ಬೆಂಗಳೂರು: ಡಿಕೆ ಶಿವಕುಮಾರ್ ವಿರುದ್ಧವೇ ಭ್ರಷ್ಟಾಚಾರದ ಆರೋಪ ಮಾಡಿದ ಮಾಧ್ಯಮ ಸಂಯೋಜಕ ಸಲೀಂ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ಸಿನಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು ಉಗ್ರಪ್ಪ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ ಈ ವಿಚಾರವನ್ನು ತಿಳಿಸಿದ್ದಾರೆ.
ಸಲೀಂ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಅವರ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳವರೆಗೆ ಉಚ್ಚಾಟಿಸಲಾಗಿದೆ. ಇದನ್ನೂ ಓದಿ: ಪರ್ಸಂಟೇಜ್ ಆರೋಪ – ನನಗೂ, ಪಕ್ಷಕ್ಕೂ ಸಂಬಂಧವಿಲ್ಲದ ವಿಚಾರ ಅಂದ್ರು ಡಿಕೆಶಿ
ಉಗ್ರಪ್ಪಗೆ ನೋಟಿಸ್:
ಡಿಕೆ ಶಿವಕುಮಾರ್ ಅವರ ಘನತೆ ಗೌರವವಗಳಿಗೆ ಕುಂದುಂಟುವಾಗುವಂತೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಾರ ಹಾನಿ ಉಂಟಾಗುವ ಅಪಾರ ವಿಚಾರಗಳನ್ನು ಮಾತನಾಡಿದ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಈ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನದ ಒಳಗಡೆ ನೀಡಬೇಕು ಎಂದು ನೋಟಿಸಿನಲ್ಲಿ ಸೂಚಿಸಲಾಗಿದೆ.
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ‘ನ ದೈನಂ ನ ಪಲಾಯನಮ್’ ಎಂದು ಪೋಸ್ಟ್ ಮಾಡಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್‍ರವರು ವಾಗ್ದಾಳಿಯ ಸುರಿಮಳೆಯನ್ನೇ ಸುರಿಸಿದ್ದರು. ಅಲ್ಲದೆ ಡಿಸೆಂಬರ್, ಜನವರಿ ಎರಡು ತಿಂಗಳಿನಲ್ಲಿಯೇ ಸಿಎಂ ಯಡ್ಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ. ಬೇರೆಯವರು ನೂತನ ಸಿಎಂ ಆಗುತ್ತಾರೆ ಎಂದೆಲ್ಲಾ ಹೇಳಿಕೆ ನೀಡಿದ್ದರು.
ಇಷ್ಟೆಲ್ಲಾ ಹೇಳಿಕೆ ಬಳಿಕ ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಹೀಗಿದ್ದರೂ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸತ್ಯಮೇವ ಜಯತೆ, ನ ದೈನಂ ನ ಪಲಾಯನಮ್ ಎಂದು ಪೋಸ್ಟ್ ಮಾಡಿದ್ದಾರೆ.
ಸತ್ಯ ಗೆದ್ದೇ ಗೆಲ್ಲುತ್ತೆ, ಇದರಿಂದ ಪಲಾಯನ ಆಗುವ ಪ್ರಶ್ನೆಯೇ ಇಲ್ಲ ಎಂದು ಪೋಸ್ಟ್ ಮಾಡಿ ತಮ್ಮ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ಇದರಿಂದ ಮತ್ತಷ್ಟು ಬಿಜೆಪಿಯಲ್ಲಿ ಸಂಚಲನ ಮೂಡಿದ್ದು, ಯತ್ನಾಳ್ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.
ಸಿಎಂ ಯಡಿಯೂರಪ್ಪ ನಾಯಕತ್ವದ ವಿರುದ್ಧ ಹೇಳಿಕೆ, ಸರ್ಕಾರದ ವಿರುದ್ಧ ಬಹಿರಂಗ ಹೇಕೆ ಕುರಿತು ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಈಗ ಅಳೆದು ತೂಗಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ನೀಡಿದೆ.
ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಉಲ್ಲೇಖಿಸಿ ನೋಟೀಸ್ ಜಾರಿ ಮಾಡಿದೆ. ನಾಯಕತ್ವ ವಿಚಾರ, ಸಿಎಂ ಬದಲಾವಣೆ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಟೀಕೆಗಾಗಿ ಶೋಕಾಸ್ ನೋಟಿಸ್ ನೀಡಲಾಗಿದೆ.
ಶಾಸಕ ಬಸನಗೌಡ ಯತ್ನಾಳ್ ಗೆ ಮೂಗುದಾರ ಹಾಕುವಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದರು. ಕೇಂದ್ರ ಶಿಸ್ತು ಸಮಿತಿ ಕ್ರಮಕ್ಕೆ ಸಿಎಂ ಆಗ್ರಹಿಸಿದ್ದರು. ನಾಯಕತ್ವ ಬದಲಾವಣೆ ವಿಚಾರದಲ್ಲಿ ಪದೇ ಪದೇ ಮಾತನಾಡುತ್ತಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಯತ್ನಾಳ್ ಬಿಜೆಪಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಹೈಕಮಾಂಡ್ ಬಿ ಫಾರಂ ನೀಡಿದೆ. ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಯೇ ನಿರ್ಧರಿಸಬೇಕು. ಹೀಗಾಗಿ ರಾಜ್ಯ ಬಿಜೆಪಿ ಇಷ್ಟು ದಿನ ಕೈ ಕಟ್ಟಿ ಕುಳಿತಿತ್ತು.
ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಗೆ ಒಟ್ಟು ಎರಡು ಸಲ ಶೋಕಾಸ್ ನೋಟಿಸ್ ನೀಡಿದಂತಾಗಿದೆ. 2019ರ ಅಕ್ಟೋಬರ್‍ನಲ್ಲಿ ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಬೇಸರದಿಂದ ದೆಹಲಿ ವರಿಷ್ಠರ ವಿರುದ್ಧವೇ ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಕೇಂದ್ರದ ಶಿಸ್ತು ಸಮಿತಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಈ ವೇಳೆ ನಾನು ನನ್ನ ಇತಿಮಿತಿಯಲ್ಲೇ ಮಾತಾಡಿದ್ದೇನೆ, ಯಾರ ವಿರುದ್ಧವೂ ಮಾತಾಡಿಲ್ಲ, ಜನರ ಬವಣೆ ನೋಡಿ ಮಾತಾಡಿದೆ ಎಂದು ಯತ್ನಾಳ್ ಕಾರಣ ಕೊಟ್ಟಿದ್ದರು.
ಮುಂಬೈ: ಜೀನ್ಸ್ ಧರಿಸಿ ಶಾಲೆಗೆ ಬಂದಿದ್ದರಿಂದ ಐದು ಮಂದಿ ಟೀಚರ್ಸ್ ಗೆ ಶೋಕಾಸ್ ನೋಟಿಸ್ ನೀಡಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದೆ.
ವಿಕ್ರಮ್ ಗರ್ ತಹಸಿಲ್‍ನ ಸರ್ಕಾರಿ ಶಾಲೆಯ ಟೀಚರ್ಸ್‍ಗೆ ಶಿಕ್ಷಣ ಇಲಾಖೆ ನೋಟಿಸ್ ನೀಡುವ ಮೂಲಕ ಸೂಚನೆ ಕೊಟ್ಟಿದೆ. ಕೆಲವು ದಿನಗಳ ಹಿಂದೆಯಷ್ಟೇ ಅಲ್ಲಿನ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿತ್ತು. ಅದರಲ್ಲಿ ಶಿಕ್ಷಕರು ಯೋಗ್ಯ ಉಡುಪುಗಳಲ್ಲಿ ಶಾಲೆಗೆ ಬರುವಂತೆ ತಿಳಿಸಲಾಗಿತ್ತು.
ಆದರೆ ಇದೀಗ ಟೀಚರ್ ಗಳು ಜೀನ್ಸ್ ಧರಿಸಿದ್ದರಿಂದ ಸರ್ಕಾರದ ಆದೇಶ ಮೀರಿರುವ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಲಾಗಿದೆ. ಇದರ ಪ್ರಕಾರ, 2 ದಿನಗಳಲ್ಲಿ ಟೀಚರ್ಸ್ ತಾವು ಮಾಡಿದ ತಪ್ಪಿಗೆ ಉತ್ತರ ನೀಡಬೇಕಾಗಿದೆ. ಒಂದು ವೇಳೆ ಸಮಯಕ್ಕೆ ಸರಿಯಾಗಿ ಉತ್ತರಿಸದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.
ಕೆಲ ದಿನಗಳ ಹಿಂದೆ ಮಹಾರಾಷ್ಟ್ರ ಸರ್ಕಾರವು ಸರ್ಕಾರಿ ಅಧಿಕಾರಿಗಳು ಹಾಗೂ ಉದ್ಯೋಗಿಗಳು ಯಾವ ರೀತಿಯ ಉಡುಪುಗಳನ್ನು ಧರಿಸಿ ಕಚೇರಿಗೆ ಬರಬೇಕು ಎಂಬುದರ ಕುರಿತು ಸುತ್ತೋಲೆ ಹೊರಡಿಸಿತ್ತು. ಆ ಸಂದರ್ಭದಲ್ಲಿ ಸರ್ಕಾರ ಭಾರೀ ಟೀಕೆಗೆ ಗುರಿಯಾಗಿತ್ತು.
ಸರ್ಕಾರದ ಸುತ್ತೋಲೆಯಲ್ಲಿ ಏನಿತ್ತು..?
* ಟೀಚರ್ಸ್ ಮೈಗೆ ಅಂಟಿಕೊಳ್ಳುವಂತಹ, ಲೆಹೆಂಗಾ ಮುಂತಾದ ಬಣ್ಣ ಬಣ್ಣದ ಬಟ್ಟೆಗಳನ್ನು ಧರಿಸುವಂತಿಲ್ಲ.
* ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಾಲೆಯಲ್ಲಿ ಶಿಕ್ಷಕರು ಜೀನ್ಸ್, ಟೀ ಶರ್ಟ್ ಧರಿಸುವಂತಿಲ್ಲ.
* ಅಧಿಕಾರಿಗಳು ಹಾಗೂ ನೌಕರರು ವಾರಕ್ಕೆ ಒಂದು ಬಾರಿಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಬೇಕು.
* ಮಹಿಳೆಯರು ಸೀರೆ, ಸಲ್ವಾರ್, ಕುರ್ತಾ, ಪುರುಷರು ಶರ್ಟ್ ಮತ್ತು ಪ್ಯಾಂಟ್ ಧರಿಸಬೇಕು.
ಧರಿಸೋ ಚಪ್ಪಲಿಗೂ ನಿಯಮ:
* ಸರ್ಕಾರಿ ಕಚೇರಿಗಳಲ್ಲಿ ಸ್ಲಿಪ್ಪರ್ ಧರಿಸುವಂತಿಲ್ಲ.
* ಮಹಿಳೆಯರು ಮತ್ತು ಪುರುಷರು ಚಪ್ಪಲಿ ಅಥವಾ ಬೂಟುಗಳನ್ನು ಧರಿಸಬೇಕು.
* ಸ್ಲಿಪ್ಪರ್ ಗಳನ್ನು ಕಚೇರಿ ಅಥವಾ ಶಾಲೆಯಲ್ಲಿ ಬಳಸಬಾರದು ಎಂಬ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ.
ನವದೆಹಲಿ: ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಶೋಕಾಸ್ ನೋಟಿಸ್ ನೀಡಿದೆ. ಹೆಗ್ಡೆ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದ್ದು ನಾಳಿನ ಸಂಸದೀಯ ಸಭೆಗೆ ಆಗಮಿಸದಂತೆ ತಾಕೀತು ಮಾಡಿದೆ.
ಇಂದು ಬೆಳಗ್ಗೆ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಹೈಕಮಾಂಡ್ ಮಾಧ್ಯಮಗಳ ಮೂಲಕ ಬೇಷರತ್ ಕ್ಷಮೆ ಕೇಳಲು ಸೂಚಿಸಿತ್ತು. ಅನಂತ ಕುಮಾರ್ ಕ್ಷಮೆಯಾಚಿಸದ ಹಿನ್ನೆಲೆ ಶೋಕಾಸ್ ನೋಟಿಸ್ ನೀಡಿದ್ದು, ಬಲು ಅಪರೂಪ ಎನ್ನುವಂತೆ ಸಂಸದೀಯ ಸಭೆಗೆ ನಿಷೇಧ ಹೇರಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅನಂತ್ ಕುಮಾರ್, ಬ್ರಿಟಿಷರ ಬೆಂಬಲದಿಂದ ನಡೆದ ಪೂರ್ವ ನಿಯೋಜಿತ ನಾಟಕದಲ್ಲಿ ಗಾಂಧಿ ಪಾತ್ರಧಾರಿಯಾಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಈ ನಾಯಕರನ್ನು ಪೊಲೀಸರು ಎಂದು ಮುಟ್ಟಿಲ್ಲ. ಬ್ರಿಟಿಷರ ಅನುಮತಿಯಿಂದ ಸತ್ಯಾಗ್ರಹ, ಪ್ರತಿಭಟನೆ ನಾಟಕ ನಡೆಸಲಾಗಿತ್ತು. ಇದು ನಿಜವಾದ ಸ್ವಾತಂತ್ರ್ಯ ಹೋರಾಟವೇ ಅಲ್ಲ, ಅನುಕೂಲ ಸ್ವಾತಂತ್ರ್ಯ ಚಳುವಳಿ ಎಂದು ಗಾಂಧಿಯನ್ನು ಟೀಕಿಸಿದ್ದರು.
ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಗಾಂಧಿ ಅವರು ನಡೆಸಿದ ಅಮರಣಾಂತ ಉಪವಾಸ ಸತ್ಯಾಗ್ರಹವೇ ಕಾರಣ ಎಂದು ಬಿಂಬಿಸಲಾಗಿದೆ. ಆದರೆ ಇದು ನಿಜವಲ್ಲ ಸತ್ಯಾಗ್ರಹದಿಂದ ಬ್ರಿಟಿಷರು ಭಾರತವನ್ನು ತೊರೆಯಲಿಲ್ಲ. ಭಾರತದ ಇತಿಹಾಸ ಓದಿದರೆ ನನ್ನ ರಕ್ತಕುದಿಯುತ್ತದೆ. ಇಂಥವರನ್ನು ಹೇಗೆ ಮಹಾತ್ಮ ಎಂದು ಕರೆಯಲಾಗುತ್ತದೆ ಎಂದು ತಮ್ಮ ಭಾಷಣದಲ್ಲಿ ಮಹಾತ್ಮಗಾಂಧಿ ವಿರುದ್ಧ ಅನಂತಕುಮಾರ್ ವಾಗ್ದಾಳಿ ನಡೆಸಿದ್ದರು.
ಅನಂತಕುಮಾರ್ ಹೆಗ್ಡೆ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಜೆಡಿಎಸ್ ವಲಯದಲ್ಲಿ ತೀವ್ರ ಟೀಕೆಗೆ ಗ್ರಾಸವಾಗಿತ್ತು. ಸ್ವಪಕ್ಷಿಯರಿಂದಲೇ ಅಸಮಾಧಾನಕ್ಕೆ ಕಾರಣವಾಗಿದ್ದ ಈ ಹೇಳಿಕೆ ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ಮುಜುಗರ ತಂದಿಟ್ಟಿತ್ತು.
ಬೆಂಗಳೂರು: ಪ್ರವಾಹ ಸಂತ್ರಸ್ತರ ಪರವಾಗಿ ನಾನು ಗಟ್ಟಿ ಧ್ವನಿ ತೆಗೆದಿದ್ದು, ಯಾರಿಂದಲೂ ನನ್ನ ಧ್ವನಿಯನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಡಕ್ ಆಗಿ ಹೇಳಿದ್ದಾರೆ.
ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆ ಕಾರ್ಯ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದ ಯತ್ನಾಳ್ ಅವರಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರವಾಹ ಸಂತ್ರಸ್ತರ ಪರ ಇದ್ದು, ಜನಪ್ರತಿನಿಧಿಯಾಗಿ ಮಾಡಬೇಕಾದ ಕಾರ್ಯವನ್ನು ಮಾಡುತ್ತಿದ್ದೇನೆ. ಜಗತ್ತಿನ ಯಾವ ಶಕ್ತಿಯೂ ನನ್ನ ಧ್ವನಿಯನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ನನಗೆ ಪಕ್ಷದಲ್ಲಿ ಅಟಲ್ ಹಾಗೂ ಅಡ್ವಾಣಿ ಅವರೇ ಅದರ್ಶವಾಗಿದ್ದು, ನಾನು ಯಾರಿಗೂ ತಲೆಬಾಗುವುದಿಲ್ಲ ಎಂದರು.
ಕಣ್ಣೀರು ಹಾಕುತ್ತಿರುವ ಜನರ ಧ್ವನಿಯಾಗಿ ನಾನು ಮಾತನಾಡಿದ್ದೇನೆ. ಯಾವುದೇ ಹುದ್ದೆ ಅಥವಾ ಅಧಿಕಾರಕ್ಕೆ ಆಸೆ ಬಿದ್ದು ಈ ರೀತಿ ಮಾತನಾಡಿಲ್ಲ. ಕನ್ನಡಿಗರ ಕಣ್ಣೀರು ದೂರ ಮಾಡಿ ಎಂದು ಪ್ರಧಾನಿಗಳ ಬಳಿ ಮನವಿ ಮಾಡಿದ್ದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದ್ರೆ ಹೇಗೆ? ಇದು ಪಕ್ಷ ವಿರೋಧಿ ಕೆಲಸವಾಗಿದ್ದರೆ ಅದನ್ನು ನಾಡಿನ ಜನತೆಯೇ ನಿರ್ಧಾರ ಮಾಡುತ್ತಾರೆ. ಭವಿಷ್ಯದಲ್ಲಿ ಎಲ್ಲವೂ ತಿಳಿಯಲಿದ್ದು, ಅಂತಿಮವಾಗಿ ನನಗೆ ಮತದಾನ ಮಾಡುವುದು ಜನರೇ ಆಗಿದ್ದು, ಅವರೇ ತೀರ್ಮಾನಿಸುತ್ತಾರೆ ಎಂದರು.
ನನ್ನ ಬಗ್ಗೆ ಯಾರೋ ಪ್ರಧಾನಿಗಳಿಗೆ ಹಾಗೂ ರಾಷ್ಟ್ರೀಯ ಅಧ್ಯಕ್ಷರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಅಷ್ಟೇ. ನಿನ್ನೆ ರಾತ್ರಿ ನಮ್ಮ ನಾಯಕರು ಪರಿಹಾರ ಕೇಳಲು ರಾಷ್ಟ್ರೀಯ ನಾಯಕರ ಎದುರು ತೆರಳಿದ್ದರು ಎಂದು ತಿಳಿದಿದ್ದೆ. ಆದರೆ ಯತ್ನಾಳ್ ವಿರುದ್ಧ ದೂರು ನೀಡಲು ತೆರಳಿದ್ದರು ಎಂದು ಅರ್ಥವಾಗುತ್ತಿದೆ ಎಂದು ಹೇಳಿದರು.
ಡಿವಿಎಸ್ ಕೊಡುಗೆ ಏನು?
ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಜನನಾಯಕರಾಗಿ ಮಾಡಿದ್ದು ಜನರು. ಕನ್ನಡ ನಾಡಿನ ಜನರ ಕಷ್ಟವನ್ನು ಪಬ್ಲಿಕ್ ಟಿವಿ ಜನರ ಮುಂದಿಡುತ್ತಿದ್ದು, ಅದೇ ರೀತಿ ಜನಪ್ರತಿನಿಧಿಯಾಗಿ ನನ್ನ ಕರ್ತವ್ಯ ಮಾಡಿದ್ದೇನೆ. ಸೂಲಿಬೆಲೆ ಅವರ ವಿರುದ್ಧ ದೇಶದ್ರೋಹಿ ಎಂಬ ಪದ ಪ್ರಯೋಗ ಮಾಡಿದ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಯಾವ ಕ್ರಮಕೈಗೊಂಡಿದ್ದಾರೆ. ಡಿವಿಎಸ್ ಅವರು ನಾಡಿಗೆ ಯಾವ ಕೊಡುಗೆ ನೀಡಿದ್ದಾರೆ? ಕೂಡಲೇ ಅವರನ್ನು ಸಂಪುಟದಿಂದ ಕೈ ಬಿಡುವ ಕಾರ್ಯವನ್ನು ಪಕ್ಷದ ನಾಯಕರು ಮಾಡಬೇಕಿದೆ. ಸೂಲಿಬೆಲೆ ಅವರ ತಪ್ಪಾದರೂ ಏನು ಮಾಡಿದ್ದಾರೆ. ಪಕ್ಷದ ಶಿಸ್ತು ಶಿಸ್ತು ಎಂದು ಹೇಳಿ ಜನರ ನೋವಿಗೂ ಧ್ವನಿಯಾಗದೇ ಇದ್ದಾರೆ ಹೇಗೆ ಎಂದು ಪ್ರಶ್ನಿಸಿದರು.
ಬಿಜೆಪಿ ಪಕ್ಷದ ಕಾರ್ಯಕರ್ತರು ಬಲಿಷ್ಠವಾಗಿದ್ದು, ನನಗೆ ನೀಡಿರುವ ನೋಟಿಸ್‍ಗೆ ಸರಿಯಾದ ಉತ್ತರ ನೀಡುತ್ತೇನೆ. ವಿನಃ ಅವರು ನೀಡಿದ ನೋಟಿಸ್ ಕೂಡಲೇ ಕ್ಷಮೆ ಕೋರಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ರಾಜ್ಯ ಕಾಂಗ್ರೆಸ್ ಟ್ರಬಲ್ ಶೂಟರ್, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ (ಐಟಿ) ಶೋಕಾಸ್ ನೋಟಿಸ್ ಜಾರಿ ಮಾಡಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಡಿ.ಕೆ.ಶಿವಕುಮಾರ್ ಅವರು ಬೇರೆಯವರ ಹೆಸರಿನಲ್ಲಿ 36 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿದ್ದಾರೆಂದು ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಈ ಪ್ರಕಣದ ಕುರಿತು ವಿಚಾರಣೆ ನಡೆಸುವ ಉದ್ದೇಶದಿಂದ ಐಟಿ ಅಧಿಕಾರಿಗಳು ಶೋಕಾಸ್ ನೋಟಿಸ್ ನೀಡಲಿದ್ದಾರೆ. ಶೋಕಾಸ್ ನೋಟಿಸ್ ಜಾರಿಯಾದರೆ ಸಚಿವರು ನವದೆಹಲಿಯ ಆದಾಯ ತೆರಿಗೆ ಇಲಾಖೆ ಕೇಂದ್ರ ಕಚೇರಿಗೆ ಬಂದು ಉತ್ತರ ನೀಡಬೇಕಾಗುತ್ತದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಮನೆಯಲ್ಲಿ ಸಿಕ್ಕಿತು 7.5 ಕೋಟಿ ರೂ. ಹಣ: ಮುಂದೆ ಈ ನಾಯಕರ ಮನೆ ಮೇಲೆ ದಾಳಿ?
ಏನಿದು ಪ್ರಕರಣ?:
ಐಟಿ ಅಧಿಕಾರಿಗಳು 2017 ಆಗಸ್ಟ್ 1ರಂದು ಸಚಿವ ಡಿಕೆ ಶಿವಕುಮಾರ್ ಆಪ್ತರು, ಸಂಬಂಧಿಕರು, ಪಾಲುದಾರಿಕೆ ಹೊಂದಿರುವ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದರು. ಚೆನ್ನೈ, ದೆಹಲಿ, ಬೆಂಗಳೂರು, ಮೈಸೂರು, ಕನಕಪುರದ 60 ಸ್ಥಳಗಳ ಮೇಲೆ ದಾಳಿ ನಡೆದಿತ್ತು. ಚೆನ್ನೈ ಮೂಲದ ಎಲ್‍ಇಡಿ ಕಂಪನಿಯೊಂದರಲ್ಲಿ ಡಿಕೆಶಿ ಪಾಲುದಾರಿಕೆ ಇರುವ ಬಗ್ಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಆ ಕಂಪನಿಯನ್ನೂ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ ಸಚಿವರು 36 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿದ್ದಾರೆಂದು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಸ್ಯಾಂಡಲ್‍ವುಡ್ ಗೆ ಐಟಿ ಶಾಕ್, ಇತ್ತ ಡಿಕೆಶಿ ತಾಯಿಗೂ ಶಾಕ್
ಈ ಸಂಬಂಧ 2017 ನವೆಂಬರ್ 6ರಂದು ಸಚಿವರ ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಉತ್ತರಿಸಿದ್ದರು. ಈ ವೇಳೆ ಸರಿಯಾದ ಉತ್ತರ ಸಿಗದೇ ಇದ್ದ ಕಾರಣ ವಿಚಾರಣೆ ಮುಂದುವರಿದಿತ್ತು. ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಡಿಕೆ ಶಿವಕುಮಾರಸ್ ಅವರ ಮನೆ ಹಾಗೂ ಕೋಡಿಹಳ್ಳಿಯ ಡಿ.ಕೆ.ಸುರೇಶ್ ಮನೆಗೆ ನಾಲ್ಕು ಜನ ಅಧಿಕಾರಿಗಳು ಜನವರಿ 2ರಂದು ಭೇಟಿ ನೀಡಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಚಿವ ಡಿ.ಕೆ.ಶಿವಕುಮಾರ್ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ತೆರಳಿದ್ದರು. ಬಳಿಕ ತಾಯಿ ಗೌರಮ್ಮ ಆದಾಯ ತೆರಿಗೆ ಕಚೇರಿಗೆ ಆಗಮಿಸಿ ಉತ್ತರ ನೀಡಿದ್ದರು.
ಬೆಂಗಳೂರು: ಬಿಜೆಪಿ ಪಕ್ಷ ನಿಲುವಿಗೆ ವಿರುದ್ಧವಾಗಿ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದ ಹೊಸಪೇಟೆಯ ಶಾಸಕ ಆನಂದ್ ಸಿಂಗ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಶಾಸಕ ಆನಂದ್ ಸಿಂಗ್ ಇಂದು ಬೆಳಗ್ಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಬಿಜೆಪಿ ನಾಯಕರಿಗೆ ಮುಜುಗರಕ್ಕೆ ಕಾರಣವಾಗಿತ್ತು. ಈ ಕುರಿತು 7 ದಿನಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಶಂಕರಪ್ಪ ಅವರು ನೋಟಿಸ್ ಜಾರಿ ಮಾಡಿದ್ದಾರೆ.
ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಮಾತ್ರವಲ್ಲೇ ಅದನ್ನು ಬಹಿರಂಗವಾಗಿ ಸಮರ್ಥನೆ ಮಾಡಿಕೊಂಡ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ಆನಂದ್ ಸಿಂಗ್, ಎಲ್ಲ ಜಯಂತಿಯಲ್ಲಿ ನಾನು ಪಾಲ್ಗೊಳ್ಳುತ್ತೇನೆ. ಎಲ್ಲ ಜಯಂತಿಯಂತೆ ಟಿಪ್ಪು ಜಯಂತಿ ಕೂಡ ಒಂದು. ವಿಜಯನಗರ ಕ್ಷೇತ್ರದಲ್ಲಿ ಭೇದಭಾವವಿಲ್ಲ. ಕ್ಷೇತ್ರದ ಜನರ ಇಚ್ಛೆಯಂತೆ ಪಾಲ್ಗೊಂಡಿದ್ದೇನೆ. ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಬಾರದು ಎಂದು ಯಾರು ಹೇಳಿಲ್ಲ. ಕೃಷ್ಣದೇವರಾಯರ ಆಳ್ವಿಕೆಯಲ್ಲಿ ಎಲ್ಲರನ್ನು ಒಂದೇ ರೀತಿ ನೋಡಲಾಗುತ್ತಿತ್ತು. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು.
ಹೊಸಪೇಟೆಯಲ್ಲಿ ಸರ್ಕಾರದಿಂದ ಆಚರಿಸುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಆನಂದ ಸಿಂಗ್ ಅನಾರೋಗ್ಯದ ಮಧ್ಯೆಯೂ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದರು.
ಬಳ್ಳಾರಿಯ ಸಂಸದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರ ಪರಮಾಪ್ತನಾಗಿರುವ ಪಾಲಿಕೆಯ ಸದಸ್ಯ ಗೋವಿಂದರಾಜಲು ನೇತೃತ್ವದಲ್ಲಿ ಬಿಜೆಪಿ ಕಚೇರಿಯ ಮುಂಭಾಗ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲಾಗಿತ್ತು.
ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಕಾರ್ಯಕರ್ತರು ಕಳೆದ ರಾತ್ರಿಯೇ ಸಂಸದ ಶ್ರೀರಾಮುಲು ಅನುಮತಿ ಸಹ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ನಾಯಕರು ಬಳ್ಳಾರಿಯಲ್ಲಿ ಮುಸ್ಲಿಂ ಮತಗಳನ್ನು ಪಡೆಯಲು ಇಬ್ಬಗೆಯ ನೀತಿ ಅನುಸರಿಸುತ್ತಿರುವುದು ಬಿಜೆಪಿಯ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು.