Tag: ಶ್ರೀನಿವಾಸ್ ಗೌಡ

  • ಕರಾವಳಿಯ ಉಸೇನ್ ಬೋಲ್ಟ್ ಖ್ಯಾತಿಯ ಕಂಬಳ ಓಟಗಾರ ಶ್ರೀನಿವಾಸ್ ಗೌಡ ವಿರುದ್ಧ ಪ್ರಕರಣ ದಾಖಲು

    ಕರಾವಳಿಯ ಉಸೇನ್ ಬೋಲ್ಟ್ ಖ್ಯಾತಿಯ ಕಂಬಳ ಓಟಗಾರ ಶ್ರೀನಿವಾಸ್ ಗೌಡ ವಿರುದ್ಧ ಪ್ರಕರಣ ದಾಖಲು

    ಉಡುಪಿ: ಕರಾವಳಿಯ ಉಸೇನ್ ಬೋಲ್ಟ್ ಎಂದು ಕಂಬಳ ಕ್ಷೇತ್ರದಲ್ಲಿ ಹೆಸರವಾಸಿಯಾಗಿದ್ದ ಶ್ರೀನಿವಾಸ್ ಗೌಡ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿರುವ ಆರೋಪದಡಿ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.

    ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಹಿರಿಯ ತೀರ್ಪುಗಾರ ಗುಣಪಾಲ್ ಕಡಂಬ ಮತ್ತು ಲೇಸರ್ ಬೀಮ್ ಮಾಲಕ ರತ್ನಾಕರ್ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಮಾಡಿರುವ ಆರೋಪ ಹೊರಿಸಿ ಕಂಬಳ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಮುಚ್ಚೂರು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

    ತೀರ್ಪುಗಾರ ಗುಣಪಾಲ್ ಕಡಂಬ ಸ್ವಾರ್ಥ ಸಾಧನೆಗೆ ಕಂಬಳ ದುರುಪಯೋಗ ಮಾಡಿದ್ದಾರೆ. ಸ್ವಂತ ಲಾಭಕ್ಕಾಗಿ ಜಿಲ್ಲಾ ಕಂಬಳ ಸಮಿತಿಯಲ್ಲಿ ಆಕ್ರಮ ಪ್ರವೇಶ ಮಾಡಿದ್ದಾರೆ. ಕಂಬಳ ಕೂಟದ ಸಭೆಗಳಲ್ಲಿ ಮೈಕ್ ಹಿಡಿದು ತಾನೋರ್ವ ಮಹಾಸಾಧಕ, ನನ್ನಿಂದಲೇ ಕಂಬಳ ಉಳಿದಿದೆ ಎಂದು ಸಾರ್ವಜನಿಕರಲ್ಲಿ ಬಿಂಬಿಸಿ ಇದನ್ನು ತಮ್ಮ ಸ್ವಾರ್ಥ ಸಾಧನೆಗೆ ಬಳಸುತ್ತಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಉಡೀಸ್ ಅಂತಾ ನಕಲಿ ದಾಖಲೆ ಸೃಷ್ಟಿಸಲಾಗಿದೆ. ಇದನ್ನೇ ನೆಪವಾಗಿ ಸಾರ್ವಜನಿಕ ಹಾಗೂ ಸರ್ಕಾರದ ಹಣ ವಂಚಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಚಾಕ್ಲೆಟ್ ಕವರ್ ನುಂಗಿ 6 ವರ್ಷದ ಬಾಲಕಿ ಸಾವು

    2020ರ ಫೆ.1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಐಕಳದಲ್ಲಿ ನಡೆದ ಕಂಬಳದ ಓಟದಲ್ಲಿ 145.5 ಮೀ. ದೂರವನ್ನು 13.63 ಸೆಕೆಂಡ್‍ಗಳಲ್ಲಿ ಕ್ರಮಿಸುವ ಮೂಲಕ ಶ್ರೀನಿವಾಸ್‌ ಗೌಡ ಕೂಟ ದಾಖಲೆ ಬರೆದಿದ್ದರು. ಈ ಸಾಧನೆ ದೇಶದ ಗಮನ ಸೆಳೆದಿತ್ತು. ಅಲ್ಲದೆ ಕಂಬಳ ಗದ್ದೆಯಲ್ಲಿ ಕೋಣಗಳೊಂದಿಗೆ 100 ಮೀ. ದೂರವನ್ನು 9.55 ಸೆಕೆಂಡ್‍ಗಳಲ್ಲಿ ಕ್ರಮಿಸುವ ಮೂಲಕ ದಾಖಲೆ ಬರೆದಿದ್ದರು. ಈ ಸಾಧನೆಯಿಂದ ಉಸೇನ್ ಬೋಲ್ಟ್ ಅವರ 100 ಮೀ. ಓಟದ ದಾಖಲೆ 9.58 ಉಡೀಸ್ ಆಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಜೆಡಿಎಸ್‍ನಿಂದ ಶಾಸಕ ಗುಬ್ಬಿ ಶ್ರೀನಿವಾಸ್, ಶ್ರೀನಿವಾಸ್ ಗೌಡ ಉಚ್ಚಾಟನೆ

    ಜೆಡಿಎಸ್‍ನಿಂದ ಶಾಸಕ ಗುಬ್ಬಿ ಶ್ರೀನಿವಾಸ್, ಶ್ರೀನಿವಾಸ್ ಗೌಡ ಉಚ್ಚಾಟನೆ

    ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಗುಬ್ಬಿ ಶ್ರೀನಿವಾಸ್ ಮತ್ತು ಶ್ರೀನಿವಾಸ್ ಗೌಡರನ್ನು ಉಚ್ಚಾಟನೆ ಮಾಡಲು ಜೆಡಿಎಸ್‍ನಿಂದ ತೀರ್ಮಾನ ಮಾಡಲಾಗಿದೆ. ಈ ಸಂಬಂಧ ನಾಳೆಯೇ ಆದೇಶ ಹೊರಡಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸ್ಪಷ್ಟನೆ ನೀಡಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಇಬ್ಬರನ್ನು ಅಮಾನತು ಮಾಡಲಾಗಿದೆ. ಕುಮಾರಸ್ವಾಮಿ ಅವರು ಬೆಂಗಳೂರಿನ ಹೊರಗೆ ಇದ್ದಾರೆ. ನಾಳೆ ಅವರ ಬಳಿ ಸಹಿ ಪಡೆದ ಬಳಿಕ ನಾಳೆ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು.

    ಇಬ್ಬರ ಸದಸ್ಯತ್ವ ರದ್ದು ಮಾಡಲು ಬುಧವಾರ ಸ್ಪೀಕರ್‌ಗೆ ದೂರು ಕೊಡುತ್ತೇವೆ. ಇಬ್ಬರು ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದಾರೆ. ಕಾಂಗ್ರೆಸ್-ಬಿಜೆಪಿ ಒಟ್ಟಾಗಿ ಅಡ್ಡ ಮತದಾನ ಮಾಡಿಸಿದ್ದಾರೆ. ಹೀಗಾಗಿ ಅನರ್ಹ ಮಾಡಿ ಎಂದು ಮನವಿ ಮಾಡುತ್ತೇವೆ. ಈಗ ಇರುವ ಸ್ಪೀಕರ್ ಸಂವಿಧಾನ ಬದ್ಧವಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಒಂದು ವೇಳೆ ಸ್ಪೀಕರ್ ಸರಿಯಾಗಿ ನಿರ್ಣಯ ಮಾಡದೇ ಹೋದರೆ ಕೋರ್ಟ್ ಮೊರೆ ಹೋಗುತ್ತೇವೆ ಎಂದು ತಿಳಿಸಿದರು.

    ಗುಬ್ಬಿ ಶ್ರೀನಿವಾಸ್ ತಪ್ಪು ಮಾಡಿಲ್ಲ ಅಂದರೆ ಅವತ್ತೆ ಹೇಳಬೇಕಿತ್ತು. ಮತ ಪತ್ರ ಮುಚ್ಚಿಕೊಂಡು ಯಾಕೆ ಮತ ಹಾಕಿದರು? ಆಮೇಲೆ ಯಾಕೆ ಕುಮಾರಸ್ವಾಮಿ ಬಗ್ಗೆ ಮಾತಾಡಿದರು. ಈಗ ಯಾಕೆ ಆಣೆ ಪ್ರಮಾಣ ಮಾಡುತ್ತಾರೆ ಎಂದು ಗುಬ್ಬಿ ಶ್ರೀನಿವಾಸ್ ವಿರುದ್ದ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

    Congress

    ಕೆಪಿಸಿಸಿ ಅಧ್ಯಕ್ಷರೇ ಬಿಜೆಪಿಗೆ ಮತ ಹಾಕಿಸಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಹೀಗೆ ಆಗಿದೆ. ಸೋನಿಯಾ ಗಾಂಧಿ, ಸುರ್ಜೇವಾಲಾ ಯಾಕೆ ಮೌನವಾಗಿ ಇದ್ದಾರೆ. ಇವರು ಮೌನವಾಗಿ ಇರೋದು ನೋಡಿದರೆ ಇವರು ಕೂಡಾ ಶಾಮೀಲಾಗಿದ್ದಾರೆ ಅನ್ನಿಸುತ್ತದೆ ಎಂದು ಆರೋಪ ಮಾಡಿದರು. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

    ಅಡ್ಡ ಮತದಾನದ ಬಗ್ಗೆ ಮಾತಾಡೋದು ಬಿಟ್ಟು ಇಡಿ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಯಾಕೆ. ಕಾಂಗ್ರೆಸ್‍ನವರು ಯಾಕೆ ಇಡಿ ದಾಳಿ ಬಗ್ಗೆ ಪ್ರತಿಭಟನೆ ಮಾಡುತ್ತಾ ಇದ್ದಾರೆ. ಇಲ್ಲಿ ನಮ್ಮ ಶಾಸಕರಿಂದ ಅಡ್ಡ ಮತದಾನ ಮಾಡಿಸಿಕೊಂಡಿದ್ದಾರೆ. ಇದು ಸರಿನಾ? ಇಲ್ಲಿ ಅಡ್ಡ ಮತದಾನ ಮಾಡಿಸಿ, ಅಲ್ಲಿ ಇಡಿ ದಾಳಿ ಬಗ್ಗೆ ಪ್ರತಿಭಟನೆ ಮಾಡೋಕೆ ಅವರಿಗೆ ಯಾವ ನೈತಿಕತೆ ಇದೆ ಅಂತ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

  • ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಕೋಲಾರ: ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ನಾನು ಯಾಕೆ ಅಡ್ಡ ಮತದಾನ ಮಾಡಿದೆ ಎಂಬುದಕ್ಕೆ ಈಗ ಹಳೆ ಕಥೆ ಬಿಚ್ಚಿಟ್ಟು ಶ್ರೀನಿವಾಸ್ ಗೌಡ ತನ್ನ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಕೋಲಾರದಲ್ಲಿ ಮಾತನಾಡಿದ ಶ್ರೀನಿವಾಸ್ ಗೌಡ, ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್‌ಗೆ ಮತ ಹಾಕಿದ್ದೇನೆ. ಈ ಹಿನ್ನೆಲೆ ಜೆಡಿಎಸ್ ಮುಖಂಡರು ನನ್ನ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ ಎಂದು ತಿಳಿಸಿದರು.

    7 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ಅವರು ನನ್ನನ್ನು ಉಚ್ಚಾಟನೆ ಮಾಡಿದ್ದರು. ಇದೀಗ ಜೆಡಿಎಸ್‌ನವರಿಗೆ ನನ್ನ ವಿಷಯದಲ್ಲಿ ಮಾತನಾಡುವ ಹಕ್ಕು ಇಲ್ಲ. ಅವರು ಉಚ್ಚಾಟನೆ ಮಾಡಿದ ಬಳಿಕ ನಾನು ಯಾವುದೇ ಪಕ್ಷಕ್ಕೂ ಹೋಗಬಹುದು ಎಂದು ಹೇಳಿದರು.

    ನಾನೊಬ್ಬ ಹಿರಿಯ ಶಾಸಕನಾಗಿದ್ದರೂ ನನ್ನನ್ನು ಸಚಿವನನ್ನಾಗಿ ಮಾಡಿಲ್ಲ. ನಾನು ಮಂತ್ರಿಯಾಗಿದ್ದಾಗ ಕುಮಾರಸ್ವಾಮಿಯವರು ಶಾಸಕರೂ ಆಗಿರಲಿಲ್ಲ. ಇಂತಹ ಹಿರಿಯ ಶಾಸಕನನ್ನು ಪಕ್ಷ ಸರಿಯಾಗಿ ನೋಡಿಕೊಂಡಿಲ್ಲ. ನನ್ನ ಹಿನ್ನೆಲೆ ನೋಡಿಯಾದರೂ ಗೌರವ ನೀಡಬೇಕಿತ್ತು ಎಂದು ನುಡಿದರು. ಇದನ್ನೂ ಓದಿ: ಬಿಜೆಪಿ ‘ಎ’ ಟೀಂ ಅಂತ ಎಲ್ಲರೂ ಒಪ್ಪಿಕೊಂಡಾಗಿದೆ, ಬಿ ಟೀಂ ಯಾವುದಾದರೇನು: ಬೊಮ್ಮಾಯಿ

    ನಾನು ಧರಂ ಸಿಂಗ್ ಅವರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದೆ. ಅವರ ನಡತೆ ನ್ಯಾಯಯುತವಾಗಿರಲಿಲ್ಲ. ಈಗ ತಾಲೂಕು, ಜಿಲ್ಲಾ ಪಂಚಾಯತ್ ಎಲ್ಲದರಿಂದಲೂ ನಾನು ಹೊರ ಬಂದಿದ್ದೇನೆ. ನನ್ನ ಕೈಲಾದಮಟ್ಟಿಗೆ ಅಭಿವೃದ್ಧಿ ಮಾಡಿದ್ದೇನೆ. ಕೋಲಾರಕ್ಕೆ ರಿಂಗ್ ರಸ್ತೆ ಮಾಡಿಸುವ ಕನಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಸುಳಿವು ಬಿಟ್ಟುಕೊಟ್ಟ ಅಶ್ವಥ್ ನಾರಾಯಣ್

    2018ರಲ್ಲಿ ನನಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ತಪ್ಪಿತ್ತು. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳಿದ್ದಾಗ ಮಿಸ್ ಆಯ್ತು ಎಂದು ಜೆಡಿಎಸ್‌ನಿಂದ ಸ್ಪರ್ಧೆಗೆ ನಿಂತಿದ್ದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ ಶಾಸಕರಿಗೂ 50 ಲಕ್ಷ ರೂ. ನೀಡಲಾಗಿದೆ. ಅದನ್ನು ಎಲ್ಲಾ ಜೆಡಿಎಸ್ ಶಾಸಕರೂ ಪಡೆದಿದ್ದಾರೆ. ಆದರೆ ನಾನು ಪಡೆದಿಲ್ಲ ಎಂದು ಹೇಳಿಕೆ ನೀಡಿದರು.

  • ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶ್ರೀನಿವಾಸ್ ಗೌಡ ವಿರುದ್ಧ ಹೆಚ್‌ಡಿಕೆ ಕಿಡಿ

    ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶ್ರೀನಿವಾಸ್ ಗೌಡ ವಿರುದ್ಧ ಹೆಚ್‌ಡಿಕೆ ಕಿಡಿ

    ಬೆಂಗಳೂರು: ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವ ವಿಚಾರ ತಿಳಿದು ಬರುತ್ತಲೇ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಕಿಡಿ ಕಾರಿದ್ದಾರೆ.

    ಆ ಮನುಷ್ಯನಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ. ಕೋಲಾರ ಜನತೆಯ ಜೆಡಿಎಸ್ ಮತದಾರರಿಗೆ ಅವರು ಅವಮಾನ ಮಾಡಿದ್ದಾರೆ. ನಮ್ಮ ಪಕ್ಷದ ಚಿಹ್ನೆ ಅಡಿ ಗೆದ್ದು, ಅವರಿಗೆ ಮತ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಮೊದಲ ಅಡ್ಡಮತದಾನ

    ಕಾಂಗ್ರೆಸ್‌ನವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. 2016ರಲ್ಲಿ 8 ಶಾಸಕರ ಕೈಯಲ್ಲಿ ಅಡ್ಡ ಮತ ಹಾಕಿಸಿಕೊಂಡಿದ್ದರು. ಇದೀಗ ಶ್ರೀನಿವಾಸ್ ಗೌಡ ಅವರ ಕೈಯಲ್ಲಿ ಅಡ್ಡ ಮತ ಹಾಕಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

    ಗುಬ್ಬಿ ಶ್ರೀನಿವಾಸ್ ಬಗ್ಗೆ ಮಾತನಾಡಿದ ಹೆಚ್‌ಡಿಕೆ, ಗುಬ್ಬಿ ಶ್ರೀನಿವಾಸ್ ಯಾರಿಗೂ ಮತ ಹಾಕಿಲ್ಲ. ಖಾಲಿ ಪೇಪರ್ ಕೊಟ್ಟು ಹೋಗಿದ್ದಾರೆ. ಆದರೆ ಮಾಧ್ಯಮದ ಮುಂದೆ ಜೆಡಿಎಸ್‌ಗೆ ಮತ ಹಾಕಿದ್ದೇನೆ ಎಂದು ಹೇಳುತ್ತಿದ್ದಾರೆ. ಯಾಕೆ ಇಷ್ಟು ನಾಟಕವಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜೆಡಿಎಸ್‌ಗೆ ಬಿಗ್ ಶಾಕ್ ಕೊಟ್ಟ ಗುಬ್ಬಿ ಶ್ರೀನಿವಾಸ್

    ಇವರನ್ನು ಮಂತ್ರಿ ಮಾಡಿದ್ದೇ ತಪ್ಪಾಯಿತು. ಇವರ ಬಂಡವಾಳ ಸಂಜೆ ಗೊತ್ತಾಗಲಿದೆ. ಇವರಿಗೆ ಜನರೇ ತಕ್ಕ ಬುದ್ಧಿ ಕಲಿಸುತ್ತಾರೆ ಎಂದು ಹೇಳಿಕೆ ನೀಡಿದರು.

  • ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

    ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

    ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ  ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೂ ರಿಯಲ್ ಆಗಿ ಕಂಬಳದ ಕೋಣ ಓಡಿಸುತ್ತಿದ್ದ ಶ್ರೀನಿವಾಸ್ ಗೌಡ ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಈ ಸಿನಿಮಾದಲ್ಲಿ ವಿಶೇಷಪಾತ್ರದಲ್ಲಿ ಆದಿತ್ಯ ನಟಿಸುತ್ತಿದ್ದರೆ, ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಚಿತ್ರತಂಡ ಕೇಳಿದೆಯಂತೆ. ಅವರು ಒಪ್ಪಿಗೆ ನೀಡಿದ್ದಾರೆ. ಸದ್ಯದಲ್ಲೇ ಅವರ ಭಾಗ ಶೂಟಿಂಗ್ ಕೂಡ ಮುಗಿಯಲಿದೆ ಎಂದಿದೆ ಸಿನಿಮಾತಂಡ.

    ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : ತಮಿಳು ಖ್ಯಾತ ನಟ ಸಿಂಬು ಮನೆಮುಂದೆ ಹೈಡ್ರಾಮಾ, ಸೀರಿಯಲ್ ನಟಿ ಧರಣಿ

    ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿರುವ ಆದಿತ್ಯ ಮಾತನಾಡಿ, “ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು” ಎಂದಿದ್ದಾರೆ.

  • ಹಾಸನಾಂಬಾ ದರ್ಶನಕ್ಕೆ ಇಂದು ವಿಧ್ಯುಕ್ತ ತೆರೆ

    ಹಾಸನಾಂಬಾ ದರ್ಶನಕ್ಕೆ ಇಂದು ವಿಧ್ಯುಕ್ತ ತೆರೆ

    ಹಾಸನ: ಹಾಸನಾಂಬಾ ದರ್ಶನಕ್ಕೆ ಇಂದು ವಿಧ್ಯುಕ್ತ ತೆರೆ ಬೀಳಲಿದೆ. ಇಂದು ಮಧ್ಯಾಹ್ನ 1 ಗಂಟೆಯಿಂದ 2 ಗಂಟೆ ಸುಮಾರಿಗೆ ಗರ್ಭಗುಡಿ ಬಾಗಿಲನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಂಗೌಡ, ಅಧಿಕಾರಿಗಳ ಸಮ್ಮುಖದಲ್ಲಿ ಮುಚ್ಚಲಾಗುವುದು.

    ಹಾಸನಾಂಬಾ ಜಾತ್ರಾ ಮಹೋತ್ಸವದ ಕಡೇ ದಿನದ ಹಿನ್ನೆಲೆಯಲ್ಲಿ ಅರ್ಚಕರು ಗರ್ಭಗುಡಿ ಬಾಗಿಲು ಮುಚ್ಚುವ ಮುನ್ನ ದೇವರ ಮುಂದೆ ದೀಪ ಹಚ್ಚಿ, ಹೂವು, ನೈವೇದ್ಯ ಇಡಲಿದ್ದಾರೆ. ಇದರ ಇನ್ನೊಂದು ವಿಶೇಷತೆ ಎಂದರೆ ಮುಂದಿನ ವರ್ಷ ಬಾಗಿಲು ತೆರೆಯುವವರೆಗೂ ಅರ್ಚಕರು ಇಟ್ಟ ಹೂವು ಬಾಡುವುದಿಲ್ಲ, ದೀಪ ಆರುವುದಿಲ್ಲ. ಇದನ್ನೂ ಓದಿ: ಪುನೀತ್ ಸಾವಿನ ನಂತರ ಜಯದೇವ ಆಸ್ಪತ್ರೆ ರೋಗಿಗಳಲ್ಲಿ 30% ಹೆಚ್ಚಳ

    ಗರ್ಭಗುಡಿ ಬಾಗಿಲನ್ನು ಅಕ್ಟೋಬರ್ 28 ರಂದು ತೆರೆದಿದ್ದು, ಒಂಭತ್ತು ದಿನದಲ್ಲಿ ಏಳು ದಿನ ಮಾತ್ರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಲಕ್ಷಾಂತರ ಭಕ್ತರು ದೇವಿ ದರ್ಶನ ಪಡೆದಿದ್ದಾರೆ. 1000, 300 ರೂ. ವಿಶೇಷ ಟಿಕೆಟ್, ಲಾಡು ಹಾಗೂ ಹುಂಡಿ ಕಾಣಿಕೆಯಿಂದ ಹೆಚ್ಚು ಆದಾಯ ನಿರೀಕ್ಷೆ ಇದೆ. ಇಂದು ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಿದೆ.

    ಹಾಸನದ ಎಸ್‍ಪಿ ಶ್ರೀನಿವಾಸ್ ನಿನ್ನೆ ದೇಗುಲದ ಬಳಿ ಭಕ್ತರ ನೂಕು ನುಗ್ಗಲು ಕಂಡು ಪರಿಸ್ಥಿತಿ ನಿಯಂತ್ರಿಸಿದ್ದರು. ನಂತರ ಅವರು ಮತ್ತು ಅವರ ಪತ್ನಿ ಸಿದ್ದೇಶ್ವರ ರಥೋತ್ಸವದಲ್ಲಿ ಭಾಗಿಯಾದರು. ಶ್ರೀನಿವಾಸ್ ಅವರು ಸಿದ್ದೇಶ್ವರ ದೇಗುಲದ ಒಳಭಾಗದಿಂದ ದೇಗುಲ ಹೊರಭಾಗದ ರಥದವರೆಗೆ ದೇವರ ಅಡ್ಡೆ ಹೊತ್ತು ಬಂದಿದ್ದು, ಪಕ್ಕದಲ್ಲೆ ಅವರ ಪತ್ನಿ ನಡೆದು ಬಂದು ದೇವರಿಗೆ ಭಕ್ತಿ ಅರ್ಪಿಸಿದ್ದಾರೆ. ಈ ವೇಳೆ ಶಾಸಕ ಪ್ರೀತಂಗೌಡ ಅವರು ಸಹ ಇವರ ಜೊತೆಯಲ್ಲಿಯೇ ಅಡ್ಡೆ ಹೊತ್ತಿಕೊಂಡು ಬಂದಿದ್ದಾರೆ. ಇದನ್ನೂ ಓದಿ:  ‘ಅಪ್ಪು’ ಸವಿನೆನಪು – ನ.9 ರಂದು ಅಭಿಮಾನಿಗಳಿಗೆ ಅನ್ನಸಂತರ್ಪಣೆ

    ಐದು ದಿನಗಳ ಹಿಂದೆ ತಿರುಪತಿಯಲ್ಲಿ ವಿವಾಹವಾಗಿರುವ ಶ್ರೀನಿವಾಸ್ ಗೌಡ ಮತ್ತು ಅವರ ಪತ್ನಿ ಇಂದು ಹಾಸನಾಂಬಾ ಜಾತ್ರಾ ಮಹೋತ್ಸವದ ಕೊನೆಯ ದಿನವಾಗಿದ್ದರಿಂದ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

  • ಹಾಸನ ಎಸ್‍ಪಿ ಶ್ರೀನಿವಾಸ್ ಗೌಡಗೆ ಕೊರೊನಾ ಸೋಂಕು

    ಹಾಸನ ಎಸ್‍ಪಿ ಶ್ರೀನಿವಾಸ್ ಗೌಡಗೆ ಕೊರೊನಾ ಸೋಂಕು

    ಹಾಸನ: ದಿನದಿಂದ ದಿನಕ್ಕೆ ಹಾಸನದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಎಸ್.ಪಿ.ಆರ್.ಶ್ರೀನಿವಾಸ್ ಗೌಡರಿಗೂ ಕೋವಿಡ್ ಸೋಂಕು ತಗುಲಿದೆ. ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಶನ್ ನಲ್ಲಿದ್ದಾರೆ.

    ಗುರುವಾರ ಸಂಜೆ ಆರೋಗ್ಯದಲ್ಲಿ ಸಮಸ್ಯೆಯುಂಟಾಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಕೋವಿಡ್ ಆರಂಭದ ದಿನಗಳಿಂದಲೂ ಮಹಾಮಾರಿ ನಿಯಂತ್ರಣಕ್ಕಾಗಿ ಹಗರಲಿರುಳು ಎನ್ನದೇ ಕಾರ್ಯ ನಿರ್ವಹಿಸಿದ್ದರು.

    ಕಳೆದ ವರ್ಷದಿಂದ ಇಲ್ಲಿಯ ತನಕ ಹಾಸನದಲ್ಲಿ ಸುಮಾರು 31,379 ಪ್ರಕರಣಗಳು ಪತ್ತೆಯಾಗಿದ್ದು, 29,524 ಮಂದಿ ಗುಣಮುಖರಾಗಿದ್ದಾರೆ. ಒಂದು ವರ್ಷದಲ್ಲಿ 487 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 25 ಮಂದಿ ಐಸಿಯುವಿನಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಜಿಲ್ಲೆಯಲ್ಲಿ 1,368 ಸಕ್ರಿಯ ಪ್ರಕರಣಗಳಿವೆ.

  • 8.96 ಸೆಕೆಂಡ್‍ನಲ್ಲಿ 100 ಮೀ. ಕ್ರಮಿಸಿ ಕಂಬಳದಲ್ಲಿ ತಮ್ಮದೇ ದಾಖಲೆ ಸರಗಟ್ಟಿದ ಶ್ರೀನಿವಾಸ್ ಗೌಡ

    8.96 ಸೆಕೆಂಡ್‍ನಲ್ಲಿ 100 ಮೀ. ಕ್ರಮಿಸಿ ಕಂಬಳದಲ್ಲಿ ತಮ್ಮದೇ ದಾಖಲೆ ಸರಗಟ್ಟಿದ ಶ್ರೀನಿವಾಸ್ ಗೌಡ

    ಮಂಗಳೂರು: ಇಂಡಿಯನ್ ಉಸೇನ್ ಬೋಲ್ಟ್ ಎಂದೇ ಜನಪ್ರಿಯರಾಗಿರುವ ಕಂಬಳದ ವೀರ ಮಿಜಾರು ಶ್ರೀನಿವಾಸ್ ಗೌಡ ಅವರು ಈ ಹಿಂದಿನ ತಮ್ಮದೇ ದಾಖಲೆ ಮುರಿದಿದ್ದು, ಕೇವಲ 9.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರವನ್ನು ಕ್ರಮಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆಯುತ್ತಿರುವ ಸೂರ್ಯ-ಚಂದ್ರ ಜೋಡುಕೆರೆ ಕಂಬಳದಲ್ಲಿ ಶ್ರೀನಿವಾಸಗೌಡ ಹೊಸ ದಾಖಲೆ ಬರೆದಿದ್ದಾರೆ.

    ಕೇವಲ 8.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರವನ್ನು ಕ್ರಮಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನೇಗಿಲು ಹಿರಿಯ ವಿಭಾಗದ ಕೋಣಗಳನ್ನು ಓಡಿಸಿದ ಶ್ರೀನಿವಾಸ್ ಗೌಡ, ಕೇವಲ 11.21 ಸೆಕೆಂಡ್‍ಗಳಲ್ಲಿ 125 ಮೀಟರ್ ದೂರವನ್ನು ಕ್ರಮಿಸಿದ್ದಾರೆ. ಅಂದರೆ ಕೇವಲ 8.96 ಸೆಕೆಂಡ್‍ಗಳಲ್ಲಿ 100 ಮೀಟರ್ ತಲುಪಿದ್ದು, ಈ ಮೂಲಕ ಹಿಂದಿನ ಎಲ್ಲ ದಾಖಲೆಗಳನ್ನು ಸರಗಟ್ಟಿದ್ದಾರೆ.

    2020ರ ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು.

    ಶ್ರೀನಿವಾಸ್ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದರು. ಇದು ಕಂಬಳ ಕ್ರೀಡೆಯಲ್ಲಿ ಇದೂವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ್ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್‍ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದರು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಎಂಬಂತೆ 8.96 ಸೆಕೆಂಡ್‍ನಲ್ಲಿ 100 ಮೀಟರ್ ಕ್ರಮಿಸುವ ಮೂಲಕ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.

    ಈಗಾಗಲೇ ಕಂಬಳದ ವೀರನ ಸಾಧನೆ ಕುರಿತು ಸಿನಿಮಾ ಮಾಡಲಾಗುತ್ತಿದ್ದು, ಕರಾವಳಿ ಮೂಲದ ಉದ್ಯಮಿ ಲೋಕೇಶ್ ಶೆಟ್ಟಿ ಎಂಬವರು ಈಗಾಗಲೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಿದ್ದಾರೆ. ಈ ಚಿತ್ರವನ್ನು ನಿಖಿಲ್ ಮಂಜು ಅವರು ನಿರ್ದೇಶನ ಮಾಡುತ್ತಿದ್ದಾರೆ.

  • ಕನ್ನಡ ಸಿನಿಮಾವಾಗಲಿದೆ ಕಂಬಳ ವೀರ ಶ್ರೀನಿವಾಸ್ ಜೀವನ ಚರಿತ್ರೆ

    ಕನ್ನಡ ಸಿನಿಮಾವಾಗಲಿದೆ ಕಂಬಳ ವೀರ ಶ್ರೀನಿವಾಸ್ ಜೀವನ ಚರಿತ್ರೆ

    – ಕಂಬಳ ಹೆಸರಿನಲ್ಲಿ ಟೈಟಲ್ ರಿಜಿಸ್ಟರ್

    ಮಂಗಳೂರು: ಕಂಬಳ ವೀರ ಶ್ರೀನಿವಾಸ್ ಗೌಡ ಅವರು ವಿಶ್ವದಾದ್ಯಂತ ಭಾರೀ ಸುದ್ದಿಯಾಗುತ್ತಿದ್ದಂತೆ ಸಿನಿಮಾ ಕ್ಷೇತ್ರ ಕೂಡ ಕಂಬಳ ಕ್ಷೇತ್ರದ ದಾಖಲೆಯನ್ನು ಮೂಲ ವಿಷಯವನ್ನಾಗಿ ಇಟ್ಟುಕೊಂಡು ಕನ್ನಡ ಸಿನಿಮಾ ತಯಾರಿಸಲ ನಿರ್ಮಾಪಕರೊಬ್ಬರು ಮುಂದಾಗಿದೆ.

    ಮಂಗಳೂರು ಸಮೀಪ ಐಕಳದಲ್ಲಿ ಫೆಬ್ರವರಿ 2ರಂದು ನಡೆದ ಕಂಬಳದಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಾಗಿಸಿ ಕಥೆ ತಯಾರಾಗಲಿದೆ. ಕರಾವಳಿ ಮೂಲದ ಉದ್ಯಮಿ ಲೋಕೇಶ್ ಶೆಟ್ಟಿ ಎಂಬವರು ಈಗಾಗಲೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಿದ್ದು, ನಿಖಿಲ್ ಮಂಜು ಅವರು ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ: ಕಂಬಳ ಹೀರೋಗೆ ಸಖತ್ ಡಿಮ್ಯಾಂಡ್- ಒಲಂಪಿಕ್ಸ್‌ಗೆ ಇಳಿಯೋ ಮುನ್ನವೇ ಶೂ ಕಂಪನಿಗಳಿಂದ ಕರೆ

    ಶ್ರೀನಿವಾಸ್ ಗೌಡ ಅವರ ಪಾತ್ರದಲ್ಲಿ ನಟಿಸುವ ನಟರಿಗೆ ಶೋಧ ನಡೆಯುತ್ತಿದೆ. ಅಷ್ಟೇ ಅಲ್ಲದೆ ಕರಾವಳಿಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ತಂಡದಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಶ್ರೀನಿವಾಸ ಗೌಡರಿಗೆ ಖಾಲಿ ಕವರ್ ನೀಡಿ ಪೋಸ್‍ಕೊಟ್ಟ ಸಿಟಿ ರವಿ, ಹೆಬ್ಬಾರ್

  • ಕಂಬಳ ವೀರನ ಸಿಕ್ಸ್ ಪ್ಯಾಕ್ ಸೀಕ್ರೆಟ್ ರಿವೀಲ್

    ಕಂಬಳ ವೀರನ ಸಿಕ್ಸ್ ಪ್ಯಾಕ್ ಸೀಕ್ರೆಟ್ ರಿವೀಲ್

    ಬೆಂಗಳೂರು: ಕಂಬಳದ ಹೀರೋ ಶ್ರೀನಿವಾಸ್‍ಗೌಡ ಈಗ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಹಳ್ಳಿ ಹೈದನ ಮಿಂಚಿನ ಓಟ ಈಗ ದೇಶದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.

    ಕಂಬಳದ ಕೆಸರು ಗದ್ದೆಯಲ್ಲಿ ಶ್ರೀನಿವಾಸ್ ಗೌಡ ಓಡಿದ ಪರಿಗಂತೂ ಅವರಿಗೆ ಈಗ ಕರ್ನಾಟಕದ ಉಸೇನ್ ಬೋಲ್ಟ್ ಅನ್ನುವ ಬಿರುದನ್ನು ನೀಡಿದೆ. ಮಿಂಚಿನ ಓಟದ ಶ್ರೀನಿವಾಸ್ ಗೌಡ ದೇಹದಾರ್ಢ್ಯ ಕೂಡ ಎಲ್ಲರ ಗಮನ ಸೆಳೆದಿತ್ತು. ಸಿಕ್ಸ್ ಪ್ಯಾಕ್ ಹೊಂದಿರುವ ಕಂಬಳದ ವೀರನ ಮೈಕಟ್ಟಿಗೆ ಎಲ್ಲರೂ ಫಿದಾ ಆಗಿದ್ದರು. ಇದನ್ನೂ ಓದಿ: ಉಸೇನ್ ಬೋಲ್ಟ್ ದಾಖಲೆ ಮುರಿದ ತುಳುನಾಡ ಕಂಬಳ ಓಟಗಾರ ಶ್ರೀನಿವಾಸ್

    ಸಾಮಾನ್ಯವಾಗಿ ಜಿಮ್‍ನಲ್ಲಿ ಕಸರತ್ತು ಮಾಡಿ ಬೆವರಿಳಿಸಿದಷ್ಟೆ ಸಿಕ್ಸ್ ಪ್ಯಾಕ್ ಬರುತ್ತೆ ಅನ್ನೋ ಕಲ್ಪನೆ ಎಲ್ಲರಿಗೂ ಇದೆ. ಅಸಲಿಗೆ ಶ್ರೀನಿವಾಸ್ ಗೌಡ ಜಿಮ್ ಮೆಟ್ಟಿಲೇ ಹತ್ತಿಲ್ಲ. ಇದನ್ನೂ ಓದಿ:   ಮತ್ತೆ ಚಿನ್ನದ ಪದಕ ಬಾಚಿದ ಕಂಬಳದ ಉಸೇನ್ ಬೋಲ್ಟ್

    ನಮ್ಮಂತ ಬಡವರಿಗೆ ಜಿಮ್ ಎಲ್ಲಿ ಸಾರ್ ನಾನು ಮೈಬಗ್ಗಿಸಿ ಗದ್ದೆಯಲ್ಲಿ ದುಡಿಮೆ ಮಾಡ್ತೀನಿ. ಗಾರೆ ಕೆಲಸ, ಮಳೆಗಾಲ ಬಂದರೆ ಬೇರೆಯವರ ಹೊಲದಲ್ಲಿ ಕೆಲಸ ಮಾಡುತ್ತೇನೆ. ಸಾಗುವಾಳಿ ಕೃಷಿ ಕೆಲಸ ಮಾಡುತ್ತೀನಿ. ಬಿಡುವಿಲ್ಲದ ಕೆಲಸದಿಂದ ನಂಗೆ ಸಿಕ್ಸ್ ಪ್ಯಾಕ್ ಬಂದಿದೆ ಎಂದು ಪಬ್ಲಿಕ್ ಟಿವಿ ಜೊತೆ ಶ್ರೀನಿವಾಸ್ ಸಿಕ್ಸ್ ಪ್ಯಾಕ್ ಸೀಕ್ರೆಟ್ ಹಂಚಿಕೊಂಡರು.

    ಜೊತೆಗೆ ಯುವಕರು ಕೃಷಿ ಕೆಲಸ ಮಾಡಿದರೆ, ಉಳುಮೆ ಮಾಡಿದರೆ ಆರೋಗ್ಯದ ಜೊತೆಗೆ ಫಿಟ್ ಆಗಿರುತ್ತಾರೆ ಎಂಬ ಮೆಸೇಜ್ ಕೂಡ ಕೊಟ್ಟರು.

    ಶ್ರೀನಿವಾಸ್ ಗೌಡ ಕಡು ಬಡತನದ ಕುಟುಂಬದಿಂದ ಬಂದಿದ್ದಾರೆ. ಮೂಡುಬಿದ್ರೆಯ ಮಿಜಾರಿನ ಅಶ್ವತ್ಥಪುರದ ನಿವಾಸಿಯಾಗಿರುವ ಶ್ರೀನಿವಾಸ್ ಗೌಡ, ಪರಿಶಿಷ್ಟ ವರ್ಗಕ್ಕೆ ಸೇರಿದ ಕುಡುಂಬಿ ಜನಾಂಗದ ವ್ಯಕ್ತಿ. ಆದರೆ ಕಂಬಳದಲ್ಲಿ ಮಾಡಿದ ಸಾಧನೆ ಮಾತ್ರ ಶ್ರೀನಿವಾಸ್  ಅವರನ್ನು ಖ್ಯಾತಿಯ ಉತ್ತುಂಗಕ್ಕೆ ಏರಿಸಿದೆ. ಅತಿ ವೇಗದ ಓಟದ ದಾಖಲೆಯ ಉಸೇನ್ ಬೋಲ್ಟ್ ಮೀರಿಸುವ ಸಾಧನೆ ಮಾಡಿದ್ದಾಗಿ ಹೋಲಿಸಲಾಗುತ್ತಿದೆ. ಇಂಥ ಖ್ಯಾತಿ ಬಂದಿದ್ದರೂ, ಶ್ರೀನಿವಾಸ್ ಮಾತ್ರ ಎಂದಿನಂತೇ ಕಂಬಳದಲ್ಲಿ ತೊಡಗಿಸಿಕೊಂಡಿದ್ದಾರೆ. ಕಂಬಳ ಬಿಟ್ಟರೆ ಕಟ್ಟಡ ಕೆಲಸದ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ.

    ಶ್ರೀನಿವಾಸ್ ಗೌಡರ ಸಾಧನೆ ವಿಶ್ವದ ಗಮನ ಸೆಳೆದಿದ್ದರೂ, ಪದಕದ ಬೇಟೆ ನಿಂತಿಲ್ಲ. ಭಾನುವಾರ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದ ಕಂಬಳದಲ್ಲಿ ಮೂರು ವಿಭಾಗದಲ್ಲಿ ಮತ್ತೆ ಮೂರು ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಈ ಬಾರಿಯ ಕಂಬಳದ ಋತುವಿನಲ್ಲಿ ಸತತವಾಗಿ ಚಿನ್ನದ ಪದಕ ಗೆಲ್ಲುತ್ತಾ ಬಂದು ದಾಖಲೆ ಮಾಡಿದ್ದಾರೆ. ಈ ಬಾರಿ ಇನ್ನೆರಡು ಕಂಬಳ ಮಾತ್ರ ಉಳಿದಿದ್ದು, ನಾಲ್ಕು ಕೋಣಗಳ ಜೊತೆ ಓಡುವ ಶ್ರೀನಿವಾಸ್ ಗೌಡ ಚಿನ್ನಕ್ಕೆ ಲಗ್ಗೆಯಿಟ್ಟು ಹೊಸ ದಾಖಲೆ ನಿರ್ಮಿಸುವ ಇರಾದೆಯಲ್ಲಿದ್ದಾರೆ.