Tag: ಶೈಲಜಾ ನಾಗ್

  • ದರ್ಶನ್ ಬರ್ತ್‌‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

    ದರ್ಶನ್ ಬರ್ತ್‌‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

    – ಸಾಗರದಷ್ಟು ಸವಾಲು ಎದುರಾದರೂ ಮೆಟ್ಟಿ ನಿಲ್ಲುವ ಶಕ್ತಿ ನಿನ್ನಲ್ಲಿದೆ – ಸುಮಲತಾ ವಿಶ್‌

    ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan), ಅಭಿಮಾನಿಗಳ ಪಾಲಿನ ʻಡಿ ಬಾಸ್ʼಇಂದು 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

    ಸಾಮಾನ್ಯವಾಗಿ ದರ್ಶನ್ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳಿಗೆ ಸಡಗರ, ಅಂದು ಅನೇಕ ಕಾರ್ಯಕ್ರಮಗಳನ್ನು ಇಟ್ಟುಕೊಳ್ಳುತ್ತಿದ್ದರು. ಮನೆಯ ಮುಂದೆ ಹಬ್ಬದ ವಾತಾವರಣ ಇರುತ್ತಿತ್ತು. ಆದರೆ ಈ ಬಾರಿ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಇತ್ತೀಚೆಗಷ್ಟೇ ವಿಡಿಯೋ ಮಾಡಿ ತಮ್ಮ ಅಭಿಮಾನಿಗಳಿಗೆ ದರ್ಶನ್ ವಿನಂತಿ ಮಾಡಿಕೊಂಡಿದ್ದರು.

    ಆತ್ಯಾಪ್ತರಿಗಷ್ಟೇ ಆಹ್ವಾನ:
    ದರ್ಶನ್‌ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅತ್ಯಾಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು. ದರ್ಶನ್ ಪತ್ನಿ ವಿಜಯಲಕ್ಷ್ಮಿ ಆತ್ಮೀಯರಿಗಷ್ಟೇ ಆಹ್ವಾನ ನೀಡಿದ್ದರು. ರಾತ್ರಿ ದರ್ಶನ್‌ ನಿವಾಸದಲ್ಲೇ ನಡೆದ ಹುಟ್ಟುಹಬ್ಬದ ಸರಳ ಸಂಭ್ರಮದಲ್ಲಿ ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟಿ ರಕ್ಷಿತಾ ಪ್ರೇಮ್, ನಟ ಧನ್ವಿರ್, ದರ್ಶನ್ ಸಹೋದರ ದಿನಕರ್ ತೂಗುದೀಪ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಕೇಕ್‌ ಕತ್ತರಿಸಿ, ದರ್ಶನ್‌ಗೆ ಶುಭ ಹಾರೈಸಿದರು.

    ಪ್ರೀತಿಯ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ….
    ಇನ್ನೂ ದರ್ಶನ್‌ ಹುಟ್ಟುಹಬ್ಬಕ್ಕೆ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಸಹ ಶುಭಾಶಯಗ ಕೋರಿದ್ದಾರೆ. ಈ ಸಂದೇಶವನ್ನು ತಮ್ಮ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಪ್ರೀತಿಯ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸಾಧನೆಯ ಶಿಖರವೇರುತ್ತಿರುವಾಗ ಸಾಗರದಷ್ಟು ಸವಾಲು ಎದುರಾದರೂ ಮೆಟ್ಟಿ ನಿಲ್ಲುವ ಶಕ್ತಿ ನಿನ್ನಲ್ಲಿದೆ. ಸದಾ ಸಂತೋಷ ಹಾಗೂ ಯಶಸ್ಸಿನ ಜೀವನ ನಿನ್ನದಾಗಲಿ ಎಂದು ಶುಭ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.

    ಅಲ್ಲದೇ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿದ್ದ ಸಂದರ್ಭದಿಂದಲೂ ಜೊತೆಯಾಗಿದ್ದ ನಟ ಧನ್ವೀರ್ (Dhanveer) ಸಹ ಶುಭಾಶಯ ತಿಳಿಸಿದ್ದಾರೆ. ಧನ್ವೀರ್ ದರ್ಶನ್ ಜೊತೆಗಿನ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ಸಂತೋಷ ಮತ್ತು ಯಶಸ್ಸು ಸದಾ ನಿಮ್ಮ ಜೊತೆಗಿರಲಿ. ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ. ಹುಟ್ಟುಹಬ್ಬದ ಶುಭಾಶಯಗಳು ಅಣ್ಣ (ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಬರೆದುಕೊಂಡಿದ್ದಾರೆ.

  • ‘ಸಿಂಧೂರ ಲಕ್ಷ್ಮಣ’ನಿಗೆ ನಿರ್ಮಾಪಕ ಯಾರು?: ದರ್ಶನ್ ಚಿತ್ರದ ಬಗ್ಗೆ ಚರ್ಚೆ

    ‘ಸಿಂಧೂರ ಲಕ್ಷ್ಮಣ’ನಿಗೆ ನಿರ್ಮಾಪಕ ಯಾರು?: ದರ್ಶನ್ ಚಿತ್ರದ ಬಗ್ಗೆ ಚರ್ಚೆ

    ರ್ಶನ್ ಹುಟ್ಟು ಹಬ್ಬದ ದಿನದಂದು ವೀರ ಸಿಂಧೂರ ಲಕ್ಷ್ಮಣ ಸಿನಿಮಾದ ಅನೌನ್ಸ್‍ ಮೆಂಟ್ ಆಗಿದೆ. ಈ ಸಿನಿಮಾವನ್ನು ಮೀಡಿಯಾ ಹೌಸ್ ನಿರ್ಮಾಣ ಸಂಸ್ಥೆ ಮಾಡಲಿದೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಈ ವಿಷಯ ಆಚೆ ಬರುತ್ತಿದ್ದಂತೆಯೇ ಈ ಹಿಂದೆ ಇದೇ ಸಿನಿಮಾಗೆ ಪೂಜೆ ಸಲ್ಲಿಸಿದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ (Umapati Srinivas Gowda) ಹೆಸರು ಕೂಡ ಮುನ್ನೆಲೆಗೆ ಬಂದಿದೆ. ಜೊತೆಗೆ ರಾಧಾ ಕೃಷ್ಣ ಪಲ್ಲಕ್ಕಿ ಎನ್ನುವವರು ಕೂಡ ಇದೇ ಹೆಸರಿನ ಸಿನಿಮಾ ಮಾಡಲು ಮುಂದಾಗಿದ್ದರು.

    ಮೂರು ವರ್ಷಗಳ ಹಿಂದೆಯೇ ವೀರ ಸಿಂಧೂರ ಲಕ್ಷ್ಮಣ ಸಿನಿಮಾ ಕುರಿತಂತೆ ಸುದ್ದಿ ಹೊರ ಬಿದ್ದಿತ್ತು. ಉಮಾಪತಿ ಶ್ರೀನಿವಾಸ್ ಗೌಡ, ದರ್ಶನ್ ಹಾಗೂ ತರುಣ್ ಸುಧೀರ್ ಕಾಂಬಿನೇಷನ್ ನಲ್ಲಿ ಈ ಸಿನಿಮಾ ಮೂಡಿ ಬರಲಿದೆ ಎಂದು ಹೇಳಲಾಗಿತ್ತು. ಸ್ಕ್ರಿಪ್ಟ್ ಪೂಜೆ ಕೂಡ ಮಾಡಲಾಗಿತ್ತು. ಆದರೆ, ಕಾಲ ಉರುಳಿದಂತೆ ಈ ಸಿನಿಮಾದ ಅಪ್ ಡೇಟ್ ಕೂಡ ಸಿಗಲಿಲ್ಲ. ಮೂರು ವರ್ಷಗಳ ನಂತರ ಮತ್ತೆ ಈ ಸಿನಿಮಾ ಸುದ್ದಿಗೆ ಸಿಕ್ಕಿದೆ. ಹಾಗಾಗಿ ಈ ಸಿನಿಮಾ ಯಾರು ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

    ಶೈಲಜಾ ನಾಗ್, ದರ್ಶನ್, ತರುಣ್ ಕಾಂಬಿನೇಷನ್ ಪಕ್ಕಾ

    ಈಗಾಗಲೇ ಯಜಮಾನ ಮತ್ತು ಕ್ರಾಂತಿ ಸಿನಿಮಾದಂತಹ ಎರಡು ಸೂಪರ್ ಹಿಟ್ ಚಿತ್ರಗಳನ್ನು ದರ್ಶನ್ (Darshan) ಅವರಿಗೆ ನೀಡಿರುವ ಮೀಡಿಯಾ ಹೌಸ್ ನ ಶೈಲಜಾ ನಾಗ್ (Shailaja Nag) ಮತ್ತು ಬಿ.ಸುರೇಶ ಮತ್ತೊಂದು ಕ್ರಾಂತಿಕಾರಿ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರು ವೀರಯೋಧ ಸಿಂಧೂರ ಲಕ್ಷ್ಮಣ (Veera Sindhoora Laxman) ಅವರ ಜೀವನವನ್ನು ಆಧರಿಸಿದ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.

    ಕನ್ನಡ ಸಿನಿಮಾ ರಂಗಕ್ಕೆ ಯಜಮಾನ ಮತ್ತು ಕ್ರಾಂತಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು ಶೈಲಜಾ ನಾಗ್ ಮತ್ತು ಬಿ. ಸುರೇಶ. ಇದೇ ಮೊದಲ ಬಾರಿಗೆ ಅವರು ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿ ಕಿಡಿ ವೀರ ಸಿಂಧೂರ ಲಕ್ಷ್ಮಣನಂಥ ಐತಿಹಾಸಿಕ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಕಾಟೇರ ಖ್ಯಾತಿಯ ತರುಣ್ ಸುಧೀರ್ (Tarun Sudhir) ನಿರ್ದೇಶನ ಮಾಡುತ್ತಿದ್ದಾರೆ.

    ವೀರ ಸಿಂಧೂರ ಲಕ್ಷ್ಮಣ ಅಂದಾಕ್ಷಣ ಥಟ್ಟನೆ ನೆನಪಾಗೋದು ಹಿರಿಯ ನಟ ಸುಧೀರ್. ಸಿಂಧೂರ ಲಕ್ಷ್ಮಣ ನಾಟಕವನ್ನು ಜನಪ್ರಿಯಗೊಳಿಸಿದ ಮಹಾನ್ ಕಲಾವಿದ ಸುಧೀರ್. ತಮ್ಮ ತಂದೆಯ ಅಭಿನಯದ ಅಪರೂಪದ ಪಾತ್ರವನ್ನು ತೆರೆಗೆ ತರಲು ರೆಡಿಯಾಗುತ್ತಿದ್ದಾರೆ ತರುಣ್ ಸುಧೀರ್. ಕ್ರಾಂತಿ ಪುರುಷ ಲಕ್ಷ್ಮಣನ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ.

     

    ಕಿರುತೆರೆ ಮತ್ತು ಹಿರಿತೆರೆಗೆ ಸಾಕಷ್ಟು ಕೊಡುಗೆ ನೀಡಿದ ಮೀಡಿಯಾ ಹೌಸ್ ಸ್ಟುಡಿಯೋ, ಈಗಾಗಲೇ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರಗಳನ್ನು ತಯಾರಿಸಿದೆ. ಜೊತೆಗೆ ಭಾರೀ ಬಜೆಟ್  ಸಿನಿಮಾಗಳನ್ನೂ ನಿರ್ಮಾಣ ಮಾಡಿದೆ. ಇದೀಗ ಮತ್ತೊಂದು ಅದ್ಧೂರಿ ಬಜೆಟ್ ಚಿತ್ರಕ್ಕೆ ಕೈ ಹಾಕಿದೆ.

  • ‘ವೀರ ಸಿಂಧೂರ ಲಕ್ಷ್ಮಣ’ನಾದ ದರ್ಶನ್: ಶೈಲಜಾ ನಾಗ್ ನಿರ್ಮಾಪಕಿ

    ‘ವೀರ ಸಿಂಧೂರ ಲಕ್ಷ್ಮಣ’ನಾದ ದರ್ಶನ್: ಶೈಲಜಾ ನಾಗ್ ನಿರ್ಮಾಪಕಿ

    ಗಾಗಲೇ ಯಜಮಾನ ಮತ್ತು ಕ್ರಾಂತಿ ಸಿನಿಮಾದಂತಹ ಎರಡು ಸೂಪರ್ ಹಿಟ್ ಚಿತ್ರಗಳನ್ನು ದರ್ಶನ್ (Darshan) ಅವರಿಗೆ ನೀಡಿರುವ ಮೀಡಿಯಾ ಹೌಸ್ ನ ಶೈಲಜಾ ನಾಗ್ (Shailaja Nag) ಮತ್ತು ಬಿ.ಸುರೇಶ ಮತ್ತೊಂದು ಕ್ರಾಂತಿಕಾರಿ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರು ವೀರಯೋಧ ಸಿಂಧೂರ ಲಕ್ಷ್ಮಣ (Veera Sindhoora Laxman) ಅವರ ಜೀವನವನ್ನು ಆಧರಿಸಿದ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.

    ಕನ್ನಡ ಸಿನಿಮಾ ರಂಗಕ್ಕೆ ಯಜಮಾನ ಮತ್ತು ಕ್ರಾಂತಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು ಶೈಲಜಾ ನಾಗ್ ಮತ್ತು ಬಿ. ಸುರೇಶ. ಇದೇ ಮೊದಲ ಬಾರಿಗೆ ಅವರು ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿ ಕಿಡಿ ವೀರ ಸಿಂಧೂರ ಲಕ್ಷ್ಮಣನಂಥ ಐತಿಹಾಸಿಕ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಕಾಟೇರ ಖ್ಯಾತಿಯ ತರುಣ್ ಸುಧೀರ್ (Tarun Sudhir) ನಿರ್ದೇಶನ ಮಾಡುತ್ತಿದ್ದಾರೆ.

    ವೀರ ಸಿಂಧೂರ ಲಕ್ಷ್ಮಣ ಅಂದಾಕ್ಷಣ ಥಟ್ಟನೆ ನೆನಪಾಗೋದು ಹಿರಿಯ ನಟ ಸುಧೀರ್. ಸಿಂಧೂರ ಲಕ್ಷ್ಮಣ ನಾಟಕವನ್ನು ಜನಪ್ರಿಯಗೊಳಿಸಿದ ಮಹಾನ್ ಕಲಾವಿದ ಸುಧೀರ್. ತಮ್ಮ ತಂದೆಯ ಅಭಿನಯದ ಅಪರೂಪದ ಪಾತ್ರವನ್ನು ತೆರೆಗೆ ತರಲು ರೆಡಿಯಾಗುತ್ತಿದ್ದಾರೆ ತರುಣ್ ಸುಧೀರ್. ಕ್ರಾಂತಿ ಪುರುಷ ಲಕ್ಷ್ಮಣನ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ.

     

    ಕಿರುತೆರೆ ಮತ್ತು ಹಿರಿತೆರೆಗೆ ಸಾಕಷ್ಟು ಕೊಡುಗೆ ನೀಡಿದ ಮೀಡಿಯಾ ಹೌಸ್ ಸ್ಟುಡಿಯೋ, ಈಗಾಗಲೇ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರಗಳನ್ನು ತಯಾರಿಸಿದೆ. ಜೊತೆಗೆ ಭಾರೀ ಬಜೆಟ್  ಸಿನಿಮಾಗಳನ್ನೂ ನಿರ್ಮಾಣ ಮಾಡಿದೆ. ಇದೀಗ ಮತ್ತೊಂದು ಅದ್ಧೂರಿ ಬಜೆಟ್ ಚಿತ್ರಕ್ಕೆ ಕೈ ಹಾಕಿದೆ.

  • ಕಾಟೇರ ನಿರ್ದೇಶಕನಿಗೆ ಎರಡು ಸಿನಿಮಾಗಳ ಕಾಲ್ ಶೀಟ್ ಕೊಟ್ಟ ದರ್ಶನ್

    ಕಾಟೇರ ನಿರ್ದೇಶಕನಿಗೆ ಎರಡು ಸಿನಿಮಾಗಳ ಕಾಲ್ ಶೀಟ್ ಕೊಟ್ಟ ದರ್ಶನ್

    ಕಾಟೇರ (Katera) ಯಶಸ್ಸಿನ ಬೆನ್ನಲ್ಲೇ ನಟ ದರ್ಶನ್ (Darshan) ಆ ಸಿನಿಮಾದ ನಿರ್ದೇಶಕ ತರುಣ್ ಸುಧೀರ್ (Tarun Sudhir)  ಅವರಿಗೆ ಎರಡು ಚಿತ್ರಗಳಿಗೆ ಕಾಲ್ ಶೀಟ್ ನೀಡಿದ್ದಾರೆ. ಎರಡೂ ಸಿನಿಮಾಗಳನ್ನೂ ಪ್ರತಿಷ್ಠಿತ ನಿರ್ಮಾಣ ಸಂಸ‍್ಥೆಗಳೇ ಮಾಡುತ್ತಿವೆ ಎನ್ನುವುದು ವಿಶೇಷ. ದರ್ಶನ್ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಎರಡೂ ನಿರ್ಮಾಣ ಸಂಸ್ಥೆಗಳು ಆ ಚಿತ್ರಗಳನ್ನು ಘೋಷಣೆ ಮಾಡಿವೆ.

    ಈಗಾಗಲೇ ದರ್ಶನ್ ಗಾಗಿ ಯಜಮಾನ ಮತ್ತು ಕ್ರಾಂತಿ ಚಿತ್ರವನ್ನು ನಿರ್ಮಾಣ ಮಾಡಿರುವ ಮೀಡಿಯಾ ಹೌಸ್ ಸಂಸ್ಥೆ ಅಂದರೆ, ಶೈಲಜಾ ನಾಗ್ (Shailaja Nag) ಮತ್ತು ಬಿ.ಸುರೇಶ್ ಜಂಟಿಯಾಗಿ ಒಂದು ಸಿನಿಮಾ ಮಾಡುತ್ತಿದ್ದು, ಆ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶಕ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಮತ್ತೊಂದು ಸಿನಿಮಾ ರಾಜಕಾರಣಿ ಹಾಗೂ ದರ್ಶನ್ ಆಪ್ತ ಸಚ್ಚಿದಾನಂದ (Satchidananda) ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ತರುಣ್ ಸುಧೀರ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಘೋಷಣೆ ಕೂಡ ಇಂದು ಆಗಿದೆ. ಈ ಎರಡೂ ಚಿತ್ರಗಳು ಯಾವಾಗ ಬರುತ್ತವೆ ಎನ್ನುವುದು ಇನ್ನೂ ಖಾತರಿ ಆಗಿಲ್ಲ. ಆದರೂ, ಘೋಷಣೆ ಮಾಡಲಾಗಿದೆ.

     

    ಕಾಟೇರ್ ಸಕ್ಸಸ್ ನಂತರ ತರುಣ್ ಸುಧೀರ್ ಮೇಲೆ ನಿರ್ಮಾಪಕರು ಅಪಾರ ನಂಬಿಕೆ ಬಂದಿದೆ. ಕನ್ನಡದಲ್ಲೇ ಕೋಟಿ ಕೋಟಿ ಹಣವನ್ನು ಈ ಸಿನಿಮಾ ಬಾಚಿದೆ. ಹಾಗಾಗಿ ತರುಣ್ ಮೇಲೆ ಹಣ ಹೂಡಲು ನಿರ್ಮಾಪಕರಿಗೆ ಮುಂದೆ ಬಂದಿದ್ದಾರೆ.

  • ‘ಬನಾರಸ್’ ಸಿನಿಮಾ ಕರ್ನಾಟಕದ ವಿತರಣಾ ಹಕ್ಕು ತನ್ನದಾಗಿಸಿಕೊಂಡ ಡಿ ಬೀಟ್ಸ್

    ‘ಬನಾರಸ್’ ಸಿನಿಮಾ ಕರ್ನಾಟಕದ ವಿತರಣಾ ಹಕ್ಕು ತನ್ನದಾಗಿಸಿಕೊಂಡ ಡಿ ಬೀಟ್ಸ್

    ಬನಾರಸ್ (Banaras) ಚಿತ್ರದ ಕಡೆಯಿಂದ ಒಂದರ ಹಿಂದೊಂದರಂತೆ ಖುಷಿಯ ಸಂಗತಿಗಳು ಹೊರ ಬೀಳುತ್ತಿವೆ. ಹೊಸತನಗಳಿಂದಲೇ ಮೈ ಕೈ ತುಂಬಿಕೊಂಡಿರುವ ಚಿತ್ರವೊಂದು ಹೆಜ್ಜೆ ಹೆಜ್ಜೆಗೂ ದಾಖಲೆ ಬರೆಯುತ್ತಾ ಮುಂದುವರೆಯುತ್ತೆ. ಸದ್ಯ ಬನಾರಸ್ ಚಿತ್ರದ ನಡೆ ಆ ಮಾತಿಗೆ ಅನ್ವರ್ಥ ಎಂಬಂತಿದೆ. ಒಂದು ಕಡೆಯಿಂದ ತಂಗಾಳಿಯಂತೆ ತೇಲಿ ಬಂದು ಎಲ್ಲರ ಮನಸೋಕಿ ಮುದಗೊಳಿಸಿರುವ ಮಾಯಗಂಗೆ, ಮತ್ತೊಂದೆಡೆ ವಾರದ ಹಿಂದಷ್ಟೇ ಬಿಡುಗಡೆಗೊಂಡು ಮಿಲಿಯನ್ನುಗಟ್ಟಲೆ ವೀವ್ಸ್ ಪಡೆದು ಪ್ರಸಿದ್ಧಿ ಪಡೆದುಕೊಂಡಿರುವ ಟ್ರೈಲರ್… ಇದೆಲ್ಲದರಿಂದಾಗಿ ನಿಗಿ ನಿಗಿಸೋ ನಿರೀಕ್ಷೆ ಮೂಡಿಸಿರುವ ಬಾನಾರಸ್ ದಿಕ್ಕಿನಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಸಿನಿಮಾದ ವಿಶಾಲ ಕರ್ನಾಟಕ ವಿತರಣಾ ಹಕ್ಕನ್ನು ಖ್ಯಾತ ವಿತರಣಾ ಸಂಸ್ಥೆ ಡಿ ಬೀಟ್ಸ್ ಪಡೆದುಕೊಂಡಿದೆ.

    ಶೈಲಜಾ ನಾಗ್ (Shailaja Nag) ಮತ್ತು ಬಿ ಸುರೇಶ್ ಸಾರಥ್ಯದ ಡಿ ಬೀಟ್ಸ್ (D Bits) ಎಂಥಾ ಗುಣಮಟ್ಟವನ್ನು ಕಾಯ್ದುಕೊಂಡಿರುವ ಚಿತ್ರವೆಂಬುದು ಎಲ್ಲರಿಗೂ ಗೊತ್ತಿದೆ. ಈ ಸಂಸ್ಥೆಯಿಂದ ಬಿಡುಗಡೆಗೊಳ್ಳುವುದೇ ಪ್ರತಿಷ್ಠೆಯ ಸಂಗತಿ ಎಂಬಂಥಾ ವಾತಾವರಣವೂ ಇದೆ. ಎಲ್ಲ ದಿಕ್ಕುಗಳಿಂದಲೂ ಹಿಡಿಸಿದರೆ ಮಾತ್ರವೇ ಅಂಥಾ ಚಿತ್ರಕ್ಕೆ ಡಿ ಬೀಟ್ಸ್ ಕಡೆಯಿಂದ ಬಿಡುಗಡೆಯ ಭಾಗ್ಯ ಸಿಗುತ್ತದೆ. ಅಂಥಾದ್ದರಲ್ಲಿ ಶೈಲಜಾ ನಾಗ್ ವಿತರಣಾ ಹಕ್ಕು ಖರೀದಿಸಿದ್ದಾರೆಂದರೆ, ಬನಾರಸ್ ಮೂಡಿ ಬಂದಿರುವ ರೀತಿ ಎಂಥಾದ್ದಿದೆ ಎಂಬುದು ಯಾರಿಗಾದರೂ ಅರ್ಥವಾಗುತ್ತದೆ. ಅದುವೇ ಬನಾರಸ್ ಬಗೆಗಿನ ಬೆರಗನ್ನು ಇಮ್ಮಡಿಯಾಗುವಂತೆ ಮಾಡಿದೆ. ಇದನ್ನೂ ಓದಿ:ಗೊಬ್ಬರಗಾಲ ಮೈ ಮೇಲೆ ದೆವ್ವ: ಹೆದರಿ ಓಡಿದ ನವಾಜ್, ರೂಪೇಶ್ ರಾಜಣ್ಣ

    ಬನಾರಸ್ ಅನ್ನು ವಿಶಾಲ ಕರ್ನಾಟಕಕ್ಕೆ ಯಾವ ಸಂಸ್ಥೆಯ ಮೂಲಕ ವಿತರಣೆ ಮಾಡುತ್ತಾರೆಂಬ ಕುತೂಹಲಕ್ಕೆ ಈ ಮೂಲಕ ತೆರೆಬಿದ್ದಿದೆ. ನಿರೀಕ್ಷೆಯಂತೆಯೇ ಡಿ ಬೀಟ್ಸ್ ವಿತರಣಾ ಹಕ್ಕನ್ನು ಖರೀದಿಸಿದೆ. ಅತ್ಯಂತ ವ್ಯವಸ್ಥಿತವಾಗಿ ಚಿತ್ರವನ್ನು ಕರ್ನಾಟಕದ ತುಂಬೆಲ್ಲ ಪಸರಿಸೋದು ಡಿ ಬೀಟ್ಸ್ ಹೆಚ್ಚುಗಾರಿಕೆ. ಅದಕ್ಕೆ ತಕ್ಕುದಾಗಿಯೇ ಬನಾರಸ್ ಬಿಡುಗಡೆಗೆ ಪ್ಲಾನು ಮಾಡಿಕೊಳ್ಳಲಾಗಿದೆ. ಈ ವಿದ್ಯಮಾನದಿಂದಾಗಿ ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್ ಸಂತೃಪ್ತರಾಗಿದ್ದಾರೆ. ನಾಯಕ ನಟ ಝೈದ್ ಖಾನ್ ಮುಖದಲ್ಲಿಯೂ ಸಂತಸ ಮಿರುಗುತ್ತಿದೆ.

    ಬನಾರಸ್ ಬಿಡುಗಡೆಗೆ ಇನ್ನು ಬಾಕಿ ಉಳಿದಿರೋದು ಕೆಲವೇ ದಿನಗಳು ಮಾತ್ರ. ಈ ಸಂಬಂಧವಾಗಿ ಝೈದ್ ಖಾನ್ (Zaid Khan) ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ನಾಯಕಿ ಸೋನಲ್ ಮೊಂತೇರೋ (Sonal Montero) ಕೂಡಾ ಅದಕ್ಕೆ ಸಾಥ್ ಕೊಟ್ಟಿದ್ದಾರೆ. ಒಂದಿಡೀ ಚಿತ್ರತಂಡವೇ ನಾನಾ ಜವಾಬ್ದಾರಿ ಹೊತ್ತು ಉತ್ಸಾಹದಿಂದ ಮುಂದಡಿ ಇಡುತ್ತಿದೆ. ಇದೀಗ ಕರ್ನಾಟಕದಲ್ಲಿ ವಿತರಣಾ ಹಕ್ಕು ಡಿ ಬೀಟ್ಸ್ ಉಡಿ ಸೇರುತ್ತಲೇ, ಇನ್ನುಳಿದ ಒಂದಷ್ಟು ಭಾಷೆಗಳಲ್ಲಿಯೂ ಮಾತುಕತೆ ನಡೆಯುತ್ತಿವೆ. ದೊಡ್ಡ ಸಂಸ್ಥೆಗಳೇ ವಿತರಣಾ ಹಕ್ಕು ಖರೀದಿಸಲು ಮುಂದೆ ಬಂದಿವೆ. ಒಟ್ಟಾರೆಯಾಗಿ ಬನಾರಸ್ ಪ್ರಥಮ ಹೆಜ್ಜೆಯಲ್ಲಿಯೂ ನಿರ್ಣಾಯಕವಾಗಿ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • Exclusive: ನೋಡಿದಿರಾ ‘ಯಜಮಾನ’ನ ವೈಭೋಗವ!

    Exclusive: ನೋಡಿದಿರಾ ‘ಯಜಮಾನ’ನ ವೈಭೋಗವ!

    ಬೆಂಗಳೂರು: ದರ್ಶನ್ ಅವರ 50ನೇ ಚಿತ್ರ ಯಜಮಾನ ಆರಂಭವಾಗಿದೆ. ಬಿ.ಸುರೇಶ ಮತ್ತು ಶೈಲಜಾ ನಾಗ್ ಅವರ ಮೀಡಿಯಾ ಹೌಸ್ ನಿರ್ಮಾಣ. ಪೊನ್ನುಕುಮಾರ್ ನಿರ್ದೇಶಕ. ಮೈಸೂರಲ್ಲಿ ಶೂಟಿಂಗ್ ನಡೀತಿದೆ. ಇಷ್ಟು ವಿಚಾರಗಳನ್ನು ಬಿಟ್ಟು ಬೇರೇನೋ ಸುದ್ದಿ ಹೊರಗೆ ಬರುತ್ತಲೇ ಇಲ್ಲ. ಚಿತ್ರತಂಡದ ಕಣ್ತಪ್ಪಿಸಿ ಸಣ್ಣ ಫೋಟೋ ಕೂಡಾ ಹೊರಬರಲು ಸಾಧ್ಯವಾಗುತ್ತಿಲ್ಲ.

    ಆದರೂ ನಾವಿಲ್ಲಿ ಒಂದು ಫೋಟೋ ಪ್ರಕಟಿಸಿದ್ದೇವೆ. ಇದು ಹಳ್ಳಿ ಮಾರುಕಟ್ಟೆ ಬೀದಿಯನ್ನು ಮರುಸೃಷ್ಟಿಸಿರುವಂಥಾ ಸೆಟ್. ಹತ್ತನೇ ತಾರೀಕಿನ ಹೊತ್ತಿಗೆ ಈ ಸೆಟ್ಟನ್ನು ತೆರವುಗೊಳಿಸಿ ಮತ್ತೊಂದು ಸೆಟ್ ಕೂರಿಸುತ್ತಾರಂತೆ. ಮೇಲ್ನೋಟಕ್ಕೆ ಈ ಸಂತೆ ಬೀದಿಯ ಚಿತ್ರಣವನ್ನು ನೋಡಿದರೆ ಈ ಕಾಲಕ್ಕೆ ಹೊಂದುವಂತೆ ಕಾಣುತ್ತಿಲ್ಲ. ಬದಲಾಗಿ ಒಂದೆರಡು ತಲೆಮಾರಿನ ಹಿಂದಿನ ಚಿತ್ರಣವನ್ನು ನೀಡುತ್ತಿದೆ. ಅದು ಹೌದಾದರೆ, ಯಜಮಾನ ಸಿನಿಮಾ ಎರಡು ಜನರೇಷನ್ನಿನ ಕತೆ ಆಗಿರಲೂ ಬಹುದು ಎಂಬ ಅನುಮಾನ ಮೂಡುತ್ತಿದೆ. ಇದನ್ನೂ ಓದಿ: ಸಿನಿಮಾ ಸೆಟ್ ನ ಮೊದಲ ದಿನವೇ ಯಜಮಾನನಾಗಿ ಬಂದ ಚಾಲೆಂಜಿಂಗ್ ಸ್ಟಾರ್!

    ಖ್ಯಾತ ಕಲಾ ನಿರ್ದೇಶಕ ಶಶಿಧರ ಅಡಪ ಅವರ ತಂಡ ಈ ಸೆಟ್ ಅನ್ನು ರೂಪಿಸಿದೆ. ಅಂದಹಾಗೆ ಈ ಸೆಟ್ ಅನ್ನು ನೋಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಹೋದರ ದಿನಕರ್, ನಿರ್ದೇಶಕ ಎಂ.ಡಿ. ಶ್ರೀಧರ್ ಸೇರಿದಂತೆ ದರ್ಶನ್ ಅವರ ಆಪ್ತರು, ಸಿನಿಮಾ ತಂತ್ರಜ್ಞರು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ.