Tag: ಶುಭಂ ಶೆಳಕೆ

  • ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕೆದಕಿದ್ದ ಎಂಇಎಸ್ ಮುಖಂಡನ ವಿರುದ್ಧ FIR ದಾಖಲು

    ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕೆದಕಿದ್ದ ಎಂಇಎಸ್ ಮುಖಂಡನ ವಿರುದ್ಧ FIR ದಾಖಲು

    ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಕೆದಕಿದ್ದ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಕರ್ನಾಟಕ ಗಡಿಭಾಗವನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ವಿವಾದಿತ ನಕ್ಷೆ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತ ವಿನಾಯಕ ಭೋವಿ ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಎಂಇಎಸ್ ಮುಖಂಡ ಶುಭಂ ಶೆಳಕೆ ವಿವಾದಿತ ಪೋಸ್ಟ್ ಹಾಗೂ ವೀಡಿಯೋ ಹಾಕಿ ಗಡಿ ತಗಾದೆ ತೆಗೆದಿದ್ದ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ ಗ್ರಾಫಿಕ್ ವೀಡಿಯೋ, ಫೋಟೋ ಹಂಚಿಕೊಂಡಿದ್ದಾನೆ. ಇದನ್ನೂ ಓದಿ: MES ಮುಖಂಡ ಶುಭಂ ಶಳಕೆಯಿಂದ DDPI ಕಚೇರಿಗೆ ನುಗ್ಗಿ ಪುಂಡಾಟಿಕೆ – ವೀಡಿಯೋ ವೈರಲ್

    ವೀಡಿಯೋದಲ್ಲಿ ಮಹಾರಾಷ್ಟ್ರವಾದಿಗಳೇ ನಮಗೆ ಮನಃಪೂರ್ವಕವಾಗಿ ಮಹಾರಾಷ್ಟ್ರ ದಿನಕ್ಕೆ ಶುಭಕೋರಲು ಆಗುತ್ತಿಲ್ಲ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾನೆ. ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ಪೊಲೀಸರು ಎಚ್ಚರಿಕೆ ಕೊಟ್ಟಿದ್ದರೂ, ಪೋಸ್ಟ್ ಡಿಲೀಟ್ ಮಾಡದೇ ಆರೋಪಿ ಶುಭಂ ಉದ್ಧಟತನ ಮೆರೆದಿದ್ದನು.

  • ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ

    ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ

    ಬೆಳಗಾವಿ: ಎಂಇಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ಮುಖಂಡ ಶುಭಂ ಶೆಳಕೆ ಸಂಯುಕ್ತ ಮಹಾರಾಷ್ಟ್ರ ಪರಿಕಲ್ಪನೆಯ ನಕ್ಷೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಗಡಿ ವಿವಾದವನ್ನು ಕೆಣಕಿದ್ದಾರೆ.

    ನಾಡದ್ರೋಹಿಗಳ ಮೇಲಿನ ದೇಶದ್ರೋಹ ಕೇಸ್ ಕೈ ಬಿಟ್ಟ ಬೆನ್ನಲ್ಲೇ ಶುಭಂ ಶೆಳಕೆ ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ ಗ್ರಾಫಿಕ್ ನಕ್ಷೆಯನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಭಾಷಾ ಸಾಮರಸ್ಯ ಕದಡುವ ಹುನ್ನಾರ ನಡೆಸಿದ್ದಾರೆ. ಇದನ್ನೂ ಓದಿ: ಶಾಲೆಗಳಲ್ಲಿ ವೇದ, ರಾಮಾಯಣ, ಗೀತೆಗಳನ್ನು ಕಲಿಸಬೇಕು: ಧನ್ ಸಿಂಗ್ ರಾವತ್

    ವಿಡಿಯೋ ಜೊತೆಗೆ ಮಹಾರಾಷ್ಟ್ರವಾದಿಗಳೇ ನಮಗೆ ಮನಃಪೂರ್ವಕವಾಗಿ ಮಹಾರಾಷ್ಟ್ರ ದಿನಕ್ಕೆ ಶುಭಕೋರಲು ಆಗುತ್ತಿಲ್ಲ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ವೀಡಿಯೋ ಜೊತೆ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಅಂಪೈರ್‌ ವಿರುದ್ಧ ಕೋರ್ಟ್‌ನಲ್ಲೇ ಆಕ್ರೋಶ – ಅನ್ಯಾಯದಿಂದ ಸೋತೆ ಎಂದ ಸಿಂಧು