Tag: ಶ್ರೀರಾಮಂದಿರ

  • ಕನ್ನಡದಲ್ಲೂ ಅಯೋಧ್ಯೆಯ ಶ್ರೀರಾಮಮಂದಿರದ ಬಯೋಪಿಕ್

    ಕನ್ನಡದಲ್ಲೂ ಅಯೋಧ್ಯೆಯ ಶ್ರೀರಾಮಮಂದಿರದ ಬಯೋಪಿಕ್

    ಯೋಧ್ಯೆಯಲ್ಲಿ (Ayodhya) ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯಾದ ಮಹಾಪರ್ವ ಕಾಲವಿದು. ಆದರೆ ಶ್ರೀರಾಮ ತನ್ನ ಜನ್ಮಭೂಮಿಯಲ್ಲಿ ಪ್ರತಿಷ್ಠಾಪನೆಯಾಗಲು 500 ವರ್ಷಗಳು ಕಾಯಬೇಕಾಯಿತು. 1528 ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣವಾಯಿತು. ಆನಂತರ  ಆ ಜಾಗದಲ್ಲಿ ಶ್ರೀರಾಮನ ಮಂದಿರ (Sri Ram Mandir) ನಿರ್ಮಾಣವಾಗಬೇಕೆಂದು ಸಾಕಷ್ಟು ಹೋರಾಟಗಳು‌ ನಡೆದವು. ಈ ವಿವಾದ ಕೋರ್ಟ್ ಮೆಟ್ಟಿಲು ಏರಿತ್ತು. ನೂರಕ್ಕೂ ಹೆಚ್ಚು ವರ್ಷಗಳ ಕಾಲ ಯಾವುದಾದರೂ ಒಂದು ಕೇಸ್ ಕೋರ್ಟ್ ನಲ್ಲಿ ನಡೆದಿದ್ದರೆ ಅದು ಶ್ರೀರಾಮ ಜನ್ಮಭೂಮಿಯದೆ ಇರಬಹುದು. ಕೊನೆಗೂ 2019 ರಲ್ಲಿ ನ್ಯಾಯಾಲಯ ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿತ್ತು. 2024 ರ ಜನವರಿಯಲ್ಲಿ ಅದ್ದೂರಿಯಾಗಿ ಶ್ರೀರಾಮನ ಪ್ರತಿಷ್ಠಾಪನೆಯಾಯಿತು. ಕೋಟ್ಯಾಂತರ ಜನರ ಕನಸು ನನಸ್ಸಾಯಿತು.

    ಈ ಅಯೋಧ್ಯೆಯ ಶ್ರೀರಾಮನ ಮಂದಿರದ ಬಯೋಪಿಕ್ ಅನ್ನು ಸಿನಿಮಾ ರೂಪದಲ್ಲಿ ತರಲು ನಿರ್ದೇಶಕ ಶ್ರೀನಿವಾಸರಾಜು (Srinivasaraju) ಮುಂದಾಗಿದ್ದಾರೆ. ಈ ಚಿತ್ರದ ಶೀರ್ಷಿಕೆ ಇನ್ನು ನಿಗದಿಯಾಗಿಲ್ಲ. ಆದರೆ “ಸತ್ಯಂ ಶಿವಂ ಸುಂದರಂ” ಎಂಬ ಟ್ಯಾಗ್ ಲೈನ್ ಇದೆ. “ಕೃಷ್ಣಂ ಪ್ರಣಯ ಸಖಿ” ಚಿತ್ರವನ್ನು ನಿರ್ಮಿಸಿರುವ ಪ್ರಶಾಂತ್ ಜಿ ರುದ್ರಪ್ಪ ತ್ರಿಶೂಲ್ ಎಂಟರ್ಟೈನ್ಮೆಂಟ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ..

    ಸಾಮಾನ್ಯವಾಗಿ ಮನುಷ್ಯರ ಬಯೋಪಿಕ್ ಇರುತ್ತದೆ. ಆದರೆ, ದೇವಸ್ಥಾನವೊಂದರ ಬಯೋಪಿಕ್ ಇರುವುದು ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಮಾತ್ರ ಎನ್ನುವುದು ನನ್ನ ಅಭಿಪ್ರಾಯ.‌ ಸುಮಾರು 500 ವರ್ಷಗಳ ಇತಿಹಾಸವನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದೇನೆ. ಕನ್ನಡದಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಬಾಬರಿ ಮಸೀದಿ ಗೂ ಮೊದಲು ರಾಜಾ ವಿಕ್ರಮಾದಿತ್ಯ ಪ್ರತಿಷ್ಠಾಪಿಸಿದ  ಶ್ರೀರಾಮ ಮಂದಿರದಿಂದ ಈ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಇದರ ಜೊತೆಗೆ ರಾಮಾಯಣದ ಕೆಲವು ಅಂಶಗಳನ್ನು ತೆಗೆದುಕೊಳ್ಳುತ್ತಿದ್ದೇನೆ‌. ಹಾಗಂತ ಇದು ಸಂಪೂರ್ಣ ರಾಮಾಯಣದ ಕಥೆಯಲ್ಲ.   ದಶರಥ, ರಾಮ, ಸೀತಾ, ಹನುಮಂತ, ವಾಲಿ ಹಾಗೂ ವಾಲ್ಮೀಕಿ ಈ ಆರು ಪಾತ್ರಗಳು ಮಾತ್ರ ಇರುತ್ತದೆ. ತುಳಿಸಿದಾಸರ ಪಾತ್ರ ಕೂಡ ಈ ಚಿತ್ರದಲ್ಲಿರಲಿದೆ. ಶ್ರೀರಾಮನ ಆದರ್ಶದ ಗುಣಗಳನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತದೆ.  “ಸತ್ಯಂ ಶಿವಂ ಸುಂದರಂ” ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು, ಮೂರು ಭಾಗಗಳಲ್ಲಿ ಚಿತ್ರ ಬರಲಿದೆ. ಶೀರ್ಷಿಕೆ ಇನ್ನು ನಿಗದಿಯಾಗಿಲ್ಲ. ಚಿತ್ರ ಬಹಳ ಅದ್ದೂರಿಯಾಗಿ ನಿರ್ಮಾಣವಾಗಲಿದ್ದು, ಭಾರತದ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದಲ್ಲಿ ಭಾಗಿಯಾಗಲಿದ್ದಾರೆ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಶ್ರೀರಾಮನವಮಿಯ ಪರ್ವಕಾಲದಲ್ಲಿ ಈ ನೂತನ ಚಿತ್ರದ ಕುರಿತು ಇಷ್ಟು ಹೇಳಲು ಬಯಸುತ್ತೇನೆ. ಮುಂದಿನ ದಿನಗಳಲ್ಲಿ  ಚಿತ್ರದ ಶೀರ್ಷಿಕೆ ಸೇರಿದಂತೆ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

  • ರಾಮಮಂದಿರ ಲೋಕಾರ್ಪಣೆ – AI ಕಣ್ಗಾವಲು ಸಾಧ್ಯತೆ, 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ

    ರಾಮಮಂದಿರ ಲೋಕಾರ್ಪಣೆ – AI ಕಣ್ಗಾವಲು ಸಾಧ್ಯತೆ, 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ

    ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮಂದಿರ (Ayodhya Ram Mandir) ಲೋಕಾರ್ಪಣೆಗೆ ಇನ್ನು 18 ದಿನಗಳು ಮಾತ್ರ ಉಳಿದಿವೆ. ಇಡೀ ಅಯೋಧ್ಯಾ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿವೆ. ಅಯೋಧ್ಯೆ ಬೀದಿ ಬೀದಿಗಳಲ್ಲೂ ಶ್ರೀರಾಮನ ವರ್ಣಕಲೆ ಮಿಂದೇಳುತ್ತಿವೆ. ಇದರೊಂದಿಗೆ ಜ.22ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಭದ್ರತೆಯ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಲಾಗಿದೆ.

    ಜ.22 ರಂದು ಪ್ರಧಾನಿ ಮೋದಿ (Narendra Modi) ಅವರು ಆಗಮಿಸುವ ಹಿನ್ನೆಲೆಯಲ್ಲಿ ಭದ್ರತೆಯ (Security) ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಅಂದು ಕೃತಕ ಬುದ್ಧಿಮತ್ತೆ (AI Surveillance) ಕಣ್ಗಾವಲಿಗೆ ನಿಯೋಜಿಸುವ ಸಾಧ್ಯತೆಯಿದೆ. ರಾಮಮಂದಿರ ಉದ್ಘಾಟನೆಯ ನಂತರ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರ ಸಂಖ್ಯೆಗೆ ಅನುಗುಣವಾಗಿ ಭದ್ರತೆ ನಿಯೋಜಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

    ಅಂದು ಕೃತಕ ಬುದ್ಧಿಮತ್ತೆಯೊಂದಿಗೆ 11,000 ರಾಜ್ಯ ಪೊಲೀಸರು ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ ಈ ತೀರ್ಮಾನವನ್ನು ಅಂತಿಮಗೊಳಿಸಲಾಗಿಲ್ಲ. ಈ ನಡುವೆ ರಾಮಮಂದಿರಕ್ಕೆ ಬೆದರಿಕೆಗಳೂ ಕೇಳಿಬಂದಿರುವುದರಿಂದ ಭದ್ರತಾ ಸಿಬ್ಬಂದಿ ಸಂಖ್ಯೆ ಇನ್ನಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. ಅಂದಿನ ದಿನ ಅಯೋಧ್ಯೆ ಕಡೆಗೆ ಹೋಗುವ ಎಲ್ಲ ರಸ್ತೆಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಸಹ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!

    ಯುಪಿ ಆಂಟಿ-ಟೆರರ್ ಸ್ಕ್ವಾಡ್ (ATS) ಮತ್ತು ವಿಶೇಷ ಕಾರ್ಯಪಡೆ (STF) ತಂಡಗಳು ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ನಂತಹ ಕೇಂದ್ರೀಯ ಏಜೆನ್ಸಿಗಳ ಜೊತೆಗೆ 8,000 ನಾಗರಿಕ ಪೊಲೀಸ್‌ ಸಿಬ್ಬಂದಿ, 34 ಸಬ್ ಇನ್ಸ್‌ಪೆಕ್ಟರ್‌ಗಳು, 71 ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು 312 ಕಾನ್‌ಸ್ಟೆಬಲ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ರಾಮಮಂದಿರ ಇರುವ ಕೆಂಪು ವಲಯಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿರಲಿದ್ದು, ಗುಪ್ತಚರ ಘಟಕದ ಸುಮಾರು 38 ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಮತ್ತು ವಿಧ್ವಂಸಕ ಕೃತ್ಯ ವಿರೋಧಿ ತಂಡಗಳು, ಪೊಲೀಸ್ ರೇಡಿಯೊ ಸಂವಹನದ 4 ಸಿಬ್ಬಂದಿ ಮತ್ತು 47 ಅಗ್ನಿಶಾಮಕ ಸಿಬ್ಬಂದಿಯನ್ನ ಭದ್ರತೆಗೆ ನೇಮಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಾಲರಾಮನ ಮೂರ್ತಿ ಹೇಗಿರಲಿದೆ – ಕುತೂಹಲದ ಪ್ರಶ್ನೆಗೆ ಜ.22 ರಂದು ಸಿಗಲಿದೆ ಉತ್ತರ

  • ಅಯೋಧ್ಯೆಗೆ ಅಕ್ಕಿ, ತರಕಾರಿ, ಸಾಂಬಾರ್ ಪದಾರ್ಥಗಳ ಅರ್ಪಣೆ – ಪ್ರಾಣಪ್ರತಿಷ್ಠೆಗೆ ಶ್ರೀರಾಮ ಭಕ್ತರ ಕಾಣಿಕೆ

    ಅಯೋಧ್ಯೆಗೆ ಅಕ್ಕಿ, ತರಕಾರಿ, ಸಾಂಬಾರ್ ಪದಾರ್ಥಗಳ ಅರ್ಪಣೆ – ಪ್ರಾಣಪ್ರತಿಷ್ಠೆಗೆ ಶ್ರೀರಾಮ ಭಕ್ತರ ಕಾಣಿಕೆ

    ಅಯೋಧ್ಯೆ: ಇದೇ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನೇರವೇರಲಿದೆ. ಅಂದು ಶ್ರೀರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮವೂ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

    ದೇಶ-ವಿದೇಶಗಳಿಂದ ವಿಶೇಷ ಕೊಡುಗೆಗಳನ್ನು ಶ್ರೀರಾಮನ ಭಕ್ತರು ಅಯೋಧ್ಯೆಗೆ ಕಳುಹಿಸುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹಾಗೆಯೇ ದೇಶಾದ್ಯಂತ ರಾಮನ ಭಕ್ತರು ಅಕ್ಕಿ, ತರಕಾರಿ ಹಾಗೂ ಇತರ ಆಹಾರ ಪದಾರ್ಥಗಳನ್ನು ಅಯೋಧ್ಯೆಗೆ ಕಳುಹಿಸುತ್ತಿರುವುದು ಗಮನಸೆಳೆದಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠಾ ಸಮಾರಂಭಕ್ಕೆ ಲಕ್ಷಾಂತರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಾಗಾಗಿ ಅಕ್ಕಿ, ವಿವಿಧ ಬಗೆಯ ತರಕಾರಿಗಳು ಹಾಗೂ ಇತರ ಆಹಾರ ಪದಾರ್ಥಗಳನ್ನು ಅಯೋಧ್ಯೆಗೆ ಕಳುಹಿಸುತ್ತಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ದೇಶಾದ್ಯಂತ 50,000 ಕೋಟಿ ರೂ. ವಹಿವಾಟು ಸಾಧ್ಯತೆ

    ದೇಶದ ವಿವಿಧೆಡೆಯಿಂದ ಅಕ್ಕಿ, ಸಾಂಬಾರ್ ಪದಾರ್ಥ ಹಾಗೂ ಇತರ ಆಹಾರ ಪದಾರ್ಥಗಳು ಸೇರಿದಂತೆ ಸುಮಾರು 300 ಟನ್ ಅಗತ್ಯ ವಸ್ತುಗಳನ್ನು ಅಯೋಧ್ಯೆಗೆ ರವಾನಿಸಲಾಗುತ್ತಿದೆ. ಎಲ್ಲಾ ಆಹಾರ ಪದಾರ್ಥಗಳನ್ನು ಅಯೋಧ್ಯೆಯ ಕಾರ್ಯಶಾಲೆಯಲ್ಲಿ ಸಂಗ್ರಹಿಸಲಾಗುತ್ತಿದೆ. ನಂತರದಲ್ಲಿ ಪ್ರಸಾದ ವಿನಿಯೋಗ, ಮುಂತಾದ ಕೆಲಸಗಳಿಗೆ ಬಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Ayodhya Ram Mandir: ಅಹಮದಾಬಾದ್‌ ಗ್ರೂಪ್‌ನಿಂದ ಅಯೋಧ್ಯೆಗೆ 450 ಕೆ.ಜಿ ತೂಕದ ಮೆಗಾ ಡ್ರಮ್ ಗಿಫ್ಟ್‌

    ಎಲ್ಲಿಂದ ಏನೇನು ಬರುತ್ತಿದೆ?
    * ಜನವರಿ 22 ರಂದು ರಾಮಲಲ್ಲಾ ಪಟ್ಟಾಭಿಷೇಕ ನಡೆಯಲಿದೆ. ಇದಾದ ನಂತರ ದೇವರಿಗೆ ವಿಶೇಷ ನೈವೇದ್ಯ ಸಮರ್ಪಿಸಲಾಗುತ್ತದೆ. ಭಗವಾನ್ ಶ್ರೀರಾಮನ ತಾಯಿಯ (ಕೌಸಲ್ಯೆ) ಮನೆ ಛತ್ತೀಸ್‌ಗಢದಿಂದ 3,000 ಕ್ವಿಂಟಾಲ್ ಅಕ್ಕಿ ಬರುತ್ತಿದೆ. ಇದು ಇಲ್ಲಿಯವರೆಗಿನ ಅತಿ ಹೆಚ್ಚಿನ ಪ್ರಮಾಣದ ಅಕ್ಕಿ ರವಾನೆಯಾಗಿದ್ದು, ಇದು ಅಯೋಧ್ಯೆಗೆ ತಲುಪಲಿದೆ. ಇದನ್ನು ಛತ್ತೀಸ್‌ಗಢದ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಲಾಗಿದೆ.

    * ಜನವರಿ 5 ರಂದು ಭಗವಾನ್ ರಾಮನ ಅತ್ತೆ ಮನೆಯಾದ ನೇಪಾಳದ ಜನಕ್‌ಪುರದಿಂದ ಬಟ್ಟೆ, ಹಣ್ಣುಗಳು ಮತ್ತು ಒಣ ಹಣ್ಣುಗಳು ಅಯೋಧ್ಯೆಗೆ ತಲುಪುತ್ತವೆ. ಇದಲ್ಲದೆ, ಉಡುಗೊರೆಗಳಿಂದ ಅಲಂಕರಿಸಲ್ಪಟ್ಟ 1,100 ಪ್ಲೇಟ್‌ಗಳು ಸಹ ಇರುತ್ತವೆ. ಇದನ್ನೂ ಓದಿ: Ram Mandir Inauguration: ಈ ಐವರಿಗೆ ಮಾತ್ರ ರಾಮಮಂದಿರದ ಗರ್ಭಗುಡಿ ಪ್ರವೇಶಕ್ಕೆ ಅವಕಾಶ

    * ನೇಪಾಳದಿಂದ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳು ಸಹ ಬರಲಿವೆ. ಇದರಲ್ಲಿ 51 ಬಗೆಯ ಸಿಹಿತಿಂಡಿಗಳು ಇರಲಿವೆ. ಜೊತೆಗೆ ಮೊಸರು, ಬೆಣ್ಣೆ ಮತ್ತು ಬೆಳ್ಳಿಯ ಪಾತ್ರೆಗಳು ಸೇರಿವೆ.

    * ಅಖಿಲ ಭಾರತ ದಗ್ಬರ್ ಸಮಾಜವು ಸುಮಾರು 450 ಕೆಜಿ ತೂಕದ ವಿಶೇಷ ಡ್ರಮ್ ತಯಾರಿಸಿದ್ದು, ಅಯೋಧ್ಯೆಗೆ ಕಳುಹಿಸುತ್ತಿದೆ. ಇದನ್ನು 2024 ಜನವರಿ 22ರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಅಯೋಧ್ಯೆಗೆ ತಲುಪಿಸಲು ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: Ram Mandir: ಅಯೋಧ್ಯೆ ರಾಮಮಂದಿರಕ್ಕೆ 24 ಅರ್ಚಕರು – ಇಬ್ಬರು SC, ಒಬ್ಬರು OBC ವರ್ಗದವರು ಆಯ್ಕೆ