ಕೋಲಾರ: ಕಿಡಿಗೇಡಿಗಳು ಮನೆಗೆ ಬೆಂಕಿ (Fire) ಹಾಕಿದ ಪರಿಣಾಮ ಮನೆಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಚೀಟಿಂವಾರಪಲ್ಲಿ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಚೀಟಿಂವಾರಪಲ್ಲಿ ಗ್ರಾಮದ ರೈತ ಜಯರಾಮ್ ಎಂಬವರಿಗೆ ಸೇರಿದ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದ ಹಿನ್ನೆಲೆ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಜಯರಾಮ್ ಅವರು ಊರಿನಲ್ಲಿ ಮನೆ ಕೆಲಸ ಮಾಡಿಸುತ್ತಿರುವ ಕಾರಣ ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ತೋಟದ ಮನೆಯಲ್ಲಿಡಲಾಗಿತ್ತು. ಇದನ್ನೂ ಓದಿ: ‘ಐ ಲವ್ ಮುಹಮ್ಮದ್’ ಅಭಿಯಾನಕ್ಕೆ 5 ದಿನಗಳ ಪ್ಲ್ಯಾನಿಂಗ್ – ಯುಪಿ ಪೊಲೀಸರ ತನಿಖೆಯಲ್ಲಿ ಬಯಲು
ಬೆಂಕಿಯಿಂದ ಮನೆಯಲ್ಲಿದ್ದ ರಸಗೊಬ್ಬರ, ಮನೆ ಸಾಮಾನುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸುಮಾರು 4 ಲಕ್ಷ ರೂಪಾಯಿ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಗೆ ಬೆಂಕಿಯಿಟ್ಟಿರುವ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸಮಸ್ಯೆಗಳ ನಡ್ವೆ ನಾಯಿಗಳ ಭಯ; ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಜರ್ಮನ್ ಶೆಫರ್ಡ್ ನಾಯಿ ಕಡಿತ!
ಕೋಲಾರ: ಹಣ್ಣುಗಳ ರಾಜ ಮಾವಿನ ಹಣ್ಣಿಗೆ (Mango) ಬೆಲೆ ಕುಸಿದ ಹಿನ್ನೆಲೆ ಇಂದು ಕೋಲಾರದ (Kolar) ಶ್ರೀನೀವಾಸಪುರ (Srinivaspur) ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.
ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಾಥ್ ಕೊಟ್ಟಿವೆ. ಮಾವು ಬೆಳೆಗೆ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ಮಾವು ಬೆಳೆಗಾರರು, ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ. ಮಾವು ಬೆಳೆಗಾರರ ಬಂದ್‌ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ. ಇದನ್ನೂ ಓದಿ: ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ
ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸಪುರದ ಬಸ್ ನಿಲ್ದಾಣದಲ್ಲಿ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್ ರಾಯಭಾರಿ
ಕೋಲಾರ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ (Srinivasapura) ತಾಲೂಕು ಗುಂಟಪಲ್ಲಿ ಕ್ರಾಸ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಆಂದ್ರಪ್ರದೇಶ ಮೂಲದ ಮದನಪಲ್ಲಿಯ ಗಂಗಾಧರ್ ಎಂಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ವೇಗವಾಗಿದ್ದ ಖಾಸಗಿ ಬಸ್ ಓವರ್ ಟೆಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ಬಸ್‌ನಲ್ಲಿದ್ದ ಪ್ರಯಾಣಿಕರು ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಮಗನಿಗಿತ್ತು ಹೆಚ್‌ಐವಿ ಸೋಂಕು
ಕೋಲಾರ: ಖಾಸಗಿ ಕಾಲೇಜು ವಿದ್ಯಾರ್ಥಿನಿ (Student) ವಸತಿ ನಿಲಯದಲ್ಲಿ (Hostel) ತಾನು ಮಲಗುವ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಕಾಲೇಜು ಹಾಸ್ಟೆಲ್‌ನ ಈ ಘಟನೆ ನಡೆದಿದೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಿಂದುಶ್ರೀ (17) ಹಾಸ್ಟೆಲ್‌ನ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ವಿವಾದಿತ ಅಧಿಕಾರಿ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಕೆಲಕಾಲ ತಳ್ಳಾಟ ನೂಕಾಟ ನಡೆಸಿದ್ದು, ರೈತ ಮುಖಂಡ ನಾರಾಯಣಗೌಡ, ಮಂಜುನಾಥ್ ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿಯೇ ಕಾಂಗ್ರೆಸ್ ಮುಖಂಡರು ಹಲ್ಲೆ ಮಾಡಿದ್ದಾರೆ. ಶ್ರೀನಿವಾಸಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರತಿಭಟನೆ ಯಾಕೆ?
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ತಾಲೂಕಿನ ಜಿನಗಲಕುಂಟೆ ಗ್ರಾಮದ ಬಳಿಯಿರುವ ಸರ್ವೇ ನಂ.1 ಮತ್ತು 2ರಲ್ಲಿ 122 ಎಕರೆಯನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ (Former Speaker Ramesh Kumar) ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಏಳು ಜನ ಒತ್ತುವರಿದಾರರಲ್ಲಿ ರಮೇಶ್ ಕುಮಾರ್‌ಗೆ 61 ಎಕರೆ ಅರಣ್ಯ ಭೂಮಿ ಸೇರಿತ್ತು. ಈ ಹಿನ್ನೆಲೆ ನ.6ರಂದು ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ (Forest Department) ಸರ್ವೇ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸೂಚನೆ ನೀಡಿತ್ತು. ಜೊತೆಗೆ ಸರ್ವೇ ಮಾಡಿ ವರದಿ ಸಲ್ಲಿಸುವಂತೆ ತಿಳಿಸಿತ್ತು. ಆದರೆ ಕಾರಣಾಂತರಗಳಿಂದ ಸರ್ವೇ ಕಾರ್ಯ ನಡೆದಿರಲಿಲ್ಲ. ಈ ಹಿನ್ನೆಲೆ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಇದನ್ನೂ ಓದಿ: BBK 11: ಮತ್ತೆ ಬಿಗ್ ಬಾಸ್‌ಗೆ ತನಿಷಾ, ಪ್ರತಾಪ್, ಸಂತು ಪಂತು ಎಂಟ್ರಿ
ಕೋಲಾರ: ಕುಲ್ಷಕ ಕಾರಣಕ್ಕೆ ಗಲಾಟೆ ನಡೆದ ಪರಿಣಾಮ ಜ್ಯೂಸ್ ಫ್ಯಾಕ್ಟರಿ (Juice Factory) ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ (Srinivaspura) ತಾಲೂಕಿನ ಯಚ್ಚನಹಳ್ಳಿ ಗ್ರಾಮದ ಬಳಿ ನಡೆದಿದೆ.
ಕಾರ್ಮಿಕರ ನಡುವೆ ಗಲಾಟೆಯಲ್ಲಿ ಉತ್ತರ ಪ್ರದೇಶ ಮೂಲದ ಉಯ್ಯಾದ್ ತಲಾ (24) ಎಂಬ ಕಾರ್ಮಿಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ‘ಏಕ್ ಹೈ ತೋ ಸೇಫ್ ಹೈ’ ದೇಶದ ಮಹಾ ಮಂತ್ರವಾಗಿದೆ: ಮೋದಿ ಬಣ್ಣನೆ
ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ ರಿಪೇರಿ ಮಾಡುತ್ತಿದ್ದ ಬಾಬು ಮೇಲೆ ಟ್ರಕ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಂಡೂರು ಉಪ ಚುನಾವಣೆ – ಮಸ್ಟರಿಂಗ್ ಕಾರ್ಯ ಪೂರ್ಣ
ಕೋಲಾರ: ಬೈಕ್‌ಗೆ (Bike) ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ತಾಯಿ-ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ (Srinivaspur) ತಾಲೂಕಿನ ಹೊಗಳಕೆರೆ ಕ್ರಾಸ್‌ನಲ್ಲಿ ನಡೆದಿದೆ.
ಕೇತಗಾನಹಳ್ಳಿ ಗ್ರಾಮದ ನಿವಾಸಿಗಳಾದ ಪದ್ಮಮ್ಮ (48), ರಘು (26) ಮೃತ ದುರ್ದೈವಿಗಳು. ಶ್ರೀನಿವಾಸಪುರ ಪಟ್ಟಣದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಇದನ್ನೂ ಓದಿ: ಉದ್ಯಮಿ ಮುಮ್ತಾಜ್ ಅಲಿ ಸಾವು ಪ್ರಕರಣ – ಆರೋಪಿ ಮಹಿಳೆ ಬಂಧನ
ಕೋಲಾರ: ಕಾಂಗ್ರೆಸ್ (Congress) ಮುಖಂಡ ಕೌನ್ಸಿಲರ್ ಶ್ರೀನಿವಾಸ್ (shrinivas) ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕರೆತರುವ ವೇಳೆ ಪೊಲೀಸರ (Police) ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ವೇಮಗಲ್ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ವೆಂಕಟೇಶ್ ಗುಂಡು ಹಾರಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಲಕ್ಷ್ಮೀಸಾಗರ ಅರಣ್ಯ ಪ್ರದೇಶದ ಬಳಿ ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಇಬ್ಬರ ಕಾಲಿಗೆ ಗುಂಡು ಹಾರಿಸಲಾಗಿದೆ. ಈ ವೇಳೆ ಮತ್ತೊಬ್ಬ ಆರೋಪಿ ಸಂತೋಷ್‍ಗೂ ಗಾಯವಾಗಿದೆ. ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ ಬರ್ಬರ ಹತ್ಯೆ
ಆರೋಪಿಗಳು ನಡೆಸಿದ ಹಲ್ಲೆಯಿಂದ ಇನ್ಸ್‌ಪೆಕ್ಟರ್ ವೆಂಕಟೇಶ್, ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ದುಷ್ಕರ್ಮಿಗಳು ಪರಿಚಯಸ್ಥರಂತೆ ಮಾತಾಡಿಸಿ ಚಾಕು ಇರಿದು ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರ ಪೈಕಿ ಮೂವರು ಜನ ಪ್ರಮುಖ ಆರೋಪಿಗಳ ಬಂಧನವಾಗಿದೆ. ಇದನ್ನೂ ಓದಿ: ಮಹಿಳೆಯ ಹಸ್ತಕ್ಷೇಪದಿಂದ ಇಕ್ಕಟ್ಟಿಗೆ ಸರ್ಕಾರ – ದೇವರಗುಡ್ಡದ ಐತಿಹಾಸಿಕ ಕಾರ್ಣಿಕ
ಕೋಲಾರ: 2 ದಿನಗಳ ಹಿಂದೆ ನಡೆದ ಆ ಒಂದು ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಯಾರನ್ನು ಯಾವಾಗ ಪೊಲೀಸರು ಬಂಧಿಸ್ತಾರೋ ಅನ್ನೋ ಆತಂಕದಲ್ಲಿ ಊರಿಗೆ ಊರೇ ಖಾಲಿಯಾಗಿದೆ. ಜನರು ಆ ಗ್ರಾಮವನ್ನೇ ತೊರೆದಿದ್ದು, ಅಲ್ಲಿ ಸ್ಮಶಾನ ಮೌನ ಆವರಿಸಿದೆ.
ಬಿಕೋ ಎನ್ನುತ್ತಿರುವ ಗ್ರಾಮ, ಪೊಲೀಸರಿಂದ ಗ್ರಾಮದಲ್ಲಿ ಮೊಕ್ಕಾಂ, ಗ್ರಾಮಕ್ಕೆ ಗ್ರಾಮವನ್ನೇ ತೊರೆದಿರುವ ಗ್ರಾಮಸ್ಥರು. ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ (Srinivasapur) ತಾಲೂಕಿನ ನಂಬಿಹಳ್ಳಿಯಲ್ಲಿ (Nambihalli). ಕಳೆದ 2 ದಿನಗಳ ಹಿಂದೆ ಪತಿಯಿಂದಲೇ ಪತ್ನಿಯ ಭೀಕರ ಕೊಲೆ ನಡೆದಿತ್ತು. ಈ ವೇಳೆ ಆರೋಪಿ ಬೀಸಿದ ಮಚ್ಚಿಗೆ ಒರ್ವ ಮಹಿಳೆ ಹತ್ಯೆಯಾಗಿದ್ದರೂ 4 ಕೊಲೆ ಯತ್ನ ಹಾಗೂ 10 ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿತ್ತು. ಈ ವೇಳೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.
ಬಳಿಕ ಪ್ರತ್ಯೇಕ 3 ಪ್ರಕರಣಗಳನ್ನು ದಾಖಲು ಮಾಡಿಕೊಂಡಿದ್ದ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ರು. ಆದರೆ ಆರೋಪಿ ಬಂಧಿಸಲು ಮುಂದಾದ ವೇಳೆ ಪೊಲೀಸರ ವಿರುದ್ಧ ತಿರುಗಿ ಬಿದ್ದಿದ್ದ ಗ್ರಾಮಸ್ಥರಿಗೂ ಈಗ ಕಂಟಕ ಎದುರಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ನಂಬಿಹಳ್ಳಿ ಗ್ರಾಮದ 1,000ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ. ಇದೀಗ ಬಂಧನದ ಭೀತಿಯಲ್ಲಿ ಗ್ರಾಮಸ್ಥರು ಊರನ್ನೇ ತೊರೆದಿದ್ದಾರೆ.
ಕಳೆದ 2 ದಿನಗಳ ಹಿಂದೆ ರಾಧಾ ಎಂಬಾಕೆಯನ್ನು ಆಕೆಯ ಪತಿ ನಾಗೇಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ. ಜೊತೆಗೆ ಇನ್ನೂ 4 ಜನರ ಮೇಲೆ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿ, ನಂತರ ಅದೇ ಗ್ರಾಮದ ಹೋಟೆಲ್ ಒಂದರಲ್ಲಿ ಅವಿತುಕೊಂಡಿದ್ದ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಆರೋಪಿ ನಾಗೇಶ್ ಇದ್ದ ಹೋಟೆಲ್‌ಗೆ ದಾಳಿ ಮಾಡಿ ಆತನನ್ನು ಕೊಲೆ ಮಾಡಲು ಮುಂದಾಗಿದ್ದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಗ್ರಾಮಸ್ಥರ ಮನವೊಲಿಕೆಗೆ ಮುಂದಾಗಿದ್ದರು. ವಿಫಲರಾದ ನಂತರ ಲಘು ಲಾಠಿ ಚಾರ್ಜ್ ಮಾಡಿದ್ದರು. ಇದನ್ನೂ ಓದಿ: ಎಲ್ಲಾ ಪರೀಕ್ಷೆಗಳ ರಿಪೋರ್ಟ್ ನಾರ್ಮಲ್- ಚೈತ್ರಾ ಹೆಲ್ತ್ ಬುಲೆಟಿನ್ ರಿಪೋರ್ಟ್ ಇಲ್ಲಿದೆ
ಇದ್ಯಾವುದಕ್ಕೂ ಗ್ರಾಮಸ್ಥರು ಜಗ್ಗದ ಹಿನ್ನೆಲೆ ಪೊಲೀಸರು ಗಾಳಿಯಲ್ಲಿ 7 ಸುತ್ತಿನ ಗುಂಡು ಹಾಯಿಸಿ ಅಶ್ರುವಾಯು ಸಿಡಿಸಿದ ನಂತರ ಪರಿಸ್ಥಿತಿ ಹತೋಟಿಗೆ ಬಂದಿತ್ತು. ನಂತರ ಆರೋಪಿ ನಾಗೇಶ್ ನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದ ವೇಳೆ ಪೊಲೀಸರ ಮೇಲೆಯೂ ಮಚ್ಚಿನಿಂದ ದಾಳಿ ಮಾಡಿ, ಎಸ್‌ಪಿ ನಾರಾಯಣ್ ಸೇರಿದಂತೆ 10 ಮಂದಿ ಪೊಲೀಸರು ಗಾಯಗೊಂಡಿದ್ದರು. ಈ ವೇಳೆ ಆರೋಪಿಯ ಕಾಲು ಹಾಗೂ ಕೈಗೆ 5 ಸುತ್ತಿನ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದು ಚಿಕಿತ್ಸೆ ಕೊಡಿಸಲಾಗಿತ್ತು. ಹೀಗಾಗಿ ಗ್ರಾಮದಲ್ಲಿರುವ ಮಹಿಳೆಯರು, ಮಕ್ಕಳು, ಪುರುಷರು ಬಂಧನದ ಭೀತಿಯಿಂದಾಗಿ ಗ್ರಾಮವನ್ನು ಬಿಟ್ಟಿದ್ದಾರೆ.
ಒಟ್ಟಿನಲ್ಲಿ ಮಾಡಿದ್ದುಣ್ಣು ಮಾರಾಯ ಅಂತಾ ಕಾನೂನಿನ ವಿರುದ್ಧವಾಗಿ ಆರೋಪಿಯನ್ನು ಕೊಲ್ಲುವ ಯತ್ನ ಹಾಗೂ ಪೊಲೀಸರಿಗೆ ಅಡ್ಡಿಪಡಿಸಿ ಇಡೀ ಗ್ರಾಮ ಸಂಕಷ್ಟಕ್ಕೀಡಾಗಿದೆ. ಆದರೂ 1,000ಕ್ಕೂ ಹೆಚ್ಚು ಜನರ ಮೇಲೆ ದೂರು ದಾಖಲಾಗಿದ್ದು ಇದೊಂದು ದೊಂಬಿ ಪ್ರಕರಣ, ಇದಕ್ಕೆ ಅಷ್ಟೊಂದು ಮಹತ್ವ ಇಲ್ಲ ಎನ್ನುವುದು ಇಲಾಖಾಧಿಕಾರಿಗಳ ಮಾತು. ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಹಿಂದೂ ಅಪ್ರಾಪ್ತೆಯರಿಬ್ಬರ ಕಿಡ್ನಾಪ್- ನಾಲ್ವರು ಅರೆಸ್ಟ್