Tag: ಶೇಖ್ ಷಹಜಹಾನ್‍

  • ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ – ವಿದೇಶಿ ನಿರ್ಮಿತ ಗನ್‌, ಮದ್ದು-ಗುಂಡುಗಳು ಸೀಜ್‌

    ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ – ವಿದೇಶಿ ನಿರ್ಮಿತ ಗನ್‌, ಮದ್ದು-ಗುಂಡುಗಳು ಸೀಜ್‌

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ (Sandeshkhali) ಕೇಂದ್ರೀಯ ತನಿಖಾ ದಳ (CBI) ನಡೆಸಿದ ಮಹತ್ವದ ದಾಳಿಯಲ್ಲಿ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

    ಅಮಾನತುಗೊಂಡ ಟಿಎಂಸಿ ನಾಯಕ ಶೇಖ್‌ ಷಹಜಹಾನ್‌ (Sheikh Shahjahan) ಮತ್ತವರ ಸಹಚರರ ವಿರುದ್ಧ ಸುಲಿಗೆ, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳ ತನಿಖೆಯನ್ನು ಸಿಬಿಐಗೆ ವಹಿಸಿದ ನಂತರ ಈ ದಾಳಿ ನಡೆದಿದೆ. ಇದರೊಂದಿಗೆ ಕಳೆದ ಜನವರಿ 5 ರಂದು ಜಾರಿ ನಿರ್ದೇಶನಾಲಯದ (ED) ತಂಡದ ಮೇಲೆ ದಾಳಿ ನಡೆಸಿದವರಿಗೆ ಸಂಬಂಧಿಸಿದ ಅಡಗುತಾಣಗಳ ಮೇಲೂ ಸಿಬಿಐ ತಂಡ ದಾಳಿ ನಡೆಸಿದೆ.

    ಸಿಬಿಐ ದಾಳಿ ವೇಳೆ ವಿದೇಶಿ ನಿರ್ಮಿತವಾದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು (Foreign Made Guns) ಹಾಗೂ ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    ಸಂತ್ರಸ್ತರಿಗಾಗಿ ಸಹಾಯವಾಣಿ:
    ಈಗಾಗಲೇ ಶೇಖ್‌ ಷಹಜಹಾನ್‌ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಸಂದೇಶ್‌ಖಾಲಿಯಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಹಾಗೂ ಭೂಮಿದಾರರಿಗಾಗಿ ಪ್ರತ್ಯೇಕ ಸಹಾಯವಾಣಿ ಮತ್ತು ಇಮೇಲ್‌ ವಿಳಾಸ ತೆರೆದಿದೆ. ಸಂತ್ರಸ್ತರು ತಮಗಾದ ಅನ್ಯಾಯ ಹೇಳಿಕೊಳ್ಳಬಹುದು, ಅವರ ಮಾಹಿತಿಗಳನ್ನು ಗೌಪ್ತವಾಗಿ ಇಡಲಾಗುತ್ತದೆ ಎಂದು ಸಿಬಿಐ ಹೇಳಿದೆ. ಈ ಬೆನ್ನಲ್ಲೇ ಒಂದೇ ದಿನ ಸುಮಾರು 50 ದೂರುಗಳು ಬಂದಿವೆ. ಶೇಖ್‌ ಷಹಜಹಾನ್‌ ಅವರಿಂದ ಭೂಕಬಳಿಕೆ ಸಂಬಂಧ ಹೆಚ್ಚಿನ ದೂರುಗಳು ಹೇಳಿಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೋಟಾಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ನಿಷೇಧಿಸಿ, ಮರು ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ

    ಷೇಕ್‌ ಷಹಜಹಾನ್‌ ಸಿಕ್ಕಿಬಿದ್ದದ್ದು ಹೇಗೆ?
    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: 2nd Phase Voting: ಹೇಮ ಮಾಲಿನಿಗಿಂತಲೂ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ!

  • ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಶೇಖ್ ಷಹಜಹಾನ್‍ಗೆ ಸಿಬಿಐ ಕಸ್ಟಡಿ ವಿಸ್ತರಣೆ

    ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಶೇಖ್ ಷಹಜಹಾನ್‍ಗೆ ಸಿಬಿಐ ಕಸ್ಟಡಿ ವಿಸ್ತರಣೆ

    ಕೋಲ್ಕತ್ತಾ: ಸಂದೇಶ್‍ಖಾಲಿಯಲ್ಲಿ (Sandeshkhali) ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ತೃಣಮೂಲ ಕಾಂಗ್ರೆಸ್‍ನಿಂದ (TMC) ಅಮಾನತಾಗಿರುವ ಆರೋಪಿ ಶೇಖ್ ಷಹಜಹಾನ್‍ನ (Sheikh Shahjahan) ಕೇಂದ್ರೀಯ ತನಿಖಾ ದಳದ (CBI) ಕಸ್ಟಡಿಯನ್ನು ಮತ್ತೆ ನಾಲ್ಕು ದಿನಗಳವರೆಗೆ ನ್ಯಾಯಾಲಯ (Court) ವಿಸ್ತರಿಸಿದೆ.

    ಪಶ್ಚಿಮ ಬಂಗಾಳದ (West Bengal) ಬಸಿರ್‍ಹತ್‍ನ ನ್ಯಾಯಾಲಯ ಕೇಂದ್ರೀಯ ಸಂಸ್ಥೆಯ ಅರ್ಜಿಯ ಆಧಾರದ ಮೇಲೆ ಈ ಆದೇಶ ನೀಡಿದೆ. ಕೋಲ್ಕತ್ತಾ ಹೈಕೋರ್ಟ್‍ನ ಆದೇಶದ ಮೇರೆಗೆ ತನಿಖೆಯ ವರ್ಗಾವಣೆಯೊಂದಿಗೆ ಮಾರ್ಚ್ 6 ರಂದು ಸಿಬಿಐ ಶೇಖ್ ಷಹಜಹಾನ್‍ನನ್ನು ಕಸ್ಟಡಿಗೆ ಪಡೆದುಕೊಂಡಿತ್ತು. ಇದೀಗ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಯನ್ನು ವಿಸ್ತರಿಸಿದೆ. ಅಲ್ಲದೇ ಮಾ.14 ರಂದು ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿದೆ. ಇದನ್ನೂ ಓದಿ: ಮಸೀದಿ, ಮದರಸಾಗಳಲ್ಲಿ ಎನ್‍ಐಎ ದಾಳಿ ನಡೆಸಿದ್ರೆ ರಾಮೇಶ್ವರಂ ಕೆಫೆ ಸ್ಫೋಟ ಆರೋಪಿ ಪತ್ತೆಯಾಗಬಹುದು: ಶರಣ್ ಪಂಪ್‍ವೆಲ್

    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಡೀಪ್‍ಫೇಕ್ ವೀಡಿಯೋ ವೈರಲ್

  • ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

    ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

    ಕೋಲ್ಕತ್ತಾ: ಪ್ರಕರಣದ ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ತೃಣಮೂಲ ಕಾಂಗ್ರೆಸ್‍ನ ಮಾಜಿ ನಾಯಕ ಮತ್ತು ಸಂದೇಶ್‍ಖಾಲಿಯ ಪ್ರಬಲ ನಾಯಕ ಶೇಖ್ ಷಹಜಹಾನ್‍ನನ್ನು ಸಿಬಿಐ ವಶಕ್ಕೆ ಒಪ್ಪಿಸುವಂತೆ ಹೈಕೋರ್ಟ್ ಪಶ್ಚಿಮ ಬಂಗಾಳ ಪೊಲೀಸರಿಗೆ ಆದೇಶಿಸಿದೆ.

    ತೃಣಮೂಲ ಕಾಂಗ್ರೆಸ್‍ನ ಮಾಜಿ ನಾಯಕ ಶೇಖ್ ಷಹಜಹಾನ್ ಮನೆ ಮೇಲೆ ದಾಳಿ ನಡೆಸಲು ಜಾರಿ ನಿರ್ದೇಶನಾಲಯ (ಇಡಿ) ತಂಡ ಹೊರಟಿದ್ದ ವೇಳೆ ಅಧಿಕಾರಿಗಳನ್ನು ತಡೆದು ಕಿಡಿಗೇಡಿಗಳ ಗುಂಪು ದಾಳಿ ನಡೆಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ಆರೋಪಿ ಷಹಜಹಾನ್‍ನನ್ನು ಪೊಲೀಸರು ಸಿಬಿಐಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ರಾಜೀನಾಮೆ, ಮಾ.7 ರಂದು ಬಿಜೆಪಿ ಸೇರ್ಪಡೆ

    ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿದ್ದ ಏಕಸದಸ್ಯ ಪೀಠವು ನಜತ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ಸಂಖ್ಯೆ 8 ಮತ್ತು 9 ಮತ್ತು ಬಂಗಾವ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ಸಂಖ್ಯೆ 18ನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆದೇಶಿಸಿದೆ. ಈ ಹಿಂದೆ, ಸಂದೇಶಖಾಲಿ ಘಟನೆಯ ತನಿಖೆಗಾಗಿ ಹೈಕೋರ್ಟ್ ವಿಶೇಷ ತನಿಖಾ ತಂಡವನ್ನು (ಎಸ್‍ಐಟಿ) ರಚಿಸಿತ್ತು. ಇದೀಗ ವಿಭಾಗೀಯ ಪೀಠವು ಎಸ್‍ಐಟಿಯನ್ನು ರದ್ದುಗೊಳಿಸಿ ಸಿಬಿಐ ತನಿಖೆಗೆ ಆದೇಶಿಸಿದೆ.

    ಪಡಿತರ ಹಗರಣ ಪ್ರಕರಣದಲ್ಲಿ ಷಹಜಹಾನ್ ಮನೆ ಮೇಲೆ ಜ.5 ರಂದು ಇಡಿ ಅಧಿಕಾರಿಗಳು ದಾಳಿಗೆ ತೆರಳುತ್ತಿದ್ದಾಗ, ಆರೋಪಿಯ ಬೆಂಬಲಿಗರು ದಾಳಿ ಮಾಡಿದ್ದರು. ದಾಳಿಯಲ್ಲಿ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದರು. ಬಳಿಕ ಷಹಜಹಾನ್ ತಪ್ಪಿಸಿಕೊಂಡಿದ್ದ, 55 ದಿನಗಳ ಬಳಿಕ ಆತನ ಬಂಧನವಾಗಿತ್ತು.

    ಜನವರಿ 5ರ ಘಟನೆಯು ನಿವಾಸಿಗಳಿಂದ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಯಿತು. ಅಲ್ಲದೇ ಈ ಪ್ರತಿಭಟನೆಯಲ್ಲಿ ಷಹಜಹಾನ್ ಮತ್ತು ಆತನ ಸಹಾಯಕರ ಮೇಲೆ ಸ್ಥಳೀಯರ ಮಹಿಳೆಯರು ಭೂಕಬಳಿಕೆ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಇದನ್ನೂ ಓದಿ: ಲಂಚ ಪ್ರಕರಣದಲ್ಲಿ ಕಾನೂನು ಕ್ರಮದಿಂದ ಜನಪ್ರತಿನಿಧಿಗಳಿಗೆ ವಿನಾಯಿತಿ ಇಲ್ಲ – ಸುಪ್ರೀಂ ಕೋರ್ಟ್

  • ಶೇಖ್ ಷಹಜಹಾನ್‍ನ 43 ಪ್ರಕರಣಗಳು ನಿಮ್ಮನ್ನು 10 ವರ್ಷ ಬ್ಯುಸಿಯಾಗಿಡಲಿದೆ: ವಕೀಲರಿಗೆ ಕೋರ್ಟ್ ಚಾಟಿ

    ಶೇಖ್ ಷಹಜಹಾನ್‍ನ 43 ಪ್ರಕರಣಗಳು ನಿಮ್ಮನ್ನು 10 ವರ್ಷ ಬ್ಯುಸಿಯಾಗಿಡಲಿದೆ: ವಕೀಲರಿಗೆ ಕೋರ್ಟ್ ಚಾಟಿ

    ಕೋಲ್ಕತ್ತಾ: ಸಂದೇಶ್‍ಖಾಲಿ (Sandeshkhali) ಪ್ರಕರಣದ ಆರೋಪಿ ಶೇಖ್ ಷಹಜಹಾನ್ (Sheikh Shahjahan) ಪರ ವಕೀಲರಿಗೆ ಕೋಲ್ಕತ್ತಾ ಹೈಕೋರ್ಟ್ (Calcutta High Court) ಚಾಟಿ ಬೀಸಿದೆ. ಆರೋಪಿ ವಿರುದ್ಧದ ಜಾಮೀನು ಅರ್ಜಿ ವಿಚಾರಣೆ ವೇಳೆ, 43 ಪ್ರಕರಣಗಳು ನಿಮ್ಮನ್ನು 10 ವರ್ಷಗಳ ಕಾಲ ಬ್ಯುಸಿಯಾಗಿಡಲಿದೆ ಎಂದು ನ್ಯಾಯಾಲಯ ಹೇಳಿದೆ.

    ಆರೋಪಿ ಪರ ವಕೀಲ, ಜಾಮೀನು ಅರ್ಜಿ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂದು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ, ಆರೋಪಿ ವಿರುದ್ಧ ಸುಮಾರು 43 ಪ್ರಕರಣಗಳಿವೆ. ಈಗ ಮುಂದಿನ 10 ವರ್ಷಗಳವರೆಗೆ ಈ ವ್ಯಕ್ತಿ ನಿಮ್ಮನ್ನು ಕಾರ್ಯನಿರತವಾಗಿರಿಸಿಕೊಳ್ಳುತ್ತಾನೆ. ಮುಂದಿನ 10 ವರ್ಷಗಳವರೆಗೆ ನೀವು ಆತನ ಎಲ್ಲಾ ಪ್ರಕರಣಗಳನ್ನು ನಿಭಾಯಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನ್ಯಾಯಾಲಯ ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಆರೋಪಿ ಬಗ್ಗೆ ಯಾವುದೇ ಸಹಾನುಭೂತಿಯನ್ನು ಹೊಂದಿಲ್ಲ. ನೀವು ಸೋಮವಾರ ಬನ್ನಿ ಎಂದು ವಕೀಲರಿಗೆ ಸೂಚಿಸಿದೆ.

    ಪ್ರಕರಣದ ವಿಚಾರವಾಗಿ ಬುಧವಾರ ನ್ಯಾಯಾಲಯವು, 50 ದಿನಗಳಿಗಿಂತ ಹೆಚ್ಚು ಕಾಲ ಷಹಜಹಾನ್‍ನನ್ನು ಬಂಧಿಸಲು ವಿಫಲವಾಗಿದ್ದಕ್ಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇಷ್ಟು ದಿನ ಪರಾರಿಯಾಗಿರುವ ವ್ಯಕ್ತಿಯನ್ನು ಬಂಧಿಸದೇ ರಾಜ್ಯವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಪೀಠ ಎಚ್ಚರಿಸಿತ್ತು.

    ಸಂದೇಶ್‍ಖಾಲಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪದ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ತೃಣಮೂಲ ಕಾಂಗ್ರೆಸ್ (Trinamool Congress) ನಾಯಕ ಶೇಖ್ ಷಹಜಹಾನ್‍ನನ್ನು ಬುಧವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು 10 ದಿನಗಳ ಕಸ್ಟಡಿಗೆ ನೀಡಲಾಗಿದೆ.