Tag: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು

  • 2015ರಲ್ಲಿ ಕೆತ್ತಿದ್ದ ಜಯಚಾಮರಾಜೇಂದ್ರ ಪ್ರತಿಮೆಯ ಬಾಕಿ ಹಣ ಬಂದಿಲ್ಲ: ಅರುಣ್ ಯೋಗಿರಾಜ್

    2015ರಲ್ಲಿ ಕೆತ್ತಿದ್ದ ಜಯಚಾಮರಾಜೇಂದ್ರ ಪ್ರತಿಮೆಯ ಬಾಕಿ ಹಣ ಬಂದಿಲ್ಲ: ಅರುಣ್ ಯೋಗಿರಾಜ್

    – ಸುತ್ತೂರು ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದ ಶಿಲ್ಪಿ

    ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು ಶುಕ್ರವಾರ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ (Shivratri Desikendra Swamiji) ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

    ಇದೇ ಸಂದರ್ಭದಲ್ಲಿ ಸುತ್ತೂರು ಶ್ರೀಗಳಿಗೆ ಅಯೋಧ್ಯೆ ಬಾಲಕ ರಾಮನ ಮೂರ್ತಿಯ ಫೋಟೋಗಳನ್ನು ತೋರಿಸಿ ವಿವರಣೆ ನೀಡಿದರು. ಈ ವೇಳೆ ಸುತ್ತೂರು ಶ್ರೀಗಳು ಅರುಣ್ ಯೋಗಿರಾಜ್ ದಂಪತಿಯನ್ನ ಅಭಿನಂದಿಸಿದರು. ಇದನ್ನೂ ಓದಿ: ಶೆಟ್ಟರ್, ಜೋಶಿ ಒಂದು ನಾಣ್ಯದ ಎರಡು ಮುಖದ ರೀತಿ ಕೆಲಸ ಮಾಡಿದ್ದಾರೆ: ವಿ ಸೋಮಣ್ಣ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ್, ಜನರಿಂದ ಈ ರೀತಿ ಸ್ವಾಗತ ಸಿಗುತ್ತೆ ಅಂತ ಅಂದು ಕೊಂಡಿರಲಿಲ್ಲ. ದೇಶದಲ್ಲಿ ಯಾವ ಶಿಲ್ಪ ಕಲಾವಿದನಿಗೂ ಸಿಗದ ಗೌರವ, ಮನ್ನಣೆ ನನಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ – ಮೇಳೈಸಿದ ಸಾಂಸ್ಕೃತಿಕ ವೈಭವ, ಸೇನಾ ಶಕ್ತಿಪ್ರದರ್ಶನವೇ ರೋಚಕ!

    ಸದ್ಯ ಮುಂದಿನ ಯೋಜನೆಗಳು ನನ್ನ ಮುಂದಿಲ್ಲ. ವೈಯಕ್ತಿಕ ಕಾರಣಗಳಿಂದ ದೆಹಲಿಗೆ ಹೋಗ್ತಿದ್ದೀನಿ ಎಂದ ಅರುಣ್, 2015 ರಲ್ಲಿ ನಾನು ಕೆತ್ತಿದ ಮೈಸೂರಿನ ಜಯಚಾಮರಾಜೇಂದ್ರ ಪ್ರತಿಮೆಯ ಬಾಕಿ ಹಣ ಬರಬೇಕಿದೆ. ಬಾಕಿ ಹಣದ ವಿಚಾರದಲ್ಲಿ ನಾನು ಸರಿಯಾಗಿ ಫೈಲ್ ಫಾಲೋ ಆಫ್ ಮಾಡಲಿಲ್ಲ. ಹೀಗಾಗಿ ವಿಳಂಬವಾಗಿದೆ ಅಷ್ಟೆ. ನನಗೆ ಕಲೆಯ ಪ್ರೀತಿ ಗೊತ್ತು. ಆದರೆ ಹಣಕಾಸಿನ ವಿಷಯದಲ್ಲಿ ನಾನು ಅಷ್ಟೊಂದು ಗಮನಹರಿಸಲೇ ಇಲ್ಲ. ಅದಕ್ಕಾಗಿ ತಡವಾಗಿದೆ ಎಂದು ಹೇಳಿಕೊಂಡಿದ್ದಾರೆ.

    ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದಿದ್ದ ಅರುಣ್: ನನಗೆ ರಾಜಕೀಯ ಆಸಕ್ತಿ ಇಲ್ಲ. ಕಲಾ ಸೇವೆಯಲ್ಲಿ ನಂಬಿಕೆಯಿದೆ. ಯುವಕರು ಕುಲಕಸುಬು ನಂಬಿದರೆ ಒಳ್ಳೆಯ ಜೀವನ ರೂಪಿಸಿಕೊಳ್ಳಬಹುದು. ಅದಕ್ಕೆ ನಾನೇ ಉದಾಹರಣೆ. ರಾಜಕೀಯದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ರಾಜಕೀಯಕ್ಕೆ ಬರುವ ಆಸಕ್ತಿಯೂ ನನಗೆ ಇಲ್ಲ. ಕಲಾವಿದನಾಗಿಯೇ ಮುಂದುವರಿಯುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: 2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್ ಸ್ವಾಗತಿಸಲಿದೆ: ಮ್ಯಾಕ್ರನ್

  • ಮಂಗಳವಾರ ವಿಜಯಪುರ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

    ಮಂಗಳವಾರ ವಿಜಯಪುರ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

    ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಕನಿಷ್ಠ 10 ಲಕ್ಷ ಮಂದಿ ಶ್ರೀಗಳ ದರ್ಶನಕ್ಕೆ ಬರುವ ನಿರೀಕ್ಷೆಯಿದ್ದು, ಜನವರಿ 3ರ ಮಧ್ಯಾಹ್ನ 3 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 5 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ದರ್ಶನಕ್ಕೆ ಬರುವವರಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನೂ ಮಾಡಲಾಗುತ್ತದೆ. ಇದನ್ನೂ ಓದಿ: ವಿಜಯಪುರ ಜ್ಞಾನಯೋಗಾಶ್ರಮ ಮಠದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

    ಕಳೆದ ನಾಲ್ಕು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:05ಕ್ಕೆ ಲಿಂಗೈಕ್ಯರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಅಗ್ರಸ್ಥಾನಕ್ಕೇರಲು ಕೈಜೋಡಿಸಿ: ಸುತ್ತೂರು ಶ್ರೀಗಳು

    ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಅಗ್ರಸ್ಥಾನಕ್ಕೇರಲು ಕೈಜೋಡಿಸಿ: ಸುತ್ತೂರು ಶ್ರೀಗಳು

    ಮೈಸೂರು: ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಮೊದಲ ಸ್ಥಾನ ಗಳಿಸಲು ಪ್ರತಿಯೊಬ್ಬ ನಾಗರಿಕರು ಕೈ ಜೋಡಿಸಬೇಕು ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ.

    ಸ್ವಚ್ಛ ಸರ್ವೇಕ್ಷಣ್-2020 ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಮೈಸೂರು ನಗರವನ್ನು ನಂಬರ್ ಒನ್ ಸ್ವಚ್ಛ ನಗರವನ್ನಾಗಿಸಲು ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಇಂದು ಸರ್ವಧರ್ಮ ಗುರುಗಳ ಸಭೆಯು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ನಡೆಯಿತು.

    ಈ ಸಭೆಯಲ್ಲಿ ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರೀಶ್ವರ ಸ್ವಾಮೀಜಿ, ಹೊಸ ಮಠದ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ ಸೇರಿದಂತೆ ಇತರ ಧರ್ಮಗುರುಗಳು ಭಾಗಿಯಾಗಿದ್ದರು. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಮೇಯರ್ ಪುಷ್ಪಲತಾ ಜಗನ್ನಾಥ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಮೈಸೂರು ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಸುತ್ತೂರು ಮಠದ ಶ್ರೀಗಳು, ಪ್ಲಾಸ್ಟಿಕ್ ಬಳಕೆ ಮೇಲಿನ ನಿರ್ಬಂಧವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಸುರಿಯುತ್ತಿರುವ ಪ್ರವೃತ್ತಿ ಬಿಡಬೇಕು. ಶಾಲಾ ಮಟ್ಟದಲ್ಲಿಯೂ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಸ್ವಚ್ಛ ಸರ್ವೇಕ್ಷಣೆಯಲ್ಲಿ ಸಾರ್ವಜನಿಕರ ಪಾತ್ರವೂ ಪ್ರಮುಖವಾಗಿದೆ ಎಂದು ತಿಳಿಸಿದರು.

    ಸ್ವಚ್ಛ ಸರ್ವೇಕ್ಷಣಾ-2019 ಪ್ರಶಸ್ತಿಯನ್ನು ಮಧ್ಯಪ್ರದೇಶದ ಇಂದೋರ್ ಪಡೆದಿತ್ತು. ಈ ಮೂಲಕ ದೇಶದ ಅತ್ಯಂತ ಸ್ವಚ್ಛ ನಗರಿ ಎಂಬ ಹಿರಿಮೆಯನ್ನು ಇಂದೋರ್ ಸತತ ಮೂರನೇ ವರ್ಷವೂ ಉಳಿಸಿಕೊಂಡಿತ್ತು. ಹಾಗೆಯೇ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‍ಗೆ ‘ಸ್ವಚ್ಛ ರಾಜಧಾನಿ’ ಪ್ರಶಸ್ತಿ ಸಂದಿತ್ತು. ಟಾಪ್ 10 ಸ್ವಚ್ಛ ನಗರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಛತ್ತೀಸ್‍ಗಢದ ಅಂಬಿಕಾಪುರಿ ಹಾಗೂ ಮೂರನೇ ಸ್ಥಾನವನ್ನು ಅರಮನೆ ನಗರಿ ಮೈಸೂರು ಇದ್ದವು.
    ಕೊಂಡಿದೆ.