Tag: ಶ್ರೀನಿವಾಸ ಪೂಜಾರಿ

  • 9 ವರ್ಷದ ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಕ್ಕೆ ಡಿಕೆಶಿ ಕೈ ಬಲಪಡಿಸಬೇಕಾ?: ಹೆಚ್‍ಡಿಡಿ ವಾಗ್ದಾಳಿ

    9 ವರ್ಷದ ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಕ್ಕೆ ಡಿಕೆಶಿ ಕೈ ಬಲಪಡಿಸಬೇಕಾ?: ಹೆಚ್‍ಡಿಡಿ ವಾಗ್ದಾಳಿ

    ಚಿಕ್ಕಮಗಳೂರು: ಒಂಬತ್ತು ವರ್ಷದ ಹುಡುಗಿಯನ್ನು ಎತ್ತುಕೊಂಡು ಹೋಗಿ ಆಸ್ತಿ ಬರೆಸಿದ್ರಲ್ಲಾ ಅದಕ್ಕೆ ಡಿ.ಕೆ ಶಿವಕುಮಾರ್ (DK Shivakumar) ಅವರ ಕೈಯನ್ನ ಬಲಪಡಿಸಬೇಕಾ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota Srinivas poojary) ಪರ ಮತಯಾಚನೆ ಮಾಡಿದ ದೇವೇಗೌಡರು, ಒಕ್ಕಲಿಗ ಸಮುದಾಯ ಹೆಚ್ಚಿರುವ ಕಡೆ ನನ್ನ ಕೈ ಬಲಪಡಿಸಿ ಎಂದು ಹೇಳುತ್ತಿರುವ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಅವರ ಕೈಯನ್ನ ಏಕೆ ಬಲಪಡಿಸಬೇಕು? 9 ವರ್ಷದ ಹುಡುಗಿಯನ್ನು ಎತ್ತುಕೊಂಡು ಹೋಗಿ ಆಸ್ತಿ ಬರೆಸಿಕೊಂಡರಲ್ಲಾ ಅದಕ್ಕಾ ಎಂದು ಪ್ರಶ್ನಿಸಿದ್ದಾರೆ.

    ರಾಮನಗರದ ಬಿಡದಿ ಬಳಿ ಅಮೆರಿಕದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ಮನುಷ್ಯನ ಆಸ್ತಿ ಬರೆಸಿಕೊಂಡಿದ್ದರು. ನನ್ನ ಬಳಿ ಎಲ್ಲಾ ದಾಖಲೆಗಳಿವೆ. ಬಿಡದಿ ಹತ್ರ ರಸ್ತೆ ಪಕ್ಕದಲ್ಲಿ ಅವರು ಒಂದು ಐಟಿ ಕಂಪನಿಯನ್ನ ಸ್ಥಾಪನೆ ಮಾಡಿದರು. ಅದರ ಹಿಂದಿನ ದಿನ ಇವರು ಒಂದು ಸುಳ್ಳು ಕ್ರಯ ಪತ್ರ ಮಾಡುತ್ತಾರೆ. ಆಮೇಲೆ ಅವರ 9 ವರ್ಷದ ಮಗಳನ್ನ ತೆಗೆದುಕೊಂಡು ಹೋಗಿ ಪಕ್ಕದ ಮನೆಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಇಡುತ್ತಾರೆ. ನಿನ್ನ ಮಗಳು ಬೇಕು ಅಂದ್ರೆ ಸಹಿ ಮಾಡು ಎಂದು ಧಮ್ಕಿ ಹಾಕುತ್ತಾರೆ. ಆ ತಾಯಿ ಎಲ್ಲಾ ಬರೆದುಕೊಡು, ನನ್ನ ಮಗಳ ಕರೆದುಕೊಂಡು ಬಾರಪ್ಪಾ ಅಂತ ಆಕೆ ಗಂಡನ ಕಾಲು ಹಿಡಿಯುತ್ತಾಳೆ. ನನ್ನ ಬಳಿ ದಾಖಲೆ ಇದೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಅಲ್ಲಿಗೆ ಹೋದಾಗ, ಆ ಮಗುವನ್ನ ದೂರ ಕೂರಿಸಿ ಕಣ್ಣಿಗೆ ಕಟ್ಟಿದ್ದ ಬಟ್ಟೆ ಬಿಚ್ಚುತ್ತಾರೆ. ಆ ಮಗು ಅಪ್ಪ ಅಂತ ಓಡಿ ಬರುತ್ತೆ, ಮತ್ತೆ ಆ ಮಗುವನ್ನ ಒಳಗೆ ಕರೆದುಕೊಂಡು ಹೋಗುತ್ತಾರೆ. ಇದನ್ನ ಎಲೆಕ್ಷನ್ ನಲ್ಲಿ ಬಳಸಿ ಅಂತ ಲಾಯರ್ ತಂದು ಕೊಟ್ಟರು. ಆ ಪುಣ್ಯಾತ್ಮ ನಾನು ಕರ್ನಾಟಕದಲ್ಲಿ ಯಾರಿಗೂ ಮತ ಹಾಕಲ್ಲ. ನಾನು ವೋಟರ್ ಲಿಸ್ಟ್ ನಲ್ಲಿ ಇಲ್ಲ. ಈ ಕರ್ನಾಟಕದ ಸಹವಾಸ ಸಾಕು ಅಂತಾರೆ. ನನಗೆ ಅವರ ಹೆಸರು ಮರೆತು ಹೋಗಿದೆ. ಆಮೇಲೆ ಅವರು ಜೀವನಕ್ಕಾಗಿ ಬೇರೆಯವರ ಅಧೀನದಲ್ಲಿ ಕೆಲಸ ಮಾಡ್ತಾರೆ ಎಂದು ಹೆಚ್‍ಡಿಡಿ ಗರಂ ಆದರು. ಇದನ್ನೂ ಓದಿ: ಅಮೇಠಿಯಿಂದ ಸ್ಪರ್ಧೆ ಮಾಡ್ತೀರಾ ಎಂದು ಕೇಳಿದ್ದಕ್ಕೆ ಇದು ಬಿಜೆಪಿ ಪ್ರಶ್ನೆಯೆಂದ ರಾಹುಲ್‌

    ಆಮೇಲೆ ಹೇ… ಇದನ್ನ ಹೊರಗೆ ಹೇಳಿದ್ರೆ ಏನಾಗುತ್ತೆ ಗೊತ್ತಾ ಅಂತ ಕಬ್ಬನ್ ಪಾರ್ಕ್ ನಲ್ಲಿ ಅವರಿಗೆ ಹೆದರಿಸುತ್ತಾರೆ. ಅವರಿಗೆ ಚೆಕ್ ಕೊಟ್ಟಿದ್ದರು. 16 ಮತ್ತು 4 ಲಕ್ಷಕ್ಕೆ. ಆದರೆ, ಎರಡೂ ಲ್ಯಾಪ್ಸ್ ಆಗುತ್ತದೆ. ಅವರು ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಗೆಲ್ಲುತ್ತಾರೆ. ಡಿಕೆಶಿ ಅವರಿಗೆ ಮುಖ ಭಂಗ ಆಗುತ್ತೆ. ಹೈಕೋರ್ಟ್, ಸುಪ್ರೀಂಕೋರ್ಟಿಗೆ ಹೋದ್ರು ಮುಖಭಂಗ ಆಯ್ತು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷರು ಅಬ್ಬಾ. ಅವರು, ಸೋನಿಯಾ, ರಾಹುಲ್ ಅವರಿಗೆ ಬಹಳ ಸಮೀಪ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪದ ವಾಗ್ದಾಳಿ ನಡೆಸಿದರು.

  • ಸಿದ್ಧಾಂತಕ್ಕೆ ಬದ್ಧರಾದವರು ಬೇರೆ ಪಕ್ಷಕ್ಕೆ ಒಗ್ಗಲ್ಲ: ಶೆಟ್ಟರ್ ಬಿಜೆಪಿಗೆ ಮರಳಿದ್ದಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ

    ಸಿದ್ಧಾಂತಕ್ಕೆ ಬದ್ಧರಾದವರು ಬೇರೆ ಪಕ್ಷಕ್ಕೆ ಒಗ್ಗಲ್ಲ: ಶೆಟ್ಟರ್ ಬಿಜೆಪಿಗೆ ಮರಳಿದ್ದಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ

    ಉಡುಪಿ: ಜಗದೀಶ್ ಶೆಟ್ಟರ್ (Jagadish Shettar) ಬಿಜೆಪಿಗೆ (BJP) ಮರಳುವ ನಿರೀಕ್ಷೆ ಇತ್ತು. ಅವರು ನಮ್ಮ ಸಿದ್ಧಾಂತದ ಜೊತೆಗೆ ಸುದೀರ್ಘ ಕಾಲ ಗುರುತಿಸಿಕೊಂಡಿದ್ದವರು. ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗುವುದಿಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಹೇಳಿದ್ದಾರೆ.

    ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಆಗಮನದಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ. ಇದರಿಂದ ನಮ್ಮ ವಿಶ್ವಾಸ ಹೆಚ್ಚಾಗಿದೆ. ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ನನ್ನ ನಿಲುವು ಸ್ಪಷ್ಟ, ನಾನು ಬಿಜೆಪಿಗೆ ಹೋಗಲ್ಲ: ಲಕ್ಷ್ಮಣ್ ಸವದಿ ಸ್ಪಷ್ಟನೆ

    ಶೆಟ್ಟರ್ ಸುದೀರ್ಘ ರಾಜಕೀಯ ಅನುಭವಿ ಮತ್ತು ಮುತ್ಸದ್ದಿ. ಅವರು ಜನಸಂಘ ಕಾಲದಿಂದ ಬಿಜೆಪಿ ಕಟ್ಟಿದವರು. ಅವರು ಪಕ್ಷಕ್ಕೆ ಮರಳಿರುವುದು ಸಂತೋಷ ಹಾಗೂ ಸಮಾಧಾನ ತಂದಿದೆ. ಅವರು ಬಿಜೆಪಿಯ ಪರಮೋಚ್ಚ ನಾಯಕರನ್ನು ಎಂದೂ ಟೀಕಿಸಿಲ್ಲ. ಆರೋಗ್ಯಕರ ಟೀಕೆಗಳನ್ನು ಮಾತ್ರ ಮಾಡುತ್ತಿದ್ದರು. ಶೆಟ್ಟರ್ ಬಿಜೆಪಿಗೆ ಮರಳಿದ ಕ್ರೆಡಿಟ್ ಪಕ್ಷಕ್ಕೆ ಸಲ್ಲುತ್ತದೆ ಎಂದಿದ್ದಾರೆ.

    ಕಳೆದ ವಿಧಾನಸಭಾ ಚುನಾವಣೆ ವೇಳೆ, ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‍ಗೆ ಸೇರಿದ್ದರು. ಇದೀಗ, ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು (ಗುರುವಾರ) ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದ್ದಾರೆ. ಈ ವೇಳೆ ಹಾವೇರಿ ಅಥವಾ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಂದು ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವ ಭರವಸೆಯನ್ನು ಹೈಕಮಾಂಡ್ ನೀಡಿದೆ. ಇದನ್ನೂ ಓದಿ: ಇಲ್ಲಿಯವರೆಗೆ ಸಹಕಾರ ಕೊಟ್ಟಿದ್ದಕ್ಕೆ ಡಿಕೆಶಿ, ಸಿಎಂಗೆ ಧನ್ಯವಾದ ಸಲ್ಲಿಸಿದ್ರು ಶೆಟ್ಟರ್

  • ವಿದ್ಯಾರ್ಥಿಗಳೇ, ಸರ್ಕಾರಿ ಹಾಸ್ಟೆಲ್ ಮೆನುವಿನಲ್ಲಿರುವ ಈ ಆಹಾರ ನಿಮಗೆ ಸಿಗ್ತಿದೆಯಾ..?

    ವಿದ್ಯಾರ್ಥಿಗಳೇ, ಸರ್ಕಾರಿ ಹಾಸ್ಟೆಲ್ ಮೆನುವಿನಲ್ಲಿರುವ ಈ ಆಹಾರ ನಿಮಗೆ ಸಿಗ್ತಿದೆಯಾ..?

    ಬೆಳಗಾವಿ: ಸರ್ಕಾರಿ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನಿಗದಿಪಡಿಸಿದ ಮೆನು ಚಾರ್ಟ್ ಪ್ರಕಾರವೇ ಆಹಾರ ಪದ್ಧತಿ ಅಳವಡಿಸಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿದ್ದಾರೆ.

    ವಿಧಾನಸಭೆ ಸದಸ್ಯ ನಾಗೇಂದ್ರ ಎಲ್ ಅವರು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಸರ್ಕಾರ ನೀಡಿದ ಆಹಾರದ ಮೆನು ಇಂತಿದೆ. ಇದನ್ನೂ ಓದಿ: ಸರ್ಕಾರಿ ನೌಕರರು ಬೇಕಾಬಿಟ್ಟಿ ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಹುಷಾರ್!

    ಬೆಳಗ್ಗೆ ತಿಂಡಿ:
    ಪ್ರತಿದಿನ ಒಂದರಂತೆ ಇಡ್ಲಿ ಸಾಂಬಾರ್, ಚಿತ್ರಾನ್ನ, ದೋಸೆ, ಟೊಮ್ಯಾಟೊ ಬಾತ್, ಪೂರಿ ಮತ್ತು ಸಾಗು, ಚಪಾತಿ ಮತ್ತು ಪಲ್ಯ. ಕಾಫಿ/ಟೀ.

    ಪ್ರತಿ ತಿಂಗಳ 8 ಮತ್ತು 23ರಂದು ಬೆಳಗ್ಗಿನ ತಿಂಡಿಗೆ ಬ್ರೆಡ್ ಆಮ್ಲೆಟ್.

    ಮಧ್ಯಾಹ್ನ ಊಟ:
    ಮುದ್ದೆ, ಅನ್ನ ಮತ್ತು ಪ್ರತಿ ದಿನಕ್ಕೆ ಒಂದು ಬಗೆಯ ಬಸ್ಸಾರು/ಪಲ್ಯ, ಸೊಪ್ಪು ಸಾರು/ಮಿಶ್ರ ತರಕಾರಿ ಸಾಂಬಾರ್, ಮಜ್ಜಿಗೆ ಮತ್ತು ಉಪ್ಪಿನಕಾಯಿ. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

    ರಾತ್ರಿ ಊಟ:
    ಮುದ್ದೆ, ಅನ್ನ ಮತ್ತು ಪ್ರತಿ ದಿನಕ್ಕೆ ಒಂದು ಬಗೆಯ ಬೇಳೆ/ಕಾಳು/ಮೊಳಕೆ ಕಾಳು/ತರಕಾರಿ ಮಿಶ್ರಿತ ಸಾಂಬಾರ್, ಮಜ್ಜಿಗೆ ಮತ್ತು ಉಪ್ಪಿನಕಾಯಿ.  ಇದನ್ನೂ ಓದಿ: ವೇಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ

    ವಾರಕ್ಕೆ ಮೂರು ಬಾರಿ ಬಾಳೆಹಣ್ಣು, ವಾರಕ್ಕೆ ಮೂರು ಬಾರಿ ಮೊಟ್ಟೆ. ಪ್ರತಿ ವಾರದ ಶುಕ್ರವಾರ ಒಂದೊಂದು ಬಗೆಯ ಸಿಹಿ ಊಟ (ಜಾಮೂನು, ಗೋದಿ ಪಾಯಸ, ಹುಗ್ಗಿ ಇತ್ಯಾದಿ). ಪ್ರತಿ ತಿಂಗಳ 1 ಮತ್ತು 15ರಂದು ರಾತ್ರಿ ಊಟಕ್ಕೆ ಚಿಕನ್.

    ಲಘು ಉಪಹಾರ:
    ಸಂಜೆ 5ರಿಂದ 5.30ರೊಳಗೆ ಪ್ರತಿದಿನ ಒಂದು ಬಗೆಯ ತಿಂಡಿ. ಅವಲಕ್ಕಿ, ಖಾರಾಪುರಿ, ದೋಸೆ, ಬಜ್ಜಿ, ಮಂಡಕ್ಕಿ ಒಗ್ಗರಣೆ, ಖಾರಾಬಾತ್/ಉಪ್ಪಿಟ್ಟು.

    ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಬೂಸ್ಟ್ ಅಥವಾ ಹಾರ್ಲಿಕ್ಸ್. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಕಾಫಿ/ಟೀ ಮತ್ತು ಬಿಸ್ಕೆಟ್/ರಸ್ಕ್.

     

  • ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

    ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

    ಉಡುಪಿ: ಹಿಂದುತ್ವ ಮತ್ತು ಅಭಿವೃದ್ಧಿ ವಿಚಾರದಲ್ಲಿ ರಾಜಿಯೇ ಇಲ್ಲ. ಹಿಂದುತ್ವವೇ ನನ್ನ ಮೊದಲ ಆಯ್ಕೆ. ಸಚಿವ, ಶಾಸಕ ಸ್ಥಾನ ಆ ನಂತರದ ಆಯ್ಕೆ ಎಂದು ಉಡುಪಿ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

    ಹೆಜಮಾಡಿ ಮೂಲಕ ಸುನೀಲ್ ಕುಮಾರ್ ಉಡುಪಿ ಜಿಲ್ಲೆಗೆ ಆಗಮಿಸಿದರು. ಬೆಳ್ಮಣ್ ನಲ್ಲಿ ಸಚಿವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಿಜೆಪಿ ನಾಯಕರು, ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುನೀಲ್ ಕುಮಾರ್ ಅವರು, ಸಚಿವನಾಗಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದೇನೆ. ಉಡುಪಿಗೆ ಬರುತ್ತಿರುವುದು ಸಂತೋಷ, ಭಾವನಾತ್ಮಕ ಕ್ಷಣ. ಕಾರ್ಕಳ ಕ್ಷೇತ್ರದ ಜನ ಮೂರುಬಾರಿ ಆಯ್ಕೆ ಮಾಡಿದ್ದರಿಂದ ಸಚಿವನಾದೆ. ಆದರೆ ಯಾವುದೇ ಹಂತದಲ್ಲೂ ಹಿಂದುತ್ವ ವಿಚಾರದಲ್ಲಿ ರಾಜಿ ಮಾಡುವುದಿಲ್ಲ. ಮೊದಲ ಆಯ್ಕೆ ಹಿಂದುತ್ವ ಮತ್ತು ಅಭಿವೃದ್ಧಿ ಎಂದರು.

    ಪಕ್ಷ ದೊಡ್ಡ ಪ್ರಮಾಣದ ಹೊಣೆಗಾರಿಕೆಯನ್ನು ಹೆಗಲಿಗೇರಿಸಿದೆ. ಸಿಎಂ ಮತ್ತು ಪಕ್ಷದ ಹಿರಿಯರ ನಿರೀಕ್ಷೆಯಿಟ್ಟು ಸ್ಥಾನ ಕೊಟ್ಟಿದ್ದಾರೆ. ಜವಾಬ್ದಾರಿ ನಿಭಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನಗೆ ಇಷ್ಟದ ಖಾತೆ ಎಂದು ಯಾವುದು ಇಲ್ಲ ಮುಖ್ಯಮಂತ್ರಿಗಳು ಕೊಟ್ಟ ಖಾತೆಯನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ ಎಂದರು. ಇದನ್ನೂ ಓದಿ: ಅಭಿನಂದಿಸಲು ಹಾರ ತುರಾಯಿ ತರಬೇಡಿ, ಪುಸ್ತಕ ತನ್ನಿ: ಸುನೀಲ್ ಕುಮಾರ್

    ಹಿರಿಯರ ಮಾರ್ಗದರ್ಶನದಲ್ಲಿ ಕೆಲಸ
    ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಪಕ್ಷ ಗೌರವ ಕೊಟ್ಟಿದೆ. ಶ್ರೀನಿವಾಸ್ ಶೆಟ್ಟಿಅವರಿಗೆ ಇನ್ನಷ್ಟು ಗೌರವ ಸಿಗಬೇಕು ಎಂಬ ನಿರೀಕ್ಷೆ ಸಹಜ. ಸಚಿವನಾಗಿ ನಾನು ಮಾಡುವ ಕೆಲಸಕ್ಕೆ ಶ್ರೀನಿವಾಸ್ ಶೆಟ್ಟಿ ಬೆಂಬಲ ಬೇಕು. ಸಚಿವ ಶ್ರೀನಿವಾಸ ಪೂಜಾರಿ, ಅಂಗಾರ ಅವರ ಮಾರ್ಗದರ್ಶನದಲ್ಲಿ ನಾನು ನಡೆಯುತ್ತೇನೆ. ಬಿಜೆಪಿ ಹಾಲಾಡಿಯವರನ್ನು ಖಂಡಿತ ಗುರುತಿಸುತ್ತದೆ. ಪಕ್ಷ ಹಾಲಾಡಿಯನ್ನು ಕರೆದು ಮಾತನಾಡಿಸುತ್ತದೆ ಎಂದು ಸುನೀಲ್ ಕುಮಾರ್ ಹೇಳಿದರು.

    ವಿಜಯೇಂದ್ರ ಅವರಿಗೆ ಸೂಕ್ತ ಸ್ಥಾನಮಾನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಅದನ್ನು ತೀರ್ಮಾನಿಸುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ವಿಚಾರಕ್ಕೆ ಹೆಚ್ಚು ಪ್ರತಿಕ್ರಿಯೆ ನೀಡದ ಅವರು, ನಳಿನ್ ಕುಮಾರ್ ಕಟೀಲ್ ಅವರೇ ನಮ್ಮ ಅಧ್ಯಕ್ಷರು ಎಂದರು.

    ಕಾಪು ಶಾಸಕ ಲಾಲಾಜಿ ಮೆಂಡನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಶಾಸಕ ಭರತ್ ಶೆಟ್ಟಿ ಸಚಿವರ ಜೊತೆಗಿದ್ದರು.

  • ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ ಕೊಡುವ ಹಕ್ಕಿದೆ: ಸಚಿವ ಕೋಟ

    ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ ಕೊಡುವ ಹಕ್ಕಿದೆ: ಸಚಿವ ಕೋಟ

    ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ, ಹೇಳಿಕೆ ಕೊಡುವಂತಹ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು ತಮ್ಮ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೆ, ಅದನ್ನು ಗೌರವಿಸಬೇಕಾದ್ದು ಅನಿವಾರ್ಯ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

    ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಅವರು, ಭಾರತೀಯ ಜನತಾ ಪಾರ್ಟಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ, ನಮ್ಮನ್ನು ಬೆಳೆಸಿದ ಪಾರ್ಟಿ, ಪಾರ್ಟಿಯನ್ನು ಕಟ್ಟಿ ಬೆಳೆಸಿದ ಹಿರಿಯರು ನಮಗೆ ಅವರ ಅನುಭವದ ಮಾರ್ಗದರ್ಶನ ಮಾಡಿ, ನಮ್ಮ ಕೆಲಸಗಳಿಗೆ ಪ್ರೇರಣೆ ನೀಡಿ, ನಮ್ಮಂತಹ ಸಾಮಾನ್ಯ ಕಾರ್ಯಕರ್ತರಿಗೆ ಬಹುದೊಡ್ಡ ಜವಾಬ್ದಾರಿಗಳನ್ನು ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಕೋಟ

    ನಾನು ಮತ್ತು ನನ್ನಂಥವರು, ನಮ್ಮ ಹಿರಿಯರು, ನಮ್ಮ ಹೈಕಮಾಂಡ್, ನಮ್ಮ ಪಕ್ಷ, ನಮ್ಮ ರಾಜ್ಯಾಧ್ಯಕ್ಷರು, ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಮಾತ್ರ ನಾವು ಬದ್ಧ. ಯಾರ್ಯಾರು ಏನೇನು ಹೇಳಿಕೆ ನೀಡುತ್ತಾರೋ ಅದನ್ನು ಗೌರವಿಸೋಣ. ಅವರಿಗೂ ಕೂಡ ಹೇಳಿಕೆ ನೀಡುವ ಹಕ್ಕಿದೆ ಎಂದು ಸಮರ್ಥಿಸಿಕೊಂಡರು.

  • ಚರ್ಚಾಸ್ಪದ ಧ್ವನಿಸುರುಳಿ ಒಂದು ಕುಚೋದ್ಯ: ಶ್ರೀನಿವಾಸ್ ಪೂಜಾರಿ

    ಚರ್ಚಾಸ್ಪದ ಧ್ವನಿಸುರುಳಿ ಒಂದು ಕುಚೋದ್ಯ: ಶ್ರೀನಿವಾಸ್ ಪೂಜಾರಿ

    ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ ಎನ್ನಲಾಗುತ್ತಿರುವ ಚರ್ಚಾಸ್ಪದ ಧ್ವನಿ ಸುರುಳಿ ಒಂದು ಕುಚೋದ್ಯ, ಸುಳ್ಳು ಆಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.

    ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಕುಂದಾಪುರದಲ್ಲಿ ಪ್ರತಿಕ್ರಿಯೆ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ ಅವರು, ನಳಿನ್ ಕುಮಾರ್ ಕಟೀಲ್ ಸಂಘಟನೆಯಿಂದ ಬಂದವರು. ಸಂಘಟನೆಯ ಸೂತ್ರವನ್ನು ತಿಳಿದಿರುವವರು. ರಾಜ್ಯಾಧ್ಯಕ್ಷ ಕಟೀಲ್ ಬಹಳ ಸೂಕ್ಷ್ಮಮತಿಗಳು. ನನಗೆ ಧ್ವನಿಸುರುಳಿ ಬಗ್ಗೆಯೇ ಸಂಶಯವಿದೆ. ಮೊದಲು ಆಡಿಯೋ ಬಗ್ಗೆ ತನಿಖೆಯಾಗಬೇಕು ಎಂದರು.

    ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿಗಳಲ್ಲಿ ನಾನು ಆಗ್ರಹಿಸುತ್ತಿದ್ದೇನೆ. ನಳಿನ್ ಕುಮಾರ್ ಕಟೀಲ್ ಅವರ ಸ್ವರಭಾರ ಇದಲ್ಲ. ಹಾಗಾಗಿ ನಾನು ಧ್ವನಿಸುರುಳಿಯ ಬಗ್ಗೆ ನನಗೆ ಸಂಶಯವಿದೆ. ಮೊದಲು ತನಿಖೆಯಾಗಲಿ ಎಂದಿದ್ದಾರೆ.

  • ಪ್ರತೀ ತಿಂಗಳು ಸಪ್ತಪದಿ – ಸಚಿವ ಕೋಟ ಘೋಷಣೆ

    ಪ್ರತೀ ತಿಂಗಳು ಸಪ್ತಪದಿ – ಸಚಿವ ಕೋಟ ಘೋಷಣೆ

    ಉಡುಪಿ: ರಾಜ್ಯ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸಾಮೂಹಿಕ ವಿವಾಹದ ಸಪ್ತಪದಿ ಯೋಜನೆ ಇನ್ಮುಂದೆ ಪ್ರತಿ ತಿಂಗಳು ನಡೆಯಲಿದೆ.

    ಮಹಾಮಾರಿ ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಸಪ್ತಪತಿ ಯೋಜನೆಯ ಮಾಹಿತಿ ನೀಡಿದರು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ ಎಂದರು.

    ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ. ಆರ್ಥಿಕ ಸಮಸ್ಯೆ ಇರುವವರ ಪಾಲಿಗೆ ಸಪ್ತಪದಿ ಯೋಚನೆ ವರದಾನವಾಗಲಿದೆ ಎಂದರು.

    ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿ ಕುರಿತಂತ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಕ್ಕೆ ಲವ್ ಜಿಹಾದ್ ನಿಯಂತ್ರಣ ತರುವ ಕಾಯ್ದೆ ತರಬೇಕೆಂಬ ಮನಸ್ಸಿದೆ. ಸದ್ಯಕ್ಕೆ ಅದನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲ್ಲ. ಕಾನೂನು ತರಬೇಕೆಂಬೂದು ನಮ್ಮ ಪಕ್ಷದ, ಸಾರ್ವಜನಿಕರ ಆಶಯವಿದೆ. ನಮ್ಮ ಧರ್ಮದ ಆಶಯ ಕೂಡ ಅದೇ ಆಗಿದೆ. ಮುಂದಿನ ದಿನಗಳಲ್ಲಿ ಈ ಕುರಿತಾದ ಕಠಿಣ ಕಾನೂನು ತರುತ್ತೇವೆ ಎಂದರು.

    ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಯಿಸಿ, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಸಿಎಂ ಬಿಎಸ್‍ವೈ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕೇಂದ್ರದ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನಿಸುತ್ತಾರೆ. ಪ್ರಮುಖರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ದಿನ ಲಾಕ್‍ಡೌನ್?

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ದಿನ ಲಾಕ್‍ಡೌನ್?

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಯುವ ಸಾಧ್ಯತೆ ಇದೆ.

    ಕಳೆದ ಜುಲೈ 16 ರಿಂದ ಜಿಲ್ಲಾದ್ಯಂತ ಲಾಕ್‍ಡೌನ್ ಆರಂಭವಾಗಿದ್ದು ನಾಳೆಗೆ ಅಂತ್ಯವಾಗಲಿದೆ. ಆದರೆ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಲೇ ಇದೆ.

    ಜಿಲ್ಲೆಯಲ್ಲಿ ಪ್ರತಿದಿನ 10-200 ಪಾಸಿಟಿವ್ ಕೇಸ್ ಗಳು ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಹಾಗೂ ಜನಪ್ರತಿನಿಧಿಗಳು ಮತ್ತೆ ಲಾಕ್ ಡೌನ್ ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಿ ನಾಳೆ ಅಂತಿಮವಾಗಿ ನಿರ್ಧರಿಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

  • ಕೃಷಿಕರ ಸಮಸ್ಯೆ ಪರಿಹಾರಕ್ಕೆ ರೈತ ಮುಖಂಡರ ಸಭೆ, ಮುಖ್ಯಮಂತ್ರಿ ಭೇಟಿ: ಕೋಟ

    ಕೃಷಿಕರ ಸಮಸ್ಯೆ ಪರಿಹಾರಕ್ಕೆ ರೈತ ಮುಖಂಡರ ಸಭೆ, ಮುಖ್ಯಮಂತ್ರಿ ಭೇಟಿ: ಕೋಟ

    ಮಂಗಳೂರು: ಕೃಷಿಕ ವಲಯದಲ್ಲಿರುವ ಅಡಿಕೆ ಹಳದಿ ರೋಗ, ಕಾಡು ಪ್ರಾಣಿಗಳ ಹಾವಳಿ, ಕೋವಿ ಪರವಾನಿಗೆ ನಿಯಮ ಸೇರಿದಂತೆ ಕೃಷಿಕರ ಸಮಸ್ಯೆ ಪರಿಹಾರಕ್ಕೆ ಜ.15ರೊಳಗೆ ಜಿಲ್ಲಾ ಮಟ್ಟದಲ್ಲಿ ಸಭೆ ಕರೆಯಲಾಗುವುದು. ಆ ಬಳಿಕ ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ಮತ್ತು ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇದೇ ವೇಳೆ ಅವರು ಗ್ರಾಮಸ್ಥರು ಮುಂದಿರಿಸಿದ ವಿವಿಧ ಬೇಡಿಕೆಗಳಿಗೆ ಉತ್ತರಿಸಿದರು.

    ಮಡಪ್ಪಾಡಿಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವ ನಿಟ್ಟಿನಲ್ಲಿ ಏನಾದರೂ ಮಾಡಲು ಸಾಧ್ಯವೇ ಎಂದು ಶಾಸಕರೊಂದಿಗೆ ಸೇರಿ ಚರ್ಚಿಸುವುದಾಗಿ ಸಚಿವರು ಹೇಳಿದರು.

    ಶಾಸಕ ಎಸ್.ಅಂಗಾರ ಮಾತನಾಡಿ, ಮಡಪ್ಪಾಡಿ ಗ್ರಾಮದಲ್ಲಿ ಒಟ್ಟು 64 ಕಿ.ಮಿ. ಉದ್ದದ 38 ಗ್ರಾಮೀಣ ರಸ್ತೆಗಳಿವೆ. ಈ ಪೈಕಿ ಆದ್ಯತೆಯ ಮೇರೆಗೆ ಪ್ರಮುಖ ರಸ್ತೆಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳು ಯಾರಿಗೆ ತಲುಪಿಲ್ಲ ಹಾಗೂ ಯಾರಿಗೆ ತಲುಪಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ನೀಡುವಂತೆ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರನ್ನು ಸನ್ಮಾನಿಸಲಾಯಿತು.
    ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯೆ ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ಗ್ರಾ.ಪಂ.ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಎ.ಪಿ.ಎಂ.ಸಿ.ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಂ ಉಪಸ್ಥಿತರಿದ್ದರು.

    ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿ, ಲೋಕೇಶ್ ಪೆರ್ಲಂಪಾಡಿ ವಂದಿಸಿದರು. ಕಿರಣ್‍ಪ್ರಸಾದ್ ಕುಂಡಡ್ಕ ಸಂದೇಶ ವಾಚಿಸಿದರು. ಪತ್ರಕರ್ತ ಬಿ.ಎನ್.ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು.

  • ಸುಮಲತಾ ಎನ್‍ಡಿಎಗೆ ಬೆಂಬಲಿಸಿದ್ರೆ ಎಲ್ಲರಿಗೂ ಗೌರವ- ಕೋಟ ಶ್ರೀನಿವಾಸ ಪೂಜಾರಿ

    ಸುಮಲತಾ ಎನ್‍ಡಿಎಗೆ ಬೆಂಬಲಿಸಿದ್ರೆ ಎಲ್ಲರಿಗೂ ಗೌರವ- ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ: ಸುಮಲತಾ ಅಂಬರೀಶ್ ಗೆಲುವು ಸಾಮಾನ್ಯ ಎಂದು ಭಾವಿಸಿಲ್ಲ. ಬಿಜೆಪಿ ಸುಮಲತಾರಿಗೆ ಬೇಷರತ್ ಬೆಂಬಲ ನೀಡಿತ್ತು. ಅವರಾಗಿಯೇ ಎನ್‍ಡಿಎ ಗೆ ಬೆಂಬಲ ನೀಡಿದರೆ ಎಲ್ಲರಿಗೂ ಒಂದು ಗೌರವ ಬರುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಇಡೀ ಕರ್ನಾಟಕ ಸರ್ಕಾರವನ್ನು ಎದುರಿಸಿ ಸುಮಲತಾ ಗೆದ್ದಿದ್ದಾರೆ. ಮಂಡ್ಯ ಸಾಭಿಮಾನದ ಜಿಲ್ಲೆ ಎಂದು ಸಾಬೀತಾಗಿದೆ. ಮೈತ್ರಿ ಸರ್ಕಾರಕ್ಕೆ ಕಪಾಳ ಮೋಕ್ಷವಾಗಿದೆ ಎಂದು ಹೇಳಿದರು.

    ಸುಮಲತಾಗೆ ಬೆಂಬಲ ಕೊಡುವಾಗ ಯಾವುದೇ ಷರತ್ತು ಹಾಕಿಲ್ಲ. ನಮ್ಮ ಅಪೇಕ್ಷೆಯಿಲ್ಲ, ಯಾವ ಕರಾರು ಮಾಡಿಕೊಂಡಿಲ್ಲ. ಈಗಲೂ ಈ ನಿಲುವಿಗೆ ಬದ್ಧವಾಗಿದ್ದೇವೆ. ಅವರಾಗಿಯೇ ಎನ್ ಡಿ ಎಗೆ ಬೆಂಬಲ ಕೊಟ್ಟರೆ ಎಲ್ಲರಿಗೂ ಗೌರವ ಬರುತ್ತದೆ ಎಂದರು.

    ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಕೋಟ, ಜಂಟಿ ಸರ್ಕಾರವನ್ನು ಬೀಳಿಸುವುದು ಬೇಡ. ಅದೇ ಬೀಳುತ್ತದೆ. ಕುಮಾರಸ್ವಾಮಿಯವರು ಮತ್ತು ಸಿದ್ದರಾಮಯ್ಯನವರು ಪ್ರಮಾದವಾಗಿದೆ ಎಂದು ಈಗ ಹೇಳುತ್ತಾರೆ. ಇವರ ಹೊಂದಾಣಿಕೆ ಅಧಿಕಾರ ದಾಹಕ್ಕಾಗಿ ಕುರ್ಚಿಗಾಗಿ ಎಂದು ಜನ ಅರಿತುಕೊಂಡು ಇವರನ್ನು ಜನರೇ ಮನೆಗೆ ಕಳುಹಿಸಿದ್ದಾರೆ. ಘಟನಾನುಘಟಿಗಳು ಸೋಲಲು ಇದೂ ಒಂದು ಕಾರಣ ಎಂದು ಹೇಳಿದರು.