ ಕುಳಿತಿದೆ: ರಾಜ್ಯ ಕಾಂಗ್ರೆಸ್‌ ಸರ್ಕಾರವೇ ಶಿವಮೊಗ್ಗ ಗಲಭೆಗೆ ಮುಖ್ಯಕಾರಣ. ಈ ಸರ್ಕಾರ ಇರುವ ವರೆಗೇ ಏನು ಮಾಡಬೇಕೋ ಅದನ್ನು ಮಾಡಿ ಹೋಗಬೇಕು ಎಂದು ಮುಸ್ಲಿಮರು ತೀರ್ಮಾನಿಸಿದ್ದಾರೆ. ಮುಸ್ಲಿಮರು ಹಿಂದೂ ಸಮಾಜವನ್ನು ಹೇಡಿ ಸಮಾಜವೆಂದು ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಾಮೂಹಿಕ ದಂಗೆಗೆ ಪ್ರೇರೇಪಣೆ ಕೊಡುತಿದ್ದಾರೆ‌. ಹಿಂದೂಗಳನ್ನು ಯುದ್ಧಕ್ಕೆ ಬರುವಂತೆ ಪ್ರಚೋದನೆ ಮಾಡುತ್ತಿದ್ದಾರೆ. ಯಾವಾಗ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದರೂ ಆಗೆಲ್ಲಾ ಹಿಂದೂಗಳು ಬದುಕುವುದೇ ಕಷ್ಟವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯ ಮುಸ್ಲಿಮರಿಗೆ ನಾನಿದ್ದೇನೆ ಎಂದು ಅಭಯ ಕೊಟ್ಟಿದ್ದಾರೆ. ಎಲ್ಲಿಯವರೆಗೆ ನಾನಿದ್ದೇನೆ ಎಂದು ಹೇಳುತ್ತಾರೋ ಅಲ್ಲಿಯವರೆಗೂ ಈ ದಂಗೆಗಳು ನಿರಂತರವಾಗಿ ಇರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ, ಹಿಂದೂಗಳು ಭಯದಲ್ಲಿ ಬದುಕುವಂತಾಗಿದೆ: ವೇದವ್ಯಾಸ್ ಕಾಮತ್

    ಶಿವಮೊಗ್ಗ ಸ್ಲೀಪರ್ ಸೆಲ್‌ಗಳ ಅಡ್ಡವಾಗ್ತಿದೆ, ಹಿಂದೂಗಳು ಭಯದಲ್ಲಿ ಬದುಕುವಂತಾಗಿದೆ: ವೇದವ್ಯಾಸ್ ಕಾಮತ್

    ಮಂಗಳೂರು: ಶಿವಮೊಗ್ಗ (Shivamogga) ಸ್ಲೀಪರ್ ಸೆಲ್‌ಗಳ ಅಡ್ಡವಾಗುತ್ತಿದೆ, ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಜಿಹಾದಿ ಮಾನಸಿಕತೆಯ ಕಿಡಿಗೇಡಿಗಳು ಹಾಗೂ ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರವೇ (Congress Government) ಇದಕ್ಕೆಲ್ಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ. ಘಟನೆ ನಂತರ ಹಿಂದೂಗಳು (Hindu) ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಆತಂಕಪಟ್ಟಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

    ಕಳೆದ ವಾರ ಗಣೇಶ ವಿಸರ್ಜನೆ ವೇಳೆ ಯಾವುದೇ ಗಲಭೆ ನಡೆದಿರಲಿಲ್ಲ. ಆದ್ರೆ ಈದ್‌ ಮೆರವಣಿಗೆಯಲ್ಲಿ ಕೋಮುದಳ್ಳುರಿ ಹೊತ್ತಿಸಲಾಗಿದೆ. ಇದಕ್ಕೆಲ್ಲ ಕಾರಣ ಜಿಹಾದಿ ಮಾನಸಿಕತೆಯ ಕಿಡಿಗೇಡಿಗಳು ಹಾಗೂ ಸೆಕ್ಯುಲರ್ ಮುಖವಾಡದ ಕಾಂಗ್ರೆಸ್ ಸರ್ಕಾರ. ಔರಂಗಜೇಬನಂತಹ ಮತಾಂಧನ ಬ್ಯಾನರ್ ಅಳವಡಿಸುವುದು, ಕೈಯಲ್ಲಿ ತಲ್ವಾರ್ ಹಿಡಿದು ಪ್ರಚೋದಕಾರಿ ಘೋಷಣೆಗಳನ್ನು ಕೂಗುವುದು, ಕೊನೆಗೆ ಹಿಂದೂಗಳ ಮೇಲೆಯೇ ಕಲ್ಲೆಸೆಯುವುದು ಇವೆಲ್ಲ ವ್ಯವಸ್ಥಿತ ಗಲಭೆಯ ಷಡ್ಯಂತ್ರದ ಭಾಗವಾಗಿದೆ. ಟಿಪ್ಪು ಸುಲ್ತಾನ್‌ ಕಾಲಡಿಯಲ್ಲಿ ಕೇಸರಿ ಬಣ್ಣದ ಪಗಡೆ ತೊಟ್ಟ ವ್ಯಕ್ತಿ ಮಲಗಿರುವ ಕಟೌಟ್‌ ಅಳವಡಿಸಿದ್ದು ವಿವಾದವಾಗುತ್ತಿದ್ದಂತೆ ಸ್ವತಃ ಎಸ್ಪಿ ನೇತೃತ್ವದಲ್ಲಿ ಕಟೌಟ್‌ಗೆ ಬಿಳಿ ಬಣ್ಣ ಬಳಿಯಲಾಗಿತ್ತು. ಹಾಗಾಗಿಯೇ ಕಿಡಿಗೇಡಿಗಳು ಪೊಲೀಸರ ಮೇಲೆಯೂ ದಾಳಿ ನಡೆಸಿದ್ದು ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಮಾದರಿಯಲ್ಲಿ ಗಲಭೆಗೆ ಸಂಚು ರೂಪಿಸಿದ್ದಿರಬಹುದು. ಆದರೂ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಎನ್‌ಐಎ ತನಿಖೆಯಲ್ಲಿ ಇದೇ ಶಿವಮೊಗ್ಗದ ತೀರ್ಥಹಳ್ಳಿಯ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದು ಗಮನಿಸಬೇಕಾದ ಅಂಶ. ಇವರ ಷಡ್ಯಂತ್ರದ ಎಲ್ಲಾ ಮಾಹಿತಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದ್ದರೂ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – ಕೆಲಕಾಲ ಪರಿಸ್ಥಿತಿ ಉದ್ವಿಗ್ನ

    ಈಗಾಗಲೇ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣದ ಕೇಸುಗಳನ್ನು ಹಿಂಪಡೆಯುವ ಬಗ್ಗೆ ಕಾಂಗ್ರೆಸ್ ಸರ್ಕಾರವು ತೀರ್ಮಾನಿಸಿದೆ. ಅದಕ್ಕೆ ಪೂರಕವಾಗಿ ಸ್ವತಃ ಗೃಹ ಸಚಿವರೇ ಟಿಪ್ಪಣಿ ಬರೆದಿದ್ದು ಮಾಧ್ಯಮಗಳ ಮೂಲಕ ಪ್ರಸಾರವಾಗಿದೆ. ಸರ್ಕಾರದ ಮಟ್ಟದಲ್ಲಿಯೇ ಇಂತಹ ಕಿಡಿಗೇಡಿಗಳಿಗೆ ವ್ಯವಸ್ಥಿತ ವಾತಾವರಣ ನಿರ್ಮಾಣವಾದಾಗ ಸಹಜವಾಗಿ ಇಂತಹ ಗಲಭೆಗಳು ಹೆಚ್ಚಾಗುತ್ತವೆ. ಏನೇ ಆದರೂ ಈ ಕಾಂಗ್ರೆಸ್ ಸರ್ಕಾರ ನಮ್ಮ ಪರ ಇದೆ ಎಂದುಕೊಂಡು ಗಲಭೆ ಸೃಷ್ಟಿಸಿ ಜನರಲ್ಲಿ ಭಯದ ವಾತಾವರಣ ಮೂಡಿಸುವ ಇಂತಹ ಕಿಡಿಗೇಡಿಗಳಿಗೆ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಹೆಡೆಮುರಿ ಕಟ್ಟಬೇಕು. ಕೂಡಲೇ ಅಲ್ಲಿನ ಹಿಂದೂಗಳ ಹಿತರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದು ಕೋಮು ಗಲಭೆಯಲ್ಲ, ಮಾನಸಿಕ ಸ್ಥಿಮಿತ ಕಳೆದುಕೊಂಡವರು ಮಾಡಿದ್ದು: ಮಧು ಬಂಗಾರಪ್ಪ

    ಇದು ಕೋಮು ಗಲಭೆಯಲ್ಲ, ಮಾನಸಿಕ ಸ್ಥಿಮಿತ ಕಳೆದುಕೊಂಡವರು ಮಾಡಿದ್ದು: ಮಧು ಬಂಗಾರಪ್ಪ

    ಬೆಂಗಳೂರು: ಶಿವಮೊಗ್ಗದಲ್ಲಿ (Shivamogga) ನಡೆದಿರುವುದು ಕೋಮುಗಲಭೆಯಲ್ಲ (Communal Violence), ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿದ್ದಾರೆ. ಉಳಿದ ಎಲ್ಲಾ ಕಡೆ ಹಬ್ಬ ಚೆನ್ನಾಗಿಯೇ ಆಗಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಎರಡು ಒಂದೇ ದಿನ ಇತ್ತು. ಈ ಬಗ್ಗೆ ಸಭೆ ಮಾಡಿದ್ದೆವು. ಈ ವೇಳೆ ಮುಸ್ಲಿಂ ಬಾಂಧವರು ಭಾನುವಾರ ಮೆರವಣಿಗೆ ಮಾಡುವುದಾಗಿ ಹೇಳಿದ್ದರು. ಇಲ್ಲಿ ಒಂದೇ ರಸ್ತೆಯಲ್ಲಿ ಮೆರವಣಿಗೆ ಆಗುತ್ತದೆ. ಈ ವೇಳೆ ಹಿಂದೂ ಹಬ್ಬ ಆದರೆ ಮುಸ್ಲಿಮರು ಹೋಗ್ತಾರೆ. ಹಾಗೆಯೇ ಮುಸ್ಲಿಮರ ಹಬ್ಬ ಆದರೆ ಹಿಂದೂಗಳು ಹೋಗುತ್ತಾರೆ. ಈ ವೇಳೆ ಯಾರೋ ಒಂದೆರಡು ಜನ ಕಿಡಿಗೇಡಿಗಳು ಈ ರೀತಿ ಗಲಾಟೆ ಮಾಡಿದ್ದಾರೆ. ಮನೆಗಳಿಗೂ ನುಗ್ಗಿ ಗಲಭೆ ಮಾಡಿದ್ದಾರೆ. ಈ ರೀತಿ ಬರೀ ರಾಗಿಗುಡ್ಡದಲ್ಲಿ ಮಾತ್ರ ನಡೆದಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಗಲಾಟೆ ಮಾಡಲು ಹೊರಗಡೆಯಿಂದ ಬಂದಿದ್ದರು ಎಂದು ಸ್ಥಳೀಯ ಶಾಸಕರು ಹೇಳುತ್ತಿದ್ದಾರೆ. ಈ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ಯಾರೂ ಕೊಡಬಾರದು. ಅವರಿಗೆ ಈ ಮಾಹಿತಿ ಗೊತ್ತಿದೆಯಾ? ನಾನು ಎಲ್ಲಾ ವಿಚಾರದಲ್ಲೂ ರಾಜಕೀಯ ಮಾತಾಡಲು ಹೋಗುವುದಿಲ್ಲ. ಈ ರೀತಿ ಮಾತಾಡಲು ಖುಷಿ ಆಗುತ್ತದೆಯೇ? ಈ ರೀತಿ ಮಾತನಾಡಲು ಮನಸ್ಸಿಗೆ ಬೇಜಾರಾಗುತ್ತದೆ. ಹಬ್ಬ ಎಂದರೆ ಭಕ್ತಿ ಹಾಗೂ ಸಂಪ್ರದಾಯ ಅವುಗಳಿಗೆ ಗೌರವ ಕೊಡಬೇಕು ಎಂದಿದ್ದಾರೆ.

    ಸ್ಥಳೀಯ ಶಾಸಕರು ಕಾರ್ ನಂಬರ್ ಬಗ್ಗೆ ಮಾತಾಡುತ್ತಿದ್ದಾರೆ. ಅವರಿಗೆ ಎಲ್ಲಾ ಮಾಹಿತಿ ಬಂದಿದೆಯೇ? ಹಿಂದೆ ಇದೆಲ್ಲ ಮಾಡಿ ಅನುಭವ ಇದೆಯಂತಾ ಅವರಿಗೆ? ಜವಾಬ್ದಾರಿ ಸ್ಥಾನದಲ್ಲಿ ಇರುವವರು ಹಾಗೆಲ್ಲ ಮಾತನಾಡಬಾರದು. ಟಿಪ್ಪು ಫೋಟೋ ಇರುವುದೇ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಅದಕ್ಕೆಲ್ಲ ಈಗ ಉತ್ತರ ಕೊಡಲು ಆಗುವುದಿಲ್ಲ ಎಂದಿದ್ದಾರೆ.

    ಬೇರೆ ಎಲ್ಲಾ ಕಡೆ ಹಬ್ಬಗಳು ಚೆನ್ನಾಗಿ ನಡೆದಿದೆ. ಇಲ್ಲಿ ವೈಯುಕ್ತಿಕವಾಗಿ ಆಗಿದೆ ಅಷ್ಟೇ. ಯಾರೇ ಆದರೂ ಕಾನೂನು ಮೀರಿ ಹೋದರೆ ಏನು ಶಿಕ್ಷೆ ಕೊಡಬೇಕೋ ಅದನ್ನು ಕೊಡುತ್ತೇವೆ. ಈ ಬಗ್ಗೆ ಎಸ್‍ಪಿ ಅವರಿಗೂ ಸೂಚನೆ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದ್ದಾರೆ.

    ಶಿವಮೊಗ್ಗದಲ್ಲಿ ಮರಳಿ ಶಾಂತಿ ನೆಲೆಸುತ್ತಿದೆ. ಇಂದು ಅಥವಾ ನಾಳೆ ಅಲ್ಲಿಗೆ ಹೋಗುತ್ತೇನೆ. ಈಗಾಗಲೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಪೊಲೀಸರು ಕ್ರಮಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಸಿಎಂ ಇಬ್ರಾಹಿಂ ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ವಿಚಾರದ ಪ್ರಶ್ನೆಗೆ, ಪಕ್ಷಕ್ಕೆ ಬರುವುದಾಗಿ ಅವರು ನನಗೇನು ಹೇಳಿಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ನಿಮಗೆ ಈ ಬಗ್ಗೆ ಹೇಳಿದ್ದಾರೇನೋ ನನಗಂತೂ ಗೊತ್ತಿಲ್ಲ. ಅವರಿಗೆ ನೋವಾಗಿದ್ದರೆ ಪಕ್ಷ ಮತ್ತು ಅವರು ನಿರ್ಧಾರ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಬೆಂಗಳೂರು: ಶಿವಮೊಗ್ಗ (Shivamogga) ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ಸರ್ಕಾರದ್ದು ಗಾಂಧಿ ವಿರೋಧಿ ನೀತಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ (Communal Violence) ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ಪ್ರಕ್ಷುಬ್ಧ ನಗರ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ಸಹ ಹಲವು ಅಹಿತಕರ ಘಟನೆಗಳು ನಡೆದಿವೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

    ಮೂರು ಠಾಣೆಗಳ ವ್ಯಾಪ್ತಿಯಲ್ಲೇ ಈ ರೀತಿಯ ಗಲಭೆಗಳು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಆ ಮೂರು ಠಾಣೆಗಳಿಗೆ ಸೂಕ್ತ ಅಧಿಕಾರಿಗಳನ್ನು ನಿಯೋಜಿಸುತ್ತಿಲ್ಲ. ಪದೇ ಪದೇ ವರ್ಗಾವಣೆ ಮಾಡಲಾಗುತ್ತಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಸುಳ್ಳು ಹೇಳಿ, ಸುಳ್ಳು ಆಶ್ವಾಸನೆ ಕೊಟ್ಟು ಜನರ ದಾರಿ ತಪ್ಪಿಸುವುದೇ ಕಾಂಗ್ರೆಸ್‍ನ (Congress) ಕೆಲಸವಾಗಿದೆ. ಸರ್ಕಾರ ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಸರ್ಕಾರವೇ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಕೊಡುವುದನ್ನು ಬಿಡಬೇಕು. ಈ ಗಲಾಟೆ ಹಿಂದೆ ಓಲೈಕೆ ರಾಜಕಾರಣ ಇದೆ. ಪೊಲೀಸರು ಲಾಠಿ ಚಾರ್ಜ್ ಮಾಡುವ ಪರಿಸ್ಥಿತಿ ಬರಬಾರದಿತ್ತು. ಸರ್ಕಾರ ದಮನಕಾರಿ ನೀತಿ ಬಿಡಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಬಂಧನ: ಆರಗ ಜ್ಞಾನೇಂದ್ರ

    ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಬಂಧನ: ಆರಗ ಜ್ಞಾನೇಂದ್ರ

    ಬೆಂಗಳೂರು: ಶಿವಮೊಗ್ಗ ಗಲಭೆ ಪ್ರಕರಣದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರನ್ನು ಬಂಧನ ಮಾಡುತ್ತೇವೆ. ಅಷ್ಟೇ ಅಲ್ಲ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಆದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು ಇಟ್ಟಿದ್ದೇವೆ. ಏನೇನೋ ಪೋಸ್ಟ್ ಹಾಕುವ ಹಾಗೆ ಇಲ್ಲ. ಪ್ರಚೋದನಕಾರಿ ಪೋಸ್ಟ್ ಮಾಡಿದರೆ ಅವರನ್ನು ಬಂಧನ ಮಾಡಲು ಸೂಚನೆ ನೀಡಲಾಗಿದೆ. ಅಲ್ಲದೆ ಕಾನೂನು ಕ್ರಮಕ್ಕೂ ನಿರ್ದೇಶನ ನೀಡಿದ್ದೇನೆ ಎಂದ ಅವರು, ಇದನ್ನು ಪೊಲೀಸ್ ಠಾಣೆಗಳಲ್ಲಿ ರಿವ್ಯೂ ಮಾಡಲು ತಂಡಗಳನ್ನು ರಚನೆ ಮಾಡಲಾಗಿದೆ ಎಂದರು.

    ಸಾಮಾಜಿಕ ಜಾಲತಾಣಗಳು ಒಳ್ಳೆಯ ವಾತಾವರಣ ಸೃಷ್ಟಿ ಮಾಡಲು ಬಳಸಬೇಕು ಎಂದು ಕಿವಿ ಮಾತು ಹೇಳಿದ ಅವರು, ಶಿವಮೊಗ್ಗ ಈಗ ಕಂಟ್ರೋಲ್‌ನಲ್ಲಿ ಇದೆ. ಜೊತೆಗೆ ಶಾಂತಿಯುತವಾಗಿದೆ. ಶಿವಮೊಗ್ಗ ಜನತೆಗೆ ಅಭಿನಂದನೆ ಹೇಳುತ್ತೇನೆ. ಈ ಘಟನೆ ನಡೆದದ್ದು ದುರಾದೃಷ್ಟಕರ. ಹತ್ಯೆ ಆಗಿರುವ ಹರ್ಷನ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವ ಕೆಲಸ ಸರ್ಕಾರ ಮಾಡುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರ

    ಯಾರೇ ಪ್ರಕರಣದಲ್ಲಿ ಭಾಗಿಯಾಗಿದರೂ ಯಾರನ್ನು ಬಿಡುವುದಿಲ್ಲ. ಪೊಲೀಸರು ಎಲ್ಲಾ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ಜನರು ಆತಂಕಕ್ಕೆ ಒಳಗಾಗುವುದು ಬೇಡ. ಜನರ ರಕ್ಷಣೆಗೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಂನವರ ಕೊಲೆಯಾಗಿದ್ರೆ ರಾಹುಲ್, ಸೋನಿಯಾ ಗಾಂಧಿ ಬರ್ತಿದ್ರು: ಯತ್ನಾಳ್