Tag: ಶುಭ್ರ ಅಯ್ಯಪ್ಪ

  • ರಾಮ ಈಸ್ ಜೆಂಟಲ್ ಮ್ಯಾನ್ ಅಂತಿದ್ದಾರೆ ನಟ ರಿಷಿ

    ರಾಮ ಈಸ್ ಜೆಂಟಲ್ ಮ್ಯಾನ್ ಅಂತಿದ್ದಾರೆ ನಟ ರಿಷಿ

    ಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ (Ramana Avatar) ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ರಾಮ ಈಸ್ ಜೆಂಟಲ್ ಮ್ಯಾನ್ ಎಂಬ ಸಿಂಗಿಂಗ್ ಮಸ್ತಿಗೆ ಅಭಿನಂದನ್ ಮಹಿಶಾಲೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಟೈಟಲ್ ಕಂ ರೋಮ್ಯಾಂಟಿಕ್ ಹಾಡಾಗಿರುವ ರಾಮ ಈಸ್ ಜೆಂಟಲ್ ಮ್ಯಾನ್ ನಲ್ಲಿ ರಿಷಿ ತನ್ನ ಪ್ರೀತಿಯನ್ನು ನಾಯಕಿ ಶುಭ್ರಗೆ ವ್ಯಕ್ತಪಡಿಸುತ್ತಾ ಹೆಜ್ಜೆ ಹಾಕಿದ್ದಾರೆ.

    ಈ ಹಾಡಿನ ಚಿತ್ರೀಕರಣ ಸಾವನದುರ್ಗ ಮತ್ತು ಶಿವಗಂಗೆ ಸ್ಥಳಗಳಲ್ಲಿ ಮಾಡಿದ್ದು ವೆಸ್ಟೆರ್ನ್ ಶೈಲಿಯ ಸಂಗೀತಕ್ಕೆ ಪಕ್ಕಾ ದೇಸಿ ಟಚ್ ಕೊಟ್ಟಂತಿದೆ. ಸಾಹಿತ್ಯ ಕೇಳಲು ಇಂಪಾಗಿರುವದರ ಜೊತೆಗೆ ಪ್ರೇಕ್ಷರ ಮುಖದಲ್ಲಿ ನಗುವನ್ನು ತರಿಸುವುದರಲ್ಲಿ ಯಶಸ್ವಿಯಾಗಿದೆ. ತಮ್ಮದೇ ವಿಭಿನ್ನ ಶೈಲಿಯ ನಟನೆಯಿಂದ ಜನರ ಮನಸ್ಸನ್ನು ಗೆದ್ದಿರುವ ರಿಷಿ ರಾಮ ಐಸ್ ಆ ಜೆಂಟಲ್ ಮ್ಯಾನ್ ಹಾಡಿನಲ್ಲಿ ಕುಣಿದು ಜನರನ್ನು ಮನೋರಂಜಿಸಿದ್ದಾರೆ. ಈ ಹಾಡಿನ  ಮುಖಾಂತರ ಜನರ ಮನಸ್ಸನ್ನು ಮತ್ತೊಮ್ಮೆ ಗೆದ್ದಿರುವ ಚಿತ್ರತಂಡ ಚಿತ್ರದ ಉಳಿದ ಹಾಡುಗಳನ್ನು ಬಿಡುಗಡೆ ಮಾಡುವ ತಯಾರಿಯಲ್ಲಿದೆ.

    ಟೀಸರ್ ಮೂಲಕ ಭರಪೂರ ಕಾಮಿಡಿ ಉಣಬಡಿಸಿದ್ದ ರಾಮನ ಅವಾತರ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್‌ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ

    ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ರಾಮನ ಅವತಾರ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

  • ‘ರಾಮನ ಅವತಾರ’ ಟೀಸರ್ ರಿಲೀಸ್ : ರಿಷಿ ಸಖತ್ ಕಾಮಿಡಿ ಮಾಡ್ತಾರಪ್ಪ

    ‘ರಾಮನ ಅವತಾರ’ ಟೀಸರ್ ರಿಲೀಸ್ : ರಿಷಿ ಸಖತ್ ಕಾಮಿಡಿ ಮಾಡ್ತಾರಪ್ಪ

    ಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ‘ರಾಮನ ಅವತಾರ’ (Ramana Avatar) ಸಿನಿಮಾದ ಟೀಸರ್ (Teaser) ರಿಲೀಸ್ ಆಗಿದೆ. ಟೀಸರ್ ಮೂಲಕ ನಿರ್ದೇಶಕ ವಿಕಾಸ್ ಪಂಪಾಪತಿ (Vikas Pampapathy)  ಭರಪೂರ ನಗುವಿನ ಮ್ಯಾಜಿಕ್ ಅನ್ನು ಪ್ರೇಕ್ಷಕರಿಗೆ ಉಣ ಬಡಿಸಿದ್ದಾರೆ. ರಿಷಿ (Rishi) ಪಂಚಿಂಗ್ ಸಂಭಾಷಣೆ ಮೂಲಕ ನೋಡುಗರನ್ನು‌ ನಕ್ಕು ನಲಿಸುತ್ತಾರೆ. ಇವರಿಗೆ ಜೋಡಿಯಾಗಿ ಪ್ರಣೀತಾ  ಸುಭಾಷ್  (Praneetha Subhash) ಹಾಗೂ ಶುಭ್ರ ಅಯ್ಯಪ್ಪ (Shubhra Ayyappa) ನಟಿಸಿದ್ದಾರೆ. ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

    ಟೀಸರ್ ರಿಲೀಸ್ ಬಳಿಕ ಮಾತಾನಾಡಿದ ರಿಷಿ, ಸಾಮಾನ್ಯವಾಗಿ ಕಾಮಿಡಿ ಕಷ್ಟವಾದ ಜಾನರ್. ಅದರಲ್ಲಿ ಡಬಲ್ ಮೀನಿಂಗ್ ಮಾಡಬಹುದು. ಬೇರೆಯವರನ್ನು ನಿಂದಿಸಿ ಕಾಮಿಡಿ ಮಾಡಬಹುದು. ಡಬಲ್ ಮೀನಿಂಗ್ ಇಲ್ಲದೇ, ಯಾರಿಗೂ ನಿಂದಿಸದೆ, ಕಾಮಿಡಿ ಮಾಡಬಹುದು ಎಂಬುದಕ್ಕೆ ನಿರ್ದೇಶಕ ವಿಕಾಸ್‌ ಪಂಪಾಪತಿ ಉದಾಹರಣೆ. ನಾನು ಈ ಸಿನಿಮಾವನ್ನು ತುಂಬಾ ಮಜಾಕೊಂಡು ಮಾಡಿದ್ದೇನೆ. ನನಗೆ ಖುಷಿ ಕೊಟ್ಟ ಸಿನಿಮಾ. ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಅವರೆಲ್ಲರ ಎನರ್ಜಿ ನೋಡಿ ನನಗೆ ಖುಷಿಯಾಗಿದೆ. ಟೀಸರ್ ಚೆನ್ನಾಗಿ ಮೂಡಿಬಂದಿದೆ. ನಮ್ಮ ಸಿನಿಮಾ ಮೇಲೆ ನಿಮ್ಮ ಪ್ರೋತ್ಸಾಹ ಇರಲಿ.

    ಸಿನಿಮಾ ಬಗ್ಗೆ ಮಾತನಾಡಿದ ನಿರ್ದೇಶಕ ವಿಕಾಸ್  ಪಂಪಾಪತಿ, ‘ರಾಮನ ಅವತಾರ ಚಿತ್ರ ಕಲಿಯುಗದ ರಾಮನ ಕಥೆಯಾಗಿದ್ದು, ಸಿನಿಮಾ ನೋಡುವಾಗ ಅಲ್ಲಲ್ಲಿ ಪೌರಾಣಿಕ ರಾಮಾಯಣದ ನೆನಪು ಮಾಡಿಕೊಡುತ್ತದೆ. ಯಾವುದೇ ರೀತಿ ಕಾಂಪ್ರಮೈಸ್ ಮಾಡಿಕೊಳ್ಳದೆ ಸಿನಿಮಾವನ್ನು ಮಾಡಿದ್ದು   ಕನ್ನಡ ಸಿನಿ ರಂಗದಲ್ಲಿ ಇದೊಂದು ವಿಭಿನ್ನ ಚಿತ್ರವಾಗುವುದರಲ್ಲಿ, ಪ್ರೇಕ್ಷಕರಿಗೆ ಮನೋರಂಜನೆ ಕೊಡುವುದರಲ್ಲಿ ಸಂದೇಹವಿಲ್ಲ’ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ವಿಕಾಸ್‌ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳಿದ್ದು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.  ಅಮರೇಜ್‌ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್‌ ಕಾಮಿಡಿ ಜಾನರ್‌ನ ರಾಮನ ಅವತಾರ ಸಿನಿಮಾಗೆ ವಿಷ್ಣುಪ್ರಸಾದ್‌ ಹಾಗೂ ಸಮೀರ್‌ ದೇಶಪಾಂಡೆ ಛಾಯಾಗ್ರಹಣವಿದೆ.

    ಜೂಡಾ ಸ್ಯಾಂಡಿ ಸಂಗೀತ, ಅಮರನಾಥ್‌ ಸಂಕಲನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್‌ ನಡೆಸಲಾಗಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ಕೊಟ್ಟಿರುವ ಚಿತ್ರತಂಡ ಜೂನ್‌ ಮೊದಲ ವಾರ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

  • ಇಬ್ಬರು ನಾಯಕಿಯರ ಜೊತೆ ಡುಯೆಟ್ ಹಾಡಲಿದ್ದಾರೆ ರಿಷಿ

    ಇಬ್ಬರು ನಾಯಕಿಯರ ಜೊತೆ ಡುಯೆಟ್ ಹಾಡಲಿದ್ದಾರೆ ರಿಷಿ

    ನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ ರಿಷಿ (Rishi) ವಿಭಿನ್ನ ಪಾತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಇದೀಗ ಅವರು ರಾಮನ ಅವತಾರ ಎಂಬ ಮತ್ತೊಂದು ಹೊಸ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಡುಯೆಟ್ ಹಾಡಲಿದ್ದಾರೆ. ಶುಭ್ರ ಅಯ್ಯಪ್ಪ (Shubhra Ayyappa) ಹಾಗೂ ಪ್ರಣಿತಾ ಸುಭಾಷ್ (Pranitha Subhash) ಈ ಚಿತ್ರದ ನಾಯಕಿಯರು. ಅಲ್ಲದೇ ಅರುಣ್ ಸಾಗರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ನಿರ್ದೇಶಕ ಸಿಂಪಲ್ ಸುನಿ ಕ್ಯಾಂಪಸ್‌ನಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಬರಹಗಾರನಾಗಿ ಕೆಲಸ ಮಾಡಿರುವ ಅನುಭವವಿರುವ, ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಗ್ರಾಫಿಕ್ಸ್ ಹಾಗೂ ಮ್ಯೂಸಿಕ್ ಕೆಲಸಗಳು ಭರದಿಂದ ಸಾಗ್ತಿವೆ. ಜೂನ್ ಮೊದಲನೇ ವಾರದಲ್ಲಿ ರಾಮನ ಅವತಾರ ಸಿನಿಮಾವನ್ನು ತೆರೆಗೆ ತರೋದಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

  • ರಾಮನ ಅವತಾರದಲ್ಲಿ ಕವಲುದಾರಿಯ ನಾಯಕ ರಿಷಿ

    ರಾಮನ ಅವತಾರದಲ್ಲಿ ಕವಲುದಾರಿಯ ನಾಯಕ ರಿಷಿ

    ನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ ರಿಷಿ (Rishi) ವಿಭಿನ್ನ ಪಾತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಇದೀಗ ಅವರು ರಾಮನ ಅವತಾರ (Ramana Avatara) ಎಂಬ ಮತ್ತೊಂದು ಹೊಸ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಥೇಟ್ ರಾಮನ ಗೆಟಪ್ ನಲ್ಲಿಯೇ ರಿಷಿ ಕಾಣಿಸಿಕೊಂಡಿದ್ದು, ಅರುಣ್ ಸಾಗರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಶುಭ್ರ ಅಯ್ಯಪ್ಪ (Shubhra Ayyappa) ಹಾಗೂ ಪ್ರಣೀತಾ ಸುಭಾಷ್ (Praneetha Subhash) ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

    ನಿರ್ದೇಶಕ ಸಿಂಪಲ್ ಸುನಿ (Simple Suni) ಕ್ಯಾಂಪನ್ ನಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಬರಹಗಾರನಾಗಿ ಕೆಲಸ ಮಾಡಿರುವ ಅನುಭವವಿರುವ, ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ನಿಮ್ಮ ಅಭಿನಯ- ವ್ಯಕ್ತಿತ್ವ ಎರಡು ಅದ್ಭುತ: ಅನುಪಮ್ ಖೇರ್ ಹೊಗಳಿದ ಶಿವಣ್ಣ

    ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಗ್ರಾಫಿಕ್ಸ್ ಹಾಗೂ ಮ್ಯೂಸಿಕ್ ಕೆಲಸಗಳು ಭರದಿಂದ ಸಾಗ್ತಿವೆ. ಜೂನ್ ಮೊದಲನೇ ವಾರದಲ್ಲಿ ರಾಮನ ಅವತಾರ ಸಿನಿಮಾವನ್ನು ತೆರೆಗೆ ತರೋದಿಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

  • ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ಶುಭ್ರ ಅಯ್ಯಪ್ಪ (Shubra Aiyappa) ಇತ್ತೀಚಿಗಷ್ಟೇ ಉದ್ಯಮಿ ವಿಶಾಲ್ (Vishal Sivappa) ಜೊತೆ ಹಸೆಮಣೆ ಏರಿದ್ದರು. ಈ ಬೆನ್ನಲ್ಲೇ ಕೊಡವ ಲುಕ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಲುಕ್ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

     

    View this post on Instagram

     

    A post shared by Shubra Aiyappa (@shubra.aiyappa)

    ಸತತ ಆರು ವರ್ಷಗಳಿಂದ ಶುಭ್ರ ಮತ್ತು ವಿಶಾಲ್ ಶಿವಪ್ಪ ಡೇಟಿಂಗ್ ಮಾಡುತ್ತಿದ್ದರು. ಜನವರಿ 19ರಂದು ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಿದ್ದರು. ಕೂರ್ಗ್‌ನಲ್ಲಿ 150 ವರ್ಷದ ಹಳೆಯ ಮನೆ ʻದೊಡ್ಮನೆʼಯಲ್ಲಿ (Doddamane) ಅದ್ದೂರಿಯಾಗಿ ವಿವಾಹವಾಗಿದ್ದರು. ಕೊಡವ ಪದ್ಧತಿ ಪ್ರಕಾರ ಮದುವೆಯಾದರು. ಈಗ ಕೊಡವ ಲುಕ್‌ನಲ್ಲಿ ಶುಭ್ರ ಮತ್ತು ವಿಶಾಲ್ ಚೆಂದದ ಫೋಟೋಶೂಟ್‌ವೊಂದು ಮಾಡಿಸಿದ್ದಾರೆ. ಇದನ್ನೂ ಓದಿ: 10 ಸಾವಿರ ಗಂಟೆಗಳಲ್ಲಿ ರೆಡಿಯಾಯ್ತು ನಟಿ ಅಥಿಯಾ ಶೆಟ್ಟಿ ಧರಿಸಿದ್ದ ಲೆಹೆಂಗಾ

     

    View this post on Instagram

     

    A post shared by Shubra Aiyappa (@shubra.aiyappa)

    ನಟಿ ಶುಭ್ರ ಪಿಂಕ್ ಬಣ್ಣದ ಸೀರೆಯಲ್ಲಿ ಮಿರ ಮಿರ ಎಂದು ಮಿಂಚಿದ್ರೆ, ವರ ವಿಶಾಲ್ ಕೊಡವ ಲುಕ್‌ನಲ್ಲಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಒಟ್ನಲ್ಲಿ ಈ ಜೋಡಿಯ ಫೋಟೋಶೂಟ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

     

    View this post on Instagram

     

    A post shared by Shubra Aiyappa (@shubra.aiyappa)

    ನವಜೋಡಿಗೆ ಚಿತ್ರರಂಗದ ಸ್ನೇಹಿತರಿಂದ, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ಸ್ಯಾಂಡಲ್‌ವುಡ್ (Sandalwood) ನಟಿ ಶುಭ್ರ ಅಯ್ಯಪ್ಪ (Shubra Aiyappa) ಇತ್ತೀಚಿಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬಹುಕಾಲದ ಗೆಳೆಯ ವಿಶಾಲ್ (Vishal)  ಜೊತೆ ಸಂಸಾರಿಕ ಜೀವನ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Shubra Aiyappa (@shubra.aiyappa)

    `ವಜ್ರಕಾಯ’ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿ ಶುಭ್ರ ಅಯ್ಯಪ್ಪ ನಟಿಸಿದ್ದಾರೆ. ಉದ್ಯಮಿ ವಿಶಾಲ್ ಶಿವಪ್ಪ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸತತ ಆರು ವರ್ಷಗಳ ಪ್ರೀತಿಗೆ ಮದುವೆ ಎಂಬ ಮುದ್ರೆ ಒತ್ತಿದ್ದಾರೆ. ಮದುವೆಯ ಬಳಿಕ ಶುಭ್ರ ದಂಪತಿ, ಕುಟುಂಬ ಮತ್ತು ಸ್ನೇಹಿತರ ಜೊತೆ ಕಾಕ್‌ಟೈಲ್ ಪಾರ್ಟಿ ಮಾಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಪಾರು’ ಖ್ಯಾತಿಯ ಶರತ್ ಪದ್ಮನಾಭ್

     

    View this post on Instagram

     

    A post shared by Shubra Aiyappa (@shubra.aiyappa)

    ವಿಶಾಲ್ ಬ್ಲಾö್ಯಕ್ ಸೂಟ್‌ನಲ್ಲಿ ಮಿಂಚಿದ್ರೆ, ಶುಭ್ರ ಲೈಟ್ ಅರೆಂಜ್ ಡ್ರೆಸ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಲಲಿತ್ ಮಹಲ್ ಪ್ಯಾಲೇಸ್ ಮೈಸೂರಿನಲ್ಲಿ ಕಾಕ್‌ಟೈಲ್ ಪಾರ್ಟಿ ನಡೆದಿದೆ.

     

    View this post on Instagram

     

    A post shared by Shubra Aiyappa (@shubra.aiyappa)

    ನಟಿ ಶುಭ್ರ ಮದುವೆ ಜನವರಿ 18ರಂದು ಕೂರ್ಗ್ನ ದೊಡ್ಮನೆ ಎಂಬ 150 ವರ್ಷದ ಹಳೆಯ ಮನೆಯಲ್ಲಿ ಮದುವೆಯಾಗಿದ್ದರು. ಈ ಮದುವೆಗೆ ಕುಟುಂಬಸ್ಥರು, ಆಪ್ತರು ಅಷ್ಟೇ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉದ್ಯಮಿ ವಿಶಾಲ್‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ಉದ್ಯಮಿ ವಿಶಾಲ್‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ಶಿವರಾಜ್‌ಕುಮಾರ್‌ಗೆ (Shivarajkumar) ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗಿನ ಕುವರಿ ಶುಭ್ರ ಅಯ್ಯಪ್ಪ (Shubra Aiyyappa) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ವಿಶಾಲ್ ಶಿವಪ್ಪ (Vishal Aiyyappa) ಜೊತೆ ಸಪ್ತಪದಿ ತುಳಿದಿದ್ದಾರೆ. ಇದನ್ನೂ ಓದಿ: ಖ್ಯಾತ ನಟ ವಿಜಯ್ ಆಂಟನಿ ಅಪಘಾತ: ಸ್ಥಿತಿ ಚಿಂತಾಜನಕ

    ಚಿತ್ರರಂಗದಲ್ಲಿ ಗಟ್ಟಿಮೇಳದ ಸೌಂಡ್ ಜೋರಾಗಿದೆ. ಅದಿತಿ ಪ್ರಭುದೇವ ಹಸೆಮಣೆ ಏರಿದ್ದ ಬೆನ್ನಲ್ಲೇ ಇದೀಗ ನಟಿ ಶುಭ್ರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಶುಭ್ರ ಮತ್ತು ವಿಶಾಲ್ ಮದುವೆಯಾಗಿದ್ದಾರೆ.

    ಉದ್ಯಮಿ ವಿಶಾಲ್ ಮತ್ತು ಶುಭ್ರ ಮದುವೆ ಜನವರಿ 18ರಂದು ಕೂರ್ಗ್‌ನ `ದೊಡ್ಮನೆ’ (Doddamane) ಎಂಬ 150 ವರ್ಷದ ಹಳೆಯ ಮನೆಯಲ್ಲಿ ಮದುವೆಯಾಗಿದ್ದಾರೆ. ಈ ಮದುವೆಗೆ ಕುಟುಂಬಸ್ಥರು, ಆಪ್ತರು ಅಷ್ಟೇ ಭಾಗವಹಿಸಿದ್ದರು. ಇನ್ನೂ ಜ.20 ಮತ್ತು 21ರಂದು ಸಿನಿಮಾ ರಂಗದ ಸ್ನೇಹಿತರಿಗೆ ಆಪ್ತರಿಗೆ ಮೈಸೂರಿನಲ್ಲಿ ಆರತಕ್ಷತೆ ಇರಲಿದೆ.

    ಇನ್ನೂ ಶುಭ್ರ ಮದುವೆ ಫಂಕ್ಷನ್‌ನಲ್ಲಿ ನಟಿ ನಿಧಿ ಸುಬ್ಬಯ್ಯ, `ಮುಂಗಾರು ಮಳೆ 2′ ನಟಿ ನೇಹಾ ಶೆಟ್ಟಿ ಕೂಡ ಭಾಗಿಯಾಗಿದ್ದಾರೆ. ನವಜೋಡಿಗೆ ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k