ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿರುವ ಟಾಲಿವುಡ್ ನಟ ಶ್ರೀಕಾಂತ್ (Srikanth) ಅವರು ಇಂದು (ಸೆ.15) ಧಾರವಾಡಕ್ಕೆ (Dharawad) ಬಂದು ತಮ್ಮ ಹಳೆಯ ಗೆಳೆಯರನ್ನು ಭೇಟಿ ಮಾಡಿ, ಉಪಹಾರ ಸೇವಿಸಿ ಹೋಗಿದ್ದಾರೆ.
ಮೂಲತಃ ಗಂಗಾವತಿಯವರಾದ ಶ್ರೀಕಾಂತ್, ಧಾರವಾಡ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಅವರು, ತಮ್ಮ ಸ್ವಂತ ಊರು ಗಂಗಾವತಿಗೆ ಹೊರಟಿದ್ದರು. ಈ ವೇಳೆ, ಧಾರವಾಡದ ತಮ್ಮ ಸ್ನೇಹಿತ ಉಪವನ ಹೋಟೆಲ್ ಮಾಲೀಕರಾದ ದಿನೇಶ ಶೆಟ್ಟಿ ಅವರ ಮನೆಗೆ ನಟ ಭೇಟಿ ಕೊಟ್ಟು ಅವರ ಮನೆಯಲ್ಲೇ ಬೆಳಗಿನ ಉಪಹಾರ ಸೇವಿಸಿದ್ದಾರೆ.
ಕಾಲೇಜು ದಿನಗಳಲ್ಲಿ ಉಪವನ ಹೋಟೆಲ್‌ನಲ್ಲೇ ಶ್ರೀಕಾಂತ್ ಅವರು ಉಪಹಾರ ಮಾಡುತ್ತಿದ್ದರು. ಹೀಗಾಗಿ ಆಗಾಗ ತಮ್ಮ ಗೆಳೆಯರ ಭೇಟಿಗೆ ಶ್ರೀಕಾಂತ್ ಅವರು ಧಾರವಾಡಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಇದನ್ನೂ ಓದಿ:ಬಾಲಿವುಡ್ ಆಫರ್ ಬಾಚಿಕೊಂಡ ‘ಸೀತಾ ರಾಮಂ’ ನಟಿ
ಅಂದಹಾಗೆ, ಕನ್ನಡದ ಯುಗಾದಿ, ಪುನೀತ್ ರಾಜ್‌ಕುಮಾರ್ ಜೊತೆ ‘ಜೇಮ್ಸ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಶ್ರೀಕಾಂತ್ ನಟಿಸಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ (Rave Party) ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ, ಮಾದಕ ವಸ್ತುಗಳು ಲಭ್ಯವಾಗಿದೆ. ಈ ರೇವ್ ಪಾರ್ಟಿಯಲ್ಲಿ ತೆಲುಗು ನಟಿ-ನಟಿಯರ ಹೆಸರು ಕೇಳಿ ಬಂದಿದೆ. ಜೊತೆಗೆ ತೆಲುಗಿನ ನಟ ಶ್ರೀಕಾಂತ್ (Srikanth) ಹೆಸರು ಕೇಳಿ ಬಂದ ಬೆನ್ನಲ್ಲೇ, ನಾನು ಯಾವ ರೇವ್ ಪಾರ್ಟಿಗೂ ಹೋಗಿಲ್ಲ ಎಂದು ವಿಡಿಯೋ ಮೂಲಕ ಸ್ಟಷ್ಟನೆ ನೀಡಿದ್ದಾರೆ.
ನಾನು ನನ್ನ ಹೈದರಾಬಾದ್ ಮನೆಯಲ್ಲಿ ನಿಂತಿದ್ದೇನೆ. ಜನರು ಇದನ್ನು ಪರಿಶೀಲಿಸಬಹುದು. ಬೆಂಗಳೂರಿನಲ್ಲಿ ಪೊಲೀಸರು ದಾಳಿ ನಡೆಸಿದ ರೇವ್ ಪಾರ್ಟಿಯಲ್ಲಿ ನನ್ನ ಹೆಸರು ಕೇಳಿ ಬಂದಿದ್ದು ನೋಡಿ ನನಗೆ ಆಶ್ಚರ್ಯ ಆಯಿತು. ನನ್ನ ಸ್ನೇಹಿತರು ಈ ಬಗ್ಗೆ ವಿಚಾರಿಸಲು ಕರೆ ಮಾಡಿದ್ದರು. ಈ ಸುದ್ದಿ ಕೇಳಿ ಮೊದಲಿಗೆ ನನ್ನ ಕುಟುಂಬಸ್ಥರು ನಕ್ಕರು. ಆದರೆ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅನೇಕ ಸುದ್ದಿಗಳು ಹರಿದಾಡಲು ಆರಂಭಿಸಿದಾದ ನಾನು ಸ್ಪಷ್ಟನೆ ನೀಡಲು ನಿರ್ಧರಿಸಿದೆ ಎಂದು ಶ್ರೀಕಾಂತ್ ಹೇಳಿದ್ದಾರೆ.
ಸುದ್ದಿ ಪ್ರಸಾರ ಮಾಡುವುದಕ್ಕೂ ಮುನ್ನ ಮಾಧ್ಯಮದ ಅನೇಕ ಸ್ನೇಹಿತರು ನನಗೆ ಕರೆ ಮಾಡಿ ವಿಷಯವನ್ನು ಸ್ಪಷ್ಟಪಡಿಸಿಕೊಂಡರು. ಆದರೆ ಕೆಲವು ವಾಹಿನಿಯವರು ಅಸಲಿ ವಿಚಾರ ಅರಿಯದೇ ಸುದ್ದಿ ಪ್ರಸಾರ ಮಾಡಿದರು. ಅದು ಅವರ ತಪ್ಪಲ್ಲ. ಯಾಕೆಂದರೆ, ಮೊದಲ ಬಾರಿಗೆ ನಾನು ವಿಡಿಯೋಗಳಲ್ಲಿ ಗಡ್ಡ ಇರುವ ವ್ಯಕ್ತಿ ಮುಖ ಮುಚ್ಚಿಕೊಂಡಿದ್ದನ್ನು ನೋಡಿದಾಗ ನನ್ನ ರೀತಿ ಕಾಣಿಸಿದ್ದಾನೆ ಎಂದಿದ್ದಾರೆ. ಇದನ್ನೂ ಓದಿ:‘ಗುಡ್ ಬ್ಯಾಡ್ ಅಗ್ಲಿ’ ಚಿತ್ರದ ಪೋಸ್ಟರ್ ಔಟ್- ತ್ರಿಬಲ್ ರೋಲ್‌ನಲ್ಲಿ ಅಜಿತ್?
ನಾನು ಮತ್ತೆ ಸ್ಪಷ್ಟನೆ ನೀಡುತ್ತೇನೆ. ರೇವ್ ಪಾರ್ಟಿಗಳಿಗೆ ಹೋಗುವ ಅಭ್ಯಾಸ ನನಗೆ ಇಲ್ಲ. ರೇವ್ ಪಾರ್ಟಿ, ಪಬ್ ಕಲ್ಚರ್ ಅನ್ನು ನಾನು ಫಾಲೋ ಮಾಡಲ್ಲ. ಕೆಲವೊಮ್ಮೆ ನಾನು ಬರ್ತ್‌ಡೇ ಪಾರ್ಟಿಗಳಿಗೆ ಹೋಗುತ್ತೇನೆ. ಆದರೆ ಅರ್ಧ ಗಂಟೆಯೊಳಗೆ ವಾಪಸ್ ಬರುತ್ತೇನೆ. ಸುದ್ದಿ ಪ್ರಸಾರ ಮಾಡುವುದಕ್ಕೂ ಮುನ್ನ ಅದರ ಸತ್ಯ ಸಂಗತಿಯನ್ನು ಖಚಿತಪಡಿಸಿಕೊಳ್ಳಿ ಎಂದು ನಾನು ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಶ್ರೀಕಾಂತ್ ಮಾತನಾಡಿದ್ದಾರೆ.
ಬೆಂಗಳೂರು: ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ (Chaitra Kundapura) ಗೆಳೆಯ ಶ್ರೀಕಾಂತ್ ವಿರುದ್ಧ ಮತ್ತೊಂದು ಸೆಕ್ಷನ್ ದಾಖಲು ಮಾಡಲಾಗಿದೆ.
ಬಂಡೆಪಾಳ್ಯ ಠಾಣೆಯಲ್ಲಿ ಸಿಸಿಬಿ ಪೊಲೀಸರು ಐಪಿಸಿ ಸೆಕ್ಷನ್ 201 ಹೊಸದಾಗಿ ಸೇರ್ಪಡೆ ಮಾಡಿದ್ದಾರೆ. ಸಿಸಿಬಿ ತನಿಖೆ ವೇಳೆ ಚೈತ್ರಾ ಹಾಗೂ ಗೆಳೆಯ ಆರೋಪಿ ಶ್ರೀಕಾಂತ್ (Shrikanth) ಕಳ್ಳಾಟ ಬಯಲಾಗಿದ್ದು, ಶ್ರೀಕಾಂತ್ ಮೊಬೈಲ್ ಸಂಪೂರ್ಣ ನಾಶ ಮಾಡಲಾಗಿದೆ. ಇದನ್ನೂ ಓದಿ: ಹಬ್ಬಕ್ಕೆ ಊರಿಗೆ ಹೊರಟ ಜನ- ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್
ಆರೋಪಿಗಳ ಇಬ್ಬರ ಮೊಬೈಲ್ ಪೋನ್ ತಡಕಾಡಿದ ಸಿಸಿಬಿಗೆ ಮೊಬೈಲ್‌ನಲ್ಲಿರುವ ದತ್ತಾಂಶ ನಾಶವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹಾಗಾಗಿ ಆರೋಪಿಗಳ ವಿರುದ್ಧ ಸಾಕ್ಷಿ ನಾಶ ಆರೋಪದ ಮೇಲೆ ಮತ್ತೊಂದು ಸೆಕ್ಷನ್ ಸೇರಿಸಲಾಗಿದೆ.
ವಂಚನೆ ಪ್ರಕರಣ ಸಂಬಂಧ ಎಫ್‌ಐಆರ್ ಆಗುತ್ತಿದ್ದಂತೆ ಶ್ರೀಕಾಂತ್ ಹಾಗೂ ಚೈತ್ರಾ ನಡುವೆ ನಡೆದಿರುವ ಸಂಭಾಷಣೆಗಳನ್ನು ನಾಶ ಮಾಡಲಾಗಿದೆ.
ಚಿತ್ರರಂಗದಲ್ಲಿ ಡಿವೋರ್ಸ್ (Divorce) ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಳೆದ ವರ್ಷ ಸಮಂತಾ, ನಾಗಚೈತನ್ಯ ನಂತರ ತೆಲುಗಿನ ಖ್ಯಾತ ನಟ ಶ್ರೀಕಾಂತ್ (Srikanth) ದಾಂಪತ್ಯದಲ್ಲಿ ಬಿರುಕಾಗಿದೆ. ಡಿವೋರ್ಸ್ಗೆ ರೆಡಿಯಾಗಿದ್ದಾರೆ ಎನ್ನಲಾಗುತ್ತಿದೆ.
ತೆಲುಗು(Tollywood) ಮತ್ತು ಕನ್ನಡ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟ ಶ್ರೀಕಾಂತ್ ವೈವಾಹಿಕ ಬದುಕಲ್ಲಿ ಬಿರುಗಾಳಿ ಎದ್ದಿದೆ. 25 ವರ್ಷಗಳಿಂದ ಜೊತೆಯಾಗಿದ್ದ ಈ ಜೋಡಿ, ದಾಂಪತ್ಯಕ್ಕೆ ಫುಲ್ ಸ್ಟಾಪ್ ಇಡಲು ರೆಡಿಯಾಗಿದ್ದಾರಂತೆ. 1997ರಲ್ಲಿ ಶ್ರೀಕಾಂತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಗೆ ಇಬ್ಬರೂ ಗಂಡು ಮಕ್ಕಳು ರೋಷನ್, ರೋಹನ್ ಮತ್ತು ಮಗಳು ವೇದಾ. ಇನ್ನೂ ಪತ್ನಿ ಊಹಾ ಕೂಡ ನಟಿಯಾಗಿದ್ದು, ಸಾಕಷ್ಟು ಸೌತ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಏಕಾಂಗಿಯಾಗಿ ಹನಿಮೂನ್ ಸ್ಪಾಟ್, ಬಾಲಿಗೆ ಹಾರಿದ ನಿವೇದಿತಾ ಗೌಡ
ಟಾಲಿವುಡ್ ಗಲ್ಲಿಗಳಲ್ಲಿ ಶ್ರೀಕಾಂತ್ ಡಿವೋರ್ಸ್ ವಿಚಾರವೇ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶ್ರೀಕಾಂತ್ ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ನಟ ಆರ್ಥಿಕ ಸಂಕಷ್ಟವೇ ಡಿವೋರ್ಸ್ಗೆ ಕಾರಣ ಎಂಬ ಸುದ್ದಿ ಹರಿದಾಡುತ್ತಿದೆ.
ಇನ್ನೂ ಪುತ್ರ ರೋಷನ್ ಕೂಡ ಟಾಲಿವುಡ್‌ಗೆ ಈಗಾಗಲೇ ಎಂಟ್ರಿ ಕೊಟ್ಟಾಗಿದೆ. `ಪೆಲ್ಲಿ ಸಂದಡಿ’ ಚಿತ್ರದ ಮೂಲಕ ಗುರುತಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಕನ್ನಡ ಭರಾಟೆ ನಟಿ ಶ್ರೀಲೀಲಾ ನಟಿಸಿದ್ದರು.
Live Tv
[brid partner=56869869 player=32851 video=960834 autoplay=true]
ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಕನ್ನಡದ ಜೇಮ್ಸ್ ಚಿತ್ರಕ್ಕೆ ತೊಂದರೆ ಆಗುತ್ತಿದೆ ಎಂದು ಕನ್ನಡಪರ ಸಂಘಟನೆಗಳು ಮತ್ತು ಪುನೀತ್ ಅವರ ಅಭಿಮಾನಿಗಳು ಹೋರಾಟ ಮಾಡುತ್ತಿರುವಾಗಲೇ ನಟ ಶಿವರಾಜ್ ಕುಮಾರ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಜೇಮ್ಸ್ ಚಿತ್ರಕ್ಕೆ ಯಾವುದೇ ತೊಂದರೆ ಆಗಿಲ್ಲ ಎಂದು ಅಚ್ಚರಿಕೆ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?
ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಶಿವರಾಜ್ ಕುಮಾರ್, ‘ನಾನು ರಾಜಕಾರಣಿಯಾಗಿ ಈ ಮಾತನ್ನು ಹೇಳುತ್ತಿಲ್ಲ. ನಿಜ ಹೇಳುತ್ತಿರುವೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಜೇಮ್ಸ್ ಚಿತ್ರಕ್ಕೆ ಯಾವುದೇ ರೀತಿಯಲ್ಲಿ ತೊಂದರೆ ಆಗಿಲ್ಲ. ಕನ್ನಡ ಸಿನಿಮಾಗಳ ವಿಚಾರದಲ್ಲಿ ನಾನು ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ. ಕನ್ನಡ ಚಿತ್ರಗಳಿಗೆ ತೊಂದರೆಯಾದಾಗ ಧ್ವನಿ ಎತ್ತಿದ್ದೇನೆ. ಒಳ್ಳೆಯ ಕಲೆಕ್ಷನ್ ಆಗುತ್ತಿರುವ ಜೇಮ್ಸ್ ಥಿಯೇಟರ್ ನಿಂದ ತಗೆಯುವುದು ಸರಿಯಾದದ್ದು’ ಅಲ್ಲ ಅಂದಿದ್ದಾರೆ. ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?
ಈ ವಾರ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ರಿಲೀಸ್ ಆಗುತ್ತಿದೆ. 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿರುವುದರಿಂದ ಸಹಜವಾಗಿಯೇ ಜೇಮ್ಸ್ ಚಿತ್ರಕ್ಕೆ ಥಿಯೇಟರ್ ಕೊರತೆ ಎದುರಾಗಲಿದೆ. ಹೀಗಾಗಿ ಜೇಮ್ಸ್ ಸಿನಿಮಾ ಉಳಿಸಿಕೊಳ್ಳಲು ನಿರ್ಮಾಪಕರು ನಾನಾ ರೀತಿಯ ಕಸರತ್ತು ನಡೆಸಿದ್ದಾರೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ
ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವ ಚಿತ್ರತಂಡ, ಜೇಮ್ಸ್ ಸಿನಿಮಾಗೆ ತೊಂದರೆ ಆಗದಂತೆ ಸಹಾಯ ಮಾಡಿ ಎಂದು ಕೇಳಿಕೊಂಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಚಿತ್ರತಂಡದ ಜತೆ ನಿಲ್ಲುವುದಾಗಿ ಹೇಳಿದ್ದಾರಂತೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್
ನಟ ಶಿವರಾಜ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ಅವರ ರೇಸ್‍ವೀವ್ ನಿವಾಸದಲ್ಲಿ ಭೇಟಿ ಮಾಡಿದ ಶಿವರಾಜ್ ಕುಮಾರ್, ‘ಜೇಮ್ಸ್’ ಸಿನಿಮಾದ ಕುರಿತಾಗಿ ಎದ್ದಿರುವ ಗೊಂದಲದ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಸಹೋದರ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾವನ್ನು ವೀಕ್ಷಿಸಲು ಆಹ್ವಾನ ಕೂಡ ನೀಡಿದ್ದಾರೆ.
ನಟ ಶಿವರಾಜ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ಅವರ ರೇಸ್‍ವೀವ್ ನಿವಾಸದಲ್ಲಿ ಭೇಟಿ ಮಾಡಿದ ಶಿವರಾಜ್ ಕುಮಾರ್, ‘ಜೇಮ್ಸ್’ ಸಿನಿಮಾದ ಕುರಿತಾಗಿ ಎದ್ದಿರುವ ಗೊಂದಲದ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಸಹೋದರ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾವನ್ನು ವೀಕ್ಷಿಸಲು ಆಹ್ವಾನ ಕೂಡ ನೀಡಿದ್ದಾರೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ
ಕೆಲವು ಕಡೆ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ‘ಜೇಮ್ಸ್’ ತಗೆದು, ಆ ಥಿಯೇಟರ್ ನಲ್ಲಿ ‘ದಿ ಕಾಶೀರ್ ಫೈಲ್ಸ್’ ಸಿನಿಮಾವನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂದು ಸುದ್ದಿ ಆಗಿತ್ತು. ಹಲವು ಕಡೆ ಜೇಮ್ಸ್ ಚಿತ್ರಕ್ಕೆ ತೊಂದರೆ ನೀಡುತ್ತಿದ್ದಾರೆ ಎಂದು ಸ್ವತಃ ಚಿತ್ರದ ನಿರ್ದೇಶಕ ಚೇತನ್ ಕುಮಾರ್ ಹೇಳಿಕೊಂಡಿದ್ದರು. ಈ ವಿಷಯವನ್ನೂ ಮುಖ್ಯಮಂತ್ರಿಗಳ ಜತೆ ಶಿವರಾಜ್ ಕುಮಾರ್ ಚರ್ಚೆ ಮಾಡಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್
ನೆನ್ನೆಯಷ್ಟೇ ಜೇಮ್ಸ್ ಸಿನಿಮಾಗೆ ಯಾರೂ ತೊಂದರೆ ಮಾಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು. ಪುನೀತ್ ಅವರ ಕೊನೆ ಸಿನಿಮಾವನ್ನು ಎಲ್ಲರೂ ವೀಕ್ಷಿಸಲು ಅವಕಾಶ ಸಿಗಬೇಕು ಎಂದಿದ್ದರು. ಈ ಮಾತಿನ ಬೆನ್ನಲ್ಲೆ ಸಿಎಂ ಮತ್ತು ಶಿವರಾಜ್ ಕುಮಾರ್ ಭೇಟಿ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!
ಸಿಎಂ ಭೇಟಿ ವೇಳೆ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಜೇಮ್ಸ್ ಸಿನಿಮಾದ ನಿರ್ಮಾಪಕ ಕಿಶೋರ್ ಪತ್ತಿಕೊಂಡ, ನಿರ್ಮಾಪಕ ಶ್ರೀಕಾಂತ್ ಜತೆಯಿದ್ದರು. ಈ ವೇಳೆ ಸ್ವತಃ ಶಿವರಾಜ್ ಕುಮಾರ್ ಅವರು ಕಾರ್ ಡ್ರೈವ್ ಮಾಡಿಕೊಂಡು ಬಂದಿದ್ದು ವಿಶೇಷವಾಗಿತ್ತು.
ಮಂಡ್ಯ: ಮಾಜಿ ಎಂಎಲ್‍ಎ ಪುತ್ರನಿಗೆ ಬೆಂಬಲ ನೀಡಿದ ಹಿನ್ನೆಲೆ ಸಿಪಿಐ ಅಧಿಕಾರಿಯನ್ನು ಸಸ್ಪೆಂಡ್ ಮಾಡಿರುವ ಸುದ್ದಿ ಮಂಡ್ಯದ ಮಳವಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪುತ್ರನನ್ನು ರಕ್ಷಣೆ ಮಾಡಲು ಪ್ರಯತ್ನ ಮಾಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಮಳವಳ್ಳಿ ಉಪವಿಭಾಗದ ಸಿಪಿಐ ಡಿ.ಪಿ.ಧನರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ಮಂಡ್ಯ ಎಸ್‍ಪಿ ತಿಳಿಸಿದ್ದಾರೆ. ಇದನ್ನೂ ಓದಿ: 31 ತಿಂಗಳ ಕಾಲ ಮುಚ್ಚಿದ್ದ ಕಾಶ್ಮೀರ ಶಾಲೆಗಳು ಮತ್ತೆ ಆರಂಭ!
ಆದ್ರೆ ಈ ಕುರಿತು ಅಧಿಕೃತ ಆದೇಶ ಪ್ರತಿ ನೀಡಲು ಎಸ್‍ಪಿ ನಿರಾಕರಿಸಿದ್ದಾರೆ. ರೈಸ್ ಪುಲ್ಲಿಂಗ್ ದಂಧೆಕೋರ ಸಲೀಂ ಹತ್ಯೆ ಆರೋಪದ ಮೇಲೆ ಕೆ.ಬಿ ಚಂದ್ರಶೇಖರ್ ಪುತ್ರ ಶ್ರೀಕಾಂತ್ ಜೈಲು ಸೇರಿದ್ದಾರೆ. ಈ ವಿಷಯದಲ್ಲಿ ಧನರಾಜು ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಪ್ರಸ್ತುತ ಅವರನ್ನು ಕೆಲಸದಿಂದ ಅಮಾನತು ಮಾಡಲು ಆದೇಶ ಹೊರಡಿಸಲಾಗಿದೆ.
ಕೀವ್: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಎಂದು ಉಕ್ರೇನ್‍ನ ಖಾರ್ಕಿವ್‍ನಲ್ಲಿ ಶೆಲ್ ದಾಳಿ ವೇಳೆ ಮೃತಪಟ್ಟ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್‍ರನ್ನು ನೆನೆಪಿಸಿಕೊಂಡು ಅವರ ಸ್ನೇಹಿತ ಶ್ರೀಕಾಂತ್ ಭಾವುಕರಾಗಿದ್ದಾರೆ.
ರಷ್ಯಾ-ಉಕ್ರೇನ್ ನಡುವಿನ ಯುದ್ಧದ ತೀವ್ರಗೊಳ್ಳುತ್ತಿದೆ. ಆದಷ್ಟು ಬೇಗ ಉಕ್ರೇನ್ ತೊರೆಯಿರಿ ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟ ಬೆನ್ನಲ್ಲೇ ರಷ್ಯಾ ಶೆಲ್ ದಾಳಿಗೆ ಕನ್ನಡಿಗ ನವೀನ್ (22) ಬಲಿಯಾಗಿದ್ದಾರೆ. ಖಾರ್ಕಿವ್‌ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ದುರಂತ ಸಾವನ್ನಪ್ಪಿದ್ದಾರೆ. ಖಾರ್ಕೀವ್‍ನಲ್ಲಿ ಇವತ್ತು ಬೆಳಗ್ಗೆ 7 ಗಂಟೆಗೆ ಸೂಪರ್ ಮಾರ್ಕೆಟ್‍ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ನವೀನ್ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು
ಈ ಬಗ್ಗೆ, ಖಾರ್ಕಿವ್‌ನಲ್ಲಿರುವ ನವೀನ್ ಸ್ನೇಹಿತ ಶ್ರೀಕಾಂತ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು. ನವೀನ್ ಸೇರಿ 8 ಜನರ ನಮ್ಮ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ, ಎಲ್ಲರಿಗೂ ಊಟ ತರಲು ಬಂಕರ್‌ನಿಂದ ನವೀನ್ ಹೊರ ಹೋಗಿದ್ದ. ಸೂಪರ್ ಮಾರ್ಕೆಟ್ ಬಳಿ ತುಂಬಾ ಕ್ಯೂ ಇದೆ. ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಅಂತ ಭಾವುಕರಾದರು. ಇದನ್ನೂ ಓದಿ: ಖಾರ್ಕಿವ್ ಶೆಲ್ ದಾಳಿ ಯುದ್ಧಾಪರಾಧ: ಉಕ್ರೇನ್ ಅಧ್ಯಕ್ಷ
ಹೈದರಾಬಾದ್: ಆರ್‌ಸಿ 15 ಚಿತ್ರೀಕರಣಕ್ಕಾಗಿ ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರು ಆಂಧ್ರಪ್ರದೇಶದ ರಾಜಮಂಡ್ರಿಯ ರಾಜಾಜಿನಗರಕ್ಕೆ ಬಂದಿಳಿದ ತಕ್ಷಣ ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಹೊರಗೆ ಜಮಾಯಿಸಿ ಚರಣ್ ಅವರನ್ನು ಕಾಣಲು ಮುಗಿಬಿದ್ದಿದ್ದಾರೆ.
ರಾಮ್ ಚರಣ್ ತಮ್ಮ ಮುಂಬರುವ ಚಿತ್ರ ಆರ್‍ಆರ್‍ಆರ್ ಬಿಡುಗಡೆಗಾಗಿ ಈಗಾಗಲೇ ಕಾತುರದಿಂದ ಕಾಯುತ್ತಿದ್ದಾರೆ. ಎಸ್ ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರವು ಮಾರ್ಚ್ 25 ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ತೆಲುಗು ಅಲ್ಲದೆ, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಸಹ ಚಿತ್ರವು ಬಿಡುಗಡೆಯಾಗಲಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಗುಡ್‍ಬೈ ಹೇಳಿದ ಬಾಲಿವುಡ್ ನಟಿ ರಾಖಿ ಸಾವಂತ್
ಫೆಬ್ರವರಿ 13 ರಂದು, ರಾಮ್ ಚರಣ್ ಮತ್ತು ಅವರ ತಂಡವು ಆರ್‌ಸಿ 15 ರ ಶೂಟಿಂಗ್‍ಗಾಗಿ ರಾಜಮಂಡ್ರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದನ್ನೂ ಗಮನಿಸಿದ ಅಭಿಮಾನಿಗಳು ಚರಣ್ ಅವರ ದರ್ಶನ ಪಡೆಯಲು ವಿಮಾನ ನಿಲ್ದಾಣದ ಹೊರಗೆ ಕಾಯುತ್ತಿದ್ದರು.
ವಿಮಾನ ನಿಲ್ದಾಣದಿಂದ ಅವರು ರಾಜಮಂಡ್ರಿಯ ಪ್ರತಿಷ್ಠಿತ ಹೋಟೆಲ್‍ವೊಂದಕ್ಕೆ ತೆರಳುತ್ತಿದ್ದಾಗ ಅಭಿಮಾನಿಗಳು ರಸ್ತೆಯ ಎರಡೂ ಬದಿಯಲ್ಲಿ ಸಾಲುಗಟ್ಟಿ ನಿಂತು ಚರಣ್‍ಗೆ ಆತ್ಮೀಯ ಸ್ವಾಗತ ಕೋರಿದ್ದಾರೆ. ಈ ಸಂದರ್ಭದಲ್ಲಿ ರಾಮ್ ಚರಣ್ ಬೌನ್ಸರ್‌ಗಳು ಅಭಿಮಾನಿಗಳನ್ನು ಚದುರಿಸಲು ಹರ ಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ
Sheer #RamCharan craze in Rajahmundry airport ????????
ಆರ್‌ಸಿ 15 ರಾಜಕೀಯಕ್ಕೆ ಸಂಬಂಧಪಟ್ಟ ಚಿತ್ರವಾಗಿದೆ. ಈ ಚಿತ್ರವನ್ನು ಶಂಕರ್ ಅವರು ನಿರ್ದೇಶಿಸಿದ್ದು, ಚಿತ್ರಕ್ಕೆ ಕಾರ್ತಿಕ್ ಸುಬ್ಬರಾಜ್ ಕಥೆ ಬರೆದಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ಚಿತ್ರವನ್ನು ಉದ್ದೇಶಿಸಿ ಮಾತನಾಡಿದ್ದು, ನಾನು ಈ ರಾಜಕೀಯ ಕಥೆಯನ್ನು ಹಲವು ವರ್ಷಗಳ ಹಿಂದೆ ಬರೆದಿದ್ದೇನೆ. ನನಗೆ ಬಹಳ ಹಿಂದೆಯೇ ಶಂಕರ್ ಸರ್ ಈ ಚಿತ್ರವನ್ನು ನಿರ್ದೇಶಿಸಿದರೆ ಉತ್ತಮವಾಗಿರುತ್ತದೆ ಅಂತ ಅನಿಸಿತ್ತು. ಹೀಗಾಗಿ ನಾನು ಈ ಕಥೆಯನ್ನು ಅವರಿಗೆ ನೀಡಿದಾಗ ಅವರು ಅದನ್ನು ಇಷ್ಟಪಟ್ಟರು. ಅವರು ಈಗಾಗಲೇ ಈ ಕಥೆಯನ್ನು ನಿರ್ದೇಶಿಸಲು ಒಪ್ಪಿಕೊಂಡಿದ್ದಾರೆ. ನಾನು ಅವರೊಂದಿಗೆ ಈ ಚಿತ್ರದಲ್ಲಿ ಕೆಲಸ ಮಾಡಲು ಅತ್ಯಂತ ಸಂತೋಷ ಮತ್ತು ಹೆಮ್ಮೆಯೆನಿಸುತ್ತದೆ.
ರಾಮ್ ಚರಣ್ ಹೊರತಾಗಿ, ಆರ್‌ಸಿ 15 ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ಅಂಜಲಿ, ಜಯರಾಮ್, ಸುನಿಲ್, ಶ್ರೀಕಾಂತ್ ಮತ್ತು ನವೀನ್ ಚಂದ್ರ ನಟಿಸಿದ್ದಾರೆ. ಛಾಯಾಗ್ರಾಹಕ ತಿರುರು, ಸಂಕಲನಕಾರ ಶಮೀರ್ ಮುಹಮ್ಮದ್ ಮತ್ತು ಸಂಗೀತ ಸಂಯೋಜಕ ಎಸ್ ಥಮನ್ ತಾಂತ್ರಿಕ ತಂಡದ ಭಾಗವಾಗಿದ್ದಾರೆ.
ಬೆಂಗಳೂರು: ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಸೀಟು ಭರ್ತಿಗೆ ಅವಕಾಶ ಮಾಡಿಕೊಡುವ ಬಗ್ಗೆ ಎರಡು, ಮೂರು ದಿನದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಅನೇಕ ಚಟುವಟಿಕೆಗೆ ರಿಯಾಯಿತಿ ನೀಡಿದ್ದೇವೆ. ಸಿನಿಮಾಗೆ ಶೇ.50 ರಷ್ಟು ರಿಯಾಯಿತಿ ನೀಡಿದ್ದೇವೆ. ಈಗ ಶೇ.100 ರಷ್ಟು ಬೇಡಿಕೆ ಇಟ್ಟಿದ್ದಾರೆ. ಇವರಿಗೆ ಹೇಗೆ ಸಹಕಾರ ಕೊಡಬೇಕು ಎಂಬುದರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ. ಈ ಕುರಿತು 2, 3 ದಿನದಲ್ಲಿ ತಾಂತ್ರಿಕ ಸಲಹೆ ಸಮಿತಿ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಯುವತಿಯಿಂದ ಕಾರು ಚಾಲನೆ- ಆಟೋ ಸಂಪೂರ್ಣ ನಜ್ಜುಗುಜ್ಜು
ನಿರ್ಮಾಪಕ ಸೂರಪ್ಪ ಬಾಬು ಈ ಕುರಿತು ಮಾತನಾಡಿದ್ದು, ಆದಷ್ಟು ಬೇಗ ಈ ವಿಚಾರಕ್ಕೆ ಅನುಮತಿ ಸಿಗುವ ಸಾಧ್ಯತೆ ಇದೆ. ಇದರ ಜೊತೆಗೆ ಇತರೆ ಕೊರೊನಾ ನಿಯಮ ಸಡಿಲಿಕೆ ಬಗ್ಗೆಯು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.