Tag: ಶಿವ ಕಾರ್ತಿಕೇನ್

  • ಅಖಿಲ್ ಅಕ್ಕಿನೇನಿ ನಟನೆಯ ಏಜೆಂಟ್ ಗೆ ಸಾಥ್ ಕೊಟ್ಟ ಸುದೀಪ್ ಹಾಗೂ ಶಿವ ಕಾರ್ತಿಕೇಯನ್

    ಅಖಿಲ್ ಅಕ್ಕಿನೇನಿ ನಟನೆಯ ಏಜೆಂಟ್ ಗೆ ಸಾಥ್ ಕೊಟ್ಟ ಸುದೀಪ್ ಹಾಗೂ ಶಿವ ಕಾರ್ತಿಕೇಯನ್

    ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ನಟ ಅಖಿಲ್ ಅಕ್ಕಿನೇನಿ ನಟನೆಯ ಮೋಸ್ಟ್ ಅವೇಟೇಡ್  ಏಜೆಂಟ್ ಸಿನಿಮಾದ ಟೀಸರ್ ರಿವೀಲ್ ಆಗಿದ್ದು, ಯೂಟ್ಯೂಬ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್ ಟೀಸರ್ ಝಲಕ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.  ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸಖತ್ ಸ್ಟೈಲೀಶ್ ಲುಕ್ ನಲ್ಲಿ ಅಖಿಲ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಭರ್ಜರಿ ಆಕ್ಷನ್ ಧಮಾಕಾ ಟೀಸರ್ ನಲ್ಲಿದೆ. ಮಮ್ಮುಟ್ಟಿ ಅಮೋಘ ಅಭಿನಯ ನೋಡುಗರಿಗೆ ಥ್ರಿಲ್ ಕೊಡುತ್ತದೆ.

    ಹೈ ಬಜೆಟ್‌ನಲ್ಲಿ ಮೂಡಿಬಂದಿರುವ ಏಜೆಂಟ್ ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಸಾಕ್ಷಿ ವೈದ್ಯ ಅಖಿಲ್ ಗೆ ಜೋಡಿಯಾಗಿ ನಟಿಸಿದ್ದಾರೆ. ಸೈರಾ ನರಸಿಂಹ ರೆಡ್ಡಿ ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ, ರಸೂಲ್ ಎಲ್ಲೂರು ಕ್ಯಾಮೆರಾ, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದ್ದು, ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಟೀಸರ್ ರಿಲೀಸ್ ಮಾಡಿ ಪ್ರಚಾರ ಕಹಳೆ‌ ಮೊಳಗಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅರ್ಜುನ್ ಜನ್ಯ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ಸಿನಿಮಾ ಟೈಟಲ್ : ಸೌತ್ ಸ್ಟಾರ್ಸ್ ರಿಲೀಸ್

    ಅರ್ಜುನ್ ಜನ್ಯ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ಸಿನಿಮಾ ಟೈಟಲ್ : ಸೌತ್ ಸ್ಟಾರ್ಸ್ ರಿಲೀಸ್

    ದೇ ಮೊದಲ ಬಾರಿಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಶಿವರಾಜ್ ಕುಮಾರ್ ನಟನೆಯ ಸಿನಿಮಾದ ಮೂಲಕ ಅವರು ನಿರ್ದೇಶಕರಾಗಿ ಲಾಂಚ್ ಆಗುತ್ತಿದ್ದಾರೆ. ಈ ಸಿನಿಮಾದ ಟೈಟಲ್ ನಾಳೆ ಲಾಂಚ್ ಆಗುತ್ತಿದ್ದು, ದಕ್ಷಿಣದ ಮೂವರು ಸ್ಟಾರ್ ನಟರು ಶೀರ್ಷಿಕೆಯನ್ನು ಅನಾವರಣ ಗೊಳಿಸಲಿದ್ದಾರೆ.

    ನಾಳೆ ಶಿವರಾಜ್ ಕುಮಾರ್ ಹುಟ್ಟು ಹಬ್ಬ. ಹಾಗಾಗಿ ಟೈಟಲ್ ಲಾಂಚ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಸಿನಿಮಾ ನಾಲ್ಕು ಭಾಷೆಗಳಲ್ಲಿ ಮೂಡಿ ಬರುತ್ತಿರುವುದರಿಂದ, ಆಯಾ ಭಾಷೆಯಲ್ಲಿ ಹೆಸರು ಮಾಡಿರುವ ಕಲಾವಿದರು ಟೈಟಲ್ ಲಾಂಚ್ ಮಾಡುತ್ತಿರುವುದು ವಿಶೇಷ. ಕನ್ನಡದಲ್ಲಿ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರೇ ಟೈಟಲ್ ಘೋಷಣೆ ಮಾಡಲಿದ್ದಾರೆ. ತೆಲುಗಿನಲ್ಲಿ ಅಕ್ಕಿನೇನ ನಾಗಾರ್ಜುನ್, ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್, ತಮಿಳಿನಲ್ಲಿ ಶಿವಕಾರ್ತಿಕೇನ್ ಟೈಟಲ್ ಲಾಂಚ್ ಮಾಡಲಿದ್ದಾರೆ. ಇದನ್ನೂ ಓದಿ:ಸೀರೆಯಲ್ಲಿ ಮಿಂಚಿದ ಉರ್ಫಿ ಜಾವೇದ್: ಹೀಗೂ ಸೀರೆ ಉಡಬಹುದಾ ಎಂದ ಫ್ಯಾನ್ಸ್

    ಅರ್ಜುನ್ ಜನ್ಯ ಸಂಗೀತ ಮತ್ತು ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಗಾಳಿಪಟ 2 ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಮೇಶ್ ರೆಡ್ಡಿ ಅವರು ಈ ಚಿತ್ರದ ನಿರ್ಮಾಪಕರು. ಭಾರೀ ಬಜೆಟ್ ನಲ್ಲೇ ಈ ಸಿನಿಮಾ ಮೂಡಿ ಬರಲಿದೆಯಂತೆ. ಅಂದುಕೊಂಡಂತೆ ಆದರೆ, ಇನ್ನೆರಡು ತಿಂಗಳ ಒಳಗೆ ಈ ಸಿನಿಮಾದ ಸೆಟ್ಟೇರಲಿದೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]