Tag: ಶ್ರೀರಂಗಪಟ್ಟಣ

  • ಮಂಡ್ಯ | ಐದು ದಿನಗಳ ಕಾವೇರಿ ಆರತಿಗೆ ತೆರೆ

    ಮಂಡ್ಯ | ಐದು ದಿನಗಳ ಕಾವೇರಿ ಆರತಿಗೆ ತೆರೆ

    ಮಂಡ್ಯ: ಕನ್ನಡ ನಾಡಿ ಜೀವ ನದಿ ಕಾವೇರಿ ಮಾತೆಗೆ ನಮನ ಸಲ್ಲಿಸುವ ನಿಟ್ಟಿನಲ್ಲಿ ಸಂಕೇತಿಕವಾಗಿ ಐದು ದಿನಗಳ ಕಾಲ ಜರುಗಿದ ಕಾವೇರಿ ಆರತಿಗೆ (Cauvery Aarti) ಇಂದು ರಾತ್ರಿ ಯಶಸ್ವಿಯಾಗಿ ತೆರೆಬಿದ್ದಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಐದು ದಿನಗಳಲ್ಲಿ ಸಾವಿರಾರು ಜನರು ಸಾಕ್ಷಿ ಆದರು.

    ಸಕ್ಕರೆನಾಡು ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ (KRS) ಡ್ಯಾಂನ ಬೃಂದಾವನ ಐದು ದಿನಗಳ ಕಾವೇರಿ ಆರತಿಯಿಂದ ಮೇಳೈಸಿತು. ಹಳೆ ಮೈಸೂರು ಭಾಗದ ಜನರಿಗೆ ನೀರುಣಿಸುವ ಕಾವೇರಿ ಮಾತೆಗೆ ನಮನ ಸಲ್ಲಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ಆರತಿ ನೇರವೇರಿಸಬೇಕೆಂಬ ಕನಸು ಕಂಡಿದ್ದರು. ಅದರಂತೆ ಕೆಆರ್‌ಎಸ್ ಡ್ಯಾಂನ ಬೃಂದಾವನವನ್ನು ಸಾಂಕೇತಿಕವಾಗಿ ಕಳೆದ ಐದು ದಿನಗಳ ಕಾಲ ಕಾವೇರಿ ಆರತಿ ಕಾಲ ಜರುಗಿತು. ಈ ಆರತಿಗೆ ಕಳೆದ ಶುಕ್ರವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಗೋಧೂಳಿ ಸಮಯದಲ್ಲಿ ಚಾಲನೆ ನೀಡುವ ಮೂಲಕ ಹೊಸ ಮುನ್ನುಡಿ ಬರೆದರು. ಇದನ್ನೂ ಓದಿ: ನಾಲ್ಕು ದಿನ ಕಳೆದರೂ ಪತ್ತೆಯಾಗದ 4ರ ಮಗು – ಕುಟುಂಬಸ್ಥರ ಭೇಟಿಯಾದ ಸಚಿವ ಶಿವರಾಜ ತಂಗಡಗಿ

    ಬಳಿಕ ಐದು ದಿನಗಳ ಕಾಲ ಬೃಂದಾವನದಲ್ಲಿ ನಡೆದಿದ್ದು ಕಾವೇರಿ ಮಾತೆಗೆ ನಮನ ಸಲ್ಲಿಸುವ ಕಾವೇರಿ ಆರತಿ. ಐದು ದಿನಗಳಲ್ಲೂ ಮೊದಲಿಗೆ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಅರ್ಚಕರ ತಂಡ ವಾತಾಪಿ ಗಣಪತಿಂ ಭಜೆ ಮಂಗಳವಾದ್ಯದಿಂದ ಕಾವೇರಿ ಆರತಿಯನ್ನು ಪ್ರಾರಂಭಿಸಿದರು. ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ ಮಾಡಿ ಬಳಿಕ ಸಂಕಲ್ಪ ಮಾಡಲಾಯಿತು. ನಂತರ ಕಾವೇರಿ ಆರತಿಯೊಂದಿಗೆ ಸಂಪನ್ನ ಮಾಡಲಾಯಿತು. ಇದಾದ ನಂತರ ವಾರಣಾಸಿಯ ವೈದಿಕ ತಂಡದಿಂದ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನೆರವೇರಿಸಲಾಯಿತು. ಇದನ್ನೂ ಓದಿ: ಚೆನ್ನೈನಲ್ಲಿ ಕಮಾನು ಕುಸಿದು 9 ಮಂದಿ ಸಾವು – 10ಕ್ಕೂ ಹೆಚ್ಚು ಮಂದಿಗೆ ಗಾಯ

    ಕೆಆರ್‌ಎಸ್‌ನ ಬೃಂದಾವನದಲ್ಲಿ ನಡೆದ ಕಾವೇರಿ ಆರತಿಗೆ ಹಲವು ಮಠಗಳ ಸ್ವಾಮೀಜಿಗಳು, ಸಚಿವರು, ಶಾಸಕರು, ಅಧಿಕಾರಿಗಳು, ಸಾವಿರಾರು ಸಂಖ್ಯೆಯ ಜನರು ಸಾಕ್ಷಿಯಾದರು. ಕಾವೇರಿ ಆರತಿಯ ಅಂತಿಮ ದಿನದಂದು ವಿನಯ್ ಗುರೂಜಿ ಸಹ ಭಾಗಿಯಾಗಿದ್ದರು. ಇದೇ ವೇಳೆ ಮಾತನಾಡಿದ ಅವರು, ಆಸ್ತಿಕರು ಹಾಗೂ ನಾಸ್ತಿಕರು ಎಲ್ಲರೂ ಸಹ ಕಾವೇರಿಗೆ ನಮನ ಸಲ್ಲಿಸುವುದು ಅವರ ಕರ್ತ್ಯವಾಗಿದೆ. ಕಾವೇರಿಯಿಂದ ಜನರು ಸುಭಿಕ್ಷವಾಗಿದೆ. ರಾಜ್ಯ ಸರ್ಕಾರ ಕಾವೇರಿ ಆರತಿ ಮಾಡುತ್ತಿರುವುದು ತುಂಬ ಒಳ್ಳೆಯ ಕೆಲಸ ಎಂದರು. ಇದನ್ನೂ ಓದಿ: ಯಾರ ಬಳಿ ಆಯುಧ ಇಲ್ಲವೋ ಅವರೆಲ್ಲಾ ಆಯುಧ ಖರೀದಿಸಿ ಪೂಜಿಸಿ: ನಾರಾಯಣ ಭಾಂಡಗೆ

  • ಕೆಆರ್‌ಎಸ್ ಡ್ಯಾಂನಿಂದ 50,000 ಕ್ಯೂಸೆಕ್ ನೀರು ಬಿಡುಗಡೆ

    ಕೆಆರ್‌ಎಸ್ ಡ್ಯಾಂನಿಂದ 50,000 ಕ್ಯೂಸೆಕ್ ನೀರು ಬಿಡುಗಡೆ

    ಮಂಡ್ಯ: ಜೂನ್ ತಿಂಗಳಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾದ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ (KRS Dam) ಭರ್ತಿಯಾಗುವ ಮೂಲಕ ಹೊಸ ಇತಿಹಾಸವನ್ನು ಬರೆದಿದೆ. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಕನ್ನಂಬಾಡಿ ಕಟ್ಟೆಗೆ 44,238 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

    ಕೆಆರ್‌ಎಸ್ ಡ್ಯಾಂಗೆ 44,238 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ಡ್ಯಾನಿಂದ 50 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮಂಡ್ಯ ಜಿಲ್ಲಾಡಳಿತ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಇರುವುದರ ಜೊತೆಗೆ ಆಸ್ತಿ- ಪಾಸ್ತಿ, ಜಾನುವಾರುಗಳ ರಕ್ಷಣೆ ಸಂಬಂಧ ಅಲರ್ಟ್ ಘೋಷಣೆ ಮಾಡಿದೆ. ಇದಲ್ಲದೇ ಕಾವೇರಿ ನದಿ ಪಾತ್ರದಲ್ಲಿ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿರ್ಬಂಧ ಹೇರಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ 4,800 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

    ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಲ್ಲಿಯೇ ಭರ್ತಿಯಾಗಿರುವುದರಿಂದ ಇನ್ನುಮುಂದೆ ಬಂದ ಒಳಹರಿವನ್ನು, ಹೊರಹರಿವನ್ನಾಗಿ ಮಾಡಬೇಕಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾವೇರಿ ಕೊಳ್ಳದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆ ಸಹ ಇದೆ. ಇದನ್ನೂ ಓದಿ: ನಾನು ಸಿಎಂ ಆಗೋಕೆ ಗುರು ಬಲ ಬೇಕು, ಶನಿಕಾಟ ಕಡಿಮೆ ಆಗ್ಬೇಕು: ಸತೀಶ್ ಜಾರಕಿಹೊಳಿ

  • KRS ಡ್ಯಾಂನಲ್ಲಿ 16 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳ

    KRS ಡ್ಯಾಂನಲ್ಲಿ 16 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಅಬ್ಬರ ಜೋರಾಗಿರುವ ಹಿನ್ನೆಲೆ ಕೆಆರ್‌ಎಸ್ (KRS) ಆಣೆಕಟ್ಟೆಯಲ್ಲಿ ಒಳಹರಿವು ಹೆಚ್ಚಾಗಿದೆ.

    ಹೌದು, ಮಂಡ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ ಒಳಹರಿವು ಹೆಚ್ಚಳವಾಗಿದೆ.ಇದನ್ನೂ ಓದಿ: ಇರಾನ್‌ ಜನ ತಕ್ಷಣವೇ ಟೆಹ್ರಾನ್‌ ಖಾಲಿ ಮಾಡಿ: ಟ್ರಂಪ್‌ ಸೂಚನೆ

    ಕಳೆದ ಹತ್ತು ದಿನಗಳಿಂದ ಕೆಆರ್‌ಎಸ್ ಡ್ಯಾಂಗೆ 2 ಸಾವಿರ ಕ್ಯೂಸೆಕ್ ನೀರು ಬರುತ್ತಿತ್ತು. ಸೋಮವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಹೀಗಾಗಿ ಕೆಆರ್‌ಎಸ್ ಡ್ಯಾಂಗೆ ಇಂದು 16,936 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

    ಈ ಮೂಲಕ 124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 110.95 ಅಡಿಯಷ್ಟು ಭರ್ತಿಯಾಗಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯದ ಕನ್ನಂಬಾಡಿ ಕಟ್ಟೆಯಲ್ಲಿ 32.686 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಇನ್ನೂ ಡ್ಯಾಂನಿAದ 915 ಕ್ಯೂಸೆಕ್ ಹೊರಹರಿವು ಇದೆ.ಇದನ್ನೂ ಓದಿ: KRS ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ

  • ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

    ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

    ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್‌ನ (KRS) ಬೃಂದಾವನ ಸಹ ಒಂದಾಗಿದೆ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ನಮ್ಮ ರಾಜ್ಯವಲ್ಲದೇ ಹೊರ ರಾಜ್ಯಗಳಿಂದಲೂ ಪ್ರವಾಸಿಗರ ದಂಡು ಹರಿದು ಬರುತ್ತದೆ. ಮೈಸೂರಿಗೆ ವಿಸಿಟ್ ಕೊಡುವ ಬಹುತೇಕ ಪ್ರವಾಸಿಗರು ಬೃಂದಾವನವನ್ನು ನೋಡಲೇಬೇಕೆಂದು ತಪ್ಪದೇ ಇಲ್ಲಿಗೆ ಅಟೆಂಡೆನ್ಸ್ ಹಾಕುತ್ತಾರೆ. ಹೀಗಿರುವಾಗ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ಇಲ್ಲಿನ ಕಾವೇರಿ ನೀರಾವರಿ ನಿಗಮ ಹಾಗೂ ಜಿಲ್ಲಾಡಳಿತ ವಾತಾವರಣವನ್ನು ನಿರ್ಮಾಣ ಮಾಡಬೇಕು. ಆದರೆ ಅದರ ಬದಲಿಗೆ ಪ್ರವಾಸಿಗರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಲಾಗುತ್ತಿದೆ.

    ಕೆಆರ್‌ಎಸ್ ಡ್ಯಾಂ ಎದುರು ಬೃಂದಾವನಕ್ಕೆ ಹಾಗೂ ಅಕ್ಕಪಕ್ಕದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಕಾವೇರಿ ನದಿಗೆ ಅಡ್ಡಲಾಗಿ 7 ಕೋಟಿ ವೆಚ್ಚದಲ್ಲಿ 2003-04ರಲ್ಲಿ 500 ಮೀಟರ್ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಈ 7 ಕೋಟಿಯನ್ನು ಪಡೆಯುವ ಉದ್ದೇಶದಿಂದ ನಾಲ್ಕು ಚಕ್ರದ ವಾಹನಗಳಿಗೆ 50 ರೂ. ಹಾಗೂ 6 ಚಕ್ರದ ವಾಹನಗಳಿಗೆ 100 ರೂ.ಗಳನ್ನು ಟೋಲ್ ಮೂಲಕ ವಸೂಲಿ ಮಾಡಲಾಗುತ್ತಿತ್ತು. ಸದ್ಯ ಈ ಟೋಲ್ ಮೂಲಕ ಸಂಗ್ರಹ ಮಾಡಿದ ಹಣ ಸೇತುವೆ ನಿರ್ಮಾಣಕ್ಕೆ ಖರ್ಚಾದ ಹಣಕ್ಕಿಂತ ದುಪ್ಪಟ್ಟು ಹಣ ಸಂಗ್ರವಾಗಿದೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

    ಟೋಲ್ ಮೂಲಕ ಈಗಾಗಲೇ ದುಪ್ಪಟ್ಟು ಹಣ ಸಂಗ್ರಹವಾದರೂ ಸಹ ಇದೀಗ ಕಳೆದ ಒಂದು ವಾರದಿಂದ ಇಲ್ಲಿನ ಟೋಲ್ ದರವನ್ನು ಒನ್ ಟು ಡಬಲ್ ಹೆಚ್ಚಿಸಲಾಗಿದೆ. 50 ರೂ. ಇದ್ದ ಟೋಲ್ ದರ 100, 50 ರೂ. ಇದ್ದ ಪಾರ್ಕಿಂಗ್ 100 ರೂ. ಎರಡು ಸೇರಿ 200 ರೂ. ಟೋಲ್‌ನಲ್ಲಿಯೇ ವಸೂಲಿ ಮಾಡಲಾಗುತ್ತದೆ. ಒಂದು ವೇಳೆ ಬೃಂದಾವನಕ್ಕೆ ಹೋಗಲಿಲ್ಲ ಅಂದರೆ ಅಕ್ಕ-ಪಕ್ಕದ ಹಳ್ಳಿಯವರು ಸೇರಿದಂತೆ ಎಲ್ಲರೂ 100 ರೂ. ನೀಡಬೇಕಿದೆ. ಇದಲ್ಲದೇ ಬೃಂದಾವನ ಪ್ರವೇಶಕ್ಕೆ 50 ರೂ. ಇದ್ದ ಟಿಕೆಟ್ ದರವನ್ನು ಇದೀಗ 100 ರೂ. ಮಾಡಲಿದೆ. ಈ ದರ ಏರಿಕೆ ಪ್ರವಾಸಿಗರ ಆಕ್ರೋಶಕ್ಕೆ ಸಹ ಕಾರಣವಾಗುತ್ತಿದೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

  • ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

    ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

    ಮಂಡ್ಯ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ ಕೆಆರ್‌ಎಸ್ (KRS) ಜಲಾಶಯದಲ್ಲಿ 11 ಅಡಿ ನೀರು ಹೆಚ್ಚಳವಾಗಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿಯಾದಂತಾಗಿದೆ.

    ಜೂನ್‌ 2ನೇ ವಾರದಲ್ಲೇ ಡ್ಯಾಂ ಭರ್ತಿ ಸಾಧ್ಯತೆ:
    ಹಳೆ ಮೈಸೂರು (Mysuru) ಭಾಗದ ಜೀವನಾಡಿಯಾದ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ಉತ್ತಮ ಒಳಹರಿವು ಇದ್ದು, ನಾಲ್ಕೇ ದಿನದಲ್ಲಿ 11 ಅಡಿ ಭರ್ತಿಯಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಜೂನ್ ಎರಡನೇ ವಾರದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ಮಲೆನಾಡಲ್ಲಿ ಮಳೆ ನಿಂತ್ರೂ ನಿಲ್ಲದ ಅವಾಂತರ – 80 ವರ್ಷದ ಹಳೇ ಶಾಲಾ ಕಟ್ಟಡ ಕುಸಿತ

    ಮುಂಗಾರು ಆರಂಭದಲ್ಲಿಯೇ ಉತ್ತಮ ಮಳೆಯಾಗುತ್ತಿರುವುದು ರೈತರ ಮುಖದಲ್ಲಿ ಮಂದಹಾಸ ತಂದಿದೆ. ಹಲವು ವರ್ಷಗಳ ಬಳಿಕ ಮೇ ತಿಂಗಳಿನಲ್ಲಿ ಈ ಮಟ್ಟದ ಒಳಹರಿವು ಇದೆ. ಕಳೆದ ನಾಲ್ಕು ದಿನದ ಹಿಂದೆ ನೀರಿನ ಮಟ್ಟ 89 ಅಡಿಗೆ ಕುಸಿದಿತ್ತು. ಇದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುತ್ತೆ ಎಂದು ಅಲ್ಲಿನ ಜನರು ಆತಂಕಕ್ಕೊಳಗಾಗಿದ್ದರು.

    124.80 ಅಡಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್‌ನಲ್ಲಿ 100.10 ಅಡಿ ನೀರಿದೆ. 49.452 ಟಿಎಂಸಿ (TMC) ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 22.222 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಒಳಹರಿವಿನ ಪ್ರಮಾಣ 19,448 ಕ್ಯುಸೆಕ್ ಇದ್ದು, 670 ಕ್ಯುಸೆಕ್ ಹೊರಹರಿವಿದೆ.ಇದನ್ನೂ ಓದಿ: ಕಲಬುರಗಿಯಲ್ಲಿ ಉತ್ತಮ‌ ಮಳೆ – ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

  • 24 ಗಂಟೆಯಲ್ಲಿ 3 ಅಡಿ ಭರ್ತಿಯಾದ ಕೆಆರ್‌ಎಸ್ ಡ್ಯಾಂ

    24 ಗಂಟೆಯಲ್ಲಿ 3 ಅಡಿ ಭರ್ತಿಯಾದ ಕೆಆರ್‌ಎಸ್ ಡ್ಯಾಂ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನೆಲೆ 24 ಗಂಟೆಯಲ್ಲಿ ಕೆಆರ್‌ಎಸ್ ಡ್ಯಾಂನಲ್ಲಿ (KRS Reservoir) 3 ಅಡಿ ನೀರು ಹೆಚ್ಚಳವಾಗಿದೆ.

    ಹಳೆ ಮೈಸೂರು ಭಾಗದ ಜೀವನಾಡಿಯಾದ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ಉತ್ತಮ ಒಳಹರಿವು ಬರುತ್ತಿದ್ದು, ಒಂದೇ ದಿನ ಡ್ಯಾಂಗೆ ಮೂರು ಅಡಿ ಭರ್ತಿಯಾಗಿದೆ.ಇದನ್ನೂ ಓದಿ: ನಿರಂತರ ಮಳೆಯಿಂದಾಗಿ ಜೀವಕಳೆ ಪಡೆದ ಕೊಡಗಿನ ಮಲ್ಲಳ್ಳಿ ಜಲಪಾತ

    ಕಳೆದ ಎರಡು ದಿನಗಳ ಹಿಂದೆ ಕೆಆರ್‌ಎಸ್ ಜಲಾಶಯಕ್ಕೆ 350 ಕ್ಯುಸೆಕ್ ಒಳಹರಿವು ಇತ್ತು. ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಇಂದು 19,129 ಕ್ಯುಸೆಕ್ ನೀರು ಬಂದಿದೆ. ಈ ಮೂಲಕ 24 ಗಂಟೆಯಲ್ಲಿ 2 ಟಿಎಂಸಿ ನೀರು ಬಂದಿದ್ದು, 3 ಅಡಿಯಷ್ಟು ಡ್ಯಾಂ ಬರ್ತಿಯಾಗಿದೆ.

    ಮುಂಗಾರು ಆರಂಭದಲ್ಲಿಯೇ ಉತ್ತಮ ಮಳೆಯಾಗುತ್ತಿರುವುದು ರೈತರ ಮುಖದಲ್ಲಿ ಮಂದಹಾಸ ತಂದಿದೆ. ಹಲವು ವರ್ಷಗಳ ಬಳಿಕ ಮೇ ತಿಂಗಳಿನಲ್ಲಿ ಈ ಮಟ್ಟದ ಒಳಹರಿವು ಇದ್ದು, ಹೀಗೆ ಮಳೆಯಾದರೆ ಈ ಬಾರಿ ಆದಷ್ಟು ಬೇಗ ಕೆಆರ್‌ಎಸ್ ಡ್ಯಾಂ ಭರ್ತಿಯಾಗಲಿದೆ.

    124.80 ಅಡಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್‌ನಲ್ಲಿ 92.00 ಅಡಿ ನೀರಿದೆ. ಕನ್ನಂಬಾಡಿ ಕಟ್ಟೆ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 17.163 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವಿನ ಪ್ರಮಾಣ 19,129 ಕ್ಯುಸೆಕ್ ಇದ್ದು, 354 ಕ್ಯುಸೆಕ್ ಹೊರಹರಿವಿದೆ.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಕಾರಿನ ಮೇಲೆ ಬಿತ್ತು ಬೃಹತ್‌ ಮರ, ನಾಲ್ವರು ಪಾರು

  • ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

    ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

    ಮಂಡ್ಯ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಶ್ರೀರಂಗಪಟ್ಟಣದಲ್ಲಿ ಪಹಲ್ಗಾಮ್‌ನಲ್ಲಿ (Pahalgam) ನಡೆದ ಉಗ್ರರ ದಾಳಿಯ ಕುರಿತು ಮಾತನಾಡಿದ ಅವರು, ಆರ್ಟಿಕಲ್ 370 ತೆಗೆಯೋದಕ್ಕೂ ಮೊದಲು ಯೋಚನೆ ಮಾಡಬೇಕಿತ್ತು. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರ ಅತಿಯಾದ ಆತ್ಮವಿಶ್ವಾಸದಿಂದ ಘಟನೆ ನಡೆದಿದೆ ಎನ್ನುವ ಮೂಲಕ ಘಟನೆಗೆ ಪರೋಕ್ಷವಾಗಿ ಬಿಜೆಪಿ ಕಾರಣ ಎಂದಿದ್ದಾರೆ. ಇದನ್ನೂ ಓದಿ: ರೈಫಲ್‌ ಕಸಿದುಕೊಳ್ಳಲು ಹೋಗಿ ಉಗ್ರರ ಗುಂಡೇಟಿಗೆ ಕುದುರೆ ರೈಡರ್‌ ಬಲಿ

    ಆರ್ಟಿಕಲ್ 370 ತೆಗೆಯುವ ಮುನ್ನ ಕಾಶ್ಮೀರದಲ್ಲಿ (Kashmir) ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಅವರ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?

    ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಕನ್ನಡಿಗರಾಗಿದ್ದಾರೆ.

  • Mandya | ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವು

    Mandya | ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವು

    ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೈಸೂರಿನ ವಿಕ್ರಾಂತ್ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ನಡೆದಿದೆ.

    ಮೈಸೂರು (Mysuru) ಜಿಲ್ಲೆಯ ಹುಣಸೂರು ಮೂಲದ ಮಹೇಶ್ (35) ಮೃತ ದುರ್ದೈವಿ. ಶ್ರೀರಂಗಪಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ ಪ್ರವೇಶಕ್ಕೆಂದು ಮಹೇಶ್ ಸ್ನೇಹಿತರ ಜೊತೆ ಬಂದಿದ್ದರು. ಇದನ್ನೂ ಓದಿ: ಕಲಬುರಗಿ| ತಡರಾತ್ರಿ ಭೀಕರ ರಸ್ತೆ ಅಪಘಾತಕ್ಕೆ ಐವರು ದುರ್ಮರಣ

    ಬೆಳಗ್ಗೆ ನದಿಯಲ್ಲಿ ಸ್ನೇಹಿತರ ಜೊತೆ ಸ್ನಾನಕ್ಕೆಂದು ಈಜಲು ಹೋಗಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿ ಮಹೇಶ್ ಸಾವನ್ನಪ್ಪಿದ್ದಾರೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ – ನಡು ರಸ್ತೆಯಲ್ಲಿ ಕೊಲೆಗೈದು ಪರಾರಿ

  • ಮಂಡ್ಯದಲ್ಲಿಂದು ವಿಜಯೇಂದ್ರರಿಂದ ಭತ್ತದ ನಾಟಿ

    ಮಂಡ್ಯದಲ್ಲಿಂದು ವಿಜಯೇಂದ್ರರಿಂದ ಭತ್ತದ ನಾಟಿ

    ಮಂಡ್ಯ: ಇಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ಯುವ ಸಮೂಹ ಕೃಷಿಯ ಕಡೆ ಒಲವು ತೋರಿಸಿ, ಉತ್ತೇಜನ ನೀಡಬೇಕೆಂಬ ಉದ್ದೇಶದಿಂದ ಶ್ರೀರಂಗಪಟ್ಟಣ ವಿಧಾನಸಭಾ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ (Induvalu Sacchidanand) ನಾಟಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

    ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದ ಸುಖೇಂದ್ರ ಹಾಗೂ ಶಿವಬಸಪ್ಪ ಎಂಬುವವರ 2 ಎಕ್ರೆ ಗದ್ದೆಯಲ್ಲಿ ನಾಟಿ ಕಾರ್ಯಕ್ರಮ ನಡೆಯಲಿದೆ. ವಿಜಯೇಂದ್ರ ಅವರು ಗದ್ದೆಗಿಳಿದು ನಾಟಿ ಮಾಡಲಿದ್ದಾರೆ. ಬಳಿಕ ರೈತರ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಲಿದ್ದಾರೆ. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಏರ್‌ಪೋರ್ಟ್‌ನಲ್ಲಿ ಐಪಿಎಸ್ ಅಧಿಕಾರಿ ಸಂಬಂಧಿ ವಶಕ್ಕೆ

    ಊರಲ್ಲಿ ನಾಲ್ಕೈದು ಎಕ್ರೆ ಜಮೀನು ಇದ್ದರೂ ಸಹ ಯುವಕರು ಕಡಿಮೆ ಸಂಬಳಕ್ಕೆ ನಗರ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಕೃಷಿ ಮಾಡುವವರ ಸಂಖ್ಯೆ ಕಡಿಮೆ ಆಗುವುದರ ಜೊತೆಗೆ, ಯುವಸಮೂಹದ ಆರ್ಥಿಕ ಪರಿಸ್ಥಿತಿಯೂ ಕಡಿಮೆ ಆಗುತ್ತಿದೆ. ಈ ನಿಟ್ಟಿನಲ್ಲಿ ಯುವಕರನ್ನು ಕೃಷಿ ಕಡೆ ತರಬೇಕು. ಕೃಷಿಯನ್ನು ಉದ್ಯಮವಾಗಿ ಬೆಳೆಯಬೇಕೆಂಬ ಆಶಯದಿಂದ ಶ್ರೀರಂಗಪಟ್ಟಣ ವಿಧಾನಸಭಾ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ನಾಟಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಸರಣಿ ಕಳ್ಳತನ ಮಾಡಿ ಮಹಾ ಕುಂಭಮೇಳಕ್ಕೆ ಹೋಗಿದ್ದ ಇಬ್ಬರು ಅರೆಸ್ಟ್‌

  • ವಕ್ಫ್‌ ವಿರುದ್ಧ ಅನ್ನದಾತರ ಆಕ್ರೋಶ – ಇಂದು ಶ್ರೀರಂಗಪಟ್ಟಣ ಸ್ವಯಂ ಪ್ರೇರಿತ ಬಂದ್‌

    ವಕ್ಫ್‌ ವಿರುದ್ಧ ಅನ್ನದಾತರ ಆಕ್ರೋಶ – ಇಂದು ಶ್ರೀರಂಗಪಟ್ಟಣ ಸ್ವಯಂ ಪ್ರೇರಿತ ಬಂದ್‌

    ಮಂಡ್ಯ: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ವಕ್ಫ್ ಭೂತ (Waqf Board) ಸಕ್ಕರೆ ನಾಡು ಜನರನ್ನು ಬಿಟ್ಟುಬಿಡದೇ ಕಾಡುತ್ತಿದೆ. ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ (RTC) ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದು ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅನ್ಯಾಯನ್ನು ಖಂಡಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಇಂದು ಶ್ರೀರಂಗಪಟ್ಟಣ (Srirangapatna) ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ.

    ಶ್ರೀರಂಗಪಟ್ಟಣ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ವಕ್ಫ್‌ ಬೋರ್ಡ್‌ ಆತಂಕವನ್ನೇ ಸೃಷ್ಟಿ ಮಾಡಿದೆ. ಕಿರಂಗೂರು, ಶೆಟ್ಟಿಹಳ್ಳಿ, ಬಾಬುರಾಯನಕೊಪ್ಪಲು, ದರಸಕುಪ್ಪೆ ಗ್ರಾಮದ 50ಕ್ಕೂ ಹೆಚ್ಚು ರೈತರ ಆರ್‌ಟಿಸಿಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಎಂದು ನಮೂದು ಆಗಿದೆ.

    ಆರ್‌ಟಿಸಿಯಲ್ಲಿ ಸ್ವಾಧೀನದಾರರ ಕಲಂ ನಲ್ಲಿ ರೈತರ ಹೆಸರಿದ್ದರೂ ಋಣ ಕಲಂ ನಲ್ಲಿ ವಕ್ಫ್ ಹೆಸರು ನಮೂದಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸಾಮನ್ಯವಾಗಿ ಜಮೀನನ‌ ಮೇಲೆ ಸಾಲ ತೆಗೆದುಕೊಂಡರೆ, ಕ್ರಯ ಮಾಡಿಸಿದರೆ ಮಾತ್ರ ಋಣ ಕಲಂ ನಲ್ಲಿ ಬ್ಯಾಂಕ್ ಅಥವಾ ವ್ಯಕ್ತಿಯ ಹೆಸರು ಉಲ್ಲೇಖವಾಗುತ್ತದೆ. ಆದರೆ ಬಹುತೇಕ ರೈತರ‌ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿದೆ. ರೈತರು ಜಮೀನು ಮಾರಾಟ, ಜಮೀನು ಹಂಚಿಕೆ ಮಾಡಿಕೊಳ್ಳುವ ಸಲುವಾಗಿ ಆರ್‌ಟಿಸಿ ಪರಿಶೀಲನೆ ಮಾಡಿದಾಗ ವಕ್ಫ್ ಭೂತ ಎಂಟ್ರಿಕೊಟ್ಟಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸಕ್ಕರೆ ನಾಡಿಗೂ ಕಾಲಿಟ್ಟ ವಕ್ಫ್‌ ವಿವಾದ – ಮಂಡ್ಯದಲ್ಲಿ ದೇವಸ್ಥಾನವೇ ವಕ್ಫ್ ಆಸ್ತಿ

    ಕೇವಲ ರೈತರ ಜಮೀನು ಮಾತ್ರವಲ್ಲದೇ ಪಾರಂಪರಿಕ ಕಟ್ಟದ, ಪುರಾತತ್ವ ಇಲಾಖೆ ಆಸ್ತಿಯ ಮೇಲೆ ವಕ್ಫ್‌ ವಕ್ರ ಕಣ್ಣು ಬಿದ್ದಿದೆ. ಶ್ರೀರಂಗಪಟ್ಟಣ ಸುತ್ತ ಇರುವ ಮದ್ದಿನ ಮನೆ ಸೇರಿದಂತೆ ಪುರಾತತ್ವ ಇಲಾಖೆ ಹತ್ತಾರು ಹೆಚ್ಚು ಆರ್‌ಟಿಸಿಗಳಲ್ಲಿ ವಕ್ಫ್‌ ಬೋರ್ಡ್ ಹೆಸರು ನಮೂದಾಗಿದೆ. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ವಕ್ಫ್ ಬೋರ್ಡ್ ಗೋಲ್ ಮಾಲ್ ಖಂಡಿಸಿ ಇಂದು ಶ್ರೀರಂಗಪಟ್ಟಣ ಟೌನ್ ಸ್ವಯಂ ಪ್ರೇರಿತ ಬಂದ್‌ಗೆ ಕರೆ‌ ನೀಡಲಾಗಿದೆ. ಇದನ್ನೂ ಓದಿ: ಮಂಡ್ಯ ರೈತರ ಬೆನ್ನುಬಿದ್ದ ವಕ್ಫ್ ಭೂತ – ಪುರಾತತ್ವ ಇಲಾಖೆ ಆಸ್ತಿ ಮೇಲೂ ಕಣ್ಣು

    ಬೆಳಗ್ಗೆ 6 ಗಂಟೆಯಿಂದ ‌ಸಂಜೆ 5 ಗಂಟೆಯವರೆಗೆ ಬಂದ್ ಮಾಡಿ‌ ಹೋರಾಟ ಯಶಸ್ವಿಗೆ ಮನವಿ ಮಾಡಲಾಗಿದ್ದು, ಬಂದ್ ಜೊತೆಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ, ರೈತಸಂಘ, ಮಂಡ್ಯ ರಕ್ಷಣಾ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ರೈತರು ಹಾಗೂ ಜಾನುವಾರುಗಳೊಂದಿಗೆ ರಸ್ತೆಗೆ‌ ಇಳಿದು ಬೃಹತ್ ಪ್ರತಿಭಟನೆಗೆ ಸಿದ್ದತೆ ಮಾಡಿಕೊಂಡಿವೆ. ಇದನ್ನೂ ಓದಿ: Mandya | ರೈತರ ಜಮೀನು, ಹಿಂದೂ ದೇಗುಲ ಮಾತ್ರವಲ್ಲ ಸರ್ಕಾರಿ ಶಾಲೆಯೂ ವಕ್ಫ್ ಆಸ್ತಿ!