Tag: ಶಿವಾಜಿ

  • ಇತಿಹಾಸ ತಪ್ಪು – ಪವರ್ ಫುಲ್ ಪೀಪಲ್ ಮೇಕ್ ಪ್ಲೇಸ್ ಪವರ್ ಫುಲ್: ಶಿವಾಜಿ ಜಯಂತಿ ಶುಭಕೋರಿದ ಸೆಹ್ವಾಗ್

    ಇತಿಹಾಸ ತಪ್ಪು – ಪವರ್ ಫುಲ್ ಪೀಪಲ್ ಮೇಕ್ ಪ್ಲೇಸ್ ಪವರ್ ಫುಲ್: ಶಿವಾಜಿ ಜಯಂತಿ ಶುಭಕೋರಿದ ಸೆಹ್ವಾಗ್

    ಮುಂಬೈ: ಪವರ್ ಫುಲ್ ಪೀಪಲ್ ಕಮ್ ಫ್ರಮ್ ಪವರ್ ಫುಲ್ ಪ್ಲೇಸಸ್. ಇತಿಹಾಸ ತಪ್ಪು ಪವರ್ ಫುಲ್ ಪೀಪಲ್ ಮೇಕ್ ಪ್ಲೇಸ್ ಪವರ್ ಫುಲ್ ಎಂದು ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಶಿವಾಜಿ ಜಯಂತಿಯ ಶುಭಕೋರಿದ್ದಾರೆ.

    ಶಿವಾಜಿ ಜಯಂತಿಯ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸೆಹ್ವಾಗ್, ಪವರ್ ಫುಲ್ ಪೀಪಲ್ ಕಮ್ ಫ್ರಮ್ ಪವರ್ ಫುಲ್ ಪ್ಲೇಸಸ್. ಇತಿಹಾಸ ತಪ್ಪು ಪವರ್ ಫುಲ್ ಪೀಪಲ್ ಮೇಕ್ ಪ್ಲೇಸ್ ಪವರ್ ಫುಲ್ ದಿ ಗ್ರೇಟ್ ಛತ್ರಪತಿ ಶಿವಾಜಿ ಜಯಂತಿಯ ಶುಭಾಶಯಗಳು ಎಂದು ಬರೆದುಕೊಂಡು ಶಿವಾಜಿಯ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಇದನ್ನು ಓದಿ: ಡಾ.ವಿಷ್ಣು ಪುತ್ಥಳಿ ಅನಾವರಣಕ್ಕೆ ಹಿಜಬ್ -ಕೇಸರಿ ವಿವಾದ ಅಡ್ಡಿ

    ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾಜಿಕ ಜಾಲತಾಣದ ಮೂಲಕ ಶಿವಾಜಿ ಜಯಂತಿಯ ಶುಭಕೋರಿದ್ದು, ನಾನು ಶಿವಾಜಿಯ ಸಾಧನೆಗೆ ಹೆಮ್ಮೆ ಪಡುತ್ತೇನೆ. ಅವರ ಆಡಳಿತ, ನಾಯಕತ್ವದ ಗುಣ, ಸಾಮಾಜಿಕ ಕಳಕಳಿ ಎಲ್ಲರಿಗೂ ಮಾದರಿ. ಸತ್ಯ ಮತ್ತು ನ್ಯಾಯದ ಪರ ನಿಲ್ಲುವ ಅವರ ಗುಣ ಅದ್ಭುತ. ಅವರ ಕನಸುಗಳನ್ನು ನನಸು ಮಾಡಲು ಪ್ರಯತ್ನಿಸೋಣ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಕೃಷಿ ಕ್ಷೇತ್ರದಲ್ಲಿ ಕ್ರಾಂತಿ – 100 ʼಕಿಸಾನ್‌ ಡ್ರೋನ್‌ʼಗಳಿಗೆ ಪ್ರಧಾನಿ ಮೋದಿ ಚಾಲನೆ

  • ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯ ಸಹನೀಯವಲ್ಲ: ಕೇಂದ್ರ ಸಚಿವ ಜೋಶಿ

    ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯ ಸಹನೀಯವಲ್ಲ: ಕೇಂದ್ರ ಸಚಿವ ಜೋಶಿ

    ನವದೆಹಲಿ: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿಯುವ ಕೃತ್ಯವನ್ನು ಯಾರೂ ಸಹಿಸುವುದಿಲ್ಲ, ಇದು ನಿಜಕ್ಕೂ ಖಂಡನಾರ್ಹ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನ ಸ್ಯಾಂಕಿ ಕೆರೆ ಬಳಿಯ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯಕ್ಕೆ ಸಂಬಂಧಿಸಿದಂತೆ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದಿರುವ ಜೋಶಿ, ಸರ್ಕಾರ ಕಾನೂನು ಭಂಗ ಮಾಡುವವರಿಗೆ ಅವಕಾಶ ನೀಡುವುದಿಲ್ಲ. ದೇಶಭಕ್ತರಿಗೆ ಗೌರವ ಕೊಡಬೇಕು ಎಂದು ನಾನು ಎಲ್ಲರಿಗೂ ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ ಬಳಿದವರು ಕಾಂಗ್ರೆಸ್ ಕಾರ್ಯಕರ್ತರು: ಬಿಜೆಪಿ

    ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗಳ ಬಗ್ಗೆ ಸಂಬಂಧಿಸಿದಂತೆ ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

    ದೇಶಕ್ಕಾಗಿ ತ್ಯಾಗ ಮಾಡಿದ್ದಕ್ಕೆ ಅವರ ಮೂರ್ತಿ ಸ್ಥಾಪಿಸಲಾಗಿದೆ. ನಮ್ಮ ಸರ್ಕಾರ ಇಂತಹ ಘಟನೆಗಳನ್ನು ಸಹಿಸುವುದಿಲ್ಲ. ಏನೇ ಹೇಳುವುದಿದ್ದರೂ ಶಾಂತವಾಗಿ ಹೇಳಬೇಕು. ಕಾನೂನು ಭಂಗ ಮಾಡುವವರಿಗೆ ಸರ್ಕಾರ ಅವಕಾಶ ನೀಡಲ್ಲ. ದೇಶಭಕ್ತರಿಗೆ ಗೌರವ ಕೊಡಬೇಕು ಎಂದು ನಾನು ಎಲ್ಲರಲೂ ಮನವಿ ಮಾಡುತ್ತೇನೆ. ಸಂಗೊಳ್ಳಿ ರಾಯಣ್ಣ ದೇಶಭಕ್ತ. ಅವರು ಭಾಷೆ, ಸಮುದಾಯ ಎಲ್ಲವನ್ನೂ ಮೀರಿ ಬೆಳೆದವರು. ಇಂತಹವರ ಪ್ರತಿಮೆಗಳಿಗೆ ಮಸಿ ಬಳಿಯುವಂತಹ ಹೀನ ಕೃತ್ಯಕ್ಕೆ ಇಳಿಯಬಾರದು ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ – ಸುತ್ತಮುತ್ತ ಪೊಲೀಸ್ ಭದ್ರತೆ

  • ಪೀರನವಾಡಿಯಲ್ಲಿ ಪ್ರತಿಮೆ ಪಾಲಿಟಿಕ್ಸ್‌ – ಎರಡು ಗುಂಪುಗಳ ಮೇಲೆ ಲಾಠಿಚಾರ್ಜ್‌

    ಪೀರನವಾಡಿಯಲ್ಲಿ ಪ್ರತಿಮೆ ಪಾಲಿಟಿಕ್ಸ್‌ – ಎರಡು ಗುಂಪುಗಳ ಮೇಲೆ ಲಾಠಿಚಾರ್ಜ್‌

    ಬೆಳಗಾವಿ: ಪೀರನವಾಡಿಯಲ್ಲಿ ಪ್ರತಿಮೆ ಸ್ಥಾಪನೆ ವಿಚಾರವಾಗಿ ಕಿತ್ತಾಟ ನಡೆಸಿದ್ದ ಎರಡು ಗುಂಪುಗಳ ಮೇಲೆ ಪೊಲೀಸರು ಲಾಠಿಜಾರ್ಜ್‌ ನಡೆಸಿದ್ದಾರೆ.

    ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಯನ್ನು ಖಂಡಿಸಿ ಇಂದು ಅಲ್ಲಿದ್ದ ಎಂಇಎಸ್‌ ಪುಂಡರು ಶಿವಾಜಿ ಪ್ರತಿಮೆ ಸ್ಥಾಪನೆ ಮುಂದಾಗಿದ್ದರು. ಈ ವೇಳೆ ಅಲ್ಲಿದ್ದ ಜನತೆ ತಡೆದಿದ್ದರು.  ಎರಡು ಕಡೆ ಜನರು ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.  ಎರಡು ಗುಂಪುಗಳ ಜನ ಹೆಚ್ಚು ಸೇರುತ್ತಿದ್ದತೆ ಎಚ್ಚೆತ್ತ ಪೊಲೀಸರು ಲಾಠಿಚಾರ್ಜ್‌ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

    ರಾತ್ರಿ ಏನಾಗಿತ್ತು?
    ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.

    ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ರಾಜ್ಯ ಕುರುಬರ ಸಂಘ ಮತ್ತು ಕನ್ನಡ ಸಂಘಟನೆಯ ನೂರಾರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದರು. ನಾಳೆ ಸಚಿವ ಈಶ್ವರಪ್ಪ ಜೊತೆ ಮಾತುಕತೆ ನಡೆಸಿ ವಿವಾದ ಇತ್ಯರ್ಥ ಮಾಡುತ್ತೇನೆ ಎಂದಿದ್ದರು.

    ಇತ್ತ ರಾತ್ರೋರಾತ್ರಿ ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಎಂಇಎಸ್‌ ಕಾರ್ಯಕರ್ತರು ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ಶಿವಾಜಿ ಮೂರ್ತಿ ಸ್ಥಾಪನೆಗೆ ಮುಂದಾಗಿದ್ದರು.

    ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಶಿವಾಜಿ ಮೂರ್ತಿಯನ್ನು ವಶಕ್ಕೆ ಪಡೆದುಕೊಂಡರು. ಅಲ್ಲದೇ ಶಿವಾಜಿ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಲು ಬಂದ ಎಂಇಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ಪೊಲೀಸರ ಹಾಗೂ ಮರಾಠಿ ಭಾಷಿಕರ ನಡುವೆ ವಾಗ್ವಾದ ನಡೆದಿತ್ತು.

  • ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ

    ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ

    ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು ಸಿದ್ಧ ಅಂತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ಮುಖಾಂತರ ಎಲ್ಲಾ ಸಮಾಜದವರು ಸೇರಿ ಬಗೆಹರಿಸಲಿ. ಇಲ್ಲವಾದಲ್ಲಿ ಸುಪ್ರೀಂಕೊರ್ಟ್ ತೀರ್ಪಿನಂತೆ ನಡೆದುಕೊಳ್ಳಲು ನಾವು ಸಿದ್ಧ ಅಂತ ಹೇಳಿದ್ದಾರೆ.

    ಈ ಬಾರಿ ಟಿಪ್ಪು ಜಯಂತಿ ಆಚರಣೆ ನಿರಾಸೆ ತಂದಿದೆ. ಫೋಟೋ ಇಡುವುದು, ಮೆರವಣಿಗೆ ಮಾಡೋದು ನಮ್ಮ ಸಂಪ್ರದಾಯವಲ್ಲ. ಮುಂದಿನ ಬಾರಿ ಬೇರೆ ರೀತಿ ಆಚರಣೆ ಮಾಡಲು ಯೋಚಿಸಿದ್ದೇವೆ. ಇದರ ಬಗ್ಗೆ ಡಿಸೆಂಬರ್ ನಲ್ಲಿ ಎಲ್ಲ ಸಾಧು, ಸಂತರು ಪ್ರಮುಖವಾಗಿ ಶೃಂಗೇರಿ ಶ್ರೀಗಳು, ಸುತ್ತೂರು ಶ್ರೀಗಳು ಸೇರಿದಂತೆ ಪಕ್ಷಾತೀತವಾಗಿ ಸಭೆ ನಡೆಸುತ್ತೇವೆ. ಅಲ್ಲಿ ಯಾವ ರೀತಿ, ಯಾರ ನೇತೃತ್ವದಲ್ಲಿ ಟಿಪ್ಪು ಜಯಂತಿ ಮಾಡಬೇಕೆಂದು ತಿರ್ಮಾನ ಮಾಡುತ್ತೇವೆ ಅಂತ ಅವರು ತಿಳಿಸಿದ್ರು.

    ಈ ಬಾರಿ ಶಿವಾಜಿ ಜಯಂತಿಯನ್ನ ಸಾಬರೆಲ್ಲ ಸೇರಿ ಆಚರಿಸುತ್ತೇವೆ. ಶಿವಾಜಿ ಒಬ್ಬ ಭಾರತದ ಅಪ್ರತಿಮ ರಾಜರಾಗಿದ್ದಾರೆ. ಅದೇ ರೀತಿ ಮರಾಠರು ಟಿಪ್ಪು ಜಯಂತಿ ಆಚರಿಸಬೇಕು. ಶಿವಾಜಿ ಜಯಂತಿ ಆಚರಣೆ ಬಗ್ಗೆ ರಾಜ್ಯದ ಎಲ್ಲ ಅಂಜುಮನ್ ಕಮೀಟಿಗಳಿಗೆ ಪತ್ರ ಬರೆಯುತ್ತೇವೆ. ಯಾವ ರೀತಿ ಆಚರಣೆ ಮಾಡಬೇಕು ಅನ್ನೋದು ಸಭೆಯಲ್ಲಿ ತೀರ್ಮಾನಿಸುತ್ತೇವೆ ಅಂತ ಭರವಸೆ ನೀಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews