Tag: ಶೋಕಾಸ್ ನೋಟಿಸ್

  • ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ

    – 26 ಸಾವಿರ ಇ – ಖಾತಾದಾರರಿಗೆ ನೋಟಿಸ್

    ಬೆಂಗಳೂರು: ನೈಜ ಅಳತೆ ನಮೂದಿಸದೇ, ಕಡಿಮೆ ತೆರಿಗೆ ಕಟ್ಟಿ ವಂಚಿಸಿರುವ ಇ-ಖಾತಾದಾರರಿಗೆ ಬಿಬಿಎಂಪಿ (BBMP) ಶೋಕಾಸ್ ನೋಟಿಸ್ (Show Cause Notice) ಜಾರಿ ಮಾಡಿದೆ.

    ಸುಮಾರು 26 ಸಾವಿರ ಇ-ಖಾತಾದಾರರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಮನೆ, ನಿವೇಶನ ಸೈಟ್‌ನ ಅಳತೆ ಹೆಚ್ಚಿದ್ದರೂ, ಕಡಿಮೆ ಅಳತೆ ತೋರಿಸಿ ಟ್ಯಾಕ್ಸ್ (Tax) ವಂಚನೆ ಎಸಗಿದವರಿಗೆ ಬಿಸಿ ಮುಟ್ಟಿಸಿದೆ.

     

    15 ದಿನದ ಒಳಗಡೆ ಹೆಚ್ಚಾಗಿ ಘೋಷಣೆ ಮಾಡಿಕೊಂಡಿರುವ ಜಾಗಕ್ಕೆ ಟ್ಯಾಕ್ಸ್ ಕಟ್ಟಬೇಕು. ಒಂದು ವೇಳೆ ಟ್ಯಾಕ್ಸ್ ಕಟ್ಟದೇ ಹೋದರೆ ಖಾತೆಯನ್ನ ಸೀಜ್ ಮಾಡೋದಾಗಿ ಪಬ್ಲಿಕ್ ಟಿವಿಗೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನೀಷ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜುಲೈನಲ್ಲೇ ತಮಿಳುನಾಡಿಗೆ ಹರಿದ 100 ಟಿಎಂಸಿ ನೀರು ಕೆಆರ್‌ಎಸ್ ಹೊಸ ದಾಖಲೆ

    ಬಿಬಿಎಂಪಿ ವ್ಯಾಪ್ತಿಯಲ್ಲಿ 22 ಲಕ್ಷ ಆಸ್ತಿ ಇದ್ದು ಅದರಲ್ಲಿ 5 ಲಕ್ಷ ಮಂದಿ ಮಾತ್ರ ಇ – ಖಾತಾ ಪಡೆದಿದ್ದಾರೆ. ಇನ್ನೂ 80% ಮಂದಿ ಇ-ಖಾತಾ ಪಡೆಯಬೇಕಿದೆ. ಇ-ಖಾತಾ ಪಡೆದಿರುವ 5 ಲಕ್ಷ ಮಂದಿಯಲ್ಲೇ 26 ಸಾವಿರ ಜನರಿಗೆ ಈಗ ಶೋಕಾಸ್ ನೋಟಿಸ್ ಜಾರಿಯಾಗಿದೆ.

    ಶೋಕಾಸ್ ನೋಟಿಸ್‌ ಜಾರಿ ಆಗಿರುವವರು 15 ದಿನದ ಒಳಗಡೆ ತೆರಿಗೆ ಕಟ್ಟದೇ ಇದ್ದರೆ ಖಾತೆ ಸೀಜ್ ಆಗುವ ಎಚ್ವರಿಕೆಯನ್ನು ನೀಡಲಾಗಿದೆ.

  • ವಿಜಯೇಂದ್ರ, ಯತ್ನಾಳ್ ಟೀಂಗೆ ‘ಹೈ’ ಶಾಕ್ – ಐವರು ನಾಯಕರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

    ವಿಜಯೇಂದ್ರ, ಯತ್ನಾಳ್ ಟೀಂಗೆ ‘ಹೈ’ ಶಾಕ್ – ಐವರು ನಾಯಕರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

    ನವದೆಹಲಿ: ರಾಜ್ಯ ಬಿಜೆಪಿಯಲ್ಲಿ (BJP) ಬಣ ಬಡಿದಾಟ ಜೋರಾಗಿದೆ. ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವಿರುದ್ಧ ಯತ್ನಾಳ್ (Basanagouda Patil Yatnal) ಟೀಂ ಬಂಡಾಯ ಸಾರಿದರೆ, ಇತ್ತ ಯತ್ನಾಳ್ ಟೀಂ ವಿರುದ್ಧ ಬಿಎಸ್‌ವೈ ಟೀಂ ಸಮರ ಸಾರಿದೆ. ಈ ನಡುವೆ ಅಕ್ಕಿ ಮೇಲಾಸೆ ನೆಂಟರ ಮೇಲೆ ಪ್ರೀತಿ ಎಂಬಂತೆ ಬಿಜೆಪಿಯಲ್ಲಿದ್ದು ಕಾಂಗ್ರೇಸ್ ಪರ ಮಾತನಾಡುವ ಮತ್ತೊಂದು ಗುಂಪು. ಈ ಗುಂಪುಗಾರಿಕೆಯಿಂದ ಬೇಸತ್ತ ಹೈಕಮಾಂಡ್ ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆಯುವ ನಿರ್ಧಾರಕ್ಕೆ ಬಂದಿದ್ದು, ಬಿಜೆಪಿಯ ಐವರು ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ.

    ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ. ಒಂದು ಕಡೆ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮರ ಸಾರಿದರೇ ವಿಜಯೇಂದ್ರ ಪರ ನಿಂತಿರುವ ಕೆಲವು ಶಾಸಕರು ಯತ್ನಾಳ್ ಗ್ಯಾಂಗ್ ವಿರುದ್ಧ ವಾಗ್ಯುದ್ಧ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಬಿಜೆಪಿಯಲ್ಲೇ ಇದ್ದು ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡುತ್ತಿರುವ ಗುಂಪು ಆಕ್ಟಿವ್ ಆಗಿದೆ. ಇದರಿಂದ ಬೇಸತ್ತ ಹೈಕಮಾಂಡ್ ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆಯುವ ನಿರ್ಧಾರಕ್ಕೆ ಬಂದಿದೆ. ಇದನ್ನೂ ಓದಿ: ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್‌ಗೆ 11 ರನ್‌ಗಳ ರೋಚಕ ಗೆಲುವು

    ಹೌದು, ರಾಜ್ಯ ಬಿಜೆಪಿಯಲ್ಲಿರುವ ಬಣ ರಾಜಕೀಯಕ್ಕೆ ಇತಿಶ್ರೀ ಹಾಡಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಐದು ಮಂದಿ ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ಬಿಜೆಪಿ ರಾಷ್ಟ್ರೀಯ ಶಿಸ್ತು ಪಾಲನ ಸಮಿತಿ ಯತ್ನಾಳ್ ಬಣದ ಶಾಸಕ ಬಿ.ಪಿ ಹರೀಶ್, ವಿಜಯೇಂದ್ರ ಪರ ಬ್ಯಾಟ್ ಬೀಸುತ್ತಿದ್ದ ಮಾಜಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಮನಾಯ್ಡು ಹಾಗೂ ಬಿಜೆಪಿಯಲ್ಲಿದ್ದು ಕೈಪರ ಬ್ಯಾಟ್ ಬೀಸುತ್ತಿದ್ದ ಶಿವರಾಮ್ ಹೆಬ್ಬಾರ್ ಮತ್ತು ಎಸ್‌ಟಿ ಸೋಮಶೇಖರ್‌ಗೆ ಶೋಕಾಸ್ ನೋಟಿಸ್ ನೀಡಿದ್ದು, 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದೆ. ರ‍್ಯಾಪಿಡ್ ಆಕ್ಷನ್‌ನಲ್ಲಿ ಕ್ರಮಕ್ಕೆ ಮುಂದಾಗಿರುವ ಬಿಜೆಪಿ ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಅಧ್ಯಕ್ಷರ ನೇಮಕಕ್ಕೆ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಜಮೀನು ರಸ್ತೆಗಾಗಿ ಗಲಾಟೆ – ನಡುರಸ್ತೆಯಲ್ಲೇ ಚಿಕ್ಕಪ್ಪನ ಮೇಲೆ ಮಚ್ಚಿನಿಂದ ಹಲ್ಲೆ

    ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನ ಪಕ್ಷದಲ್ಲಿ ಗುಂಪುಗಾರಿಕೆ ನಡೆಸುತ್ತಿರುವ ಬಣಗಳಿಗೆ ದಂಡಂ ದಶಗುಣಂ ಅಸ್ತ್ರ ಪ್ರಯೋಗಿಸಿದ್ದು ಹೊಸ ಅಧ್ಯಕ್ಷರ ನೇಮಕದ ಬಳಿಕ ಯಾರೂ ತುಟಿ ಬಿಚ್ಚದಂತೆ ನೋಡಿಕೊಳ್ಳುವ ತಂತ್ರ ಎನ್ನಲಾಗುತ್ತಿದೆ. ಈ ನಡುವೆ ಪಕ್ಷದ ಮೂಲಗಳಿಂದ ಮಾಹಿತಿ ಸಿಕ್ಕಿದ್ದು ರಾಜ್ಯಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸದೇ ಹೈಕಮಾಂಡ್ ನೇರ ರಾಜ್ಯಧ್ಯಕ್ಷರ ನೇಮಕ ಮಾಡಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಕಮಕಾರಟ್ಟಿ ಘಾಟ್‌ನಲ್ಲಿ 3 KSRTC ಬಸ್‌, 3 ಲಾರಿ, 1 ಕಂಟೇನರ್‌, 1 ಬೈಕ್‌ ಮಧ್ಯೆ ಸರಣಿ ಅಪಘಾತ- ಎಲ್ಲರೂ ಪಾರು

    ಸದ್ಯ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಮಹ್ಮಣನಾಯ್ಡು, ಬಿ.ಪಿ ಹರೀಶ್‌ಗೆ ನೋಟಿಸ್ ನೀಡಿರುವುದು ಬಾಯಿ ಮುಚ್ಚಿಸುವ ತಂತ್ರ ಆದರೆ ಎಸ್‌ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್‌ಗೆ ಉಚ್ಚಾಟನೆ ಎಚ್ಚರಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸದ್ಯ ಅದೇನೇ ಇದ್ದರೂ ಹೈಕಮಾಂಡ್ ನಡೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಯೆಮೆನ್ ಮೇಲೆ ಅಮೆರಿಕ ದಾಳಿಗೂ ಮುನ್ನವೇ ರಹಸ್ಯ ಲೀಕ್

  • ಯತ್ನಾಳ್‌ಗೆ ಶಾಕ್ – ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಶೋಕಾಸ್ ನೋಟಿಸ್

    ಯತ್ನಾಳ್‌ಗೆ ಶಾಕ್ – ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಶೋಕಾಸ್ ನೋಟಿಸ್

    – 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ
    – ನೋಟಿಸ್‌ಗೆ ಉತ್ತರಿಸುತ್ತೇನೆ ಎಂದ ಯತ್ನಾಳ್

    ಬೆಂಗಳೂರು: ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ (Basanagouda Patil Yatnal) ಕೇಂದ್ರ ಬಿಜೆಪಿ ಶಿಸ್ತುಸಮಿತಿ (Central BJP Disciplinary Committee) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

    ಈ ಮೂಲಕ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಹತ್ತು ದಿನಗಳೊಳಗೆ ಸ್ಪಷ್ಟೀಕರಣ ಕೊಡದಿದ್ದಲ್ಲಿ ನಿಮ್ಮ ತಪ್ಪು ನೀವೇ ಒಪ್ಪಿಕೊಂಡಂತೆ. ನಾವು ಕ್ರಮಕ್ಕೆ ಮುಂದಾಗಲು ನಿಮ್ಮ ಒಪ್ಪಿಗೆ ಇದೆಯೆಂದು ಭಾವಿಸುತ್ತೇವೆ. ಈ ಹಿಂದೆಯೂ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ತಪ್ಪು ಸರಿಪಡಿಸಿಕೊಳ್ಳೋದಾಗಿ ಭರವಸೆ ಕೊಟ್ಟಿದ್ದಿರಿ. ಆದರೆ ಯಾವುದೂ ಬದಲಾವಣೆ ಆಗಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇಂದು ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಸಾವು – ಜೀಪ್‌ ಚಾಲಕನ ವಿರುದ್ಧ FIR

    ಹೈಕಮಾಂಡ್ ನಮ್ಮ ಪರ ಇದೆ ಎನ್ನುತ್ತಿದ್ದ ಯತ್ನಾಳ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಸದ್ಯಕ್ಕೆ ವಿಜಯೇಂದ್ರ ಮೇಲುಗೈ ಸಾಧಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ನೀಡಿದ್ದ ಬಹಿರಂಗ ಹೇಳಿಕೆಗಳ ಕುರಿತು ಹೈಕಮಾಂಡ್ ಗರಂ ಆಗಿದೆ. ಇದೀಗ ಶೋಕಾಸ್ ನೊಟೀಸ್ (Show Cause Notice) ಜಾರಿಯಾದ ಹಿನ್ನೆಲೆ ಯತ್ನಾಳ್ ಶೋಕಾಸ್ ನೊಟೀಸ್‌ಗೆ ಉತ್ತರ ಕೊಡುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಉತ್ತರ ಕೊಡುತ್ತೇನೆ. ಹಾಗೆಯೇ ರಾಜ್ಯ ಬಿಜೆಪಿಯ ವಸ್ತುಸ್ಥಿತಿಯನ್ನೂ ವರಿಷ್ಠರಿಗೆ ತಿಳಿಸೋದಾಗಿ ಯತ್ನಾಳ್ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆರೋಪಿ ದರ್ಶನ್‌ಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ – ಫೋಟೋ ವೈರಲ್‌

    ಇನ್ನು ಸೋಮವಾರ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಅವರಿಗೆ ವಕ್ಫ್ ವಿರೋಧಿ ಜನಜಾಗೃತಿ ವರದಿ ಸಲ್ಲಿಸುವ ಸಲುವಾಗಿ ಭಾನುವಾರವೇ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಇಂದು (ಸೋಮವಾರ) ಉಳಿದ ರೆಬೆಲ್ ನಾಯಕರು ಯತ್ನಾಳ್‌ರನ್ನು ಕೂಡಿಕೊಳ್ಳಲಿದ್ದಾರೆ.‌ ಇದನ್ನೂ ಓದಿ: ಕರುನಾಡಿಗೂ ತಟ್ಟಿದ ಚಂಡಮಾರುತದ ಬಿಸಿ – ಈ ಜಿಲ್ಲೆಗಳಲ್ಲಿಂದು ಶಾಲಾ, ಕಾಲೇಜುಗಳಿಗೆ ರಜೆ

  • ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಬಂಧನ

    ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಬಂಧನ

    ನವದೆಹಲಿ: ಮುನ್ಸಿಪಲ್ ಕಾರ್ಪೊರೇಷನ್ (Municipal Corporation of Delhi) ನಡೆಸುತ್ತಿದ್ದ ಶಾಲೆಯ (School) ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ (Gang-rape) ನಡೆದ ಘಟನೆ ದೆಹಲಿಯಲ್ಲಿ ನಡೆದಿದೆ.

    ಆರೋಪಿ ಶಾಲಾ ಸಹಾಯಕ ಅಜಯ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಮೂವರು ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆ ಮಾ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಪರೀಕ್ಷೆಗೆ (exams) ಸಹ ಹಾಜರಾಗಿರಲಿಲ್ಲ. ಇದನ್ನೂ ಓದಿ: ಇಂದಿನಿಂದ ರಂಜಾನ್ ಉಪವಾಸ ಆಚರಣೆ – ಪ್ರಧಾನಿ ಮೋದಿ ವಿಶ್

    ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಆಕೆಯ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

     

    ತಕ್ಷಣದ ಕ್ರಮ ಕೈಗೊಳ್ಳದಿರುವ ಕಾರಣ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ತರಗತಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ (Notice) ಜಾರಿ ಮಾಡಲಾಗಿದೆ.

    ಉತ್ತರ ಪ್ರದೇಶದ (Uttar Pradesh) ಜೌನ್‍ಪುರ  (Jaunpur) ಮೂಲದ ಆರೋಪಿ ಕಳೆದ ಹತ್ತು ವರ್ಷಗಳಿಂದ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಯಲ್ಲಿ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಆರೋಪಿಗಳು ಬಾಲಕಿಯನ್ನು ಶಾಲೆಯಿಂದ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಭದ್ರತಾ ಕಾರಣಕ್ಕೆ TikTok ಬ್ಯಾನ್ ಮಾಡಿದ ಬ್ರಿಟಿಷ್ ಸಂಸತ್ತು

  • ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    ವಿಜಯಪುರ: ನನಗೆ ಯಾವುದೇ ಶೋಕಾಸ್‌ ನೋಟಿಸ್ (Show Cause Notice) ಬಂದಿಲ್ಲ. ಸುಮ್ಮನೆ ಊಹಾಪೋಹ ಹರಡಿಸಿದ್ದಾರೆ. ನಾನು ನೋಟಿಸ್ ಕೊಡುವಂತಹ ಯಾವುದೇ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Bsanagouda Patil Yatnal) ಸ್ಪಷ್ಟನೆ ನೀಡಿದ್ದಾರೆ.

    ನಾನು ಭ್ರಷ್ಟರು, ವಂಶಪಾರಂಪರ್ಯ ರಾಜಕೀಯ ಮುಂದುವರೆಸುವವರ ಬಗ್ಗೆ ಮಾತನಾಡಿದ್ದೇನೆ. ನನಗೆ ನೋಟಿಸ್ ನೀಡಿದ್ದರೆ ಇಷ್ಟೊತ್ತಿಗೆ ಬಂದಿರುತ್ತಿತ್ತು. ಯತ್ನಾಳ್ ಇಷ್ಟೆಲ್ಲ ಮಾತನಾಡಿದ್ದಾನೆ ನೋಟಿಸ್ ಯಾಕೆ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ ಎಂದು ದೂರಿದರು.

    ಹಿಂದೆ ವಾಜಪೇಯಿ ಅವರು ಇದ್ದಾಗಲು ನನಗೆ ನೋಟಿಸ್ ನೀಡಿದ್ದರು. ಆದರೆ ನಾನು ಮೂರು ತಿಂಗಳಿಗೆ ಕೇಂದ್ರ ಮಂತ್ರಿಯಾದೆ. ಇದೆಲ್ಲ ರಾಜಕೀಯ ವಿರೋಧಿಗಳ ಷಡ್ಯಂತ್ರ ಅಷ್ಟೇ. ಹೈಕಮಾಂಡ್ ನೋಟಿಸ್ ಕೊಡುವ ಯಾವುದೇ ವಾತಾವರಣ ಇಲ್ಲ. ಇದು ಚುನಾವಣೆಯ ಸಮಯ. ಕೆಲ ಜನ ಆ ರೀತಿ ಭಯ ಹುಟ್ಟಿಸುವ ಕೆಲಸ ಮಾಡುತ್ತಾರೆ. ಭಯಪಡುವಂತದ್ದು, ಅಂಜುವಂತದ್ದು ಏನಿಲ್ಲ. ನಾನು ಏನೇ ಮಾತನಾಡಿದರೂ ಪಕ್ಷದ ಹಿತದೃಷ್ಟಿಯಿಂದ ಮಾತನಾಡಿದ್ದೇನೆ. 150 ಸೀಟ್ ಬರಬೇಕು ಎನ್ನುವ ಉದ್ದೇಶದಿಂದ ಮಾತನಾಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಯತ್ನಾಳ್‌ಗೆ ಶಾಕ್‌ ಕೊಟ್ಟ ಬಿಜೆಪಿ ಹೈಕಮಾಂಡ್‌

    ನನ್ನ ವಿರೋಧಿಗಳಿಗೆ ಭಯವಾಗಿದೆ. ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಯಾವ ಭಯಕ್ಕೂ ಅಂಜುವ ಮಗ ನಾನಲ್ಲ. ನಿನ್ನೆ ವರಿಷ್ಠರೇ ಮಾತನಾಡಿದ್ದು ರಾಷ್ಟ್ರೀಯ ಕಾರ್ಯಕಾರಣಿಯಲ್ಲೇ ಬಹುದೊಡ್ಡ ನಿರ್ಣಯಗಳು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಮುಂದಿನ ಚುನಾವಣೆ ದೃಷ್ಟಿಯಿಂದ ಬಹಳಷ್ಟು ಬದಲಾವಣೆ ಮಾಡುವ ಸಾಧ್ಯತೆ ಇದ್ದು ನನ್ನ ಪರವಾಗಿಯೂ ಒಳ್ಳೆಯ ನಿರ್ಣಯ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಅರುಣ್‌ಸಿಂಗ್ ಅವರು ನನ್ನ ಜೊತೆಗೆ ಮಾತನಾಡಿಲ್ಲ. ಹೈಕಮಾಂಡ್ ವರಿಷ್ಠರೊಬ್ಬರು ಮಾತ್ರ ಮಾತನಾಡಿದ್ದಾರೆ. ನಾನು ಮಂತ್ರಿಗಿರಿಯು ಕೇಳಿಲ್ಲ, ಮುಖ್ಯಮಂತ್ರಿ ಸೀಟು ಕೇಳಿಲ್ಲ. ನಾನು ಕರ್ನಾಟಕದಲ್ಲಿ ಮಂತ್ರಿಗಿಂತ ಫವರ್ ಪುಲ್ ಆಗಿದ್ದೇನೆ. ಎಲ್ಲಾ ಮಂತ್ರಿಗಳು ನನ್ನ ಮಾತು ಕೇಳುತ್ತಾರೆ. ಎಲ್ಲಾರೂ ಪ್ರೀತಿ, ವಿಶ್ವಾಸದಿಂದ ನನ್ನೊಂದಿಗೆ ಇದ್ದಾರೆ. ನಾನು ಯಾವುದನ್ನು ನಿರೀಕ್ಷೆ ಮಾಡಲ್ಲ. ಓರ್ವ ಸಿಎಂನಂತೆ ನಾನು ಶಾಸಕನಾಗಿಯೇ ಎಲ್ಲಾ ಸಚಿವರ ಮೇಲಿದ್ದೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯತ್ನಾಳ್‌ಗೆ ಶಾಕ್‌ ಕೊಟ್ಟ ಬಿಜೆಪಿ ಹೈಕಮಾಂಡ್‌

    ಯತ್ನಾಳ್‌ಗೆ ಶಾಕ್‌ ಕೊಟ್ಟ ಬಿಜೆಪಿ ಹೈಕಮಾಂಡ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯತ್ನಾಳ್‌ಗೆ ಶಾಕ್‌ ಕೊಟ್ಟ ಬಿಜೆಪಿ ಹೈಕಮಾಂಡ್‌

    ಯತ್ನಾಳ್‌ಗೆ ಶಾಕ್‌ ಕೊಟ್ಟ ಬಿಜೆಪಿ ಹೈಕಮಾಂಡ್‌

    ಬೆಂಗಳೂರು: ಶಾಸಕ ಯತ್ನಾಳ್ (Bsanagouda Patil Yatnal) ಇತ್ತೀಚಿನ ಹೇಳಿಕೆಗಳಿಂದ ಕೊನೆಗೂ ಬಿಜೆಪಿ (BJP) ಹೈಕಮಾಂಡ್ ಎಚ್ಚೆತ್ತಿದೆ. ಮುರುಗೇಶ್‌ ನಿರಾಣಿ (Murugesh R Nirani) ವಿರುದ್ಧ ಯತ್ನಾಳ್ ಬಳಸಿದ ಪಿಂಪ್ ಪದದಿಂದಾಗಿ ಭಾರೀ ಮುಜುಗರಕ್ಕೆ ಒಳಗಾಗಿರುವ ಹೈಕಮಾಂಡ್ ಕಾರಣ ಕೇಳಿ ಶೋಕಾಸ್ ನೋಟಿಸ್‌ ಜಾರಿ ಮಾಡಿದೆ.

    ಕೇಂದ್ರ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್‌ (Show Cause Notice) ಕೊಟ್ಟಿದ್ದು, 10 ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ. 2 ದಿನಗಳ ಹಿಂದೆಯಷ್ಟೇ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಇನ್ನೂ ನೀಡಿಲ್ಲ ಯಾಕೆ – ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

    ಈ ಮಧ್ಯೆ, ಸೂಕ್ತಕಾಲದಲ್ಲಿ ಯತ್ನಾಳ್ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತದೆ. ಟಿಕೆಟ್ ನೀಡುವಾಗ ಎಲ್ಲಾ ವಿಚಾರ ಪರಿಗಣನೆ ಆಗುತ್ತದೆ. ಜನನೂ ಪಾಠ ಕಲಿಸುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಎಂಗೆ ಕಳಪೆ ಗುಣಮಟ್ಟದ ಟೀ ನೀಡಿದ್ದ ಅಧಿಕಾರಿಗೆ ಶೋಕಾಸ್ ನೋಟಿಸ್

    ಸಿಎಂಗೆ ಕಳಪೆ ಗುಣಮಟ್ಟದ ಟೀ ನೀಡಿದ್ದ ಅಧಿಕಾರಿಗೆ ಶೋಕಾಸ್ ನೋಟಿಸ್

    ಭೋಪಾಲ್: ಮುಖ್ಯಮಂತ್ರಿಗೆ ಕಳಪೆ ಗುಣಮಟ್ಟದ ಹಾಗೂ ಬಿಸಿ ಆರಿದ ಚಹಾವನ್ನು ನೀಡಿದ್ದ ಕಿರಿಯ ನಾಗರಿಕ ಸರಬರಾಜು ಅಧಿಕಾರಿಯೊಬ್ಬರಿಗೆ ಶೋಕಾಸ್ ನೋಟಿಸ್ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಛತ್ತೀರ್‍ಪುರ ಜಿಲ್ಲೆಯ ಖಜುರಾಹೊಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಿರಿಯ ಅಧಿಕಾರಿಯೊಬ್ಬರು ಕಳಪೆ ಟೀ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚತ್ತರ್‌ಪುರ, ರಾಜನಗರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಡಿಪಿ ದ್ವಿವೇದಿ ಅವರು, ವಿಐಪಿ ಶಿಷ್ಟಾಚಾರ ಉಲ್ಲಂಘಿಸಿದ್ದಕ್ಕೆ ಕಿರಿಯ ಅಧಿಕಾರಿ ರಾಕೇಶ್ ಕನೌಹಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

    ನೋಟಿಸ್ ಪ್ರಕಾರ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮಾವಾರ ಖಜುರಾಹೊ ವಿಮಾನ ನಿಲ್ದಾಣದಲ್ಲಿ ನಾಗರಿಕ ಸಂಸ್ಥೆ ಚುನಾವಣೆ ಪ್ರಚಾರದ ನಿಮಿತ್ತ ಬಂದಿದ್ದರು. ಈ ವೇಳೆ ಸಿಎಂ ಹಾಗೂ ಇತರ ಅತಿಥಿಗಳಿಗೆ ಚಹಾ ಮತ್ತು ಉಪಹಾರವನ್ನು ನೀಡಲಾಗಿತ್ತು. ಆದರೆ ಚಹಾ ಕಳಪೆ ಮಟ್ಟದಿಂದ ಕೂಡಿದ್ದು, ಬಿಸಿ ಇರಲಿಲ್ಲ. ಇದನ್ನೂ ಓದಿ: ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ವಾಪಸ್

    ಖಜುರಾಹೊ ವಿಮಾನ ನಿಲ್ದಾಣದಲ್ಲಿ ಸಿಎಂ ಹಾಗೂ ಇತರ ಅತಿಥಿಗಳಿಗೆ ಚಹಾವನ್ನು ನೀಡಿರುವುದು ಜೆಎಸ್‍ಒ ವಹಿಸಿಕೊಂಡಿತ್ತು. ಈ ರೀತಿ ಕಳಪೆ ಮಟ್ಟದ ಚಹಾ ನೀಡಿರುವುದು ಜಿಲ್ಲಾಡಳಿತಕ್ಕೆ ಮುಜುಗರದ ವಿಷಯವಾಗಿದೆ. ಮೂರು ದಿನಗಳಲ್ಲಿ ಉತ್ತರವನ್ನು ಕಳುಹಿಸಲು ಜೆಎಸ್‍ಒಗೆ ಆದೇಶಿಸಲಾಗಿದೆ. ಇಲ್ಲದಿದ್ದರೆ ನಿಮ್ಮ ವಿರುದ್ಧ ಏಕಪಕ್ಷೀಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮಳೆ ನಿಲ್ಲಲು ಶೃಂಗೇರಿ ಜಗದ್ಗುರುಗಳ ಮೊರೆ ಹೋದ ಬಿಜೆಪಿ, ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • ವಿಮಾನಗಳಲ್ಲಿ ತಾಂತ್ರಿಕ ದೋಷ – ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌

    ವಿಮಾನಗಳಲ್ಲಿ ತಾಂತ್ರಿಕ ದೋಷ – ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌

    ನವದೆಹಲಿ: ಕಳೆದ 18 ದಿನಗಳಲ್ಲಿ ಸ್ಪೈಸ್‌ಜೆಟ್‌ ಸಂಸ್ಥೆಯ ವಿಮಾನಗಳಲ್ಲಿ ನಿರಂತರವಾಗಿ ತಾಂತ್ರಿಕ ದೋಷಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಕಾರಣ ಕೇಳಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶೋಕಾಸ್‌ ನೋಟಿಸ್‌ ನೀಡಿದೆ.

    ಸಂಸ್ಥೆಯ ವಿಮಾನಗಳಲ್ಲಿ ನಿರಂತರ ತಾಂತ್ರಿಕ ದೋಷಗಳು ಕಂಡುಬರುತ್ತಿವೆ. ಈ ಸಂಬಂಧ ಸ್ಪೈಸ್‌ಜೆಟ್‌ ಸಂಸ್ಥೆಗೆ ಡಿಜಿಸಿಎ ನೋಟಿಸ್‌ ನೀಡಿದೆ. ಅಲ್ಲದೇ ಮೂರು ವಾರಗಳಲ್ಲಿ ಉತ್ತರ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದೆ. ಇದನ್ನೂ ಓದಿ: ಸ್ಪೈಸ್‍ಜೆಟ್‍ನಲ್ಲಿ ಮುಂದುವರಿದ ತಾಂತ್ರಿಕ ದೋಷ: ಕಾಂಡ್ಲಾದಿಂದ ಬಂದ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ

    ನೋಟಿಸ್‌ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಡಿಜಿಸಿಎ, ಸುರಕ್ಷತೆ, ಸಮರ್ಥ ಹಾಗೂ ವಿಶ್ವಾಸಾರ್ಹ ವಿಮಾನ ಸೇವೆಗಳನ್ನು ಒದಗಿಸುವಲ್ಲಿ ಸ್ಪೈಸ್‌ಜೆಟ್‌ ವಿಫಲವಾಗಿದೆ. ಹೀಗಾಗಿ ಕಂಪನಿಗೆ ನೋಟಿಸ್‌ ನೀಡಲಾಗಿದೆ. ಸೂಕ್ತ ನಿರ್ವಹಣೆ ಇಲ್ಲದಿರುವುದು ಸುರಕ್ಷತಾ ಕ್ರಮಗಳ ಪಾಲನೆಯಲ್ಲಿ ಲೋಪ ಕಂಡುಬರಲು ಪ್ರಮುಖ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

    ವರದಿಯಾಗುತ್ತಿರುವ ಬಹಳಷ್ಟು ಘಟನೆಗಳು ಅಷ್ಟು ಗಂಭೀರವೇನಲ್ಲ. ಇದು ಪ್ರತಿ ಏರ್‌ಲೈನ್‌ನಲ್ಲೂ ಸಂಭವಿಸುತ್ತದೆ. ಸ್ಪೈಸ್‌ಜೆಟ್‌ನ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಿವೆ ಎಂದು ವಿಮಾನಯಾನ ನಿಯಂತ್ರಕರು ಭಾವಿಸಿದರೆ, ನಾವು ಅವುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಸ್ಪೈಸ್‌ಜೆಟ್‌ ಸಿಎಂಡಿ ಅಜಯ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ

    Live Tv
    [brid partner=56869869 player=32851 video=960834 autoplay=true]