Tag: ಶಿವರಾಜ್ ಸಿಂಗ್ ಚೌಹಾಣ್

  • ಮಧ್ಯಪ್ರದೇಶ ಸರ್ಕಾರದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ – ಗರ್ಭನಿರೋಧಕ ಮಾತ್ರೆ, ಕಾಂಡೋಮ್ ಗಿಫ್ಟ್

    ಮಧ್ಯಪ್ರದೇಶ ಸರ್ಕಾರದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ – ಗರ್ಭನಿರೋಧಕ ಮಾತ್ರೆ, ಕಾಂಡೋಮ್ ಗಿಫ್ಟ್

    ಭೋಪಾಲ್: ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರ ನೇತೃತ್ವದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವ ಸಮಾರಂಭದಲ್ಲಿ ವಧು-ವರರಿಗೆ ಕಾಂಡೋಮ್‌ಗಳು, ಗರ್ಭನಿರೋಧಕ ಮಾತ್ರೆಗಳು (Contraceptive Pills) ಮತ್ತು ಮೇಕಪ್‌ ಬಾಕ್ಸ್‌ಗಳಿರುವ ಕಿಟ್‌ಗಳನ್ನು ನೀಡಲಾಗಿದೆ.

    ಹೌದು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕನ್ಯಾ ವಿವಾಹ/ನಿಕಾಹ್ ಯೋಜನೆ ಅಡಿಯಲ್ಲಿ ಆರ್ಥಿಕ ದುರ್ಬಲ ವರ್ಗದ ಮಹಿಳೆಯರಿಗಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ (Wedding Event) ಆಯೋಜಿಸಿದ್ದರು. ಈ ವೇಳೆ ನೂತನ ವಧುವರರಿಗೆ ವಿತರಿಸಲಾದ ಕಿಟ್‌ನಲ್ಲಿ ಕಾಂಡೋಮ್ ಹಾಗೂ ಗರ್ಭನಿರೋಧಕ ಮಾತ್ರೆಗಳೂ ಇತ್ತು. ಆದ್ರೆ ಈ ಬಗ್ಗೆ ಕೇಳಿದಾಗ ಜಿಲ್ಲಾ ಹಿರಿಯ ಅಧಿಕಾರಿ ಭೂರಸಿಂಗ್ ರಾವತ್, ಕುಟುಂಬ ಯೋಜನೆಗೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಆರೋಗ್ಯಾಧಿಕಾರಿಗಳು ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳನ್ನ ವಿತರಿಸಿರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಂಡ ಕಂಡಲ್ಲಿ ಉಗೀಬೇಡಿ – ಎಂಜಲು ರಸ ಮಾರಿಯೇ ತಿಂಗಳಿಗೆ 40 ಲಕ್ಷ ಸಂಪಾದಿಸ್ತಾಳೆ ಈ ಮಹಿಳೆ

    ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳನ್ನು ವಿತರಿಸಿರೋದಕ್ಕೆ ನಾವು ಜವಾಬ್ದಾರರಲ್ಲ. ಇದು ಆರೋಗ್ಯ ಇಲಾಖೆ ಕುಟುಂಬ ಯೋಜನೆಯ ಜಾಗೃತಿ ಕಾರ್ಯಕ್ರಮ ಆಗಿರಬಹುದು. ನಾವು ನೇರವಾಗಿ 49 ಸಾವಿರ ರೂ.ಗಳನ್ನ ಫಲಾನುಭವಿಗಳ ಖಾತೆಗೆ ವರ್ಗಾಯಿಸುತ್ತೇವೆ. ಜೊತೆಗೆ ಅವರ ಆಹಾರ, ನೀರು ಹಾಗೂ 6 ಸಾವಿರ ಮೌಲ್ಯದ ಟೆಂಟ್ ವಸತಿ ಕಲ್ಪಿಸುವ ವ್ಯವಸ್ಥೆ ಜವಾಬ್ದಾರಿ ತೆಗೆದುಕೊಂಡಿದ್ದೇವೆ. ಆದ್ರೆ ವಧು-ವರರಿಗೆ ವಿತರಿಸಿದ ಮೇಕಪ್ ಬಾಕ್ಸ್ಗಳಲ್ಲಿ ಏನಿತ್ತು ಎಂಬುದು ನಮಗೆ ಗೊತ್ತೇ ಇಲ್ಲ ಎಂದು ರಾವತ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕಾಮೋತ್ತೇಜಕ ಮಾತ್ರೆ ಸೇವಿಸಿ 24 ಗಂಟೆ ನಿರಂತರ ಸೆಕ್ಸ್‌, 50ರ ವೃದ್ಧ ಸೀದಾ ಆಸ್ಪತ್ರೆಗೆ – ಆಮೇಲೆ ಏನಾಯ್ತು?

    2006ರ ಏಪ್ರಿಲ್‌ನಲ್ಲಿ ಮಧ್ಯಪ್ರದೇಶ ಸರ್ಕಾರವು ಕನ್ಯಾ ವಿವಾಹ/ನಿಹಾಕ್ ಯೋಜನೆಯನ್ನ ಆರಂಭಿಸಿತು. ಆರ್ಥಿಕ ದುರ್ಬಲ ವರ್ಗದ ಮಹಿಳೆಯರ ವಿವಾಹಗಳಿಗೆ ಹಣಕಾಸು ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರವು ವಧುವಿನ ಕುಟುಂಬಕ್ಕೆ 55 ಸಾವಿರ ರೂ. ನೆರವು ನೀಡುತ್ತದೆ.

  • ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಚೌಹಾಣ್ ಮುಂದೆ ಮಗುವನ್ನು ಎಸೆದ ತಂದೆ!

    ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಚೌಹಾಣ್ ಮುಂದೆ ಮಗುವನ್ನು ಎಸೆದ ತಂದೆ!

    ಭೋಪಾಲ್: ವ್ಯಕ್ತಿಯೊಬ್ಬ ಚಿಕಿತ್ಸೆಗೆ ಕರೆತಂದ ತನ್ನ ಪುಟ್ಟ ಕಂದಮ್ಮನನ್ನು ವೇದಿಕೆಯಲ್ಲಿ ಕುಳಿತಿದ್ದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮುಂದೆ ಎಸೆದ ಹೀನಾಯ ಪ್ರಸಂಗವೊಂದು ನಡೆದಿದೆ.

    ಈ ಘಟನೆ ಮಧ್ಯಪ್ರದೇಶ (Madhyapradesh) ದ ಸಾಗರ್ ಎಂಬಲ್ಲಿ ನಡೆದಿದೆ. ವ್ಯಕ್ತಿಯನ್ನು ಮುಕೇಶ್ ಪಟೇಲ್ ಎಂದು ಗುರುತಿಸಲಾಗಿದೆ. ವ್ಯಕ್ತಿಯು ತನ್ನ 1 ವರ್ಷದ ಮಗುವನ್ನು ವೇದಿಕೆಗೆ ಎಸೆಯುತ್ತಿದ್ದಂತೆಯೇ ಅಲರ್ಟ್ ಆದ ಪೊಲೀಸರು. ಕೂಡಲೇ ಮಗುವನ್ನು ತೆಗೆದುಕೊಂಡು ಅದರ ತಾಯಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಕಾರ್ಯಕ್ರಮದಲ್ಲಿ ನೆರೆದಿದ್ದವರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು.

    ನಡೆದಿದ್ದೇನು..?: ಮಧ್ಯಪ್ರದೇಶದ ಮುಖ್ಯಮಂತ್ರಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. ಸಾಗರದ ಕೆಸ್ಲಿ ತಹಸಿಲ್‍ನ ಸಹಜ್‍ಪುರ ಗ್ರಾಮದ ನಿವಾಸಿಯಾಗಿರುವ ಮುಖೇಶ್ ಪಟೇಲ್ (Mukesh Patel) ಹಾಗೂ ನೇಹಾ ದಂಪತಿಯ ಮಗುವಿನ ಹೃದಯದಲ್ಲಿ ರಂಧ್ರವಿದೆ. ದಂಪತಿ ಈವರೆಗೆ ಮಗುವಿನ ಚಿಕಿತ್ಸೆಗಾಗಿ 4 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದ್ದಾರೆ. ಆದರೆ ಮಗುವಿನ ಶಸ್ತ್ರಚಿಕಿತ್ಸೆಗೆ ಇನ್ನೂ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಇದನ್ನೂ ಓದಿ: ನನ್ನ ಬೆನ್ನಿಗೆ ಚೂರಿ ಹಾಕ್ತೀರಿ, ಎಷ್ಟು ಕಿರುಕುಳ ಕೊಡ್ತೀರಿ: ಖೂಬಾ ವಿರುದ್ಧ ಪ್ರಭು ಚವ್ಹಾಣ್ ಕೆಂಡಾಮಂಡಲ

    ಅಂತೆಯೇ ಇತ್ತೀಚೆಗೆ ಸಾರ್ವಜನಿಕ ಸಮಾವೇಶವೊಂದರಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಭಾಗವಹಿಸಿದ್ದರು. ಇದು ಮುಕೇಶ್ ಗಮನಕ್ಕೆ ಬಂದಿದ್ದು, ಕಾರ್ಯಕ್ರಮದಂದು ತನ್ನ ಮಗುವಿನೊಂದಿಗೆ ಮುಕೇಶ್ ಪಟೇಲ್ ದಂಪತಿ ತೆರಳಿದ್ದರು. ಮೊದಲು ಪೊಲೀಸರ ಬಳಿ ಹೋಗಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಬೇಕೆಂದು ಹೇಳಿದ್ದಾರೆ. ಆದರೆ ಪೊಲೀಸರು ಇದಕ್ಕೆ ಒಪ್ಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿಯ ಗಮನಕ್ಕೆ ತರುವ ಸಲುವಾಗಿ ಮುಕೇಶ್ ತನ್ನ ಮಗುವನ್ನು ವೇದಿಕೆಯ ಬಳಿ ಎಸೆದಿದ್ದಾರೆ. ಇದನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮಗುವನ್ನು ಮೇಲೆತ್ತಿ ತಾಯಿಗೆ ನೀಡಿದ್ದಾರೆ. ಬಳಿಕ ಅಧಿಕಾರಿಗಳು ಈ ವಿಚಾರವನ್ನು ಮುಖ್ಯಮಂತ್ರಿಗೆ ಹೇಳಿದ್ದಾರೆ. ಆತನ ಮಗುವಿನ ಹೃದಯದಲ್ಲಿ ರಂಧ್ರವಿದೆ. ಸಹಾಯಕ್ಕಾಗಿ ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಲ್ಲಾ ಸಹಾಯ ಮಾಡುವುದಾಗಿ ಭರವಸೆಯನ್ನು ನೀಡಿದ್ದಾರೆ.

    ನನ್ನ ಮಗು 3 ತಿಂಗಳು ಇರುವಾಗ ಹೃದಯದಲ್ಲಿ ರಂಧ್ರ ಕಾಣಿಸಿಕೊಂಡಿತ್ತು. ಇದಕ್ಕಾಗಿ 4 ಲಕ್ಷಕ್ಕೂ ಅಧಿಕ ಖರ್ಚು ಮಾಡಿದ್ದೇನೆ. ವೈದ್ಯರು ಆಪರೇಷನ್ ಮಾಡಬೇಕೆಂದು ಹೇಳಿದ್ದು, ಅದಕ್ಕೆ 3.50 ಲಕ್ಷ ವೆಚ್ಚವಾಗಲಿದೆ ಎಂದಿದ್ದಾರೆ. ಆದರೆ ಅಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸುವುದು ನಮ್ಮಿಂದ ಸಾಧ್ಯವಿಲ್ಲ. ಹೀಗಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಬಂದೆವು. ಆದರೆ ಪೊಲೀಸರು ನಮಗೆ ಅವಕಾಶ ನೀಡಲಿಲ್ಲ. ಹೀಗಾಗಿ ಕಾರ್ಯಕ್ರಮದಲ್ಲಿ ವೇದಿಕೆಯತ್ತ ಮಗುವನ್ನು ಎಸೆದಿದ್ದಾಗಿ ಮುಕೇಶ್ ಪಟೇಲ್ ಹೇಳಿದ್ದಾರೆ.

  • ರಾಹುಲ್ ಗಾಂಧಿ ತಮ್ಮ ಪಕ್ಷಕ್ಕೆ ರಾಹು ಆಗಿದ್ದಾರೆ: ನಾಲಿಗೆ ಹರಿಬಿಟ್ಟ ಶಿವರಾಜ್ ಸಿಂಗ್ ಚೌಹಾಣ್

    ರಾಹುಲ್ ಗಾಂಧಿ ತಮ್ಮ ಪಕ್ಷಕ್ಕೆ ರಾಹು ಆಗಿದ್ದಾರೆ: ನಾಲಿಗೆ ಹರಿಬಿಟ್ಟ ಶಿವರಾಜ್ ಸಿಂಗ್ ಚೌಹಾಣ್

    ಭೋಪಾಲ್: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಗೆ (Rahul Gandhi) ದೇಶದ ಬಗ್ಗೆ ಅಥವಾ ದೇಶದ ನೀತಿಗಳ ಬಗ್ಗೆ ಏನೂ ತಿಳಿದಿಲ್ಲ. ಅವರು ತಮ್ಮ ಪಕ್ಷಕ್ಕೆ ರಾಹು (Rahu) ಆಗಿದ್ದಾರೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ (Madhya Pradesh CM) ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ರಾಹುಲ್ ಗಾಂಧಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ.

    ಬುಧವಾರ ಭೋಪಾಲ್‌ನಲ್ಲಿ (Bhopal) ಮಾಧ್ಯಮದವರೊಂದಿಗೆ ಮಾತನಾಡಿದ ಮಧ್ಯಪ್ರದೇಶದ ಸಿಎಂ, ರಾಹುಲ್ ಗಾಂಧಿ ಎಂತಹ ನಾಯಕನೆಂದರೆ, ಅವರಿಗೆ ರಾಷ್ಟ್ರೀಯ ನೀತಿಗಳ ಬಗ್ಗೆ ಜ್ಞಾನವೇ ಇಲ್ಲ. ರಾಹುಲ್ ಅವರೇ, ದೇಶ ಸಂವಿಧಾನದ ಮೇಲೆ ನಡೆಯುತ್ತಿದೆ, ಮಾತಿನ ಮೇಲೆ ಅಲ್ಲ ಎಂದು ಕಿಡಿಕಾರಿದ್ದಾರೆ.

    ದೇಶದ ಜನರಿಗೆ ಕಾಂಗ್ರೆಸ್‌ನ ಸಮಸ್ಯೆ ಏನು ಎಂಬುದು ತಿಳಿದಿದೆ. ಕಾಂಗ್ರೆಸ್‌ನ ದೊಡ್ಡ ಸಮಸ್ಯೆಯೇ ರಾಹುಲ್ ಗಾಂಧಿ. ರಾಹುಲ್ ಕಾಂಗ್ರೆಸ್‌ಗೆ ರಾಹು ಆಗಿದ್ದಾರೆ. ಹೀಗಾಗಿಯೇ ಭಾರತದಲ್ಲಿ ಇದೀಗ ಅಮೃತ ಕಾಲ ನಡೆಯುತ್ತಿದ್ದು, ಕಾಂಗ್ರೆಸ್‌ನಲ್ಲಿ ಮಾತ್ರ ರಾಹು ಕಾಲ ನಡೆಯುತ್ತಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ವಲಸಿಗರ ಘರ್ ವಾಪಸಿ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‍ಗೆ ಆತಂಕ- ಟಿಕೆಟ್ ಫೈನಲ್ ಮಾಡಲು ಪರದಾಟ

    ಗಾಂಧಿ, ನೆಹರೂ ಕುಟುಂಬದ ಗುಲಾಮ ನಾಯಕರು ರಾಹುಲ್ ಗಾಂಧಿ ಅವರನ್ನು ಬಲವಂತವಾಗಿ ರಾಷ್ಟ್ರೀಯ ನಾಯಕನನ್ನಾಗಿ ಮಾಡಲು ನಿರ್ಧರಿಸಿದ್ದಾರೆ. ಆದರೆ ವಾಸ್ತವವೆಂದರೆ ರಾಹುಲ್ ಗಾಂಧಿ ಅತ್ಯಂತ ವಿಫಲ, ದುರ್ಬಲ, ಬೇಜವಾಬ್ದಾರಿ, ಅಸಡ್ಡೆ ಮತ್ತು ಸೊಕ್ಕಿನ ಮನುಷ್ಯ ಎಂದು ಕಟುವಾಗಿ ಟೀಕಿಸಿದ್ದಾರೆ.

    2013ರಲ್ಲಿ ಮನಮೋಹನ್ ಸಿಂಗ್ ಸರ್ಕಾರ ಹೊರಡಿಸಿದ ಚುನಾವಣಾ ಅನರ್ಹತೆಯ ಕಾನೂನಿನ ಸುಗ್ರೀವಾಜ್ಞೆಯನ್ನು ಹರಿದು ಹಾಕಿದ್ದನ್ನು ಉಲ್ಲೇಖಿಸಿದ ಅವರು, ಇದು ರಾಹುಲ್ ಗಾಂಧಿಯವರ ಅಹಂಕಾರದ ಕೃತ್ಯ ಎಂದಿದ್ದಾರೆ. ದುರಹಂಕಾರದಲ್ಲಿ ರಾಹುಲ್ ಗಾಂಧಿ ವಿವಿಧ ವರ್ಗಗಳು ಮತ್ತು ಜಾತಿಗಳನ್ನು ಅವಮಾನಿಸುತ್ತಾರೆ. ಹಿಂದುಳಿದ ವರ್ಗಗಳು ತನಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿಗೆ ತಿಳಿದಿದೆ. ಇದು ದುರಹಂಕಾರವಲ್ಲದೇ ಮತ್ತೇನು ಎಂಬುದನ್ನು ರಾಹುಲ್ ಗಾಂಧಿಯೇ ಹೇಳಬೇಕು ಎಂದು ಚೌಹಾಣ್ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ನ ಲಾಭ ಪಡೆಯಲಿದೆಯೇ ಬಿಜೆಪಿ?

  • ಮಧ್ಯಪ್ರದೇಶಕ್ಕೆ ಮಹಾಶಿವರಾತ್ರಿಯಂದು ಉಡುಗೊರೆ ಸಿಕ್ಕಿದೆ – ಚೀತಾಗಳ ಬಗ್ಗೆ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

    ಮಧ್ಯಪ್ರದೇಶಕ್ಕೆ ಮಹಾಶಿವರಾತ್ರಿಯಂದು ಉಡುಗೊರೆ ಸಿಕ್ಕಿದೆ – ಚೀತಾಗಳ ಬಗ್ಗೆ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

    ಭೂಪಾಲ್: ಪರಿಸರವನ್ನು ಸಂರಕ್ಷಿಸುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ದೃಷ್ಟಿಕೋನವು ಜಗತ್ತಿಗೆ ದಾರಿ ತೋರಿಸುತ್ತಿದೆ ಎಂದು ಮಧ್ಯಪ್ರದೇಶ (Madhya Pradesh) ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಹೇಳಿದ್ದಾರೆ. ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ (Kuno National Park) ದಕ್ಷಿಣ ಆಫ್ರಿಕಾದಿಂದ ಆಮದು ಮಾಡಿಕೊಂಡ 12 ಚೀತಾಗಳನ್ನು ಉದ್ಯಾನಕ್ಕೆ ಬಿಡುಗಡೆಗೊಳಿಸಿದ ಬಳಿಕ ಅವರು ಮಾತನಾಡಿದರು.

    ಮಧ್ಯಪ್ರದೇಶಕ್ಕೆ ಮಹಾಶಿವರಾತ್ರಿಯಂದು ಉಡುಗೊರೆ ಸಿಕ್ಕಿದೆ. ನಾನು ಪ್ರಧಾನಿ ಮೋದಿಯವರಿಗೆ ನನ್ನ ಹೃದಯದಾಳದಿಂದ ಧನ್ಯವಾದ ಹೇಳುತ್ತೇನೆ. ಇಂದು 12 ಚೀತಾಗಳನ್ನು ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿದ್ದು, ಅವುಗಳ ಸಂಖ್ಯೆ 20 ಕ್ಕೆ ಏರಿದೆ. ಹಿಂದೆ ಬಂದಿದ್ದ ಚೀತಾಗಳು ಈಗ ಪರಿಸ್ಥಿತಿಗೆ ಚೆನ್ನಾಗಿ ಹೊಂದಿಕೊಂಡಿವೆ ಎಂದರು. ಇದನ್ನೂ ಓದಿ: ಭಾರತಕ್ಕೆ ಮತ್ತೆ 12 ಚೀತಾಗಳ ಆಗಮನ

    ಜಗತ್ತಿಗೆ ದಾರಿ ತೋರಿಸುವ ಪರಿಸರ ಮತ್ತು ವನ್ಯಜೀವಿಗಳನ್ನು ರಕ್ಷಿಸುವುದು ಪ್ರಧಾನಿ ಮೋದಿಯವರ ದೂರದೃಷ್ಟಿಯಾಗಿದೆ. ಅದಕ್ಕೆ ಚೀತಾ ಯೋಜನೆ ಒಂದು ಉದಾಹರಣೆಯಾಗಿದೆ. ಚೀತಾಗಳನ್ನು ಸುರಕ್ಷಿತವಾಗಿ ಕರೆತಂದ ಇಡೀ ತಂಡವನ್ನು ನಾನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

    ಇಂದು ಮುಂಜಾನೆ, 12 ಚೀತಾಗಳ ಎರಡನೇ ಬ್ಯಾಚ್ ಅನ್ನು ಹೊತ್ತ ಭಾರತೀಯ ವಾಯುಪಡೆಯ Mi-17 ಹೆಲಿಕಾಪ್ಟರ್‌ಗಳು ತಮ್ಮ ಕುನೋ ರಾಷ್ಟ್ರೀಯ ಉದ್ಯಾನವನವನ್ನು ತಲುಪಿದವು. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಿಂದ 10 ಗಂಟೆಗಳ ಸುದೀರ್ಘ ಹಾರಾಟದ ನಂತರ ವಿಮಾನವು ಇಂದು ಏರ್‌ಫೋರ್ಸ್ ಸ್ಟೇಷನ್ ಗ್ವಾಲಿಯರ್‌ಗೆ ಬಂದಿಳಿಯಿತು. ಇದನ್ನೂ ಓದಿ: ಏರ್ ಇಂಡಿಯಾ ಬಳಿಕ 500 ವಿಮಾನಗಳ ಖರೀದಿಗೆ IndiGo ಆರ್ಡರ್

    ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಎಂಟು ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು. ದಕ್ಷಿಣ ಆಫ್ರಿಕಾ ಮತ್ತು ಭಾರತ ಸರ್ಕಾರಗಳ ನಡುವೆ ಸಹಿ ಮಾಡಿದ ಒಪ್ಪಂದದ ಆಧಾರದ ಮೇಲೆ ಚೀತಾ ಮರುಪರಿಚಯ ಯೋಜನೆಯ ಭಾಗವಾಗಿ ಚಿರತೆಗಳನ್ನು ಭಾರತಕ್ಕೆ ತರಲಾಗುತ್ತಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಊಟಕ್ಕಾಗಿ ಬಿಜೆಪಿಯಿಂದ ಜನರ ಕೋಟಿ-ಕೋಟಿ ಹಣ ಲೂಟಿ: ಜೀತು ಪಟ್ವಾರಿ

    ಊಟಕ್ಕಾಗಿ ಬಿಜೆಪಿಯಿಂದ ಜನರ ಕೋಟಿ-ಕೋಟಿ ಹಣ ಲೂಟಿ: ಜೀತು ಪಟ್ವಾರಿ

    ಭೋಪಾಲ್: ಬಿಜೆಪಿ (BJP) ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ (Chief Minister) ಮನೆಯಲ್ಲಿ ನಡೆದ ಪಕ್ಷದ ಸಭೆಗಳಲ್ಲಿ ಮಧ್ಯಾಹ್ನದ ಊಟ, ಚಹಾ ಮತ್ತು ರಾತ್ರಿಯ ಊಟಕ್ಕಾಗಿ 40 ಕೋಟಿ ರೂ. ಸಾರ್ವಜನಿಕ ಹಣವನ್ನು ಖರ್ಚು ಮಾಡಿದೆ ಎಂದು ಮಧ್ಯಪ್ರದೇಶದ ಕಾಂಗ್ರೆಸ್ (Congress) ಶಾಸಕ ಜೀತು ಪಟ್ವಾರಿ (Jitu Patwari) ಆರೋಪಿಸಿದ್ದಾರೆ.

    ಅವಿಶ್ವಾಸ ನಿರ್ಣಯ ಗೊತ್ತುವಳಿ ಮಂಡಿಸುವ ವೇಳೆ ಮಾತನಾಡಿದ ಅವರು, 2014-18ರ ಅವಧಿಯಲ್ಲಿ ಆಡಳಿತ ಪಕ್ಷದ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡುವುದಕ್ಕಾಗಿಯೇ ಸರ್ಕಾರ ಕೋಟಿಗಟ್ಟಲೇ ಸಾರ್ವಜನಿಕ ಹಣ ಖರ್ಚು ಮಾಡಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan), ಆಡಳಿತ ಪಕ್ಷದ ಅಧಿಕಾರಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ 90 ಬಾರಿ ಊಟದ ವ್ಯವಸ್ಥೆ ಮಾಡಲು ಹಣವನ್ನು ಖರ್ಚು ಮಾಡಿದ್ದಾರೆ ಎಂದು ದೂರಿದ್ದಾರೆ.

    ಬಿಜೆಪಿ (BJP) ಈ ಆರೋಪವನ್ನು ತಳ್ಳಿಹಾಕಿದ್ದು, ಇದು ಶುದ್ಧ ಸುಳ್ಳು. ಸುಳ್ಳು ಹೇಳಿಕೆ ನೀಡಿರುವುದರ ವಿರುದ್ಧ `ಪ್ರಶ್ನಾ ಔರ್ ಸಂಬಂಧ ಸಮಿತಿ’ಗೆ (ಸದನದ ಉಲ್ಲೇಖ ಸಮಿತಿ) ದೂರು ಸಲ್ಲಿಸುವುದಾಗಿ ಹೇಳಿದೆ. ಇದನ್ನೂ ಓದಿ: ಮೆಸ್ಕಾಂ ಕಚೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಏಟು – ದಲಿತ ಸಂಘಟನೆಗಳ ಆಕ್ರೋಶ

    ಸದನದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಈ ಕುರಿತು ಉತ್ತರ ನೀಡುತ್ತಿದ್ದಂತೆ, ಪಟ್ವಾರಿ ದಾಖಲೆಗಳನ್ನು ಪ್ರಸ್ತುತಪಡಿಸಿದ್ದಾರೆ. ಊಟದ ವ್ಯವಸ್ಥೆ ಪಡೆಯುವುದಕ್ಕೆ ಬಿಜೆಪಿ ಕಚೇರಿ ಎಂದು ನಮೂದು ಮಾಡಿರುವ ರಶೀದಿಗಳನ್ನ ಸಲ್ಲಿಸಿದ್ದಾರೆ. ಅದರಲ್ಲಿ ಒಂದು ಕಪ್ ಚಹಾ 400 ರೂ.ಗೆ ಹಾಗೂ ಒಂದು ಪ್ಲೇಟ್ ಊಟಕ್ಕೆ 2 ಸಾವಿರ ರೂ. ವಿಧಿಸಲಾಗಿದೆ. ಒಂದು ವೇಳೆ ಸಲ್ಲಿಸಿರುವ ದಾಖಲೆಗಳು ನಕಲಿ ಎಂದು ಕಂಡುಬಂದರೆ ಅವರ ಸದನದ ಸದಸ್ಯತ್ವವನ್ನು ರದ್ದುಪಡಿಸಬಹುದು. ನಿಜವಾಗಿದ್ದರೆ, ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ನೀವು ಸದನವನ್ನು ದಾರಿ ತಪ್ಪಿಸುತ್ತಿದ್ದೀರಿ. ಬಿಜೆಪಿ ಕಾರ್ಯಕರ್ತರಿಗೆ ಊಟ ಬಡಿಸಲು ಸರ್ಕಾರದ ಒಂದು ಪೈಸೆಯೂ ಖರ್ಚು ಮಾಡಿಲ್ಲ ಎಂದು ನಾನು ಸಂಪೂರ್ಣ ಜವಾಬ್ದಾರಿಯಿಂದ ಹೇಳಬಲ್ಲೆ ಎಂದು ಹೇಳಿದರು. ಇದನ್ನೂ ಓದಿ: ವಿದೇಶಕ್ಕೆ Made In India ಪೋನ್- 110 ಪಟ್ಟು ಹೆಚ್ಚಳ, ಶೇ.40 ಐಫೋನ್‌ ರಫ್ತು

    ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಮಾತನಾಡಿ, ಪಟ್ವಾರಿ ಅವರ ಹೇಳಿಕೆ ಮಹಾ ಸುಳ್ಳು. ಬಿಜೆಪಿಗೆ ಧಕ್ಕೆ ತರಲು ಈ ರೀತಿ ಹೇಳಿಕೆಗಳನ್ನೂ ನೀಡಲಾಗುತ್ತಿದೆ. ಈ ಹಿಂದೆ ಕಮಲ್ ನಾಥ್ ಅವರು ಮುಖ್ಯಮಂತ್ರಿಯಾಗಿದ್ದಾಗ (ಡಿಸೆಂಬರ್ 2018 ಮತ್ತು ಮಾರ್ಚ್ 2020ರ ನಡುವೆ) ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನಡೆದ್ದ 131 ಕೋಟಿ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಈ ತಂತ್ರ ರೂಪಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿ: ಸಚಿವೆ ಉಷಾ ಠಾಕೂರ್

    ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿ: ಸಚಿವೆ ಉಷಾ ಠಾಕೂರ್

    ಭೋಪಾಲ್: ವಾರದ ಆರಂಭದಲ್ಲಿ ಮಧ್ಯಪ್ರದೇಶದ (Madhya Pradesh) ಖಾಂಡ್ವಾ ಜಿಲ್ಲೆಯಲ್ಲಿ ನಡೆದ ನಾಲ್ಕು ವರ್ಷದ ಬಾಲಕಿ ಮೇಲಿನ ಅತ್ಯಾಚಾರವನ್ನು ಖಂಡಿಸಿ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವೆ ಉಷಾ ಠಾಕೂರ್ (Usha Thakur) ಅವರು, ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು. ಈ ರೀತಿಯ ಕಠಿಣ ಶಿಕ್ಷೆ ನೀಡುವುದರಿಂದ ಮತ್ತೆ ಇಂತಹ ಕೃತ್ಯವೆಸಗಲು ಯಾರೂ ಧೈರ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧ್ಯಪ್ರದೇಶ ಸರ್ಕಾರವು ಇಂತಹ ಅನಾಗರಿಕ ಕೃತ್ಯಗಳ ವಿರುದ್ಧ ಕಠಿಣವಾಗಿ ಮತ್ತು ಎಚ್ಚರದಿಂದ ವ್ಯವಹರಿಸುತ್ತಿದೆ. ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲು ಅವಕಾಶ ಮಾಡಿ ಕೊಟ್ಟ ದೇಶದ ಮೊದಲ ರಾಜ್ಯ ಇದಾಗಿದೆ. ಇಲ್ಲಿಯವರೆಗೆ ಅತ್ಯಾಚಾರ ಕೃತ್ಯವೆಸಗಿದ 72 ಮಂದಿಗೆ ಮರಣದಂಡನೆ ವಿಧಿಸಲಾಗಿದೆ. ಆದರೂ ಅತ್ಯಾಚಾರಗಳು ನಡೆಯುತ್ತಲೇ ಇದೆ. ಇದು ಸಮಾಜಕ್ಕೆ, ಪ್ರಜಾಪ್ರಭುತ್ವಕ್ಕೆ, ಮಾಧ್ಯಮ ಮತ್ತು ನಮ್ಮೆಲ್ಲರಿಗೂ ಆತಂಕಕಾರಿ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲೂ ಸಂಚಾರ ಆರಂಭಿಸಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ – ನ.11ಕ್ಕೆ ಮೋದಿ ಚಾಲನೆ

    ನಾನಾ ಮಾರ್ಗಗಳ ಮೂಲಕ ಸಮಾಜವನ್ನು ಬೆಳಗಿಸಬೇಕು. ಆದರೆ ಇಂತಹ ಕೃತ್ಯಗಳಲ್ಲಿ ಯಾರಾದರೂ ಹೇಗೆ ತೊಡಗಿಸಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ. ಹಾಗಾಗಿ ಅತ್ಯಚಾರವೆಸಗುವವರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chauhan) ನಾನು ಮನವಿ ಮಾಡುತ್ತೇನೆ. ಅಪರಾಧಿಗಳಿಗೆ ಜೈಲಿನಲ್ಲಿ ಮರಣದಂಡನೆ ವಿಧಿಸಲಾಗುತ್ತಿದೆ ಎನ್ನುತ್ತಾರೆ, ಆದರೆ ಅದು ಎಲ್ಲಿ ನಡೆಯುತ್ತಿದೆ ಅಂತ ಯಾರಿಗೂ ಗೊತ್ತಿಲ್ಲ ಎಂದಿದ್ದಾರೆ.

    ಇತ್ತೀಚೆಗೆ ನಡೆದ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಸಿಕ್ಕಿಬಿದ್ದ ಇಬ್ಬರು ಅಪರಾಧಿಗಳನ್ನು ಖಾಂಡ್ವಾ ನಗರದ ಚೌಕದಲ್ಲಿ ಸಾರ್ವಜನಿಕವಾಗಿ ಗಲ್ಲಿಗೇರಿಸಿದರೆ, ಇಂತವರು ಮತ್ತೆ ಯಾವುದೇ ಮಗಳನ್ನು ಮುಟ್ಟುವ ಮೊದಲು ಸಾವಿರ ಬಾರಿ ಯೋಚಿಸುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಲ್ಲವರಿಗೆ ಮೀಸಲಾತಿ ನೀಡಿ – ಬೃಹತ್ ಹಕ್ಕೋತ್ತಾಯ

    ಇತ್ತೀಚೆಗೆ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಖಾಂಡ್ವಾದಲ್ಲಿನ ಕಬ್ಬಿನ ಗದ್ದೆಗೆ ದುಷ್ಕರ್ಮಿಗಳು ಎಸೆದು ಹೋಗಿದ್ದರು. ಸೋಮವಾರ ಜಮೀನಿನ ಪೊದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ಇಂದೋರ್‍ನ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದ್ದು, ಜಿಲ್ಲೆಯಲ್ಲಿ ಬೇರೆ, ಬೇರೆ ಅತ್ಯಾಚಾರವೆಸಗಿರುವ ಮತ್ತೊಬ್ಬ ಆರೋಪಿ ಕೂಡ ಸಿಕ್ಕಿಬಿದ್ದಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಮಲ್ಲಿಕಾರ್ಜುನ ಖರ್ಗೆ ಹರಕೆಯ ಕುರಿ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

    ಮಲ್ಲಿಕಾರ್ಜುನ ಖರ್ಗೆ ಹರಕೆಯ ಕುರಿ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

    ಕಲಬುರಗಿ: ಮುಳುಗುವ ಹಡಗಿಗೆ ನಾವಿಕನಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಕಾಂಗ್ರೆಸ್ (Congress) ಪಕ್ಷ ನೇಮಕ ಮಾಡುವ ಮೂಲಕ ಅವರನ್ನು ಬಲಿ ಕಾ ಬಕ್ರಾ (ಹರಕೆಯ ಕುರಿ) ಮಾಡಿದ್ದಾರೆ ಎಂದು ಮಧ್ಯಪ್ರದೇಶದ (Madhya Pradesh) ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಲೇವಡಿ ಮಾಡಿದ್ದಾರೆ.

    ಬಿಜೆಪಿ ಹಿಂದುಳಿದ ವರ್ಗಳ ವಿರಾಟ್ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಂದ ಕಾಂಗ್ರೆಸ್ ಉಳಿಸಲು ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಮುಳುಗುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಿದ್ದಾರೆ ಎಂದರು.

    ಬಕ್ರೀದ್ ಮೇ ಬಚೇಂಗೆ ತೋ ಮೊಹರಂ ಮೇ ನಾಚೇಂಗೆ ಎಂದು ಖುದ್ದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದುರ್ದೈವದ ಸಂಗತಿ ಎಂದರೆ, ಅವರೇ ಹರಕೆಯ ಕುರಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ Vs ಕುಮಾರಸ್ವಾಮಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ?

    ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ ಭಾರತ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಡೀ ವಿಶ್ವವೇ ಮೋದಿಯವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡು, ಗುಣಗಾನ ಮಾಡುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    1947ರಲ್ಲಿ ಅಖಂಡ ಭಾರತವನ್ನು ತುಂಡು ಮಾಡಿದ್ದು ಇದೇ ಕಾಂಗ್ರೆಸ್‌ನ ನೆಹರೂ. ಇಂದು ರಾಹುಲ್ ಬಾಬಾ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ತುಕಡೇ (ತುಂಡು) ಮಾಡಿದವರಿಂದಲೇ ಜೋಡೋ ಅಭಿಯಾನ ನಡೆದಿದೆ ಎಂದರು. ಇದನ್ನೂ ಓದಿ: ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಬಿಜೆಪಿಯ ವಿಜಯಯಾತ್ರೆ ತಡೆಯಿರಿ – ಕಾಂಗ್ರೆಸ್‍ಗೆ ಬೊಮ್ಮಾಯಿ ಸವಾಲು

    Live Tv
    [brid partner=56869869 player=32851 video=960834 autoplay=true]

  • Rx ಬದಲಿಗೆ ಪ್ರಿಸ್ಕ್ರಿಪ್ಷನ್‍ನಲ್ಲಿ ‘ಶ್ರೀ ಹರಿ’ ಅಂತ ಹಿಂದಿಯಲ್ಲಿ ಬರೆದ ವೈದ್ಯ

    Rx ಬದಲಿಗೆ ಪ್ರಿಸ್ಕ್ರಿಪ್ಷನ್‍ನಲ್ಲಿ ‘ಶ್ರೀ ಹರಿ’ ಅಂತ ಹಿಂದಿಯಲ್ಲಿ ಬರೆದ ವೈದ್ಯ

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಸತ್ನಾ (Satna) ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಪ್ರಿಸ್ಕ್ರಿಪ್ಷನ್‍ನಲ್ಲಿ (Prescriptions) ‘ಶ್ರೀ ಹರಿ’ (Shri Hari) ಎಂದು ಹಿಂದಿಯಲ್ಲಿ ಬರೆಯುವ ಮೂಲಕ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರ ಹೇಳಿಕೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಹಿಂದಿಯಲ್ಲಿ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿದ ದಿನವೇ ಕೋಟಾರ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‍ಸಿ) ವೈದ್ಯಕೀಯ ಅಧಿಕಾರಿ ಡಾ.ಸರ್ವೇಶ್ ಸಿಂಗ್ (Dr Sarvesh Singh) ಹಿಂದಿಯಲ್ಲಿ ಬರೆದ ಪ್ರಿಸ್ಕ್ರಿಪ್ಷನ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಭೋಪಾಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಭಾಷಣದ ವೇಳೆ ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಲಿಪ್‍ಗಳ ಮೇಲೆ ಆರ್‌ಎಕ್ಸ್ ಎಂಬ (ಲ್ಯಾಟಿನ್ ಪದದ ಚಿಹ್ನೆ) ಬದಲಿಗೆ ‘ಶ್ರೀ ಹರಿ’ ಎಂದು ಬರೆಯಬಹುದು ಎಂದು ಹೇಳಿದ್ದರು. ಇದನ್ನೂ ಓದಿ: ದಾದಾ ಪರ ದೀದಿ ಬ್ಯಾಟಿಂಗ್ – ICC ಚುನಾವಣೆಗೆ ಅವಕಾಶ ಕೊಡುವಂತೆ ಮೋದಿಗೆ ಪತ್ರ

    2017ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ ಡಾ.ಸರ್ವೇಶ್ ಸಿಂಗ್ ಅವರು, ಪಠ್ಯಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಲೈವ್ ಆಗಿ ನೋಡಿದ್ದು, ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು ಹಿಂದಿಯಲ್ಲಿ ಪ್ರಿಸ್ಕ್ರಿಪ್ಷನ್ ಬರೆಯಲು ಪ್ರಯತ್ನಿಸುವಂತೆ ಒತ್ತಾಯಿಸಿದರು. ಹಾಗಾಗಿ ಅದೇ ದಿನ ಪ್ರಿಸ್ಕ್ರಿಪ್ಷನ್ ಅನ್ನು ಹಿಂದಿಯಲ್ಲಿ ಬರೆಯಬೇಕು ಎಂದು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

    ಅದರಂತೆ ಹೊಟ್ಟೆನೋವು ಎಂದು ಭಾನುವಾರ ಆಸ್ಪತ್ರೆಗೆ ಬಂದ ಮೊದಲ ರೋಗಿ ರಶ್ಮಿ ಸಿಂಗ್ ಅವರಿಗೆ ನಾನು ಪ್ರಿಸ್ಕ್ರಿಪ್ಷನ್ ಅಲ್ಲಿ Rx ಬದಲಿಗೆ ‘ಶ್ರೀ ಹರಿ’ ಎಂದು ಬರೆಯಲು ಆರಂಭಿಸಿದೆ. ನಂತರ ಔಷಧಿಗಳ ಹೆಸರನ್ನು ಹಿಂದಿಯಲ್ಲಿ ಬರೆದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 2ನೇ ಪೋಕ್ಸೋ ಕೇಸಲ್ಲಿ ಮುರುಘಾಶ್ರೀಗೆ ಸಂಕಷ್ಟ- ಮೈಸೂರಲ್ಲಿ ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

    Live Tv
    [brid partner=56869869 player=32851 video=960834 autoplay=true]

  • ದೇಶದಲ್ಲಿ ಹಿಂದಿ ಶಿಕ್ಷಣ ಜಾರಿ – ನಾಳೆ 13 ಕಾಲೇಜುಗಳಲ್ಲಿ MBBS ಪಠ್ಯ ರಿಲೀಸ್

    ದೇಶದಲ್ಲಿ ಹಿಂದಿ ಶಿಕ್ಷಣ ಜಾರಿ – ನಾಳೆ 13 ಕಾಲೇಜುಗಳಲ್ಲಿ MBBS ಪಠ್ಯ ರಿಲೀಸ್

    ಭೋಪಾಲ್: ಅಂದುಕೊಂಡಂತೆ ದೇಶದಲ್ಲಿ ಹಿಂದಿ ಶಿಕ್ಷಣ (Hindi Education) ಜಾರಿಯಾಗುತ್ತಿದ್ದು ಭಾನುವಾರ (ಅ.16 ರಂದು) 13 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ (Medical College) ಭಾಷಾಂತರಿಸಿದ ಎಂಬಿಬಿಎಸ್ (MBBS) ಪ್ರಥಮ ವರ್ಷದ ಹಿಂದಿ ಪುಸ್ತಕಗಳನ್ನು (Hindi TextBooks) ಬಿಡುಗಡೆಗೊಳಿಸಲಾಗುತ್ತಿದೆ.

    ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು, ಎಂಬಿಬಿಎಸ್ (MBBS) ವಿಷಯಗಳಾದ ಅಂಗರಚನಾ ಶಾಸ್ತ್ರ, ಶರೀರ ಶಾಸ್ತ್ರ ಹಾಗೂ ಜೀವ ರಸಾಯನ ಶಾಸ್ತ್ರ ಹಿಂದಿ ಪುಸ್ತಕಗಳನ್ನು ಭೋಪಾಲ್‌ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಹಿಂದಿ ವೈದ್ಯಕೀಯ ಶಿಕ್ಷಣ ಆರಂಭವಾಗಲಿದೆ. ಇದನ್ನೂ ಓದಿ: ನ್ಯಾಯ ಸಿಗೋದು ವಿಳಂಬವಾಗ್ತಿರೋದೇ ಜನರಿಗೆ ಬಹುದೊಡ್ಡ ಸಮಸ್ಯೆ: ಮೋದಿ ವಿಷಾದ

    ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivaraj Singh Chouhan), ವೈದ್ಯಕೀಯ ಕೋರ್ಸ್ (Medical Course) ಅನ್ನು ಹಿಂದಿಯಲ್ಲಿ ಆರಂಭಿಸುವ ಮೂಲಕ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನು ಹಿಂದಿಯಲ್ಲಿ (Hindi Language) ಕಲಿಯಲು ಹಾಗೂ ಕಲಿಸಲು ಸಾಧ್ಯವಿಲ್ಲ ಎಂಬ ಗ್ರಹಿಕೆಯನ್ನು ಬದಲಾಯಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಳ್ಳನಂತೆ ಬಂದು ಅಂಗಡಿಯಲ್ಲಿದ್ದ ಬಲ್ಬ್ ಕದ್ದ ಪೊಲೀಸ್- ವೀಡಿಯೋ ವೈರಲ್

    ಹಿಂದಿ ಮಾಧ್ಯಮದ ಶಿಕ್ಷಣದಿಂದಲೂ ಜೀವನದಲ್ಲಿ ಮುನ್ನಡೆಯಬಹುದು ಎಂಬ ಪರಿಕಲ್ಪನೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಶಿಕ್ಷಣ ಮಾಧ್ಯಮ ಮಾತೃ ಭಾಷೆಯಲ್ಲಿರಬೇಕು ಎಂಬುದು ಪ್ರಧಾನಿ ಮೋದಿ (Naredra Modi) ಅವರ ಸಂಕಲ್ಪ. ಅಂತೆಯೇ ಈ ವರ್ಷ ಸಂಘಟಿತವಾಗಿ ಹಿಂದಿ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಇದಕ್ಕಾಗಿ ವೈದ್ಯಕೀಯ ಕ್ಷೇತ್ರದ ತಜ್ಞರ ಕಾರ್ಯಪಡೆ, 97 ವೈದ್ಯಕೀಯ ಕಾಲೇಜು ಶಿಕ್ಷಕರು ಹಾಗೂ ತಜ್ಞರು 5,568 ಗಂಟೆಗಳಿಗೂ ಅಧಿಕ ಕಾಲ ಶ್ರಮಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

    ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್, ಇಂಗ್ಲಿಷ್ ಪುಸ್ತಕಗಳ ಜೊತೆಗೆ ಹಿಂದಿ ಪುಸ್ತಕಗಳೂ ಕಾಲೇಜಿನಲ್ಲಿ ಲಭ್ಯವಿರುತ್ತವೆ. ಆದರೆ ತಾಂತ್ರಿಕ ಪದಗಳು ಇಂಗ್ಲಿಷ್‌ನಲ್ಲೇ ಉಳಿಯುತ್ತವೆ ಎಂದಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ಅಂತ್ಯ – ಪುಟಿನ್ ಸ್ಪಷ್ಟನೆ

    ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ ಆರಂಭಿಸುವ ದೇಶದ ಮೊದಲ ರಾಜ್ಯ ಮಧ್ಯಪ್ರದೇಶವಾಗಲಿದೆ. ಹಿಂದಿಯಲ್ಲಿ ಎಂಬಿಬಿಎಸ್ ಕೋರ್ಸ್ ಗಾಂಧಿ ವೈದ್ಯಕೀಯ ಕಾಲೇಜಿನಿಂದ ಪ್ರಾರಂಭವಾಗಲಿದೆ. ಪ್ರಸಕ್ತ ವರ್ಷದಿಂದಲೇ ಹಿಂದಿಯಲ್ಲಿ ಕಲಿಸಲಾಗುತ್ತದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೃಷ್ಣಮೃಗ ಬೇಟೆಗಾರರಿಂದ 3 ಪೊಲೀಸರ ಹತ್ಯೆ – 1 ಕೋಟಿ ರೂ. ಪರಿಹಾರ ಫೋಷಿಸಿದ ಸಿಎಂ

    ಕೃಷ್ಣಮೃಗ ಬೇಟೆಗಾರರಿಂದ 3 ಪೊಲೀಸರ ಹತ್ಯೆ – 1 ಕೋಟಿ ರೂ. ಪರಿಹಾರ ಫೋಷಿಸಿದ ಸಿಎಂ

    ಭೋಪಾಲ್: ಸಂಸದರ ಗುಣಾದಲ್ಲಿ ಕೃಷ್ಣಮೃಗ ಬೇಟೆಗಾರರು ಮೂವರು ಪೊಲೀಸರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಹಿನ್ನೆಲೆ ಮಧ್ಯ ಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹತ್ಯೆಯಾದ  ಪೊಲೀಸರ ತಲಾ ಕುಟುಂಬಕ್ಕೆ ಎಕ್ಸ್-ಗ್ರೇಷಿಯಾ 1 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ.

    ಶನಿವಾರ ಮಧ್ಯಪ್ರದೇಶದ ಗುನಾ ಜಿಲ್ಲೆಯ ಅರಣ್ಯದಲ್ಲಿ ಕೃಷ್ಣಮೃಗ ಬೇಟೆಗಾರರ ಗುಂಡಿಗೆ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆರನ್ ಪ್ರದೇಶದಲ್ಲಿ ದುಷ್ಕರ್ಮಿಗಳು ಇರುವ ಬಗ್ಗೆ ಮಾಹಿತಿ ಪಡೆದು ಅವರನ್ನು ಹಿಡಿಯಲು ಹೋದಾಗ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸ್ ಸಿಬ್ಬಂದಿ ದುಷ್ಕರ್ಮಿಗಳ ವಿರುದ್ಧ ದಾಳಿ ನಡೆಸಿದ್ದಾರೆ. ಪೊಲೀಸರು ಸುತ್ತುವರಿದು ಮುಖಾಮುಖಿಯಾದಾಗ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸರೂ ಪ್ರತಿದಾಳಿ ನಡೆಸಿದರು. ಆದರೂ ದುಷ್ಕರ್ಮಿಗಳ ತೀವ್ರ ದಾಳಿಯಿಂದ 3 ಪೊಲೀಸರು ಮೃತಪಟ್ಟಿದ್ದಾರೆ. ಇದನ್ನೂ ಓದಿ:  2 ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ 

    ಪರಿಹಾರ ಘೋಷಿಸಿದ ಸಿಎಂ
    ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಘಟನೆಯ ಕುರಿತು ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಮೂವರು ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಗೆ ಎಕ್ಸ್-ಗ್ರೇಷಿಯಾ ತಲಾ 1 ಕೋಟಿ ರೂ. ಪರಿಹಾರವನ್ನು ಘೋಷಿಸಿದರು. ಡಿಜಿಪಿ, ಗೃಹ ಸಚಿವರು, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    ಈ ಕುರಿತು ಶಿವರಾಜ್ ಸಿಂಗ್ ಚೌಹಾಣ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಮ್ಮ ಪೊಲೀಸ್ ಸಿಬ್ಬಂದಿ ಕಳ್ಳ ಬೇಟೆಗಾರರನ್ನು ಎದುರಿಸುವಾಗ ಆತ್ಮಾರ್ಪಣೆ ಮಾಡಿಕೊಂಡರು. ಅಪರಾಧಿಗಳ ವಿರುದ್ಧ ಮಾದರಿ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಬಹುತೇಕ ಗುರುತಿಸಲಾಗಿದೆ. ತನಿಖೆ ನಡೆಯುತ್ತಿದೆ. ಅವರಿಗೆ ಕಠಿಣ ಶಿಕ್ಷೆಯಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಕರಿಯಲ್ಲಿ ಖಾರ ಹೆಚ್ಚಾಗಿದ್ದಕ್ಕೆ ಪತ್ನಿಯ ತಲೆ ಬೋಳಿಸಿದ 

    ಎಕ್ಸ್-ಗ್ರೇಷಿಯಾ ಎಂದರೇನು?
    ಕಾಡು ಮೃಗಗಳಿಂದ ಮನುಷ್ಯನ ಸಾವು ಸಂಭವಿಸಿದಲ್ಲಿ ಕೃಪಾಧನ ನೀಡುವುದನ್ನು ಎಕ್ಸ್-ಗ್ರೇಷಿಯಾ ಎನ್ನುತ್ತಾರೆ.