Tag: ಶಿವರಾಜ್ ಸಿಂಗ್ ಚೌಹಾನ್

  • ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ- ಸಿಎಂ ಪಟ್ಟಕ್ಕೇರಿದ ಶಿವರಾಜ್ ಸಿಂಗ್ ಚೌಹಾನ್

    ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ- ಸಿಎಂ ಪಟ್ಟಕ್ಕೇರಿದ ಶಿವರಾಜ್ ಸಿಂಗ್ ಚೌಹಾನ್

    ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿಗಳಾಗಿ ಶಿವರಾಜ್ ಸಿಂಗ್ ಚೌಹಾನ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಲಾಲ್ಜಿ ಟಂಡನ್ ಶಿವರಾಜ್ ಸಿಂಗ್ ಚೌಹಾನ್ ಪ್ರಮಾಣ ವಚನ ಬೋಧಿಸಿದರು.

    15 ಕಾಂಗ್ರೆಸ್ ಶಾಸಕರ ರಾಜೀನಾಮೆ ಜೊತೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಗೊಂಡ ಪರಿಣಾಮ 15 ತಿಂಗಳ ಕಮಲ್‍ನಾಥ್ ಸರ್ಕಾರ ಪತನವಾಯ್ತು. ಇನ್ನು ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ವರದಿಯಾಗಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲದೇ ಬಿಎಸ್‍ಪಿ, ಎಸ್‍ಪಿ ಮತ್ತು ಪಕ್ಷೇತರ ಶಾಸಕ ಸಹ ಬಹುತೇಕರು ಕಮಲ ಹಿಡಿಯಲು ಬಿಜೆಪಿ ಬಾಗಿಲ ಬಳಿ ನಿಂತಿದ್ದಾರೆ ಎನ್ನಲಾಗಿದೆ.

    https://twitter.com/BJP4MP/status/1242096351455789056

    ಕಾಂಗ್ರೆಸ್, ಬಿಎಸ್‍ಪಿ ಮತ್ತು ಎಸ್‍ಪಿ ಸೇರಿದಂತೆ ಸುಮಾರು 10 ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಕಮಲ್‍ನಾಥ್ ಸರ್ಕಾರದ ಸಂಪುಟದಲ್ಲಿದ್ದ ಮಾಜಿ ಮಂತ್ರಿಗಳು ಇದ್ದಾರೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಈ ಬಗ್ಗೆ ನಿರ್ಧರಿಸಲಿದೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

  • ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ – 4ನೇ ಬಾರಿ ಸಿಎಂ ಆಗಲಿದ್ದಾರೆ ಶಿವರಾಜ್ ಸಿಂಗ್ ಚೌಹಾಣ್

    ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ – 4ನೇ ಬಾರಿ ಸಿಎಂ ಆಗಲಿದ್ದಾರೆ ಶಿವರಾಜ್ ಸಿಂಗ್ ಚೌಹಾಣ್

    ಭೋಪಾಲ್: 22 ಮಂದಿ ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದು ಕಾಂಗ್ರೆಸ್ ಸರ್ಕಾರ ಪತನದ ಬಳಿಕ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದು ಸ್ಪಷ್ಟವಾಗಿದೆ.

    ಇಂದು ರಾತ್ರಿ 9 ಗಂಟೆಗೆ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಾಲ್ಕನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಲಾಲ್ಜಿ ಟಂಡನ್ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

    ಸಂಜೆ ಭೂಪಾಲ್‍ನಲ್ಲಿ ಶಾಸಕರ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಆಯ್ಕೆ ಮಾಡಲಿದ್ದಾರೆ. ಆ ಬಳಿಕ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದು, ಇಂದು ರಾತ್ರಿ 9 ಗಂಟೆಗೆ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

    ಶಾಸಕಾಂಗ ಸಭೆಗೂ ಮುನ್ನ ದೆಹಲಿ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ನಾಯಕರಾದ ಧರ್ಮೇಂದ್ರ ಪ್ರಧಾನ್, ಡಾ. ವಿನಯ್ ಸಹಸ್ತ್ರಭೂಧೆ, ಜ್ಯೋತಿರಾಧಿತ್ಯ ಸಿಂಧಿಯಾ ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ.

    ಮಾಹಿತಿಯ ಪ್ರಕಾರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳಾಗಿದ್ದು, ಮೊದಲು ಶಿವರಾಜ್ ಸಿಂಗ್ ಚೌಹಾಣ್ ಏಕಾಂಗಿಯಾಗಿ ಪ್ರಮಾಣ ವಚನ ಪಡೆಯಲಿದ್ದಾರೆ. ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ಕೇವಲ 40 ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

    ಕಾಂಗ್ರೆಸ್ 22 ಮಂದಿ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಸಿಎಂ ಆಗುವ ಮಾರ್ಗ ಸುಲಭವಾಗಿದೆ.