Tag: ಶೆಲ್ ದಾಳಿ

  • ಸುಡಾನ್ ಮಾರುಕಟ್ಟೆಯಲ್ಲಿ RSFನಿಂದ ಶೆಲ್ ದಾಳಿ – 21 ಮಂದಿ ಸಾವು

    ಸುಡಾನ್ ಮಾರುಕಟ್ಟೆಯಲ್ಲಿ RSFನಿಂದ ಶೆಲ್ ದಾಳಿ – 21 ಮಂದಿ ಸಾವು

    – 70ಕ್ಕೂ ಹೆಚ್ಚು ಜನರಿಗೆ ಗಾಯ

    ಖರ್ಟೋಮ್: ಸುಡಾನ್‌ನ (Sudan) ಸೆನ್ನಾರ್ (Sennar) ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ (RSF) ಶೆಲ್ ದಾಳಿ (Shell Attack) ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

    ಜೂನ್ ಅಂತ್ಯದಲ್ಲಿ ಆರ್‌ಎಸ್‌ಎಫ್ ಸೆನ್ನಾರ್ ರಾಜ್ಯದ ರಾಜಧಾನಿಯಾಗಿರುವ ಸಿಂಗಾವನ್ನು ವಶಪಡಿಸಿಕೊಂಡಿತು. ಆದರೆ ಸೆನ್ನಾರ್ ನಗರದ ನಿಯಂತ್ರಣಕ್ಕಾಗಿ ಸೈನ್ಯದೊಂದಿಗೆ ಹೋರಾಡುತ್ತಿದೆ. ಸುಡಾನೀಸ್ ಡಾಕ್ಟರ್ಸ್ ನೆಟ್‌ವರ್ಕ್ ತನ್ನ ಹೇಳಿಕೆಯಲ್ಲಿ, ಶೆಲ್ ದಾಳಿಯು ನಗರದ ಮುಖ್ಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದೆ. ಇದನ್ನು ನಾಗರಿಕರ ‘ಹತ್ಯಾಕಾಂಡ’ ಎಂದು ಖಂಡಿಸಿದೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ – ಕೃಷ್ಣ ನದಿ ತೀರದ ಗ್ರಾಮಸ್ಥರಲ್ಲಿ ಹೆಚ್ಚಾದ ಆತಂಕ

    ಸಾವಿನ ಸಂಖ್ಯೆ 150 ಮೀರುವ ಸಾಧ್ಯತೆಯಿದೆ. ತರಕಾರಿ ಮತ್ತು ಮೀನು ಮಾರುಕಟ್ಟೆಗಳು, ಸಾರ್ವಜನಿಕ ಸಾರಿಗೆ ನಿಲ್ದಾಣ ಮತ್ತು ವಸತಿ ಪ್ರದೇಶಗಳ ಮೇಲೆ ಶೆಲ್ ದಾಳಿಯಾಗಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿದೆ. ದಕ್ಷಿಣ ಮತ್ತು ಪಶ್ಚಿಮ ಸೆನ್ನಾರ್‌ನಲ್ಲಿನ ಆರ್‌ಎಸ್‌ಎಫ್ ಸ್ಥಾನಗಳ ಮೇಲೆ, ಹಾಗೆಯೇ ಸಿಂಜಾ ಮತ್ತು ಅಲ್-ಸುಕಿಯಲ್ಲಿ ಸುಡಾನ್ ಸೇನೆಯ ವೈಮಾನಿಕ ದಾಳಿಗೆ ಪ್ರತಿಕ್ರಿಯೆಯಾಗಿ ಆರ್‌ಎಸ್‌ಎಫ್ ಶೆಲ್ ದಾಳಿ ನಡೆಸಿದೆ. ಇದನ್ನೂ ಓದಿ: MUDA Scam | ಹೈಕೋರ್ಟ್‌ ತೀರ್ಪಿನ ಬಳಿಕ ರಾಜ್ಯದಲ್ಲಿ ಅಸಲಿ ಗೇಮ್‌ ಶುರು?

  • ರಷ್ಯಾ-ಉಕ್ರೇನ್ ಯುದ್ಧ: ಕನಿಷ್ಟ 12 ಮಂದಿ ಪತ್ರಕರ್ತರ ಹತ್ಯೆ

    ರಷ್ಯಾ-ಉಕ್ರೇನ್ ಯುದ್ಧ: ಕನಿಷ್ಟ 12 ಮಂದಿ ಪತ್ರಕರ್ತರ ಹತ್ಯೆ

    ಕೀವ್: ಫೆಬ್ರವರಿ 24 ರಂದು ಉಕ್ರೇನ್‍ನಲ್ಲಿ ರಷ್ಯಾ ನಡೆಸಿದ ಭೀಕರ ಮಿಲಿಟರಿ ದಾಳಿ ಪ್ರಾರಂಭವಾದಾಗಿನಿಂದ 12 ಪತ್ರಕರ್ತರು ಮತ್ತು ಮಾಧ್ಯಮ ವೃತ್ತಿಪರರು ಉಕ್ರೇನ್‍ನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಉಕ್ರೇನ್‍ನ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಹೇಳಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಯುದ್ಧದಿಂದಾಗಿ ಹಾನಿಗೊಳಗಾದ ರಾಷ್ಟ್ರದ ದುರಾವಸ್ಥೆಯ ಪೋಸ್ಟ್‍ವೊಂದನ್ನು ಹಂಚಿಕೊಂಡ ಅವರು, ಯುದ್ಧದ ಸಮಯದಲ್ಲಿ ಕನಿಷ್ಟ 12 ಮಂದಿ ಪತ್ರಕರ್ತರು ಬಲಿಪಶುಗಳಾಗಿದ್ದಾರೆ. ಇದರೊಂದಿಗೆ ಯುದ್ಧದ ತಿವ್ರತೆಯಿಂದಾಗಿ ಗಂಭೀರ ಗಾಯಗಳನ್ನು ಅನುಭವಿಸುತ್ತಿರುವ ಇತರ 10 ಪತ್ರಕರ್ತರು ಕೂಡಾ ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ಪ್ರಾಸಿಕ್ಯೂಟರ್ ಜನರಲ್ ಪ್ರಕಾರ, ರಷ್ಯಾದ ಮಿಲಿಟರಿಯು ಒಟ್ಟು 56 ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದು, ಅದರಲ್ಲಿ 15 ಅನ್ಯ ದೇಶದ ಪತ್ರಕರ್ತರಿದ್ದಾರೆ. 15 ರಲ್ಲಿ, ನಾಲ್ವರು ಯುಕೆಯಿಂದ ಬಂದವರು. ಜೆಕ್ ರಿಪಬ್ಲಿಕ್, ಡೆನ್ಮಾರ್ಕ್, ಯುಎಸ್, ಯುನೈಟೆಡ್ ಅರಬ್ ಎಮಿರೇಟ್ಸ್‍ನಿಂದ ತಲಾ ಎರಡು, ಮತ್ತು ಸ್ವಿಟ್ಜಲೆರ್ಂಡ್‍ನ ಒಬ್ಬರು ಎಂದು ವರದಿ ನೀಡಿದ್ದಾರೆ.

    ಉಕ್ರೇನ್‍ನಲ್ಲಿ ನಡೆದ ಇತ್ತೀಚಿನ ಘಟನೆಯೊಂದರಲ್ಲಿ, ಉಕ್ರೇನ್‍ನ ಇಬ್ಬರು ಪ್ರಜೆಗಳು ಮತ್ತು ಟರ್ಕಿಶ್ ಟಿಆರ್‍ಟಿ ವಲ್ರ್ಡ್ ಟಿವಿ ಚಾನೆಲ್‍ಗಳ ಕ್ಯಾಮರಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಯುದ್ಧ ರಹಿತ ನಗರವಾದ ಚೆರ್ನಿಹಿವ್‍ನಿಂದ ಚಿತ್ರೀಕರಣವನ್ನು ಸ್ಥಳಾಂತರಿಸುವ ಸಮಯದಲ್ಲಿ ಗುಂಡಿನ ದಾಳಿಗೆ ಒಳಗಾಯಿತು. ಈ ವೇಳೆ ವರದಿಗಾರ ಆಂಡ್ರಿ ತ್ಸಾಪ್ಲಿಯೆಂಕೊ ದಾಳಿಗೆ ಒಳಗಾಗಿದ್ದು, ಅದೃಷ್ಟವಶಾತ್ ಚಿಕ್ಕ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

    ರಷ್ಯಾದ ಪಡೆಗಳು ಯುದ್ಧದ ಕಾನೂನುಗಳನ್ನು ಮರೆತಿದ್ದು, ಈಗಾಗಲೇ ಶೆಲ್ ದಾಳಿ ನಡೆಸಿ ಅನೇಕ ಟಿವಿ ಟವರ್‍ಗಳು ಮತ್ತು ಟಿವಿ ಮತ್ತು ರೇಡಿಯೊ ಕಂಪನಿಗಳನ್ನು ಧ್ವಂಸ ಮಾಡಿದ್ದಾರೆ. ಇನ್ಸ್ಟಿಟ್ಯೂಟ್ ಆಫ್ ಮಾಸ್ ಮೀಡಿಯಾದ ಸಹಕಾರದೊಂದಿಗೆ ಪ್ರಾಸಿಕ್ಯೂಟರ್ ಕಚೇರಿಯು ಈಗಾಗಲೇ ಪತ್ರಕರ್ತರ ವಿರುದ್ಧದ ಅಪರಾಧಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ವೆನೆಡಿಕ್ಟೋವಾ ಹೇಳಿದರು.

    ಅವರ ಮೇಲ್ವಿಚಾರಣೆಯ ಪ್ರಕಾರ, ರಷ್ಯಾದ ಪೂರ್ಣ ಪ್ರಮಾಣದ ಆಕ್ರಮಣದ ಆರಂಭದಿಂದಲೂ ಉಕ್ರೇನ್‍ನಲ್ಲಿ ಪತ್ರಕರ್ತರು ಮತ್ತು ಮಾಧ್ಯಮಗಳ ವಿರುದ್ಧ 148 ಕಾನೂನುಬಾಹಿರ ಕ್ರಮಗಳನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ತರಬೇತಿ ನಿರತ ಐಆರ್‌ಬಿ ಪೊಲೀಸ್ ಹೃದಯಾಘಾತದಿಂದ ಸಾವು

    ಫೆಬ್ರವರಿ 24 ರಂದು ರಷ್ಯಾ ಉಕ್ರೇನಿಯನ್ ನೆಲದಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಪ್ರಾರಂಭಗೊಂಡಿದೆ. ಇಲ್ಲಿಯವರೆಗೆ, ವಿಶ್ವಸಂಸ್ಥೆಯ ವರದಿಯ ಪ್ರಕಾರ 6.5 ಮಿಲಿಯನ್‍ಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಹೆಚ್ಚುವರಿಯಾಗಿ, ಸಂಘರ್ಷ ಪ್ರಾರಂಭವಾದಾಗಿನಿಂದ ಉಕ್ರೇನ್‍ನಲ್ಲಿ ಕನಿಷ್ಠ 816 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿ ನೀಡಿದೆ.

  • ಖಾರ್ಕಿವ್ ಶೆಲ್ ದಾಳಿ ಯುದ್ಧಾಪರಾಧ: ಉಕ್ರೇನ್ ಅಧ್ಯಕ್ಷ

    ಕೀವ್: ಉಕ್ರೇನ್‍ನ ಖಾರ್ಕಿವ್‍ನಲ್ಲಿ ಮಂಗಳವಾರ ನಡೆದ ರಷ್ಯಾದ ಶೆಲ್ ದಾಳಿಯನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿರೋಧಿಸಿದ್ದಾರೆ. ಈ ದಾಳಿಯನ್ನು ಯುದ್ಧಾಪರಾಧ ಎಂದು ಕರೆದಿದ್ದಾರೆ.

    ಖಾರ್ಕಿವ್‍ನಲ್ಲಿ ನಡೆದ ರಷ್ಯಾದ ಶೆಲ್ ದಾಳಿಯನ್ನು ಯುದ್ಧಾಪರಾಧ ಎಂದು ವಿರೋಧಿಸಿದ ಝೆಲೆನ್ಸ್ಕಿ ಉಕ್ರೇನ್‍ನ ರಾಜಧಾನಿ ಕೀವ್ ಅನ್ನು ರಕ್ಷಿಸುವುದು ರಷ್ಯಾ ಪಡೆಯ ಪ್ರಮುಖ ಆದ್ಯತೆ ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

    ಖಾರ್ಕಿವ್ ಮೇಲಿನ ದಾಳಿ ಯುದ್ಧಾಪರಾಧ. ಖಾರ್ಕಿವ್ ಹಾಗೂ ಕೀವ್, ರಷ್ಯಾದ ಮುಖ್ಯ ಗುರಿಯಾಗಿದೆ. ಇದೀಗ ಖಾರ್ಕಿವ್‍ನಲ್ಲಿ ಘಟಿಸಿರುವ ದುರಂತದಂತೆ ರಾಜಧಾನಿಯಲ್ಲೂ ದಾಳಿ ನಡೆಸುವುದು ರಷ್ಯಾದ ಗುರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ

    ಮಂಗಳವಾರ ಖಾರ್ಕಿವ್‍ನಲ್ಲಿರುವ ಸರ್ಕಾರಿ ಪ್ರಧಾನ ಕಛೇರಿ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿ ಭಾರೀ ಹಾನಿಯನ್ನು ಮಾಡಿದೆ. ಶೆಲ್ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ಸೇರಿದಂತೆ ಒಟ್ಟು 17 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

    2ನೇ ಮಹಾಯುದ್ಧದ ಅಂತ್ಯದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‍ನ ಖಾರ್ಕಿವ್ ಹಾಗೂ ಕೀವ್ ನಗರಗಳ ಮೇಲೆ ಬಾಂಬ್ ದಾಳಿ ನಡೆದಿದೆ. ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿ 1 ವಾರದಿಂದ ದೇಶಾದ್ಯಂತ ದಾಳಿ ನಡೆಸುತ್ತಿದೆ.

  • ಪಾಕ್‍ನಿಂದ ಕದನವಿರಾಮ ಉಲ್ಲಂಘನೆ- ಓರ್ವ ಯೋಧ ಹುತಾತ್ಮ

    ಪಾಕ್‍ನಿಂದ ಕದನವಿರಾಮ ಉಲ್ಲಂಘನೆ- ಓರ್ವ ಯೋಧ ಹುತಾತ್ಮ

    ಶ್ರೀನಗರ: ಪಾಕಿಸ್ತಾನ ಮತ್ತೆ ಕದನವಿರಾಮ ಉಲ್ಲಂಘಿಸಿದ್ದು, ಪಾಕ್ ನಡೆಸಿದ ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮರಾಗಿರುವ ಘಟನೆ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ.

    ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಕದನ ವಿರಾಮ ಉಲ್ಲಂಘಿಸಿತ್ತು. ಪಾಕ್ ನಡೆಸಿದ ಶೆಲ್ ದಾಳಿಗೆ ಓರ್ವ ಸೈನಿಕ ಹುತಾತ್ಮರಾಗಿದ್ದು, ಡೆಹರಾಡೂನ್‍ನ ಲ್ಯಾನ್ಸ್ ನಾಯಕ್ ಸಂದೀಪ್ ಥಾಪ (35) ಎಂದು ಗುರುತಿಸಲಾಗಿದೆ. ಹುತಾತ್ಮ ಯೋಧ ಸಂದೀಪ್ ಸುಮಾರು 15 ವರ್ಷಗಳಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕೋಲ್ ದೇವೇಂದರ್ ಆನಂದ್ ಮಾಹಿತಿ ನೀಡಿದ್ದಾರೆ.

    ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ ಅವರು ಧೈರ್ಯಶಾಲಿ ಸೈನಿಕರಾಗಿದ್ದರು. ಅವರ ಕರ್ತವ್ಯ ಮತ್ತು ತ್ಯಾಗಕ್ಕೆ ರಾಷ್ಟ್ರವು ಅವರಿಗೆ ಋಣಿಯಾಗಿರುತ್ತದೆ ಎಂದು ವಕ್ತಾರರು ತಿಳಿಸಿದ್ದಾರೆ.

    ಪಾಕಿಸ್ತಾನ ಸೈನಿಕರು ಬೆಳಗ್ಗೆ 6.30ರ ಹೊತ್ತಿಗೆ ನೌಶೇರಾ ಸೆಕ್ಟರ್ ನಲ್ಲಿ ಗುಂಡು ಹಾರಿಸುವುದು ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದರು. ಭಾರತೀಯ ಸೇನೆ ಸಹ ಇದಕ್ಕೆ ಸೂಕ್ತ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಬೆಳಗ್ಗೆ ಗುಂಡಿನ ಚಕಮಕಿ ತೀವ್ರವಾಗಿತ್ತು, ಅಂತಿಮ ವರದಿ ಬಂದಾಗ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ತಿಳಿಸಿದ್ದಾರೆ.

    ಇತ್ತೀಚೆಗೆ ಪೂಂಛ್ ಜಿಲ್ಲೆಯ ಕೆಜಿ ಸೆಕ್ಟರ್ ನಲ್ಲಿ ಭಾರತ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಪಾಕಿಸ್ತಾನ ಸೈನಿಕರು ಹತರಾಗಿದ್ದಾರೆ ಎಂದು ಪಾಕ್ ಆರೋಪಿಸಿತ್ತು. ಈ ವಾದವನ್ನು ಭಾರತ ತಿರಸ್ಕರಿಸಿತ್ತು.

    ಕೇಂದ್ರ ಸರ್ಕಾರ ಆಗಸ್ಟ್ 5 ಮತ್ತು 6ರಂದು 370ನೇ ವಿಧಿಯನ್ನು ರದ್ದು ಪಡಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಂಗಡಿಸಿದ ನಂತರ ಪಾಕ್‍ನ ಪುಂಡಾಟ ಹೆಚ್ಚಾಗಿದೆ. ಈ ಮೂಲಕ ಪಾಕಿಸ್ತಾನ ಸೇನೆಯು ನಿಯಮಿತವಾಗಿ ಒಪ್ಪಂದವನ್ನು ಉಲ್ಲಂಘಿಸುತ್ತಿದ್ದು, ಉಗ್ರರನ್ನು ಜಮ್ಮು ಕಾಶ್ಮೀರಕ್ಕೆ ನುಗ್ಗಿಸಲು ಯತ್ನಿಸುತ್ತಿದೆ ಎಂದು ತಿಳಿದು ಬಂದಿದೆ. ಪಾಕಿಸ್ತಾನದ ಪುಂಡಾಟಕ್ಕೆ ದಂಡನಾತ್ಮಕವಾಗಿಯೇ ಪ್ರತಿಕ್ರಿಯಿಸುತ್ತೇವೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಈಗಾಗಲೇ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.