Tag: ಶೀರ್ಷಿಕೆ

  • Breaking News- ರಮ್ಯಾ ಚೊಚ್ಚಲ ನಿರ್ಮಾಣ ಚಿತ್ರಕ್ಕೆ ವಿಘ್ನ : ಟೈಟಲ್ ನಂದು ಅಂದ ಸಿಂಗ್ ಬಾಬು

    Breaking News- ರಮ್ಯಾ ಚೊಚ್ಚಲ ನಿರ್ಮಾಣ ಚಿತ್ರಕ್ಕೆ ವಿಘ್ನ : ಟೈಟಲ್ ನಂದು ಅಂದ ಸಿಂಗ್ ಬಾಬು

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ‘ಸ್ವಾತಿ ಮುತ್ತಿನ ಮಳೆಹನಿಯೇ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ವಿಚಾರ ತಿಳಿದೇ ಇದೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನೂ ಮುಗಿಸಲಾಗಿದೆ. ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ವೇಳೆಯಲ್ಲಿ ಚಿತ್ರದ ಶೀರ್ಷಿಕೆಯ ಸಲುವಾಗಿ ವಿಘ್ನವೊಂದು ಎದುರಾಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ತಮ್ಮ ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.

    ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ಎರಡನೇ ಸಿನಿಮಾಗೆ ಮುಹೂರ್ತ

    ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಜಯ್ ರಾವ್ ನೂತನ ಸಿನಿಮಾಗೆ ‘ಯುದ್ಧಕಾಂಡ’ ಟೈಟಲ್ ಫಿಕ್ಸ್

    ಅಜಯ್ ರಾವ್ ನೂತನ ಸಿನಿಮಾಗೆ ‘ಯುದ್ಧಕಾಂಡ’ ಟೈಟಲ್ ಫಿಕ್ಸ್

    ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಖ್ಯಾತಿಯ ನಟ ಅಜಯ್ ರಾವ್ ಸ್ಯಾಂಡಲ್ ವುಡ್ ಯುವ ನಿರ್ದೇಶಕನೊಂದಿಗೆ ಹೊಸ ಸಿನಿಮಾ ಘೋಷಿಸಿದ್ದಾರೆ. ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದೆ. ಸಖತ್ ಇಂಟ್ರಸ್ಟಿಂಗ್ ಆಗಿರೋ ಟೈಟಲ್ ಟೀಸರ್ ಸಿನಿರಸಿಕರ ಗಮನ ಸೆಳೆಯುತ್ತಿದೆ.

    ಈ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಚಿತ್ರದಲ್ಲಿ ವಕೀಲರಾಗಿ ಕಾಣಿಸಿಕೊಳ್ಳುತ್ತಿರುವ ಅಜಯ್ ರಾವ್ ಸಿನಿಮಾವನ್ನು ವಕೀಲರಿಂದಲೇ ಲಾಂಚ್ ಮಾಡಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಮದುವೆ ಬಗ್ಗೆ ವೈಷ್ಣವಿ ತುಂಬಾ ಕನಸು ಕಂಡಿದ್ದಳು: ತಂದೆ ರವಿಕುಮಾರ್

    ‘ಯುದ್ಧಕಾಂಡ’ ಎಂದಾಗ ಎಲ್ಲರಿಗೂ ನೆನಪಾಗೋದು ಲೆಜೆಂಡರಿ ರವಿ ಸರ್ ಸಿನಿಮಾ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಸರ್ ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಒಳ್ಳೆದಾಗ್ಲಿ ಎಂದು ಆಶೀರ್ವಾದ ಮಾಡಿದ್ರು. ಆದ್ರೆ ಆಗ ಬಂದ ‘ಯುದ್ಧಕಾಂಡ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದು ಅಜಯ್ ರಾವ್ ಮಾಹಿತಿ ಹಂಚಿಕೊಂಡ್ರು.

    ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷ ಆಯ್ತು. ನಟನಾಗಿ ಯಶಸ್ಸು, ಸೋಲು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೋ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. ಕೃಷ್ಣ ಲೀಲಾ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ ಎಂದು ಚಿತ್ರರಂಗದ ಜರ್ನಿಯನ್ನು ಮೆಲುಕು ಹಾಕಿದ್ರು ಅಜಯ್ ರಾವ್.

    ‘ಯುದ್ಧಕಾಂಡ’ ಸಿನಿಮಾವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮಾ ಕ್ಯಾಮೆರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ‘ಯುದ್ಧಕಾಂಡ’ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ಪಂಚಾಯ್ತಿ ಸದಸ್ಯರ ಹೋರಾಟಕ್ಕೆ ಮಣಿದು ಟ್ಯಾಗ್‍ಲೈನ್ ತೆಗೆದ `ಅಯೋಗ್ಯ’ ಚಿತ್ರತಂಡ

    ಪಂಚಾಯ್ತಿ ಸದಸ್ಯರ ಹೋರಾಟಕ್ಕೆ ಮಣಿದು ಟ್ಯಾಗ್‍ಲೈನ್ ತೆಗೆದ `ಅಯೋಗ್ಯ’ ಚಿತ್ರತಂಡ

    ಬೆಂಗಳೂರು: ಪಂಚಾಯ್ತಿ ಸದಸ್ಯರ ಹೋರಾಟಕ್ಕೆ ಮಣಿದು `ಅಯೋಗ್ಯ’ ಚಿತ್ರತಂಡ ಟ್ಯಾಗ್‍ಲೈನನ್ನು ತೆಗೆದುಹಾಕಿದೆ.

    ಚಿತ್ರದ ಹೆಸರು ಮತ್ತು ಟ್ಯಾಗ್ ಲೈನ್ ನಿಂದಲೇ ಸಾಕಷ್ಟು ಕುತೂಹಲ ಕೆರಳಿಸಿದ್ದ ಅಯೋಗ್ಯ ಚಿತ್ರ ಇನ್ನೇನು ಬಿಡುಗಡೆಗೆ ಸಿದ್ಧವಾಗಬೇಕು ಎನ್ನುವಷ್ಟರಲ್ಲಿ ಟ್ಯಾಗ್ ಲೈನ್ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು.

    ಅಯೋಗ್ಯ ಚಿತ್ರಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಎನ್ನುವ ಟ್ಯಾಗ್ ಲೈನನ್ನು ಇಟ್ಟುಕೊಂಡಿದ್ದಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ನಿರ್ಮಾಪಕರ ವಿರುದ್ಧ ಚಲನಚಿತ್ರ ಮಂಡಳಿಯ ಬಳಿ ಪ್ರತಿಭಟನೆ ನಡೆಸಿ ಟ್ಯಾಗ್ ಲೈನನ್ನು ತೆಗೆದು ಹಾಕುವಂತೆ ಆಗ್ರಹಿಸಿದ್ದರು.

    ಈ ಹಿಂದೆಯೇ ಟ್ಯಾಗ್ ಲೈನ್ ಬದಲಾವಣೆ ಮಾಡಬೇಕು ಎನ್ನುವ ಒತ್ತಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದಿತ್ತು. ಇದೆ ವಿಚಾರವಾಗಿ ಭಾನುವಾರ ಗ್ರಾಮಪಂಚಾಯಿತಿ ಸದಸ್ಯರಾದ ರೇವತಿ, ಲಕ್ಷ್ಮಿ ಗೌಡ ಎನ್ನುವವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.

    ಈ ಕುರಿತು ಸೋಮವಾರ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷರಾದ ಚಿನ್ನೇಗೌಡ್ರು ಹಾಗೂ ಕರಿಸುಬ್ಬು ಚರ್ಚೆ ಮಾಡಿ ನಂತರ ಸಿನಿಮಾ ಕಲಾವಿದರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಜೊತೆಯಲ್ಲೂ ಮಾತನಾಡಿ ಟ್ಯಾಗ್ ಲೈನ್ ತೆಗೆಯುವಂತೆ ನಿರ್ಧಾರ ಮಾಡಿದ್ದಾರೆ.

    ಇಂದಿನಿಂದ ಕೇವಲ ‘ಅಯೋಗ್ಯ’ ಅನ್ನೋ ಟೈಟಲ್ ಮಾತ್ರ ಎಲ್ಲೆಡೆ ಬಳಸಿಕೊಳ್ಳಲು ಚಿತ್ರತಂಡ ಸಮ್ಮತಿ ನೀಡಿದೆ. ಶೀರ್ಷಿಕೆ ಅಡಿ ಇದ್ದ ಗ್ರಾಮ ಪಂಚಾಯಿತಿ ಸದಸ್ಯ ಅನ್ನೋ ಅಡಿ ಬರಹವನ್ನು ತೆಗೆದು ಹಾಕಿದ್ದಾರೆ. ರಾಜ್ಯದಲ್ಲಿರುವ 76,367 ಪಂಚಾಯಿತಿ ಸದಸ್ಯರಿಗೆ ಗೌರವ ಕೊಡುವ ಉದ್ದೇಶದಿಂದ ಟೈಟಲ್ ಟ್ಯಾಗ್ ಲೈನ್ ಕೈ ಬಿಡಲು ನಿರ್ಮಾಪಕ ಟಿ ಆರ್ ಚಂದ್ರಶೇಖರ್, ನಿರ್ದೇಶಕ ಮಹೇಶ್ ಕುಮಾರ್ ಹಾಗೂ ನಟ ಸತೀಶ್ ನಿರ್ಧಾರ ಮಾಡಿದ್ದಾರೆ.

  • ಸೆಟ್ಟೇರುವ ಮೊದಲೇ ದರ್ಶನ್ ‘ಒಡೆಯರ್’ ಚಿತ್ರಕ್ಕೆ ವಿರೋಧ!

    ಸೆಟ್ಟೇರುವ ಮೊದಲೇ ದರ್ಶನ್ ‘ಒಡೆಯರ್’ ಚಿತ್ರಕ್ಕೆ ವಿರೋಧ!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ `ಒಡೆಯರ್’ಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

    ಮೈಸೂರಿನಲ್ಲಿ ಕನ್ನಡ ಕ್ರಾಂತಿ ದಳದಿಂದ ‘ಒಡೆಯರ್’ ಟೈಟಲ್‍ಗೆ ವಿರೋಧ ವ್ಯಕ್ತವಾಗಿದ್ದು ಈ ಶೀರ್ಷಿಕೆಯನ್ನ ಹಿಂಪಡೆಯುವಂತೆ ಆಗ್ರಹಿಸಿದೆ. ಈ ಕುರಿತು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಂಘಟನೆ ಒಂದು ವೇಳೆ ಟೈಟಲ್ ಹಿಂಪಡೆಯದಿದ್ದಲ್ಲಿ ಬೆಂಗಳೂರಿನಲ್ಲಿ ದರ್ಶನ್ ಮನೆ ಮುಂದೆ ಧರಣಿ ನಡೆಸುವುದಾಗಿ ಹೇಳಿದೆ.

    ನಾಡು ನುಡಿ ಸೇವೆಗಾಗಿ ಮೈಸೂರು ಒಡೆಯರ್ ವಂಶಸ್ಥರ ಸೇವೆ ಅಪಾರವಾಗಿದೆ. ಹೀಗಾಗಿ ಒಡೆಯರ್ ಹೆಸರಲ್ಲಿ ಕಮರ್ಷಿಯಲ್ ಸಿನಿಮಾ ಮಾಡೋದು ಖಂಡನೀಯ ಎಂಬುದು ಸಂಘಟನೆಯ ವಿರೋಧಕ್ಕೆ ಕಾರಣವಾಗಿದೆ.

    ಸದ್ಯ ದರ್ಶನ್ `ಯಜಮಾನ’ ಚಿತ್ರದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನ ಅವರ ಮುಂದಿನ ಚಿತ್ರ ಒಡೆಯರ್ ಶೀರ್ಷಿಕೆ ಬಹಿರಂಗವಾಗಿತ್ತು, ಸಂದೇಶ್ ನಾಗರಾಜ್ ನಿರ್ಮಿಸುತ್ತಿರುವ ಒಡೆಯರ್ ಚಿತ್ರವನ್ನ ಎಂ.ಡಿ ಶ್ರೀಧರ್ ನಿರ್ದೇಶಿಸಲಿದ್ದಾರೆ.

    ಈ ಚಿತ್ರ ಸೆಟ್ಟರಲು ಇನ್ನೂ ಕೆಲ ತಿಂಗಳಿದೆ. ಆದರೆ ಆರಂಭದಲ್ಲೇ ಶೀರ್ಷಿಕೆಗೆ ಕಂಟಕ ಎದುರಾಗಿದೆ. ಇದನ್ನೂ ಓದಿ: ಸಿನಿಮಾ ಸೆಟ್ ನ ಮೊದಲ ದಿನವೇ ಯಜಮಾನನಾಗಿ ಬಂದ ಚಾಲೆಂಜಿಂಗ್ ಸ್ಟಾರ್!