Tag: ಶೋಭಿತಾ ಶಿವಣ್ಣ

  • ಹುಟ್ಟೂರಿಗೆ ಶೋಭಿತಾ ಮೃತದೇಹ – ಇಂದು ಅಂತ್ಯಕ್ರಿಯೆ

    ಹುಟ್ಟೂರಿಗೆ ಶೋಭಿತಾ ಮೃತದೇಹ – ಇಂದು ಅಂತ್ಯಕ್ರಿಯೆ

    ಹಾಸನ: ಹೈದರಾಬಾದ್‌ನಲ್ಲಿ (Hyderabad) ಆತ್ಮಹತ್ಯೆಗೆ ಶರಣಾಗಿದ್ದ ನಟಿ ಶೋಭಿತಾ (Shobhitha Shivanna) ಮೃತದೇಹವನ್ನ ಹುಟ್ಟೂರಾದ ಹಾಸನ (Hassan) ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮಕ್ಕೆ ತರಲಾಗಿದೆ.

    ಶೋಭಿತಾ ನಿವಾಸದೆದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆರೂರು (Herur) ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಶೋಭಿತಾ ಮೃತದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ವ್ಯಾಪಕ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಇಂದೇ ಶೋಭಿತಾ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಎರಡು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ತಾಯಿ, ಮೂವರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ. ಇದನ್ನೂ ಓದಿ:  ಅಕ್ರಮ ಆಸ್ತಿ ಗಳಿಕೆ ಆರೋಪ – ಇಂದು ‘ಲೋಕಾ’ ವಿಚಾರಣೆಗೆ ಹಾಜರಾಗ್ತಾರಾ ಜಮೀರ್?

  • ಶೋಭಿತಾ ಸೂಸೈಡ್ ವಿಚಾರ ಕೇಳಿ ಶಾಕ್ ಆಯ್ತು: ನಟ ಹರ್ಷ ಗೌಡ ರಿಯಾಕ್ಷನ್

    ಶೋಭಿತಾ ಸೂಸೈಡ್ ವಿಚಾರ ಕೇಳಿ ಶಾಕ್ ಆಯ್ತು: ನಟ ಹರ್ಷ ಗೌಡ ರಿಯಾಕ್ಷನ್

    ‘ಬ್ರಹ್ಮಗಂಟು’ ಸೀರಿಯಲ್ ನಟಿ ಶೋಭಿತಾ ಶಿವಣ್ಣ (Shobhitha Shivanna) ಆತ್ಮಹತ್ಮೆಗೆ ಸಹನಟ ಹರ್ಷ ಗೌಡ (Harsha Gowda) ಪ್ರತಿಕ್ರಿಯೆ ನೀಡಿದ್ದಾರೆ. ಶೋಭಿತಾ ಬಹಳ ಪಾಸಿಟಿವ್ ಆಗಿದ್ದವರು. ಹೀಗ್ಯಾಕೆ ಮಾಡಿಕೊಂಡರು ಗೊತ್ತಾಗುತ್ತಿಲ್ಲ ಎಂದು ಹರ್ಷ ‘ಪಬ್ಲಿಕ್ ಟಿವಿ’ಗೆ ಮಾತನಾಡಿದ್ದಾರೆ.

    ಬ್ರಹ್ಮಗಂಟು ಸೀರಿಯಲ್‌ನಲ್ಲಿ ಶೋಭಿತಾ ಪತಿಯ ಪಾತ್ರದಲ್ಲಿ ನಟಿಸಿದ್ದ ಹರ್ಷ ಗೌಡ ಮಾತನಾಡಿ, ಶೋಭಿತಾ ಬಹಳ ಪಾಸಿಟಿವ್ ಆಗಿದ್ದವರು. ನಿನ್ನೆ (ಡಿ.1) ಮಧ್ಯಾಹ್ನ ನನಗೆ ಸ್ನೇಹಿತನಿಂದ ಶೋಭಿತಾ ಸೂಸೈಡ್ ವಿಚಾರ ಗೊತ್ತಾಯ್ತು. ಅವರು ಯಾಕೆ ಹೀಗೆ ಮಾಡಿಕೊಂಡಿದ್ದಾರೆ ಅನ್ನೋದು ಯಾರಿಗೂ ಗೊತ್ತಿಲ್ಲ.

    ನಾಲ್ಕೈದು ವರ್ಷ ನಾವು ಎರಡು ಸೀರಿಯಲ್‌ನಲ್ಲಿ ಒಟ್ಟಾಗಿ ನಟಿಸಿದ್ದೇವೆ. ಈ ಜರ್ನಿಯಲ್ಲಿ ಅವರು ಬಹಳ ಕಷ್ಟಪಟ್ಟು ಬಂದಿದ್ದರು. ಕೆಲವೊಮ್ಮೆ ಸಾಕಾಗಿದೆ, ಕೆಲಸ ಬಿಟ್ಟು ಬಿಡ್ತೀನಿ ಅಂತಾನೂ ಹೇಳುತ್ತಿದ್ದರು. ಮದುವೆಯ ಬಳಿಕ ನಟನೆ ಬಿಟ್ಟರು. ಆಗ ಕರೆ ಮಾಡಿ ಮದುವೆ ಫಿಕ್ಸ್ ಆಗಿದೆ ಅಂತ ಹೇಳಿದರು. ನಂತರ ಯಾವಾಗಲಾದರೂ ಅಪರೂಪಕ್ಕೆ ವಿಶೇಷ ದಿನಕ್ಕೆ ಮೆಸೇಜ್ ಮಾಡಿ ಶುಭ ಕೋರುತ್ತಿದ್ದರು ಎಂದರು. ನಿನ್ನೆ ಈ ವಿಚಾರ ಕೇಳಿ ಶಾಕ್ ಆಯ್ತು. ಕಾರಣ ಏನು ಅನ್ನೋದು ಪೋಸ್ಟ್ ಮಾರ್ಟಂ ಬಳಿಕ ಗೊತ್ತಾಗಬೇಕಿದೆ. ಈ ರೀತಿ ನಿರ್ಧಾರ ಯಾರು ಮಾಡಬಾರದು. ಏನೇ ಇದ್ದರು ಎದುರಿಸಬಹುದಾಗಿತ್ತು ಎಂದು ಶೋಭಿತಾ ಸೂಸೈಡ್ ಬಗ್ಗೆ ಹರ್ಷ ಮಾತನಾಡಿದ್ದಾರೆ. ಸಹನಟಿಯ ಆತ್ಮಹತ್ಯೆಗೆ ನಟ ಭಾವುಕರಾಗಿದ್ದಾರೆ.

    ಅಂದಹಾಗೆ, ಶೋಭಿತಾ 2 ವರ್ಷಗಳ ಹಿಂದೆ ಸುಧೀರ್‌ ರೆಡ್ಡಿ ಜೊತೆ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದರು. ನಿನ್ನೆ( ಡಿ.1) ನಟಿ ಆತ್ಮಹತ್ಮೆಗೆ ಶರಣಾಗಿದ್ದಾರೆ.

  • ಆತ್ಮಹತ್ಯೆಗೆ ಶರಣಾದ ‘ಬ್ರಹ್ಮಗಂಟು’ ಸೀರಿಯಲ್‌ ನಟಿ ಶೋಭಿತಾ

    ಆತ್ಮಹತ್ಯೆಗೆ ಶರಣಾದ ‘ಬ್ರಹ್ಮಗಂಟು’ ಸೀರಿಯಲ್‌ ನಟಿ ಶೋಭಿತಾ

    ಬ್ರಹ್ಮಗಂಟು (Brahmagantu) ಸೀರಿಯಲ್‌ ನಟಿ ಶೋಭಿತಾ ಶಿವಣ್ಣ (Shobhitha Shivanna) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ (Suicide) ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಇದನ್ನೂ ಓದಿ:ರಿಲೀಸ್‌ಗೂ ಮುನ್ನ ದಾಖಲೆ ಬರೆದ ‘ಪುಷ್ಪ 2’- ಕೆಲವೇ ಗಂಟೆಗಳಲ್ಲಿ 55 ಸಾವಿರ ಟಿಕೆಟ್ ಸೋಲ್ಡ್ ಔಟ್

    2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದರು. ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್‌ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.

    ಇನ್ನೂ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ನಗು ನಗುತ್ತಾ ಇರೋ ಚೆಂದದ ಫೋಟೋವೊಂದನ್ನು ಶೇರ್‌ ಮಾಡಿದ್ದಾರೆ. ಆ ನಂತರ ಈ ಘಟನೆ ಜರುಗಿದ್ದು, ಅವರ ಆತ್ಮಹತ್ಯೆಯ ಬಗ್ಗೆ ಕಾರಣ ತಿಳಿದು ಬಂದಿಲ್ಲ.

    ‘ಫಸ್ಟ್‌ ಡೇ ಫಸ್ಟ್‌ ಶೋ’ ಸಿನಿಮಾದಲ್ಲಿ ಶೋಭಿತಾ ನಟಿಸಿದ್ದರು. ಜನಪ್ರಿಯ ‘ಬ್ರಹ್ಮಗಂಟು’ ಸೀರಿಯಲ್‌ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿ ಕೆಲಸ ಮಾಡಿದ್ದರು.