Tag: ಶ್ಯಾಮನೂರು ಶಿವಶಂಕರಪ್ಪ

  • ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣ: ಶಾಮನೂರು ಶಿವಶಂಕರಪ್ಪ

    ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣ: ಶಾಮನೂರು ಶಿವಶಂಕರಪ್ಪ

    ಚಿತ್ರದುರ್ಗ: ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿದರು.

    ಚಿತ್ರದುರ್ಗ (Chitradurga) ಜಿಲ್ಲೆಯ ಹೊಸದುರ್ಗ ತಾಲೂಕಿನ ತರಳಬಾಳು ಮಠದಿಂದ ಆಯೋಜಿಸಿದ್ದ ರಾಷ್ಟ್ರೀಯ ನಾಟಕೋತ್ಸವದಲ್ಲಿ ಭಾಷಣದ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಪೋಕ್ಸೊ (POSCO) ಕೇಸ್‍ನಲ್ಲಿ ಮುರುಘಾಶ್ರೀ ಜೈಲುಪಾಲಾಗಿದ್ದಾರೆ. ಹೀಗಾಗಿ ಈ ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು.

    ಕಾರ್ಯಕ್ರಮದಲ್ಲಿ ಹಾಜರಿದ್ದ ಅನೇಕರು ಪರೋಕ್ಷವಾಗಿ ಮುರುಘಾಶ್ರೀ (Murugha Shree) ವಿರುದ್ಧ ಮುಗಿಬಿದ್ದರು. ಅಲ್ಲದೇ ಚಾರ್ಜ್ ಶೀಟ್ ನಲ್ಲಿನ ಅಂಶಗಳು ಬಯಲಾದ ಬಳಿಕ ಮುಖಂಡರು ಗರಂ ಆಗಿದ್ದು, ಇವತ್ತು ದಿನಪೂರ್ತಿ ಟಿವಿಗಳಲ್ಲಿ ನೋಡುತ್ತಿದ್ದೇವೆ. ಹೆಣ್ಣು ಮಕ್ಕಳು ಸ್ವಾಮಿಗಳ ಬಳಿ ಹೋಗದಂತ ಸ್ಥಿತಿ ನಿರ್ಮಾಣವಾಗಿದೆ. ಇಂಥ ಪರಿಸ್ಥಿತಿ ಬರಬಾರದು ಎಂದು ಮುರುಘಾಶ್ರೀ ಮೇಲೆ ಶಿವಶಂಕರಪ್ಪ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ಮೇಲೆ ರೇಪ್- ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಸರ್ಕಾರದಿಂದ ಸಹಾಯ ಬೇಕೆಂದು ಕೇಳುವುದು ನಾಚಿಕೆಗೇಡು. ನಮ್ಮ ಹೆಣ್ಣು ಮಕ್ಕಳು ಸಹ ಎಚ್ಚರವಾಗಿರಬೇಕು. ನಮ್ಮೆಲ್ಲರ ಒಗ್ಗಟ್ಟಿನಲ್ಲಿ ಶಕ್ತಿಯಿದೆ ಎಂಬುದು ವೀರಶೈವರು ಅರಿಯಬೇಕು. ಒಳಪಂಗಡ ಬೇಧ ಮರೆತು ವೀರಶೈವರು ಒಂದಾಗಬೇಕು. ಇವತ್ತಿನ ಸಮಾರಂಭದಲ್ಲಿ ಎಲ್ಲರೂ ಸರ್ಕಾರದ ಸಹಾಯ ಕೇಳುತ್ತಿದ್ದಾರೆ. ಸರ್ಕಾರದಿಂದ ಸಹಾಯ ಬೇಕೆಂದು ಕೇಳುವುದು ನಾಚಿಕೆಗೇಡು. ಸ್ವಾಭಿಮಾನದಿಂದ ನಾವು ಇರಬೇಕು ಎಂದರು.

    ನಾವೆಲ್ಲಾ ಸ್ವಶಕ್ತಿ ಪ್ರದರ್ಶಿಸಬೇಕು. ಸರ್ಕಾರದ ಮೇಲೆ ಡಿಪೆಂಡ್ ಆದರೆ ಎಂದೂ ಕೆಲಸ ಆಗಲ್ಲ. ನಾವು ಹತ್ತು ರೂ. ದುಡಿದರೆ ಒಂದು ರೂ. ದಾನ ಧರ್ಮ ಮಾಡಬೇಕೆಂದ ಅವರು, ನಾವೆಲ್ಲಾ ದಾನ ಧರ್ಮದಿಂದಲೇ ಶ್ರೀಮಂತರಾಗಿದ್ದೇವೆ ಎಂದರು. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್- ಮಠದ ಹಾಸ್ಟೆಲ್‍ನಲ್ಲಿ ಇಬ್ಬರು ಬಾಲಕಿಯರು ಪತ್ತೆ

    ಕಾರ್ಯಕ್ರಮದಲ್ಲಿ ಸಾಣಿಹಳ್ಳಿ ತರಳಬಾಳು ಮಠದ ಡಾ.ಪಂಡಿತಾರಾಧ್ಯ ಶ್ರೀ, ಸಿಎಂ ಬೊಮ್ಮಾಯಿ,ಸಚಿವರಾದ ಬಿಸಿಪಾಟೀಲ್,ಬಿಸಿ ನಾಗೇಶಗ ಸೇರಿದಂತೆ ಜಿಲ್ಲೆಯ ಶಾಸಕರುಗಳು ಹಾಗೂ ಗಣ್ಯರು ಇದ್ದರು.

    Live Tv
    [brid partner=56869869 player=32851 video=960834 autoplay=true]

  • ಧರಂ ಸಿಂಗ್ ನಿಧನದಿಂದ ಕಾಂಗ್ರೆಸ್‍ಗೆ ದೊಡ್ಡ ಹೊಡೆತ: ಶ್ಯಾಮನೂರು ಶಿವಶಂಕರಪ್ಪ

    ಧರಂ ಸಿಂಗ್ ನಿಧನದಿಂದ ಕಾಂಗ್ರೆಸ್‍ಗೆ ದೊಡ್ಡ ಹೊಡೆತ: ಶ್ಯಾಮನೂರು ಶಿವಶಂಕರಪ್ಪ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ತೀವ್ರ ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಧರಂ ಸಿಂಗ್ ಅವರ ಆಪ್ತರಾಗಿದ್ದ ಹಿರಿಯ ಮುಖಂಡ ಶ್ಯಾಮನೂರು ಶಿವಶಂಕರಪ್ಪ ಪಬ್ಲಿಕ್ ಟಿವಿ ಜೊತೆ ಮಾತನಾಡಿ ವಿಷಾದ ವ್ಯಕ್ತಪಡಿಸಿದ್ರು.

    ಅವರು ನನಗೆ ಸುಮಾರು 50 ವರ್ಷಗಳಿಂದ ಗೊತ್ತು. ಒಳ್ಳೇ ಮನುಷ್ಯ. ಎಲ್ಲರೊಂದಿಗೂ ಚೆನ್ನಾಗಿ ಬೆರೆಯುತ್ತಿದ್ದರು. ಧರಂ ಸಿಂಗ್ ಅವರ ನಿಧನ ಕಾಂಗ್ರೆಸ್‍ಗೆ ಇದೊಂದು ದೊಡ್ಡ ಹೊಡೆತ. ಅವರ ಆತ್ಮಕ್ಕೆ ದೇವರು ಶಾಂತಿ ಕೊಡಲಿ ಅಂದ್ರು.

    ಎಲ್ಲರೊಂದಿಗೂ ಪ್ರೀತಿಯಿಂದ ಮಾತನಾಡುತ್ತಿದ್ದರು. ಅದೇ ಅವರ ಒಳ್ಳೇ ಗುಣ. ಗುಲಬರ್ಗಾದಲ್ಲಿ ಪ್ರತಿ ಬಾರಿ ಚುನಾಯಿತರಾಗಿ ಬಂದಿದ್ದಾರೆ ಅಂತ ಹೇಳಿದ್ರು.

    ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ  ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

     ಕಲಬುರಗಿ ಜಿಲ್ಲೆಯ, ಜೇವರ್ಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಎ ಹಾಗೂ ಎಲ್‍ಎಲ್‍ಬಿ ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60 ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು.

    ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಸತತ 7 ಬಾರಿ ಚುನಾಯಿತರಾಗಿದ್ದ ಇವರು 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.

    2004ರ ಮೇ 28 ರಿಂದ ಜನವರಿ 2016ರವರೆಗೆ ಧರಂ ಸಿಂಗ್ ಮುಖ್ಯಮಂತ್ರಿಯಾಗಿ ಕರ್ನಾಟಕವನ್ನು ಮುನ್ನಡೆಸಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು.

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ ಮೊದಲಾದ ಖಾತೆಗಳನ್ನು ನಿರ್ವಹಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು.