Tag: ಶ್ರಾವ್ಯ ರಾವ್

  • ಅನೀಶ್ ನಟನೆಯ ‘ಮಾಯಾನಗರಿ’ ಚಿತ್ರದ ಲಚ್ಚಿ ಸಾಂಗ್ ರಿಲೀಸ್

    ಅನೀಶ್ ನಟನೆಯ ‘ಮಾಯಾನಗರಿ’ ಚಿತ್ರದ ಲಚ್ಚಿ ಸಾಂಗ್ ರಿಲೀಸ್

    ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ (Mayanagari) ಚಿತ್ರದ ಲಚ್ಚಿ ಲಚ್ಚಿ ಹಾಡಿನ (Song) ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ  5 ವರ್ಷದ ಮಗು  ನಿಶಿತಾ ಕೈಲಿ ಲಚ್ಚಿ ಹಾಡನ್ನು ಬಿಡುಗಡೆಗೊಳಿಸಲಾಯಿತು.

    ಅನೀಶ್ ತೇಜೇಶ್ವರ್ (Anish Tejeshwar), ತೇಜು ಹಾಗೂ ಶ್ರಾವ್ಯರಾವ್ (Shravya Rao) ಪ್ರಮುಖ  ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ  ಶಂಕರ್ ಆರಾಧ್ಯ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು ಶಂಕರ್ ಆರಾಧ್ಯ ಈ ಚಿತ್ರವನ್ನು ನಿರೂಪಿಸಿದ್ದಾರೆ. ಮಾಯಾನಗರಿ ಇದೀಗ ಬಿಡುಗಡೆಗೆ ಸಿದ್ದವಾಗಿದ್ದು ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ವೈರಲ್ ಆಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್, ಈ ಹಾಡು ನಮ್ಮ ಚಿತ್ರಕ್ಕೆ ಟ್ರಂಪ್ ಕಾರ್ಡ್ ಆಗುತ್ತೆ ಅಂತ ಕಲರ್ ಫುಲ್ ಆಗಿಯೇ ಶೂಟ್  ಮಾಡಿದ್ದೇವೆ. ಕಂಠೀರವ ಸ್ಟುಡಿಯೋ ಹಾಗೂ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ 6 ದಿನ ಇದನ್ನು ಚಿತ್ರೀಕರಿಸಿದ್ದೇವೆ. ಹಾರರ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಕಥೆ ಇದಾಗಿದ್ದು, ಚಿತ್ರದಲ್ಲಿ ನಾಯಕ ಶಂಕರ್ ನಾಗ್  ಅಭಿಮಾನಿ, ಚಿತ್ರರಂಗದಲ್ಲಿ ದೊಡ್ಡ ನಿರ್ದೇಶಕನಾಗಬೇಕೆಂದು ಹೋರಾಟ ನಡೆಸುವ ಆತನಿಗೆ ಕೊನೆಗೂ ಒಂದು ಅವಕಾಶ ಸಿಕ್ಕಿ, ಮಾಯಾನಗರಿ ಎಂಬ ಸ್ಥಳಕ್ಕೆ ಹೋಗಬೆಕಾಗುತ್ತದೆ. ಆ ಊರಿಗೆ ಬರುವ ಆತ ಅಲ್ಲಿ ತಾನೇ ಪಾತ್ರವಾಗಬೇಕಾಗುತ್ತದೆ. ಹೀಗೆ ಕುತೂಹಲಕಾರಿಯಾಗಿ ಸಾಗುವ ಈ ಚಿತ್ರಕ್ಕೆ ಬೆಂಗಳೂರು, ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಭದ್ರಾವತಿ ಸುತ್ತಮುತ್ತ ಸುಮಾರು 65 ದಿನಗಳ‌ ಕಾಲ ಚಿತ್ರೀಕರಣ ಮಾಡಿದ್ದೇವೆ. ವಿಶೇಷವಾಗಿ ಹಿರಿಯ ನಟ ದ್ವಾರಕೀಶ್ ಅವರು ರಿಯಲ್ ಲೈಫ್ ಪಾತ್ರವನ್ನೇ ಮಾಡಿದ್ದಾರೆ ಎಂದು ಹೇಳಿದರು.

    ನಾಯಕ  ಅನೀಶ್ ಮಾತನಾಡುತ್ತ ನಾನು ತುಂಬಾ ಇಷ್ಟಪಟ್ಟು ಮಾಡಿದಂಥ ಪಾತ್ರವಿದು. ದ್ವಾರಕೀಶ್ ರಂಥ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ನನ್ನ ಅದೃಷ್ಟ. ಡೈರೆಕ್ಟರ್ ಆಗಬೇಕೆಂದು ಕನಸು ಕಾಣೋ ಹುಡುಗನ ಪಾತ್ರ ಮಾಡಿದ್ದೇನೆ ಎಂದರು.

    ನಟಿ ಶ್ರಾವ್ಯ ರಾವ್ ಮಾತನಾಡಿ ಚಿತ್ರದಲ್ಲಿ ನಾನು ಮಲ್ಲಿಕಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ನನ್ನ‌ ಕರಿಯರ್ ನಲ್ಲೇ ಒಂದು ಬೆಸ್ಟ್ ಪಾತ್ರ. ತುಂಬಾ ಶೇಡ್ಸ್ ಇದೆ ಎಂದರು. ಮತ್ತೊಬ್ಬ‌ ನಟ ಭರತ್ ಮಾತನಾಡಿ ತನ್ನ ಪಾತ್ರ ಪರಿಚಯಿಸಿಕೊಂಡರು. ಚಿತ್ರದಲ್ಲಿ ಇನ್ನೂ ಹಲವಾರು ವಿಶೇಷತೆಗಳಿದ್ದು, ಅದನ್ನು ಹಂತ ಹಂತವಾಗಿ ಪರಿಚಯಿಸುವ ಆಲೋಚನೆ ಶಂಕರ್ ಅವರಿಗಿದೆ. ಸ್ಯಾಂಡಲ್ ವುಡ್ ಪಿಕ್ಚರ್ಸ್ ಬ್ಯಾನರ್ ಅಡಿ, ನಿರ್ಮಾಣವಾಗಿರುವ ಈ ಚಿತ್ರಕ್ಕೆ ಶ್ವೇತಾ ಶಂಕರ್ ಸಹ ನಿರ್ಮಾಣವಿದೆ.

     

    ತಾಂತ್ರಿಕವಾಗಿ  ಅದ್ಧೂರಿಯಾಗಿ ಮೂಡಿ ಬಂದಿರುವ ಈ ಚಿತ್ರಕ್ಕೆ  ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಮೋರ್  ಫೈಟ್ ಕಂಪೋಸ್ ಮಾಡಿದ್ದಾರೆ. ಮದನ್ – ಹರಿಣಿ ಹಾಗೂ ಮುರಳಿ ನೃತ್ಯ ನಿರ್ದೇಶನ, ವಿಜಯ್ ಎಂ ಕುಮಾರ್ ಸಂಕಲನ, ಶ್ರೀನಿವಾಸ್ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ. ಶರತ್ ಲೋಹಿತಾಶ್ವ, ಅವಿನಾಶ್, ಸುಚೇಂದ್ರ ಪ್ರಸಾದ್, ಎಡಕಲ್ಲು ಗುಡ್ಡದ ಚಂದ್ರಶೇಖರ್, ಚಿಕ್ಕಣ್ಣ, ಗಿರಿ ದಿನೇಶ್ ಹಾಗೂ ನಿಹಾರಿಕಾ  ಚಿತ್ರದ ತಾರಬಳಗದಲ್ಲಿದ್ದಾರೆ.

  • ‘ಐ ಲವ್ ಯೂ’ ಎಂದ ನಟಿ ಶ್ರಾವ್ಯ ರಾವ್

    ‘ಐ ಲವ್ ಯೂ’ ಎಂದ ನಟಿ ಶ್ರಾವ್ಯ ರಾವ್

    ಟ್ಟಯ್ಯ ವರ್ಸಸ್‌ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್‌ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು. ಆ ನಂತರ ಥ್ರಿಲ್ಲರ್‌ ಮಂಜು ಅವರ ಡೆಡ್ಲಿ ಕಿಲ್ಲರ್‌ ಚಿತ್ರದಲ್ಲಿ ಖಳನಟನಾಗಿ ಅಭಿನಯಿಸಿದ್ದಾರೆ. ಇತ್ತೀಚೆಗಷ್ಟೇ ಸಿಂಗಾಪೂರದಲ್ಲಿ ಕಾರ್ನಿವಲ್‌ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿ ಪಡೆದ ಮತ್ತು ಹಲವು ದೇಶಗಳಲ್ಲಿ ಪ್ರಶಸ್ತಿಗಳನ್ನು ಪಡೆದ ʻಕುಗ್ರಾಮʼ ಚಿತ್ರದ ರಚನೆ ಮತ್ತು ನಿರ್ದೇಶನ ಕೂಡಾ ಇವರದ್ದೇ. ಇನ್ನೇನು ತೆರೆಗೆ ಬರಲು ಸಿದ್ದಗೊಳ್ಳುತ್ತಿರುವ ʻಬ್ರಹ್ಮಕಮಲʼ ಚಿತ್ರಕ್ಕೆ ಲೋಕೇಂದ್ರ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

    ನಟನೆ, ನಿರ್ದೇಶನದ ಜೊತೆಗೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡುತ್ತಿರುವ ಲೋಕೇಂದ್ರ ಸೂರ್ಯ ಈಗ ಹೊಸ ಸಿನಿಮಾವೊಂದನ್ನು ಆರಂಭಿಸಿದ್ದಾರೆ. ಸ್ವತಃ ಲೋಕೇಂದ್ರ ಅವರೇ ನಿರ್ದೇಶಿಸಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ʻಅಥಿ ಐ ಲವ್‌ ಯೂʼ ಎಂಬ ಹೆಸರನ್ನಿಡಲಾಗಿದೆ. ಫೆಬ್ರವರಿ 7ರ ಬೆಳಿಗ್ಗೆ ರಾಜಾಜಿನಗರದ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಸರಳ ಪೂಜಾ ಕಾರ್ಯದೊಂದಿಗೆ ʻಅಥಿ ಐ ಲವ್‌ ಯೂʼ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ ಮ ಹರೀಶ್‌ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಭಾ ಮ ಗಿರೀಶ್‌ ಕ್ಯಾಮೆರಾ ಚಾಲನೆ ಮಾಡಿದರು. ನಿರ್ಮಾಪಕ ರೆಡ್‌ & ವೈಟ್‌ ಸೆವೆನ್‌ ರಾಜ್‌ ಉಪಸ್ಥಿತರಿದ್ದರು. ಇವರ ಜೊತೆಗೆ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸಿದ್ದರು. ಇದನ್ನೂ ಓದಿ: ನಟ ಪ್ರಭಾಸ್ ಜೊತೆ ಕೃತಿ ಸನೋನ್ ಮದುವೆ: ಬ್ರೇಕಿಂಗ್ ನ್ಯೂಸ್ ಎಂದ ಉಮೈರ್

    ಸೆವೆನ್‌ ರಾಜ್‌ ಆರ್ಟ್ಸ್‌ ಬ್ಯಾನರ್‌ ಅಡಿಯಲ್ಲಿ, ರೆಡ್‌ ಅಂಡ್‌ ವೈಟ್‌ ಸೆವೆನ್‌ ರಾಜ್‌ ʻಅಥಿ ಐ ಲವ್‌ ಯೂʼ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆಯ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಯುಡಿವಿ ವೆಂಕಿ ಸಂಕಲನ, ಅನಂತ್‌ ಆರ್ಯನ್‌ ಸಂಗೀತ ಚಿತ್ರಕ್ಕಿದೆ. ನಟಿ ಋತು ಚೈತ್ರ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿರುವುದು ವಿಶೇಷ. ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಉತ್ತಮ ಹೆಸರು ಪಡೆದಿರುವ ಎನ್.‌ ಓಂ ಪ್ರಕಾಶ್‌ ರಾವ್‌ ಅವರ ಪುತ್ರಿ ಶ್ರಾವ್ಯಾ ರಾವ್‌ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

    ʻʻಗಂಡ-ಹೆಂಡತಿ ನಡುವೆ ಒಂದು ದಿನದಲ್ಲಿ ನಡೆಯುವ ಕತೆ ʻಅಥಿ ಐ ಲವ್‌ ಯೂʼ ಪ್ರಧಾನ ಎಳೆಯಾಗಿದೆ. ಎರಡು ಪಾತ್ರಳನ್ನು ಕೇಂದ್ರವಾಗಿಟ್ಟುಕೊಂಡು ಚಿತ್ರಕತೆ ರೂಪಿಸಲಾಗಿದೆ. ಗಂಡ ಕೆಲಸಕ್ಕೆಂದು ಹೊರ ಹೋದ ನಂತರ ನಡೆಯುವ ಒಂದಷ್ಟು ಘಟನೆಗಳನ್ನು ರೋಚಕವಾಗಿ ತೋರಸಲಾಗುತ್ತದೆʼ ಎಂದು ಲೋಕೇಂದ್ರ ಸೂರ್ಯ ಹೇಳಿಕೊಂಡಿದ್ದಾರೆ. ʻʻಇತ್ತೀಚೆಗೆ ಹಲವಾರು ಸಿನಿಮಾಗಳ ಕತೆ ಕೇಳಿದ್ದೇನೆ. ಆದರೆ ʻಅಥಿʼ ಚಿತ್ರದ ಕತೆ ನನಗೆ ಅಪಾರವಾಗಿ ಇಷ್ಟವಾಯ್ತು. ಈ ಪಾತ್ರ ಮತ್ತು ಸಿನಿಮಾ ಎರಡೂ ಕನ್ನಡದ ಮಟ್ಟಿಗೆ ತೀರಾ ಹೊಸದಾಗಿದೆ. ಇಡೀ ಚಿತ್ರ ನನ್ನ ಪಾತ್ರದ ಮೇಲೇ ಹೆಚ್ಚು ಕ್ಯಾರಿ ಆಗುತ್ತಿರುವುದು ನನಗೆ ಖುಷಿ ಕೊಟ್ಟಿದೆʼʼ ಎಂದು ನಾಯಕಿ ಶ್ರಾವ್ಯ ರಾವ್‌ ಹೇಳಿದ್ದಾರೆ. ಸದ್ಯ ʻಅಥಿ ಐ ಲವ್‌ ಯೂʼ ಚಿತ್ರದ ಮುಹೂರ್ತ ನೆರವೇರಿದ್ದು, ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k