Tag: ಶಿವಮೊಗ್ಗ ಬಂದ್

  • ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು – ಯೋಜನೆ ವಿರೋಧಿಸಿ ಜುಲೈ 10ಕ್ಕೆ ಶಿವಮೊಗ್ಗ ಬಂದ್

    ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು – ಯೋಜನೆ ವಿರೋಧಿಸಿ ಜುಲೈ 10ಕ್ಕೆ ಶಿವಮೊಗ್ಗ ಬಂದ್

    – ಯೋಜನೆ ಜಾರಿಯಾದರೆ ಪ್ರತ್ಯೇಕ ರಾಜ್ಯದ ಹೋರಾಟ

    ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸುವ ಯೋಜನೆಯಿಂದ ಅಪಾರ ಪರಿಸರ ನಾಶವಾಗುತ್ತದೆ. ಅದ್ದರಿಂದ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜುಲೈ 10 ರಂದು ಶರಾವತಿ ಉಳಿಸಿ ಹೋರಾಟ ಒಕ್ಕೂಟದ ಸಭೆ ಶಿವಮೊಗ್ಗ ಬಂದ್ ಗೆ ಕರೆ ನೀಡಿದೆ.

    ಶನಿವಾರ ಜಿಲ್ಲೆಯ ನೌಕರರ ಭವನದಲ್ಲಿ ತಾಲೂಕು ಒಕ್ಕೂಟದ ವತಿಯಿಂದ ನಡೆದ ಸಮಾಲೋಚನಾ ಸಭೆಯಲ್ಲಿ ಶಿವಮೊಗ್ಗದ ವಿವಿಧ ಸಂಘ, ಸಂಸ್ಥೆಗಳ ಮತ್ತು ಜನಪ್ರತಿನಿಧಿಗಳು ಸೇರಿ ಈ ಯೋಜನೆ ಜಾರಿ ಆದರೆ ಮಲೆನಾಡಿನ ಜನರಿಗೆ ತೊಂದರೆಯಾಗುತ್ತದೆ ಎಂದು ಈ ತೀರ್ಮಾನ ಕೈಗೊಳ್ಳಲಾಗಿದೆ.

    ಈ ಸಭೆಯಲ್ಲಿ ಈ ಯೋಜನೆಯ ಸಾಧಕ ಬಾಧಕಗಳ ಕುರಿತು ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲು ಇಂಧನ ತಜ್ಞ ಶಂಕರ್ ಶರ್ಮಾ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಯಿತು. ಈ ಯೋಜನೆಯ ಬಗ್ಗೆ ಮಲೆನಾಡು ಜನರಿಗೆ ಮನವರಿಕೆ ಮಾಡಿ ಯೋಜನೆ ವಿರುದ್ಧ ಪ್ರಬಲ ಹೋರಾಟ ಮಾಡಲು ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ದೇಸಿ ಚಿಂತಕ ಪ್ರಸನ್ನ ಅವರನ್ನು ಒಳಗೊಂಡ ಸಂಚಾಲನ ಸಮಿತಿಯೊಂದನ್ನು ರಚಿಸಲಾಗಿದೆ.

    ಇದೇ ವೇಳೆ ಬಿಜೆಪಿಯ ಟಿ.ಡಿ. ಮೇಘರಾಜ್, ಕಾಂಗ್ರೆಸ್‍ನ ಬಿ.ಆರ್.ಜಯಂತ್, ಮಲ್ಲಿಕಾರ್ಜುನ ಹಕ್ರೆ, ಪ್ರಭಾವತಿ ಚಂದ್ರಕಾಂತ್, ಕಲಗೋಡು ರತ್ನಾಕರ್ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು. ಈ ಯೋಜನೆ ಜಾರಿಯಾದರೆ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಜನರು ಸೇರಿ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಮುಂದಿಡಬೇಕಾಗುತ್ತದೆ ಎಂಬ ಕೂಗು ಸಹ ವ್ಯಕ್ತವಾಗಿದೆ.

    ಈ ಕುರಿತು ಸಭೆಯಲ್ಲಿ ಮಾತನಾಡಿದ ನಾ. ಡಿಸೋಜ ಅವರು, ಶರಾವತಿ ನದಿ ಹರಿಯೋದೆ 130 ಕಿ.ಮೀ ಉದ್ದ. ಆದರೆ ಬೆಂಗಳೂರು ಸಮುದ್ರ ಮಟ್ಟದಿಂದ 2500 ಮೀಟರ್ ಎತ್ತರದಲ್ಲಿದೆ. ಹೀಗಿರುವಾಗ ಬೆಂಗಳೂರಿಗೆ ನೀರುಹರಿಸುವ ಈ ಯೋಜನೆ ಕಾರ್ಯ ಸಾಧುವಲ್ಲ ಎಂದು ಹೇಳಿದರು.

    ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿದ ನೀರು ಸಮುದ್ರಕ್ಕೆ ಸೇರುತ್ತಿತ್ತು. ಆ ನೀರಿನಲ್ಲಿ 10 ಟಿಎಂಸಿ ಅಡಿ ನೀರನ್ನು ಪರಿಸರಕ್ಕೆ ಹಾನಿಯಾಗದಂತೆ ಬೆಂಗಳೂರಿಗೆ ಪೂರೈಸುವ ಯೋಜನೆಯನ್ನು ಸರ್ಕಾರ ಮಾಡಿದೆ. ಇದೀಗ ಈ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]