Tag: ಶ್ರಾವಣ

  • ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ಸಾವು

    ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ಸಾವು

    ಪಾಟ್ನಾ: ಕೆಲ ದಿನಗಳ ಹಿಂದೆಯಷ್ಟೇ ಹತ್ರಾಸ್‌ನ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ ಹತ್ತಾರು ಮಂದಿ ಸಾವನ್ನಪ್ಪಿದ್ದರು. ಅದೇ ರೀತಿಯ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಜಿಹಾನಾಬಾದ್‌ ಜಿಲ್ಲೆಯ ದೇವಸ್ಥಾನವೊಂದರಲ್ಲಿ (Bihar Temple) ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಲಘು ಲಾಠಿ ಪ್ರಹಾರ ಮಾಡಿದ ಪರಿಣಾಮ ಕಾಲ್ತುಳಿತ (Stampede) ಉಂಟಾಗಿ 3 ಮಹಿಳೆಯರು ಸೇರಿ 7 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಶ್ರಾವಣ ಮಾಸದ 4ನೇ ಸೋಮವಾರದಂದು ಬರಾವರ್ ಬೆಟ್ಟದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ (Baba Sidheshwar Nath temple) ಕಾಲ್ತುಳಿತ ಸಂಭವಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 35 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ

    ಜೆಹಾನಾಬಾದ್‌ನ ಟೌನ್ ಇನ್ಸ್‌ಪೆಕ್ಟರ್ ದಿವಾಕರ್ ಕುಮಾರ್ ವಿಶ್ವಕರ್ಮ ಹೇಳುವಂತೆ, 7 ಮೃತದೇಹಗಳನ್ನು ಜೆಹಾನಾಬಾದ್‌ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರತಿ ವರ್ಷ ಪವಿತ್ರ ಶ್ರಾವಣ ಮಾಸದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ( Devotees) ದೇವಸ್ಥಾನಕ್ಕೆ ಆಗಮಿಸುತ್ತಾರೆ. ಅದೇ ರೀತಿ ಭಾನುವಾರ ತಡರಾತ್ರಿಯಿಂದಲೇ ಭಕ್ತರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಶಿವನಿಗೆ ಜಲಾಭಿಷೇಕ ಅರ್ಪಿಸಲು ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ನೂಕುನುಗ್ಗಲು ಶುರುವಾಗಿತ್ತು. ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಬಲಪ್ರಯೋಗ ನಡೆಸಿದ್ದರಿಂದ ಕಾಲ್ತುಳಿತ ಉಂಟಾಗಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿರುವುದಾಗಿ ಹೇಳಿದ್ದಾರೆ.

    ಈ ವೇಳೆ ಆಡಳಿತದ ಅವ್ಯವಸ್ಥೆಯಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ದೇವಾಲಯದಲ್ಲಿ ಹಾಜರಿದ್ದವರು ದೂರಿದ್ದಾರೆ. ಕೆಲವು ಎನ್‌ಸಿಸಿ (ನ್ಯಾಷನಲ್ ಕೆಡೆಟ್ ಕಾರ್ಪ್ಸ್) ಸ್ವಯಂಸೇವಕರು ಕ್ರೌಡ್ ಮ್ಯಾನೇಜ್‌ಮೆಂಟ್‌ನಲ್ಲಿ ತೊಡಗಿರುವ ಭಕ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಿದ್ದರು. ಇದು ನೂಕುನುಗ್ಗಲಿಗೆ ಕಾರಣವಾಯಿತು ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರಿಂದ ಹೋರಾಟ – ಸರ್ಕಾರಿ ಶಾಲೆಗಳಲ್ಲಿ ತರಗತಿ ವ್ಯತ್ಯಯ?

  • ಶಿವಶರಣರ ವಚನ ಗ್ರಂಥಗಳ ಅಡ್ಡಪಲ್ಲಕ್ಕಿ ಮೆರವಣಿಗೆ

    ಶಿವಶರಣರ ವಚನ ಗ್ರಂಥಗಳ ಅಡ್ಡಪಲ್ಲಕ್ಕಿ ಮೆರವಣಿಗೆ

    ಬಾಗಲಕೋಟೆ: ಜಿಲ್ಲೆಯ ಗುಡೂರ ಎಸ್ಸಿ ಸಿ ಗ್ರಾಮದಲ್ಲಿ ಶ್ರವಣ ಶ್ರಾವಣದ ಪ್ರಯಕ್ತ ಶರಣ ಚರಿತಾಮೃತದ ಮಹಾಮಂಗಲೋತ್ಸವ ಹಾಗೂ ಬಸವಾದಿ ಶಿವಶರಣರ ವಚನ ಗ್ರಂಥಗಳ (Vachana Book) ಅಡ್ಡಪಲ್ಲಕ್ಕಿ (Adda Pallakki) ಮೆರವಣಿಗೆ ಬಹಳ ವಿಜೃಂಭಣೆಯಿಂದ ಜರುಗಿತು.

    ಗ್ರಾಮದ ಶ್ರೀವೀರಶೈವ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಪುರಾಣ ಮಹಾಮಂಗಲೋತ್ಸವ ಹಾಗೂ ಬಸವಾದಿ ಶಿವಶರಣರ ವಚನ ಗ್ರಂಥಗಳ ಅಡ್ಡಪಲ್ಲಕ್ಕಿ ಮಹೋತ್ಸವವು ಸರ್ವ ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಸಂಪ್ರದಾಯಿಕ ಪೂಜಾ ವಿಧಾನಗಳ ನಂತರ ಅಡ್ಡಪಲ್ಲಕ್ಕಿ ಮೆರವಣಿಗೆ ಸಾಗಿತು. ಇದನ್ನೂ ಓದಿ: ಎನ್‌ಡಿಎ ಕೂಟ ಸೇರಿದ ಜೆಡಿಎಸ್‌ – ದೋಸ್ತಿ ಲೆಕ್ಕಾಚಾರ ಏನು? ಸೀಟ್ ಹಂಚಿಕೆ ಸೂತ್ರ ಏನು?

     

    ಜಗದ್ಗುರು ಮೈಸೂರು ವಿಜಯಮಹಾಂತೇಶ್ವರ ಕೃಪಾಪೋಷಿತ ರೋಣದ ಸಂಗನಬಸವ ಅನುಭವ ಮಂಟಪದಿಂದ ಹೊರಟ ಮೆರವಣಿಗೆ ಅಕ್ಕಮಹಾದೇವಿ ದೇವಾಲಯಕ್ಕೆ ಬಂದು ನಂತರ ಮೈಸೂರು ವಿಜಯಮಹಾಂತ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಪ್ರಾರಂಭವಾದ ಮರವಣಿಗೆ ಬಸ್ ನಿಲ್ದಾಣ, ಹುಲ್ಲೇಶ್ವರ ದೇವಾಲಯ, ಹುಂಚಿ ಕಟ್ಟಿ, ವಿಜಯ ಮಹಾಂತೇಶ ಬ್ಯಾಂಕ್, ಕಾಯಿಪಲ್ಯ ಮಾರುಕಟ್ಟೆ, ಪ್ಯಾಟಿ ಬಸವೇಶ್ವರ ದೇವಾಲಯದ ಮಾರ್ಗವಾಗಿ ಸಂಗನಬಸವ ಅನುಭಾವ ಮಂಟಪ ತಲುಪಿತು.

    ವ್ಯಾಪಾರಸ್ಥರು ತಮ್ಮ ಮಳಿಗೆಗಳಿಗೆ ರಜೆ ಘೋಷಿಸಿ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರ ಡೊಳ್ಳು ಕುಣಿತ, ಭಾಜಾ ಭಜಂತ್ರಿ, ರಾಜೂರಿನ ಕಾಲಕಾಲೇಶ್ವರ ಭಜನಾ ಮಂಡಳಿಯ ಭಜನಾ ನೃತ್ಯವು ಗಮನ ಸೆಳೆಯಿತು.

    ಕುಂಭಹೊತ್ತು ಮಹಿಳೆಯರು ಮೆರವಣಿಗೆ ಗೆ ಮತ್ತಷ್ಟು ಮೆರಗು ತಂದರು. ಮೆರವಣಿಗೆ ನಂತರ ಅನ್ನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಂಜೆ ಸಮಯದಲ್ಲಿ ಧರ್ಮಸಭೆ, ಪುರಾಣ ಮಹಾಮಂಗಲೋತ್ಸವ ದಾಸೋಹಿಗಳಿಗೆ ಸನ್ಮಾನ, ಶರಣರ ವಚನ ಕಂಠಪಾಠ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿದವು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನ್‌ವೆಜ್ ಪ್ರಿಯರಿಗೆ ಬ್ಯಾಡ್ ನ್ಯೂಸ್- ಚಿಕನ್ ಬೆಲೆಯಲ್ಲಿಯೂ ಏರಿಕೆ!

    ನಾನ್‌ವೆಜ್ ಪ್ರಿಯರಿಗೆ ಬ್ಯಾಡ್ ನ್ಯೂಸ್- ಚಿಕನ್ ಬೆಲೆಯಲ್ಲಿಯೂ ಏರಿಕೆ!

    ಬೆಂಗಳೂರು: ಟೊಮೆಟೋ, ಬೆಳ್ಳುಳ್ಳಿ, ಬಾಳೆಹಣ್ಣು ಹೀಗೆ ತರಕಾರಿಗಳ ರೇಟ್ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೇ ಇದೆ. ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರೋ ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಕಾದಿದೆ. ಕೋಳಿ (Chicken) ರೇಟ್ ಕೇಳಿ ಗ್ರಾಹಕರು ಶಾಕ್ ಆಗಿದ್ದಾರೆ.

    ನಾನ್‌ವೆಜ್ ಪ್ರೀಯರ ಫೇವೆರೆಟ್ ಪುಡ್‌ಗಳಲ್ಲಿ ಒಂದು ಚಿಕನ್. ಆದರೆ ಕೋಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರೋದು ನಾನ್ ವೆಜ್ ಪ್ರೀಯರಿಗೆ ನುಂಗಲಾರದ ತುತ್ತಾಗಿದೆ. ಆಷಾಢ ಕಳೆದು ಶ್ರಾವಣ (Shravana) ಆರಂಭವಾದ ಹಿನ್ನೆಲೆ, ಕೋಳಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶ್ರಾವಣದಲ್ಲಿ ನಾನ್‌ವೆಜ್ ತಿನ್ನುವವರ ಸಂಖ್ಯೆಯೂ ಕಡಿಮೆಯಿರುವುದರಿಂದ ರೈತರು ಹಾಗೂ ಕಂಪನಿಗಳು ಮರಿಗಳ ಸಾಕಾಣಿಕೆಯನ್ನು ಕಡಿಮೆ ಮಾಡುತ್ತಿದ್ದಾರೆ.

    ಈ ಹಿನ್ನೆಲೆ ಶ್ರಾವಣ ಆರಂಭವಾಗಿರುವುದರಿಂದ ಕೋಳಿಗಳು ಡಿಮ್ಯಾಂಡ್‌ಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಜೊತೆಗೆ ಕೋಳಿಗೆ ಆಹಾರವಾಗಿ ಬಳಕೆಯಾಗುವ ಧಾನ್ಯ, ಅಕ್ಕಿಹೊಟ್ಟು, ಮೆಕ್ಕೆಜೋಳ, ಕಡಲೆಕಾಯಿ ಹಿಂಡಿ, ಸೋಯಾ ಬೆಲೆಯಲ್ಲೂ 25% ರಿಂದ 30% ರಷ್ಟು ಏರಿಕೆಯಾಗಿದೆ. ಇಂಧನ ಬೆಲೆ ಹೆಚ್ಚಳದಿಂದಾಗಿ ಸಾಗಣೆ ವೆಚ್ಚವೂ ಅಧಿಕವಾಗಿರುವುದರಿಂದ ಕೋಳಿಗಳ ಬೆಲೆಯೂ ಹೆಚ್ಚಳವಾಗಿದೆ.

    ಕೋಳಿಗಳ ಬೆಲೆ(1 ಕೆಜಿಗೆ):
    ಬಾಯ್ಲರ್ ಕೋಳಿ – 170 ರೂ.
    ಫಾರಂ ಕೋಳಿ- 140 ರೂ.
    ನಾಟಿ ಕೋಳಿ (ಫಾರಂ) -350 ರೂ.
    ಜವಾರಿ ನಾಟಿ ಕೋಳಿ – 550 ರೂ. ಇದನ್ನೂ ಓದಿ: ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ತಾತ್ಕಾಲಿಕ ಸ್ಥಗಿತ- ಪ್ರವಾಸಿಗರಿಗೆ ನಿರಾಸೆ

    ಈಗಷ್ಟೇ ಶ್ರಾವಣ ಆರಂಭವಾಗಿದ್ದು, ದಿನಕಳೆದಂತೆ ಕೋಳಿಗಳ ಬೆಲೆ ಇನ್ನೂ ಹೆಚ್ಚಾಗೋ ಸಾಧ್ಯತೆಯಿದೆ. ಕೋಳಿಗಳ ಬೆಲೆ ಹೆಚ್ಚಾಗಿರೋದ್ರಿಂದ ಮಾಂಸದ ರೇಟ್ ಸಹ ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದು. ಇದನ್ನೂ ಓದಿ: ಆಪರೇಷನ್ ಬಿಪಿಎಲ್ ಕಾರ್ಡ್- ಸತ್ತವರ ಹೆಸ್ರಲ್ಲೂ ಅಕ್ಕಿ ಪಡೆಯುತ್ತಿದ್ದ ಕುಟುಂಬಸ್ಥರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಲಕ್ನೋ: ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ವಿವಾದಿತ ಜ್ಞಾನವಾಪಿ ಮಸೀದಿ ಆವರಣದಲ್ಲಿ ಇತ್ತೀಚೆಗೆ ಶಿವಲಿಂಗ ಪತ್ತೆಯಾಗಿದ್ದು, ಅಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಅನುಮತಿ ನೀಡುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.

    ವರದಿಗಳ ಪ್ರಕಾರ, ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ಸ್ಥಳದ ಅಧ್ಯಕ್ಷ ರಾಜೇಶ್ ಮಣಿ ತ್ರಿಪಾಠಿ ಅವರು ಅರ್ಜಿ ಸಲ್ಲಿಸಿದ್ದಾರೆ. ಶ್ರಾವಣ ಮಾಸ ಪ್ರಾರಂಭವಾಗುತ್ತಿರುವುದರಿಂದ ಹಿಂದೂಗಳಿಗೆ ಪೂಜೆ ಸಲ್ಲಿಸಲು ಹಾಗೂ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಬೇಕು ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಇಂದು ಒಟ್ಟು 977 ಕೇಸ್ – ಬೆಂಗ್ಳೂರಲ್ಲಿ 927 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಭಾರತ ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಜನರು ತಮ್ಮದೇ ಆದ ಧಾರ್ಮಿಕ ಆಚರಣೆಗಳನ್ನು ನಡೆಸುವ ಹಕ್ಕಿದೆ. ಶ್ರಾವಣ ಮಾಸದಲ್ಲಿ ಶಿವನಿಗೆ ಪೂಜೆ ಮಾಡುವ ಪದ್ಧತಿಯಿರುವುದು ನಿಜ. ಹೀಗಾಗಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಶ್ರಾವಣ ಮಾಸದಲ್ಲಿ ಪ್ರಾರ್ಥನೆ, ಪೂಜೆ ನಡೆಸಲು ಹಿಂದೂಗಳಿಗೆ ಅನುಮತಿ ನೀಡಬೇಕಾಗಿ ತ್ರಿಪಾಠಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭಗತ್‌ ಸಿಂಗ್‌ ಒಬ್ಬ ಭಯೋತ್ಪಾದಕ: ಶಿರೋಮಣಿ ಅಕಾಲಿ ದಳ ಸಂಸದ ವಿವಾದಾತ್ಮಕ ಹೇಳಿಕೆ

    ಸ್ಥಳೀಯ ನ್ಯಾಯಾಲಯದ ಆದೇಶದಿಂದ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗವನ್ನು ರಕ್ಷಿಸಲಾಗಿದೆಯಾದರೂ, ಭಕ್ತರಿಗೆ ಅಲ್ಲಿ ಪೂಜೆ ಸಲ್ಲಿಸಲು ಹಾಗೂ ಆಚರಣೆಗಳನ್ನು ನಡೆಸಲು ನಿರ್ಬಂಧಿಸಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರಾವಣ ಮಾಸದಿಂದಾಗಿ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ – ಕೋವಿಡ್ ನಿಯಮ ಉಲ್ಲಂಘನೆ

    ಶ್ರಾವಣ ಮಾಸದಿಂದಾಗಿ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ – ಕೋವಿಡ್ ನಿಯಮ ಉಲ್ಲಂಘನೆ

    ರಾಯಚೂರು: ಇಂದಿನಿಂದ ಶ್ರಾವಣ ಮಾಸ ಪ್ರಾರಂಭವಾಗಿದ್ದು, ಜಿಲ್ಲೆಯ ಈಶ್ವರ ದೇವಾಲಯಗಳಲ್ಲಿ ಒಂದು ತಿಂಗಳ ಪೂರ್ತಿ ವಿಶೇಷ ಪೂಜೆ, ಭಜನೆಗಳು ನಡೆಯುತ್ತಿವೆ. ಕೋವಿಡ್ ಹಿನ್ನೆಲೆ ಜಿಲ್ಲಾಡಳಿತ ಷರತ್ತುಗಳ ಮೇಲೆ ವಿಶೇಷ ಪೂಜೆ ಅಭಿಷೇಕಗಳನ್ನು ಮಾಡಲು ಅನುಮತಿ ನೀಡಿದೆ. ಆದರೆ ರಾಯಚೂರು ನಗರದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಎಲ್ಲಾ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

    ಜಿಲ್ಲಾಡಳಿತದ ಆದೇಶವನ್ನ ಅಕ್ಷರಶಃ ಉಲ್ಲಂಘಿಸಿ ಪೂಜೆಗಳನ್ನು ಮಾಡಲಾಗುತ್ತಿದೆ. ಭಕ್ತರು ಕೋವಿಡ್ ನಿಯಮ ಪಾಲಿಸಲು ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. ಸಾಮಾಜಿಕ ಅಂತರ ಕಾಪಾಡಲು ಮಾರ್ಕ್ ಮಾಡಿಲ್ಲ, ಸ್ಯಾನಿಟೈಸರ್ ವ್ಯವಸ್ಥೆಯಿಲ್ಲ. ವಿಶೇಷ ಪೂಜೆ ಮಾಡಿಸುವ ಭಕ್ತರನ್ನು ಗರ್ಭಗುಡಿಯೊಳಗೆ ಬಿಟ್ಟುಕೊಳ್ಳುವ ಮೂಲಕ ಕೋವಿಡ್ ನಿಯಮಗಳನ್ನು ಇಲ್ಲಿನ ಅರ್ಚಕರು ಹಾಗೂ ಆಡಳಿತ ಮಂಡಳಿ ಉಲ್ಲಂಘಿಸಿದೆ.

    ಭಕ್ತರು ಸಹ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್ ಸಹ ಧರಿಸದೇ ದೇವರ ದರ್ಶನ ಪಡೆಯುತ್ತಿದ್ದಾರೆ. ಶ್ರಾವಣ ಮಾಸದ ನೆಪದಲ್ಲಿ ದೇವಾಲಯಗಳೇ ಕೊರೊನಾ ಹಾಟ್ ಸ್ಪಾಟ್ ಆಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕಿದೆ. ಶ್ರಾವಣ ಮಾಸದ ಸೋಮವಾರಗಳು ಮುಕ್ತಿಯ ಸೋಪಾನಗಳು ಎಂಬುದು ಶಿವಭಕ್ತರ ನಂಬಿಕೆ. ಹೀಗಾಗಿ ಶ್ರಾವಣ ಸೋಮವಾರ ದಿನ ದೇವಾಲಯಗಳಿಗೆ ಹೆಚ್ಚು ಜನ ಬರುತ್ತಾರೆ. ಕೋವಿಡ್ ನಿಯಮ ಪಾಲನೆ ಅಗತ್ಯವಾಗಿದೆ. ಇದನ್ನೂ ಓದಿ:ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರಾ ಲಸಿಕೆ ಪಡೆದರೆ ಅಡ್ಡಪರಿಣಾಮವಿಲ್ಲ: ಐಸಿಎಂಆರ್

  • ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ 60 ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನ ಅಸ್ವಸ್ಥ!

    ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ 60 ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನ ಅಸ್ವಸ್ಥ!

    ದಾವಣಗೆರೆ: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ 60 ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ನಡೆದಿದೆ.

    ಬಿಳಿಚೋಡ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ತ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನಕ್ಕೆ ಬಂದಿದ್ದ ಮಕ್ಕಳು, ಭಕ್ತರು ಸೇರಿದಂತೆ ಸ್ಥಳೀಯರು ಪ್ರಸಾದ ಸೇವಿಸಿದ್ದು, ಸ್ವಲ್ಪ ಸಮಯ ಕಳೆಯುತ್ತಿದ್ದಂತೆ ಊಟ ಮಾಡಿದ್ದವರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.

    ತಕ್ಷಣವೇ ಅಸ್ವಸ್ಥಗೊಂಡವರನ್ನು ಬಿಳಿಚೋಡ ಸರ್ಕಾರಿ ಆಸ್ಪತ್ರೆಗೆ ಹಾಗೂ ಹತ್ತಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹರಕೆಗಾಗಿ ದೇವರ ವಿಗ್ರಹಕ್ಕೆ ಸೀಬೆಹಣ್ಣು ತಿಕ್ಕುವ ವಿಶೇಷ ಜಾತ್ರೆ

    ಹರಕೆಗಾಗಿ ದೇವರ ವಿಗ್ರಹಕ್ಕೆ ಸೀಬೆಹಣ್ಣು ತಿಕ್ಕುವ ವಿಶೇಷ ಜಾತ್ರೆ

    ಗದಗ: ಜಾತ್ರೆ ಎಂದ ತಕ್ಷಣ ಬೆಂಡು, ಬೆತ್ತಾಸು, ಕಬ್ಬು, ಉತ್ತತ್ತಿ, ಬಾಳೆಹಣ್ಣು ಎಸೆದು ತೇರು ಎಳೆದು ಸಂಭ್ರಮಿಸುತ್ತಾರೆ. ಆದರೆ ಗದಗ ಜಿಲ್ಲೆಯ ಕಪೋತಗಿರಿಯಲ್ಲಿ ನಡೆಯುವ ಜಾತ್ರೆನೇ ಡಿಫರೆಂಟ್ ಆಗಿದೆ. ಅಲ್ಲಿ ದೇವರಿಗೆ ಪೇರಳೆ ಹಣ್ಣು (ಸೀಬೆ ಹಣ್ಣು) ತಿಕ್ಕುವುದೇ ಒಂದು ವೈಶಿಷ್ಟ್ಯತೆ.

    ಗದಗ ಜಿಲ್ಲೆ ಡೋಣಿ ಬಳಿಯ ಕಪೋತಗಿರಿ ಗಾಳಿಗುಂಡಿ ಬಸವೇಶ್ವರ ಸನ್ನಿದಾನದಲ್ಲಿ ಶ್ರಾವಣಮಾಸದ ಮೂರನೇ ಗುರುವಾರ ದಿನ ಈ ಜಾತ್ರೆ ವೈಭವದಿಂದ ನಡೆಯುತ್ತದೆ. ಮಾಡಿದ ಪಾಪ, ಕರ್ಮಗಳು ದೂರವಾಗಲೆಂದು ಬಸವಣ್ಣನ ವಿಗ್ರಹಕ್ಕೆ ಪೇರಳೆ ಹಣ್ಣು ತಿಕ್ಕುತ್ತಾರೆ. ಇದು ಬೇಡಿದ ವರಗಳನ್ನ ನೀಡುವ ದೇವರಾಗಿರುವುದರಿಂದ, ಇಲ್ಲಿಗೆ ಭಕ್ತಿಯಿಂದ ನಡೆದುಕೊಳ್ಳುವುದರಿಂದ ಒಳ್ಳೆದಾಗುತ್ತೆ ಎಂದು ದೇವಾಲಯದ ಅರ್ಚಕ ರೇವಣ್ಣ ಸಿದ್ದಯ್ಯ ಹೇಳುತ್ತಾರೆ.

    ಶ್ರಾವಣಮಾಸದಲ್ಲಿ ಕಪ್ಪತ್ತಗಿರಿಯ ಗಾಳಿಗುಂಡಿ ಬಸವಣ್ಣನ ಜಾತ್ರೆಗೆ ಜನಸಾಗರವೇ ಹರಿದು ಬರುತ್ತದೆ. ದೇವಾಲಯ ಬೆಟ್ಟದ ಮೇಲಿದ್ದರೂ ಡೋಣಿ ಗ್ರಾಮದ ಸುತ್ತಮುತ್ತಲಿನ ಹಾಗೂ ಕೊಪ್ಪಳ, ಹಾವೇರಿ, ಬಳ್ಳಾರಿ ಜಿಲ್ಲೆಯ ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಜಾತ್ರೆಗೆ ‘ಹರಕೆ ಜಾತ್ರೆ’ ಎಂತಾನೆ ಕರೆಯುತ್ತಾರೆ. ಇಲ್ಲಿ ಮದುವೆ ಆಗದವರು ಕಂಕಣ ಕಟ್ಟಿದ್ರೆ ಮದುವೆಯಾಗುತ್ತೆ, ಮಕ್ಕಳಾಗದವರು ತೊಟ್ಟಿಲು ಕಟ್ಟಿದ್ರೆ ಮಕ್ಕಳಾಗುತ್ತವೆ. ಮನೆ ಬೇಕಾದವರು ಕಲ್ಲಿನ ಮನೆ ನಿರ್ಮಿಸಿದ್ರೆ ಮನೆಗಳಾಗುತ್ತವೆ ಎಂಬ ನಂಬಿಕೆಯನ್ನು ಭಕ್ತರು ಹೊಂದಿದ್ದಾರೆ.

    ಇಲ್ಲಿ ಯಾವುದೇ ಜಾತಿ ಮತದ ಭೇದವಿಲ್ಲದೇ ಎಲ್ಲರು ಸೌಹಾರ್ದತೆಯಿಂದ ನಡೆದುಕೊಳ್ಳುತ್ತಾರೆ. ಬಂದ ಭಕ್ತರು ಪೇರಳೆಹಣ್ಣು ತಿಕ್ಕುವುದು ತುಂಬಾ ವೈಶಿಷ್ಟ್ಯತೆ ಹೊಂದಿದೆ. ಜಗತ್ತು ಇಷ್ಟೆಲ್ಲ ಮುಂದುವರಿದಿದ್ದರೂ, ಕಂಪ್ಯೂಟರ್ ಯುಗದಲ್ಲಿ ದೇವರ ಮೇಲಿನ ನಂಬಿಕೆಗಳು, ಆಚರಣೆಗಳು ಮಾತ್ರ ಮುಂದುವರಿಯುತ್ತಲೇ ಇವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮುಖ್ಯಮಂತ್ರಿ ಆದ ಬಳಿಕ ತವರಿಗೆ ಸಿಎಂ ಭೇಟಿ – ಸ್ವಗ್ರಾಮದ ಈಶ್ವರನಿಗೆ ವಿಶೇಷ ಪೂಜೆ

    ಮುಖ್ಯಮಂತ್ರಿ ಆದ ಬಳಿಕ ತವರಿಗೆ ಸಿಎಂ ಭೇಟಿ – ಸ್ವಗ್ರಾಮದ ಈಶ್ವರನಿಗೆ ವಿಶೇಷ ಪೂಜೆ

    ಹಾಸನ: ಮಂಡ್ಯದಲ್ಲಿ ಗದ್ದೆನಾಟಿ ಮಾಡಿ ಸದ್ದು ಮಾಡಿದ್ದ ಸಿಎಂ ಕುಮಾರಸ್ವಾಮಿ ಅವರು ಇದೀಗ ತವರು ಜಿಲ್ಲೆ ಹಾಸನಕ್ಕೆ ಶ್ರಾವಣ ಸೋಮವಾರದ ಪೂಜೆಗಾಗಿ ಎಂಟ್ರಿಕೊಟ್ಟಿದ್ದಾರೆ.

    ಶ್ರಾವಣ ಮಾಸ ಹಿನ್ನಲೆಯಲ್ಲಿ ಅವರ ಮನೆ ದೇವರು ಹೊಳೆನರಸೀಪುರದ ಹರದನಹಳ್ಳಿ ದೇವೇಶ್ವರ ದೇವಾಲಯ, ಅವರ ತಂದೆಯ ಮೆಚ್ಚಿನ ದೈವ ಮಾವಿನ ಕೆರೆ ಬೆಟ್ಟದ ರಂಗನಾಥಸ್ವಾಮಿ ಸೇರಿದಂತೆ ಅವರ ಕುಲದೈವದ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಪೂಜೆಗೆ ಸಿಎಂ ಕುಮಾರಸ್ವಾಮಿ ತೆರಳಲಿದ್ದಾರೆ. ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಕೂಡ ಭೇಟಿ ನೀಡಲಿದ್ದಾರೆ. ತಡ ರಾತ್ರಿ ಹಾಸನದ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಮಾಡಿರುವ ಎಚ್ ಡಿ ಕುಮಾರಸ್ವಾಮಿ 7 ಗಂಟೆಯಿಂದ ಹರದನಹಳ್ಳಿಯಲ್ಲಿ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.

    ಕುಮಾರಸ್ವಾಮಿ ಸ್ವಾಮಿ ಜೊತೆ ತಂದೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹಾಗೂ ಸಹೋದರ ಸಚಿವ ಹೆಚ್ ಡಿ ರೇವಣ್ಣ ಭಾಗಿಯಾಗಲಿದ್ದು, ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣೆಗೂ ತಮ್ಮ ಕುಮಾರ ಪರ್ವ ಯಾತ್ರೆಯನ್ನು ಆರಂಭಿಸುವ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಇದೇ ರಂಗನಾಥಸ್ವಾಮಿ ದೇವಾಲಯ ಬಳಿ ಕುಳಿತು ದೇವೇಗೌಡರು ತಮ್ಮ ಮಗ ಸಿಎಂ ಆಗಿಯೇ ಆಗುತ್ತಾನೆ ಅಂತ ಭವಿಷ್ಯ ನುಡಿದಿದ್ದನ್ನು ಕೂಡ ಇಲ್ಲಿ ಸ್ಮರಿಸಬಹುದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews