Tag: ಶಿವಾಜಿ ಕೃಷ್ಣಮೂರ್ತಿ

  • ನಟಿ ಖುಷ್ಬೂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- ಡಿಎಂಕೆ ನಾಯಕ ಅರೆಸ್ಟ್, ಪಕ್ಷದಿಂದ ಉಚ್ಛಾಟನೆ

    ನಟಿ ಖುಷ್ಬೂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- ಡಿಎಂಕೆ ನಾಯಕ ಅರೆಸ್ಟ್, ಪಕ್ಷದಿಂದ ಉಚ್ಛಾಟನೆ

    ಚೆನ್ನೈ: ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ (Khushbu Sundar) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಡಿಎಂಕೆ (DMK) ನಾಯಕ ಶಿವಾಜಿ ಕೃಷ್ಣಮೂರ್ತಿ (Sivaji Krishnamurthy) ಯನ್ನು ಭಾನುವಾರ ಚೆನ್ನೈ ಪೊಲೀಸರು (Chennai Police) ಬಂಧಿಸಿದ್ದಾರೆ. ಅಲ್ಲದೆ ಪಕ್ಷದಿಂದಲೂ ಉಚ್ಛಾಟನೆ ಮಾಡಲಾಗಿದೆ.

    ತಮ್ಮ ವಿರುದ್ಧ ಕೃಷ್ಣಮೂರ್ತಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವೀಡಿಯೋವನ್ನು ಖುಷ್ಬೂ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಡಿಎಂಕೆ ವಿರುದ್ಧ ಅವರು ಕಿಡಿಕಾರಿರುವ ಅವರು ಮಹಿಳೆಯರನ್ನು ಕೀಳಾಗಿ ಕಾಣುವ ವ್ಯಕ್ತಿಗಳಿಗೆ ಡಿಎಂಕೆ ಆಶ್ರಯ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದಾಗಲೂ ಗದ್ಗದಿತರಾಗಿ ಮಾತನಾಡಿರುವ ಖುಷ್ಬೂ, ಪ್ರಕರಣದ ಗಂಭೀರತೆಯನ್ನು ಎತ್ತಿ ತೋರಿಸಿದ್ದಾರೆ. ಇದು ಕೇವಲ ಬಿಜೆಪಿ ಮಹಿಳಾ ನಾಯಕಿಯ ಮೇಲಿನ ದಾಳಿಯಲ್ಲ, ಒಟ್ಟಾರೆ ಮಹಿಳೆಯರ ಮೇಲಿನ ದಾಳಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರೀ ಅನಾಹುತದಿಂದ ಮಹಾರಾಷ್ಟ್ರ ಸಚಿವರು ಜಸ್ಟ್ ಮಿಸ್

    ಸದ್ಯ ಬಿಜೆಪಿ (BJP) ಯಿಂದ ಭಾರೀ ಟೀಕೆಗಳು ವ್ಯಕ್ತವಾದ ನಂತರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ. ಡಿಎಂಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ದುರೈಮುರುಗನ್ ಅವರು ಪಕ್ಷದ ಶಿಸ್ತಿನ ಉಲ್ಲಂಘನೆ ಮತ್ತು ಪಕ್ಷಕ್ಕೆ ಅಪಖ್ಯಾತಿ ತಂದಿರುವ ಕಾರಣ ಕೃಷ್ಣಮೂರ್ತಿ ಅವರ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸುವುದು ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಂದಲೂ ಉಚ್ಛಾಟನೆ ಮಾಡುವುದಾಗಿ ಘೋಷಿಸಿದರು.

  • ರಾಜ್ಯಪಾಲರನ್ನ ಗುಂಡಿಕ್ಕಿ ಕೊಲ್ಲಲು ಉಗ್ರನನ್ನು ಕಳಿಸ್ತೀವಿ – ಹೇಳಿಕೆ ನೀಡಿದ DMK ನಾಯಕ ಸಸ್ಪೆಂಡ್

    ರಾಜ್ಯಪಾಲರನ್ನ ಗುಂಡಿಕ್ಕಿ ಕೊಲ್ಲಲು ಉಗ್ರನನ್ನು ಕಳಿಸ್ತೀವಿ – ಹೇಳಿಕೆ ನೀಡಿದ DMK ನಾಯಕ ಸಸ್ಪೆಂಡ್

    ಚೆನ್ನೈ: ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್.ರವಿ (RN Ravi) ನಡುವಣ ತಿಕ್ಕಾಟ ತೀವ್ರಗೊಂಡಿದೆ. ಈ ನಡುವೆ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ (Shivaji Krishnamurthy) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಅಂಬೇಡ್ಕರ್ ಹೆಸರನ್ನು ಹೇಳಲು ಆಗಲ್ಲ ಅಂದ್ಮೇಲೆ ನಾವು ಸುಮ್ಮನೆ ಇರಲ್ಲ. ಅವರು ಕಾಶ್ಮೀರಕ್ಕೆ ಹೋಗಿರಲಿ.. ರಾಜ್ಯಪಾಲರನ್ನು ಗುಂಡಿಕ್ಕಿ ಕೊಲ್ಲಲು ಅಲ್ಲಿಗೆ ನಾವು ಒಬ್ಬ ಉಗ್ರನನ್ನು ಕಳಿಸ್ತೇವೆ ಎಂದಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‌ನಲ್ಲಿ ಭಾರತದ ವನಿತೆಯರಿಗೆ ಶುಭಾರಂಭ – SA ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ

    ಇದಕ್ಕೆ ಬಿಜೆಪಿ (BJP) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಡಿಎಂಕೆಗೆ ಉಗ್ರರ ಸಂಪರ್ಕ ಇರೋ ಶಂಕೆಯಿದ್ದು, ಈ ಬಗ್ಗೆ ಪೊಲೀಸ್ ತನಿಖೆ ನಡೆಯಬೇಕು ಎಂದು ಆಗ್ರಹಿಸಿದೆ. ಇನ್ನೂ ವಿವಾದಿತ ಹೇಳಿಕೆ ಸಂಬಂಧ ರಾಜ್ಯಪಾಲರ (Tamilnadu Governor) ಉಪ ಕಾರ್ಯದರ್ಶಿ ಪ್ರಸನ್ನ ರಾಮಸಾಮಿ ಅವರು ಚೆನ್ನೈನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

    ಈ ಬೆನ್ನಲ್ಲೇ ರಾಜ್ಯಪಾಲ ಆರ್.ಎನ್.ರವಿ ಕುರಿತು ಡಿಎಂಕೆ (DMK) ನಾಯಕ ಶಿವಾಜಿ ಕೃಷ್ಣಮೂರ್ತಿ ಅವರನ್ನ ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಪಕ್ಷದ ನಿಯಮ ಗಾಳಿಗೆ ತೂರಿ ವಿವಾದಿತ ಹೇಳಿಕೆ ನೀಡಿದ್ದರಿಂದ ಪಕ್ಷ ತಕ್ಷಣವೇ ಈ ಕ್ರಮ ಕೈಗೊಂಡಿದ್ದು, ಅವರನ್ನು ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಅಮಾನತುಗೊಳಿಸಿದೆ.

    ಈ ಮಧ್ಯೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈಗೆ ಕೇಂದ್ರ ಸರ್ಕಾರ ಝೆಡ್ ಶ್ರೇಣಿಯ ಭದ್ರತೆ ಒದಗಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k