Tag: ಶ್ರೀನಿ

  • ʻಘೋಸ್ಟ್ʼ ಸಿನಿಮಾದಲ್ಲಿ ಪತ್ರಕರ್ತೆಯಾದ ಕೆಜಿಎಫ್‌ ನಟಿ ಅರ್ಚನಾ ಜೋಯಿಸ್

    ʻಘೋಸ್ಟ್ʼ ಸಿನಿಮಾದಲ್ಲಿ ಪತ್ರಕರ್ತೆಯಾದ ಕೆಜಿಎಫ್‌ ನಟಿ ಅರ್ಚನಾ ಜೋಯಿಸ್

    ಶಿವಣ್ಣ ನಟನೆಯ `ಘೋಸ್ಟ್’ (Ghost) ಸಿನಿಮಾ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುಲೇ ಇದೆ. ಸ್ಟಾರ್ ಕಲಾವಿದರ ದಂಡೇ ಶಿವಣ್ಣನ ಟೀಮ್‌ಗೆ ಸೇರ್ಪಡೆಯಾಗುತ್ತಿದೆ. ಸದ್ಯ `ಕೆಜಿಎಫ್’ ಖ್ಯಾತಿಯ ಅರ್ಚನಾ ಜೋಯಿಸ್ (Archana Jois) `ಘೋಸ್ಟ್’ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ.

     

    View this post on Instagram

     

    A post shared by Archana Jois (@jois_archie)

    `ವೇದ’ ಬಳಿಕ ಶಿವಣ್ಣ ನಟನೆಯ `ಘೋಸ್ಟ್’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚಿಗೆ ಚಿತ್ರತಂಡಕ್ಕೆ ಅನುಪಮ್ ಖೇರ್, ಜಯರಾಮ್, ಪ್ರಶಾಂತ್ ನಾರಾಯಣ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಈಗ ನಟಿ ಅರ್ಚನಾ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಜೀವತುಂಬಿದ್ದಾರೆ. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

    ಶ್ರೀನಿ ನಿರ್ದೇಶನದ ಈ ಚಿತ್ರದಲ್ಲಿ `ಕೆಜಿಎಫ್’ (Kgf) ನಟಿ ಅರ್ಚನಾ ಪತ್ರಕರ್ತೆಯ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ತಮ್ಮ ಭಾಗದ ಚಿತ್ರೀಕರಣ ಕೂಡ ಕಂಪ್ಲೀಟ್ ಮಾಡಿದ್ದಾರೆ. ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ಅರ್ಚನಾ ನಟಿಸಿದ್ದಾರೆ.

    ಸಂದೇಶ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಶಿವಣ್ಣ ವಿಭಿನ್ನ ಗೆಟಪ್‌ನಲ್ಲಿ ನಟಿಸಿದ್ದಾರೆ. ಈಗಾಗಲೇ ಸಿನಿಮಾ 60ರಷ್ಟು ಚಿತ್ರೀಕರಣ ಆಗಿದೆ. ಸದ್ಯದಲ್ಲೇ 3ನೇ ಹಂತದ ಶೂಟಿಂಗ್ ಶುರುವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸವರ್ಷಕ್ಕೆ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಮೋಷನ್ ಪೋಸ್ಟರ್

    ಹೊಸವರ್ಷಕ್ಕೆ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಮೋಷನ್ ಪೋಸ್ಟರ್

    ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ,  ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ (Srini) ನಿರ್ದೇಶನದಲ್ಲಿ  ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivraj Kumar) ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” (Ghost) ಚಿತ್ರದ ಮೋಷನ್ ಪೋಸ್ಟರ್ (Motion Poster) ನೂತನ ವರ್ಷದ ಮೊದಲ ದಿನ  ಬಿಡುಗಡೆಯಾಗಿದೆ‌.

    ಮೋಷನ್ ಪೋಸ್ಟರ್ ಬಾರಿ ಕುತೂಹಲ ಹುಟ್ಟಿಸಿದೆ‌‌. ಬಹು ನಿರೀಕ್ಷಿತ ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.  ಮೈಸೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮೂರನೇ ಹಂತದ ಚಿತ್ರೀಕರಣ ಫೆಬ್ರವರಿಯಲ್ಲಿ ಆರಂಭವಾಗಲಿದೆ‌. ನಾಯಕ ಶಿವರಾಜಕುಮಾರ್ ಸೇರಿದಂತೆ ಅನೇಕ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ದ್ವಿತೀಯ ಹಂತದ ಚಿತ್ರೀಕರಣ ಪೂರ್ಣವಾಗಿದೆ.  ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ.  ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ

    ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ

    ರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಈ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು.  ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ,  ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ  ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

    ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ದೀಪಿಕಾ ದಾಸ್ ವೈಲ್ಡ್ ಕಾರ್ಡ್ ಎಂಟ್ರಿ

    ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವರಾಜಕುಮಾರ್ ನಟನೆಯ ಹೊಸ ಸಿನಿಮಾ ‘ಘೋಸ್ಟ್’ ಆರಂಭ

    ಶಿವರಾಜಕುಮಾರ್ ನಟನೆಯ ಹೊಸ ಸಿನಿಮಾ ‘ಘೋಸ್ಟ್’ ಆರಂಭ

    ನ್ನಡ ಚಿತ್ರರಂಗಕ್ಕೆ ಸಾಕಷ್ಟು  ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ,  ಸಂದೇಶ್ ನಾಗರಾಜ್ (Sandesh Nagaraj) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ  ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivraj Kumar) ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” (Ghost) ಚಿತ್ರದ ಮುಹೂರ್ತ (Muhurta) ಸಮಾರಂಭ ಮಿನರ್ವ ಮಿಲ್ ನಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವರಾಜಕುಮಾರ್ ಆರಂಭ ಫಲಕ ತೋರಿದರು. ಬೃಂದಾ ಜಯರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅದ್ದೂರಿ ಸೆಟ್ ಗಳನ್ನು ನಿರ್ಮಾಣ ಮಾಡಲಾಗಿದೆ.  ಮಿನರ್ವ ಮಿಲ್ ನಲ್ಲಿ 15 ತರಹದ ಸೆಟ್ ಗಳನ್ನು ಹಾಗೂ ಮೈಸೂರಿನಲ್ಲಿ  4 ತರಹದ ಸೆಟ್ ಗಳನ್ನು ಕಲಾ‌ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮಿನರ್ವ ಮಿಲ್ ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್ ನಲ್ಲೇ 24 ದಿನಗಳ ಚಿತ್ರೀಕರಣ ನಡೆಯಲಿದೆ. ಈ ಅದ್ದೂರಿ ಸೆಟ್ ಗಳ ನಿರ್ಮಾಣಕ್ಕೆ ಸುಮಾರು ಮೂರು ಕೋಟಿ ವೆಚ್ಚವಾಗಿದೆಯಂತೆ.

    “ಶ್ರೀನಿವಾಸ ಕಲ್ಯಾಣ”, ” ಓಲ್ಡ್ ಮಾಂಕ್” ಸೇರಿದಂತೆ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿ (Srini) ನಿರ್ದೇಶನದ ಐದನೇ ಚಿತ್ರ “ಘೋಸ್ಟ್”. ನಿರ್ದೇಶಕರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ಶಿವರಾಜಕುಮಾರ್, ಸತ್ಯಪ್ರಕಾಶ್ (Satya Prakash), ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವರಾಜ್‌ಕುಮಾರ್ ನಟನೆಯ `ಘೋಸ್ಟ್’ ಚಿತ್ರದ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ಶಿವರಾಜ್‌ಕುಮಾರ್ ನಟನೆಯ `ಘೋಸ್ಟ್’ ಚಿತ್ರದ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ. 60ನೇ ವಸಂತಕ್ಕೆ ಕಾಲಿಟ್ಟ ಶುಭ ಸಂದರ್ಭದಲ್ಲಿ ಒಂದೊಂದೇ ಚಿತ್ರದ ಅಪ್‌ಡೇಟ್ಸ್ ರಿವೀಲ್ ಆಗುತ್ತಿದೆ. ಈ ವೇಳೆ ಸಂದೇಶ್ ನಾಗಾರಾಜ್ ನಿರ್ಮಾಣದ, ಶಿವಣ್ಣ ನಟನೆಯ ನಿರೀಕ್ಷಿತ ʻಘೋಸ್ಟ್ʼ ಚಿತ್ರದ ಪೋಸ್ಟರ್ ಅನ್ನು ಇಂದು ಕಿಚ್ಚ ಸುದೀಪ್ ರಿಲೀಸ್ ಮಾಡಿ, ನಟ ಶಿವಣ್ಣಗೆ ಶುಭ ಹಾರೈಸಿದ್ದಾರೆ.

    ನಟ, ನಿರ್ದೇಶಕ ಶ್ರೀನಿ ಮತ್ತು ಶಿವರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ `ಘೋಸ್ಟ್’ ಪ್ಯಾನ್ ಇಂಡಿಯಾ ಸಿನಿಮಾ ಮೂಡಿ ಬರುತ್ತಿದೆ. ಟೈಟಲ್‌ನಿಂದಲೇ ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರದ ಪೊಸ್ಟರ್ ಅನ್ನು ಕಿಚ್ಚ ಸುದೀಪ್ ಅನಾವರಣ ಮಾಡಿ, ಶಿವಣ್ಣ ಹುಟ್ಟುಹಬ್ಬಕ್ಕೆ ಶುಭಹಾರೈಸಿದ್ದಾರೆ. ಜತೆಗೆ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಈ ಮೂಲಕ ಸುದೀಪ್ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಆಗಸ್ಟ್ ನಲ್ಲಿ ‘ಅವನೇ ಶ್ರೀಮನ್ನಾರಾಯಣ’ ನಿರ್ದೇಶಕರ ಸಿನಿಮಾ ಟೈಟಲ್ ಲಾಂಚ್ : ಶಿವರಾಜ್ ಕುಮಾರ್ ಹೀರೋ

    `ಘೋಸ್ಟ್’ ಚಿತ್ರದ ಫಸ್ಟ್ ಲುಕ್ ಈ ಮೊದಲೇ ರಿಲೀಸ್ ಆಗಿ ಹೈಪ್ ಕ್ರಿಯೇಟ್ ಮಾಡಿತ್ತು. ಈ ಚಿತ್ರದ ನಯಾ ಪೋಸ್ಟರ್ ನೋಡುಗರನ್ನ ಸಿಕ್ಕಾಪಟ್ಟೆ ಅಟ್ರಾಕ್ಟ್ ಮಾಡುತ್ತಿದೆ. ಫುಲ್ ಮಾಸ್ ಶಿವಣ್ಣ ಪೋಸ್ ಮಾಡಿದ್ದಾರೆ. ರಿವಾಲ್ವರ್ ಹಿಂದೆ ನಿಂತಿರುವ ಶಿವಣ್ಣ ಖಡಕ್ ಲುಕ್ ಈ ಪೋಸ್ಟರ್‌ನಲ್ಲಿ ನೋಡಬಹುದಾಗಿದೆ. ಪಕ್ಕಾ ಮಾಸ್ ಕಥೆಗೆ ನಿರ್ದೇಶಕ ಶ್ರೀನಿ ಮೊದಲ ಬಾರಿಗೆ ಶಿವಣ್ಣ ಡೈರೆಕ್ಷನ್ ಮಾಡ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಈ ಚಿತ್ರ ಹೇಗೆ ಮೋಡಿ ಮಾಡಬಹುದು ಅಂತಾ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ‘ಘೋಸ್ಟ್’ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ ಕಿಚ್ಚ ಸುದೀಪ್

    ‘ಘೋಸ್ಟ್’ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ ಕಿಚ್ಚ ಸುದೀಪ್

    ಶಿವಣ್ಣನ 60ನೇ ಹುಟ್ಟುಹಬ್ಬಕ್ಕೆ ಚಿತ್ರತಂಡದ ಪ್ರೀತಿಯ ಉಡುಗೊರೆ. ಜುಲೈ 12 ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ 60ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಖ್ಯಾತ ನಟ ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್ ಅವರು  ನಾಯಕರಾಗಿ ನಟಿಸಲಿರುವ “ಘೋಸ್ಟ್” ಚಿತ್ರದ ಪೋಸ್ಟರ್ ಬಿಡುಗಡೆಯಾಗಲಿದೆ.

    “ಕಿಂಗ್ ಆಫ್ ಆಲ್ ಮಾಸಸ್” ಎಂಬ ಈ ವಿಭಿನ್ನ ಪೋಸ್ಟರನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಬಿಡುಗಡೆ ಮಾಡಲಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ 29 ನೇ ಚಿತ್ರವಿದು. ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುತ್ತಿದ್ದಾರೆ. ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಮಹೇಂದ್ರ ಸಿಂಹ ಈ ಚಿತ್ರದ ಛಾಯಾಗ್ರಾಹಕರು. ಆಗಸ್ಟ್ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ. ಇದನ್ನೂ ಓದಿ:ಟ್ವೀಟರ್‌ನಲ್ಲಿ ಯಶ್ ಹೆಸರು ಟ್ರೇಂಡಿಂಗ್: ಯಶ್ 19ನೇ ಚಿತ್ರದ ಅಪ್‌ಡೇಟ್ ಇಲ್ಲಿದೆ

    ಈ ಹುಟ್ಟು ಹಬ್ಬದ ದಿನದಂದು ಶಿವರಾಜ್ ಕುಮಾರ್ ಅವರ ಇನ್ನೊಂದು ಹೊಸ ಸಿನಿಮಾದ ಮುಹೂರ್ತ ನಡೆಯಲಿದೆ. ಅಲ್ಲದೇ, ಅವರದ್ದೇ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ವೇದ ಸಿನಿಮಾದ ಟೀಸರ್ ರಿಲೀಸ್ ಆಗಿದೆಯಂತೆ. ಅಲ್ಲದೇ, ಶಿವರಾಜ್ ಕುಮಾರ್ ಅವರ ಇನ್ನೂ ಅನೇಕ ಚಿತ್ರಗಳ ಪೋಸ್ಟರ್ ಕೂಡ ಅಂದು ರಿಲೀಸ್ ಆಗುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ‘ಬೀರ್ ಬಲ್ 2’ ಸಿನಿಮಾ ಘೋಷಿಸಿದ ನಿರ್ದೇಶಕ, ನಟ ಶ್ರೀನಿ

    ‘ಬೀರ್ ಬಲ್ 2’ ಸಿನಿಮಾ ಘೋಷಿಸಿದ ನಿರ್ದೇಶಕ, ನಟ ಶ್ರೀನಿ

    ನಿರ್ದೇಶಕ, ನಟ ಎಂ.ಜಿ. ಶ್ರೀನಿವಾಸ್ ಈಗಾಗಲೇ ಶಿವರಾಜ್ ಕುಮಾರ್ ನಟನೆಯ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆಯೇ ಅವರು ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಸಿನಿಮಾವನ್ನು ಈಗ ಘೋಷಣೆ ಮಾಡಿದ್ದರೂ, ಅದು ಸೆಟ್ಟೇರುವುದು 2023ರಲ್ಲಿ ಎಂದು ಅವರೇ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    2017ರಲ್ಲಿ ಶ್ರೀನಿ ಬೀರ್ ಬಲ್ ಹೆಸರಿನ ಸಿನಿಮಾವನ್ನು ನಿರ್ದೇಶನ ಮಾಡಿ, ಹೀರೋ ಆಗಿಯೂ ನಟಿಸಿದ್ದರು. ಬೀರ್ ಬಲ್ ಹೆಸರಿನ ಲಾಯರ್ ಕಥೆಯನ್ನು ಹೇಳಿದ್ದರು. ಇದೇ ಸಿನಿಮಾ ಇದೀಗ ಭಾಗ 2 ಆಗಿ ನಿರ್ಮಾಣಗೊಳ್ಳಲಿದೆ. ಇಂದು ಶ್ರೀನಿ ಅವರ ಹುಟ್ಟು ಹಬ್ಬವಾಗಿದ್ದರಿಂದ, ಅದರ ಸಂಭ್ರಮಕ್ಕಾಗಿ ಬೀರ್ ಬಲ್ 2 ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ ನಿರ್ದೇಶಕರು. ಬೀರ್ ಬಲ್ 1 ರಲ್ಲಿ ಫೈಂಡಿಂಗ್ ವಜ್ರಮುನಿ ಕಥೆಯನ್ನು ಹೇಳಿದ್ದರು. ಇಲ್ಲಿ ಮತ್ತೊಂದು ಕೇಸ್ ಇರಲಿದೆಯಂತೆ.

    ಬೀರ್ ಬಲ್ ಮೊದಲ ಭಾಗದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ನಾಯಕಿಯಾಗುವ ಅವಕಾಶ ಯಾರಿಗೆ ಲಭಿಸಲಿದೆ ಎನ್ನುವುದನ್ನು ಕಾದು ನೋಡಬೇಕು. ಇನ್ನೂ ಒಂದು ವರ್ಷದ ನಂತರ ಈ ಚಿತ್ರ ಸೆಟ್ಟೇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ವಿಷಯಗಳು ಹೊರಬರಹುದು. ಬೀರ್ ಬಲ್ ಟ್ರಯಾಲಜಿ ಸಿನಿಮಾ ಆಗಿರುವುದರಿಂದ, ಇನ್ನೊಂದು ಭಾಗದಲ್ಲೂ ಈ ಸಿನಿಮಾ ಬರಲಿದೆ.

    Live Tv
    [brid partner=56869869 player=32851 video=960834 autoplay=true]

  • ಆರ್‌ಜೆ ಆಗಿ `ಆನ್ ಏರ್’ ಆಗ್ತಿದ್ದಾರೆ `ಓಲ್ಡ್ ಮಾಂಕ್’ ಶ್ರೀನಿ

    ಆರ್‌ಜೆ ಆಗಿ `ಆನ್ ಏರ್’ ಆಗ್ತಿದ್ದಾರೆ `ಓಲ್ಡ್ ಮಾಂಕ್’ ಶ್ರೀನಿ

    ʻಓಲ್ಡ್‌ಮಾಂಕ್‌ʼ  ಚಿತ್ರದ ನಂತರ ನಟ ಶಿವರಾಜ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸಿಕ್ಕಾಪಟ್ಟೆ ಸುದ್ದಿಯಾಗಿದ್ದ ನಟ ಕಮ್ ನಿರ್ದೇಶಕ ಶ್ರೀನಿ ಮತ್ತೆ ಸುದ್ದಿಯಲ್ಲಿದ್ದಾರೆ. `ಆನ್ ಏರ್’ ಅಂತಾ ಥ್ರಿಲರ್ ಕಥೆ ಹೇಳಲು ಹೊರಟಿದ್ದಾರೆ.

    ಅದಿತಿ ಪ್ರಭುದೇವಾ ಜತೆ ಡ್ಯುಯೇಟ್ ಹಾಡಿದ ನಂತರ ʻಓಲ್ಡ್‌ಮಾಂಕ್‌ʼ ಶ್ರೀನಿ ಡೈರೆಕ್ಷನ್ ಕ್ಯಾಪ್ ತೊಟ್ಟು ರೆಡಿಯಾಗಿದ್ದಾರೆ. ಆ ಗ್ಯಾಪ್‌ನಲ್ಲೇ ತಮ್ಮ ನಟನೆಯ ಹೊಸ ಚಿತ್ರದ ಕುರಿತು ರಿವೀಲ್ ಮಾಡಿದ್ದಾರೆ. ಶ್ರೀನಿ ನಟನೆಯ `ಆನ್ ಏರ್’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದ್ದು, ಪೋಸ್ಟರ್ ಲುಕ್ ನೋಡುಗರನ್ನ ಅಟ್ರಾಕ್ಟ್ ಮಾಡ್ತಿದೆ.

    `ಆನ್ ಏರ್’ ಚಿತ್ರದಲ್ಲಿ ಆರ್ ಜೆ ಪಾತ್ರಕ್ಕೆ ನಟ ಶ್ರೀನಿ ಜೀವ ತುಂಬಿದ್ದಾರೆ. ಇದೊಂದು ಥ್ರಿಲರ್ ಕಥೆಯಾಗಿದ್ದು, ಭಿನ್ನ ಕಥೆಯ ಮೂಲಕ ಕಮಾಲ್ ಮಾಡಲು ರೆಡಿಯಾಗಿದ್ದಾರೆ. ಈಗಾಗಲೇ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಜುಲೈನಲ್ಲಿ ನೇರವಾಗಿ ಒಟಿಟಿನಲ್ಲಿ ಚಿತ್ರ ತೆರೆಕಾಣಲಿದೆ. ಇದನ್ನೂ ಓದಿ: ಯಶೋದಾ ಫಸ್ಟ್ ಗ್ಲಿಂಪ್ಸ್ ರಿಲೀಸ್: ಜೈ ಹೋ ಅಂದ ಸಮಂತಾ ಅಭಿಮಾನಿಗಳು

     

    View this post on Instagram

     

    A post shared by SRINI (@lordmgsrinivas)

    ಚಿತ್ರದ ವಿಶೇಷ ಅಂದ್ರೆ, `ಬಾಹುಬಲಿ’ ಚಿತ್ರದ ಬರಹಗಾರ ವಿಜೇಂದ್ರ ಪ್ರಸಾದ್ ಜತೆ ಕೆಲಸ ಮಾಡಿದ್ದ ಪ್ರಶಾಂತ್ ಸಾಗರ್ ಆನ್ ಏರ್ ಚಿತ್ರವನ್ನ ನಿರ್ದೇಶಿಸಿದ್ದಾರೆ. ಚಿತ್ರತಂಡದ ಯೋಜನೆಗೆ ರಘುವೀರ್ ಗೋರಿಪತಿ ಮತ್ತು ಸೃಜನ್ ಯರಬೋಲು ಸಾಥ್ ನೀಡಿದ್ದಾರೆ.

  • ಸೆಂಚ್ಯುರಿ ಸ್ಟಾರ್ ಶಿವರಾಜ್‌ಕುಮಾರ್ ಚಿತ್ರಕ್ಕೆ  ಶ್ರೀನಿ ನಿರ್ದೇಶನ

    ಸೆಂಚ್ಯುರಿ ಸ್ಟಾರ್ ಶಿವರಾಜ್‌ಕುಮಾರ್ ಚಿತ್ರಕ್ಕೆ ಶ್ರೀನಿ ನಿರ್ದೇಶನ

    ನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಮೂಲಕ ʼಗೋಸ್ಟ್‌ʼ ಎಂಬ ನೂತನ ಚಿತ್ರ ನಿರ್ಮಾಣವಾಗಲಿದೆ. ಈ ಚಿತ್ರದಲ್ಲಿ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

    ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್. ಎನ್ ನಿರ್ಮಿಸುತ್ತಿರುವ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯಿಸುತ್ತಿದ್ದಾರೆ. ‘ಶ್ರೀನಿವಾಸ ಕಲ್ಯಾಣ’, ‘ ಬೀರ್ ಬಲ್’, ʼಓಲ್ಡ್ ಮಾಂಕ್ʼ ಚಿತ್ರಗಳ ಖ್ಯಾತಿಯ ಶ್ರೀನಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ. ಇದನ್ನು ಓದಿ: ಶಾರುಖ್ ಖಾನ್- ರಾಜ್‌ಕುಮಾರ್ ಹಿರಾನಿ ಕಾಂಬಿನೇಷನ್‌ನ ಚಿತ್ರದ ಶೂಟಿಂಗ್ ಸ್ಟಾರ್ಟ್!

    ಕಥೆಯನ್ನು ಶ್ರೀನಿ ಅವರೆ ಬರೆದಿದ್ದು, ಉಳಿದ ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.

  • ರಾಜೇಶ್ ಅವರ ಕೊನೆಯ ಸಿನಿಮಾದ ಎಕ್ಸ್‌ಕ್ಲೂಸಿವ್‌ ಫೋಟೋಸ್, ಮಾಹಿತಿ

    ರಾಜೇಶ್ ಅವರ ಕೊನೆಯ ಸಿನಿಮಾದ ಎಕ್ಸ್‌ಕ್ಲೂಸಿವ್‌ ಫೋಟೋಸ್, ಮಾಹಿತಿ

    ನ್ನಡದ ಹಿರಿಯ ಚೇತನ, ಕಲಾತಪಸ್ವಿ ರಾಜೇಶ್ ಅವರ ನಿಧನ ಕನ್ನಡ ಸಿನಿಮಾ ರಂಗಕ್ಕೆ ತುಂಬಲಾರದ ನಷ್ಟ. 88ರ ವಯಸ್ಸಿನಲ್ಲೂ ಅವರ ನಟನಾ ಉತ್ಸಾಹ ತಗ್ಗಿರಲಿಲ್ಲ. ಕಳೆದ ವರ್ಷವಷ್ಟೇ ಅವರು ಶ್ರೀನಿ ನಿರ್ದೇಶನ ಮಾಡಿ ನಟಿಸಿರುವ ಓಲ್ಡ್ ಮಾಂಕ್ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಈ ಕುರಿತು ನಿರ್ದೇಶಕ ಶ್ರೀನಿ ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿ, ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ರವೀಂದ್ರ ಕಲಾಕ್ಷೇತ್ರದಲ್ಲಿ ನಟ ರಾಜೇಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ನೆಗಟಿವ್ ಪಾತ್ರ ಮಾಡಲ್ಲ
    ನಿರ್ದೇಶಕ ಶ್ರೀನಿ ಅವರು ರಾಜೇಶ್ ಅವರನ್ನು ಭೇಟಿ ಮಾಡಲು ಮನೆಗೆ ಹೋದಾಗ, ಮೊದಲು ರಾಜೇಶ್ ಕೇಳಿದ್ದು ತಮ್ಮದು ಯಾವ ರೀತಿಯ ಪಾತ್ರ? ಎಂದು. ಕಥೆ ಹೇಳಿದ ಮೇಲೆ, ನಾನು ಯಾವುದೇ ಕಾರಣಕ್ಕೂ ನೆಗೆಟಿವ್ ರೀತಿಯ ಪಾತ್ರ ಮಾಡಲಾರೆ ಎಂದು ಬಿಟ್ಟಿದ್ದರಂತೆ. ಈ ಸಮಾಜಕ್ಕೆ ಕೆಟ್ಟ ಸಂದೇಶ ಹೋಗುವಂತಹ ಕ್ಯಾರೆಕ್ಟರ್ ನಲ್ಲಿ ನಾನು ನಟಿಸಲಾರೆ ಎಂದಿದ್ದರು ರಾಜೇಶ್. ಅಷ್ಟರ ಮಟ್ಟಿಗೆ ಅವರು ಪಾತ್ರದ ಬಗ್ಗೆ ಎಚ್ಚರಿಕೆ ತಗೆದುಕೊಂಡಿದ್ದರು.  ಇದನ್ನೂ ಓದಿ : ಕಲಾ ತಪಸ್ವಿ ರಾಜೇಶ್‌ ವಿಧಿವಶ

    ನೆನಪಿನ ಶಕ್ತಿ ಅದ್ಭುತ
    ಈ ಇಳಿ ವಯಸ್ಸಿನಲ್ಲೂ ರಾಜೇಶ್ ಅವರು ಅದ್ಭುತ ನೆನಪಿನ ಶಕ್ತಿಯನ್ನು ಹೊಂದಿದ್ದರು ಎಂದು ಶ್ರೀನಿ ನೆನಪಿಸಿಕೊಳ್ಳುತ್ತಾರೆ. “ರಾಜೇಶ್ ಅವರ ಪಾತ್ರ ಅತಿಥಿಯಾಗಿದ್ದರೂ, ದೊಡ್ಡ ದೊಡ್ಡ ಡೈಲಾಗ್ ಗಳನ್ನು ಬರೆದಿದ್ದೆ. ಅವರದ್ದು ಅದ್ಭುತ ಮೆಮರಿ ಪವರ್. ಉದ್ದನೆಯ ಡೈಲಾಗ್ ಹೇಳಿದ ತಕ್ಷಣವೇ ಪಟ ಪಟ ಅಂತ ಹೇಳಿ ಬಿಡುತ್ತಿದ್ದರು. ಅದೆಷ್ಟೇ ದೊಡ್ಡ ಸಂಭಾಷಣೆ ಇದ್ದರೂ ಕ್ಷಣ ಮಾತ್ರದಲ್ಲೇ ತಯಾರಿ ಆಗುತ್ತಿದ್ದರು” ಎಂದರು ಶ್ರೀನಿ. ಇದನ್ನೂ ಓದಿ: ಬೈ ಟು ಲವ್ ಹೀರೋ ಧನ್ವೀರ್ ಮೇಲೆ ದೂರು ದಾಖಲಿಸಿದ ಅಭಿಮಾನಿ

    ಹೀಗಿಯೇ ಗೆಟಪ್ ಇರಬೇಕು ಅಂತ ತಾಕೀತು
    ರಾಜೇಶ್ ಅವರಿಗೆ ನಿರ್ದೇಶಕ ಶ್ರೀನಿ ಓಲ್ಡ್ ಮಾಂಕ್ ಸಿನಿಮಾದ ಕಥೆ ಹೇಳಿದ ಮೇಲೆ, ತಕ್ಷಣವೇ ಪಾತ್ರದಲ್ಲಿ ತಲ್ಲೀಣರಾದರಂತೆ ಹಿರಿಯ ಜೀವ. ಪಾತ್ರಕ್ಕೆ ಇಂಥದ್ದೇ ಗೆಟಪ್ ಇರಬೇಕು, ಲುಕ್ಸ್ ಕೂಡ ಹೀಗಿಯೇ ಆಗಿರಬೇಕು. ಅದಕ್ಕೆ ಕಾಸ್ಟ್ಯೂಮ್ ಈ ರೀತಿಯಲ್ಲಿ ಹೊಂದಾಣಿಕೆ ಆಗಬೇಕು ಎಂದು ತಮ್ಮ ಪಾತ್ರದ ಬಗ್ಗೆ ತಾವೇ ಚಹರಿ ಹೇಳುವ ಮೂಲಕ ಸ್ವತಃ ನಿರ್ದೇಶಕರನ್ನೇ ಅಚ್ಚರಿಗೆ ದೂಡಿದ್ದರಂತೆ ರಾಜೇಶ್.