Tag: ಶೆಡ್ ಮಾಲೀಕ

  • ಕರುವಿನ ಮೇಲೆ ಅತ್ಯಾಚಾರವೆಸಗಿದ 30ರ ವ್ಯಕ್ತಿ ಅರೆಸ್ಟ್

    ಕರುವಿನ ಮೇಲೆ ಅತ್ಯಾಚಾರವೆಸಗಿದ 30ರ ವ್ಯಕ್ತಿ ಅರೆಸ್ಟ್

    – ಪ್ರತ್ಯಕ್ಷದರ್ಶಿಯಿಂದ ಪೊಲೀಸರಿಗೆ ದೂರು

    ಹೈದರಾಬಾದ್: ವ್ಯಕ್ತಿಯೊಬ್ಬ ಕರುವಿನ ಮೇಲೆ ಅತ್ಯಾಚಾರವೆಸಗಿ ಅರೆಸ್ಟ್ ಆದ ಘಟನೆ ಆಂಧ್ರಪ್ರದೇಶದ ಹೈದರಾಬಾದ್‍ನ ಅವಂತಿನಗರದಲ್ಲಿ ನಡೆದಿದೆ.

    ಮಹೇಶ್ ಅರೆಸ್ಟ್ ಆದ ಕಾಮುಕ. ಗುರುವಾರ ಈ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಮಹೇಶ್‍ನನ್ನು ನಾರಾಯಣಗುಡ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಕರುವನ್ನು ಪಶುವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಯನ್ನು ಗಾಂಧಿ ಆಸ್ಪತ್ರೆಗೆ ಕಳುಹಿಸಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಿದ್ದಾರೆ.

    ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯಿಸಿ, ಆರೋಪಿ ಮಹೇಶ್ ಕರುವಿನ ಜೊತೆ ಲೈಂಗಿಕ ಸಂಬಂಧ ಬೆಳೆಸುತ್ತಿದ್ದಾಗ ನಾನು ಆತನನ್ನು ರೆಡ್‍ಹ್ಯಾಂಡ್ ಆಗಿ ಹಿಡಿದೆ. ಆಗ ತಕ್ಷಣ ನಾನು ಪೊಲೀಸರಿಗೆ ಕರೆ ಮಾಡಿದೆ. ಬಳಿಕ ಪೀಪಲ್ ಫಾರ್ ಅನಿಮಲ್ಸ್‍ಗೆ ಮಾಹಿತಿ ನೀಡಿದೆ. ಹಲವು ವರ್ಷಗಳಿಂದ ಪ್ರಾಣಿಗಳಿಗೆ ಈ ರೀತಿಯ ಕಿರುಕುಳ ನೀಡಲಾಗುತ್ತಿದೆ. ನಾವು ಶೆಡ್ ಮಾಲೀಕನಿಗೆ ಮಾಹಿತಿ ನೀಡಿದ್ದೇವು. ಆದರೆ ಏನೂ ಪ್ರಯೋಜನವಾಗಲಿಲ್ಲ ಎಂದು ತಿಳಿಸಿದರು.

    ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿ, ಆರೋಪಿ ಮಹೇಶ್ ವಿರುದ್ಧ ಐಪಿಸಿ ಸೆಕ್ಷನ್ 377 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಘಟನೆ ಬಗ್ಗೆ ತನಿಖೆ ಶುರು ಮಾಡಿದ್ದು, ಶೆಡ್ ಮಾಲೀಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ಆಸ್ಪತ್ರೆಯಿಂದ ಆರೋಪಿಯ ವೈದ್ಯಕೀಯ ವರದಿ ಬಂದ ನಂತರವಷ್ಟೇ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಾಧ್ಯ ಎಂದು ಹೇಳಿದ್ದಾರೆ.