Tag: ಶಿವರಾಮ್ ಹೆಬ್ಬಾರ್

  • 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ – ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ: ಶಿವರಾಮ್ ಹೆಬ್ಬಾರ್

    86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ – ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ: ಶಿವರಾಮ್ ಹೆಬ್ಬಾರ್

    ಹಾವೇರಿ: ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಚಾಲನೆ ಸಿಕ್ಕಿದೆ. ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು.

    ಬೆಳಗ್ಗೆ 7 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್‌ ಹೆಬ್ಬಾರ್ (Shivaram Hebbar) ಧ್ವಜಾರೋಹಣ ನೆರವೇರಿಸುವ ಮೂಲಕ ಸಾಹಿತ್ಯ ಉತ್ಸವಕ್ಕೆ ಚಾಲನೆ ನೀಡಿದರು. ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು. ಇದನ್ನೂ ಓದಿ: ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆ

    ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಶಿವರಾಮ್‌ ಹೆಬ್ಬಾರ್, ನಾವು ಬಹಳ ಸಂತೋಷದಿಂದ ಇವತ್ತಿನ ಕಾರ್ಯಕ್ರಮದ ಧ್ವಜಾರೋಹಣ ಮಾಡಿದ್ದೇವೆ. ನಿಗದಿ ಮಾಡಿದ ಏಳು ಗಂಟೆ ಸಮಯಕ್ಕೆ ಧ್ವಜಾರೋಹಣ ಮಾಡಿದ್ದೇವೆ. ಈ ಹಿಂದೆ ಯಾವತ್ತೂ ಆಗದ ರೀತಿಯ ಸಾಹಿತ್ಯ ಸಮ್ಮೇಳನ ಇದಾಗಲಿದೆ. ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ತಪ್ಪು ಸಂದೇಶ ಹೋಗಬಾರದು. ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ಅವರೆ ಮೇಳದಲ್ಲಿ ಕೇಕ್ ಈ ಬಾರಿಯ ಸ್ಪೆಷಲ್

    ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಸೇರಿದಂತೆ ಪ್ರತಿಯೊಬ್ಬರ ಭಾಷಣಕ್ಕೂ ಸಮಯ ನಿಗದಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಸಮಯ ನಿಗದಿ ಸಾಹಿತಿಗಳಿಗೆ ಹೊರತು ರಾಜಕಾರಣಿಗಳಿಗಲ್ಲ. ಸಾಹಿತಿಗಳು ನಿಗದಿ ಮಾಡಿದ ಸಮಯದಲ್ಲಿ ವಿಚಾರ ಮಂಡನೆ ಮಾಡಲಿ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಿಎಫ್‌ಐ ಎಂದಲ್ಲ, ದೇಶದ್ರೋಹಿ ಕೆಲಸ ಮಾಡುವ ಯಾರೇ ಆದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು: ಶಿವರಾಮ್ ಹೆಬ್ಬಾರ್

    ಪಿಎಫ್‌ಐ ಎಂದಲ್ಲ, ದೇಶದ್ರೋಹಿ ಕೆಲಸ ಮಾಡುವ ಯಾರೇ ಆದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು: ಶಿವರಾಮ್ ಹೆಬ್ಬಾರ್

    ಹಾವೇರಿ: ಪಿಎಫ್‌ಐ (PFI) ಸಂಘಟನೆ ಅಂತಲ್ಲ, ಯಾರು ದೇಶದ್ರೋಹಿ (Traitor) ಸಂಘಟನೆಗಳಲ್ಲಿ ಭಾಗಿಯಾಗ್ತಾರೆ, ಯಾರು ದೇಶದ ಗೌರವಕ್ಕೆ ತೊಂದರೆ ಕೊಡುತ್ತಾರೆ, ಅವರು ಯಾವುದೇ ಸಮಾಜ, ಜಾತಿ, ಧರ್ಮ ಆಗಿರಲಿ, ನಿರ್ದಾಕ್ಷಿಣ್ಯವಾಗಿ ಅವರನ್ನು ಬಂಧಿಸಲೇಬೇಕಾಗಿದೆ. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ (Shivaram Hebbar) ಹೇಳಿದರು.

    ಹಾವೇರಿಯಲ್ಲಿ (Haveri) ಮಾತನಾಡಿದ ಅವರು, ಕಾಂಗ್ರೆಸ್‌ನವರ (Congress) ಪೇ ಸಿಎಂ (PayCM) ಅಭಿಯಾನ ವಿರುದ್ಧ ಕಿಡಿ ಕಾರಿದರು. ಕಾಂಗ್ರೆಸ್‌ನವರಿಗೆ ಒಂದು ಕಡೆ ಜೋಡೋ ಯಾತ್ರೆ, ಮತ್ತೊಂದು ಕಡೆ ತೋಡೋ ಯಾತ್ರೆ ಶುರುವಾಗಿದೆ. ಕಾಂಗ್ರೆಸ್‌ನವರಿಗೆ ನರಕ ಉಂಟಾಗಿದೆ ಎಂದರು. ಇದನ್ನೂ ಓದಿ: ಬೊಮ್ಮಾಯಿ ಸಿಎಂ ಆದಾಗಿಂದ ಕಾಂಗ್ರೆಸ್‌ನವರು ಅಪಪ್ರಚಾರ ಮಾಡ್ತಿ‌ದ್ದಾರೆ: ಬಿ.ಸಿ.ಪಾಟೀಲ್

    ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪನವರ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ನಾವು ಬಹಳ ಗಟ್ಟಿಯಾಗಿ ಎದುರಿಸುತ್ತೇವೆ. 2023ರಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಪುನಃ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ತೋಡೋ ಯಾತ್ರೆ ಅಂದ್ರೆ ಕಾಂಗ್ರೆಸ್‌ನವರೇ ತೋಡಿಕೊಳ್ಳುತ್ತಿದ್ದಾರೆ. ರಾಜಸ್ಥಾನದಲ್ಲಿ ಏನಾಗ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಇನ್ನು ಸ್ವಲ್ಪ ದಿನ, ಮತ್ತೇನಾಗುತ್ತೆ ಎಂದು ಕಾದು ನೋಡಿ ಎಂದು ಶಿವರಾಮ್ ಹೆಬ್ಬಾರ್ ಹೇಳಿದರು. ಇದನ್ನೂ ಓದಿ: HALಗೆ ಈಗ ಮತ್ತೊಮ್ಮೆ ತನ್ನ ಸಾಮರ್ಥ್ಯ ತೋರಿಸುವ ಸಮಯ ಬಂದಿದೆ: ದ್ರೌಪದಿ ಮುರ್ಮು

    Live Tv
    [brid partner=56869869 player=32851 video=960834 autoplay=true]

  • ಶಿರಸಿ ಉತ್ಸವದಲ್ಲಿ ಕೆಂಡ ಹಾಯ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

    ಶಿರಸಿ ಉತ್ಸವದಲ್ಲಿ ಕೆಂಡ ಹಾಯ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕೆಂಡ ಹಾಯ್ದರು.

    ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಉತ್ಸವದ ವೇಳೆ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಕಟ್ಟಿಕೊಂಡವರು, ಈಡೇರಿದ ಮೇಲೆ ಕೆಂಡ ಹಾಯುವ ಪದ್ಧತಿ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ಪ್ರತಿ ವರ್ಷ ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿ ಭಕ್ತರು ಈ ಪದ್ಧತಿ ಅನುಸರಿಸುತ್ತಿದ್ದಾರೆ. ಆದರೆ ದೇವರ ದರ್ಶನಕ್ಕೆ ತೆರಳಿದ್ದ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ ಕೆಂಡ ಹಾಯ್ದಿದ್ದಾರೆ. ಇದನ್ನೂ ಓದಿ: PSI ಹುದ್ದೆ ಕೊಡಿಸುವುದಾಗಿ 21 ಲಕ್ಷ ವಂಚನೆ – ಆರೋಪಿ ಅರೆಸ್ಟ್

    shivaram hebbar

    ಶಿವರಾಮ್ ಹೆಬ್ಬಾರ್ ಕೂಡ ಹಿಂದೆ ಶ್ರೀ ವೀರಭದ್ರ ದೇವರಲ್ಲಿ ಹರಕೆ ಕಟ್ಟಿಕೊಂಡಿದ್ದು, ಅದು ನೆರವೇರಿರುವುದರಿಂದ ಅವರು ಸಹ ಕೆಂಡಹಾಯ್ದಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ. ಇದನ್ನೂ ಓದಿ: ಧ್ವನಿವರ್ಧಕ ನಿಯಮ ಉಲ್ಲಂಘನೆಯಾದ್ರೆ ಸಮಿತಿಯಲ್ಲಿರುವವರ ವಿರುದ್ಧ ಕ್ರಮ: ಆನಂದ್ ಸಿಂಗ್

  • ಹೆಣ ಬಿದ್ದ ಜಾಗದಲ್ಲಿ ಮತ್ತೊಬ್ಬ ಹೋಗಿ ಹೆಣ ಆಗಲು ಯಾರೂ ತಯಾರಿಲ್ಲ: ಶಿವರಾಮ್ ಹೆಬ್ಬಾರ್

    ಹೆಣ ಬಿದ್ದ ಜಾಗದಲ್ಲಿ ಮತ್ತೊಬ್ಬ ಹೋಗಿ ಹೆಣ ಆಗಲು ಯಾರೂ ತಯಾರಿಲ್ಲ: ಶಿವರಾಮ್ ಹೆಬ್ಬಾರ್

    ಧಾರವಾಡ: ಉಕ್ರೇನ್ ದೇಶದಲ್ಲಿ ರಷ್ಯಾ ನಡೆಸಿದ ದಾಳಿಯಿಂದಾಗಿ ಮೃತಪಟ್ಟಿರುವ ಹಾವೇರಿ ಜಿಲ್ಲೆಯ ನವೀನ್ ಶೇಖರಪ್ಪನ  ಶವವನ್ನು ತರಲು ಸರ್ಕಾರ ಎಲ್ಲ ರೀತಿಯಿಂದಲೂ ಪ್ರಯತ್ನ ಮಾಡುತ್ತಿದೆ. ಆದರೆ, ಹೆಣ ಬಿದ್ದ ಜಾಗಕ್ಕೆ ಹೋಗಿ ಮತ್ತೊಬ್ಬ ಹೆಣವಾಗಲು ಯಾರೂ ಸಿದ್ಧರಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಹೆಸರಿನಡಿ 42 ವಿಮಾನಗಳನ್ನು ಉಕ್ರೇನ್ ಪಕ್ಕದ ದೇಶಗಳಿಗೆ ಕಳುಹಿಸಿ, ಆ ಮೂಲಕ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗಿದೆ. ಹೀಗಾಗಿ ಉಕ್ರೇನ್‍ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಪಕ್ಕದ ದೇಶಗಳಿಗೆ ಬಂದು ಮುಟ್ಟಬೇಕಿದೆ. ಯುದ್ಧದ ತೀವ್ರತೆ ಉಕ್ರೇನ್‍ನಲ್ಲಿ ಹೆಚ್ಚಾಗಿರುವುದರಿಂದ ಅಲ್ಲಿ ವಿಮಾನಗಳು ಲ್ಯಾಂಡ್ ಆಗಲು ಸಾಧ್ಯವಿಲ್ಲ. ಆದರೂ ಭಾರತ ಸರ್ಕಾರದ ನಾಲ್ಕು ಜನ ಮಂತ್ರಿಗಳು ನಾಲ್ಕು ದಿಕ್ಕಿನಲ್ಲಿ ನಿಂತು ರಕ್ಷಣಾ ಕಾರ್ಯ ಪರಿಶೀಲಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ದುರದೃಷ್ಟವಶಾತ್ ನಮ್ಮ ನಾಡಿನ ನವೀನ್ ಈ ಯುದ್ಧದಲ್ಲಿ ಅಸುನೀಗಿದ್ದಾನೆ. ನಾನು ಹಾವೇರಿ ಜಿಲ್ಲೆಯ ಉಸ್ತುವಾರಿಯನ್ನು ಹೊಂದಿದ್ದೇನೆ. ನವೀನ್ ಮನೆಗೆ ಭೇಟಿ ನೀಡಿ ಬಂದಿದ್ದೇನೆ. ಆತನ ಶವ ತರಲು ಸರ್ವ ಪ್ರಯತ್ನ ನಡೆದಿದೆ. ನವೀನ್‍ನ್ನು ಜೀವಂತವಾಗಿ ಮನೆಗೆ ಕರೆ ತರಲು ಆಗಲಿಲ್ಲ. ಕಡೆ ಪಕ್ಷ ಆತನ ಪೋಷಕರಿಗೆ ಕೊನೆಯ ಬಾರಿಗೆ ನವೀನ್‍ನ ಮುಖವನ್ನಾದರೂ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯುದ್ಧ ಮನುಕುಲದ ಶತ್ರು, ಸದ್ಯ ನಡೆಯುತ್ತಿರುವುದು ದುರದೃಷ್ಟಕರ ಸಂಗತಿ: ಬಸವಾನಂದ ಶ್ರೀ

  • ಎಚ್‍ಡಿಕೆ, ಸಿದ್ದರಾಮಯ್ಯನವರಿಗೆ ಅರಿವಿಲ್ಲ ರಾಜಕೀಯವಾಗಿ ಹತಾಶರಾಗಿದ್ದಾರೆ: ಹೆಬ್ಬಾರ್

    ಎಚ್‍ಡಿಕೆ, ಸಿದ್ದರಾಮಯ್ಯನವರಿಗೆ ಅರಿವಿಲ್ಲ ರಾಜಕೀಯವಾಗಿ ಹತಾಶರಾಗಿದ್ದಾರೆ: ಹೆಬ್ಬಾರ್

    ಕಾರವಾರ: ರಾಜಕೀಯವಾಗಿ ಹತಾಶರಾಗಿರುವ ಸಿದ್ದರಾಮಯ್ಯ ಹಾಗೂ ಎಚ್.ಡಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ಮತ್ತು ಪ್ರಧಾನಿ ಮೋದಿ ಬಗ್ಗೆ ಟೀಕಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕುಟುಕಿದ್ದಾರೆ.

    ಮನುವಿಕಾಸ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ನಗರದ ರಾಘವೇಂದ್ರ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಕೆರೆ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಗೆ ತಾವು ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ. ಅವರಿಬ್ಬರೂ ಪರಸ್ಪರ ಟೀಕಿಸುತ್ತ ಕಾಲ ಕಳೆಯುತ್ತಿದ್ದಾರೆ. ಪದೇ ಪದೇ ಸಂಘ ಪರಿವಾರದ ಮೇಲೆ ಹರಿಹಾಯುತ್ತಾರೆ. ಇದು ಅವರಿಬ್ಬರೂ ಗೊಂದಲ್ಲಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ಗುಡುಗಿದರು. ಇದನ್ನೂ ಓದಿ: ಸಿದ್ದರಾಮಯ್ಯನವರಿಗೆ ಮತಿಭ್ರಮಣೆ ಆಗಿದೆ: ತೇಲ್ಕೂರ್

    ವಿಜಯ ದಶಮಿ ಮುಗಿಯಲಿ ಎಂದು ಕಾಯುತ್ತಿದ್ದೇವು. ಇಂದಿನಿಂದ ಎಲ್ಲಾ ಸಚಿವರು. ಹಾನಗಲ್ ಕ್ಷೇತ್ರದಲ್ಲಿ ಬೀಡು ಬಿಡಲಿದ್ದು, ಅ.28ರ ವರೆಗೆ ನಿರಂತರ ಪ್ರಚಾರ ನಡೆಸಲಿದ್ದೇವೆ ಎಂದರು. ಕೃಷಿಕರನ್ನು ಮತ್ತು ಸೈನಿಕರನ್ನು ನಾವು ಗೌರವಿಸದೇ ಇದ್ದರೆ ನಮಗೆ ಬದುಕಲು ಸಾಧ್ಯವೇ ಇಲ್ಲ. ರೈತರು ಕೃಷಿಯಿಂದ ವಿಮುಖವಾದರೆ ದೇಶ ಸಫಲತೆ ಕಾಣಲು ಸಾಧ್ಯವಿಲ್ಲ. ಆದ್ದರಿಂದ ರೈತರನ್ನು ಗೌರವಿಸುವ ಅವರಿಗೆ ಗೌರವ ಕೊಡುವ ಕಾರ್ಯವಾಗಬೇಕು. ಸರ್ಕಾರ ಸಾಕಷ್ಟು ನೀರಿನ ಯೋಜನೆಗಳ ಬಗ್ಗೆ ಕಾರ್ಯ ನಿರ್ವಹಿಸುತ್ತಿದ್ದು, ಮನುವಿಕಾಸದಂತ ಸಂಸ್ಥೆ ಕೆರೆ ಹೂಳೆತ್ತುವ ಮೂಲಕ ಪೂರಕ ಕಾರ್ಯ ನಿರ್ವಹಿಸುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಭಾರತ ದೇಶದ ಹಿಂದುತ್ವದ ಸಂಕೇತ ಕೇಸರಿ – ಸಿದ್ದರಾಮಯ್ಯಗೆ ಮುನಿರತ್ನ ಟಾಂಗ್

    ಕಾರ್ಯಕ್ರದಲ್ಲಿ ಮನು ವಿಕಾಸ ಸಂಸ್ಥೆಯ ಅಧ್ಯಕ್ಷರಾದ ಗಣಪತಿ ಭಟ್, ಡಿವೈಎಸ್‍ಪಿ ರವಿ ನಾಯ್ಕ್, ಜಿಲ್ಲೆಯ ಹಾಗೂ ಹಾವೇರಿ ಜಿಲ್ಲೆಯ ಪ್ರಗತಿಪರ ರೈತರು ಉಪಸ್ಥಿತರಿದ್ದರು.

  • ಸಿಎಂ ಆಗೋ ಹುಮ್ಮಸ್ಸಲ್ಲಿ ಸಿದ್ದರಾಮಯ್ಯ ಮನಸ್ಸಿಗೆ ಬಂದಂತೆ ಮಾತಾಡ್ತಿದ್ದಾರೆ: ಶಿವರಾಮ್ ಹೆಬ್ಬಾರ್

    ಸಿಎಂ ಆಗೋ ಹುಮ್ಮಸ್ಸಲ್ಲಿ ಸಿದ್ದರಾಮಯ್ಯ ಮನಸ್ಸಿಗೆ ಬಂದಂತೆ ಮಾತಾಡ್ತಿದ್ದಾರೆ: ಶಿವರಾಮ್ ಹೆಬ್ಬಾರ್

    ಕಾರವಾರ: ಬಿಜೆಪಿಯವರು ಹಿಟ್ಲರ್ ಸಂಸ್ಕೃತಿಯವರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವರಾಮ್ ಹೆಬ್ಬಾರ್ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂಬ ಹುಮ್ಮಸ್ಸಿಗೆ ಡಿಕೆ ಶಿವಕುಮಾರ್ ಅಡ್ಡಿಯಾದ ಕಾರಣ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

    ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಏನೂ ಆಗಲ್ಲ. ಅವರು ವಿಧಾನಸಭೆಯಲ್ಲೂ ಇದನ್ನೇ ಹೇಳಿದ್ದರು. ಅದಕ್ಕೆ ಮುಖ್ಯಮಂತ್ರಿಯವರು ಅಲ್ಲಿ ಸರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೂ ಅವರಿಗೆ ಸಮಾಧಾನವಾದಂತೆ ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಲೇಹ್‍ನಿಂದ ಮನಾಲಿಗೆ ಸೈಕ್ಲಿಂಗ್ ಮಾಡಿ ಭಾರತೀಯ ಸೇನಾಧಿಕಾರಿ ಗಿನ್ನೆಸ್ ದಾಖಲೆ

    ಭಾರತ್ ಬಂದ್ ಕುರಿತು ಪ್ರತಿಕ್ರಿಯಿಸಿದ ಅವರು, ಭಾರತ್ ಬಂದ್ ಕರ್ನಾಟಕದಲ್ಲಿ ಯಶಸ್ವಿಯಾಗಿಲ್ಲ. ಅನೇಕ ಸ್ವಯಂಘೋಷಿತ ನಾಯಕರು ಭಾರತ್ ಬಂದ್‍ಗೆ ಕರೆಕೊಟ್ಟು ಸಂಪೂರ್ಣ ವಿಫಲತೆ ಕಂಡಿದ್ದಾರೆ. ಭಾರತ್ ಬಂದ್‍ನಿಂದ ಯಾವ ಸಾಧನೆಯೂ ಆಗಿಲ್ಲ. ಕಳೆದ ಒಂದು ವರ್ಷದಿಂದ ಭಾರತ ಬಂದಾಗಿಯೇ ಇದೆ. ಮತ್ತೆ ಭಾರತ್ ಬಂದ್ ಮಾಡುವುದರಿಂದ ಶಿಕ್ಷಣ, ವ್ಯಾಪಾರ – ಉದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ರಾಜ್ಯದ ಹಾಗೂ ದೇಶದ ಜನ ಈ ಭಾರತ್ ಬಂದ್ ಅನ್ನು ಒಪ್ಪಿಕೊಂಡಿಲ್ಲ. ಪ್ರಬಲವಾಗಿ ವಿರೋಧಿಸಿದ್ದಾರೆ ಎಂದು ನುಡಿದಿದ್ದಾರೆ.

    ಕೆಲವರು ನೈತಿಕವಾಗಿ ಬೆಂಬಲವನ್ನಷ್ಟೇ ನೀಡಿದ್ದಾರೆ. ಯಾವ ಉದ್ದೇಶಕ್ಕೆ ಭಾರತ್ ಬಂದ್ ಮಾಡಿದ್ದಾರೋ ಈ ಬಗ್ಗೆ ಸರ್ಕಾರ ವಿಧಾನಸಭೆಯ ಒಳಗೆ ಹಾಗೂ ಹೊರಗೆ ತನ್ನ ಪ್ರತಿಕ್ರಿಯೆ ನೀಡಿದೆ. ಒಟ್ಟಾರೆ ದೇಶದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ನಿಶ್ಚಿತ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ

  • ಬೇಡದ ಖಾತೆ ಪಡೆದು ಉತ್ತಮ ಕೆಲಸ ಮಾಡುತ್ತಿದ್ದೇವೆ: ಎಸ್ ಟಿ ಸೋಮಶೇಖರ್

    ಬೇಡದ ಖಾತೆ ಪಡೆದು ಉತ್ತಮ ಕೆಲಸ ಮಾಡುತ್ತಿದ್ದೇವೆ: ಎಸ್ ಟಿ ಸೋಮಶೇಖರ್

    ಕಾರವಾರ: ನಾವೆಲ್ಲಾ ಬೇಡದ ಖಾತೆ ಪಡೆದು ಉತ್ತಮ ಕೆಲಸ ಮಾಡುತ್ತಿದ್ದೇವೆ. ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು ಮುಖ್ಯಮಂತ್ರಿ ಮುಂದೆ ಉನ್ನತ ಖಾತೆ ಕೇಳುತ್ತಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

    ಕೆಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರ ಎದುರು ನಾವು ಮಣ್ಣಿನ ಮಕ್ಕಳು ಎನ್ನುತ್ತಾರೆ. ಮುಖ್ಯಮಂತ್ರಿ ಎದುರು ಪಿಡಬ್ಲ್ಯೂಡಿ, ನೀರಾವರಿ, ಗೃಹ ಖಾತೆಯ ಬೇಡಿಕೆ ಇಡುತ್ತಾರೆ. ಸಹಕಾರ, ಕಾರ್ಮಿಕ, ಕೃಷಿ ಖಾತೆ ಯಾರೂ ಬೇಡಿಕೆ ಇಡುವುದಿಲ್ಲ. ನಾವೆಲ್ಲ ಬೇಡದ ಖಾತೆಯನ್ನು ಪಡೆದು ಒಳ್ಳೆಯ ಕೆಲಸಮಾಡುತ್ತಿದ್ದೇವೆ ಎಂದರು.ಇದನ್ನೂ ಓದಿ:  ಪಾಲಿಕೆ ಚುನಾವಣೆ- ಒಂದೇ ಕುಟುಂಬದ ಮೂವರ ಗೆಲುವು

    ಸಚಿವ ಸ್ಥಾನ ನೀಡದ್ದಕ್ಕೆ ಬೇಸರಗೊಂಡಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಕೆಡವಲು ಸಹಕಾರ ಕೋರಿದ್ದರು. ನಾನು ಭೈರತಿ ಸೇರಿ ಎಲ್ಲರೂ ಅವರಿಗೆ ಕೈಜೋಡಿಸಿದೆವು ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಸಮ್ಮುಖದಲ್ಲೇ ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಜಾತ್ಯಾತೀತ ನಾಯಕನಲ್ಲ, ಅವನೊಬ್ಬ ಜಾತಿ ರಾಜಕಾರಣಿ: ಶ್ರೀರಾಮುಲು

    ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಜನರಿಗೆ ಉತ್ತಮ ಸಂದೇಶ ಹೋಗಿದೆ. ಬೊಮ್ಮಾಯಿ ನೇತೃತ್ವದಲ್ಲಿ ಒಂದು ಮುಕ್ಕಾಲು ವರ್ಷ ರಾಜ್ಯದ ಜನರು ಆರಾಮವಾಗಿರಬಹುದು. ಒಳ್ಳೊಳ್ಳೆಯ ಕಾರ್ಯಕ್ರಮ ಮಾಡುತ್ತಾರೆ, ತಾಳ್ಮೆಯಿಂದ ಇರುತ್ತಾರೆ ಎಂಬ ಸಂದೇಶ ಜನರಿಗೆ ಹೋಗಿದೆ. ಬಿಜೆಪಿ ಪಕ್ಷ ಹಾಗೂ ಮುಖಂಡರ ಮೇಲಿನ ವಿಶ್ವಾಸದಿಂದ ಜನರು ಮತ ಹಾಕಿದ್ದಾರೆ. ಅದನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಬೆಲೆ ಏರಿಕೆ ವಿಚಾರ ಸಂಬಂಧಿಸಿ ಸಿಎಂ 7-8ರಂದು ದೆಹಲಿಗೆ ತೆರಳುತ್ತಿದ್ದಾರೆ. ಪ್ರಧಾನಿ ಹಾಗೂ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ.

  • ಸರ್ವಋತು ರಸ್ತೆ ನಿರ್ಮಾಣಕ್ಕೆ ಯತ್ನ: ಸಚಿವ ಸಿ.ಸಿ.ಪಾಟೀಲ್

    ಸರ್ವಋತು ರಸ್ತೆ ನಿರ್ಮಾಣಕ್ಕೆ ಯತ್ನ: ಸಚಿವ ಸಿ.ಸಿ.ಪಾಟೀಲ್

    – ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ

    ಕಾರವಾರ: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್ನಿರ್ಮಾಣಕ್ಕೆ ಮತ್ತು ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲರು ಹೇಳಿದರು.

    ಇಂದು ಸೋಮವಾರ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಅವರು ಅತಿವೃಷ್ಟಿಯಿಂದ ಭೂ ಕುಸಿತವಾದ ಪ್ರದೇಶಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು.

    ನಂತರ ಸ್ಥಳೀಯ ಗ್ರಾಮಸ್ಥರ ಮನವಿ ಸ್ವೀಕರಿಸಿದ ಅವರು, ಬೆಂಗಳೂರಿನಿಂದ ನಿರ್ಣಯ ತೆಗೆದುಕೊಳ್ಳುದಕ್ಕೂ ಹಾಗೂ ಸ್ಥಳ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಈಗಾಗಲೇ ಮುಖ್ಯಮಂತ್ರಿಯವರು ಜಿಲ್ಲೆಯ ನೆರೆ ಪೀಡಿತ ಹಾಗೂ ಭೂ ಕುಸಿತ ಸ್ಥಳಗಳನ್ನು ಪರಿಶೀಲಿಸಿ ಜಿಲ್ಲೆಗೆ 210 ಕೋಟಿ ರೂ. ಅನುದಾನ ನೀಡಿದ್ದಾರೆ. ಸಚಿವ ಶಿವರಾಮ್ ಹೆಬ್ಬಾರ್ ಅವರ ನೇತೃತ್ವದಲ್ಲಿ ರಸ್ತೆ ಕುಸಿತದ ತೆರವು ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಕಾಮಗಾರಿ ಭರದಿಂದ ಸಾಗುತಿದ್ದು, ಪಿ.ಡಬ್ಲ್ಯೂ.ಡಿ.ಇಲಾಖೆಯಿಂದ ಹಾನಿಯಾದ ಪ್ರದೇಶದಲ್ಲಿ ಸರ್ವಋತು ರಸ್ತೆ ನಿರ್ಮಾಣ ಮಾಡಲಾಗುವುದು ಹಾಗೂ ಹೆಚ್ಚಿನ ಅನುದಾನಕ್ಕಾಗಿ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

    ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ, ಜನರು ಭಯ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಮೂಲಸೌಕರ್ಯ ಹಾಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಸಚಿವರ ಸಹಕಾರದೊಂದಿಗೆ ಜಿಲ್ಲೆಯ ಲೋಕೋಪಯೋಗಿ ಅಧಿಕಾರಿಗಳು ಮತ್ತು ಅರಣ್ಯ ಅಧಿಕಾರಿಗಳು ರಸ್ತೆ ತೆರವು ಕಾರ್ಯದಲ್ಲಿ ಸಾಕಷ್ಟು ಶ್ರಮಿಸಿದ್ದು ಅವರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಕಾರ್ಮಿಕ ಸಚಿವರ ಕ್ಷೇತ್ರದಲ್ಲಿ ಕಾರ್ಮಿಕರಿಗಿಲ್ಲ ಒಂದು ವರ್ಷದಿಂದ ಸಂಬಳ

    ಸಚಿವರು ಭೇಟಿ ನೀಡಿದ ಪ್ರದೇಶಗಳಲ್ಲಿ ಶಿರಸಿಯ ಸಹಾಯಕ ಆಯುಕ್ತರಾದ ಆಕೃತಿ ಬನ್ಸಾಲ್, ಯಲ್ಲಾಪುರ ಮತ್ತು ಶಿರಸಿ ತಾಲೂಕಿನ ತಹಶೀಲ್ದಾರ್‍ರು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದು ಅಗತ್ಯ ಮಾಹಿತಿ ನೀಡಿದರು. ಇದನ್ನೂ ಓದಿ: ಭಾರತದಲ್ಲಿರೋದು ಬ್ರಿಟಿಷರ ಗುಲಾಮಗಿರಿ ಎಜುಕೇಶನ್ ಸಿಸ್ಟಮ್: ರಿಷಬ್ ಶೆಟ್ಟಿ ಆಕ್ರೋಶ

  • ಕಾರ್ಮಿಕ ಸಚಿವರ ಕ್ಷೇತ್ರದಲ್ಲಿ ಕಾರ್ಮಿಕರಿಗಿಲ್ಲ ಒಂದು ವರ್ಷದಿಂದ ಸಂಬಳ

    ಕಾರ್ಮಿಕ ಸಚಿವರ ಕ್ಷೇತ್ರದಲ್ಲಿ ಕಾರ್ಮಿಕರಿಗಿಲ್ಲ ಒಂದು ವರ್ಷದಿಂದ ಸಂಬಳ

    – ವೇತನವಿಲ್ಲದೇ ದುಡಿಯುತ್ತಿರುವ ಗಾಂಧಿ ಮ್ಯೂಸಿಯಮ್ ಸಿಬ್ಬಂದಿ
    – ಹಾಳು ಕೊಂಪೆಯಾದ ಗಾಂಧಿ ಸ್ವಾತಂತ್ರ್ಯ ಸ್ಮಾರಕ ಭವನ

    ಕಾರವಾರ: ಟಾಯ್ಲೆಟ್ ನಲ್ಲಿ ಬಿದ್ದ ಪುಸ್ತಕಗಳು, ಪಾಳು ಬಿದ್ದ ಗಾಂಧಿ ವಸ್ತುಸಂಗ್ರಹಾಲಯದ ಕಟ್ಟಡ, ಮೂಲೆ ಸೇರಿದ ಗಾಂಧಿ ಪ್ರತಿಮೆ. ಒಂದು ವರ್ಷದಿಂದ ಸಂಬಳ ಇಲ್ಲದೇ ದುಡಿಯುವ ಕೆಲಸಗಾರರು. ಇಂತದ್ದೊಂದು ಸ್ಥಿತಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕ್ಷೇತ್ರದಲ್ಲಿದೆ. ಅಲ್ಲಿನ ಸ್ಥಿತಿ ನೋಡಿದರೆ ಎಂತವರೂ ತಲೆತಗ್ಗಿಸುವಂತಿದೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲ ನಗರದ ಹೃದಯ ಭಾಗದಲ್ಲಿರುವ ಗಾಂಧಿ ಸ್ವತಂತ್ರ್ಯ ಸಂಗ್ರಾಮ ಸ್ಮಾರಕ ಭವನ ಹಾಗೂ ವಸ್ತು ಸಂಗ್ರಹಾಲಯ ಇದೀಗ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ ಹಾಳು ಕೊಂಪೆಯಾಗಿ ಮಾರ್ಪಟ್ಟಿದೆ.

    ಹೀಗಿದೆ ಅಲ್ಲಿನ ಸ್ಥಿತಿ
    ಎಲ್ಲಿ ನೋಡಿದರಲ್ಲಿ ಕಸದ ರಾಶಿ ,ಮುರಿದು ಬಿದ್ದ ಕಿಟಕಿ, ಮೂಲೆ ಸೇರಿದ ಗಾಂಧಿ ಪ್ರತಿಮೆ, ಟಾಯ್ಲೆಟ್ ನಲ್ಲಿ ಸಂಗ್ರಹಿಸಿಟ್ಟ ಪುಸ್ತಕ. ವಿದ್ಯುತ್ ಇಲ್ಲದ ಬಲ್ಪುಗಳು, ಮುರಿದ ಫ್ಯಾನ್ ಗಳು ಹೀಗೆ ಎದುರು ನೋಡುತ್ತಿದ್ದಂತೆ ಹಳೆಯ ಸಿನಿಮಾದಲ್ಲಿ ಬರುವ ಭೂತ ಬಂಗಲೆಯಂತೆ ಭಾಸವಾಗುತ್ತದೆ.

    2017ರಲ್ಲಿ ಕೋಟಿ ಮೊತ್ತದ ಅನುದಾನದಲ್ಲಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಅಂಕೋಲದಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದ ನೆನಪಿಗಾಗಿ ಸ್ಮಾರಕ ಭವನ ಹಾಗೂ ಗಾಂಧಿಜೀ ವಸ್ತು ಸಂಗ್ರಾಲಯವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಜಿಲ್ಲೆಯಲ್ಲೇ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸ್ಮಾರಕ ಭವನವನ್ನು ಲೋಕಾರ್ಪಣೆ ಮಾಡಿದ್ದರು.

    ಇದನ್ನು ನೋಡಿಕೊಳ್ಳಲು ಕಂದಾಯ ಇಲಾಖೆಯಿಂದ ಇಬ್ಬರು ಹಾಗೂ ಪುರಸಭೆ ಯಿಂದ ಓರ್ವ ನೌಕರನನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಯಿತು. ಕಳೆದ ಒಂದು ವರ್ಷದ ವರೆಗೆ ಚೆನ್ನಾಗಿಯೇ ಇದ್ದ ಈ ಭವನ ಇದೀಗ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷದಿಂದ ಹಾಳು ಕೊಂಪೆಯಾಗಿದೆ.

    ವಸ್ತು ಸಂಹ್ರಹಾಲಯ ಹಾಗೂ ಗ್ರಂಥಾಲಯದಲ್ಲಿ ಇರುವ ವಸ್ತುಗಳನ್ನು ಇರಿಸಲು ವ್ಯವಸ್ತೆ ಇಲ್ಲದೇ ಬೇಕಾಬಿಟ್ಟಿ ಇಡಲಾಗಿದೆ. ಓದುಗರ ಕೈಯಲ್ಲಿ ಇರಬೇಕಾದ ಪುಸ್ತಕಗಳು ಟಾಯ್ಲೆಟ್ ಸೇರಿದೆ. ಇನ್ನು ವಿದ್ಯಾರ್ಥಿಗಳ ಅಧ್ಯಯನಕ್ಕೆ ನಿರ್ಮಿಸಿದ ಕಟ್ಟಡ ಹೊಸದಾಗಿದ್ದರೂ ಯಾರೂ ಒಳಗೆ ಹೋಗದಷ್ಟು ಕೆಟ್ಟದಾಗಿದ್ದು ವಿದ್ಯುತ್ ಸಂಪರ್ಕ ಸಹ ಕಡಿತವಾಗಿದ್ದು ಇಲಿ ಹೆಗ್ಗಣದ ಗೂಡಾಗಿದೆ. ಇದನ್ನೂ ಓದಿ: ಮೈಸೂರು ಕೇಸಲ್ಲಿ ಪೊಲೀಸರ ಪಾಲಿಗೆ ಬೆಳಕಾಗಿದ್ದೇ ಬಸ್ ಟಿಕೆಟ್ ಕೊಟ್ಟ ಸುಳಿವು, ಆ ಮೊಬೈಲ್ ನಂಬರ್!

    ಇನ್ನು ಇಲ್ಲಿನ ಗುತ್ತಿಗೆ ಆಧಾರದಲ್ಲಿ ನಿಯೋಜನೆ ಗೊಂಡ ಲೈಬ್ರರಿಯನ್ ಗೆ ಐದು ಸಾವಿರ ಕನಿಷ್ಟ ಕೂಲಿ ಹಾಗೂ ಇಲ್ಲಿನ ಕೆಲಸಗಾರನಿಗೆ 2500 ರೂ.ಗಳ ಕನಿಷ್ಟ ವೇತನ ನಿಗದಿ ಮಾಡಿದ್ದು ಕಾರ್ಮಿಕ ನಿಯಮಗಳ ಪ್ರಕಾರ ಇವರಿಗೆ ಸಿಗಬೇಕಾದ ಯಾವ ಸೌಲಭ್ಯವೂ ಈವರೆಗೂ ದೊರೆತಿಲ್ಲ. ಕಳೆದ ಒಂದು ವರ್ಷದಿಂದ ಇಲ್ಲಿನ ಇಬ್ಬರು ನೌಕರರಿಗೆ ಸಂಬಳ ಸಹ ಸಿಗದೇ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

    ಕೋಟಿಗಟ್ಟಲೇ ಗಾಂಧೀಜಿ ಹೆಸರಲ್ಲಿ ಸ್ವಾತಂತ್ರ್ಯ ಚಳುವಳಿಗಾರರ ನೆನಪಿಗೆ ನಿರ್ಮಿಸಿದ ಈ ಭವನ ಈಗ ಹಾಳು ಕೊಂಪೆಯಾಗಿದೆ. ಅಧ್ಯಯನಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವ ಪುಸ್ತಕಗಳು ಸಿಗದಂತ ಸ್ಥಿತಿ ಇದೆ. ಪ್ರತಿ ದಿನ ಗ್ರಂಥಾಲಯಕ್ಕೆ ಬರುವವರಿಗೆ ಮೂಲ ಸೌಕರ್ಯ ಸಹ ಇಲ್ಲ. ಇದನ್ನೂ ಓದಿ: ಮೈಸೂರು ರೇಪ್ ಪ್ರಕರಣ ಬೆನ್ನತ್ತಿದ ಆ ಸೂಪರ್ ಕಾಪ್ಸ್ ಇವರೇ ನೋಡಿ!

    ಇಲ್ಲಿನ ನೌಕರರು ಕೊರೊನಾ ಸಂದರ್ಭದಲ್ಲಿ ಸಹ ಕರ್ತವ್ಯ ನಿರ್ವಹಿಸಿದ್ದರೂ ಒಂದು ವರ್ಷದಿಂದ ಸಂಬಳ ಸಹ ನೀಡಿಲ್ಲ. ಇನ್ನು ಜನಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ. ಪುಸ್ತಕಗಳನ್ನು ಓದಲು ಬರುವ ಜನರು ಪುಸ್ತಕಗಳು ಸಿಗದೇ ಮರಳಿ ಹೋಗುವಂತಾಗಿದೆ. ಹೀಗಿರುವಾಗ ಅಧಿಕಾರಿಗಳು ಮಾತ್ರ ಎಲ್ಲಾ ಸರಿಮಾಡುತ್ತೇವೆ ಎನ್ನುವ ಭರವಸೆಗೆ ಸೀಮಿತವಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೊಂಚ ಇಳಿಕೆಯಾದ ಕೊರೊನಾ – ಇಂದು 1,229 ಹೊಸ ಪ್ರಕರಣ

    ಉತ್ತರ ಕನ್ನಡ ಜಿಲ್ಲೆಯಲ್ಲೇ ಅಂಕೋಲ ತಾಲೂಕಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಚಳುವಳಿ ತೀವ್ರಗೊಂಡಿತ್ತು. ಹಲವರು ಬ್ರಿಟೀಷರ ಚಡಿಏಟು ತಿಂದು ಪ್ರಾಣವನ್ನು ಕಳೆದುಕೊಂಡಿದ್ದರು. ಕರ ಅಸಹಕಾರ ಚಳುವಳಿಯಿಂದ ಹಿಡಿದು ಉಪ್ಪಿನ ಸತ್ಯಾಗ್ರಹದವರೆಗೂ ಇಲ್ಲಿನ ಜನರು ಗಾಂಧೀಜಿಯವರ ಆದರ್ಶದೊಂದಿಗೆ ಜೊತೆಯಾಗಿದ್ದರು. ಅವರ ಹೋರಾಟದ ಫಲ ಇಂದು ನಾವು ಅನುಭವಿಸುತಿದ್ದೇವೆ. ಇಂತವರಿಗೆ ಗೌರವ ಸಲ್ಲಿಸುವ ನೆಪದಲ್ಲಿ ಇದೀಗ ಗಾಂಧೀಜಿಯವರ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಡೆದುಕೊಳ್ಳುವ ರೀತಿ ಮಾತ್ರ ಎಂತವರಲ್ಲೂ ಹೇಸಿಗೆ ಹುಟ್ಟಿಸುತ್ತದೆ. ಇನ್ನಾದರೂ ಇಲ್ಲಿನ ವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಇದರ ಸೌಲಭ್ಯ ದೊರಕುವಂತಾಗಲಿ ಎಂಬುದೇ ನಮ್ಮ ಆಶಯವಾಗಿದೆ. ಇದನ್ನೂ ಓದಿ: ಸಚಿವೆಯಾದರೂ ಹೆಣ್ಣು ಹೆಣ್ಣೇ ಅಲ್ವಾ? ಅವರ ಮನೆಯಲ್ಲೇ ಹಾಗಾದ್ರೆ?: ಹೆಚ್.ಎಂ.ರೇವಣ್ಣ

  • ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ:  ಹೆಬ್ಬಾರ್

    ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ: ಹೆಬ್ಬಾರ್

    ಬೆಂಗಳೂರು: ಕಳೆದ ಮೂರು ನಾಲ್ಕು ದಿನದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ನದಿ ಹಳ್ಳಕೊಳ್ಳಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಇಡೀ ಜಿಲ್ಲೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಕದರ ಮತ್ತು ಕೊಡಸಳ್ಳಿಯ ಎರಡು ಡ್ಯಾಂ ನಿಂದ 2500 ಲಕ್ಷಕ್ಕೂ ಅಧಿಕ ನೀರನ್ನ ಹೊರ ಬಿಡಲಾಗುತ್ತಿದೆ. ಇದರಿಂದ ನದಿ ಪಾತ್ರದ 5 ಗ್ರಾಮಗಳನ್ನ ಶಿಫ್ಟ್ ಮಾಡಿಸಲಾಗಿದೆ. ಅಂಕೋಲಾ ತಾಲೂಕಿನಲ್ಲಿ ಉಂಟಾಗಿರೋ ಪ್ರವಾಹದಿಂದ ಇಬ್ಬರು ತಪ್ಪಿಸಿಕೊಂಡಿದ್ದಾರೆ. ಅವರ ಹುಡುಕಾಟದ ಕಾರ್ಯವನ್ನ ಸಹ ಈಗಾಗಲೇ ಶುರುಮಾಡಲಾಗಿದೆ. ಪ್ರವಾಹದಲ್ಲಿ ಸಿಲುಕಿದ 6 ಜನ ಪ್ರವಾಸಿಗರನ್ನ ರಕ್ಷಣೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ನಟೋರಿಯಸ್ ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ

    ಹೋಟೆಲ್ ನವಮಿಯಲ್ಲಿ 11 ಜನ ಸಿಲುಕಿದ್ದಾರೆ. ಹೋಟೆಲ್ ನಲಮಹಡಿ ಸಂಪೂರ್ಣ ಜಲಾವೃತವಾಗಿದ್ದು, 11 ಜನ ಹೋಟೆಲ್ ಮೇಲ್ಭಾಗದಲ್ಲಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಏರ್ ಲಿಫ್ಟ್ ಮಾಡಿಸುವಂತೆ ಸಹ ಸೂಚನೆ ನೀಡಲಾಗಿದೆ. ಎರಡು ದಿನ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿರೀಕ್ಷೆಗೂ ಮೀರಿದ ಮಳೆಯಾಗ್ತಿರುವುದರಿಂದ ಜಿಲ್ಲೆಯ ಜನರ ಜೀವನ ಅಸ್ತವ್ಯಸ್ತವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಟೀ ಶರ್ಟ್, ಜೀನ್ಸ್ ಪ್ಯಾಂಟ್ ತೊಟ್ಟಳೆಂದು ಹುಡುಗಿಯ ಕೊಲೆ ಮಾಡಿದ್ರು!

    ನಾನು ನಾಳೆಯಿಂದ ಜಿಲ್ಲಾ ಪ್ರವಾಸ ಕೈಗೊಳ್ಳುತ್ತೇನೆ, ಎಲ್ಲಾ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮಳೆಯಿಂದಾಗುವ ಅನಾಹುತಗಳನ್ನ ತಡಯುವ ಮತ್ತು ಜನರ ಸುರಕ್ಷಿತೆಗಳ ಬಗ್ಗೆ ನಿಗಾ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಪಬ್ಲಿಕ್ ಟಿವಿಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ.