ಪತ್ರಕರ್ತ ರವಿ ಬೆಳಗೆರೆ (Ravi Belagere) ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ `ವೇಷಗಳು’ ಎಂಬ ಸಣ್ಣ ಕಥೆಯನ್ನಾಧರಿಸಿ (Ravi Belagere Novel) ಅದೇ ಹೆಸರಿನಲ್ಲಿ ಚಲನಚಿತ್ರವೊಂದು ತಯಾರಾಗುತ್ತಿದೆ. ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜು.8ರ ಮಂಗಳವಾರ ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬ. ಅದೇದಿನ ಭಾವನಾ ಬೆಳಗೆರೆ ಹಾಗೂ ಶ್ರೀನಗರ ಕಿಟ್ಟಿ ಅರ್ಪಿಸುವ ‘ವೇಷಗಳು’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಹಾಗೂ ಕಿಟ್ಟಿ ಅವರ ಬರ್ತ್ ಡೇ ಸಮಾರಂಭ ಏರ್ಪಡಿಸಲಾಗಿತ್ತು.
ವೇದಿಕೆಯಲ್ಲಿ ನಿರ್ದೇಶಕ ಕಿಶನ್ ರಾವ್ ಅವರು ಈ ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡಲು ಬೆಳಗೆರೆ ಅವರ ಮಗಳು ಭಾವನಾ ಅವರ ಒಪ್ಪಿಗೆ ಹಾಗೂ ಅಳಿಯ ಕಿಟ್ಟಿ (Srinagar Kitty) ಅವರಿಂದ ಜೋಗತಿ ಪಾತ್ರಕ್ಕೆ ಒಪ್ಪಸಲು ಪಟ್ಟಂಥ ಹರಸಾಹಸಗಳನ್ನು ತೆರೆಯ ಮೇಲೆ ಪ್ರದರ್ಶಿಸಲಾಯಿತು. ಇದನ್ನೂ ಓದಿ: 77 ಲಕ್ಷ ವಂಚನೆ – ಆಲಿಯಾ ಭಟ್ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್
ಈ ಚಿತ್ರದಲ್ಲಿ ನಮ್ಮ ಜೋಗತಿಯರ ಬಗ್ಗೆ ಹಾಗೂ ಅವರ ಜೀವನ ಶೈಲಿಯ ಬಗ್ಗೆ ಹೇಳಲಾಗುತ್ತಿದೆ. ಇಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಈಗಾಗಲೇ ಶ್ರೀನಗರ ಕಿಟ್ಟಿ ಅವರು ಜೋಗತಿ ಪಾತ್ರಕ್ಕಾಗಿ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಜೋಗತಿಯರ ನಡೆ, ನುಡಿಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದುಕೊಂಡು ಸಿದ್ಧತೆ ಮಾಡಿಕೊಂಡಿದ್ದಾರೆ. ಚಿತ್ರದಲ್ಲಿ ಬಸಪ್ಪ ಪಾತ್ರವೇ ಬಹುತೇಕ ಆವರಿಸಿಕೊಂಡಿದೆ. ಇದನ್ನೂ ಓದಿ: `ನಾನು ಪಾರ್ಟ್ ಟೈಂ ನಟಿ’ ಎಂದ ಕೇಂದ್ರ ಮಾಜಿ ಸಚಿವೆ ಸ್ಮೃತಿ ಇರಾನಿ..? ಫುಲ್‌ಟೈಂ ಏನ್ ಗೊತ್ತಾ?
ಮುಂದಿನ ತಿಂಗಳಿಂದ ವೇಷಗಳು ಚಿತ್ರದ ಚಿತ್ರೀಕರಣ ಆರಂಭಿಸಿ ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಕರ್ನಾಟಕ, ಬೆಂಗಳೂರು ಹಾಗೂ ಮೈಸೂರಲ್ಲಿ ವೇಷಗಳು ಚಿತ್ರದ ಚಿತ್ರೀಕರಣ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ನಿರ್ದೇಶಕ ಕಿಶನ್ ರಾವ್ ತಿಳಿಸಿದರು. ಕೌಶಿಕ್ ಹರ್ಷ ಅವರ ಸಂಗೀತ, ರಾಜ್ ಗುರು ದತ್ತರಾಜ್ ಅವರ ಸಂಭಾಷಣೆ, ಅಕ್ಷಯ್ ಪಿ.ರಾವ್ ಅವರ ಸಂಕಲನ ಈ ಚಿತ್ರಕ್ಕಿದೆ. ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್
ನಟಿ ರಚಿತಾ ರಾಮ್ (Rachita Ram) ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ (Film Chamber) ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದ ನಿರ್ದೇಶಕ ನಾಗಶೇಖರ್ (Nagashekar) ಒತ್ತಾಯಿಸಿದ್ದಾರೆ.
ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಬೇಕು ಅಂತ ಆಗ್ರಹಿಸುತ್ತೇವೆ ಎಂದಿದ್ದಾರೆ.
ನಮ್ಮ ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದ್ರು. ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾಗೆ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥವ್ರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಅಂತ ಫಿಲ್ಮ್ ಚೇಂಬರ್ಗೆ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.
ಪವಿತ್ರ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ (Nagasekhar) ಅವರ ನಿರ್ದೇಶನದ ಈ ವರ್ಷದ ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. (Sanju Weds Geetha 2) ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ‘ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ’ ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ ನಟ ಉಪೇಂದ್ರ, ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಕೂಡ ಹಾಜರಿದ್ದರು. ಕವಿರಾಜ್ ಅವರ ಸಾಹಿತ್ಯ ರಚನೆಯ ಈ ಹಾಡಿಗೆ ಶ್ರೀಧರ್ ವಿ.ಸಂಭ್ರಮ್ ಅದ್ಭುತವಾದ ಟ್ಯೂನ್ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ನಾಗಶೇಖರ್ ನಾನು ಈ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ಮೊದಲು ಹಾಡುಗಳನ್ನು ರೆಡಿ ಮಾಡಿಕೊಳ್ಳಬೇಕಾಗಿತ್ತು. ಒಟ್ಟು 6 ಸುಂದರ ಹಾಡುಗಳು ಚಿತ್ರದಲ್ಲಿದ್ದು, ಈ ಹಾಡಿನಲ್ಲಿ ಒಬ್ಬ ಸೈನಿಕನ ಪ್ರೇಮಕಥೆಯನ್ನು ಹೇಳಿದ್ದೇನೆ. ಸ್ವಿಟ್ಜರ್ ಲ್ಯಾಂಡ್ ಸೈನಿಕನೊಬ್ಬ ತನ್ನ ರಾಣಿ ಸೆಲ್ವಿಕ್ ಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಪ್ರೀತಿ ಮಾಡ್ತಿರ್ತಾನೆ. ಆತನಿಗೆ ತನ್ನ ಪ್ರೀತಿಯನ್ನು ಹೇಳಿಕೊಳ್ಳಲಿಕ್ಕೆ ಆಗ್ತಿರಲಿಲ್ಲ, ಏಕೆಂದರೆ ಆಕೆ ಮಹಾರಾಣಿ. ಆತನದು ಒನ್ ವೇ ಲವ್, ಒಮ್ಮೆ ಜರ್ಮನ್ ಸೈನಿಕರು ಸ್ವಿಟ್ಜರ್ ಲ್ಯಾಂಡ್ ಮೇಲೆ ಅಟ್ಯಾಕ್ ಮಾಡ್ತಾರೆ. ಆಗ ವೀರಾವೇಶದಿಂದ ಹೋರಾಡಿದ ಆ ಸೈನಿಕ ಅವರನ್ನು ಸೋಲಿಸಿ ವೀರಮರಣವನ್ನಪ್ಪುತ್ತಾನೆ, ತನ್ನ ರಾಣಿಗೆ ಆಕೆಯ ಕಿರೀಟವನ್ನು ಮತ್ತೆ ತಂದುಕೊಡುತ್ತಾನೆ. ಸಾಯೋ ಸಮಯದಲ್ಲಿ ಆತ ರಾಣಿಗೆ ತನ್ನ ರಕ್ತದಲ್ಲಿ “ಐ ಲವ್ ಯು ಫಾರೆವರ್” ಅಂತ ಒಂದು ಪತ್ರ ಬರೆಯುತ್ತಾನೆ. ಈ ಹಾಡು ಚಿತ್ರಕಥೆಯಲ್ಲಿ ಬಹಳ ಮುಖ್ಯವಾದ ಭಾಗವಾಗಿರುತ್ತದೆ. ಈ ಸಾಂಗ್ ನಲ್ಲಿ ಮೊದಲಬಾರಿಗೆ ಆಕ್ಷನ್ ಇಟ್ಟಿದ್ದೇನೆ ಎಂದು ಹೇಳಿದರು.
ಶ್ರೀಧರ್ ವಿ.ಸಂಭ್ರಮ್ ಮಾತನಾಡಿ ನಾಗಶೇಖರ್ ಅವರು ಈ ಥರದ ಕಥೆ ಇದೆ ಎಂದಾಗ ಖುಷಿಯಾಯ್ತು. ಅವರುಸುಲಭವಾಗಿ ಟ್ಯೂನ್ ಒಪ್ಪುವವರಲ್ಲ, ಆದರೆ ಈ ನಾನು ಈ ಟ್ಯೂನ್ ಕೊಟ್ಟ ಕೂಡಲೇ ಒಪ್ಪಿದರು. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿ ಮೂಡಿಬಂದಿವೆ ಎಂದರು. ಸಾಹಿತಿ ಕವಿರಾಜ್ ಮಾತನಾಡಿ ಇದು ಸಿನಿಮಾ ಕೆಲಸ ಅನಿಸೋದೇ ಇಲ್ಲ. ನಮಗೆ ಅಷ್ಟು ಫ್ರೀಡಂ ಕೊಟ್ಟಿರ್ತಾರೆ. ನಾಗಶೇಖರ್ ಸಿನಿಮಾಗೆ ಹಾಡುಗಳನ್ನು ಬರೀಬೇಕಾದ್ರೆ ತಾನಾಗೇ ಒಳ್ಳೊಳ್ಳೆ ಪದಗಳು ಹುಟ್ಟಿಕೊಳ್ಳುತ್ತವೆ. ನಿರ್ದೇಶಕರು ನಮಗೆಲ್ಲ ಒಂದು ರೆಸಾರ್ಟ್ ಬುಕ್ ಮಾಡಿ ಲಿರಿಕ್ ಬರೆಯಲು ಹೇಳಿದ್ದರು, ಈ ಚಿತ್ರದ ಸಾಂಗ್ ಬರೆಯಲು ಹೋದಾಗ ಏನೋ ಹೊಸ ಸ್ಪೂರ್ತಿ ಬರುತ್ತದೆ ಎಂದು ಹೇಳಿದರು.
ನಟ ಉಪೇಂದ್ರ ಮಾತನಾಡಿ ನನಗೆ ಮೊದಲು ಈ ಚಿತ್ರದ ಕ್ಲೈಮ್ಯಾಕ್ಸ್ ಏನು ಅಂತ ಗೊತ್ತಾಯ್ತು.ನಾನು ಅವತ್ತೇ ಹೇಳಿದೆ ಈ ಸಿನಿಮಾ ಸೂಪರ್ ಸಕ್ಸಸ್ ಅಂತ. ಈಗ ಈ ಹಾಡನ್ನು ನೋಡಿದಾಗ ಡಿಸೈಡ್ ಮಾಡಿದೆ. 100% ಹಿಟ್ ಆಗುತ್ತೆ ಎಂದು ಕಾನ್ಫಿಡೆಂಟಾಗಿ ಹೇಳಿದರು. ನಿರ್ಮಾಪಕ ಛಲವಾದಿ ಕುಮಾರ್, ಮಾತನಾಡುತ್ತ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಮುಂದಿನ ತಿಂಗಳು ಬಿಡುಗಡೆಯಾಗುತ್ತಿದೆ. ಖಂಡಿತ ಹಿಟ್ ಆಗುತ್ತೆ ಎಂಬ ಬಂಬಿಕೆಯಿದೆ ಎಂದರು. ನಾಯಕಿ ರಚಿತಾರಾಮ್ ಶೂಟಿಂಗ್ ನಲ್ಲಿದ್ದುದರಿಂದ ಬಂದಿರಲಿಲ್ಲ.
ವಿತರಕ ಗೋಕುಲರಾಜ್ ಮಾತನಾಡಿ ನನಗೆ ಚಿತ್ರದ ಸ್ಯಾಂಪಲ್ಸ್ ತೋರಿಸಿದರು. ತುಂಬಾ ಚೆನ್ನಾಗಿ ಬಂದಿದೆ. ಎಂದರು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ ನಟ ಶ್ರೀನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದು, ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ಹೆಸರಾಂತ ಕಲಾವಿದರೇ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ನ ಅದ್ಭುತವಾದ ಲೊಕೇಶನ್‌ಗಳಲ್ಲಿ 72 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ ಸಮಸ್ಯೆ, ಅಲ್ಲಿನ ಕಪ್ಪುಮಣ್ಣಿನ ಕಥೆಯನ್ನು ಈ ಚಿತ್ರದ ಮೂಲಕ ನಾಗಶೇಖರ್ ಹೇಳ ಹೊರಟಿದ್ದಾರೆ. ಈಗಿನ ಕಾಲದ ಲವ್‌ಸ್ಟೋರಿ ಜೊತೆಗೆ ಒಂದು ಸರ್ ಪ್ರೈಸ್ ಕೂಡ ಈ ಚಿತ್ರದಲ್ಲಿದೆ.
ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ ಮೊದಲಬಾರಿಗೆ ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.
ನಿರ್ದೇಶಕ ನಾಗಶೇಖರ್ ಸಾರಥ್ಯದ ‘ಸಂಜು ವೆಡ್ಸ್ ಗೀತಾ-2’ (Sanju Weds Geeta 2) ಪ್ರಾರಂಭದಿಂದಲೂ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಾಗಶೇಖರ್ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ ರಮ್ಯಾ ಬದಲು ರಚಿತಾರಾಮ್ ಎಂಟ್ರಿಯಾಗಿದ್ದಾರೆ. ಈ ಚಿತ್ರದ ಪ್ರೀ ಕ್ಲೈಮ್ಯಾಕ್ಸ್ (Pre Climax) ದೃಶ್ಯದ ಚಿತ್ರೀಕರಣ ನಿನ್ನೆ ಕಂಠೀರವ ಸ್ಟುಡಿಯೋದಲ್ಲಿ ನಡೆದಿತ್ತು. ಅಲ್ಲಿ ನಾಯಕ ಶ್ರೀನಗರ ಕಿಟ್ಟಿ ಒಬ್ಬ ಸೈನಿಕನ ಗೆಟಪ್ ನಲ್ಲಿದ್ದರು. ಜರ್ಮನ್ ಸೈನಿಕರ ವಿರುದ್ದ ಸೆಣೆಸಾಟ ನಡೆಸಿ ಅವರ ಹಿಡಿತದಿಂದ ರಾಣಿಯನ್ನು ಬಿಡಿಸಿಕೊಂಡು ಬರುವ ಸನ್ನಿವೇಶವದು. ಆ ದೃಶ್ಯವನ್ನು ಗ್ರೀನ್ ಮ್ಯಾಟ್ ನಲ್ಲಿ ಚಿತ್ರೀಕರಿಸಲಾಗುತ್ತಿತ್ತು.
ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಪ್ರೇಮಕಾವ್ಯವನ್ನು ನಾಗಶೇಖರ್ ಈ ಚಿತ್ರದಲ್ಲಿ ಹೇಳಹೊರಟಿದ್ದಾರೆ. ನಟಿ ರಾಗಿಣಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ ನಟ ಚೇತನ್ ಚಂದ್ರ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಾಗಶೇಖರ್, ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದೆ. ಇದು ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಸೀನ್. ಇದರ ನಂತರ ನೆದರ್ ಲ್ಯಾಂಡ್ನಲ್ಲಿ ಚಿತ್ರೀಕರಣ ಮುಂದುವರಿಯುತ್ತದೆ. ನಿರ್ಮಾಪಕ ಕುಮಾರ್ ಅವರ ಸಹಕಾರದಿಂದ ಚಿತ್ರದ ಚಿತ್ರೀಕರಣ ಅಂದುಕೊಂಡ ಪ್ಲಾನ್ ಪ್ರಕಾರ ಸರಾಗವಾಗಿ ಮುಗಿಯುತ್ತಿದೆ. ಹನ್ನೆರಡು ಕೋಟಿ ಅಂದುಕೊಂಡ ಬಜೆಟ್ ಈಗ ಹದಿನೈದು ಕೋಟಿಯಾಗಿದೆ.
ಶೂಟಿಂಗ್ ಜೊತೆಗೇ ಎಡಿಟಿಂಗ್ ಸೇರಿದಂತೆ ಚಿತ್ರದ ಪೋಸ್ಟ ಪ್ರೊಡಕ್ಷನ್ ಕೆಲಸಗಳು ಬಹುತೇಕ ಮುಗಿದಿವೆ ಅಂದುಕೊಂಡ ಹಾಗೆ ದಸರಾ ವೇಳೆಗೆ ಚಿತ್ರವನ್ನು ತೆರೆಗೆ ತರಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಸ್ವಿಟ್ಜರ್ ಲ್ಯಾಂಡ್ ನಲ್ಲಿ 15 ದಿನ ಹನ್ನೊಂದು ಲೊಕೇಶನ್ ಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈಗ ನೆದರ್ ಲ್ಯಾಂಡ್ ಗೆ ಹೋಗ್ತಿದ್ದೇವೆ ಎಂದು ಹೇಳಿದರು. ನಂತರ ಚಿತ್ರದ ಕುರಿತಂತೆ ಮಾತನಾಡಿದ ನಿರ್ಮಾಪಕ ಛಲವಾದಿ ಕುಮಾರ್, ಈಗಾಗಲೇ ನಾವು ಶೂಟಿಂಗ್ ಕೊನೇ ಹಂತಕ್ಕೆ ಬಂದಿದ್ದೇವೆ. ಅಂದುಕೊಂಡ ಹಾಗೆ ಚಿತ್ರ ಮೂಡಿಬರುತ್ತಿದೆ. ಒಂದು ಅದ್ಭುತ ದೃಶ್ಯಕಾವ್ಯವಾಗಿ ಸಂಜು ವೆಡ್ಸ್ ಗೀತಾ ಚಿತ್ರ ಮೂಡಿಬರಬೇಕು ಎನ್ನುವುದೇ ನಮ್ಮ ಉದ್ದೇಶ ಎಂದು ಹೇಳಿದರು.
ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ನಿರ್ಮಾಪಕ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ ಶ್ರೀಧರ ವಿ. ಸಂಭ್ರಮ 5 ಸುಂದರವಾದ ಹಾಡುಗಳನ್ನು ಮಾಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ. ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ.
ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ ತೆರೆಕಂಡು, ಜನಮನ ಸೂರೆಗೊಂಡು ಯಶಸ್ವಿಯಾಗಿದ್ದ ಸಂಜು ವೆಡ್ಸ್ ಗೀತಾ ಚಿತ್ರದ ಟೈಟಲ್ ಇಟ್ಟುಕೊಂಡು ನವನವೀನ ಪ್ರೇಮಕಥೆ ಹೆಣೆದು ಸಂಜು ವೆಡ್ಸ್ ಗೀತಾ-2 (Sanju Weds Geeta 2) ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಶ್ರೀನಗರ ಕಿಟ್ಟಿ (Srinagar Kitty) ಹಾಗೂ ಗುಳಿಕೆನ್ನೆ ಬೆಡಗಿ ರಚಿತಾರಾಮ್ (Rachita Ram) ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನಡೆಯಿತು. ನಾಯಕ ಸಂಜು ಹಾಗೂ ನಾಯಕಿ ಗೀತಾ ಇಬ್ಬರ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬರುವ ಪಾರ್ಟಿ ಸಾಂಗ್ ಅದಾಗಿದ್ದು, ವಿಶೇಷವಾಗಿ ಈ ಹಾಡಲ್ಲಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇವರಿಬ್ಬರ ಜೊತೆ ಸ್ಟೆಪ್ಸ್ ಹಾಕಿದ್ದಾರೆ.
ಕುಂಬಳಗೋಡಿನ ಬಿಜಿಎಸ್ ಹೈಸ್ಕೂಲಿನ ಗ್ಲಾಸ್ ಹೌಸ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಿತು. 200 ರಿಂದ 250 ಜನ ಡಾನ್ಸರ್ಸ್ ಈ ಹಾಡಲ್ಲಿ ಹೆಜ್ಜೆ ಹಾಕಿದ್ದಾರೆ. ಖ್ಯಾತ ಗಾಯಕಿ ಮಂಗ್ಲಿ ಈ ಹಾಡಿಗೆ ದನಿಯಾಗಿದ್ದು, ಭಜರಂಗಿ ಮೋಹನ್ ಅವರು ಕೊರಿಯೋಗ್ರಾಫ್ ಮಾಡಿದ್ದಾರೆ. ಈ ವರ್ಷದ ಸೂಪರ್ ಹಿಟ್ ಸಾಂಗ್ ಇದಾಗಲಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, 2 ಫೈಟ್ಸ್, ಒಂದು ಹಾಡಿನ ಪ್ಯಾಚ್ ವರ್ಕ್ ಮಾತ್ರವೇ ಬಾಕಿಯಿದೆ. ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಅದ್ಭುತ ಪ್ರೇಮಕಥೆ ಈ ಚಿತ್ರದಲ್ಲಿದೆ.
ಈಗಾಗಲೇ ಚಿತ್ರದ ಎಡಿಟಿಂಗ್ ಮುಗಿದು, ಡಬ್ಬಿಂಗ್ ಕೂಡ ಕೊನೇ ಹಂತದಲ್ಲಿದೆ. ಚಿತ್ರಕ್ಕೆ ಸ್ವಿಟ್ಜರ್ ಲ್ಯಾಂಡ್ ನಲ್ಲಿ 15 ದಿನ ಹನ್ನೊಂದು ಲೊಕೇಶನ್ ಗಳಲ್ಲಿ ಮೂರನೇ ಹಂತದ ಚಿತ್ರೀಕರಣ ನಡೆಸಲಾಗಿದೆ. ಅಲ್ಲದೆ 50 ಲಕ್ಷ ರೂ.ಗಳ ವೆಚ್ಚದಲ್ಲಿ ಕುಣಿಗಲ್ ನ ಯುಬಿ ಸ್ಟೆಡ್ ಫಾರಂ(ಕುದುರೆ ಫಾರಂ)ನಲ್ಲಿ ಸುಮಾರು 5 ದಿನಗಳವರೆಗೆ ಅದ್ದೂರಿಯಾಗಿ ಹಾಡೊಂದನ್ನು ಚಿತ್ರೀಕರಿಸಲಾಗಿದೆ. ಹೀಗೆ ಚಿತ್ರಕಥೆಯಷ್ಟೇ ಪ್ರಾಮುಖ್ಯತೆಯನ್ನು ಚಿತ್ರದ ಹಾಡುಗಳಿಗೂ ಸಹ ನೀಡಲಾಗಿದ್ದು, ಒಂದು ಸಿನಿಮಾಗಾಗುವಷ್ಟು ಖರ್ಚನ್ನು ನಿರ್ಮಾಪಕ ಛಲವಾದಿ ಕುಮಾರ್ ಅವರು ಹಾಡುಗಳಿಗೇ ಮಾಡುವ ಮೂಲಕ ಅದ್ದೂರಿತನಕ್ಕೆ ಎಲ್ಲೂ ಕೊರತೆ ಬಾರದಂತೆ ನೋಡಿಕೊಂಡಿದ್ದಾರೆ. ಅಲ್ಲದೆ ಹಾಡುಗಳನ್ನು ಹಾಸನ ಮತ್ತು ಹಾವೇರಿಯಲ್ಲಿ ಅದ್ದೂರಿ ಸಮಾರಂಭದಲ್ಲಿ
ರಿಲೀಸ್ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ನಿರ್ಮಾಪಕ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಅವರ ಕಥೆ, ಚಿತ್ರಕಥೆ ನಿರ್ದೇಶನ ಚಿತ್ರಕ್ಕಿದ್ದು ಶ್ರೀಧರ ವಿ. ಸಂಭ್ರಮ್ ೫ ಹಾಡುಗಳನ್ನು ಕಂಪೋಜ್ ಮಾಡಿದ್ದಾರೆ. ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ. ರಾಗಿಣಿ ದ್ವಿವೇದಿ, ಚೇತನ್ ಚಂದ್ರ,(ಕೆಮಿಯೋ), ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ. A 24 ಕ್ರಿಯೇಶನ್ಸ್ ಥ್ರೂ ಗೋಕುಲ್ ಫಿಲಂಸ್ ಈ ಚಿತ್ರವನ್ನು ಪ್ರಪಂಚದಾದ್ಯಂತ ಬಿಡುಗಡೆ ಮಾಡುತ್ತಿದೆ.
ಒಂದು ಪ್ರೇಮಕಥೆ ಎಂದರೆ ಅಲ್ಲಿ ಖುಷಿ, ತ್ಯಾಗದ ಜೊತೆಗೆ ಕಾಡುವ ಕಥೆ ಇರಬೇಕು. ಇದನ್ನು ಅಚ್ಚುಕಟ್ಟಾಗಿ ತೆರೆಮೇಲೆ ತಂದವರು ನಿರ್ದೇಶಕ ನಾಗಶೇಖರ್. ಅದಕ್ಕೆ ಮೈನಾ, ಸಂಜು ವೆಡ್ಸ್ ಗೀತಾಗಿಂತ ಉದಾಹರಣೆ ಬೇಕಿಲ್ಲ. ಈಗ ಹೊಸ ಸಂಜು ಹಾಗೂ ಗೀತಾರ (Sanju Weds Geetha 2) ನವೀನ ಪ್ರೇಮಕಥೆಯನ್ನು ನಾಗಶೇಖರ್ ಹೇಳಹೊರಟಿದ್ದಾರೆ. ಶ್ರೀನಗರ ಕಿಟ್ಟಿ (Srinagar Kitty) ಜೊತೆ ರಮ್ಯಾ ಬದಲು ರಚಿತಾ ರಾಮ್ (Rachita Ram)ಬಂದಿದ್ದಾರೆ.
ರೇಷ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ ನಮ್ಮ ಮಣ್ಣಿನ ಪ್ರೇಮಿಗಳ ಅದ್ಭುತ ಪ್ರೇಮಕಾವ್ಯವಿದು. ಸದ್ಯ ಚಿತ್ರದ ಬಹುತೇಕ ಚಿತ್ರೀಕರಣ, ಎಡಿಟಿಂಗ್ ಮುಗಿದಿದ್ದು ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಕಾರ್ಯ ನಡೆದಿದೆ. ಈಗಾಗಲೇ ಸ್ವಿಟ್ಜರ್ ಲ್ಯಾಂಡ್ ನಲ್ಲಿ 15 ದಿನ ಹನ್ನೊಂದು ಲೊಕೇಶನ್ ಗಳಲ್ಲಿ ಮೂರನೇ ಹಂತದ ಚಿತ್ರೀಕರಣ ಮುಗಿಸಿದ್ದು, ಈಗ ನಾಲ್ಕನೇ ಹಂತದ ಚಿತ್ರೀಕರಣ ಶುರುವಾಗಿದೆ. ಕುಣಿಗಲ್ ನಲ್ಲಿ ಅದ್ದೂರಿ ಹಾಡೊಂದರ ಶೂಟಿಂಗ್ ನಡೆದಿದೆ.
ಈ ಹಾಡು, ಚಿತ್ರದ ಕುರಿತಂತೆ ಮಾತನಾಡಿದ ನಿರ್ಮಾಪಕ ಛಲವಾದಿ ಕುಮಾರ್, ಕುಣಿಗಲ್ ನ ಯುಬಿ ಸ್ಟೆಡ್ ಫಾರಂ(ಕುದುರೆ ಫಾರಂ)ನಲ್ಲಿ ಸುಮಾರು 5 ದಿನಗಳ ಕಾಲ ಪ್ರಮುಖವಾದ ಕಲರ್ ಫುಲ್ ಹಾಡಿನ ಚಿತ್ರೀಕರಣ ನಡೆಸಲಾಯಿತು. ತುಂಬಾ ಅದ್ದೂರಿಯಾಗಿ ಮೂಡಿ ಬಂದಿರುವ ಈ ಹಾಡಿಗೆ ಸುಮಾರು 45 ರಿಂದ 50 ಲಕ್ಷ ರೂ. ವರೆಗೆ ಖರ್ಚು ಮಾಡಲಾಗಿದೆ. ಇದಲ್ಲದೆ ಉಳಿದ ಹಾಡುಗಳನ್ನೂ ಸಹ ಇನ್ನೂ ಅದ್ದೂರಿಯಾಗಿ ಆಗಿ ಚಿತ್ರೀಕರಿಸುವ ಯೋಜನೆಯನ್ನು ಹಾಕಿಕೊಂಡಿದ್ದೇವೆ. ಒಟ್ಟಾರೆ ಇಡೀ ಚಿತ್ರ ವೈಭವಯುತವಾಗಿ ಮೂಡಿಬರಬೇಕು. ಅದ್ಭುತ ದೃಶ್ಯಕಾವ್ಯವಾಗಿ ಸಂಜು ವೆಡ್ಸ್ ಗೀತಾ ಮೂಡಿಬರಬೇಕು ಎನ್ನುವುದೇ ನಮ್ಮ ಉದ್ದೇಶ ಎಂದು ಹೇಳಿದರು.
ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ನಿರ್ಮಾಪಕ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ ಶ್ರೀಧರ ವಿ. ಸಂಭ್ರಮ ೫ ಸುಂದರವಾದ ಹಾಡುಗಳನ್ನು ಮಾಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ. ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ. A 24 ಕ್ರಿಯೇಶನ್ಸ್ ಥ್ರೂ ಗೋಕುಲ್ ಫಿಲಂಸ್ ಈ ಚಿತ್ರವನ್ನು ಪ್ರಪಂಚದಾದ್ಯಂತ ಬಿಡುಗಡೆ ಮಾಡುತ್ತಿದೆ.
ನಾಲ್ಕು ತಿಂಗಳ ಹಿಂದೆ ಪ್ರಾರಂಭವಾಗಿದ್ದ ನಾಗಶೇಖರ್ ಅವರ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2′ (Sanju Weds Geeta 2) ಚಿತ್ರದ ಚಿತ್ರೀಕರಣ ಪ್ರಮುಖ ಘಟ್ಟಕ್ಕೆ ಬಂದಿದೆ. ಇದೇ ತಿಂಗಳು ಚಿತ್ರತಂಡ ಸ್ವಿಟ್ಜರ್‌ಲ್ಯಾಂಡ್ (Switzerland) ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ. ಈವರೆಗೆ ನಡೆಸಿದ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಳ್ಳಲೆಂದು ನಿರ್ದೇಶಕ ನಾಗಶೇಖರ್ ಹಾಗೂ ತಂಡ ಮಾಧ್ಯಮಗಳ ಮುಂದೆ ಬಂದಿತ್ತು. ಅಶೋಕ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಿಟ್ಜರ್‌ಲ್ಯಾಂಡ್ ಶೂಟಿಂಗ್ ದೃಶ್ಯಗಳ ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ನಾಗಶೇಖರ್ ಹಿಂದೆ ಸಂಜು ವೆಡ್ಸ್ ಗೀತಾ ಸಿನಿಮಾ ಮಾಡುವಾಗ ಆದ ಅನುಭವಗಳನ್ನು ಮೆಲುಕು ಹಾಕಿದರು. ಅಲ್ಲದೆ ಈ ಚಿತ್ರ ಅದಕ್ಕಿಂತ ಚೆನ್ನಾಗಿ, ವೈಭವಯುತವಾಗಿ ಮೂಡಿಬರುತ್ತಿದೆ. ಇತ್ತೀಚೆಗಷ್ಟೇ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಹಾಡುಗಳ ಶೂಟಿಂಗ್ ಮಾಡಿಕೊಂಡು ಬಂದಿದ್ದೇವೆ. ನಂತರ ಮುಂಬಯಿ, ಹೈದರಾಬಾದ್ ಶೂಟಿಂಗ್ ಮಾಡಿ, 2024ರ ಏಪ್ರಿಲ್ 1ರಂದು ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ.
ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದಲೇ ಭಾಗ ಎರಡು ಇಷ್ಟು ಅದ್ದೂರಿಯಾಗಿ ಮೂಡಿಬರುತ್ತಿದೆ. ರಂಗಾಯಣ ರಘು, ಸಾಧು ಕೋಕಿಲ ವಿಶೇಷ ಪಾತ್ರಗಳಲ್ಲಿದ್ದಾರೆ. ನನ್ನ ಈ ಕನಸಿಗೆ ಎಂಜಿನಿಯರಿಂಗ್ ಕ್ಲಾಸ್‌ಮೆಟ್ ಕುಮಾರ್ ಕೈಜೋಡಿಸಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಅದ್ಭುತವಾದ ಟ್ಯೂನ್‌ಗಳನ್ನು ಮಾಡಿಕೊಟ್ಟಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ರಚಿತಾ ರಾಮ್, ಶ್ರೀನಗರ ಕಿಟ್ಟಿ ಇಬ್ಬರೂ ಅದ್ಭುತ ಅಭಿನಯ ನೀಡಿದ್ದಾರೆ.
2024ರ ಬ್ಲಾಕ್‌ಬಸ್ಟರ್ ಚಿತ್ರವಾಗಿ ಸಂಜು ವೆಡ್ಸ್ ಗೀತಾ ಮೂಡಿಬರಲಿದೆ. ಇಂಥ ಒಳ್ಳೆ ನಿರ್ಮಾಪಕರು ನಮ್ಮ ಚಿತ್ರಕ್ಕೆ ಸಿಕ್ಕಿದ್ದಾರೆ. ಯಾವುದಕ್ಕೂ ಹಿಂದೇಟು ಹಾಕಲ್ಲ ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಿರಿಯ ನಿರ್ದೇಶಕ ಎಸ್.ಮಹೇಂದರ್, ನಟ ಶರಣ್ ಆಗಮಿಸಿ ನಾಗಶೇಖರ್ ಹಾಗೂ ಚಿತ್ರದ ಬಗ್ಗೆ ಮಾತನಾಡಿದರು. ನಾಯಕ ಶ್ರೀನಗರ ಕಿಟ್ಟಿ ಮಾತನಾಡಿ ಅಲ್ಲಿ ಕೊರೆಯುವ ಚಳಿ ಇತ್ತು. ಹಾಡುಗಳು ತುಂಬಾ ಚೆನ್ನಾಗಿ ಬಂದಿವೆ ಎಂದು ಹೇಳಿದರು.
ನಾಯಕಿ ರಚಿತಾ ರಾಮ್ (Rachita Ram) ಮಾತನಾಡಿ ತುಂಬಾ ಶೇಡ್ಸ್ ಇರುವಂಥ ಗೀತಾ ಪಾತ್ರ ನನ್ನದು. ಸಿನಿಮಾ ಅಂದ್ರೆ ಖುಷಿ, ಕಷ್ಟ ಎರಡೂ ಇರುತ್ತೆ. ನಾವಿ ಹೋಗಿದ್ದೇ ಡಿಸೆಂಬರ್ ಚಳಿಯಲ್ಲಿ. ನಾಗಶೇಖರ್ ಏನಾ ಮಾಡಿದರೂ ಪ್ಲಾನ್ಡ್ ಆಗಿ ಮಾಡ್ತಾರೆ. ನಮಗೆ ನೇಚರ್ ಕೂಡ ತುಂಬಾ ಸಪೋರ್ಟ್ ಮಾಡಿತು. ಅಲ್ಲಿ ಮಾಡಿದ ಎರಡು ಹಾಡುಗಳೂ ತುಂಬಾ ಚೆನ್ನಾಗಿ ಬಂದಿವೆ. ಲೊಕೇಶನ್ ಅದ್ಭುತ. ಸತ್ಯ ಹೆಗಡೆ ಸರ್ ಬೇರೆ ಬೇರೆ ಆ್ಯಂಗಲ್‌ನಲ್ಲಿ ಶೂಟ್ ಮಾಡಿದ್ದಾರೆ. ಎಮೋಷನಲ್ ಸೀನ್ಸ್ ಇನ್ಟೆನ್ಸ್ ಆಗಿ ಬಂದಿದೆ ಎಂದರು.
ಸಂಗೀತ ನಿರ್ದೇಶಕ ಶ್ರೀಧರ ವಿ. ಸಂಭ್ರಮ ಚಿತ್ರದಲ್ಲಿ 5 ಸುಂದರ ಹಾಡುಗಳಿಗೆ ಸಂಗೀತ ನೀಡಿದ್ದು, ಕವಿರಾಜ ಸಾಹಿತ್ಯ ಬರೆದಿದ್ದಾರೆ. ನಿರ್ಮಾಪಕ ಚಲವಾದಿ ಕುಮಾರ್ ಮಾತನಾಡಿ, ನಾಗಶೇಖರ್ ಮತ್ತು ನಾನು ಎಂಜಿನಿಯರಿಂಗ್ ಕ್ಲಾಸ್‌ಮೆಟ್ಸ್. ಸ್ಕ್ರಿಪ್ಟ್ ನಲ್ಲೂ ನಾನು ಜೊತೆ ಕುಳಿತಿದ್ದೆ. ಸಿನಿಮಾ ತುಂಬಾ ಚೆನ್ನಾಗಿ ಬರುತ್ತಿದೆ ಎಂದರು. ನಾಗಶೇಖರ್ ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಲೂಸ್ ಮಾದ ಯೋಗಿ (Loose Mada Yogi) ಅಭಿನಯದ 50ನೇ ಚಿತ್ರ ‘ರೋಜಿ’ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಲಿಯೋ ಖ್ಯಾತಿಯ ಸ್ಯಾಂಡಿ ಮಾಸ್ಟರ್ ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಟ ಶ್ರೀನಗರ ಕಿಟ್ಟಿ ರೋಜಿ (Roji) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಶ್ರೀನಗರ ಕಿಟ್ಟಿ (Srinagar Kitty) ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಚಿತ್ರತಂಡ ಬಿಡುಗಡೆ ಮಾಡಿದೆ.
ಶಾಂತಿನಗರದ ಮೈದಾನದಲ್ಲಿ ಶ್ರೀನಗರ ಕಿಟ್ಟಿ ಅವರ ಮೂವತ್ತು ಅಡಿ ಪೋಸ್ಟರ್ ಬಿಡುಗಡೆ ಮಾಡಿ, ಕಿಟ್ಟಿ ಅವರನ್ನು ಚಿತ್ರಕ್ಕೆ ವಿಶೇಷವಾಗಿ ಬರಮಾಡಿಕೊಳ್ಳಲಾಯಿತು. ಪೋಸ್ಟರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಈ ಪಾತ್ರದ ಕುರಿತು ನಿರ್ದೇಶಕ ಶೂನ್ಯ ಅವರು ಹೇಳಿದಾಗ ಚೆನ್ನಾಗಿದೆ ಅನಿಸಿತು. ಈಗ ಪೋಸ್ಟರ್ ನೋಡಿ ಇನ್ನು ಹೆಚ್ಚು ಖುಷಿಯಾಗಿದೆ. “ಕ್ರಿಸ್ಟೋಫರ್” ನನ್ನ ಪಾತ್ರದ ಹೆಸರು ಎಂದರು ಶ್ರೀನಗರ ಕಿಟ್ಟಿ. ನಮ್ಮ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರು ನಟಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ ಎಂದು ಆರಂಭಿಸಿದ ನಟ ಯೋಗಿ, ನಾವಿಬ್ಬರು “ಹುಡುಗರು” ಚಿತ್ರದ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇವೆ ಎಂದರು.
ನಿರ್ದೇಶಕ ಶೂನ್ಯ, ನಿರ್ಮಾಪಕ ಡಿ.ವೈ ರಾಜೇಶ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಚಿತ್ರದ ಕುರಿತು ಮಾತನಾಡಿದರು.
ಶ್ರೀನಗರ ಕಿಟ್ಟಿ (Srinagar Kitty) ಮತ್ತು ರಚಿತಾ ರಾಮ್ (Rachita Ram) ಕಾಂಬಿನೇಷನ್ ನ ‘ಸಂಜು ವೆಡ್ಸ್ ಗೀತಾ’ ಸಿನಿಮಾದ ಶೂಟಿಂಗ್ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಈ ಸಿನಿಮಾಗಾಗಿಯೇ ಶಿಡ್ಲಘಟ್ಟ ಪ್ರದೇಶದ ಕೆಲ ಭಾಗಗಳಲ್ಲಿ ಸೆಟ್ ಹಾಕಲಾಗಿದೆಯಂತೆ. ಈ ಪ್ರದೇಶದಲ್ಲಿ ಸಿನಿಮಾದ ಕಥೆ ನಡೆಯುವುದರಿಂದ ಸೆಟ್ ಹಾಕಿ ಶೂಟ್ ಮಾಡುತ್ತಿದ್ದಾರಂತೆ ನಿರ್ದೇಶಕ ನಾಗಶೇಖರ್.
ಚೇತನ್ ಕೂಡ ನಟನೆ
ಆ ದಿನಗಳು ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿ ನೀಡಿರುವ ಅಹಿಂಸಾ ಚೇತನ್ (Ahimsa Chetan), ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಿಗಿಂತ ಹೆಚ್ಚು ಹೋರಾಟಗಳಲ್ಲಿ ಭಾಗಿಯಾಗಿದ್ದರು. ಮತ್ತೆ ಅವರನ್ನು ಚಿತ್ರರಂಗಕ್ಕೆ ಕರೆತರುವ ಕೆಲಸಕ್ಕೆ ಮುಂದಾಗಿದ್ದಾರೆ ನಿರ್ದೇಶಕ ನಾಗಶೇಖರ್ (Nagasekhar). ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಚೇತನ್ ನಟಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಜು ವೆಡ್ಸ್ ಗೀತಾ 2 ತ್ರಿಕೋನ ಪ್ರೇಮಕಥೆಯನ್ನು ಹೊಂದಿದ್ದು, ನಾಯಕನಾಗಿ ಶ್ರೀನಗರ ಕಿಟ್ಟಿ ಮತ್ತು ನಾಯಕಿಯಾಗಿ ರಚಿತಾ ರಾಮ್ ಈಗಾಗಲೇ ಆಯ್ಕೆಯಾಗಿದ್ದಾರೆ. ಈ ಜೋಡಿ ನಡುವೆ ಮತ್ತೊಂದು ಮಹತ್ವದ ಪಾತ್ರವಿದ್ದು, ಅದನ್ನು ಚೇತನ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಚೇತನ್ ಅವರ ಜೊತೆ ನಾಗಶೇಖರ್ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರಂತೆ.
ಹನ್ನೆರಡು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ (Sanju Weds Geetha 2) ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ. ಬಹುತೇಕ ಮೊದಲ ಭಾಗದಲ್ಲಿದ್ದ ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್ ರಮ್ಯಾ ಬದಲು ಇಲ್ಲಿ ರಚಿತಾ ರಾಮ್ ನಾಯಕಿಯಾಗಿದ್ದಾರೆ.
ಮೂರು ತಿಂಗಳ ಹಿಂದೆ ಅದ್ದೂರಿಯಾಗಿ ಮುಹೂರ್ತ ಆಚರಿಕೊಂಡಿದ್ದ ನಾಗಶೇಖರ್ (Nagasekhar) ಅವರ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಚಿತ್ರದ ಚಿತ್ರೀಕರಣ ಇದೀಗ ಕನಕಪುರ ರಸ್ತೆಯ ಫಾರಂ ಹೌಸ್ ನಲ್ಲಿ ನಡೆಯುತ್ತಿದೆ. ಅಲ್ಲಿ ತಮ್ಮ 10ನೇ ವರ್ಷದ ವೆಡ್ಡಿಂಗ್ ಆನಿವರ್ಸರಿ ಪ್ರಯುಕ್ತ ನಾಯಕ, ನಾಯಕಿಗೆ ಲಕ್ಷುರಿ ಕಾರ್ ಗಿಫ್ಟ್ ಕೊಡುವ ದೃಶ್ಯವನ್ನು ಛಾಯಾಗ್ರಾಹಕ ಸತ್ಯ ಹೆಗಡೆ ಸೆರೆ ಹಿಡಿಯುತ್ತಿದ್ದರು.
ಚಿತ್ರೀಕರಣ ವೀಕ್ಷಣೆಗೆಂದು ಮಾದ್ಯಮ ಮಿತ್ರರನ್ನು ಶೂಟಿಂಗ್ ಲೊಕೇಶನ್ ಗೆ ಆಹ್ವಾನಿಸಿದ್ದ ನಿರ್ದೇಶಕ ನಾಗಶೇಖರ್, ಶೂಟಿಂಗ್ ಆರಂಭಿಸುವುದು ತಡವಾಗಿದ್ದಕ್ಕೆ ಕಾರಣ ನಮ್ಮ ಚಿತ್ರದ ಮತ್ತೋರ್ವ ನಿರ್ಮಾಪಕ, ಒಳ್ಳೆಯ ಸ್ನೇಹಿತ ಮಾಭಿ ನಾರಾಯಣ್ ಅಗಲಿದ್ದು. ಹಾಗಾಗಿ ಲೇಟ್ ಆಯ್ತು ಎಂದು ಆರಂಭದಲ್ಲಿಯೇ ಮಾಹಿತಿ ನೀಡಿದರು.
ನಂತರ ಚಿತ್ರದ ಬಗ್ಗೆ ಮಾತನಾಡುತ್ತ ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಸಿಕ್ಕ ಯಶಸ್ಸೇ ಭಾಗ ಎರಡು ಆಗಲು ಕಾರಣ. ಮೊದಲ ಹಂತದಲ್ಲಿ ಈಗಾಗಲೇ 5-6 ದಿನ ಶೂಟಿಂಗ್ ನಡೆದಿದೆ. ಅಚಾನಕ್ಕಾಗಿ ಒಂದಷ್ಟು ಬದಲಾವಣೆಗಳಾದವು. ರಂಗಾಯಣ ರಘು, ಸಾಧು ಕೋಕಿಲ ಸುಂದರವಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನನ್ನ ಈ ಕನಸಿಗೆ ಎಂಜಿನಿಯರಿಂಗ್ ಕ್ಲಾಸ್ ಮೆಟ್ ಕುಮಾರ್ ಜೊತೆಗಿದ್ದಾರೆ. ನನ್ನ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇನೆ. ಶ್ರೀಧರ್ ಸಂಭ್ರಮ್ ಒಳ್ಳೆಯ ಟ್ಯೂನ್ ಕೊಟ್ಟಿದ್ದಾರೆ. ಲೀಡ್ ಪಾತ್ರಗಳಲ್ಲಿ ರಚಿತಾ ರಾಮ್ (Rachita Ram), ಶ್ರೀನಗರ ಕಿಟ್ಟಿ (Srinagar Kitty)ಸಾಥ್ ನೀಡುತ್ತಿದ್ದಾರೆ. ಇದೀಗ ಮೊದಲ ಹಂತದಲ್ಲಿ 5 ದಿನ ಮಾಡಿ ಬ್ರೇಕ್ ಕೊಟ್ಟು ಡಿಸೆಂಬರ್ 2 ರಿಂದ ಬೆಂಗಳೂರಲ್ಲಿ ಡಿ. 9ರಿಂದ ಸ್ವಿಟ್ಜರ್ಲ್ಯಾಂಡ್ ನಲ್ಲಿ 12 ದಿನ ಮುಗಿಸಿ, ನಂತರ ಮುಂಬಯಿ, ಹೈದರಾಬಾದ್ ಶೂಟಿಂಗ್ ಮಾಡಿ, 2024ರ ಏಪ್ರಿಲ್ 1ರಂದು ಚಿತ್ರವನ್ನು ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಕಾರಣ ಅದೇ ದಿನ ಮೊದಲ ಭಾಗ ಬಿಡುಗಡೆಯಾಗಿತ್ತು. ಜೊತೆಗೆ ಇದೇ ಡಿಸೆಂಬರ್ 29 ನಮ್ಮ ನಿರ್ಮಾಪಕರಾದ ಚಲವಾದಿ ಕುಮಾರ್ ಅವರ ಹುಟ್ಟುಹಬ್ಬ. ಅಂದು ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡುತ್ತೇವೆ’ ಎಂದು ಹೇಳಿದರು.
ಸಂಗೀತ ನಿರ್ದೇಶಕ ಶ್ರೀಧರ ವಿ. ಸಂಭ್ರಮ ಮಾತನಾಡಿ ನಾನು ಈ ಸಿನಿಮಾಗೆ ಮ್ಯೂಸಿಕ್ ಮಾಡ್ತಾ ಇರೋದೇ ಅದೃಷ್ಟ ಎನ್ನಬಹುದು. ಚಿತ್ರದಲ್ಲಿ 5 ಹಾಡುಗಳಿದ್ದು, ಕವಿರಾಜ ಸಾಹಿತ್ಯ ಒಳ್ಳೆ ಸಾಹಿತ್ಯ ಬರೆದಿದ್ದಾರೆ ಎಂದರು. ರಂಗಾಯಣ ರಘು ಮಾತನಾಡಿ ನನ್ನ ಪಾತ್ರದ ಬಗ್ಗೆ ಗೊತ್ತಿಲ್ಲ. ಒಳ್ಳೆಯ ನಿರ್ಮಾಪಕರು ನಮಗೆ ಸಿಕ್ಕಿದ್ದಾರೆ ಎಂದರು. ಸಾಧುಕೊಕಿಲ ಮಾತನಾಡಿ ಇದರಲ್ಲಿ ಒಳ್ಳೆಯ ಪಾತ್ರ ಮಾಡ್ತಾ ಇದ್ದೇನೆ. ನಾಗಶೇಖರ್ ಜೊತೆ ಕೆಲಸ ಮಾಡಿದ್ದು ಯಾವಾಗಲೂ ಮರೆಯಲ್ಲ. ಸಂಜು ವೆಡ್ಸ್ ಗೀತಾ ಇಂದ ಜೊತೆಗಿದ್ದೇನೆ ಎಂದರು.
ನಿರ್ಮಾಪಕ ಚಲವಾದಿ ಕುಮಾರ್ ಮಾತನಾಡಿ, ನಾಗಶೇಖರ್ ನಾನು ಇಂಜಿನಿಯರಿಂಗ್ ಕ್ಲಾಸ್ ಮೆಟ್ಸ್. ಸ್ಕ್ರಿಪ್ಟ್ ನಲ್ಲೂ ನಾನು ಜೊತೆ ಕುಳಿತಿದ್ದೆ. ಸಿನಿಮಾ ತುಂಬಾ ಚನ್ನಾಗಿ ಬರ್ತಾ ಇದೆ. ಇನ್ನು ಮುಂದೆಯೂ ಒಳ್ಳೆಯ ಸಿನಿಮಾ ಮಾಡುವೆ ಎಂದು ಹೇಳಿದರು. ಛಾಯಾಗ್ರಾಹಕ ಸತ್ಯ ಹೆಗಡೆ ಮಾತನಾಡಿ ೧೪ ವರ್ಷದ ಹಿಂದೆ ಮಾಡಿದ್ವಿ. ಈಗ ಟೆಕ್ನಾಲಜಿ ಬದಲಾಗಿದೆ. ಈ ಸಿನಿಮಾನ ಇನ್ನೂ ಚೆನ್ನಾಗಿ ಮಾಡಬೇಕಿದೆ ಎಂದು ಹೇಳಿದರು.
ನಾಯಕ ಶ್ರೀನಗರ ಕಿಟ್ಟಿ ಮಾತನಾಡಿ ನಾವೆಲ್ಲ ಸೇರಿ ಅಷ್ಟೇ ಪ್ರೀತಿಯಿಂದ ಈ ಸಿನಿಮಾ ಮಾಡ್ತಾ ಇದ್ದೇವೆ ಕಥೆಯೂ ಮುದ್ದಾಗಿ ಬಂದಿದೆ. ನಿರ್ಮಾಪಕರ ಹುಟ್ಟುಹಬ್ಬದಂದು ಟ್ರೇಲರ್ ಬಿಡುಗಡೆ ಮಾಡುತ್ತೇವೆ ಎಂದರು.
ನಾಯಕಿ ರಚಿತಾ ರಾಮ್ ಮಾತನಾಡಿ ನನ್ನ ಪಾತ್ರದ ಹೆಸರು ಗೀತಾ, ತುಂಬಾ ಶೇಡ್ಸ್ ಇರುವಂಥ ಪಾತ್ರ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ನಾಲ್ಕು ದಿನದಿಂದ ಶೂಟ್ ನಲ್ಲಿ ಭಾಗಿಯಾಗಿದ್ದು ಒಳ್ಳೆ ಅನುಭವ ನೀಡ್ತಾ ಇದೆ. ಕಿಟ್ಟಿ ಅವರ ಜೊತೆ ಒಂದೆರಡು ಶಾಟ್ ಮಾಡಿದ್ದೇನೆ. ಒಳ್ಳೆ ಎನರ್ಜಿ ಚಿತ್ರದಲ್ಲಿದೆ ಎಂದರು. ನಾಗಶೇಖರ್ ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.