Tag: ಶಿವರಾಜ್ ಸಿಂಗ್ ಚೌಹಾಣ್

  • ಬಿಜೆಪಿ ಹೈಕಮಾಂಡ್ ನಿರ್ಧಾರದಿಂದ ನನಗೆ ತೃಪ್ತಿಯಿದೆ: ಶಿವರಾಜ್‌ ಸಿಂಗ್‌ ಚೌಹಾಣ್

    ಬಿಜೆಪಿ ಹೈಕಮಾಂಡ್ ನಿರ್ಧಾರದಿಂದ ನನಗೆ ತೃಪ್ತಿಯಿದೆ: ಶಿವರಾಜ್‌ ಸಿಂಗ್‌ ಚೌಹಾಣ್

    ಭೋಪಾಲ್:‌ ತನಗಾಗಿ ಏನನ್ನಾದರೂ ಕೇಳುವುದಕ್ಕಿಂತ ಸಾಯುವುದೇ ಲೇಸು, ಅದಕ್ಕಾಗಿ ನಾನು ದೆಹಲಿಗೆ ಹೋಗುವುದಿಲ್ಲ. ಬಿಜೆಪಿ ಹೈಕಮಾಂಡ್ ನಿರ್ಧಾರದಿಂದ ನನಗೆ ತೃಪ್ತಿಯಿದೆ ಎಂದು ಮಧ್ಯಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivaraj Singh Chouhan) ಹೇಳಿದ್ದಾರೆ.

    ಇಂದು ತಮ್ಮ ವಿದಾಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಅವರು ಗದ್ಗದಿತರಾದರು. ಮೋಹನ್‌ ಯಾದವ್ ಅವರನ್ನು ಸಿಎಂ ಆಯ್ಕೆ ಮಾಡಿರುವ ಬಿಜೆಪಿಯ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಹೇಳಿದರು.

    ಮುಖ್ಯಮಂತ್ರಿ ಮೋಹನ್ ಯಾದವ್ (Mohan Yadav) ನೇತೃತ್ವದಲ್ಲಿ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವ ಯೋಜನೆಗಳನ್ನು ಪೂರ್ಣಗೊಳಿಸುತ್ತದೆ ಎಂಬ ವಿಶ್ವಾಸ ನನಗಿದೆ. ಈ ಮೂಲಕ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಮಧ್ಯಪ್ರದೇಶವು ಹೊಸ ಛಾಪು ಮೂಡಿಸುತ್ತದೆ. ಇದಕ್ಕಾಗಿ ನಾನು ಅವರನ್ನು ಬೆಂಬಲಿಸುತ್ತೇನೆ ಎಂದರು.

    ಬಿಜೆಪಿ (BJP) ಹೈಕಮಾಂಡ್ ನಿರ್ಧಾರದಿಂದ ನನಗೆ ತೃಪ್ತಿಯಿದೆ. 2005 ರಲ್ಲಿ ನಾನು ಮುಖ್ಯಮಂತ್ರಿಯಾದೆ. ಉಮಾಭಾರತಿ ಅವರ ಕಠಿಣ ಪರಿಶ್ರಮದಿಂದ ಅಂದು ಸರ್ಕಾರ ರಚನೆಯಾಗಿತ್ತು. ನಾನು ಈಗ ನನಗಾಗಿ ಏನನ್ನಾದರೂ ಕೇಳುವುದಕ್ಕಿಂತ ಸಾಯುವುದೇ ಮೇಲು. ಇವತ್ತು ನಾನು ಇಲ್ಲಿಂದ ವಿದಾಯ ಹೇಳುತ್ತಿದ್ದೇನೆ. ನನ್ನ ಹೃದಯ ಸಂತೋಷ ಮತ್ತು ತೃಪ್ತಿಯಿಂದ ತುಂಬಿದೆ ಎಂದು ಹೇಳಿದರು.

    ಸಾರ್ವಜನಿಕರೊಂದಿಗಿನ ನನ್ನ ಸಂಬಂಧವು ಯಾವಾಗಲೂ ಚೆನ್ನಾಗಿ ಇರುತ್ತದೆ. ನಾನು ಈ ಬಾಂಧವ್ಯವನ್ನು ಕಟ್‌ ಮಾಡಲ್ಲ, ನನ್ನ ಉಸಿರಿರುವವರೆಗೂ  ನನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡಲು ನಾನು ಶ್ರಮಿಸುತ್ತೇನೆ ಎಂದು ಅವರು ಹೇಳಿದರು.

    ಚೌಹಾಣ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಂತೆಯೇ ಸೋಮವಾರ ಅವರ ಮಹಿಳಾ ಅಭಿಮಾನಿಗಳು ಭೇಟಿಯಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ನಾವು ನಿಮಗೆ ಮತ ನೀಡಿದ್ದೇವೆ, ನೀವು ರಾಜೀನಾಮೆ ನೀಡಬಾರದು ಎಂದು ಕಣ್ಣೀರು ಹಾಕಿದರು. ಈ ವೇಳೆ ಚೌಹಾಣ್‌ ಅವರು ಮಹಿಳಾ ಅಭಿಮಾನಿಗಳನ್ನು ಸಮಾಧಾನ ಪಡಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

  • ಶಿವರಾಜ್‌ಸಿಂಗ್‌ ರಾಜ್ಯ ರಾಜಕೀಯ ಅಂತ್ಯ – ಲೋಕಸಭೆಗೆ ಸ್ಪರ್ಧೆ?

    ಶಿವರಾಜ್‌ಸಿಂಗ್‌ ರಾಜ್ಯ ರಾಜಕೀಯ ಅಂತ್ಯ – ಲೋಕಸಭೆಗೆ ಸ್ಪರ್ಧೆ?

    ಭೋಪಾಲ್: ಮೋಹನ್ ಯಾದವ್‌ರನ್ನು (Mohan Yadav) ಮಧ್ಯಪ್ರದೇಶ ಸಿಎಂ (Madhya Pradesh Chief Minister) ಆಗಿ ಹೈಕಮಾಂಡ್‌ ಆಯ್ಕೆಮಾಡಿದ ಹಿನ್ನೆಲೆಯಲ್ಲಿ ಹಾಲಿ ಸಿಎಂ ಆಗಿದ್ದ ಶಿವರಾಜ್ ಸಿಂಗ್ ಚೌಹಾಣ್ (63) ಅವರ ರಾಜಕೀಯ ಭವಿಷ್ಯ ಏನು ಎಂಬ ಗಂಭೀರ ಪ್ರಶ್ನೆ ಎದ್ದಿದೆ.

    1990ರಲ್ಲಿ ಮೊದಲ ಬಾರಿಗೆ ಶಾಸಕರಾದ ಚೌಹಾಣ್ (Shivraj Singh Chouhan) 1991-05ರವರೆಗೆ ಸಂಸದರಾಗಿ ಆಯ್ಕೆ ಆಗಿದ್ದರು. 2005ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಪಟ್ಟ ಅಲಂಕರಿಸಿದ್ದ ಇವರು ಒಟ್ಟು 4 ಬಾರಿ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

     

    ಬಿಜೆಪಿಗೆ (BJP) ಆಡಳಿತ ವಿರೋಧಿ ಅಲೆ ಇದೆ ಎಂದಾಗ ಚುನಾವಣೆಗೂ (Election) ಮುನ್ನ ಹಲವು ಜನಪ್ರಿಯ ಯೋಜನೆ ಜಾರಿಗೊಳಿಸಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.  ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ

    ಅಚ್ಚರಿಯ ಪ್ರಯೋಗ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಿಜೆಪಿ ಹೈಕಮಾಂಡ್‌ (BJP High Command) ಈ ಬಾರಿ ಚೌಹಾಣ್‌ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನಿರಾಕರಿಸಿದೆ. ಆದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚೌಹಾಣ್‌ ಅವರಿಗ ಟಿಕೆಟ್‌ ನೀಡುವ ಸಾಧ್ಯತೆಯಿದೆ. ಚುನಾವಣೆಯಲ್ಲಿ ಗೆದ್ದಲ್ಲಿ ಕೇಂದ್ರದಲ್ಲಿ ಮಂತ್ರಿ ಸ್ಥಾನ ಮಾಡಬಹುದು ಎಂಬ ವಿಶ್ಲೇಷಣೆ ಕೇಳಿಬಂದಿದೆ.

    ಬುಧ್ನಿ ವಿಧಾನಸಭಾ ಕ್ಷೇತ್ರದಿಂದ ಸತತ ಐದು ಬಾರಿ ಚೌಹಾಣ್‌ ಆಯ್ಕೆ ಆಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ 1.04 ಲಕ್ಷ ಮತಗಳ ಅಂತರಿಂದ ಭರ್ಜರಿ ಜಯ ಸಾಧಿಸಿದ್ದರು. ಚೌಹಾಣ್‌ 1,64,951 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಿಕ್ರಂ ಶರ್ಮಾ 59,977 ಮತಗಳನ್ನು ಪಡೆದಿದ್ದರು.

     

  • ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ

    ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ

    ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ (Madhya Pradesh CM) ಸ್ಥಾನಕ್ಕೆ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ (Mohan Yadav) ಅವರನ್ನು ಆಯ್ಕೆ ಮಾಡಲಾಗಿದೆ.

    ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ. ಜಗದೀಶ್ ದೇವಾಡ, ರಾಜೇಶ್ ಶುಕ್ಲಾ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ವಿಧಾನಸಭೆಯ ಸ್ಪೀಕರ್‌ (Assembly Speaker) ಸ್ಥಾನಕ್ಕೆ ನರೇಂದ್ರ ತೋಮರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಅಚ್ಚರಿಯ ಆಯ್ಕೆ ಮೂಲಕ 18 ವರ್ಷಗಳ ಸುಧೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹನ್‌ಗೆ ಅವರಿಗೆ ಹೈಕಮಾಂಡ್ ವಿಶ್ರಾಂತಿ ನೀಡಿದೆ.

    2013ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಮೋಹನ್‌ ಯಾದವ್‌ 2018ರಲ್ಲಿ ಮರು ಆಯ್ಕೆಯಾಗಿದ್ದರು. 2020ರಿಂದ ಹಾಲಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ನೇತೃತ್ವದ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

    1965ರ ಮಾರ್ಚ್‌ 25 ರಂದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಜನಿಸಿದ ಮೋಹನ್ ಯಾದವ್ ಹಲವು ವರ್ಷಗಳಿಂದ ಬಿಜೆಪಿಯೊಂದಿಗೆ ಒಡನಾಟದಲ್ಲಿದ್ದರು. ರಾಜಕೀಯ ಪ್ರಯತ್ನಗಳ ಜೊತೆಗೆ, ಅವರು ಉದ್ಯಮಿಯೂ ಆಗಿದ್ದಾರೆ. 2013, 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಮೋಹನ್‌ ಯಾದವ್‌ 2023ರ ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೇತನ್ ಪ್ರೇಮನಾರಾಯಣ್ ಯಾದವ್ ವಿರುದ್ಧ 12,941 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಈ ಮೂಲಕ ಸತತ ಹಾಟ್ರಿಕ್‌ ಗೆಲುವಿನ ನಗೆ ಬೀರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

    ಉಜ್ಜಯಿನಿ ದಕ್ಷಿಣ ಕ್ಷೇತ್ರವು 2003 ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳೊಂದಿಗೆ ಬಹುಮತ ಪಡೆದರೆ, ಕಾಂಗ್ರೆಸ್‌ 66 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

    ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ನಿಯೋಜಿತ ಸಿಎಂ ಮೋಹನ್ ಯಾದವ್, “ನಾನು ಪಕ್ಷದ ಸಣ್ಣ ಕಾರ್ಯಕರ್ತ, ನಿಮ್ಮೆಲ್ಲರಿಗೂ, ರಾಜ್ಯ ನಾಯಕತ್ವ ಮತ್ತು ಕೇಂದ್ರ ನಾಯಕತ್ವಕ್ಕೆ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ನನ್ನ ಜವಾಬ್ದಾರಿಯನ್ನು ಪೂರೈಸಲು ಪ್ರಯತ್ನಿಸುತ್ತೇನೆ” ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿಶೇಷವಾಗಿ ಧನ್ಯವಾದ ತಿಳಿಸಿದರು.

  • ಬಿಜೆಪಿಗೆ ಮತ ಹಾಕಿದ್ದಕ್ಕೆ ಹಲ್ಲೆ – ಮುಸ್ಲಿಂ ಮಹಿಳೆಯನ್ನು ಭೇಟಿಯಾಗಿ ಧೈರ್ಯ ತುಂಬಿದ ಚೌಹಾಣ್‌

    ಬಿಜೆಪಿಗೆ ಮತ ಹಾಕಿದ್ದಕ್ಕೆ ಹಲ್ಲೆ – ಮುಸ್ಲಿಂ ಮಹಿಳೆಯನ್ನು ಭೇಟಿಯಾಗಿ ಧೈರ್ಯ ತುಂಬಿದ ಚೌಹಾಣ್‌

    ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ (Madhya Pradesh Election) ಬಿಜೆಪಿಗೆ (BJP) ಮತ ಚಲಾಯಿಸಿದ್ದಕ್ಕೆ ಸಂಬಂಧಿಯಿಂದಲೇ ಹಲ್ಲೆಗೆ ಒಳಗಾಗಿದ್ದ ಮಹಿಳೆಯನ್ನು ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಭೇಟಿಯಾಗಿ ಧೈರ್ಯ ತುಂಬಿದ್ದಾರೆ.

    ಇಂದು ಪುತ್ರ ಮತ್ತು ಪುತ್ರಿಯ ಜೊತೆ ಸಮೀನಾ ಶಿವರಾಜ್‌ ಸಿಂಹ್‌ ಚೌಹಾಣ್‌ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದರು. ಭೇಟಿಯ ವೇಳೆ ಚೌಹಾಣ್‌ ಜೊತೆ ನಾನು ಬಿಜೆಪಿಗೆ ಮತ ಹಾಕಿದ್ದಕ್ಕೆ ನನ್ನ ಮೇಲೆ ಥಳಿಸಲಾಗಿದೆ ಎಂದು 30 ವರ್ಷದ ಸಮೀನಾ ಹೇಳಿದ್ದಾರೆ.

    ಚೌಹಾಣ್‌ ಅವರು ಯಾವುದೇ ತಪ್ಪು ಮಾಡಿಲ್ಲ. ಉತ್ತಮ ಆಡಳಿತ ನೀಡಿದ್ದಾರೆ. ಅದಕ್ಕೆ ನಾನು ಸಂವಿಧಾನ ನೀಡಿದ ಹಕ್ಕನ್ನು ಚಲಾಯಿಸಿದ್ದೇನೆ ಎಂದು ಸಮೀನಾ ತಿಳಿಸಿದ್ದಾರೆ.

    ಹಲ್ಲೆ ಪ್ರಕರಣ ದಾಖಲಾದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಚೌಹಾಣ್‌ ಅವರು ಮಹಿಳೆಯನ್ನು ಭೇಟಿ ಮಾಡಲು ನಿರ್ಧರಿಸಿದ್ದರು.  ಇದನ್ನೂ ಓದಿ: ಕರ್ನಾಟಕದ ಯುವ ಆಟಗಾರ್ತಿ 1.3 ಕೋಟಿಗೆ ಸೇಲ್‌ – ಇತಿಹಾಸ ನಿರ್ಮಿಸಿದ ವೃಂದಾ ದಿನೇಶ್‌

    ಏನಿದು ಘಟನೆ?
    ಮಧ್ಯಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದ ಬಳಿಕ ಸಮೀನಾ ಸಂಭ್ರಮಾಚರಣೆ ಮಾಡಿದ್ದರು. ಇದು ಮಹಿಳೆಯ ಕುಟುಂಬಕ್ಕೆ ಕಸಿವಿಸಿ ಉಂಟುಮಾಡಿತ್ತು. ಸಮೀನಾ ವಿರುದ್ಧ ಸಿಟ್ಟಾದ ಮೈದುನ ಜಾವೇದ್ ಖಾನ್ ನಿಂದಿಸತೊಡಗಿದ್ದ.

    ಜಾವೇದ್ ಬಳಸಿದ ಭಾಷೆಯನ್ನು ಪ್ರಶ್ನಿಸಿದ್ದಕ್ಕೆ ಸಮೀನಾ ಮೇಲೆ ಬಡಿಗೆಯಿಂದ ಹಲ್ಲೆ ಮಾಡಿದ್ದ. ಇದರಿಂದ ಆಕೆಯ ಕೈಗಳು ಮತ್ತು ದೇಹದ ಇತರೆ ಭಾಗಗಳಲ್ಲಿ ಗಾಯಗಳಾಗಿತ್ತು. ಬಿಜೆಪಿ ಮುಂದೆಯೂ ಬೆಂಬಲ ನೀಡಿದರೆ ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಮೀನಾಗೆ ಬೆದರಿಕೆ ಹಾಕಿದ್ದ.

  • ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು? – ‘ಮಹಾರಾಜ’ನ ಪಟ್ಟದಾಸೆ

    ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು? – ‘ಮಹಾರಾಜ’ನ ಪಟ್ಟದಾಸೆ

    – ಸಿಎಂ ರೇಸ್‌ನಲ್ಲಿ ನಾಲ್ವರ ಪೈಪೋಟಿ

    ಭೋಪಾಲ್: 2003 ರಿಂದ ಮಧ್ಯಪ್ರದೇಶದಲ್ಲಿ ಆಡಳಿತ (2018 ರ ನಂತರ 15 ತಿಂಗಳ ಅವಧಿ ಹೊರತುಪಡಿಸಿ) ನಡೆಸಿಕೊಂಡು ಬಂದಿರುವ ಬಿಜೆಪಿ 2023 ರ ಚುನಾವಣೆಯಲ್ಲೂ ಭರ್ಜರಿ ಗೆಲುವು ದಾಖಲಿಸಿದೆ. ಅಮೋಘ ಜಯ ಸಾಧಿಸಿರುವ ಮಧ್ಯಪ್ರದೇಶದಲ್ಲಿ ಈಗ ಸಿಎಂ ಯಾರಾಗುತ್ತಾರೆ ಎಂಬುದೇ ಪ್ರಶ್ನೆ.

    ಮಧ್ಯಪ್ರದೇಶದಲ್ಲಿ ಹಾಲಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಇದ್ದರೂ, ಇವರನ್ನು ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಣೆ ಮಾಡಿರಲಿಲ್ಲ. ಇಲ್ಲಿ ಕೇಂದ್ರ ಸಚಿವರು, ಸಂಸದರನ್ನೂ ಕಣಕ್ಕಿಳಿಸಲಾಗಿತ್ತು. ಬಿಜೆಪಿ ತಂತ್ರ, ಸಾಮೂಹಿಕ ನಾಯಕತ್ವ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಫಲ ನೀಡಿತು. ರಾಜ್ಯದ 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗಳಿಸಿದ್ದು, ಕಾಂಗ್ರೆಸ್ ಕೇವಲ 66ಕ್ಕೆ ಕುಸಿದಿದೆ.

    ಬಿಜೆಪಿ ವಲಯದಲ್ಲಿ ದಾಖಲೆ ಬರೆಯುತ್ತಾರಾ ಚೌಹಾಣ್‌
    ಮೂವರು ಕೇಂದ್ರ ಸಚಿವರು ಸೇರಿದಂತೆ ಏಳು ಸಂಸದರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದರೊಂದಿಗೆ ಚೌಹಾಣ್ ಅವರನ್ನು ಸೈಡ್‌ಲೈನ್‌ ಮಾಡಲಾಗಿದೆ ಎಂದು ಹೇಳಲಾಗಿತ್ತು. ಅಲ್ಲದೇ ಚೌಹಾಣ್‌ಗೆ ಟಿಕೆಟ್‌ ಕೊಟ್ಟಿದ್ದೂ ತಡವಾಗಿಯೇ. ಮೊದಲ ಪಟ್ಟಿಯಲ್ಲಿ ಇವರ ಹೆಸರೇ ಇರಲಿಲ್ಲ. ಆದರೆ ಬಿಜೆಪಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದ ಹೆಗ್ಗಳಿಕೆಯನ್ನು ಚೌಹಾಣ್‌ ಹೊಂದಿದ್ದಾರೆ. ಈ ಕಾರಣದಿಂದಲೂ ಅವರನ್ನು ಮೂಲೆಗುಂಪು ಮಾಡುವ ಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮುಖ್ಯಸ್ಥನ ಸ್ಥಾನಕ್ಕೆ ಕಮಲ್‍ನಾಥ್ ರಾಜೀನಾಮೆ?

    ಕೇಂದ್ರ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ (ಇಬ್ಬರೂ ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಇರುವ ಇತರೆ ಹಿಂದುಳಿದ ವರ್ಗಗಳ ನಾಯಕರು), ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೆಸರು ಸಿಎಂ ರೇಸ್‌ನಲ್ಲಿ ಕೇಳಿಬರುತ್ತಿದೆ.

    ಸಿಎಂ ರೇಸ್‌ನಲ್ಲಿರುವವರ ಪೈಕಿ ಇಬ್ಬರು ಬ್ರಾಹ್ಮಣ ನಾಯಕರು ಸೇರಿದ್ದಾರೆ. ಮಧ್ಯಪ್ರದೇಶ ರಾಜ್ಯಾಧ್ಯಕ್ಷರೂ ಆದ ಸಂಸದ ವಿ.ಡಿ. ಶರ್ಮಾ ಹಾಗೂ ಐದನೇ ಬಾರಿಗೆ ಶಾಸಕ ಮತ್ತು ಸಚಿವರೂ ಆದ ರಾಜೇಂದ್ರ ಶುಕ್ಲಾ ಇಬ್ಬರೂ ವಿಂಧ್ಯಾ ಪ್ರದೇಶದಿಂದ ಬಂದವರು.

    ಅಮಿತ್‌ ಶಾ ನಿಕಟವರ್ತಿಗೆ ಪಟ್ಟ?
    ವಿಜಯವರ್ಗಿಯಾ ಮಾಲ್ವಾ-ನಿಮಾರ್ ಪ್ರದೇಶದಿಂದ ಬಂದವರು. ಆ ಭಾಗದಲ್ಲಿ ಬಿಜೆಪಿ 66 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಗೆದ್ದಿದೆ. ಇವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ನಿಕಟವರ್ತಿ. ಆದರೆ ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಇವರ ವಿರುದ್ಧವೂ ಆರೋಪ ಕೇಳಿಬಂದಿದೆ. ಇದು ಮುಖ್ಯಮಂತ್ರಿ ಆಗುವ ಇವರ ಕನಸಿಗೆ ಅಡ್ಡಗಾಲಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಾವು ಏಣಿಯಾಟ – ಅತಿದೊಡ್ಡ, ಅತಿಸಣ್ಣ ನಿರ್ಣಾಯಕ ಗೆಲುವುಗಳಿವು

    ಮಧ್ಯಪ್ರದೇಶದಲ್ಲಿ ಪಕ್ಷದ ಗೆಲುವಿನಲ್ಲಿ ಚೌಹಾಣ್ ಅವರ ಲಾಡ್ಲಿ ಬೆಹ್ನಾ ಯೋಜನೆ ಪಾತ್ರ ವಹಿಸಿತ್ತು ಎಂದು ಹೇಳಲಾಗಿದೆ. ಆದರೆ ರಾಜ್ಯ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿಯ ಗೆಲುವಿನ ಹಿಂದಿನ ಏಕೈಕ ಅಂಶವೆಂದರೆ ‘ಮೋದಿ ಮ್ಯಾಜಿಕ್’ ಎಂದು ವಿಜಯವರ್ಗಿಯಾ ಅವರು ಅಭಿಪ್ರಾಯಪಟ್ಟಿದ್ದಾರೆ.

    ಸಿಎಂ ಕಿರೀಟ ಧರಿಸ್ತಾರಾ ಸಿಂಧಿಯಾ?
    ಬಿಜೆಪಿಯ ಗೆಲುವಿನಲ್ಲಿ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾತ್ರವೂ ಮಹತ್ವದ್ದು ಎನ್ನಲಾಗಿದೆ. ಗ್ವಾಲಿಯರ್‌ ರಾಜಮನೆತನದಲ್ಲಿ ಜನಿಸಿದ ಸಿಂಧಿಯಾ ಅವರು, ರಾಜ್ಯದ ವರ್ಚಸ್ವಿ ಹಾಗೂ ಪ್ರಭಾವಿ ನಾಯಕನೂ ಹೌದು. 2002 ರಲ್ಲಿ ಗುನಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು, ಮೊದಲ ಬಾರಿಗೆ ಕಾಂಗ್ರೆಸ್‌ ಸಂಸದರಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಿದರೂ, ಸಿಎಂ ಕಮಲ್‌ನಾಥ್‌ ವಿರುದ್ಧದ ಮುನಿಸು ಮತ್ತು ಸಿಎಂ ಸ್ಥಾನ ಸಿಗಲಿಲ್ಲವೆಂಬ ಸಿಟ್ಟಿನಿಂದ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿಕೊಂಡರು.

    ಈ ಬಾರಿ ಬಿಜೆಪಿಯ ಗೆಲುವಿನಲ್ಲಿ ಸಿಂಧಿಯಾ ಪ್ರಮುಖ ಪಾತ್ರ ವಹಿಸಿದ್ದಾರೆ. ಗ್ವಾಲಿಯರ್‌-ಚಂಬಲ್‌ ವಲಯದಲ್ಲಿ ಬಿಜೆಪಿ ಅಮೋಘ ಬೆಂಬಲ ಸಿಗುವಂತೆ ಮಾಡಿದ್ದಾರೆ. ಈ ಭಾಗದಲ್ಲಿ 2018 ರಲ್ಲಿ ಬಿಜೆಪಿ 7 ಸ್ಥಾನ ಗೆದ್ದಿತ್ತು. ಈಗ ಆ ಸಂಖ್ಯೆ 18 ಸ್ಥಾನಗಳಿಗೆ ಏರಿದೆ. 2018 ರಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆಯೂ ಸಿಂಧಿಯಾ ಪ್ರಾಬಲ್ಯವಿರುವ ಪ್ರದೇಶಗಳೇ ಕಾರಣವಾಗಿದ್ದವು. ಆದರೆ ಈ ಬಾರಿ ಈ ಮತಗಳು ಬಿಜೆಪಿಯತ್ತ ಕ್ರೋಢೀಕರಣಗೊಂಡವು. ಬಿಜೆಪಿಯ ಗೆಲುವು ಸಿಂಧಿಯಾರನ್ನು ಮತ್ತಷ್ಟು ಬಲಶಾಲಿಯಾಗಿಸಿದ್ದು, ‘ಮಹಾರಾಜ’ನ ಕಣ್ಣು ಈಗ ಸಿಎಂ ಕುರ್ಚಿಯತ್ತ ನೆಟ್ಟಿದೆ.

    ಆದರೆ ಮಾಜಿ ಕಾಂಗ್ರೆಸ್‌ ನಾಯಕ ಬಿಜೆಪಿ ಸೇರಿ ಕೇವಲ ಮೂರೂವರೆ ವರ್ಷವಷ್ಟೇ ಆಗಿದೆ. ಅವರನ್ನು ಮುಖ್ಯಮಂತ್ರಿ ಮಾಡುವುದರಿಂದ ಪಕ್ಷದ ಹಿರಿಯರ ಅಸಮಾಧಾನಕ್ಕೆ ಕಾರಣವಾಗಬಹುದು. ಇದು ಮುಂಬರುವ ಲೋಕಸಭಾ ಚುನಾವಣಾ ಮೇಲೆ ಪರಿಣಾಮ ಬೀರಬಹುದು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ

    ರೇಸ್‌ನಲ್ಲಿ ಕೇಂದ್ರ ಸಚಿವ
    ಕೇಂದ್ರ ಕೃಷಿ ಸಚಿವ ಮತ್ತು ಪಕ್ಷದ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಮುಖ್ಯಸ್ಥರಾಗಿರುವ ನರೇಂದ್ರ ಸಿಂಗ್ ತೋಮರ್ ಕೂಡ ಸಿಎಂ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಕೋಟ್ಯಂತರ ರೂ. ನಗದು ಡೀಲ್‌ ವೀಡಿಯೋ ಮೂಲಕ ಅವರ ಪುತ್ರ ದೇವೇಂದ್ರ ಸಿಂಗ್ ತೋಮರ್ ವಿವಾದಕ್ಕೆ ಸಿಲುಕಿದ್ದಾರೆ. ಇದು ತೋಮರ್‌ ಅವರಿಗೆ ಸಂಕಷ್ಟ ತಂದೊಡ್ಡಿದೆ.

  • ಮತ್ತೆ ಮಾಮಾಜಿ ಮ್ಯಾಜಿಕ್‌ – ಬಿಜೆಪಿ ಸುನಾಮಿಗೆ ಕಾಂಗ್ರೆಸ್‌ ಕೊಚ್ಚಿ ಹೋಗಿದ್ದು ಹೇಗೆ?

    ಮತ್ತೆ ಮಾಮಾಜಿ ಮ್ಯಾಜಿಕ್‌ – ಬಿಜೆಪಿ ಸುನಾಮಿಗೆ ಕಾಂಗ್ರೆಸ್‌ ಕೊಚ್ಚಿ ಹೋಗಿದ್ದು ಹೇಗೆ?

    ನವದೆಹಲಿ: ಮಧ್ಯಪ್ರದೇಶದಲ್ಲಿ (Madhya Pradesh) ಬಿಜೆಪಿ ಸುನಾಮಿಗೆ (BJP Tsunami) ಕಾಂಗ್ರೆಸ್‌ ಕೊಚ್ಚಿ ಹೋಗಿದೆ. ಆಡಳಿತ ವಿರೋಧಿ ಅಲೆಯಿಂದ ಬಿಜೆಪಿ ಸೋಲಬಹುದು ಎಂದು ನಿರೀಕ್ಷಿಸಿದ್ದ ಕಾಂಗ್ರೆಸ್‌ (Congress) ಲೆಕ್ಕಾಚಾರ ಉಲ್ಟಾ ಆಗಿದೆ.

    ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಸರ್ಕಾರಕ್ಕೆ ಈ ಬಾರಿ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿತ್ತು. ಮಧ್ಯಪ್ರದೇಶದಲ್ಲಿ ಚೌಹಾಣ್‌ ಅವರಿಗೆ ʼಮಾಮಾಜಿʼ ಎಂದು ಕರೆಯುತ್ತಾರೆ. ಈ ಚುನಾವಣೆಯಲ್ಲಿ ಮಾಮಾಜಿ ಮ್ಯಾಜಿಕ್‌ ಕೆಲಸ ಮಾಡಿದ್ದು ಬಿಜೆಪಿ ಭರ್ಜರಿ ಜಯ ಸಾಧಿಸಿದೆ.

    ಮಧ್ಯಾಹ್ನ 1 ಗಂಟೆಯ ಟ್ರೆಂಡ್‌ ಪ್ರಕಾರ ಬಿಜೆಪಿ 168, ಕಾಂಗ್ರೆಸ್‌ 58, ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ – #ModiKiGuarantee ಫುಲ್‌ ಟ್ರೆಂಡ್‌

    ಬಿಜೆಪಿ ಗೆದ್ದಿದ್ದು ಹೇಗೆ?
    ಬಿಜೆಪಿ ವ್ಯವಸ್ಥಿತವಾಗಿ ಟಿಕೆಟ್‌ ಹಂಚಿಕೆ ಮಾಡಿತ್ತು. 7 ಸಂಸದರು, 3 ಕೇಂದ್ರ ಸಚಿವರು, ಬಿಜೆಪಿಯ ಪ್ರಧಾನ ಕಾರ್ಯದರ್ಶಿಯನ್ನೇ ಚುನಾವಣಾ ಕಣಕ್ಕೆ ಇಳಿಸಿತ್ತು.

    ಗೆಲ್ಲುವ ಮಾನದಂಡದಲ್ಲಿ ವಯಸ್ಸು, ಕುಟುಂಬ ರಾಜಕೀಯ ಮುಂತಾದ ವಿಚಾರಗಳನ್ನು ಬದಿಗಿಟ್ಟು 70 ವರ್ಷ ಮೀರಿದ 14 ಅಭ್ಯರ್ಥಿಗಳಿಗೆ, 80 ವರ್ಷ ಮೀರಿದ ಮೀರಿದ ಒಬ್ಬರಿಗೆ ಟಿಕೆಟ್‌ ಹಂಚಿಕೆ ಮಾಡಿದೆ.

    2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಿದ ಪರಿಣಾಮ ಬಿಜೆಪಿ ಹೀನಾಯವಾಗಿ ಸೋತಿತ್ತು. ಆದ್ದರಿಂದ ಮಧ್ಯಪ್ರದೇಶದಲ್ಲಿ ಆ ತಪ್ಪು ಮಾಡದೇ ವಯಸ್ಸನ್ನು ನೋಡದೇ ಹಿರಿಯರಿಗೆ ಬಿಜೆಪಿ ಮಣೆ ಹಾಕಿತ್ತು.

     

    ಗ್ಯಾರಂಟಿಗೆ ಠಕ್ಕರ್ ಕೊಡಲು ಬಡ ಕುಟುಂಬಗಳ ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ. ಪಿಯುಸಿವರೆಗೆ ಎಲ್ಲ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಹೇಳಿತ್ತು.

    ಲಾಡ್ಲಿ ಬೆಹನಾ ಯೋಜನೆಯ ಅಡಿ ಮಹಿಳೆಯರಿಗೆ ಪ್ರತಿ ತಿಂಗಳು 1250 ರೂ. ನೀಡುವ ಯೋಜನೆಯನ್ನು ಶಿವರಾಜ್‌ ಸಿಂಗ್‌ ಚೌಹಾಣ್‌ ಘೋಷಿಸಿದ್ದರು. ಅಷ್ಟೇ ಅಲ್ಲದೇ ಖಾತೆಗೆ ಹಣ ಸಹ ಬಿದ್ದಿತ್ತು. ಪಿಎಂ ಉಜ್ವಲಾ ಯೋಜನೆ ಅಡಿ ಸಿಲಿಂಡರ್‌ಗೆ 450 ರೂ. ನೀಡುವುದಾಗಿ ಭರವಸೆ ನೀಡಿತ್ತು.

    ಕೇಂದ್ರ ಸಚಿವ ನರೇಂದ್ರ ಸಿಂಗ್‌ ತೋಮರ್‌, ಪ್ರಹ್ಲಾದ್ ಸಿಂಗ್ ಪಟೇಲ್, ಫಗ್ಗನ್ ಸಿಂಗ್ ಕುಲಸ್ತೆ, ಬಿಜೆಪಿ ನಾಯಕ ಕೈಲಾಸ್‌ ವಿಜಯವರ್ಗೀಯ ಅವರಿಗೆ ಟಿಕೆಟ್‌ ನೀಡುವ ಮೂಲಕ ಬದಲಿ ನಾಯಕತ್ವದ ಭರವಸೆ ಹುಟ್ಟಿಸಿತ್ತು.

     

    ಕಾಂಗ್ರೆಸ್‌ ಸೋತಿದ್ದು ಹೇಗೆ?
    ಮಧ್ಯಪ್ರದೇಶದಲ್ಲಿ ಮೊದಲೇ ಬಿಜೆಪಿ ಪ್ರಬಲವಾಗಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಬದಲಿ ನಾಯಕತ್ವದ ಸುಳಿವು ನೀಡಿತ್ತು. ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜನಪ್ರೀಯತೆ ಗುರುತಿಸುವಲ್ಲಿ ಕಾಂಗ್ರೆಸ್‌ ಮತ್ತೆ ವಿಫಲವಾಯಿತು. ಇದರ ಜೊತೆ 2019ರಲ್ಲಿ ಕಮಲ್‌ ನಾಥ್‌ ಜೊತೆ ಕಿತ್ತಾಟದಿಂದ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಿಂದ ಹೊರ ಬಂದಿದ್ದರು. ಇದು ಕಾಂಗ್ರೆಸ್‌ ದೊಡ್ಡ ಹೊಡೆತ ನೀಡಿತ್ತು.

  • ಮಧ್ಯಪ್ರದೇಶದಲ್ಲಿ ಬಿಜೆಪಿ ಕೈ ಹಿಡಿದ ಮಹಿಳೆಯರು

    ಮಧ್ಯಪ್ರದೇಶದಲ್ಲಿ ಬಿಜೆಪಿ ಕೈ ಹಿಡಿದ ಮಹಿಳೆಯರು

    ಭೋಪಾಲ್‌: ಮಧ್ಯಪ್ರದೇಶದಲ್ಲಿ (Madhya Pradesh) ಮಹಿಳೆಯರು (Women) ಕೈ ಹಿಡಿದ ಪರಿಣಾಮ ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಏರಿದೆ.

    ಹೌದು. ಕರ್ನಾಟಕದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಆರಂಭಿಸಿದ ಬೆನ್ನಲ್ಲೇ ಸಿಎಂ ಶಿವರಾಜ್‌ ಸಿಂಹ್‌ ಚೌಹಾಣ್‌ (CM Shivraj Singh Chouhan) ಲಾಡ್ಲಿ ಬೆಹನಾ (Ladli Behna Yojana) ಹೆಸರಿನ ಯೋಜನೆ ಆರಂಭಿಸಿತ್ತು.

    ಕಾಂಗ್ರೆಸ್‌ (Congress) ಇದು ಚುನಾವಣೆ ಗಿಮಿಕ್‌ ಎಂದು ಬಣ್ಣಿಸಿದರೆ ಮಧ್ಯಪ್ರದೇಶ ಸರ್ಕಾರ ಘೋಷಣೆ ಮಾತ್ರ ಮಾಡದೇ ಚಾಲನೆ ನೀಡಿತ್ತು. ಬಡ ಮಹಿಳೆಯರಿಗೆ ಪ್ರತಿ ತಿಂಗಳು 1,250 ರೂ. ನೀಡಿದ್ದರೆ ಪಿಎಂ ಉಜ್ವಲಾ ಯೋಜನೆ ಅಡಿ ಸಿಲಿಂಡರ್‌ಗೆ 450 ರೂ. ನೀಡುವುದಾಗಿ ಭರವಸೆ ನೀಡಿತ್ತು.  ಇದನ್ನೂ ಓದಿ: Election Results : ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಮುನ್ನಡೆ

    ಕರ್ನಾಟಕ ಚುನಾವಣೆಯಲ್ಲೂ ಮಹಿಳೆಯರು ಪ್ರಧಾನ ಪಾತ್ರ ವಹಿಸಿದ್ದರು. ಇದನ್ನು ಮೊದಲೇ ಗಮನಿಸಿದ್ದ ಮಧ್ಯಪ್ರದೇಶ ಸರ್ಕಾರ ಮಹಿಳಾ ಪರವಾದ ಯೋಜನೆಗಳು ಪ್ರಕಟಿಸಿದ ಪರಿಣಾಮ ಈ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ.

    ಮಧ್ಯಾಹ್ನ 12 ಗಂಟೆಯ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶದಲ್ಲಿ ಬಿಜೆಪಿ 157, ಕಾಂಗ್ರೆಸ್‌ 70, ಇತರರು 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

     

    2018ರ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಬಿಎಸ್‌ಪಿ 2, ಸಮಾಜವಾದಿ ಪಕ್ಷ 1 ಸ್ಥಾನ ಗೆದ್ದುಕೊಂಡರೆ 4 ಮಂದಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದರು. ಬಿಎಸ್‌ಪಿ, ಎಸ್‌ಪಿ ಹಾಗೂ ಪಕ್ಷೇತರರ ಬೆಂಬಲದಿಂದ ಕಾಂಗ್ರಸ್‌ ಸರ್ಕಾರ ರಚನೆ ಮಾಡಿತ್ತು. ಕಮಲ್ ನಾಥ್ ಸಿಎಂ ಆಗಿದ್ದರು. ಲೋಕಸಭಾ ಚುನಾವಣೆ ಬಳಿಕ ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರ ಹಿಡಿದಿತ್ತು.

  • ಮಧ್ಯಪ್ರದೇಶ ಸಿಎಂ ವಿರುದ್ಧ ‘ರಾಮಾಯಣ’ ನಟನನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

    ಮಧ್ಯಪ್ರದೇಶ ಸಿಎಂ ವಿರುದ್ಧ ‘ರಾಮಾಯಣ’ ನಟನನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

    ಭೋಪಾಲ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ.

    ಆನಂದ್ ಸಾಗರ್ ಅವರ 2008ರ ದೂರದರ್ಶನ ಕಾರ್ಯಕ್ರಮ ‘ರಾಮಾಯಣ’ದಲ್ಲಿ ಹನುಮಾನ್ ಪಾತ್ರಕ್ಕಾಗಿ ಮಸ್ತಲ್ ಹೆಚ್ಚು ಹೆಸರುವಾಸಿಯಾಗಿದ್ದರು. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಪಕ್ಷವು ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಭಾನುವಾರ) ಪ್ರಕಟಿಸಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಟಿಟಿ – 12 ಮಂದಿ ಸಾವು, 23 ಮಂದಿಗೆ ಗಾಯ

    ಬುಧ್ನಿ ಕ್ಷೇತ್ರದಿಂದ ಚೌಹಾಣ್ ವಿರುದ್ಧ ವಿಕ್ರಮ್ ಮಸ್ತಲ್ ಕಣಕ್ಕಿಳಿಯಲಿದ್ದಾರೆ. ಮಧ್ಯಪ್ರದೇಶದಲ್ಲಿ ಪಕ್ಷವು ಚಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಮತ್ತು ಪಿಸಿಸಿ ಮುಖ್ಯಸ್ಥ ಕಮಲ್ ನಾಥ್ ಅವರನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಪುತ್ರ ಜೈವರ್ಧನ್ ಸಿಂಗ್ ರಘೀಗತ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇವರು ಕಮಲ್ ನಾಥ್ ಸರ್ಕಾರದಲ್ಲಿ ಸಚಿವರಾಗಿದ್ದರು.

    ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಸಚಿವೆ ವಿಜಯ್ ಲಕ್ಷ್ಮಿ ಸಾಧೋ ಅವರನ್ನು ಮಹೇಶ್ವರ್-ಎಸ್‌ಸಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಮಾಜಿ ಕ್ಯಾಬಿನೆಟ್ ಸಚಿವ ಜಿತು ಪಟ್ವಾರಿ ಅವರನ್ನು ರಾವು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇದನ್ನೂ ಓದಿ: ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು – ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ

    ಪಟ್ಟಿಯಲ್ಲಿ ಸಾಮಾನ್ಯ ವರ್ಗದಿಂದ 47, ಒಬಿಸಿ- 39, ಎಸ್‌ಟಿ- 30, ಎಸ್‌ಸಿ- 22, ಒಬ್ಬ ಮುಸ್ಲಿಂ ಮತ್ತು 19 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. 65 ಅಭ್ಯರ್ಥಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಬಿಜೆಪಿ ಈಗಾಗಲೇ ಮಧ್ಯಪ್ರದೇಶದ ಅರ್ಧದಷ್ಟು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 230 ಸ್ಥಾನಗಳ ಪೈಕಿ 136 ಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಮಧ್ಯಪ್ರದೇಶದ 230 ಕ್ಷೇತ್ರಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ನವೆಂಬರ್ 17 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ತನ ಕಾಲು ತೊಳೆದು ಗೌರವಿಸಿದ ಮಧ್ಯಪ್ರದೇಶ ಸಿಎಂ

    ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ತನ ಕಾಲು ತೊಳೆದು ಗೌರವಿಸಿದ ಮಧ್ಯಪ್ರದೇಶ ಸಿಎಂ

    ಭೋಪಾಲ್: ಆದಿವಾಸಿ ಸಮುದಾಯದ (Tribal Community Man) ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ (MP Urination Case) ತೀವ್ರ ಖಂಡನೆ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಅವರು ಸಂತ್ರಸ್ತನ ಪಾದ ತೊಳೆದು ಗೌರವ ಸಲ್ಲಿಸಿದ್ದಾರೆ.

    ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಭೋಪಾಲ್‌ನ ತಮ್ಮ ನಿವಾಸಕ್ಕೆ ಸಂತ್ರಸ್ತನನ್ನು ಕರೆದು ಆತನ ಕಾಲು ತೊಳೆದು, ಸನ್ಮಾನಿಸಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    ಘಟನೆಗೆ ಬೇಸರ ವ್ಯಕ್ತಪಡಿಸಿರುವ ಸಿಎಂ, ವೀಡಿಯೋ ನೋಡಿ ನನಗೆ ನೋವಾಯಿತು. ನಿಮ್ಮಲ್ಲಿ ನಾನು ಕ್ಷಮೆ ಕೇಳುತ್ತೇನೆ. ಜನರು ನನಗೆ ದೇವರಿದ್ದಂತೆ ಎಂದು ಸಂತ್ರಸ್ತ ದಶಮತ್‌ ರಾವತ್‌ ಬಳಿ ಕ್ಷಮೆಯಾಚಿಸಿದ್ದಾರೆ.

    ಪ್ರವೇಶ್‌ ಶುಕ್ಲಾ ಎಂಬಾತ ಬುಡಕಟ್ಟು ಸಮುದಾಯದ ರಾವತ್‌ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಇದನ್ನೂ ಓದಿ: ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಸದ್ದು; ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿ ಮನೆ ಧ್ವಂಸ

    ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆತನ ಅಕ್ರಮ ಕಟ್ಟಡವನ್ನು ಮಧ್ಯಪ್ರದೇಶ ಸರ್ಕಾರ ಬುಲ್ಡೋಜರ್‌ ಮೂಲಕ ನೆಲಸಮಗೊಳಿಸುವ ಕ್ರಮಕೈಗೊಂಡಿತು.

    ಮಧ್ಯಪ್ರದೇಶ ಸಿಎಂ ನಿರ್ದೇಶನದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಸ್ಥಳೀಯ ಪೊಲೀಸರು 35 ವರ್ಷದ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಜಬ್ ಧರಿಸಿದ ಹಿಂದೂ ಹೆಣ್ಮಕ್ಕಳು – ವ್ಯಾಪಕ ವಿರೋಧದ ಬೆನ್ನಲ್ಲೇ ಸಿಎಂ ತನಿಖೆಗೆ ಆದೇಶ

    ಹಿಜಬ್ ಧರಿಸಿದ ಹಿಂದೂ ಹೆಣ್ಮಕ್ಕಳು – ವ್ಯಾಪಕ ವಿರೋಧದ ಬೆನ್ನಲ್ಲೇ ಸಿಎಂ ತನಿಖೆಗೆ ಆದೇಶ

    ಭೋಪಾಲ್: ಕರ್ನಾಟದಲ್ಲಿ ಹಿಜಬ್ ಬ್ಯಾನ್ (Hijab Ban) ವಿಚಾರ ಸದ್ಯ ನ್ಯಾಯಾಲಯ ಹಂತದಲ್ಲಿದೆ. ಈ ನಡುವೆ ಮಧ್ಯಪ್ರದೇಶದ (Madhya Pradesh) ಶಾಲೆಯೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರೂ ಹಿಜಬ್ ಧರಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

    ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಸಗಿ ಶಾಲೆಯೊಂದು ತನ್ನ ಬೋರ್ಡ್ ಪರೀಕ್ಷೆಯ ಟಾಪರ್ಸ್‌ಗಳ ಪೋಸ್ಟರ್ ಅನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಕೆಲವು ಮುಸ್ಲಿಮರಲ್ಲದ ವಿದ್ಯಾರ್ಥಿನಿಯರೂ ಹಿಜಬ್ ಧರಿಸಿರುವುದು ಕಂಡುಬಂದಿತ್ತು. ಈ ಪೋಸ್ಟರ್‌ಗಳು ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಶಾಲಾ ಮಂಡಳಿ ಮುಸ್ಲಿಮರಲ್ಲದ ವಿದ್ಯಾರ್ಥಿಗಳಿಗೆ (Non Muslims Students) ಹಿಜಬ್ ಧರಿಸಲು ಒತ್ತಾಯಿಸಿದೆ ಎಂದು ವಿಶ್ವಹಿಂದೂ ಪರಿಷತ್ (VHP), ಬಜರಂಗದಳ ಹಾಗೂ ABVP ಸಂಘಟನೆಗಳು ಆರೋಪಿಸಿದ್ದು, ಅಲ್ಲಿನ ಸಿಎಂ ಕೂಡ ತನಿಖೆಗೆ ಆದೇಶಿಸಿದ್ದಾರೆ.

    ಹಿಜಬ್ ಧರಿಸಿದ ಆರೋಪಗಳು ಕೇಳಿಬರುತ್ತಿದ್ದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕನೂಂಗೊ ಅವರು ದಾಮೋಹ್ ಜಿಲ್ಲಾಧಿಕಾರಿಗಳಿಗೆ ಈ ವಿಷಯ ತಿಳಿಸಿದ್ದರು. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸಹ ತನಿಖೆಗೆ ಆದೇಶಿಸಿದ್ದರು. ಈ ನಡುವೆ ಜಿಲ್ಲಾ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿನಿಯರ ಕುಟುಂಬವನ್ನು ಸಂಪರ್ಕಿಸಿದಾಗ ಈ ಸಂಬಂಧ ಪೋಷಕರು ಯಾವುದೇ ದೂರು ನೀಡಿರಲಿಲ್ಲ ಎಂಬುದು ಕಂಡುಬಂದಿತ್ತು. ಇದನ್ನೂ ಓದಿ: ಹಿಂದೂ ಹೆಣ್ಮಕ್ಕಳಿಗೂ ಹಿಜಬ್ ಕಡ್ಡಾಯಗೊಳಿಸಿತಾ ಈ ಶಾಲೆ?

    ಈ ನಡುವೆ ಶಾಲೆಯ ಆಡಳಿತ ಮಂಡಳಿ ನಿರ್ದೇಶಕ ಮುಷ್ತಾಖ್ ಮೊಹಮ್ಮದ್, ಇಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿಲ್ಲ, ಬದಲಿಗೆ ಸ್ಕಾರ್ಫ್ ಧರಿಸಿದ್ದಾರೆ. ಇದು ಶಾಲಾ ಡ್ರೆಸ್‌ಕೋಡ್‌ನ ಭಾಗವಾಗಿದೆ. ಇಲ್ಲಿ ಯಾವುದೇ ವಿದ್ಯಾರ್ಥಿನಿಯರ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿರುದ್ಧವಾಗಿ ನಾವು ನಡೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಕೋಮು ಸಂಘರ್ಷ: ಅನಧಿಕೃತ ಶಸ್ತ್ರಾಸ್ತ್ರಗಳನ್ನು ಕೂಡಲೇ ಒಪ್ಪಿಸಿ – ದಂಗೆಕೋರರಿಗೆ ಅಮಿತ್‌ ಶಾ ವಾರ್ನಿಂಗ್‌

    HIJAB 2

    ಇನ್ನೂ ಈ ಸಂಬಂಧ ತನಿಖೆಗೆ ಆದೇಶಿಸಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan), ಯಾವುದೇ ಶಾಲೆಯೂ ಹೆಣ್ಣುಮಕ್ಕಳು ಹಿಜಬ್ ಧರಿಸುವಂತೆ ಒತ್ತಾಯಿಸುವುದಿಲ್ಲ. ಅದು ಅವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೂ ಹೊಂದಿಕೆಯಾಗಲ್ಲ. ದಾಮೋಹ್ ಜಿಲ್ಲೆ ಶಾಲೆಯ ವಿಷಯ ನನ್ನ ಗಮನಕ್ಕೆ ಬಂದಿದೆ. ನಾನು ಸ್ಥಳೀಯ ಆಡಳಿತಕ್ಕೆ ತನಿಖೆ ನಡೆಸಲು ಪೂರ್ಣ ಅನುಮತಿ ನೀಡಿದ್ದೇನೆ. ಸೂಕ್ತ ಆಧಾರಗಳ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.