Tag: ಶ್ರೀರಂಗಪಟ್ಟಣ ಪೊಲೀಸ್‌

  • ಮಂಡ್ಯ | ಮಾನಸಿಕ ಖಿನ್ನತೆಯಿಂದ ಕಾವೇರಿ ನದಿಗೆ ಹಾರಿದ MCA ಪದವೀಧರೆ

    ಮಂಡ್ಯ | ಮಾನಸಿಕ ಖಿನ್ನತೆಯಿಂದ ಕಾವೇರಿ ನದಿಗೆ ಹಾರಿದ MCA ಪದವೀಧರೆ

    ಮಂಡ್ಯ: ಯುವತಿಯೋರ್ವಳು ಕಾವೇರಿ ನದಿಗೆ (Cauvery River) ಬಿದ್ದು ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ಜರುಗಿದೆ.

    ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ಪ್ರಸಾದಹಳ್ಳಿ ಗ್ರಾಮದ ಮಂಜುನಾಥ್ ಅವರ ಪುತ್ರಿ ಸಿಂಚನಾ (24) ಕಾವೇರಿ ನದಿಗೆ ಹಾರಿರುವ ಯುವತಿ ಆಗಿದ್ದಾಳೆ. ಯುವತಿ ಸಿಂಚನಾ ಎಂಸಿಎ ಪದವೀಧರೆಯಾಗಿದ್ದು, (MCA Graduate) ಕೆಲ ವರ್ಷಗಳಿಂದೀಚೆಗೆ ಪಿಸಿಓಡಿ (PCOD) ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಾಗಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ:  ಎತ್ತಿನಹೊಳೆ ಯೋಜನೆಗೆ ಅಡ್ಡಿ ಎದುರಾಗುತ್ತಾ? – ಕೇಂದ್ರ ನಾಯಕರ ಸಹಕಾರ ಕೇಳಿದ ಡಿಕೆಶಿ

    ಮಂಗಳವಾರ ಸಂಜೆ ವೇಳೆಗೆ ಏಕಾಏಕಿ ಮನೆಯಿಂದ ಹೊರಟು ಹಾಸನ ಮೂಲಕ ಚನ್ನರಾಯಪಟ್ಟಣ ಮಾರ್ಗವಾಗಿ ಶ್ರೀರಂಗಪಟ್ಟಣಕ್ಕೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ನಂತರ ಬಸ್ ನಿಲ್ದಾಣದಿಂದ ಬೆಂಗಳೂರು ದಿಕ್ಕಿಗೆ ನಡೆದು ಹೋದ ಈಕೆ ಉತ್ತರ ಕಾವೇರಿಯ ಸೇತುವೆ ಮೇಲಿಂದ ರಾತ್ರಿ 8ರ ಸಮಯದಲ್ಲಿ ಉಕ್ಕಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳಿಯ ದಾರಿಹೋಕ ವಾಹನ ಸವಾರರು ತಕ್ಷಣ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ

    ವಿಷಯ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಹಾರೆ. ಘಟನಾ ಸ್ಥಳ ಸೇರಿದಂತೆ ನದಿ ತೀರದ 1 ಕಿಮಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮೊಬೈಲ್ ಬೆಳಕಿನಲ್ಲೇ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿ ಸಿಕ್ಕ ಬ್ಯಾಗ್, ಆಧಾರ್ ಕಾಡ್೯ ಹಾಗೂ ಚಪ್ಪಲಿಗಳ ಆಧಾರದ ಮೇಲೆ ಈಕೆಯೇ ನದಿಗೆ ಹಾರಿದ್ದಾಳೆ ಎಂದು ಶಂಖೆ ವ್ಯಕ್ತಪಡಿಸಿ ಇದೀಗ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಅತೃಪ್ತರ ಬಲ ಪ್ರದರ್ಶನ – ಬಿಎಸ್‌ವೈ ವಿರುದ್ಧ ಸಿದ್ದೇಶ್ವರ್, ಲಿಂಬಾವಳಿ ಗುಡುಗು

    ಸಂಪೂರ್ಣ ಕತ್ತಲಾಗಿದ್ದ ಕಾರಣ ಹರಿಯುವ ಕಾವೇರಿಯ ಪ್ರವಾಹದ ನೀರಲ್ಲಿ ಸದ್ಯಕ್ಕೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಸ್ಥಗಿತಗೊಳಿಸಿ ಇಂದು (ಬುಧವಾರ) ಮುಂಜಾನೆಯಿಂದಲೇ ಹುಡುಕಾಟ ಆರಂಭಿಸಲು ಶುರು ಮಾಡಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಸ್‌ ನಿಲ್ಲಿಸದಿದ್ದಕ್ಕೆ ಕಲ್ಲೆಸೆದು ಅನ್ಯಕೋಮಿನ ಯುವಕರಿಂದ ದಾಂಧಲೆ – ಸಾರ್ವಜನಿಕರಿಂದ ಬಿತ್ತು ಗೂಸಾ

    ಬಸ್‌ ನಿಲ್ಲಿಸದಿದ್ದಕ್ಕೆ ಕಲ್ಲೆಸೆದು ಅನ್ಯಕೋಮಿನ ಯುವಕರಿಂದ ದಾಂಧಲೆ – ಸಾರ್ವಜನಿಕರಿಂದ ಬಿತ್ತು ಗೂಸಾ

    ಮಂಡ್ಯ: ಬಸ್‌ ನಿಲ್ಲಿಸದೇ ಇದ್ದಕ್ಕೆ ಕಲ್ಲೆಸೆದು ಅನ್ಯಕೋಮಿಯನ ಯುವಕರು ದಾಂಧಲೆ ನಡೆಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಗಂಜಾಂ ರಸ್ತೆಯಲ್ಲಿ ನಡೆದಿದೆ.

    ಸರ್ಕಾರಿ ಬಸ್‌ (Government Bus) ಮೇಲೆ ಅನ್ಯಕೋಮಿನ ಯುವಕರ ಗುಂಪು ಕಲ್ಲು ತೂರಾಟ ನಡೆಸಿದ್ದು, ಬಳಿಕ ಯುವಕರನ್ನು ಹಿಡಿದು ಥಳಿಸಿದ ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ | ಕೂಡಲೇ ಪಾಕ್‌ ತೊರೆಯಿರಿ ಭಾರತೀಯರಿಗೆ ಕೇಂದ್ರ ಸೂಚನೆ

    ಏನಿದು ಘಟನೆ?
    ಬಸ್ಸೊಂದು ಶ್ರೀರಂಗಪಟ್ಟಣದಿಂದ ಗಂಜಾಂಗೆ ತೆರಳುತ್ತಿತ್ತು. ಈ ವೇಳೆ ಮೈಸೂರಿಗೆ ಹೋಗುವ ಬಸ್‌ ಬದಲು, ಅನ್ಯಕೋಮಿನ ಯುವಕರ ಕುಟುಂಬ ಗಂಜಾಂಗೆ ತೆರಳುತ್ತಿದ್ದ ಬಸ್‌ ಹತ್ತಿದೆ. ಕಂಡಕ್ಟರ್‌ ಬಳಿ ನಾವು ಮೈಸೂರಿಗೆ ಹೋಗಬೇಕು ಎಂದು ಕುಟುಂಬಸ್ಥರು ಹೇಳಿದ್ದಾರೆ. ಇದು ಮೈಸೂರಿನ ಬಸ್‌ ಅಲ್ಲ ಎಂದು ನಿರ್ವಾಹಕ ಹೇಳ್ತಿದ್ದಂತೆ ಬಸ್‌ ನಿಲ್ಲಿಸುವಂತೆ ವಾಗ್ವಾದಕ್ಕಿಳಿದಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿ – ಪಾಕ್‌ ಉಗ್ರರ ಮಾಹಿತಿ ಕೊಟ್ಟವರಿಗೆ 20 ಲಕ್ಷ ಬಹುಮಾನ ಘೋಷಣೆ

    ಆಗ ಕಂಡಕ್ಟರ್‌ ಇಲ್ಲಿ ಸ್ಟಾಪ್‌ ಇಲ್ಲ, ಮುಂದೆ ನಿಲ್ಲಿಸೋದಾಗಿ ಹೇಳಿದ್ದಾರೆ. ಅಷ್ಟಕ್ಕೆ ಡ್ರೈವರ್‌, ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ್ದಾರೆ. ಕೊನೆಗೆ ಬಸ್‌ ನಿಲ್ಲಿಸುತ್ತಿದ್ದಂತೆ ಕೆಳಗಿಳಿದ ಯುವಕರು ಬಸ್‌ ಮೇಲೆ ಕಲ್ಲೆಸೆದು, ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ನಂತರ ಕಲ್ಲೆಸೆದ ಅನ್ಯಕೋಮಿನ ಯುವಕರನ್ನ ಹಿಡಿದು ಥಳಿಸಿರುವ ಸಹ ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ್ದಾರೆ. ಇದನ್ನೂ ಓದಿ: ‘ಮ್ಯಾಕ್ಸ್’ ಖ್ಯಾತಿಯ ಶ್ರೀಧರ್‌ಗೆ ಅನಾರೋಗ್ಯ- ಚಿಕಿತ್ಸೆಗೆ ಸಹಾಯ ಕೋರಿದ ನಟ

  • ಮಂಡ್ಯದ ಪಾಲಹಳ್ಳಿಯಲ್ಲಿ ಮತ್ತೆ ಹರಿದ ನೆತ್ತರು – ರೌಡಿಶೀಟರ್‌ನ ಬರ್ಬರ ಹತ್ಯೆ

    ಮಂಡ್ಯದ ಪಾಲಹಳ್ಳಿಯಲ್ಲಿ ಮತ್ತೆ ಹರಿದ ನೆತ್ತರು – ರೌಡಿಶೀಟರ್‌ನ ಬರ್ಬರ ಹತ್ಯೆ

    ಮಂಡ್ಯ: ಇಲ್ಲಿನ ಪಾಲಹಳ್ಳಿಯಲ್ಲಿ (Palahalli) ಮತ್ತೆ ನೆತ್ತರು ಹರಿದಿದೆ. ಹಳೇ ದ್ವೇಷದ ಹಿನ್ನೆಲೆ ರೌಡಿಶೀಟರ್‌ಒಬ್ಬನ ಬರ್ಬರ ಹತ್ಯೆಯಾದ ಘಟನೆ ಶ್ರೀರಂಗಪಟ್ಟಣದ (Srirangapatna) ಪಾಲಹಳ್ಳಿಯಲ್ಲಿ ನಡೆದಿದೆ.

    ಪಾಲಹಳ್ಳಿಯ ಸುಪ್ರಿತ್ ಅಲಿಯಾಸ್ ಸುಪ್ಪಿ ಹತ್ಯೆಯಾದ ವ್ಯಕ್ತಿ. ನಿನ್ನೆ ತಡರಾತ್ರಿ ತೋಟದ ಮನೆಯಲ್ಲಿ ಸುಪ್ರಿತ್ ಹಾಗೂ ಆತನ ಸ್ನೇಹಿತ ಅರ್ಜುನ್ ಇದ್ದರು. ಈ ವೇಳೆ ಆಟೋ, ಬೈಕ್‌ನಲ್ಲಿ ಬಂದ ಗುಂಪೊಂದು ಸುಪ್ಪಿ ಮೇಲೆ ಅಟ್ಯಾಕ್ ಮಾಡಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಸುಪ್ಪಿ ಸ್ನೇಹಿತ ಅರ್ಜುನ್‌ ಮೇಲೂ ಆ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ.

    ಈ ಹಿಂದೆ ಕುಂಟ ವಿನೋದ್ ಹತ್ಯೆಯಲ್ಲಿ ಸುಪ್ಪಿ ಭಾಗಿಯಾಗಿದ್ದ ಎನ್ನಲಾಗಿತ್ತು. ಅದೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸುಪ್ರಿತ್‌ನ ಮೃತದೇಹ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಅರ್ಜುನ್‌ಗೆ ಮೈಸೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    2 ತಿಂಗಳ ಹಿಂದೆಯಷ್ಟೇ ರಿಲೀಸ್‌ ಆಗಿದ್ದ ಸುಪ್ಪಿ:
    ಕೊಲೆಗೆ ಯತ್ನಿಸಿದ್ದ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಸುಪ್ಪಿ, 2 ತಿಂಗಳ ಹಿಂದೆಯಷ್ಟೇ (ನ.14) ಬೇಲ್‌ ಮೇಲೆ ರಿಲೀಸ್‌ ಆಗಿದ್ದ. ತೋಟದ ಮನೆಯಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದ. ಆದ್ರೆ 2023ರ ಅಕ್ಟೋಬರ್‌ 2ರಂದು ನಡೆದಿದ್ದ ರೌಡಿ ಶೀಟರ್‌ ವಿನೋದ್‌ ಅಲಿಯಾಸ್‌ ಕುಂಟ ವಿನು ಪ್ರಕರಣದಲ್ಲಿ ಸುಪ್ಪಿ ಎ10 ಆರೋಪಿಯಾಗಿದ್ದ. ಅದಾದ 6 ತಿಂಗಳಲ್ಲೇ ಬೇಲ್‌ ಮೇಲೆ ಬಿಡುಗಡೆಯಾಗಿದ್ದ. ಆದರೂ ಬುದ್ಧಿ ಕಲಿಯದ ಸುಪ್ಪಿ ಮತ್ತೆ ಕೊಲೆ ಯತ್ನ ಕೇಸ್‌ನಲ್ಲಿ ಭಾಗಿಯಾಗಿದ್ದ. ಹೀಗಾಗಿ ಹತ್ಯೆಯಾದ ಕುಂಟ ವಿನು ಅನ್ಣ ಪ್ರಮೋದ್‌ ಹಾಗೂ ಆತನ ಸಹಚರ ಕೋಳಿ ಅಭಿ ಜೈಲಿನಲ್ಲಿದ್ದುಕೊಂಡೇ ಸ್ಕೆಚ್‌ ಹಾಕಿ ಕೊಲೆ ಮಾಡಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆ ಆರೋಪಿಗಳಿಗಾಗಿ ಶ್ರೀರಂಗಪಟ್ಟಣ ಟೌನ್ ಪೊಲೀಸರಿಂದ ಶೋಧಕಾರ್ಯ ನಡೆಯುತ್ತಿದೆ.